ಕೇಂದ್ರ ಸರಕಾರದ ಯೋಜನೆಗಳ ಸದುಪಯೋಗ ಪಡಿಸಿಕೊಳ್ಳಿ- ಸಂಸದ ಜಿಗಜಿಣಗಿ ಕರೆ

ವಿಜಯಪುರ: ಕೇಂದ್ರ ಸರಕಾರ ಹಲವು ಯೋಜನೆಗಳನ್ನು ಜಾರಿಗೊಳಿಸಿದ್ದು, ಯೋಜನೆಗಳ ಬಗ್ಗೆ ಸಾರ್ವಜನಿಕರು ಅರಿತುಕೊಂಡು ಅದರ ಸದುಪಯೋಗ ಪಡಿಸಿಕೊಳ್ಳಬೇಕು ಎಂದು ವಿಜಯಪುರ ಸಂಸದ ರಮೇಶ ಜಿಗಜಿಣಗಿ ಹೇಳಿದ್ದಾರೆ. ಕೇಂದ್ರ ವಾರ್ತಾ ಮತ್ತು ಪ್ರಸಾರ ಸಚಿವಾಲಯದ ಕೇಂದ್ರ ಸಂವಹನ ಇಲಾಖೆ, ವಿಜಯಪುರ, ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ನೆಹರು ಯುವ ಕೇಂದ್ರ, ವಿಜಯಪುರ ಇವರುಗಳ  ಸಹಯೋಗದಲ್ಲಿ ನಗರದ ಪಿ ಡಿ ಜೆ ಪದವಿ ವೂರ್ವ ಮಹಾವಿದ್ಯಾಲಯದಲ್ಲಿ ಆಯೋಜಿಸಲಾಗಿದ್ದ […]

ಚಡಚಣ ಪಿಎಸ್ಐ ಮಹಾದೇವ ಯಲಿಗಾರ ಅಮಾನತು- ಸಂಜಯ ಕಲ್ಲೂರ ನೂತನ‌‌ ಪಿಎಸ್ಐ ಆಗಿ ವರ್ಗಾವಣೆ

ವಿಜಯಪುರ: ಚಡಚಣ  ಪಿಎಸ್ಐ ಮಹಾದೇವ ಯಲಿಗಾರ ಅವರನ್ನು ಕರ್ತವ್ಯಲೋಪ ಆರೋಪದಡಿ ಅಮಾನತು ಮಾಡಿ ಬೆಳಗಾವಿ ಉತ್ತರ ವಲಯ ಆರಕ್ಷಕ ಮಹಾನಿರೀಕ್ಷಕ ವಿಕಾಶ್ ಕುಮಾರ್ ವಿಕಾಶ್ ಆದೇಶ ಹೊರಡಿಸಿದ್ದಾರೆ. ಈ ಹಿಂದೆ ಬಿಜೆಪಿ ಸರಕಾರದ ಅವಧಿಯಲ್ಲಿ ಅನುಪಮ ಅಗರವಾಲ ಎಸ್ಪಿಯಾಗಿದ್ದ ಸಂದರ್ಭದಲ್ಲಿ ಇದೇ ಚಡಚಣದಲ್ಲಿ ಪಿಎಸ್‌ಐ ಆಗಿದ್ದ ಮಹಾದೇವ ಯಲಿಗಾರ ಕೊರೊನಾ ಮಾರ್ಗಸೂಚಿ ಉಲ್ಲಂಘನೆ ಸೇರಿದಂತೆ ನಾನಾ ಕರ್ತವ್ಯಲೋಪ ಆರೋಪದಡಿ ಅಮಾನತು ಆಗಿದ್ದರು.  ಆದರೆ, ರಾಜ್ಯದಲ್ಲಿ ಮತ್ತೆ ಕಾಂಗ್ರೆಸ್ ಅಧಿಕಾರಕ್ಕೆ ಬರುತ್ತಿದ್ದಂತೆ ಇದೇ ಚಡಚಣ ಪೊಲೀಸ್ ಠಾಣೆಗೆ ಮತ್ತೆ […]

ಫ. ಗು. ಸಿದ್ದಾಪುರ, ಎ. ಎಂ. ಮದರಿ, ರಫೀ ಭಂಡಾರಿ ಸೇರಿ 68 ಜನರಿಗೆ ರಾಜ್ಯೋತ್ಸವ ಪ್ರಶಸ್ತಿ

ವಿಜಯಪುರ: ಮಕ್ಕಳ ಖ್ಯಾತ ಸಾಹಿತಿ ಪರಪ್ಪ ಗುರುಪಾದಪ್ಪ ಸಿದ್ದಾಪುರ, ನಾನಾ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡಿರುವ ಅಪ್ಪಣ್ಣ ಮಾರುತಿ ಮದರಿ, ಹಾಗೂ ಉರ್ದು ಪತ್ರಕರ್ತ ರಫೀ ಭಂಡಾರಿ ಸೇರಿದಂತೆ ಒಟ್ಟು 68 ಜನರಿಗೆ ಈ ಬಾರಿಯ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿಯನ್ನು ನೀಡಲಾಗಿದೆ. ಈ ಕುರಿತು ರಾಜ್ಯ ಸರಕಾರ ಆದೇಶ ಹೊರಡಿಸಿದ್ದು, ನಾನಾ ಕ್ಷೇತ್ರಗಳ ಸಾಧಕರಿಗೆ 2023ರ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಘೋಷಣೆ ಮಾಡಿದೆ. ಡಾ. ಫ. ಗು. ಸಿದ್ದಾಪುರ(ಸಾಹಿತ್ಯ ಕ್ಷೇತ್ರ) ಡಾ. ಫ. ಗು. ಸಿದ್ದಾಪುರ ಅವರು ವಿಜಯಪುರ ಜಿಲ್ಲೆಯ […]

ಡಾ. ಬಿ. ಆರ್. ಅಂಬೇಡ್ಕರ್ ಇಡೀ ಮಾನವ ಕುಲಕ್ಕೆ ಆದರ್ಶ- ಸಚಿವ ಸತೀಶ ಜಾರಕಿಹೊಳಿ

ವಿಜಯಪುರ: ಡಾ.ಬಿ.ಆರ್.ಅಂಬೇಡ್ಕರ್ ಅವರು ರಚಿಸಿದ ಸಂವಿಧಾನ ಕೇವಲ ಒಂದು ಜಾತಿ, ಸಮುದಾಯಕ್ಕೆ ಸೀಮಿತವಾಗಿಲ್ಲ ಇಡೀ ಮಾನವ ಕುಲಕ್ಕೆ ಸೀಮಿತವಾದ ಸಂವಿಧಾನ ಸಾಮಾಜಿಕ, ರಾಜಕೀಯ ಆರ್ಥಿಕ, ಶೈಕ್ಷಣಿಕವಾಗಿ ಬೆಳೆಯಲು ಸಾಧ್ಯವಾಗಿದೆ ಎಂದು ಲೋಕೋಪಯೋಗಿ ಇಲಾಖೆ ಸಚಿವ ಸತೀಶ ಜಾರಕಿಹೊಳಿ ಹೇಳಿದರು. ಇಂಡಿ ತಾಲೂಕಿನ ಹಳಗುಣಕಿ ಗ್ರಾಮದಲ್ಲಿ ಸಮಾಜ ಕಲ್ಯಾಣ ಇಲಾಖೆ ಸಚಿವರಾದ ಡಾ. ಎಚ್. ಸಿ. ಮಹದೇವಪ್ಪ ಅವರೊಂದಿಗೆ ನಾನಾ ಅಭಿವೃದ್ಧಿ ಕಾಮಗಾರಿಗಳಿಗೆ ಅಡಿಗಲ್ಲು ಮತ್ತು ಉದ್ಘಾಟನೆ ಹಾಗೂ ಡಾ. ಬಿ. ಆರ್. ಅಂಬೇಡ್ಕರ್ ಪುತ್ಥಳಿ ಅನಾವರಣ ಮಾಡಿ […]

ನೇಕಾರರಿಗೆ 250 ಯುನಿಟ್ ಉಚಿತ ವಿದ್ಯುತ್- ನ. 20 ರಂದು ವಿಜಯಪುರದಲ್ಲಿ ಸಹಕಾರಿ ಸಪ್ತಾರ ಕಾರ್ಯಕ್ರಮ- ಶಿವಾನಂದ ಎಸ್. ಪಾಟೀಲ

ವಿಜಯಪುರ: ನೇಕಾರರಿಗೆ 250 ಯುನಿಟ್ ಉಚಿತ ವಿದ್ಯುತ್ ಘೋಷಣೆ ಜಾರಿ ಮಾಡುವ ಮೂಲಕ ಸರಕಾರ ದೀಪಾವಳಿ ಗಿಫ್ಟ್ ನೀಡಿದೆ ಎಂದು ಜವಳಿ, ಸಕ್ಕರೆ, ಕಬ್ಬು ಅಭಿವೃದ್ಧಿ ಮತ್ತು ಎ. ಪಿ. ಎಂ. ಸಿ ಸಚಿವ ಶಿವಾನಂದ ಎಸ್. ಪಾಟೀಲ ತಿಳಿಸಿದ್ದಾರೆ. ವಿಜಯಪುರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬಜೆಟ್ ನಲ್ಲಿ ಘೋಷಿಸಿದಂತೆ ನೇಕಾರಿ 10 ಎಚ್ ಪಿ ವರೆಗೆ ವಿದ್ಯುತ್ ಉಚಿತವಾಗಿ ನೀಡಲಾಗುತ್ತಿದೆ.  ಈಗ ಈ ಕುರಿತು ಆದೇಶ ಹೊರಡಿಸಲಾಗಿದೆ.  10 ಎಚ್. ಪಿ. ವರೆಗೆ ನೇಕಾರರು ಪುಕ್ಕಟ್ಟೆಯಾಗಿ […]

ವಂದೇ ಭಾರತ ರೈಲು ಸೇವೆ ಸೋಲಾಪುರದಿಂದ ವಿಜಯಪುರದವರೆಗೆ ವಿಸ್ತರಿಸಲು ಪ್ರಯತ್ನ- ಸಂಸದ ರಮೇಶ ಜಿಗಜಿಣಗಿ

ವಿಜಯಪುರ: ಮಹಾರಾಷ್ಟ್ರದ ಸೋಲಾಪುರವರೆಗೆ ಸಂಚರಿಸುವ ವಂದೆ ಭಾರತ ರೈಲು ಸೇವೆಯನ್ನು ಬಸವನಾಡು ವಿಜಯಪುರದವರೆಗೆ ವಿಸ್ತರಿಸಲು ಪ್ರಯತ್ನಿಸುವುದಾಗಿ ಸಂಸದ ರಮೇಶ ಜಿಗಜಿಣಗಿ ತಿಳಿಸಿದ್ದಾರೆ. ವಿಜಯಪುರ ತಾಲೂಕಿನ ಅಲಿಯಾಬಾದ ಬಳಿ ನೂತನವಾಗಿ ನಿರ್ಮಿಸಲಾಗಿರುವ ರೇಲ್ವೆ ಗೂಡ್ಸಶೆಡ್ ಉದ್ಘಾಟಿಸಿ ಅವರು ಮಾತನಾಡಿದರು. ವಿಜಯಪುರ ರೈಲ್ವೆ ನಿಲ್ದಾಣದ  ಜನದಟ್ಟಣೆಯನ್ನು ಕಡಿಮೆ ಮಾಡಲು ಮತ್ತು ನಿಲ್ದಾಣದಲ್ಲಿ ಪ್ಯಾಸೆಂಜರ್ ಹಾಗೂ ಎಕ್ಸಪ್ರೆಸ್ ರೈಲುಗಳ ಸುಗಮ ಸಂಚಾರಕ್ಕೆ ಅಡಚಣೆ ಉಂಟಾಗದಂತೆ ತಡೆಯಲು ಪ್ರತ್ಯೇಕವಾದ ಗೂಡ್ಸಶೆಡ್ ಸೌಲಭ್ಯವನ್ನು ಕಲ್ಪಿಸಲು ಅಲಿಯಾಬಾದ್‌ನಲ್ಲಿ ಗೂಡ್ಸ್ ಟರ್ಮಿನಲ್‌ ಅಭಿವೃದ್ದಿ ಪಡಿಸಲಾಗಿದೆ.  ವಿಜಯಪುರ ನಗರದ […]

ಬಾಗಲಕೋಟೆ ಬಿವಿವಿಎಸ್ ಹೋಮಿಯೋಪಥಿಕ ವೈದ್ಯಕೀಯ ಕಾಲೇಜು ವತಿಯಿಂದ ಸ್ವಚ್ಛತಾ ಅಭಿಯಾನ

ಬಾಗಲಕೋಟೆ: ನಗರದ ಬಸವೇಶ್ವರ ವೀರಶೈವ ವಿದ್ಯಾವಧ೯ಕ ಸಂಘದ ಬಿ.ವಿ.ವಿ.ಎಸ್ ಹೋಮಿಯೋಪಥಿಕ ವೈದ್ಯಕೀಯ ಮಹಾವಿದ್ಯಾಲಯ ಮತ್ತು ಆಸ್ಪತ್ರೆಯಲ್ಲಿ ರಾಷ್ಟ್ರ ಪಿತ ಮಹಾತ್ಮಾ ಗಾಂಧಿಜೀಯವರ ಜಯಂತಿ ಅಂಗವಾಗಿ ಸ್ವಚ್ಛತಾ ಅಭಿಯಾನ ನಡೆಯಿತು. ಈ ಕಾರ್ಯಕ್ರಮಕ್ಕೆ ಎನ್.ಎಸ್.ಎಸ್ ಅಧಿಕಾರಿ ಡಾ. ಸುನೀಲ ಭೋಸಲೆ ಚಾಲನೆ ನೀಡಿದರು. ಬಳಿಕ ಮಾತನಾಡಿದ ಅವರು, ಸ್ವಚ್ಛತೆಗೊಳಿಸುವುದು ಕೇವಲ ಪೌರ ಕಾರ್ಮಿಕರ ಜವಾಬ್ದಾರಿಯಲ್ಲ.  ಎಲ್ಲ ನಾಗರಿಕರ ಮತ್ತು ನಮ್ಮೆಲ್ಲರ ಜವಾಬ್ದಾರಿಯೂ ಆಗಿದೆ.  ಅಷ್ಟೇ ಅಲ್ಲ, ಸ್ವಚ್ಛತೆ ಮಾನಸಿಕ ಆರೋಗ್ಯಕ್ಕೆ ಒಳ್ಳೆಯದು.  ಇದು ವ್ಯಕ್ತಿಯಲ್ಲಿ ಸಕಾರಾತ್ಮಕ ಮಾನಸಿಕ ಮನೋಭಾವವನ್ನು […]

ರನ್ನ ಸಕ್ಕರೆ ಕಾರ್ಖಾನೆ ಪುನಶ್ಚೇತನಕ್ಕೆ ಟೆಂಡರ್ ಕರೆಯಲು ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆ

ಬೆಂಗಳೂರು: ಬಾಗಲಕೋಟೆ ಜಿಲ್ಲೆಯ ಮುಧೋಳದ ರನ್ನ ಸಹಕಾರಿ ಸಕ್ಕರೆ ಕಾರ್ಖಾನೆ ಪುನಶ್ಚೇತನಗೊಳಿಸಲು ಅಲ್ಪಾವಧಿ ಟೆಂಡರ್ ಕರೆಯಲು ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ. ಮುಧೋಳ ತಾಲೂಕಿನ ರನ್ನ ಸಹಕಾರಿ ಸಕ್ಕರೆ ಕಾರ್ಖಾನೆಯಲ್ಲಿ 2023-24 ನೇ ವರ್ಷದ ಕಬ್ಬು ಅರೆಯುವ ಕಾರ್ಯವನ್ನು ಲೀಸ್ ಮೂಲಕ ಪುನರಾರಂಭಿಸುವ ಕುರಿತು ನಡೆದ ಸಭೆಯಲ್ಲಿ ಅವರು ಮಾತನಾಡಿದರು. ಕಬ್ಬು ಅರೆಯುವ ಕಾರ್ಯ ಪ್ರಾರಂಭವಾಗಬೇಕು. ಪುನಶ್ಚೇತನದಿಂದ ರೈತರಿಗೂ ಅನುಕೂಲ ವಾಗಬೇಕು. ಅಲ್ಪಮಟ್ಟದ ಹೂಡಿಕೆಗೆ ಸಿದ್ದವಿರುವ ಸಂಸ್ಥೆಗಳು ಟೆಂಡರ್ ನಲ್ಲಿ ಪಾಲ್ಗೊಳ್ಳುವಂತಾಗಬೇಕು ಎಂದು ಅವರು ಹೇಳಿದರು. ಈ […]

ಶಾಸಕ ಯತ್ನಾಳ ಭಾವಚಿತ್ರವಿದ್ದ ಫ್ಲೆಕ್ಸ್ ಹರಿದು ಹಾಕಿದ ಕಿಡಿಗೇಡಿಗಳು- ಆರೋಪಿಗಳ ವಿರುದ್ಧ ಕ್ರಮಕ್ಕೆ ರಾಘವ ಅಣ್ಣಿಗೇರಿ ಆಗ್ರಹ- ತನಿಖೆ ನಡೆಸಿ ಕ್ರಮ- ಎಸ್ಪಿ ಸೋನಾವಣೆ

ವಿಜಯಪುರ: ಗಣೇಶೋತ್ಸವದ ಅಂಗವಾಗಿ ನಗರದ ಶಿವಾಜಿ ಚೌಕಿನಲ್ಲಿ ಹಾಕಲಾಗಿದ್ದ ಶಾಸಕ ಬಸನಗೌಡ ಪಾಟೀಲ ಯತ್ನಾಳ ಅವರ ಭಾವಚಿತ್ರವಿದ್ದ ಬೃಹತ್ ಫ್ಲೆಕ್ಸ್ ನ್ನು ಕಿಡಿಗೇಡಿಗಳು ಹರಿದು ಹಾಕಿದ್ದು, ಯತ್ನಾಳ ಬೆಂಬಲಿಗರಿಂದ ಆಕ್ರೋಶ ವ್ಯಕ್ತವಾಗಿದೆ. ನಗರದ ಶಿವಾಜಿ ಚೌಕ್ ಬಳಿ ಗಣೇಶೋತ್ಸವಕ್ಕೆ ಶುಭಾಷಯ ಕೋರಿ ಯತ್ನಾಳ ಬೆಂಬಲಿಗರು ಸುಮಾರು 30 ಅಡಿ ಎತ್ತರದ ಬೃಹತ್ ಫ್ಲೆಕ್ಸ್ ಹಾಕಿದ್ದರು.  ಈ ಫ್ಲೆಕ್ಸ್ ನಲ್ಲಿ ಯತ್ನಾಳ ಫೋಟೋವನ್ನು ಹಾಕಲಾಗಿದೆ.  ವಿಷಯ ತಿಳಿಯುತ್ತಿದ್ದಂತೆ ವಿವೇಕಾನಂದ ಸೇನೆ ಅಧ್ಯಕ್ಷ ರಾಘವ ಅಣ್ಣಿಗೇರಿ ಮತ್ತೀತರ ಮುಖಂಡರು ಸ್ಥಳಕ್ಕೆ […]

2ಎ ಮೀಸಲಾತಿ ಸಿಗುವವರೆಗೂ ವಿರಮಿಸುವುದಿಲ್ಲ- ಕೂಡಲ ಸಂಗಮ ಸ್ವಾಮೀಜಿ- ಝಳಕಿ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಲಿಂಗಪೂಜೆ ನಡೆಸಿ ಒತ್ತಾಯ

ವಿಜಯಪುರ: ಪಂಚಮಸಾಲಿ ಸಮುದಾಯಕ್ಕೆ ಮುಂಬರುವ ಲೋಕಸಭೆ ಚುನಾವಣೆಯೊಳಗೆ ಮೀಸಲಾತಿ ಘೋಷಿಸಿ ಆದೇಶ ಹೊರಡಿಸಬೇಕು.  ಇಲ್ಲದಿದ್ದರೆ ಸಮಾಜದ ಕೆಂಗಣ್ಣಿಗೆ ಗುರಿಯಾಗಬೇಕಾಗುತ್ತದೆ ಎಂದು ಕೂಡಲ ಸಂಗಮ ಲಿಂಗಾಯಿತ ಪಂಚಮಸಾಲಿ ಪೀಠದ ಜಗದ್ಗುರು ಶ್ರೀ ಬಸವಜಯ ಮೃತ್ಯುಂಜಯ ಸ್ವಾಮೀಜಿ ರಾಜ್ಯ ಸರಕಾರಕ್ಕೆ ಗಡುವು ನೀಡಿದ್ದಾರೆ. ವಿಜಯಪುರ ಜಿಲ್ಲೆಯ ಇಂಡಿ ತಾಲೂಕಿನ ಝಳಕಿಯಲ್ಲಿ ರಾಷ್ಟ್ರೀಯ ಹೆದ್ದಾರಿ ಸಂಖ್ಯೆ 52ರಲ್ಲಿ ಪಂಚಮಸಾಲಿ ಮೀಸಲಾತಿ ಹೋರಾಟದಲ್ಲಿ ಪಾಲ್ಗೊಂಡ ಅವರು, ಇಷ್ಟಲಿಂಗ ಪೂಜೆ ನೆರವೇರಿಸಿದ ಬಳಿಕ ಗ್ರಾಮದ ಶ್ರೀ ಸಂಗಮೇಶ್ವರ ಮಂಗಲ ಕಾರ್ಯಾಲಯದಲ್ಲಿ ನಡೆದ ಸಭೆಯಲ್ಲಿ ಮಾತನಾಡಿದರು. […]