ಗುಣಮಟ್ಟದ ಬೀಜ ಉತ್ಪಾದನೆ, ಸಾವಯವ ಕೃಷಿಗೆ ಹೆಚ್ಚಿನ ಒತ್ತು- ವಿಜುಗೌಡ ಪಾಟೀಲ

ಬೆಂಗಳೂರು: ಗುಣಮಟ್ಟದ ಬೀಜ ಉತ್ಪಾದನೆ ಮತ್ತು ಸಾವಯವ ಕೃಷಿಗೆ ಹೆಚ್ಚಿನ ಒತ್ತು ನೀಡಲಾಗುತ್ತಿದೆ ಎಂದು ಬೀಜ ಮತ್ತು ಸಾವಯವ ಪ್ರಮಾಣನ ಸಂಸ್ಥೆ ಅಧ್ಯಕ್ಷ ವಿಜುಗೌಡ ಎಸ್ ಪಾಟೀಲ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಹೆಬ್ಬಾಳದಲ್ಲಿರುವ ಕರ್ನಾಟಕ ರಾಜ್ಯ ಬೀಜ ಮತ್ತು ಸಾವಯವ ಪ್ರಮಾಣನ ಸಂಸ್ಥೆಯ ಕೇಂದ್ರ ಕಛೇರಿಯಲ್ಲಿ 75ನೇ ಸ್ವಾತಂತ್ರ್ಯ ದಿನಾಚರಣೆಯ ಧ್ವಜಾರೋಹಣ ನೆರವೇರಿಸಿ ಅವರು ಮಾತನಾಡಿದರು. ಈ ಸಂದರ್ಭದಲ್ಲಿ ಸ್ವಾತಂತ್ರ್ಯ ಹೋರಾಟಗಾರರ ತ್ಯಾಗ ಮತ್ತು ಬಲಿದಾನಗಳನ್ನು ಸ್ಮರಿಸಿದ ಅವರು, ದೇಶ ಕಾಯುವ ಸೈನಿಕರು ಮತ್ತು ನೇಗಿಲಯೋಗಿ ರೈತರ ಕೊಡುಗೆ […]

ಬೆಂಗಳೂರಿನಲ್ಲಿ 75ನೇ ಸ್ವಾತಂತ್ರ್ಯ ದಿನಾಚರಣೆ- ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಧ್ವಜಾರೋಹಣ

ಬೆಂಗಳೂರು: ಬೆಂಗಳೂರಿನ ಮಾಣಿಕ್ ಷಾ ಪರೇಡ್ ಮೈದಾನದಲ್ಲಿ 75ನೇ ಸ್ವಾತಂತ್ರ್ಯ ದಿನ ಆಚರಿಸಲಾಯಿತು. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಧ್ವಜಾರೋಹಣ ನೆರವೇರಿಸಿದರು.   ಬಳಿಕ ರಾಜ್ಯವನ್ನು ಉದ್ದೇಶಿಸಿ ಮಾತನಾಡಿದರು. ಈ ಸಂದರ್ಭದಲ್ಲಿ ನಾನಾ ಪದಾತಿ ದಳಗಳನ್ನು ಸಿಎಂ ಬಸವರಾಜ ಬೊಮ್ಮಾಯಿ ವೀಕ್ಷಿಸಿದರು. ಈ ಸಂದರ್ಭದಲ್ಲಿ ಸರಕಾರದ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.  

ಶೇ. 2ಕ್ಕಿಂತ ಕಡಿಮೆ ಕೊರೊನಾ ಪಾಸಿಟಿವಿಟಿ ದರ ಇರುವ ಜಿಲ್ಲೆಗಳಲ್ಲಿ 9, 10, ಪಿಯುಸಿ ತರಗತಿ ಪ್ರಾರಂಭ- ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ಬೆಂಗಳೂರು: ಶೇ. 2ಕ್ಕಿಂತ ಕಡಿಮೆ ಕೊರೊನಾ ಪಾಸಿಟಿವಿಟಿ ದರ ಇರುವ ಜಿಲ್ಲೆಗಳಲ್ಲಿ 9, 10 ಮತ್ತು ಪಿಯುಸಿ ತರಗತಿ ಪ್ರಾರಂಭಿಸಲು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಅಧ್ಯಕ್ಷತೆಯಲ್ಲಿ ನಡೆದ ತಜ್ಞರು ಮತ್ತು ಹಿರಿಯ ಅಧಿಕಾರಿಗಳ ಸಭೆಯಲ್ಲಿ ತೀರ್ಮಾನಿಸಲಾಗಿದೆ. ಬೆಂಗಳೂರಿನಲ್ಲಿ ಸಭೆಯ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಸಿಎಂ, ಶೇ. 2ಕ್ಕಿಂತ ಹೆಚ್ಚು ಪಾಸಿಟಿವಿಟಿ ದರ ಇರುವ ಜಿಲ್ಲೆಗಳಲ್ಲಿ ಹಾಗೂ ಗಡಿ ಭಾಗದ ತಾಲೂಕುಗಳಲ್ಲಿ ಪರಿಸ್ಥಿತಿ ಅವಲೋಕಿಸಿ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು. ಶಾಲೆಗಳಲ್ಲಿ ಶೇ. 2ಕ್ಕಿಂತ ಹೆಚ್ಚು ಪ್ರಕರಣ […]

ಬಸವನಾಡು ರಾಜ್ಯದಲ್ಲಿಯೇ ಅತೀ ಕಡಿಮೆ ಕೊರೊನಾ ಪಾಸಿಟಿವಿಟಿ ಹೊಂದಿದ ಜಿಲ್ಲೆ- ಉಳಿದ ಜಿಲ್ಲೆಗಳಲ್ಲಿ ಸೋಂಕಿನ ಪ್ರಮಾಣ ಎಷ್ಟಿದೆ ಗೊತ್ತಾ?

ವಿಜಯಪುರ: ಬಸವ ನಾಡು ವಿಜಯಪುರ ಜಿಲ್ಲೆ ರಾಜ್ಯದಲ್ಲಿಯೇ ಅತೀ ಕಡಿಮೆ ಕೊರೊನಾ ಪಾಸಿಟಿವಿಟಿ ಹೊಂದಿದ ಜಿಲ್ಲೆಯಾಗಿದೆ. ಇಂದು ಸರಕಾರ ಬಿಡುಗಡೆ ಮಾಡಿರುವ ಕೊರೊನಾ ಪಾಸಿಟಿವಿಟಿ ದರ ಹೆಚ್ಚಿರುವ ಜಿಲ್ಲೆಗಳ ಪಟ್ಟಿಯಲ್ಲಿ ವಿಜಯಪುರ ಜಿಲ್ಲೆ ಕೊನೆಯ ಸ್ಥಾನದಲ್ಲಿದ್ದು, ಬಸವ ನಾಡಿನಲ್ಲಿ ಕಳೆದ ಒಂದು ವಾರದಲ್ಲಿ ಕೇವಲ ಶೇ. 0.08 ರಷ್ಟು ಕೊರೊನಾ ಪಾಸಿಟಿವಿಟಿ ದರ ದಾಖಲಾಗಿದೆ.     ಜಿಲ್ಲಾವಾರು ಪಾಸಿಟಿವಿಟಿ ಪ್ರಮಾಣದ ಮಾಹಿತಿ ಇಲ್ಲಿದೆ. 1. ದಕ್ಷಿಣ ಕನ್ನಡ- ಶೇ. 3.98 2. ಚಿಕ್ಕಮಗಳೂರು- ಶೇ. 3.24 […]

ಕಾಗಿನೆಲೆ ಶ್ರೀಗಳನ್ನು ಭೇಟಿ ಮಾಡಿ ಸಂಗೋಳ್ಳಿ ರಾಯಣ್ಣನ ಜನ್ಮದಿನ ಕಾರ್ಯಕ್ರಮಕ್ಕೆ ಆಹ್ವಾನ ನೀಡಿದ ಸಿಎಂ-ಮುಖ್ಯಮಂತ್ರಿಗೆ ಅಭಿನಂದನೆ ಸಲ್ಲಿಸಿದ ಶ್ರೀ ನಿರಂಜನಾನಂದ ಸ್ವಾಮೀಜಿ

ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಬೆಂಗಳೂರಿನಲ್ಲಿರುವ ಕಾಗಿನೆಲೆ ಮಹಾಸಂಸ್ಥಾನದ ಕನಕ ಗುರುಪೀಠದ ಶಾಖಾ ಮಠಕ್ಕೆ ಭೇಟಿ ನೀಡಿ ಜಗದ್ಗುರು ಶ್ರೀ ನಿರಂಜನಾನಂದ ಸ್ವಾಮೀಜಿ ಅವರನ್ನು ಭೇಟಿಯಾಗಿ ಆಶೀರ್ವಾದ ಪಡೆದರು. ಕ್ರಾಂತಿವೀರ ಸಂಗೊಳ್ಳಿ ರಾಯಣ್ಣನ ಜನ್ಮದಿನವನ್ನು ಆ. 15 ರಂದು ರವಿವಾರ ಬೆಂಗಳೂರಿನಲ್ಲಿ ಸರಕಾರಿ ಕಾರ್ಯಕ್ರಮವಾಗಿ ಆಚರಿಸಲಾಗುತ್ತಿದ್ದು, ಈ ಕಾರ್ಯಕ್ರಮಕ್ಕೆ ಆಗಮಿಸುವಂತೆ ಮುಖ್ಯಮಂತ್ರಿಗಳು ಶ್ರೀಗಳಿಗೆ ಆಹ್ವಾನ ನೀಡಿದರು.   ಶ್ರೀಗಳ ಭೇಟಿಯ ಬಳಿಕ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಸಿಎಂ ಬಸವರಾಜ ಬೊಮ್ಮಾಯಿ, ಶ್ರೀಗಳ ಆಶೀರ್ವಾದಕ್ಕಾಗಿ ಬಂದಿದ್ದೆ. ನನಗೂ ಹಾಗೂ […]

75ನೇ ಸ್ವಾತಂತ್ರ್ಯ ದಿನ: ವರ್ಷವಿಡಿ ಕನ್ನಡ ನಾಡು, ನುಡಿ, ಸಾಹಿತ್ಯ, ಆಡಳಿದ ಸಾಧನೆ ಬಿಂಬಿಸಲಾಗುವುದು: ಸಿಎಂ ಬಸವರಾಜ ಬೊಮ್ಮಾಯಿ

ಬೆಂಗಳೂರು: 75 ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ವರ್ಷವಿಡಿ ದೇಶಕ್ಕೆ ಮಾದರಿಯಾಗಿರುವ ಕನ್ನಡ ನಾಡು, ನುಡಿ, ಸಾಹಿತ್ಯ,ಆಡಳಿತವನ್ನು ಬಿಂಬಿಸುವ ಕೆಲಸ ನಡೆಯಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, 75ನೇ ಸ್ವಾತಂತ್ರ್ಯೋತ್ಸವ ಧ್ವಜಾರೋಹಣ ಸೌಭಾಗ್ಯ ತಮಗೆ ಬಂದಿದೆ. ಈಗ 75 ವರ್ಷಗಳಲ್ಲಿ ನಾವು ನಡೆದುಕೊಂಡು ಬಂದಿರುವ ದಾರಿ ಮತ್ತು ಮುಂದಿನ ಹಾದಿಯ ಬಗ್ಗೆ ಸರಕಾರ ಚಿಂತನೆ ಮಾಡುತ್ತಿದೆ ಎಂದು ತಿಳಿಸಿದರು. 75 ವರ್ಷಗಳಲ್ಲಿ ಹಲವಾರು ಸವಾಲು ಸಂದರ್ಭಗಳಲ್ಲಿ ಕರ್ನಾಟಕ ದೇಶಕ್ಕೆ […]

ಕೊರೊನಾ 3ನೇ ಹಿನ್ನೆಲೆ: ಮಕ್ಕಳಿಗಾಗಿ ಪ್ರತ್ಯೇಕ ವಾರ್ಡ್, ಐಸಿಯು ಬೆಡ್, ವೆಂಟಿಲೇಟರ್ ವ್ಯವಸ್ಥೆ ಮಾಡಲು ಜಿಲ್ಲಾಧಿಕಾರಿ ಪಿ.ಸುನೀಲ ಕುಮಾರ ಸೂಚನೆ

ವಿಜಯಪುರ: ಕೋವಿಡ್ 3ನೇ ಅಲೆಯಲ್ಲಿ ಮಕ್ಕಳಿಗೆ ಹೆಚ್ಚಿನ ತೊಂದರೆಯಾಗದAತೆ ಮುಂಜಾಗೃತೆ ಕ್ರಮವಾಗಿ ಮಕ್ಕಳಿಗಾಗಿ ಪ್ರತ್ಯೇಕ ಕೋವಿಡ್ ವಾರ್ಡ್, ಐಸಿಯು ಬೆಡ್‌ ಮತ್ತು ವೆಂಟಿಲೇಟರ್ ವ್ಯವಸ್ಥೆ ಮಾಡಲಾಗುತ್ತದೆ ಎಂದು ಜಿಲ್ಲಾಧಿಕಾರಿ ಪಿ. ಸುನಿಲ ಕುಮಾರ ತಿಳಿಸಿದ್ದಾರೆ. ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ನಡೆದ ಕೋವಿಡ್-19 3ನೇ ಅಲೆಯ ನಿಯಂತ್ರಣ ಜಿಲ್ಲಾ ತಜ್ಞರ ಸಮಿತಿ ಏರ್ಪಡಿಸಿದ್ದ ಸಭೆಯಲ್ಲಿ ಮಾತನಾಡಿದ ಅವರು, ಕೋವಿಡ್ 3ನೇ ಅಲೆ ಮಕ್ಕಳಿಗೆ ಹೆಚ್ಚು ಅಪಾಯಕಾರಿಯಾಗಿದ್ದು, ಈ ನಿಟ್ಟಿನಲ್ಲಿ ತೊಂದರೆಯಾಗದಂತೆ ಮುಂಜಾಗೃತೆ ಕ್ರಮವಾಗಿ ಎಲ್ಲ ಆಸ್ಪತ್ರೆಯಗಳು ಮಕ್ಕಳಿಗಾಗಿ ಪ್ರತ್ಯೇಕ […]

75ನೇ ಸ್ವಾತಂತ್ರ್ತೋತ್ಸವ ಹಿನ್ನೆಲೆ ಜಗಮಘಿಸುತ್ತಿದೆ ಆಲಮಟ್ಟಿ ಲಾಲ್ ಬಹಾದ್ದೂರ್ ಶಾಸ್ತ್ರಿ ಸಾಗರ

ವಿಜಯಪುರ: 75ನೇ ಸ್ವಾತಂತ್ರ್ಯ ದಿನಾಚರಣೆ ಹಿನ್ನೆಲೆಯಲ್ಲಿ ರಾಜ್ಯದ ಅತೀ ದೊಡ್ಡ ಜಲಾಷಯ ಆಲಮಟ್ಟಿಗೆ 3ಡಿ ರೂಪದಲ್ಲಿ ವಿದ್ಯುದಲಂಕಾರ ಮಾಡಲಾಗಿದೆ.   ಶುಕ್ರವಾರ ಸಂಜೆಯಿಂದಲೇ ಆಲಮಟ್ಟಿ ಲಾಲ್ ಬಹಾದ್ದೂರ ಶಾಸ್ತ್ರಿ ಸಾಗರ ವಿದ್ಯುತ್ ಬೆಳಕಿನಿಂಗ ಜಗಮಘಾಯಿಸುತ್ತಿದೆ. ಕೇಸರಿ, ಬಿಳಿ ಮತ್ತು ಹಸಿರು ಬಣ್ಣಗಳಿಂದ ಮುಖ್ಯ ದ್ವಾರಕ್ಕೆ ವಿದ್ಯುತ್ ಅರಂಕಾರ ಮಾಡಲಾಗಿದೆ. ಅಷ್ಟೇ ಅಲ್ಲ, ಆಲಮಟ್ಟಿ ಜಲಾಷಯದ ಗೇಟುಗಳಿಗೂ ವಿದ್ಯುತ್ ಅಲಂಕಾರ ಮಾಡಲಾಗಿದ್ದು, ನೋಡುಗರ ಕಣ್ಮನ ಸೆಳೆಯುತ್ತಿದೆ.   ಒಟ್ಟಾರೆ, ಈ ಬಾರಿ ಪ್ರತಿವರ್ಷಕ್ಕೂ ಮುಂಚೆಯೇ ಜಲಾಷಯ ಸಂಪೂರ್ಣ ಭರ್ತಿಯಾಗಿದ್ದು, […]

ಅನಾರೋಗ್ಯದ ಸಂದರ್ಭದಲ್ಲಿ ಆರೈಕೆ ಮಾಡಿದ ಆರೋಗ್ಯ ಸಿಬ್ಬಂದಿಗೆ ನೆರವಾದ ಜೆಡಿಎಸ್ ಶಾಸಕ ಡಾ. ದೇವಾನಂದ ಚವ್ಹಾಣ

ವಿಜಯಪುರ: ಅವರು ಅನಾರೋಗ್ಯದ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ದಾಖಲಾಗಿದ್ದರು. ಒಂದು ವಾರ ಉಪಚಾರ ಪಡೆದು ಆಸ್ಪತ್ರೆಯಿಂದ ಡಿಶ್ಚಾರ್ಜ್ ಆಗುವ ಮುಂಚೆ ತಮ್ಮನ್ನು ಅಕ್ಕರೆಯಿಂದ ಆರೈಕೆ ಮಾಡಿದ ಆಸ್ಪತ್ರೆಯ ಸಿಬ್ಬಂದಿಗಳಿಗೆ ನೆರವಾಗುವ ಮೂಕಲ ಕೃತಜ್ಞತೆ ಸಲ್ಲಿಸಿದ್ದಾರೆ. ಬಸವನಾಡು ವಿಜಯಪುರ ಜಿಲ್ಲೆಯ ನಾಗಠಾಣ ಜೆಡಿಎಸ್ ಶಾಸಕ ಡಾ. ದೇವಾನಂದ ಚವ್ಹಾಣ ಅನಾರೋಗ್ಯದ ಹಿನ್ನೆಲೆಯಲ್ಲಿ ಕಳೆದ ವಾರ ವಿಜಯಪುರ ನಗರದ ಆಯುಷ್ ಆಸ್ಪತ್ರೆಗೆ ದಾಖಲಾಗಿದ್ದರು. ಈಗ ಗುಣಮುಖರಾಗಿ ಡಿಶ್ಚಾರ್ಜ್ ಆಗುತ್ತಿದ್ದಾರೆ. ಅದಕ್ಕೂ ಮುಂಚೆ ತಮಗೆ ಚಿಕಿತ್ಸೆ ನೀಡಿದ ಆಯುಷ್ ಆಸ್ಪತ್ರೆಯ ಮುಖ್ಯಸ್ಥ ಡಾ. […]

ಪಂಚಮಸಾಲಿ ಅಷ್ಟೇ ಅಲ್ಲ, ಧ್ವನಿ ಇಲ್ಲದ ಆದಿ ಬಣಜಿಗ, ಕೂಡು ಒಕ್ಕಲಿಗರನ್ನೂ 2ಎಗೆ ಸೇರಿಸಬೇಕು- ಎಸ್ಟಿ ಮೀಸಲಾತಿ ಪ್ರಮಾಣ ಹೆಚ್ಚಿಸಬೇಕು- ಯತ್ನಾಳ

ವಿಜಯಪುರ: ಕೇವಲ ಲಿಂಗಾಯಿತ ಪಂಚಮಸಾಲಿ ಮಾತ್ರವಲ್ಲ, ಧ್ವನಿ ಇಲ್ಲದ ಲಿಂಗಾಯಿತ ಉಪಪಂಗಡಗಳಾದ ಆದಿ ಬಣಜಿಗ, ಕೂಡು ಒಕ್ಕಲಿಗರನ್ನೂ 2ಎ ಮೀಸಲಾತಿ ಪಟ್ಟಿಗೆ ಸೇರಿಸಬೇಕು ಎಂದು ವಿಜಯಪುರ ನಗರ ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳ ಆಗ್ರಹಿಸಿದ್ದಾರೆ. ವಿಜಯಪುರದಲ್ಲಿ ಮಾತನಾಡಿದ ಅವರು, ಪಂಚಮಸಾಲಿ ಸಮುದಾಯಕ್ಕೆ 2 ಮೀಸಲು ನೀಡುವ ಹೋರಾಟದ ಕುರಿತು ಕೂಡಲ ಸಂಗಮ ಲಿಂಗಾಯಿತ ಪಂಚಮಸಾಲಿ ಪೀಠದ ಜಗದ್ಗುರು ಶ್ರೀ ಬಸವಜಯ ಮೃತ್ಯುಂಜಯ ಸ್ವಾಮೀಜಿ ಈಗಾಗಲೇ ಮಾತನಾಡಿದ್ದಾರೆ. ನಾವು ಪಂಚಮಸಾಲಿ ಸಮಾಜ ಅಷ್ಟೇ ಅಲ್ಲ. ಅದಿ ಬಣಜಿಗ, […]