ಗುಮ್ಮಟ ನಗರಿಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪ್ರೊ. ರಾಜು ಆಲಗೂರ ಪಾದಯಾತ್ರೆ ಮೂಲಕ ಮತಯಾಚನೆ

ವಿಜಯಪುರ: ಲೋಕಸಭೆ ಕಾಂಗ್ರೆಸ್ ಅಭ್ಯರ್ಥಿ ಪ್ರೊ. ರಾಜು ಆಲಗೂರ ಅವರು ಗುಮ್ಮಟ ನಗರಿ ವಿಜಯಪುರದಲ್ಲಿ ಪಾದಯಾತ್ರೆ, ಮೂಲಕ ಬಿರುಸಿನ ಪ್ರಚಾರ ನಡೆಸಿದರು.  ನಗರದ ವಾರ್ಡ್ ಸಂಖ್ಯೆ 32, 33 ಮತ್ತು 34ರಲ್ಲಿ ಪಾದಯಾತ್ರೆನಡೆಸಿದ ಅವರು, ನಗರದಲ್ಲಿ ಪ್ರಚಾರಕ್ಕೆ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, ಮತದಾರರು ಕಾಂಗ್ರೆಸ್ ಪಕ್ಷಕ್ಕೆ ಉತ್ತಮವಾಗಿ ಸ್ಪಂದಿಸುತ್ತಿದ್ದಾರೆ.  ಈ ಸಲ ಮತದಾರರು ಬದಲಾವಣೆ ಬಯಸಿರುವುದು ನಿಚ್ಚಳವಾಗಿದೆ.  ರಾಜ್ಯದಲ್ಲಿ ಎಸ್. ಸಿದ್ದರಾಮಯ್ಯ ಅವರ ಸರಕಾರದ ಸಾಧನೆ ಮನೆ ಮತ್ತು ಮನ ಮುಟ್ಟಿದೆ.  ಜಿಲ್ಲೆಯೊಂದರಲ್ಲಿಯೇ […]

ಕಾಂಗ್ರೆಸ್ ದಲಿತರನ್ನು ಕೇವಲ ಮತಬ್ಯಾಂಕ್ ಆಗಿ ಬಳಸಿಕೊಂಡಿದೆ- ರಾಜ್ಯ ಸರಕಾರ ಎಸ್.ಸಿ.ಪಿ, ಟಿ.ಎಸ್.ಪಿ ಯೋಜನೆಗಳ ರೂ. 25000 ಕೋ. ದುರ್ಬಳಕೆ ಮಾಡಿದೆ- ಮಹೇಂದ್ರಕುಮಾರ ನಾಯಿಕ

ವಿಜಯಪುರ: ಕಾಂಗ್ರೆಸ್ ದಲಿತರನ್ನು ಕೇವಲ ಮತಬ್ಯಾಂಕ್ ಆಗಿ ಬಳಸಿಕೊಂಡಿದ್ದೆ.  ರಾಜ್ಯ ಸರಕಾರ ಎಸ್.ಸಿ.ಪಿ., ಟಿ.ಎಸ್.ಪಿ ಯೋಜನೆಗಳ ರೂ. 25000 ಕೋ. ಹಣವನ್ನು ದುರ್ಬಳಕೆ ಮಾಡಿಕೊಂಡಿದೆ ಎಂದು ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಮಹೇಂದ್ರಕುಮಾರ ನಾಯಿಕ ಆರೋಪಿಸಿದ್ದಾರೆ. ವಿಜಯಪುರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಡಾ. ಬಿ. ಆರ್. ಅಂಬೇಡ್ಕರ ಅವರಿಂದ ಹಿಡಿದು ಈವರೆಗೆ ದಲಿತರಿಗೆ ನಿರಂತರ ಅನ್ಯಾಯ ಮಾಡುತ್ತಿದೆ ಎಂದು ಆರೋಪಿಸಿದರು. ರಾಜ್ಯ ಸರಕಾರ ಎಸ್.ಸಿ.ಪಿ., ಟಿ.ಎಸ್.ಪಿ ಹಣವನ್ನು ಬೇರೆ ಯೋಜನೆಗೆ ಬಳಸಿಕೊಂಡಿದೆ.  ಈ ವಿಷಯದ ಕುರಿತು ಪ್ರಶ್ನಿಸಿದರೆ ಸಿದ್ದರಾಮಯ್ಯನವರು […]

ಎಲೆಕ್ಟ್ರಾಲ್ ಬಾಂಡ್ ಖರೀದಿದಾರರ ಹೆಸರು ಬಹಿರಂಗವಾದ ಬಳಿಕ ಬಿಜೆಪಿ ಮುಖವಾಡ ಕಳಚಿದೆ- ಸಚಿವ ಎಂ. ಬಿ. ಪಾಟೀಲ

ವಿಜಯಪುರ, ಮಾ. 31: ಎಲೆಕ್ಟ್ರಾಲ್ ಬಾಂಡ್ ವಿಚಾರ ಬಹಿರಂಗವಾದ ಬಳಿಕ ಮೋದಿ ಅವರ ಮುಖವಾಡ ಕಳಚಿದೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕೆ, ಮೂಲಸೌಲಭ್ಯ ಅಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಂ. ಬಿ. ಪಾಟೀಲ ಹೇಳಿದ್ದಾರೆ. ಇಂದು ರವಿವಾರ ಬಬಲೇಶ್ವರದಲ್ಲಿ ವಿ. ಎಸ್. ಪಾಟೀಲ ಅವರ ತೋಟದಲ್ಲಿ ನಡೆದ ಬಬಲೇಶ್ವರ ಪಟ್ಟಣ, ಸಾರವಾಡ ಮತ್ತು ಮಮದಾಪುರ ಜಿ. ಪಂ. ಕಾಂಗ್ರೆಸ್ ಮುಖಂಡರು, ಪದಾಧಿಕಾರಿಗಳು, ಯುವಕರು ಹಾಗೂ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದರು. ಕಾಂಗ್ರೆಸ್ ಅಭ್ಯರ್ಥಿ ರಾಜು ಆಲಗೂರ […]

ಸಮಾಜದ ಎಲ್ಲ ವರ್ಗವದರ ಬಗ್ಗೆ ಗೌರವ ಭಾವನೆಯೊಂದಿಗೆ ರಾಜಕೀಯದಲ್ಲಿದ್ದೇನೆ- ಸಂಸದ ಜಿಗಜಿಣಗಿ

ವಿಜಯಪುರ: ಸಮಾಜದ ಎಲ್ಲ ವರ್ಗದವರನ್ನು ವಿಶ್ವಾಸಕ್ಕೆ ತೆಗೆದುಕೊಂಡು, ಬಡವರು, ದಲಿತರು ಮೇಲ್ವರ್ಗದವರು ಸೇರಿದಂತೆ ಎಲ್ಲರ ಬಗ್ಗೆ ಗೌರವ ಭಾವನೆ ಹೊಂದಿದರೆ ರಾಜಕಾರಣ ಮಾಡಲು ಸಾಧ್ಯ ಎಂಬುದನ್ನು ಅರಿಯಬೇಕು ಎಂದು ಸಂಸದ ರಮೇಶ ಜಿಗಜಿಣಗಿ ಹೇಳಿದ್ದಾರೆ.  ನಗರದಲ್ಲಿ ಬಿಜೆಪಿ ಆಯೋಜಿಸಿದ್ದ ಶಕ್ತಿ ಕೇಂದ್ರಗಳ ಪ್ರಮುಖರ ಸಭೆಯನ್ನು ಉದ್ಘಾಟಿಸಿ ಮಾತನಾಡಿ ಅವರು, ರಾಜಕಾರಣ ಮಾಡಲು ಕಾರ್ಯಕರ್ತರು ಬೇಕು.  ಅವರು ಇಲ್ಲದಿದ್ದರೆ ನಾವು ಸೊನ್ನೆ ಇದ್ದಂತೆ.  ಅವರಿಂದ ಬಹಳಷ್ಟು ಕಲಿತಿದ್ದೇನೆ ಎಂದು ಹೇಳಿದರು. ಬೂತ್‌ ಗಳಲ್ಲಿರುವಷ್ಟು ಶಕ್ತಿ ಎಲ್ಲಿಯೂ ಇಲ್ಲ.  ಎಲ್ಲಾ […]

ಮಹಿಳೆಯರು ಕಾಂಗ್ರೆಸ್ಸಿಗೆ ದೊಡ್ಡ ಶಕ್ತಿಯಾಗಿದ್ದಾರೆ- ಪ್ರೊ. ರಾಜು ಆಲಗೂರ

ವಿಜಯಪುರ: ಮಹಿಳೆಯರು ಕಾಂಗ್ರೆಸ್ ಪಕ್ಷಕ್ಕೆ ಮಹಿಳೆಯರೇ ದೊಡ್ಡ ಶಕ್ತಿಯಾಗಿದ್ದಾರೆ ಎಂದು ವಿಜಯಪುರ ಲೋಕಸಭೆ ಕಾಂಗ್ರೆಸ್ ಅಭ್ಯರ್ಥಿ ಪ್ರೊ. ರಾಜು ಆಲಗೂರ ಹೇಳಿದ್ದಾರೆ. ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಕಾಂಗ್ರೆಸ್ ಮಹಿಳಾ ಘಟಕ ಆಯೋಜಿಸಿದ್ದ ವಿಶ್ವ ಮಹಿಳಾ ದಿನಾಚರಣೆ ಸಭೆಯಲ್ಲಿ ಅವರು ಮಾತನಾಡಿದರು. ಸ್ವಾತಂತ್ರ್ಯದ ನಂತರ ಅಧಿಕಾರಕ್ಕೆ ಬಂದ ಕಾಂಗ್ರೆಸ್ ಮಹಿಳೆಯರಿಗೆ ನೂರಾರು ಯೋಜನೆಗಳನ್ನು ಹಾಕಿಕೊಂಡಿದೆ.  ಅವರ ಅಭಿವೃದ್ಧಿಗೆ ಶ್ರಮಿಸಿದೆ.  ಈಗ ಸಿಎಂ ಸಿದ್ದರಾಮಯ್ಯ ನೇತೃತ್ವದ ಸರಕಾರ ಮಹಿಳೆಯರಿಗೆ ಹಲವು ಗ್ಯಾರಂಟಿಗಳನ್ನು ಜಾರಿ ಮಾಡಿದ್ದು ದಾಖಲೆಯಾಗಿದೆ.  ಇದೆಲ್ಲವನ್ನು ಪಕ್ಷದ ನಾಯಕರು […]

Video News: ಪಂಚಮಸಾಲಿ ಸಮುದಾಯ ಯಡ್ಯೂರಪ್ಪ ಜೊತೆಗಿಲ್ಲ- ಲೋಕಾ ಚುನಾವಣೆ ಬಳಿಕ ಬಿಜೆಪಿಯಲ್ಲಿ ನಾಯಕತ್ವ ಬದಲಾವಣೆ ಕೂಗು ಏಳಲಿದೆ- ಯತ್ನಾಳ ಭವಿಷ್ಯ

ವಿಜಯಪುರ: ಪಂಚಮಸಾಲಿ ಸಮುದಾಯ ಯಡಿಯೂರಪ್ಪ ಜೊತೆಗಿಲ್ಲ.  ಲೋಕಸಭೆ ಚುನಾವಣೆ ಬಳಿಕ ರಾಜ್ಯ ಬಿಜೆಪಿಯಲ್ಲಿ ನಾಯಕತ್ವ ಬದಲಾವಣೆ ಕೂಗು ದೊಡ್ಡ ಪ್ರಮಾಣದಲ್ಲಿ ಏಳಲಿದೆ ಎಂದು ಶಾಸಕ ಬಸನಗೌಡ ಪಾಟೀಲ ಯತ್ನಾಳ ಹೇಳಿದ್ದಾರೆ. ವಿಜಯಪುರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ದಿಂಗಾಲೇಶ್ವರ ಸ್ವಾಮೀಜಿ, ಕಾಂಗ್ರೆಸ್ ವಿರುದ್ಧವೂ ವಾಗ್ದಾಳಿ ನಡೆಸಿದರು. ಬಿಜೆಪಿಯಲ್ಲಿ ಟಿಕೆಟ್ ಆಕಾಂಕ್ಷಿಗಳ ಸಂಖ್ಯೆ ಹೆಚ್ಚಿದೆ.  ಎಲ್ಲಾ ಪಕ್ಷಗಳಲ್ಲಿಯೂ ಅಭ್ಯರ್ಥಿಗಳ ಆಯ್ಕೆಯಲ್ಲಿ ಗೊಂದಲವಾಗಿದೆ.  ಮೂಲ ಕಾರ್ಯಕರ್ತರಿಗೆ ಪಕ್ಷದ ಕೆಲಸ ಮಾಡಿದವರಿಗೆ ಟಿಕೆಟ್ ಸಿಗದ ಹಿನ್ನೆಲೆ ಅಸಮಾಧಾನವಾಗಿದೆ.  ನಿಷ್ಕ್ರಿಯರಾಗಿದ್ದವರಿಗೆ ಟಿಕೆಟ್ ಸಿಕ್ಕಾಗ […]

Video News: ಇದು ನನ್ನ ಲಾಸ್ಟ್ ಎಲೆಕ್ಷನ್- ಕನಿಷ್ಠ ಒಂದು ವೋಟ್ ಅಂತರದಿಂದಾದರೂ ಗೆಲ್ಲುತ್ತೇನೆ- ರಮೇಶ ಜಿಗಜಿಣಗಿ

ವಿಜಯಪುರ: ಇದು ನನ್ನ ಕೊನೆಯ ಚುನಾವಣೆ.  ಎಲ್ಲ ಪ್ರಚಾರ ಸಭೆಗಳಲ್ಲಿಯೂ ಹೇಳಿದ್ದೇನೆ.  ಕನಿಷ್ಠ ಒಂದು ಮತದ ಅಂತರದಿಂದಾದರೂ ಗೆಲ್ಲುತ್ತೇನೆ ಎಂದು ವಿಜಯಪುರ ಸಂಸದ ರಮೇಶ ಜಿಗಜಿಣಗಿ ಹೇಳಿದ್ದಾರೆ. ವಿಜಯಪುರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ನನಗೆ ಟಿಕೆಟ್ ಘೋಷಣೆ ಮಾಡಿರುವ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ ಸಂಚಾರ ಮಾಡುತ್ತಿದ್ದೇನೆ.  ನೀವು ಬರಬೇಡಿ, ನಾವು ಮತ ಹಾಕುತ್ತೇವೆ ಎಂದು ಕಾರ್ಯಕರ್ತರು ಹೇಳುತ್ತಿದ್ದಾರೆ.  ಆದರೂ ಕೂಡ ಚುನಾವಣೆಗಾಗಿ ಜಿಲ್ಲೆಯಲ್ಲಿ ಪ್ರಚಾರದಲ್ಲಿ ತೊಡಗಿದ್ದೇನೆ ಎಂದು ತಿಳಿಸಿದರು. ಜಿಲ್ಲೆಯಲ್ಲಿ ಬಿಜೆಪಿ ಮುಖಂಡರು ನಡೆಸುವ ಸಭೆಗಳಲ್ಲಿ ಭಾಗವಹಿಸುತ್ತಿದ್ದೇನೆ.  […]

ವಿಜಯಪುರ ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಯಾಗಿ ಸನ್ನಿ ಎಸ್. ಗವಿಮಠ ನೇಮಕ

ವಿಜಯಪುರ: ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಯನ್ನಾಗಿ ಸನ್ನಿ ಎಸ್. ಗವಿಮಠ(ತ್ರಿಲೋಚನ) ಅವರನ್ನು ನೇಮಕ ಮಾಡಲಾಗಿದೆ. ಕಾಂಗ್ರೆಸ್ ಜಿಲ್ಲಾಧ್ಯಕ್ಷ ಮತ್ತು ವಿಜಯಪುರ ಲೋಕಸಭೆ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಪ್ರೊ. ರಾಜು ಆಲಗೂರ ಈ ನೇಮಕ ಮಾಡಿ ಆದೇಶ ಪತ್ರ ನೀಡಿ ಗೌರವಿಸಿದ್ದಾರೆ. ಸನ್ನಿ ಎಸ್. ಗವಿಮಠ ಮೂಲತಃ ಬಿಜೆಪಿ ಕಾರ್ಯಕರ್ತನಾಗಿದ್ದು, ಮಾಜಿ ಸಚಿವ ಅಪ್ಪು ಪಟ್ಟಣಶೆಟ್ಟಿ ಅವರ ಬೆಂಬಲಿಗನಾಗಿದ್ದಾನೆ.  ಆದರೆ, ಕಳೆದ ವರ್ಷ ನಡೆದ ವಿಧಾನ ಸಭೆ ಚುನಾವಣೆಯಲ್ಲಿ ಅಪ್ಪು ಪಟ್ಟಣಶೆಟ್ಟಿ ಅವರಿಗೆ ಟಿಕೆಟ್ ಸಿಗದ ಹಿನ್ನೆಲೆಯಲ್ಲಿ ಅವರು […]

Video News: ಪಿಎಸ್ಐ ಆಗಬೇಕೆಂದಿದ್ದೆ, ಊರ ಗೌಡರು ರಾಜಕಾರಣಿ ಮಾಡಿದರು- ಓಟಿಎಸ್ ಸಾಲ ಪಡೆದ ರೈತರ ಪರ ಕೇಂದ್ರಕ್ಕೆ ಪತ್ರ ಬರೆದಿದ್ದೇನೆ- ರಮೇಶ ಜಿಗಜಿಣಗಿ

ವಿಜಯಪುರ: ಡಿಗ್ರಿ ಮುಗಿಸಿದ ಮೇಲೆ ಪಿಎಸ್‌ಐ ಆಗಬೇಕೆಂದುಕೊಂಡಿದ್ದೆ.  ಆದರೆ, ಊರ ಗೌಡರ ಒತ್ತಾಯದ ಹಿನ್ನೆಲೆ ರಾಜಕೀಯ ಪ್ರವೇಶಿಸಿ ಆರು ಬಾರಿ ಸಂಸದನಾಗಿದ್ದೇನೆ ಎಂದು ವಿಜಯಪುರ ಲೋಕಸಭೆ ಬಿಜೆಪಿ ಅಭ್ಯರ್ಥಿ ರಮೇಶ ಜಿಗಜಿಣಗಿ ತಿಳಿಸಿದ್ದಾರೆ. ಇಂಡಿ ಪಟ್ಟಣದಲ್ಲಿ ಬಿಜೆಪಿ ಚುನಾವಣೆ ನಿರ್ವಹಣೆ ಸಮಿತಿ ಸಭೆಯಲ್ಲಿ ಮಾತನಾಡಿದ ಅವರು, ನಾನು ಬಿ.ಎ ಮುಗಿದ ಮೇಲೆ ಪಿಎಸ್‌ಐ ಹುದ್ದೆಗೆ ಅರ್ಜಿ ಸಲ್ಲಿಸಲು ತೆರಳಿದ್ದೆ.  ಆಗ ಊರ ಗೌಡರು ನಮ್ಮೂರಿನ ದಲಿತ ವಿದ್ಯಾವಂತ ಯುವಕ ಪಿಎಸ್‌ಐ ಆದರೆ ಸಾಲದು.  ಜನಪ್ರತಿನಿಧಿಯಾಗಿ ಇನ್ನಷ್ಟು ಸೇವೆ […]

ಲೋಕಸಭೆ ಚುನಾವಣೆ- ಈ ಬಾರಿ 1919048 ಮತದಾರರು- 85 ವರ್ಷ ಮೇಲ್ಪಟ್ಟ ಮತದಾರರ ಸಂಖ್ಯೆ 17159

ವಿಜಯಪುರ: ಕೇಂದ್ರ ಚುನಾವಣೆ ಆಯೋಗ ಲೋಕಸಭೆಗೆ ದಿನಾಂಕ ನಿಗದಿಯಾಗಿದ್ದು, ಮಾ. 16 ರಿಂಂದಲೇ ಚುನಾವಣೆ ನೀತಿ ಸಂಹಿತೆ ಆರಂಭವಾಗಿದೆ.  ಈ ಬಾರಿ ವಿಜಯಪುರ ಜಿಲ್ಲೆಯಲ್ಲಿ ಒಟ್ಟು 19 ಲಕ್ಷ 19 ಸಾವಿರದ 48 ಜನ ಮತದಾರರು ತಮ್ಮ ಹಕ್ಕು ಚಲಾಯಿಸಲಿದ್ದಾರೆ. ಈ ಕುರಿತು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಜಿಲ್ಲಾಧಿಕಾರಿ ಟಿ. ಭೂಬಾಲನ್, ಜೂನ್ 6 ರ ವರೆಗೆ ಮಾದರಿ ನೀತಿ ಸಂಹಿತೆ ಜಾರಿಯಲ್ಲಿರುತ್ತದೆ ಎಂದು ತಿಳಿಸಿದ್ದಾರೆ. ವಿಜಯಪುರ ಜಿಲ್ಲೆಯಲ್ಲಿ ರಾಜ್ಯದಲ್ಲಿ ಎರಡನೇ ಹಂತದಲ್ಲಿ ಮತದಾನ ನಡೆಯಲಿದ್ದು, ಏ. 12 […]