ಸಚಿವ ಸತೀಶ ಜಾರಕಿಹೊಳಿ ಅವರಿಂದ ವಿಜಯಪುರ ವಿಮಾನ ನಿಲ್ದಾಣ ಕಾಮಗಾರಿ ಪರಿಶೀಲನೆ- ಶೀಘ್ರವೇ ವಿಮಾನಗಳ ಹಾರಾಟದ ಭರವಸೆ

ವಿಜಯಪುರ: ನಗರದ ಹೊರವಲಯದಲ್ಲಿ ನಿರ್ಮಾಣಗೊಳ್ಳುತ್ತಿರುವ ವಿಮಾನ ನಿಲ್ದಾಣ ಕಾಮಗಾರಿ ಸ್ಥಳಕ್ಕೆ ಸೋಮವಾರ ಲೋಕೋಪಯೋಗಿ ಖಾತೆ ಸಚಿವರಾದ ಸತೀಶ ಜಾರಕಿಹೊಳಿ ಅವರು ಭೇಟಿ ನೀಡಿ  ಟರ್ಮಿನಲ್ ಕಟ್ಟಡ, ನಿಲ್ದಾಣದ ರನವೇ, ಟ್ಯಾಕ್ಸಿ ವೇ, ಬ್ಯಾಗೇಜ್ ಹ್ಯಾಂಡಲಿಂಗ್ ವ್ಯವಸ್ಥೆ, ಸೆಕ್ಯುರಿಟಿ ಸ್ಕ್ಯಾನರ್  ಸೇರಿದಂತೆ ವಿವಿಧ ಕಾಮಗಾರಿಗಳ ಪರಿಶೀಲನೆ ನಡೆಸಿ, ಭದ್ರತಾ ಉಪಕರಣಳು ಸೇರಿದಂತೆ ಬಾಕಿ ಕಾಮಗಾರಿಗಳ ಕುರಿತು ಅಧಿಕಾರಿಗಳಿಂದ ಮಾಹಿತಿ ಪಡೆದುಕೊಡರು.  ಈ ಸಂದರ್ಭದಲ್ಲಿ ಮಾತನಾಡಿದ ಅವರು, ವಿಜಯಪುರ ವಿಮಾನ ನಿಲ್ದಾಣ ಮೇಲ್ದರ್ಜೆಗೇರಿಸುವುದನ್ನು ಒಳಗೊಂಡಂತೆ ಎಲ್ಲ ಭೌತಿಕ ಕಾಮಗಾರಿಗಳು ಶೇ.90ರಷ್ಟು […]

ಪಿಎಂ ಮೋದಿ ಭೇಟಿಯಾದ ಸಿಎಂ ಸಿದ್ಧರಾಮಯ್ಯ- ಬರ ಪರಿಹಾರ ಶೀಘ್ರ ಬಿಡುಗಡೆಗೆ ಮನವಿ

ನವದೆಹಲಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನವದೆಹಲಿಯಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರನ್ನು ಭೇಟಿಯಾಗಿ ರಾಜ್ಯದ ಬರ ಪರಿಸ್ಥಿತಿಯ ಕುರಿತು ವಿವರಿಸಿ, ಶೀಘ್ರವೇ ರೂ. 18177.44 ಕೋ. ಪರಿಹಾರ ಬಿಡುಗಡೆ ಮಾಡುವಂತೆ ಮನವಿ ಮಾಡಿದರು. ಇದರಲ್ಲಿ ರೂ. 4663.12 ಕೋ. ಇನ್‌ಪುಟ್‌ ಸಬ್ಸಿಡಿ, ರೂ. 12,577.86 ಕೋ. ತುರ್ತು ಪರಿಹಾರ, ರೂ. 566.78 ಕೋ. ಕುಡಿಯುವ ನೀರಿಗಾಗಿ ಹಾಗೂ ರೂ. 363.68 ಕೋ. ಜಾನುವಾರುಗಳ ಸಂರಕ್ಷಣೆಗಾಗಿ ಒದಗಿಸುವಂತೆ ಕೋರಲಾಗಿದೆ. ರಾಜ್ಯದಲ್ಲಿ 236 ರಲ್ಲಿ 223 ತಾಲ್ಲೂಕುಗಳು ಬರಪೀಡಿತವಾಗಿದ್ದು, […]

ಅತಿಥಿ ಉಪನ್ಯಾಸಕರ ಸಮಸ್ಯೆಗೆ ಸ್ಪಂದಿಸಲು ಆಗ್ರಹಿಸಿ ಎಬಿವಿಪಿ ಕಾರ್ಯಕರ್ತರಿಂದ ಪ್ರತಿಭಟನೆ

ವಿಜಯಪುರ: ರಾಜ್ಯ ಸರಕಾರ ಅತಿಥಿ ಉಪನ್ಯಾಸಕರ ಸಮಸ್ಯೆಗಳನ್ನು ಆಲಿಸಿ, ವಿದ್ಯಾರ್ಥಿಗಳ ತರಗತಿಗಳು ಸುಗಮವಾಗಿ ನಡೆಸುವಂತೆ ಆಗ್ರಹಿಸಿ ಬೃಹತ್ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಕಾರ್ಯಕರ್ತರು ನಗರದಲ್ಲಿ ಪ್ರತಿಭಟನೆ ನಡೆಸಿ ಅಪರ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದರು.  ಈ ಸಂದರ್ಭದಲ್ಲಿ ಮಾತನಾಡಿದ ಎಬಿವಿಪಿ ಪ್ರಾಂತ ಕಾರ್ಯದರ್ಶಿ ಸಚೀನ ಕುಳಗೇರಿ, ರಾಜ್ಯದಲ್ಲಿ ಕಳೆದ ಕೆಲವು ದಿನಗಳಿಂದ ಅತಿಥಿ ಉಪನ್ಯಾಸಕರು ತಮ್ಮ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಪ್ರತಿಭಟನೆ ಮಾಡುತ್ತಿದ್ದಾರೆ.  ಇದರಿಂದಾಗಿ ಪದವಿ ಕಾಲೇಜುಗಳಲ್ಲಿ ಸರಿಯಾಗಿ ತರಗತಿಗಳು ನಡೆಯದೆ ವಿದ್ಯಾರ್ಥಿಗಳ ಶೈಕ್ಷಣಿಕ ಚಟುವಟಿಕೆಗಳಿಗೆ ಹಿನ್ನಡೆಯಾಗುತ್ತಿದೆ.  […]

ಕಾರ್ಖಾನೆಗಳಲ್ಲಿ ಎಲೆಕ್ಟ್ರಾನಿಕ್ ತೂಕ ಮಷಿನ್ ಅಳವಡಿಕೆ ಕಡ್ಡಾಯ- ಸಚಿವ ಕೆ. ಎಚ್. ಮುನಿಯಪ್ಪ

ಬೆಳಗಾವಿ: ರೈತರಿಗೆ ತೂಕದಲ್ಲಿ ಮೋಸ ಆಗದಂತೆ ತಡೆಯಲು ಕಾರ್ಖಾನೆಗಳಲ್ಲಿ ಕಡ್ಡಾಯವಾಗಿ ಎಲೆಕ್ಟ್ರಾನಿಕ್ ಆಧಾರಿತ ತೂಕ ಮಷಿನ್ ಅಳವಡಿಸಲು ಕ್ರಮ ಕೈಗೊಳ್ಳಿ ಎಂದು ಆಹಾರ ಮತ್ತು ನಾಗರಿಕ ಸರಬರಾಜು, ಬೆಂಗಳೂರು ಗ್ರಾಮಾಂತರ ಜಿಲ್ಲಾ ಉಸ್ತುವಾರಿ ಸಚಿವ ಕೆ. ಎಚ್. ಮುನಿಯಪ್ಪ ಕಾನೂನು ಮಾಪನ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.  ಬೆಳಗಾವಿಯ ಸುವರ್ಣ ಸೌಧದಲ್ಲಿ ಆಹಾರ ಮತ್ತು ಕಾನೂನು ಮಾಪನ ಶಾಸ್ತ್ರ ಇಲಾಖೆಯ ಪ್ರಗತಿ ಪರಿಶೀಲನೆ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಬೆಳಗಾವಿ ಜಿಲ್ಲೆಯ ಎಲ್ಲಾ ತಾಲೂಕಿನ ಆಯ್ದ […]

ಮೆಕ್ಕೆಜೋಳ ಸಂಸ್ಕರಣೆ ಘಟಕದಲ್ಲಿ ಅವಘಡ ಪ್ರಕರಣ- ತಡರಾತ್ರಿ ಸಚಿವ ಎಂ. ಬಿ. ಪಾಟೀಲ ಭೇಟಿ, ಸಕಲ ಕ್ರಮದ ಭರವಸೆ

ವಿಜಯಪುರ: ನಗರದ ಹೊರವಲಯದ ಅಲಿಯಾಬಾದ ಕೈಗಾರಿಕೆ ಪ್ರದೇಶದಲ್ಲಿ ರಾಜಗುರು ಇಂಡಸ್ಟ್ರೀಸ್ ನ ಮೆಕ್ಕೆಜೋಳ ಸಂಸ್ಕರಣೆ ಘಟಕದಲ್ಲಿ ಸಂಭವಿಸಿದ ಅವಘಡದಲ್ಲಿ ಸಾವಿಗೀಡಾದ ಕಾರ್ಮಿಕರ ಕುಟುಂಬಗಳಿಗೆ ಪರಿಹಾರ ಒದಗಿಸಲು ಸೂಕ್ತ ಕ್ರಮ ಕೈಗೊಳ್ಳಲಾಗುವದು ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕೆ, ಮೂಲಸೌಕರ್ಯ ಅಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಂ. ಬಿ. ಪಾಟೀಲ ತಿಳಿಸಿದ್ದಾರೆ. ಬೆಳಗಾವಿ ವಿಧಾನ ಮಂಡಲ ಅಧಿವೇಶನದಲ್ಲಿದ್ದ ಸಚಿವರು ಸೋಮವಾರ ಸಂಜೆ ನಡೆದ ಈ ಅವಘಡದ ಸುದ್ದಿ ತಿಳಿಯುತ್ತಿದ್ದಂತೆ ತಡರಾತ್ರಿ ವಿಜಯಪುರ ನಗರಕ್ಕೆ ದೌಡಾಯಿಸಿದರು.  ಅಲ್ಲದೇ, ಘಟನಾ […]

ಗುಮ್ಮಟ ನಗರಿಯಲ್ಲಿ ಮೆಕ್ಕೆಜೋಳದ ಚೀಲಗಳಡಿ ಸಿಲುಕಿದ ಸುಮಾರು ಹತ್ತಕ್ಕೂ ಹೆಚ್ಚು ಜನರು- ಮುಂದುವರೆದ ರಕ್ಷಣಾ ಕಾರ್ಯಾಚರಣೆ

ವಿಜಯಪುರ: ಮೆಕ್ಕೆಜೋಳಗಳನ್ನು ತುಂಬಿಡಲಾಗಿದ್ದ ಗೋಣಿ ಚೀಲಗಳು ಕುಸಿದ ಪರಿಣಾಮ ಸುಮಾರು ಹತ್ತಾರು ಜನರು ಸಿಲುಕಿಕೊಂಡಿರುವ ಘಟನೆ ಗುಮ್ಮಟ ನಗರಿ ವಿಜಯಪುರ ನಗರದ ಹೊರವಲಯದಲ್ಲಿರುವ ಕೆ ಐ ಡಿ ಬಿ ವಸಾಹತು ಪ್ರದೇಶದಲ್ಲಿ ನಡೆದಿದೆ. ಖ್ಯಾತ ರಾಜಗುರು ಇಂಡಸ್ಟ್ರೀಜ್ ಗೋದಾಮಿನಲ್ಲಿ ಈ ಘಟನೆ ನಡೆದಿದ್ದು, ಸುಮಾರು 10ಕ್ಕೂ ಹೆಚ್ಚು ಜನ ಸಿಲುಕ್ಕಿದ್ದಾರೆ ಎೞದು ಪ್ರಾಥಮಿಕ ವರದಿಗಳು ತಿಳಿಸಿವೆ.  ರಾಜಗುರು ಫುಡ್ ಪ್ರೊಸೆಸಿಂಗ್ ಯುನಿಟ್ ನಲ್ಲಿ ಈ ಘಟನೆ ನಡೆದಿದೆ.  ಇಲ್ಲಿ ಸಂಗ್ರಹಿಸಿ ಇಡಲಾಗಿದ್ದ ಮೆಕ್ಕೆಜೋಳದ ಚೀಲಗಳ ಮೇಲೆ ಬೃಹತ್ […]

ಡಾ. ಕುಶಾಲ ಕೆ. ದಾಸ ಅವರಿಗೆ ವಿಕಲಚೇತನರ ಕ್ಷೇತ್ರದಲ್ಲಿನ ಸೇವೆಗಾಗಿ ರಾಜ್ಯ ಸರಕಾರದಿಂದ ರಾಜ್ಯ ಮಟ್ಟದ ವೈಯಕ್ತಿಕ ವಿಭಾಗದ ಪ್ರಶಸ್ತಿ ಘೋಷಣೆ

ವಿಜಯಪುರ: ನಗರದ ಬಿ.ಎಲ್.ಡಿ.ಇ ಡೀಮ್ಡ್ ವಿಶ್ವವಿದ್ಯಾಲಯದ ಶ್ರೀ ಬಿ. ಎಂ. ಪಾಟೀಲ ಪಾಟೀಲ ವೈದ್ಯಕೀಯ ಕಾಲೇಜಿನ ಫಿಜಿಯಾಲಜಿ ವಿಭಾಗದ ಡಿಸ್ಟಿಂಗ್ವಿಷ್ಡ್ ಚೇರ್ ಪ್ರೊಫೆಸರ್ ಡಾ. ಕುಶಾಕ ಕೆ. ದಾಸ್ ಅವರಿಗೆ ರಾಜ್ಯ ಸರಕಾರ ವಿಕಲಚೇತನರ ಕ್ಷೇತ್ರದಲ್ಲಿನ ಸೇವೆಗಾಗಿ ರಾಜ್ಯ ಮಟ್ಟದ ವೈಯಕ್ತಿಕ ರಾಜ್ಯ ಪ್ರಶಸ್ತಿಗೆ ಆಯ್ಕೆ ಮಾಡಿದೆ. ಡಿಸೆಂಬರ್ 3 ರಂದು ವಿಶ್ವ ವಿಕಲಚೇತನರ ದಿನದಂದು ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ಬೆಳಿಗ್ಗೆ 9 ಗಂಟೆಗೆ ನಡೆಯಲಿರುವ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಎಸ್. ಸಿದ್ಧರಾಮಯ್ಯ ಅವರು ಪ್ರಶಸ್ತಿ ಪ್ರಧಾನ ಮಾಡಲಿದ್ದಾರೆ. […]

ಬಸವ ನಾಡಿನಿಂದ ಬೆಂಗಳೂರಿಗೆ ವಂದೇ ಭಾರತ ರೈಲು ಓಡಿಸಲು ಕ್ರಮ ಕೈಗೊಳ್ಳಿ- ಸಂಸದರಾದ ಜಿಗಜಿಣಗಿ

ವಿಜಯಪುರ: ವಿಜಯಪುರ ಮತ್ತು ಬೆಂಗಳೂರು ಮಧ್ಯೆ ವಂದೆ ಭಾರತ ರೈಲು ಸೇವೆ ಪ್ರಾರಂಭಿಸಬೇಕು ಎಂದು ವಿಧಾನ ಪರಿಷತ್ ಸದಸ್ಯ ಸುನಿಲಗೌಡ ಪಾಟೀಲ ವಿಜಯಪುರ ಸಂಸದ ರಮೇಶ್ ಜಿಗಜಿಣಗಿ ಮತ್ತು ಬಾಗಲಕೋಟೆ ಸಂಸದ ಪಿ. ಸಿ. ಗದ್ದಿಗೌಡರ ಅವರಿಗೆ ಮನವಿ ಮಾಡಿದ್ದಾರೆ. ಈ ಕುರಿತು ಉಭಯ ಸಂಸದರಿಗೆ ಪತ್ರ ಬರೆದಿರುವ ಸುನಿಲಗೌಡ ಪಾಟೀಲ ಅವರು, ವಿಜಯಪುರದಿಂದ ಬೆಂಗಳೂರಿಗೆ ಹೋಗಲು ರೈಲು ಸೇವೆ ಇದ್ದರೂ ಈ ರೈಲುಗಳು ಸಂಚಾರ ಸಮಯ ಅನಕೂಲಕರವಾಗಿಲ್ಲ. ಅಲ್ಲದೇ, ಈ ರೈಲುಗಳು ಸರಿಯಾದ ಸಮಯಕ್ಕೆ ನಿಗದಿತ […]

ದೇಶದ ಸಾಮಾಜಿಕ, ಆರ್ಥಿಕ ಬೆಳವಣಿಗೆಗೆ ಸಹಕಾರಿ ಕ್ಷೇತ್ರದ ಕೊಡುಗೆ ಅಪಾರ- ಮುಖ್ಯಮಂತ್ರಿ ಎಸ್. ಸಿದ್ಧರಾಮಯ್ಯ

ವಿಜಯಪುರ: ದೇಶದ ಸಾಮಾಜಿಕ ಮತ್ತು ಆರ್ಥಿಕತೆ ಬೆಳವಣಿಗೆಗೆ ಸಹಕಾರಿ ಕ್ಷೇತ್ರದ ಕೊಡುಗೆ ಅಪಾರ ಎಂದು ಮುಖ್ಯಮಂತ್ರಿ ಎಸ್. ಸಿದ್ಧರಾಮಯ್ಯ ಹೇಳಿದ್ದಾರೆ. ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ, ವಿಜಯಪುರ ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್, ಬಾಗಲಕೋಟ ಮತ್ತು ಬೆಳಗಾವಿ ಜಿಲ್ಲೆಗಳ ಸ್ಥಳೀಯ ಸಹಕಾರ ಸಂಘಗಳು ಹಾಗೂ ಸಹಕಾರ ಇಲಾಖೆಯ ಸಂಯುಕ್ತಾಶ್ರಯದಲ್ಲಿ ನಗರದ ಸೋಲಾಪುರ ರಸ್ತೆಯ ಕಿತ್ತೂರು ಚನ್ನಮ್ಮ ನಗರದಲ್ಲಿರುವ ವಿಜಯಪುರ ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕಿನ ಆವರಣದಲ್ಲಿ 70ನೇ ಅಖಿಲ ಭಾರತ ಸಹಕಾರ ಸಪ್ತಾಹದ ಸಮಾರೋಪ ಸಮಾರಂಭ ಹಾಗೂ […]

ಆನಲೈನ್ ವಂಚನೆ- ನೈಜಿರಿಯಾ ಮೂಲದ ಪೀಟರ್, ಹ್ಯಾಪಿ, ಸ್ಟ್ಯಾನ್ಲಿ ಬಂಧಿಸಿದ ಬಸವ ನಾಡಿನ ಸಿಇಎನ್ ಪೊಲೀಸರು

ವಿಜಯಪುರ: ನಗರದ ಜವಳಿ ಉದ್ಯಮಿಯೊಬ್ಬರಿಗೆ ಆನಲೈನ್ ಮೂಲಕ ವಂಚಿಸಿದ್ದ ನೈಜಿರಿಯಾ ಮೂಲದ ಮೂರು ಜನರನ್ನು ಬಂಧಿಸುವಲ್ಲಿ ವಿಜಯಪುರ ಸಿಇಎನ್ ಪೊಲೀಸರು ಯಶಸ್ವಿಯಾಗಿದ್ದಾರೆ. ಕ್ರಿಪ್ಟೋ ಮೈನಿಂಗ್ ನಲ್ಲಿ ಹೂಡಿಕೆ ಮಾಡಿದರೆ ಹಾಕಿದ ಬಂಡವಾಳದ ಹಣದ ಜೊತೆಗೆ ಶೇ. 200 ರಷ್ಟು ಲಾಭಾಂಶ ಕೊಡುವದಾಗಿ ಹೇಳಿ ಈ ಆರೋಪಿಗಳು ನಾನಾ ಸುಳ್ಳು ಸಬೂಬೂಗಳನ್ನು ಉದ್ಯಮಿಯಿಂದ ನಾನಾ ಹಂತಗಳಲ್ಲಿ ತಮ್ಮ ಬ್ಯಾಂಕ್ ಖಾತೆಗಳಿಗೆ ರೂ. 59 ಲಕ್ಷ 12 ಸಾವಿರದ 765  ಹಣವನ್ನು ಹಾಕಿಸಿಕೊಂಡಿದ್ದರು.  ಅಲ್ಲದೇ, ಉದ್ಯಮಿಗೆ ಯಾವುದೇ ಲಾಭಾಂಶ ಕೊಡದೇ […]