ಉಡುಪಿಯಲ್ಲಿ ನಾನಾ ಮಠಗಳಿಗೆ ಭೇಟಿ ನೀಡಿ ಶ್ರೀಗಳ ಆಶೀರ್ವಾದ ಪಡೆದ ಸಿಎಂ ಬಸವರಾಜ ಬೊಮ್ಮಾಯಿ
ಉಡುಪಿ: ಕೊರೊನಾ ನಿಯಂತ್ರಣ ಕುರಿತು ಪ್ರಗತಿ ಪರಿಶೀಲನೆಗಾಗಿ ಕರಾವಳಿ ಜಿಲ್ಲೆಗಳ ಪ್ರವಾಸದಲ್ಲಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನಾನಾ ಮಠಗಳಿಗೆ ಭೇಟಿ ನೀಡಿದರು. ಈ ಸಂದರ್ಭದಲ್ಲಿ ನಾನಾ ಮಠಾಧೀಶರಿಂದ ಸಿಎಂ ಆಶೀರ್ವಾದ ಪಡೆದರು. ಆದಮಾರು ಮಠಕ್ಕೆ ಭೇಟಿ ಉಡುಪಿ ಅದಮಾರು ಮಠದ ಈಶಪ್ರಿಯ ಶ್ರೀಗಳ ಆಶೀರ್ವಾದ ಪಡೆದು ಸಭೆಯನ್ನು ಉದ್ದೇಶಿಸಿ ಮಾತನಾಡಿದರು. ಪಲಿಮಾರು ಮಠಕ್ಕೆ ಭೇಟಿ ಉಡುಪಿ ಫಲಿಮಾರು ಮಠಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಶ್ರೀಗಳಿಂದ ಆಶೀರ್ವಾದ ಪಡೆದರು. ಶ್ರೀಕೃಷ್ಣ ಮಠಕ್ಕೆ ಭೇಟಿ ಉಡುಪಿ ಶ್ರೀ ಕೃಷ್ಣ […]
ಪಂಚಮಸಾಲಿ ಸಮಾಜಕ್ಕೆ ಸೆ. 15ರೊಳಗೆ 2ಎ ಮೀಸಲಾತಿ ನೀಡದಿದ್ದರೆ ಅ. 1 ರಿಂದ ಬೆಂಗಳೂರಿನಲ್ಲಿ ಮಾಡು ಇಲ್ಲವೆ ಮಡಿ ಹೋರಾಟ- ಹುಬ್ಬಳ್ಳಿ ದುಂಡು ಮೇಜಿನ ಸಭೆಯಲ್ಲಿ ನಿರ್ಧಾರ
ಹುಬ್ಬಳ್ಳಿ: ರಾಜ್ಯ ಸರಕಾರ ಈ ಹಿಂದೆ ನೀಡಿದ ಭರವಸೆಯಂತೆ ಸೆ. 15 ರೊಳಗೆ ಪಂಚಮಸಾಲಿ ಸಮಾಜಕ್ಕೆ 2ಎ ಮೀಸಲಾತಿ ನೀಡಬೇಕು. ಇಲ್ಲದಿದ್ದರೆ ಅ. 1 ರಿಂದ ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಮಾಡು ಇಲ್ಲವೇ ಮಡಿ ಹೋರಾಟ ನಡೆಸಲು ಹುಬ್ಬಳ್ಳಿಯ ಖಾಸಗಿ ಹೋಟೆಲಿನಲ್ಲಿ ನಡೆದ ಪಂಚಮಸಾಲಿ 2ಎ ಹೋರಾಟಕ್ಕೆ ಸಂಬಂಧಿಸಿ ದುಂಡು ಮೇಜಿನ ಸಭೆಯಲ್ಲಿ ನಿರ್ಧಾರ ಕೈಗೊಳ್ಳಲಾಗಿದೆ. ಸಭೆಯ ಬಳಿಕ ಸುದ್ದಿಗೋಷ್ಛಿಯಲ್ಲಿ ಮಾತನಾಡಿದ ಕೂಡಲ ಸಂಗಮ ಲಿಂಗಾಯಿತ ಪಂಚಮಸಾಲಿ ಪೀಠದ ಜಗದ್ಗುರು ಬಸವಜಯ ಮೃತ್ಯುಂಜಯ ಸ್ವಾಮೀಜಿ, ಈ […]
ಗಡಿ ಜಿಲ್ಲೆಗಳಲ್ಲಿ ಕೋವಿಡ್ ನಿಯಂತ್ರಣಕ್ಕೆ ಸರ್ಕಾರದಿಂದ ಅಗತ್ಯ ಕ್ರಮ- ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ
ಮಂಗಳೂರು: ಕೊರೊನಾ ಪಾಸಿಟಿವಿಟಿಯಲ್ಲಿ ಕಳೆದ ಕೆಲವು ದಿನಗಳಿಂದ ಏರಿಕೆ ಕಂಡುಬರುತ್ತಿರುವ ಗಡಿ ಜಿಲ್ಲೆ ದಕ್ಷಿಣ ಕನ್ನಡದಲ್ಲಿ ಸೋಂಕು ನಿಯಂತ್ರಿಸಲು ಅಗತ್ಯವಿರುವ ಎಲ್ಲಾ ಕ್ರಮಗಳನ್ನು ರಾಜ್ಯ ಸರಕಾರ ಕೈಗೊಳ್ಳುತ್ತಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಯಿ ತಿಳಿಸಿದ್ದಾರೆ. ಮಂಗಳೂರಿನಲ್ಲಿ ಜಿಲ್ಲಾ ಪಂಚಾಯಿತಿ ನೇತ್ರಾವತಿ ಸಬಾಂಗಣದಲ್ಲಿ ಕೋವಿಡ್ ನಿಯಂತ್ರಣ ಹಾಗೂ ನಿರ್ವಹಣೆ ಕುರಿತಂತೆ ನಡೆದ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಹೋಂ ಐಸೋಲೇಷನ್ನಲ್ಲಿರುವ ಸೋಂಕಿತರ ನಿರ್ವಹಣೆ, ಕೋವಿಡ್ ಕೇರ್ ಸೆಂಟರ್ಗೆ ದಾಖಲಾಗುವ, ಆಸ್ಪತ್ರೆಗಳಲ್ಲಿ ಕೋವಿಡ್ ನಿರ್ವಹಣೆಗಾಗಿ ಇರುವ ಸೌಲಭ್ಯಗಳು, ಆಂಪೋಟೇರಸಿನ್, ಮುಖ್ಯವಾಗಿ […]
ಕೃಷ್ಣಾನಗರದಲ್ಲಿ ಕೃಷ್ಣಾ ಮೇಲ್ದಂಡೆ ಯೋಜನೆಯ ಸಂತ್ರಸ್ತರ ಹಿತರಕ್ಷಣಾ ಸಮಿತಿ ಸಭೆ
ವಿಜಯಪುರ: ಕೃಷ್ಣಾ ಮೇಲ್ದಂಡೆ ಯೋಜನೆಯ ಸಂತ್ರಸ್ತರ ಹಿತರಕ್ಷಣಾ ಸಮಿತಿ ಸಭೆ ವಿಜಯಪುರ ಜಿಲ್ಲೆಯ ಬಬಲೇಶ್ವರ ತಾಲೂಕಿನ ಕೃಷ್ಣಾನಗರದ ನಂದಿ ಸಹಕಾರಿ ಸಕ್ಕರೆ ಕಾರಖಾನೆಯ ಆವರಣದಲ್ಲಿ ನಡೆಯಿತು. ಆಲಮಟ್ಟಿ ಜಲಾಷಯದ ಎತ್ತರವನ್ನು 524.256 ಮೀ. ಗೆ ಹೆಚ್ಚಿಸುವುದರಿಂದ ಮಳುಗಡೆಯಾಗುವ ಜಮೀನಿಗೆ ಯೋಗ್ಯ ದರ ನಿಗದಿ ಪಡಿಸುವ ಕುರಿತು ಮತ್ತು ಈ ಹಿಂದೆ ಸಲ್ಲಿಸಿರುವ ಹಲವಾರು ಬೇಡಿಕೆಗಳ ಕುರಿತು ನೀಕಾವಕಿ ಸಚಿವ ಗೋವಿಂದ ಕಾರಜೋಳ ಅವರನ್ನು ಭೇಟಿಯಾಗಿ ಸಂತ್ರಸ್ಥರ ಬೇಡಿಕೆಗಳ ಕುರಿತು ಗಮನ ಸೆಳೆಯಲು ನಿರ್ಧರಿಸಲಾಯಿತು. ಈ ಸಭೆಯಲ್ಲಿ ಎಚ್. […]
ನನಗೆ ಚೂಟಿದರೆ ಕಪಾಳಕ್ಕೆ ಹೊಡೆಯುತ್ತೇನೆ- ನನ್ನ ವಿರೋಧ ಕಟ್ಟಿಕೊಂಡು ಬಿ ಎಸ್ ವೈ ಸ್ಥಾನ ಕಳೆದುಕೊಂಡರು- ಯತ್ನಾಳ
ಹುಬ್ಬಳ್ಳಿ: ನನಗೆ ಯಾರದರೂ ಚೂಟಿದರೆ ಕಪಾಳಕ್ಕೆ ಹೊಡೆಯುತ್ತೇನೆ. ನನ್ನ ವಿರೋಧ ಕಟ್ಟಿಕೊಂಡು ಬಿ ಎಸ್ ವೈ ಸ್ಥಾನ ಕಳೆದುಕೊಂಡಿದ್ದಾರೆ ಎಂದು ವಿಜಯಪುರ ನಗರ ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳ ಹೇಳಿದ್ದಾರೆ. ಧಾರವಾಡ ಜಿಲ್ಲೆಯ ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು, ನನಗೆ ಸಮಯ ಬಂದಾಗ ಏನೇನು ಆಗಬೇಕೋ ಅದು ಆಗುತ್ತೇನೆ ಎಂದು ತಿಳಿಸಿದ ಅವರು, ರಾಜ್ಯದಲ್ಲಿ ಸಾಕಷ್ಟು ಸಮಸ್ಯೆಗಳಿವೆ. ಮಂತ್ರಿ ಸ್ಥಾನಕ್ಕಾಗಿ ದೆಹಲಿಯಲ್ಲಿ ಲಾಬಿ ನಡೆಸುವುದು ಸರಿಯಲ್ಲ. ಇದೇ ವೇಳೆ, ನಾನು ಜೀರೋ ಇಂದ ಹೀರೋ ಆದವನು. ಹಿಂದೆ […]
ಕರಾವಳಿ ಜಿಲ್ಲೆಗಳ ಪ್ರವಾಸಕ್ಕೆ ಆಗಮಿಸಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ
ಮಂಗಳೂರು: ಕೊರೊನಾ ಸೋಂಕು ಹೆಚ್ಚಾಗಿರುವ ಜಿಲ್ಲೆಯಲ್ಲಿನ ಪ್ರವಾಸ ಕೈಗೊಂಡಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಕರಾವಳಿ ಜಿಲ್ಲೆಗಳ ಪ್ರವಾಸಕ್ಕಾಗಿ ಮಂಗಳೂರಿಗೆ ಆಗಮಿಸಿದ್ದಾರೆ. ಕೊರೊನಾ ಸೋಂಕು ನಿರ್ವಹಣೆ ಕುರಿತ ಪ್ರಗತಿ ಪರಿಶೀಲನೆ ಮತ್ರು ಗಡಿ ಭಾಗಗಳಲ್ಲಿ ತಪಾಸಣೆ ಮಾಡಲು ಸಿಎಂ ಎರಡು ದಿನಗಳ ಕಾಲ ಕರಾವಳಿ ಜಿಲ್ಲೆಗಳ ಪ್ರವಾಸ ಕೈಗೊಂಡಿದ್ದಾರೆ. ಈ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಬಜಪೆ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಸಿಎಂ ಆಗಮಿಸಿದರು. ಜಿಲ್ಲಾಡಳಿತದ ವತಿಯಿಂದ ಮುಖ್ಯಮಂತ್ರಿಗಳನ್ನು ಆತ್ಮೀಯವಾಗಿ ಸ್ವಾಗತಿಸಲಾಯಿತು. ಈ ಸಂದರ್ಭದಲ್ಲಿ ಮಹಿಳೆಯರು ಸಿಎಂ ಹಣೆಗೆ […]
ಸಿಎಂ ನೇತೃತ್ವದಲ್ಲಿ ನೀರಾವರಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆ- ಕೃಷ್ಣ ಮೇಲ್ದಂಡೆ ಯೋಜನೆ ಅನುಷ್ಠಾನಕ್ಕೆ ಪೂರ್ಣ ಪ್ರಮಾಣದಲ್ಲಿ ಆಯುಕ್ತರ ನೇಮಕಕ್ಕೆ ಸಚಿವ ಗೋವಿಂದ ಕಾರಜೋಳ ಆಗ್ರಹ
ಬೆಂಗಳೂರು: ಜಲಸಂಪನ್ಮೂಲ ಇಲಾಖೆಯು ಅನುಷ್ಠಾನಗೊಳಿಸುತ್ತಿರುವ ನೀರಾವರಿ ಯೋಜನೆಗಳು, ಕೆರೆಗೆಳಿಗೆ ನೀರು ತುಂಬಿಸುವ ಯೋಜನೆಗಳು, ಆಧುನೀಕರಣ ಯೋಜನೆಗಳು, ಕೇಂದ್ರ ಧನ ಸಹಾಯ ಪಡೆಯುತ್ತಿರುವ ಯೋಜನೆಗಳ ವಸ್ತುಸ್ಥಿತಿ ಮತ್ತು ಪ್ರಗತಿ ಕುರಿತು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಬೆಂಗಳೂರಿನಲ್ಲಿ ನೀರಾವರಿ ಸಚಿವ ಗೋವಿಂದ ಕಾರಜೋಳ ಮತ್ತು ನೀರಾವರಿ ಇಲಾಖೆಯ ಹಿರಿಯ ಅಧಿಕಾರಿಗಳೊಂದಿಗೆ ಪ್ರಗತಿ ಪರಿಶೀಲನಾ ಸಭೆ ನಡೆಸಿದರು. ನಾನಾ ನೀರಾವರಿ ಯೋಜನೆಗಳ ಕುರಿತು ವಿಸ್ತೃತವಾಗಿ ಚರ್ಚಿಸಿದ ಅವರು, ಯೋಜನೆಗಳನ್ನು ತ್ವರಿತ ಹಾಗೂ ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸುವಂತೆ ಜಲಸಂಪನ್ಮೂಲ ಹಿರಿಯ ಅಧಿಕಾರಿಗಳಿಗೆ ಸೂಚನೆ ನೀಡಿದರು. […]
ರಾಜ್ಯದಲ್ಲಿ ಉದ್ಯಮಶೀಲತೆ ವಿಸ್ತರಣೆ ಸರಕಾರದ ಗುರಿಯಾಗಿದೆ- ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ
ಬೆಂಗಳೂರು: ರಾಜ್ಯದಲ್ಲಿ ಉದ್ಯಮ ಸ್ಥಾಪನೆ ಸೇರಿದಂತೆ ರಾಜ್ಯಾದ್ಯಂತ ಉದ್ಯಮ ವಿಸ್ತರಣೆ ಸರಕಾರದ ಗುರಿಯಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ಬೆಂಗಳೂರಿನಲ್ಲಿರುವ ಮುಖ್ಯಮಂತ್ರಿ ಗೃಹ ಕಚೇರಿ ಕೃಷ್ಣಾದಲ್ಲಿ ಆಯೋಜಿಸಲಾಗಿದ್ದ ಸಿಐಐ ವಾರ್ಷಿಕ ಸಭೆ- ಇಂಡಿಯಾ @75 ನಲ್ಲಿ ವರ್ಚುವಲ್ ಆಗಿ ಪಾಲ್ಗೊಂಡು ಅವರು ಮಾತನಾಡಿದರು. ಕರ್ನಾಟಕ ಕೈಗಾರಿಕೆ ಕ್ಷೇತ್ರದಲ್ಲಿ ಮುಂಚೂಣಿಯಲ್ಲಿರುವ ರಾಜ್ಯ ಎನಿಸಿದೆ. ಸ್ವಾತಂತ್ರ್ಯ ನಂತರದಲ್ಲಿ ಕೌಶಲ್ಯ, ಸಂಶೋಧನೆ ಮತ್ತು ಅಭಿವೃದ್ಧಿ ಕ್ಷೇತ್ರದಲ್ಲಿ ವಿದೇಶಿ ಸಹಯೋಗಕ್ಕೆ ಅತ್ಯಂತ ಭದ್ರವಾದ ಬುನಾದಿಯನ್ನು ಹಾಕಲಾಗಿದೆ. ಇಡೀ ರಾಜ್ಯದಲ್ಲಿ ಉದ್ಯಮಶೀಲತೆಯನ್ನು ವಿಸ್ತರಿಸುವುದು […]
ದೂರದೃಷ್ಟಿ ಇಟ್ಟುಕೊಂಡು ವಿದ್ಯುತ್ ನಿರ್ವಹಣೆ ಮಾಡಿ: ಗಂಗಾ ಕಲ್ಯಾಣ ಯೋಜನೆಯಡಿ ಕೂಡಲೇ ವಿದ್ಯುತ್ ಸಂಪರ್ಕ ಒದಗಿಸಿ- ಸಿಎಂ ಬಸವರಾಜ ಬೊಮ್ಮಾಯಿ
ಬೆಂಗಳೂರು: ವಿದ್ಯುತ್ ಕ್ಷೇತ್ರದಲ್ಲಿ ಸಾವಲಂಬಿಯಾಗುವುದರ ಜೊತೆಗೆ ದೂರದೃಷ್ಟಿ ಇಟ್ಟುಕೊಂಡು ಸಮರ್ಥವಾಗಿ ವಿದ್ಯುತ್ ನಿರ್ವಹಣೆ ಮಾಡುವಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಮುಖ್ಯಮಂತ್ರಿಯಾದ ನಂತರ ಇದೇ ಮೊದಲ ಬಾರಿಗೆ ಬೆಂಗಳೂರಿನಲ್ಲಿ ಇಂಧನ ಇಲಾಖೆ ಪ್ರಗತಿ ಪರಿಶೀಲನೆ ಸಭೆಯಲ್ಲಿ ಮಾತಬಾಡಿದ ಅವರು, ಅಧಿಕಾರಿಗಳಿಗೆ ಈ ಸೂಚನೆ ನೀಡಿದರು. ವಿದ್ಯುತ್ ಉತ್ಪಾದನೆ ಮತ್ತು ನಿರ್ವಹಣೆಯನ್ನು ಇನ್ನೂ ಬಹಳ ವ್ಯವಸ್ಥಿತವಾಗಿ ಮಾಡಬೇಕು. ಮಾರುಕಟ್ಟೆ ಸ್ಥಿತಿಗತಿಯನ್ನು ಆಧರಿಸಿ ಹೆಚ್ಚಿನ ದರಕ್ಕೆ ವಿದ್ಯುತ್ತನ್ನು ಮಾರಾಟ ಮಾಡುವಂತಾಗಬೇಕು. ಕರ್ನಾಟಕ ವಿದ್ಯುತ್ ನಿಗಮದಿಂದ ಅತ್ಯಂತ ದಕ್ಷತೆಯಿಂದ […]
ಸಿಎಂ ಪರಿಹಾರ ನಿಧಿಗೆ ಖನೀಜ ನಿಗಮದಿಂದ ರೂ. 5 ಕೋ. ಚೆಕ್ ಸಲ್ಲಿಕೆ
ಬೆಂಗಳೂರು: ಕರ್ನಾಟಕ ರಾಜ್ಯ ಖನಿಜ ನಿಗಮದ ವತಿಯಿಂದ ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ ರೂ. 5 ಕೋ. ಚೆಕ್ ಸಲ್ಲಿಸಲಾಯಿತು. ಬೆಂಗಳೂರಿನಲ್ಲಿ ಮುಖ್ಯಮಂತ್ರಿಗಳ ಗೃಹ ಕಚೇರಿ ಕೃಷ್ಣಾದಲ್ಲಿ ಸಿ ಬಸವರಾಜ ಬೊಮ್ಮಾಯಿ ಅವರನ್ನು ಗಣಿ ಮತ್ತು ಭೂವಿಜ್ಞಾನ ಖಾತೆ ಸಚಿವ ಹಾಲಪ್ಪ ಆಚಾರ ಮತ್ತು ನಿಗಮದ ಅಧ್ಯಕ್ಷರಾದ ಲಿಂಗಮೂರ್ತಿ ಭೇಟಿ ಮಾಡಿ ಸಿಎಂಗೆ ಚೆಕ್ ನೀಡಿದರು. ಈ ಸಂದರ್ಭದಲ್ಲಿ ಮಾತನಾಡಿದ ಬಸವರಾಜ ಬೊಮ್ಮಾಯಿ, ತಾವು ಸಿಎಂ ಆಗಿ ಅಧಿಕಾರ ಸ್ವೀಕರಿಸಿದ ನಂತರ ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ ಪಡೆದ ಮೊದಲ […]