ಸಿಎಂ ಬಸವರಾಜ ಬೊಮ್ಮಾಯಿ ಭೇಟಿ ಮಾಡಿದ ಯೂನಿಯನ್ ಬ್ಯಾಂಕ್ ಎಪ್ ಜಿ ಎಂ ಚಂದ್ರಮೋಹನ ರೆಡ್ಡಿ
ಬೆಂಗಳೂರು: ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ ಫೀಲ್ಡ್ ಜನರಲ್ ಮ್ಯಾನೇಜರ್ ಚಂದ್ರಮೋಹನ ರೆಡ್ಡಿ ಅವರು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭೇಟಿ ಮಾಡಿದರು. ಬೆಂಗಳೂರಿನಲ್ಲಿ ಸಿಎಂ ಭೇಟಿ ಮಾಡಿದ ಅವರು ಸೌಹಾರ್ದಯುತ ಮಾತುಕತೆ ನಡೆಸಿದರು. ಈ ಸಂದರ್ಭದಲ್ಲಿ ಬ್ಯಾಂಕಿನ ಎಜಿಎಂ ಶ್ರೀಕಾಂತ ಕುಮಾರ ಮತ್ತು ಇತರರು ಉಪಸ್ಥಿತರಿದ್ದರು.
ಎಂಬಿಎ ಓದಲು, ಉದ್ಯೋಗ ಗಿಟ್ಟಿಸಲು ವರದಾನವಾಗಿದೆ ಈ ಕಾಲೇಜು- ಕಳೆದ ವರ್ಷ 150ಕ್ಕೂ ಹೆಚ್ಚು ವಿದ್ಯಾರ್ಥಿಗಳು ಕ್ಯಾಂಪಸ್ ಸಂದರ್ಶನದಲ್ಲಿ ಆಯ್ಕೆ
ಡಾ.ವೀರೇಂದ್ರಕುಮಾರ ಎಂ.ನರಸಲಗಿ, ಎಂಬಿಎ ವಿಭಾಗದ ಮುಖ್ಯಸ್ಥರು. ವಿಜಯಪುರ: ಎಂಬಿಎ ವಿದ್ಯಾರ್ಥಿಗಳಿಗೆ ವೃತ್ತಿ ಪರ ಕೌಶಲ್ಯ ಶಿಕ್ಷಣ ನೀಡುವ ಮೂಲಕ ನಗರದ ಪ್ರತಿಷ್ಠಿತ ಬಿ.ಎಲ್.ಡಿ.ಇ ಸಂಸ್ಥೆ ವಚನಪಿತಾಮಹ ಡಾ.ಫ.ಗು.ಹಳಕಟ್ಟಿ ಇಂಜನಿಯರಿಂಗ್ ಕಾಲೇಜಿನ ಎಂ.ಬಿ.ಎ ವಿಭಾಗ ಗಮನ ಸೆಳೆಯುತ್ತಿದೆ. ಅಮೇರಿಕಾದಲ್ಲಿ 19ನೇ ಶತಮಾನದ ಕೊನೆಯ ಭಾಗದಲ್ಲಿ ಕೈಗಾರಿಕರಣದಿಂದಾಗಿ ಕಂಪನಿಗಳು ಆಡಳಿತ ನಿರ್ವಹಣೆಯಲ್ಲಿ ವೈಜ್ಞಾನಿಕ ಕ್ರಮಗಳನ್ನು ಅಳವಡಿಸಿಕೊಂಡವು ಇದರ ಪರಿಣಾಮ ಮಾಸ್ಟರ್ ಆಫ್ ಬ್ಯುಸಿನೆಸ್ ಎಡ್ಮಿನಿಸ್ಟ್ರೇಷನ್ (ಎಂ.ಬಿ.ಎ) ವೃತ್ತಿಪರ ಪದವಿ ಪ್ರಾರಂಭವಾಯಿತು. ಇತ್ತೀಚಿನ ದಿನಗಳಲ್ಲಿ ಬಹು ಬೇಡಿಕೆಯಲ್ಲಿರುವ ಸ್ನಾತಕೋತ್ತರ ಪದವಿ ಇದಾಗಿದ್ದು, […]
ಕೋವಿಡ್-19 ಮಾರ್ಗಸೂಚಿಗಳ ಅನ್ವಯ ಪಿಯುಸಿ ಬಾಹ್ಯ ಪರೀಕ್ಷೆ ನಡೆಸಲು ಅಪರ ಜಿಲ್ಲಾಧಿಕಾರಿ ರಮೇಶ ಕಳಸದ ಸೂಚನೆ
ವಿಜಯಪುರ: ಆ. 19 ರಿಂದ ಸೆ. 3ರ ವರೆಗೆ ವಿಜಯಪುರ ಜಿಲ್ಲೆಯಲ್ಲಿ ನಡೆಯಲಿರುವ ದ್ವಿತೀಯ ಪಿಯುಸಿ ಬಾಹ್ಯ ವಾರ್ಷಿಕ ಪರೀಕ್ಷೆಗಳನ್ನು ಕೋವಿಡ್-19 ಮಾರ್ಗಸೂಚಿಗಳ ಅನ್ವಯ ನಡೆಸಲು ಸಕಲ ಸಿದ್ದತೆ ಮಾಡಿಕೊಳ್ಳುವಂತೆ ಅಪರ ಜಿಲ್ಲಾಧಿಕಾರಿ ರಮೇಶ ಕಳಸದ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ದ್ವಿತೀಯ ಪಿಯುಸಿ ಬಾಹ್ಯ ಮತ್ತು ರೆಗ್ಯೂಲರ್ ವಾರ್ಷಿಕ ಪರೀಕ್ಷೆಯ ಪೂರ್ವಭಾವಿ ಸಿದ್ದತಾ ಸಭೆ ನಡೆಸಿದ ಅವರು, ಕೋವಿಡ್- 19 ಮಾರ್ಗಸೂಚಿಯ ಅನ್ವಯ ಪರೀಕ್ಷೆಗಳನ್ನು ನಡೆಸಲು ಸಿದ್ದತೆ ಮಾಡಿಕೊಳ್ಳಬೇಕು. ಪರೀಕ್ಷೆ ಬರೆಯುವ ವಿದ್ಯಾರ್ಥಿಗಳು […]
ಇನ್ನು ಮುಂದೆ ಅನಾವಶ್ಯಕವಾಗಿ ಆಯುಧ ಲೈಸನ್ಸ್, ನವೀಕರಣಕ್ಕೆ ಕಡಿವಾಣ- ವಿಜಯಪುರ ಜಿಲ್ಲಾಧಿಕಾರಿ ಪಿ. ಸುನೀಲ ಕುಮಾರ
ವಿಜಯಪುರ: ಅನಾವಶ್ಯಕವಾಗಿ ಗನ್ ಲೈಸನ್ಸ್ ಅಂದರೆ ಆಯುಧ ಅನುಮತಿ ಮಂಜೂರಾತಿ ಮತ್ತು ನವೀಕರಣ ಕುರಿತು ವಿಜಯಪುರ ಜಿಲ್ಲಾಧಿಕಾರಿ ಪಿ. ಸುನೀಲ ಕುಮಾರ ಅಧಿಕಾರಿಗಳಿಗೆ ಖಡಕ್ ಸೂಚನೆ ನೀಡಿದ್ದಾರೆ. ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಎಸ್ಪಿ, ತಹಸೀಲ್ದಾರರು ಮತ್ತು ಪೊಲೀಸ್ ಇನ್ಸಪೆಕ್ಟರ್ ಗಳೊಂದಿಗೆ ಆಯುಧ ಲೈಸನ್ಸ್ ಮಂಜೂರಿಸುವ ಕುರಿತು ನಡೆದ ಸಭೆಯಲ್ಲಿ ಅವರು ಮಾತನಾಡಿದರು. ಸಾರ್ವಜನಿಕ ಹಿತದೃಷ್ಟಿಯಿಂದ ಹಾಗೂ ಕಾನೂನು ಸುವ್ಯವಸ್ಥೆ ಹಿತದೃಷ್ಟಿಯಿಂದ ತೀರಾ ಅನಿವಾರ್ಯ ಪ್ರಕರಣಗಳಲ್ಲಿ ಮಾತ್ರ ಆಯುಧ ಲೈಸನ್ಸ್ ಮಂಜೂರಾತಿ ಮತ್ತು ಲೈಸನ್ಸ್ ನವೀಕರಣ ಮಾಡಲಾಗುವುದು ಎಂದು ತಿಳಿಸಿದರು. […]
ಬಿ ಎಸ್ ವೈ ಕೆಳಗಿಳಿಸಲು ಕೆಟ್ಟ ಜಾತಿ ವ್ಯವಸ್ಥೆ ಕಾರಣ- ಸ್ವಾಮೀಜಿಗಳ ಒಗ್ಗಟ್ಟು ಬಿಜೆಪಿ ಹೈಕಮಾಂಡ್ ನಿರ್ಣಯ ಬದಲಿಸಿತು- ದಿಂಗಾಲೇಶ್ವರ ಶ್ರೀ
ವಿಜಯಪುರ: ಮಾಜಿ ಸಿಎಂ ಬಿ. ಎಸ್. ಯಡಿಯೂರಪ್ಪ ಸವರನ್ನು ಸಿಎಂ ಸ್ಥಾನದಿಂದ ಕೆಳಗಿಳಿಯಲು ಕೆಟ್ಟ ಜಾತಿ ವ್ಯವಸ್ಥೆ ಕಾರಣವಾಗಿದೆ. ಆ ವ್ಯವಸ್ಥೆಯ ವಿರುದ್ಧ ಸ್ವಾಮೀಜಿಗಳು ಒಂದಾಗಿ ಒಗ್ಗಟ್ಟು ಪ್ರದರ್ಶಿಸಿದ ಪರಿಣಾಮ ಬಿಜೆಪಿ ಹೈಕಮಾಂಡ ತನ್ನ ನಿರ್ಣಯ ಬದಲಿಸಿತು. ಈ ಬಗ್ಗೆ ಹೆಮ್ಮೆಯಿದೆ ಎಂದು ಬಾಳೆಹೊಸೂರು ಶ್ರೀ ದಿಂಗಾಲೇಶ್ವರ ಮಠದ ಶ್ರೀ ದಿಂಗಾಲೇಶ್ವರ ಸ್ವಾಮೀಜಿ ತಿಳಿಸಿದ್ದಾರೆ. ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ತಾಲೂಕು ಕುಂಟೋಜಿ ಸಂಸ್ಥಾನ ಹಿರೇಮಠದಲ್ಲಿ ಮಠದ ಮುಖ್ಯಸ್ಥ ಶ್ರೀ ಚನ್ನವೀರ ದೇವರ ನೇತೃತ್ವದಲ್ಲಿ ಆಯೋಜಿಸಲಾಗಿದ್ದ ಕೊರೊನಾ ಆಪದ್ಭಾಂಧವರಿಗೆ […]
ಶನಿವಾರ ಸಿಎಂ ಬಸವರಾಜ ಬೊಮ್ಮಾಯಿ ಬಸವ ನಾಡು ಪ್ರವಾಸ- ಆಲಮಟ್ಟಿ ಜಲಾಷಯಕ್ಕೆ ಬಾಗೀನ ಅರ್ಪಣೆ
ವಿಜಯಪುರ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಶನಿವಾರ ಆ. 21ರಂದು ಬಸವ ನಾಡು ವಿಜಯಪುರ ಜಿಲ್ಲಾ ಪ್ರವಾಸ ಕೈಗೊಳ್ಳಲಿದ್ದಾರೆ. ಆ. 21 ರಂದು ಬೆ. 11ಕ್ಕೆ ಹೆಲಿಕಾಪ್ಟರ್ ಮೂಲಕ ನಿಡಗುಂದಿ ತಾಲೂಕಿನ ಆಲಮಟ್ಟಿಗೆ ಆಗಮಿಸಲಿದ್ದಾರೆ. ಬಳಿಕ ಭರ್ತಿಯಯಾಗಿರುವ ಲಾಲ್ ಬಹಾದ್ದೂರ ಶಾಸ್ತ್ರಿ ಸಾಗರಕ್ಕೆ ಗಂಗಾಪೂಜೆ ಸಲ್ಲಿಸಿ ಬಾಗೀನ ಅರ್ಪಿಸಲಿದ್ದಾರೆ. ನಂತರ ಜನಪ್ರತಿನಿಧಿಗಳೊಂದಿಗೆ ಭೇಟಿ ನಡೆಸಲಿದ್ದಾರೆ. ಮ. 1ಕ್ಕೆ ಆಲಮಟ್ಟಿಯಿಂದ ಹೆಲಿಕಾಪ್ಟರ್ ಮೂಲಕ ಬೆಳಗಾವಿ ಸುವರ್ಣ ವಿಧಾನಸೌಧಕ್ಕೆ ತೆರಳಿದ್ದಾರೆ.
ಒಂದೇ ನಂಬರ್ ಬಳಸಿ ತೆರಿಗೆ ವಂಚನೆ- ನಾಲ್ಕು ಬಸ್ ವಶ
ಕೋಲಾರ: ಒಂದೇ ನಂಬರ್ ಬಳಸಿ ಕಾರ್ಯಾಚರಣೆ ನಡೆಸುತ್ತಿದ್ದ ನಾಲ್ಕು ಬಸ್ಸುಗಳನ್ನು ಕೋಲಾರ ಪ್ರಾದೇಶಿಕ ಸಾರಿಗೆ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ. ಮುಳಬಾಗಿಲು ಮತ್ತು ಬೇತಮಂಗಲದಲ್ಲಿ ಕ್ಷಿಪ್ರ ಕಾರ್ಯಾಚರಣೆ ನಡೆಸಿದ ಸಾರಿಗೆ ಇಲಾಖೆ ಅಧಿಕಾರಿಗಳಿ ಒಂದೇ ನಂಬರ್ ಬಳಸಿಕೊಂಡು ತೆರಿಗೆ ವಂಚಿಸಿ ಸಂಚರಿಸುತ್ತಿದ್ದ ನಾಲ್ಕು ಬಸ್ ಗಳನ್ನು ವಶಪಡಿಸಿಕೊಂಡಿದ್ದಾರೆ. ಆರ್ ಟಿ ಓ ಹೆಚ್ಚುವರಿ ಆಯುಕ್ತ ನರೇಂದ್ರ ಹೋಳ್ಕರ್, ಜಂಟಿ ಆಯುಕ್ತೆ ಓಂಕಾರೇಶ್ವರಿ ನೇತೃತ್ವದಲ್ಲಿ ಕೋಲಾರ ಪ್ರಾದೇಶಿಕ ಸಾರಿಗೆ ಕಚೇರಿಯ ಮೋಟಾರು ವಾಹನ ನಿರೀಕ್ಷಕರಾದ ತಿಪ್ಪೇಸ್ವಾಮಿ ಸಿ, ಸುರೇಶ ಜಿ. ಎನ್, […]
ಹೆಬ್ಬಾಳ ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ಸಹಕಾರ- ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭರವಸೆ
ಬೆಂಗಳೂರು: ಹೆಬ್ಬಾಳ ಕ್ಷೇತ್ರದ ಸಮಗ್ರ ಅಭಿವೃದ್ಧಿ ಎಲ್ಲ ರೀತಿಯ ಸಹಕಾರ ನೀಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಹೆಬ್ಬಾಳ ವಿಧಾನ ಸಭಾ ಕ್ಷೇತ್ರದ ಬಿಜೆಪಿ ಮುಖಂಡರ ನಿಯೋಗ ತಮ್ಮನ್ನು ಭೇಟಿ ಮಾಡಿದ ನಂತರ ಮಾಧ್ಯಮದವರೊಂದಿಗೆ ಅವರು ಸಿಎಂ ಮಾತನಾಡಿದರು. ರಾಜ್ಯದ ಪ್ರಗತಿಗೆ ಇನ್ನಷ್ಟು ವೇಗ ತರುವ ನಿಟ್ಟಿನಲ್ಲಿ ಸರಕಾರದ ನಾನಾ ಇಲಾಖೆಗಳ ಪ್ರಗತಿ ಪರಿಶೀಲನೆಯನ್ನು ಕೈಗೊಳ್ಳುತ್ತಿದ್ದೇನೆ. ಉತ್ತಮ ಮೂಲಭೂತ ಸೌಕರ್ಯಗಳು ಆರ್ಥಿಕ ಚಟುವಟಿಕೆಗೆ ಇಂಬು ನೀಡುತ್ತವೆ. ಬಡವರ ಆರ್ಥಿಕ ಸಾಮಾಜಿಕ ಸ್ಥಿತಿ ಸುಧಾರಣೆಯಾಗಬೇಕಿದೆ. […]
ಪೆಟ್ರೋಲ್ ಮೇಲಿನ ಸೆಸ್ ಕಡಿತ ಮಾಡುವ ಯೋಚನೆ ಇಲ್ಲ- ಸಿಎಂ ಬಸವರಾಜ ಬೊಮ್ಮಾಯಿ ಸ್ಪಷ್ಟನೆ
ಬೆಂಗಳೂರು: ರಾಜ್ಯದಲ್ಲಿ ಪೆಟ್ರೋಲ್ ಮೇಲಿನ ಸೆಸ್ ದರವನ್ನು ಕಡಿತಗೊಳಿಸುವ ಯೋಚನೆ ಇಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸ್ಪಷ್ಟಪಡಿಸಿದ್ದಾರೆ. ಬೆಂಗಳೂರಿನಲ್ಲಿ ತಮ್ಮ ನಿವಾಸದ ಬಳಿ ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, ತಮಿಳುನಾಡಿನಲ್ಲಿ ಪೆಟ್ರೋಲ್ ಮೇಲಿನ ಸೆಸ್ ನ್ನೂ ರೂ. 3 ಕಡಿತ ಮಾಡಲಾಗಿದೆ. ರಾಜ್ಯದಲ್ಲಿ ಸರಕಾರ ಈ ರೀತಿ ಕಡಿತ ಮಾಡಲಿದೆಯಾ ಎಂಬ ಪ್ರಶ್ನೆಗೆ, ಆ ರೀತಿ ಯೋಚನೆ ಇಲ್ಲ ಎಂದು ಸ್ಪಷ್ಟಪಡಿಸಿದರು. ಇಂದು ನಾಲ್ಕು ಇಲಾಖೆಗಳ ಪ್ರಗತಿ ಪರಿಶೀಲನೆ ನಡೆಸುತ್ತಿದ್ದೇನೆ. ನಾಳೆ ಮತ್ತೆ ಮೂರು […]
ಸಿಎಂ ಬಸವರಾಜ ಬೊಮ್ಮಾಯಿ ಭೇಟಿ ಮಾಡಿದ ನೇತಾಜಿ ಸುಭಾಷಚಂದ್ರ ಬೋಸ ಬೊಮ್ಮಗ
ಬೆಂಗಳೂರು: ಸ್ವಾತಂತ್ರ್ಯ ಹೋರಾಟಗಾರ ನೇತಾಜಿ ಸುಭಾಷಚಂದ್ರ ಬೋಸ ಅವರ ಮೊಮ್ಮಗ ಚಂದ್ರಕುಮಾರ ಬೋಸ ಅವರು ಸಿಎಂ ಬಸವರಾಜ ಬೊಮ್ಮಾಯಿ ಅವರನ್ನು ಭೇಟಿ ಮಾಡಿದರು. ಸ್ವಾತಂತ್ರ್ಯ ಅಮೃತ ಮಹೋತ್ಸವದ ಅಂಗವಾಗಿ ಬೆಂಗಳೂರಿನಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಅವರನ್ನು ಸಿಎಂ ಕಚೇರಿ ಕೃಷ್ಣಾದಲ್ಲಿ ಭೇಟಿ ಮಾಡಿ ಮಾತುಕತೆ ನಡೆಸಿದರು. ಈ ಸಂದರ್ಭದಲ್ಲಿ ಚಂದ್ರಕುಮಾರ ಬೋಸ ಕುಟುಂಬದ ಸದಸ್ಯರೂ ಉಪಸ್ಥಿತರಿದ್ದರು. ಭಾರತದ ಸ್ವಾತಂತ್ರ್ಯ ಹೋರಾಟದಲ್ಲಿ ಸುಭಾಷಚಂದ್ರ ಬೋಸ ಅವರು ನಡೆಸಿದ ಹೋರಾಟ, ತ್ಯಾಗ, ಸಂಘರ್ಷವನ್ನು ಈ ಸಂದರ್ಭದಲ್ಲಿ ಮುಖ್ಯಮಂತ್ರಿಗಳು ಮೆಲುಕು ಹಾಕಿದರು.