ಜಿ ಎಸ್ ಟಿ ಪರಿಹಾರ ವಿಸ್ತರಣೆ, 15ನೇ ಹಣಕಾಸು ಆಯೋಗದ ಅನುದಾನ ಹಂಚಿಕೆ ಹೆಚ್ಚಿಸಲು ಕೇಂದ್ರ ಹಣಕಾಸು ಸಚಿವರಿಗೆ ಸಿಎಂ ಬಸವರಾಜ ಬೊಮ್ಮಾಯಿ ಮನವಿ

ನವದೆಹಲಿ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ನವದೆಹಲಿಯಲ್ಲಿ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರನ್ನು ಭೇಟಿಯಾಗಿ ಕೇಂದ್ರ ಸರಕಾರದಿಂದ ಜಿ ಎಸ್ ಟಿ ಪರಿಹಾರವನ್ನು ಇನ್ನೂ ಮೂರು ವರ್ಷಗಳಿಗೆ ಮುಂದುವರೆಸುವಂತೆ ಮತ್ತು 15ನೇ ಹಣಕಾಸು ಆಯೋಗದ ಅನುದಾನ ಹಂಚಿಕೆ ಹೆಚ್ಚಿಸುವಂತೆ ಮನವಿ ಮಾಡಿದರು. ಕೋವಿಡ್ ಸಾಂಕ್ರಾಮಿಕದಿಂದಾಗಿ ರಾಜ್ಯಗಳ ತೆರಿಗೆ ಸಂಗ್ರಹ ಕಡಿಮೆಯಾಗಿದ್ದು, ಪರಿಸ್ಥಿತಿ ಸಾಮಾನ್ಯ ಸ್ಥಿತಿಗೆ ಮರಳಲು ಕೆಲವು ವರ್ಷಗಳೇ ಬೇಕಾಗಬಹುದು. ಕಳೆದ ವರ್ಷ ಜಿ ಎಸ್ ಟಿ ಪರಿಹಾರ ಸಾಲ ಒದಗಿಸಲಾಗಿತ್ತು. ಈ ವರ್ಷವೂ […]

ಕರ್ನಾಟಕ, ಕೇರಳದಲ್ಲಿ ಯೋಗ, ಆಯುರ್ವೇದ ಕಲಿಕೆಗೆ ಜಪಾನ್ ಜನರನ್ನು ಸೆಳೆಯಲು ಕ್ರಮ- ಜಪಾನ ರಾಯಭಾರ ಕಚೇರಿಯೆ ಡೆಪ್ಯೂಟಿ ಕೌನ್ಸುಲ್

ವಿಜಯಪುರ: ಭಾರತದ ಯೋಗ ಮತ್ತು ಆಯುರ್ವೇದ ವಿಶ್ವದ ಗಮನ ಸೆಳೆದಿದೆ. ಈ ಹಿನ್ನೆಲೆಯಲ್ಲಿ ಜಪಾನ ಪ್ರವಾಸಿಗರನ್ನು ಕರ್ನಾಟಕ ಮತ್ತು ಕೇರಳದಲ್ಲಿ ಯೋಗ ಮತ್ತು ಆಯುರ್ವೇದ ಕಲಿಕೆಗೆ ಆಕರ್ಷಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಬೆಂಗಳೂರಿನಲ್ಲಿರುವ ಜಪಾನ ರಾಯಭಾರ ಕಚೇರಿಯ ಡೆಪ್ಯೂಟಿ ಕೌನ್ಸುಲ್ ಕಟ್ಸುಮಸಾ ಮರುಓ ತಿಳಿಸಿದ್ದಾರೆ. ವಿಜಯಪುರದ ಬಿ ಎಲ್ ಡಿ ಇ ಡೀಮ್ಡ್ ವಿಶ್ವವಿದ್ಯಾಲಯದಲ್ಲಿ ವಿದ್ಯಾರ್ಥಿಗಳಿಗಾಗಿ ನಿರ್ಮಿಸಿರುವ ನೂತನ ಕ್ರೀಡಾ ಸಂಕೀರ್ಣ ಉದ್ಘಾಟಿಸಿ ಅವರು ಮಾತನಾಡಿದರು. ಭಾರತ-ಜಪಾನ ರಾಜತಾಂತ್ರಿಕ ಸಂಬಂಧಗಳ 70ನೇ ಸ್ಥಾಪನಾ ದಿನಾಚರಣೆ ಅಂಗವಾಗಿ ಉಪನ್ಯಾಸ […]

ಬಹುಗ್ರಾಮ ಯೋಜನೆಗಳ ಮೇಲ್ವಿಚಾರಣೆಗೆ ಸಮಿತಿ ರಚನೆ- ಸಿಎಂ ಬಸವರಾಜ ಬೊಮ್ಮಾಯಿ

ಬೆಂಗಳೂರು: ಜಲಜೀವನ್ ಮಿಷನ್ ಯೋಜನೆಯ ಅನುಷ್ಠಾನ ಚುರುಕುಗೊಳಿಸುವ ಉದ್ದೇಶದಿಂದ ಈ ಯೋಜನೆಯಡಿ ಕೈಗೆತ್ತಿಕೊಂಡಿರುವ ಬಹುಗ್ರಾಮ ಕುಡಿಯುವ ನೀರು ಯೋಜನೆಗಳ ಮೇಲ್ವಿಚಾರಣೆಗೆ ಸಮಿತಿ ರಚನೆ ಮಾಡುವಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಬೆಂಗಳೂರಿನಲ್ಲಿ ಜಲಜೀವನ್ ಮಿಷನ್ ಯೋಜನೆಯ ಪ್ರಗತಿ ಪರಿಶೀಲನೆ ನಡೆಸಿದ ಅವರು, ಇದು ಕೇಂದ್ರ ಸರಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದೆ. ಇದನ್ನು ಪರಿಣಾಮಕಾರಿಯಾಗಿ ಹಾಗೂ ತ್ವರಿತವಾಗಿ ಅನುಷ್ಠಾನಗೊಳಿಸುವಂತೆ ಅಧಿಕಾರಿಗಳಿಗೆ ಸೂಚಿನೆ ನೀಡಿದರು. ಪ್ರತಿ 15 ದಿನಕ್ಕೊಮ್ಮೆ ಯೋಜನೆಯ ಪ್ರಗತಿ ಪರಿಶೀಲನೆ ನಡೆಸಬೇಕು. ಗ್ರಾಮೀಣಾಭಿವೃದ್ಧಿ ಇಲಾಖೆಯ ಹಿರಿಯ […]

ಕಾರ್ಯ ನಿರ್ವಹಣೆಗೆ ಅಭಿನಂದನಾ ಪತ್ರ- ವಾರದೊಳಗೆ ಜಾಗ ತೋರಿಸದೇ ವಿಜಯಪುರ ಕೆ ಕೆ ಆರ್ ಟಿ ಸಿ ಡಿಸಿ ನಾರಾಯಣಪ್ಪ ಕುರುಬರ ಎತ್ತಂಗಡಿ

ವಿಜಯಪುರ: ಒಂದೆಡೆ ಕೊರೊನಾ ಸಂದರ್ಭದಲ್ಲಿ ಕಾರ್ಯವೈಖರಿಗೆ ಅಭಿನಂದನಾ ಪತ್ರ.  ಮತ್ತೋಂದೆಡೆ ವಾರದೊಳಗೆ ಯಾವುದೇ ಜಾಗ ತೋರಿಸದೇ ಅಧಿಕಾರಿಯ ಎತ್ತಂಗಡಿ. ಇದು ವಿಜಯಪುರ ಕೆ ಕೆ ಆರ್ ಟಿ ಸಿ ಡಿಸಿ ನಾರಾಯಣಪ್ಪ ಕುರಬರ ಅವರ ಪರಿಸ್ಥಿತಿ. ಹೌದು. ಕೊರೊನಾ ಸಂದರ್ಭದಲ್ಲಿ ಕಲ್ಯಾಣ ಕರ್ನಾಟಕ ಸಾರಿಗೆ ಸಂಸ್ಥೆಯ ವಿಜಯಪುರ ವಿಭಾಗ ತೋರಿದ ಕಾರ್ಯ ನಿರ್ವಹಣೆಗೆ ನಿಗಮದ ಎಂ. ಡಿ. ಕೂರ್ಮರಾವ ಅಭಿನಂದನಾ ಪತ್ರವನ್ನು ಕಳುಹಿಸಿ ಪ್ರಶಂಸೆ ವ್ಯಕ್ತಪಡಿಸಿದ್ದಾರೆ. ಕೊರೊನಾ ಲಾಕಡೌನ್ ಸಂದರ್ಭದಲ್ಲಿ ವಿಜಯಪುರ ವಿಭಾಗೀಯ ನಿಯಂತ್ರಣಾಧಿಕಾರಿಗಳು, ಅಧಿಕಾರಿಗಳು ಮತ್ತು […]

ಮಹಾ ಗಡಿಯಲ್ಲಿರುವ ಧೂಳಖೇಡ ಚೆಕ್ ಪೋಸ್ಟ್ ಗೆ ಜಿಲ್ಲಾಧಿಕಾರಿ ಪಿ. ಸುನೀಲ ಕುಮಾರ ಭೇಟಿ, ಜಿ. ಪ. ಸಿಇಎ ಗೋವಿಂದ ರೆಡ್ಡಿ ಪರಿಸೀಲನೆ

ವಿಜಯಪುರ: ಕೊರೊನಾ 3ನೇ ಅಲೆ ತಡೆಗಟ್ಟಲು ಗಡಿ ಭಾಗದಲ್ಲಿ ಕೈಗೊಳ್ಳಲಾಗಿರುವ ತಪಾಸಣೆ ಕ್ರಮಗಳನ್ನು ವಿಜಯಪುರ ಜಿಲ್ಲಾಧಿಕಾರಿ ಪಿ. ಸುನೀಲ ಕುಮಾರ ಪರಿಶೀಲನೆ ನಡೆಸಿದ್ದಾರೆ. ರಾತ್ರಿ ವೇಳೆ ಇಂಡಿ ತಾಲೂಕಿ ಧೂಳಖೇಡ ಚೆಕ್ ಪೋಸ್ಟ್ ಗೆ ದಿಢೀರ್ ಭೇಟಿ ನೀಡಿದ ಜಿಲ್ಲಾಧಿಕಾರಿ ಪಿ. ಸುನೀಲ ಕುಮಾರ ಮತ್ತು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಗೋವಿಂದ ರೆಡ್ಡಿ ಹಾಗೂ ನಾನಾ ಇಲಾಖೆಗಳ ಹಿರಿಯ ಅಧಿಕಾರಿಗಳು, ಅಲ್ಲಿನ ಸಿಬ್ಬಂದಿಯ ಕಾರ್ಯವೈಖರಿ ಪರಿಶೀಲೆ ನಡೆಸಿದರು. ಚೆಕ್ ಪೋಸ್ಟ್ ನಲ್ಲಿ ಹೆಚ್ಚಿನ ಕಟ್ಟೆಚ್ಚರ […]

ಬಸವನ ಬಾಗೇವಾಡಿ ತಾಲೂಕಿನ ನಾನಾ ಅಭಿವೃದ್ಧಿ ಕಾಮಗಾರಿಗಳನ್ನು ಪರಿಶೀಲಿಸಿದ ಶಾಸಕ ಶಿವಾನಂದ ಪಾಟೀಲ, ಡಿಸಿ ಪಿ. ಸುನೀಲ ಕುಮಾರ

ವಿಜಯಪುರ: ವಿಜಯಪುರ ಜಿಲ್ಲಾಧಿಕಾರಿ ಪಿ.ಸುನೀಲಕುಮಾರ ಮತ್ತು ಬಸವನ ಬಾಗೇವಾಡಿ ಕಾಂಗ್ರೆಸ್ ಶಾಸಕ ಶಿವಾನಂದ ಪಾಟೀಲ ಅವರು ಬಸವನ ಬಾಗೇವಾಡಿ ತಾಲೂಕಿನಲ್ಲಿ ಕೈಗೊಳ್ಳಲಾಗಿರುವ ನಾನಾ ಅಭಿವೃದ್ಧಿ ಕಾಮಗಾರಿಗಳನ್ನು ಪರಿಶೀಲನೆ ನಡೆಸಿದರು. ಮೊದಲಿಗೆ ಮನಗೂಳಿ ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿರುವ ಸರಕಾರಿ ಪದವಿ ಪೂರ್ವ ಕಾಲೇಜು ಕಟ್ಟಡ ಕಾಮಗಾರಿಯನ್ನು ಪರಿಶೀಲಿಸಿದರು. ನಂತರ ಬಸವನ ಬಾಗೇವಾಡಿ ಪಟ್ಟಣದಲ್ಲಿರುವ ನಾನಾ ಕಾಮಗಾರಿಗಳನ್ನು ಪರಿಶೀಲನೆ ಮಾಡಿದರು. ರೂ. 4 ಕೋ. ವೆಚ್ಚದಲ್ಲಿ ನಿರ್ಮಿಸಲಾಗುತ್ತಿರುವ ಪುರಸಭೆ ನೂತನ ಕಚೇರಿ ಕಟ್ಟಡ ಕಾಮಗಾರಿ ಪರಿಶೀಲಿಸಿದ ಅವರು, ಈ ಕಾಮಗಾರಿಯನ್ನು […]

ಜಲಸಂಪನ್ಮೂಲ ಯೋಜನೆಗಳ ತ್ವರಿತ ಅನುಷ್ಠಾನ- ಭೂಸ್ವಾಧೀನ ಪ್ರಕ್ರಿಯೆಗಳಿಗೆ ಆದ್ಯತೆ ನೀಡಲು ಸಚಿವ ಗೋವಿಂದ ಕಾರಜೋಳ ಸೂಚನೆ

ಬೆಂಗಳೂರು: ಜಲಸಂಪನ್ಮೂಲ ಇಲಾಖೆಯ ಯೋಜನೆಗಳ ಕಾಮಗಾರಿಗಳನ್ನು ತ್ವರಿತವಾಗಿ ಅನುಷ್ಟಾನಗೊಳಿಸಲು ಪ್ರಮುಖವಾಗಿರುವ ಭೂಸ್ವಾಧೀನ ಪ್ರಕ್ರಿಯೆಗಳಿಗೆ ಆದ್ಯತೆ ನೀಡಿ, ಕಾಮಗಾರಿಗಳನ್ನು ಅನುಷ್ಠಾನ ಮಾಡಬೇಕು ಎಂದು ಜಲಸಂಪನ್ಮೂಲ ಸಚಿವ ಗೋವಿಂದ ಎಂ. ಕಾರಜೋಳ‌ ಜಲಸಂಪನ್ಮೂಲ ಇಲಾಖೆಯ ಹಿರಿಯ ಅಧಿಕಾರಿಗಳಿಗೆ ಸೂಚಿನೆ ನೀಡಿದ್ದಾರೆ‌. ಕರ್ನಾಟಕ ನೀರಾವರಿ ನಿಗಮದಲ್ಲಿ ನಡೆದ ಜಲಸಂಪನ್ಮೂಲ ಇಲಾಖೆಯ ವ್ಯಾಪ್ತಿಯ ನಿಗಮಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು‌ ಕೃಷ್ಣಾ ಭಾಗ್ಯ ಜಲ ನಿಗಮ, ಕರ್ನಾಟಕ ನೀರಾವರಿ ನಿಗಮ, ಕಾವೇರಿ ನೀರಾವರಿ ನಿಗಮ ಮತ್ತು ವಿಶ್ವೇಶ್ವರಯ್ಯ ಜಲ […]

ವಿಜಯಪುರದಲ್ಲಿ ಬೃಹತ್ ಉದ್ದಿಮೆಗಳನ್ನು ಸ್ಥಾಪಿಸಲು ಜಪಾನ ಮುಂದಾಗಲಿ- ಜಪಾನ್ ಡೆಪ್ಯೂಟಿ ಕೌನ್ಸಿಲ್ ಜನರಲ್ ಮೂಲಕ ಆಹ್ವಾನ ನೀಡಿದ ಮಾಜಿ ಸಚಿವ ಎಂ. ಬಿ. ಪಾಟೀಲ

ವಿಜಯಪುರ: ವಿಜಯಪುರ ಜಿಲ್ಲೆಯಲ್ಲಿ ಕೈಗಾರಿಕೆಗೆ ಬೇಕಾಗುವ ಎಲ್ಲ ಸೌಲಭ್ಯಗಳೂ ಲಭ್ಯವಿದ್ದು, ಜಪಾನ ಬೃಹತ್ ಉದ್ದಿಮೆಗಳನ್ನು ವಿಜಯಪುರದಲ್ಲಿ ಸ್ಥಾಪಿಸಲು ಮುಂದಾಗಬೇಕು ಎಂದು ಜಪಾನ್ ರಾಯಭಾರಿ ಮೂಲಕ ಮಾಜಿ ಸಚಿವ ಎಂ. ಬಿ. ಪಾಟೀಲ ಮನವಿ ಮಾಡಿದ್ದಾರೆ. ಎರಡು ದಿನಗಳ ವಿಜಯಪುರ ಪ್ರವಾಸದಲ್ಲಿರುವ ಬೆಂಗಳೂರಿನಲ್ಲಿರುವ ಜಪಾನ್ ಕೌನ್ಸಿಲೇಟ್ ಡೆಪ್ಟೂಯಿ ಕೌನ್ಸಿಲ್ ಜನರಲ್ ಕತ್ಸುಮಸಾ ಮರಾವೂ, ಬಿ ಎಲ್ ಡಿ ಇ ಸಂಸ್ಥೆಯ ಡಾ. ಫ. ಗು. ಹಳಕಟ್ಟಿ ಎಂಜಿನಿಯರಿಂಗ್ ಕಾಲೇಜಿನಲ್ಲಿ ಕ್ಲಾಸ್ ರೂಂ ಕಾಂಪ್ಸೆಕ್ ಉದ್ಘಾಟಿಸಿದರು. ಈ ಕಾರ್ಯಕ್ರಮದಲ್ಲಿ ಮಾತನಾಡಿದ […]

ಶಿಕ್ಷಣ, ಉನ್ನತ ಶಿಕ್ಷಣ ಸಚಿವರನ್ನು ಭೇಟಿ ಮಾಡಿದ ಎಂ ಎಲ್ ಸಿ ಅರುಣ ಶಹಾಪುರ ಸಲ್ಲಿಸಿದ ಬೇಡಿಕೆ ಏನು ಗೊತ್ತಾ?

ಬೆಂಗಳೂರು: ವಿಧಾನ ಪರಿಷತ್ ಬಿಜೆಪಿ ಸದಸ್ಯ ಅರುಣ ಶಹಾಪುರ ಬೆಂಗಳೂರಿನಲ್ಲಿ ಶಿಕ್ಷಣ ಮತ್ತು ಉನ್ನತ ಶಿಕ್ಷಣ ಸಚಿವರನ್ನು ಭೇಟಿ ಮಾಡಿದ್ದಾರೆ. ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ. ಸಿ. ನಾಗೇಶ ಮತ್ತು ಉನ್ನತ ಶಿಕ್ಷಣ, ಕೌಶಲ್ಯಾಭಿವೃದ್ಧಿ, ಐಟಿ ಮತ್ತು ಬಿಟಿ ಸಚಿವ ಡಾ. ಅಶ್ವತ್ಥನಾರಾಯಣ ಅರವರನ್ನು ಭೇಟಿ ಮಾಡಿದರು. ಈ ಸಂದರ್ಭದಲ್ಲಿ ಪ್ರಾಥಮಿಕ, ಪ್ರೌಢ ಶಿಕ್ಷಣ, ಉನ್ನತ ಶಿಕ್ಷಣ ಹಾಗೂ ಐಟಿಐ ಶಿಕ್ಷಣ ಇಲಾಖೆಗಳಲ್ಲಿನ ಅತೀ ಪ್ರಮುಖವಾದ ಸಮಸ್ಯೆಗಳನ್ನು ಬಗೆಹರಿಸುವಂತೆ ಆಗ್ರಹಿಸಿದರು. ಅಲ್ಲದೇ, ಈ ನಿಟ್ಟಿನಲ್ಲಿ […]

ಅನ್ನದಾತನ ಹೊಲಕ್ಕೆ ತೆರಳಿ ಆ್ಯಪ್ ನಲ್ಲಿ ಸ್ವಯಂ ಬೆಳೆ ಸಮೀಕ್ಷೆ ಮಾಡುವ ಕುರಿತು ಮಾಹಿತಿ ನೀಡಿದ ಜಿಲ್ಲಾಧಿಕಾರಿ ಪಿ. ಸುನೀಲ ಕುಮಾರ

ವಿಜಯಪುರ: ವಿಜಯಪುರ ಜಿಲ್ಲಾಧಿಕಾರಿ ಪಿ. ಸುನೀಲ ಕುಮಾರ ಅಲಿಯಾಬಾದ ಗ್ರಾಮದ ರೈತ ಹರಿಬಾ ಮಾಳವೆ ಅವರ ಜಮೀನಿಗೆ ತೆರಳಿ ಮೊಬೈಲ್ ಆ್ಯಪ್ ಮೂಲಕ ಸ್ವಯಂ ಬೆಳೆ ಸಮೀಕ್ಷೆ ದಾಖಲಿಸಿಕೊಳ್ಳುವ ಮಾಹಿತಿಯನ್ನು ನೀಡಿದ್ದಾರೆ. ಈ ಸಂದರ್ಭದಲ್ಲಿ ಮಾತನಾಡಿದ ಜಿಲ್ಲಾಧಿಕಾರಿ ಪಿ. ಸುನೀಲ ಕುಮಾರ, ಜಮೀನಿನ ಸರ್ವೇ ನಂಬರ್ ಅನ್ನು ಆಯ್ಕೆ ಮಾಡುವಾಗ ನೀವು ಆಯ್ಕೆ ಮಾಡಿದ ಗ್ರಾಮವು ಪೂರ್ವ ಮುಂಗಾರಿಗೆ ಆಯ್ಕೆ ಆಗಿಲ್ಲ ಎಂಬ ಮಾಹಿತಿ ಗೋಚರಿಸಿದರೆ ನಿಮ್ಮ ಗ್ರಾಮವು ಪೂರ್ವ ಮುಂಗಾರಿಗೆ ಆಯ್ಕೆ ಆಗಿಲ್ಲ ಎಂದು ಅರ್ಥ. […]