ಸಂಪೂರ್ಣ ಗುಣಮುಖನಾಗಿದ್ದೇನೆ- ವಿಕ್ಷಿಪ್ತ ಮನಸುಗಳ ಅಪಪ್ರಚಾರ ನೋವು ತಂದಿದೆ- ರಮೇಶ ಜಿಗಜಿಣಗಿ

ವಿಜಯಪುರ: ನಾನು ಈಗ ಸಂಪೂರ್ಣ ಆರೋಗ್ಯವಾಗಿದ್ದು, ಕೆಲವು ವಿಕ್ಷಿಪ್ತ ಮನಸ್ಸುಗಳು ನನ್ನ ಆರೋಗ್ಯದ ಬಗ್ಗೆ ಅಪಪ್ರಚಾರ ನಡೆಸುತ್ತಿರುವುದು ನೋವುಂಟು ಮಾಡಿದೆ ಎಂದು ವಿಜಯಪುರ ಬಿಜೆಪಿ ಸಂಸದ ರಮೇಶ ಜಿಗಜಿಣಗಿ ತಿಳಿಸಿದ್ದಾರೆ. ಈ ಕುರಿತು ಮಾಧ್ಯಮ ಪ್ರಕಟಣೆ ನೀಡಿರುವ ಅವರು, ಸಹಜವಾದ ಆರೋಗ್ಯ ಸಮಸ್ಯೆಯಿಂದ ಆಸ್ಪತ್ರೆಗೆ ದಾಖಲಾಗಿದ್ದೆ.  ಆದರೆ ಕೆಲವೊಂದು ವಿಕ್ಷಿಪ್ತ ಮನಸ್ಸುಗಳು ತಮ್ಮ ಸ್ವಾರ್ಥ ರಾಜಕಾರಣದ ಬೆಳೆ ಬೇಯಿಸಿಕೊಳ್ಳಲು ಸಾಮಾಜಿಕ ಜಾಲತಾಣಗಳ ಮೂಲಕ ಅಪಪ್ರಚಾರ ಮಾಡುತ್ತಿರುವುದು ನನ್ನ ಮನಸ್ಸಿಗೆ ನೋವು ಉಂಟು ಮಾಡಿದೆ ಎಂದು ತಿಳಿಸಿದ್ದಾರೆ. ನನ್ನ […]

ಬಿಜೆಪಿಗೆ ಆಪರೇಶನ್ ಕಮಲ, ದುಡ್ಡು ಕೊಟ್ಟು ಕೊಂಡುಕೊಳ್ಳುವುದೇ ಕೆಲಸವಾಗಿದೆ- ಸಿಎಂ ಎಸ್ ಸಿದ್ಧರಾಮಯ್ಯ ವಾಗ್ದಾಳಿ

ವಿಜಯಪುರ: ಬಿಜೆಪಿಯವರಿಗೆ ಆಪರೇಶನ್ ಬಿಟ್ಟರೆ ಬೇರೇನೂ ಗೊತ್ಲಿಲ.  ದುಡ್ಡ ಕೊಟ್ಟು ಕೊಂಡು ಕೊಳ್ಳೊದೇ ಅವರ ಕೆಲಸವಾಗಿದೆ ಎಂದು ಮುಖ್ಯಮಂತ್ರಿ ಎಸ್. ಸಿದ್ಧರಾಮಯ್ಯ ಆರೋಪಿಸಿದ್ದಾರೆ. ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ತಾಲೂಕಿನಲ್ಲಿ ನಾನಾ ಅಭಿವೃದ್ಧಿ ಕಾಮಗಾರಿಗಳೆಗ ಭೂಮಿಪೂಜೆ ಮತ್ತು ಉದ್ಘಾಟನೆ ಕಾರ್ಯಕ್ರಮಕ್ಕೆ ಆಗಮಿಸಿದ ಅವರು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದರು. ಜಗದೀಶ ಶೆಟ್ಟರ ಅವರ ರೀತಿ ಮತ್ತಷ್ಟು ಕಾಂಗ್ರೆಸ್ ನಾಯಕರು ಬಿಜೆಪಿಗೆ ಸೇರ್ಪಡೆಯಾಗಲಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ. ವೈ. ವಿಜಯೇಂದ್ರ ನೀಡಿರುವ ಹೇಳಿಕೆ ಕುರಿತು ಕೇಳಲಾದ ಪ್ರಶ್ನೆಗೆ ಉತ್ತರಿಸಿದ ಅವರು, […]

ವಿಜಯಪುರದಲ್ಲಿ ಕಾಂಗ್ರೆಸ್ಸಿನ ಕಟ್ಟಡ, ಕಟ್ಟಿಗೆ ಕಾರ್ಕಮಿಕರ ಸಂಘಟನೆ ಪದಾಧಿಕಾರಿಗಳಿಗೆ ಆದೇಶ ಪತ್ರ ವಿತರಿಸಿದ ಪ್ರೊ. ರಾಜು ಆಲಗೂರ

ವಿಜಯಪುರ: ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಭಾರತೀಯ ರಾಷ್ಟ್ರೀಯ ಕಟ್ಟಡ ಕಾರ್ಮಿಕರ ಹಾಗೂ ಕಟ್ಟಿಗೆ ಕಾರ್ಮಿಕರ ಕಾಂಗ್ರೆಸ್ ಸಂಘಟನೆ ಪದಾಧಿಕಾರಿಗಳಿಗೆ ಆದೇಶ ಪತ್ರ ವಿತರಣೆ ಮತ್ತು ಲೋಕಸಭಾ ಚುನಾವಣೆ ಪೂರ್ವ ತಯಾರಿ ಕುರಿತು ಚರ್ಚಿಸಲು ಸಭೆ ನಡೆಯಿತು. ಈ ಸಭೆಯಲ್ಲಿ ಮಾತನಾಡಿದ ಕರ್ನಾಟಕ ರಾಜ್ಯ ಇಂಡಿಯನ್ ನ್ಯಾಷನಲ್ ಬಿಲ್ಡಿಂಗ್ ಕನಸ್ಚ್ರಕ್ಷನ್ ಫಾರೆಸ್ಟ ಆಂಡ್ ವುಡ್ ವರ್ಕಸ್ ಫೆಡರೇಶನ್ ರಾಜ್ಯ ಅಧ್ಯಕ್ಷ ಜಿ. ಆರ್. ದಿನೇಶ, ಕಾಂಗ್ರೆಸ್ ಪಕ್ಷದ ಸಿದ್ದರಾಮಯ್ಯ ನೇತೃತ್ವದ ಸರಕಾರ ಕಾರ್ಮಿಕರ ಸಲುವಾಗಿ ಹಲವಾರು ಯೋಜನೆಗಳನ್ನು ಜಾರಿಗೊಳಿಸಿದ್ದು, […]

ಬಡವರು, ದೀನದಲೀತರು, ಕಾರ್ಮಿಕರು, ಅಲ್ಪಸಂಖ್ಯಾತರು, ಹಿಂದುಳಿದವರ ಏಳಿಗೆಗಾಗಿ ಕಾಂಗ್ರೆಸ್ ಕೆಲಸ ಮಾಡುತ್ತಿದೆ- ಅಭಿಷೇಕ ದತ್ತ

ವಿಜಯಪುರ: ಕಾಂಗ್ರೆಸ್ ಪಕ್ಷ ಬಡವರು, ರೈತರು, ಕಾರ್ಮಿಕರು, ದೀನದಲಿತರು, ಅಲ್ಪಸಂಖ್ಯಾತರು ಹಾಗೂ ಹಿಂದುಳಿದವರನ್ನು ಸಾಮಾಜಿಕ, ಆರ್ಥಿಕ, ಶೈಕ್ಷಣಿಕವಾಗಿ ಸೇರಿದಂತೆ ಎಲ್ಲ ರಂಗಗಳಲ್ಲಿ ಏಳಿಗೆಯಾಗಲು ಶ್ರಮಿಸುತ್ತಿದೆ ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ಅಭಿಷೇಕ ದತ್ತ ಹೇಳಿದ್ದಾರೆ. ವಿಜಯಪುರದಲ್ಲಿ ಪಕ್ಷದ ಕಚೇರಿಗೆ ಭೇಟಿ ನೀಡಿದ ಅವರು, ಮುಂಬರುವ ಲೋಕಸಭೆ ಚುನಾವಣೆ ಮತ್ತು ಪಕ್ಷದ ಮುಖಂಡರನ್ನು ಹಾಗೂ ಕಾರ್ಯಕರ್ತರನ್ನು ನಿಗಮ ಮಂಡಳಿಗಳಲ್ಲಿ ನೇಮಕದ ಕುರಿತು ಮತ್ತು ಕೆಪಿಸಿಸಿ ಘೋಷಣೆ ಮಾಡಿರುವ ಗ್ಯಾರಂಟಿ ಯೋಜನೆಗಳನ್ನು ಜನರಿಗೆ ಸರಿಯಾದ ರೀತಿಯಲ್ಲಿ ಮುಟ್ಟಿಸುವ ಕುರಿತು ಕಾಂಗ್ರೆಸ್ […]

ಎಲ್ಲರನ್ನು ವಿಶ್ವಾಸಕ್ಕೆ ಪಡೆದು ಜವಾಬ್ದಾರಿಯನ್ನು ಸಮರ್ಥವಾಗಿ ನಿಭಾಯಿಸುವೆ- ಆರ್. ಎಸ್. ಪಾಟೀಲ ಕೂಚಬಾಳ

ವಿಜಯಪುರ: ಪಕ್ಷದ ಕಾರ್ಯಕರ್ತರು ಮತ್ತು ಹಿರಿ ಮುಖಂಡರ ಆಶೀರ್ವಾದದಿಂದ ತಮಗೆ ಮತ್ತೋಮ್ಮೆ ಬಿಜೆಪಿ ಜಿಲ್ಲಾಧ್ಯ್ಕಷ ಸ್ಥಾನದ ಜವಾಬ್ದಾರಿ ಒಲಿದು ಬಂದಿದೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಆರ್. ಎಸ್. ಪಾಟೀಲ ಕೂಚಬಾಳ ತಿಳಿಸಿದ್ದಾರೆ. ವಿಜಯಪುರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಮಮಂದಿರ ಲೋಕಾರ್ಪಣೆಯ ಈ ಶುಭ ಸಂದರ್ಭದಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷನಾಗಿ ಪುನರಾಯ್ಕೆಯಾಗಿರುವುದು ನನ್ನ ಸುದೈವ.  ಜಿಲ್ಲಾ ಬಿಜೆಪಿಯಲ್ಲಿ ಯಾವ ಬಣವೂ ಇಲ್ಲ.  ಎಲ್ಲ ನಾಯಕರು ನನ್ನ ಆಯ್ಕೆಗೆ ಸಹಕರಿಸಿ ಈ ಜವಾಬ್ದಾರಿಯನ್ನು ಹೊರೆಸಿದ್ದಾರೆ, ಅವರ ವಿಶ್ವಾಸವನ್ನು ಉಳಿಸಿಕೊಳ್ಳುವ ನಿಟ್ಟಿನಲ್ಲಿ ಪ್ರಾಮಾಣಿಕವಾಗಿ […]

ಬಿಜೆಪಿ ಎಂಪಿ ಟಿಕೆಟ್ ನನಗೆ ಸಿಗಲಿದೆ- ಎಂಎಲ್ಎ ಚುನಾವಣೆಯಲ್ಲಿ ಸ್ಪರ್ಧೆ ಬಯಸಿ ಸಿಪಿಐ ಹುದ್ದೆಗೆ ರಾಜೀನಾಮೆ ನೀಡಿದ್ದೆ- ಮಹೇಂದ್ರಕುಮಾರ ನಾಯಕ

ವಿಜಯಪುರ: ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಯಿಂದ ನನಗೆ ಟಿಕೆಟ್ ಸಿಗಲಿದೆ ಎಂದು ಶೇ. 200ರಷ್ಟು ವಿಶ್ವಾಸವಿದೆ ಎಂದು ಕಳೆದ ವಿಧಾನ ಸಭೆ ಚುನಾವಣೆ ಸಂದರ್ಭದಲ್ಲಿ ಸಿಪಿಐ ಹುದ್ದೆಗೆ ರಾಜೀನಾಮೆ ನೀಡಿದ್ದ ಮಹೇಂದ್ರಕುಮಾರ ನಾಯಕ ತಿಳಿಸಿದ್ದಾರೆ. ವಿಜಯಪುರದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಕಳೆದ ಬಾರಿ ನಾಗಠಾಣ ಮೀಸಲು ವಿಧಾನಸಭಾ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕಿಳಿಯಲು ಸಿಪಿಐ ಹುದ್ದೆಗೆ ರಾಜೀನಾಮೆ ನೀಡಿದ್ದೆ.  ಆದರೆ, ಕಾಣದ ಕೈಗಳ ಕುತಂತ್ರದಿಂದ ಕಳೆದ ಬಾರಿ ನಾಗಠಾಣ ಟಿಕೇಟ್ ತಪ್ಪಿದೆ.  ಮುಂಬರುವ ಲೋಕಸಭೆ ಚುನಾವಣೆಯಲ್ಲಿ […]

2024 ಮತ್ತೊಮ್ಮೆ ಮೋದಿ: ವಿಜಯಪುರ ಬಿಜೆಪಿ ಜಿಲ್ಲಾ ಕಾರ್ಯಾಲಯದಲ್ಲಿ ಗೋಡೆ ಬರಹಕ್ಕೆ ಚಾಲನೆ

ವಿಜಯಪುರ: 2024 ಮತ್ತೊಮ್ಮೆ ಮೋದಿ ಎಂಬ ಗೋಡೆ ಬರಹವನ್ನು ವಿಜಯಪುರದ ಬಿಜೆಪಿ ಜಿಲ್ಲಾ ಕಾರ್ಯಾಲಯದಲ್ಲಿ ಬರೆಯುವ ಮೂಲಕ ಬಿಜೆಪಿ ಎಸ್.ಸಿ. ಮೋರ್ಚಾ ರಾಜ್ಯ ಪ್ರಧಾನ ಕಾರ್ಯದರ್ಶಿ ಉಮೇಶ ಕಾರಜೋಳ ಚಾಲನೆ ನೀಡಿದರು. ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಎಲ್ಲ ವಾರ್ಡ್ ಗಳಲ್ಲಿ ಈ ಸಂದೇಶದ ಗೋಡೆಬರಹವನ್ನು ಬರೆಯುವ ಕಾರ್ಯಕ್ರಮವನ್ನು ಜಿಲ್ಲಾ ಬಿಜೆಪಿ ರೂಪಿಸಿರುವ ಈ ಕಾರ್ಯಕ್ರಮಕ್ಕೆ ಅವರು ಚಾಲನೆ ನೀಡಿದರು. ಬಳಿಕ ಮಾತನಾಡಿದ ಅವರು, ದೇಶ ಇನ್ನಷ್ಟೂ ಅಭಿವೃದ್ಧಿ ಪಥದತ್ತ ಮುನ್ನಡೆಯಲು ಮೋದಿಜಿ ಅವರು ಇನ್ನೊಮ್ಮೆ ಪ್ರಧಾನಿಯಾಗಬೇಕು.  ಭಾರತವನ್ನು […]

ಗ್ರಾಮೊದ್ಯೋಗ ಎಣ್ಣೆ ಉತ್ಪಾದಕರ ಕೈಗಾರಿಕೆ ಸಹಕಾರಿ ಸಂಘದ ಚುನಾವಣೆ ಫಲಿತಾಂಶ ಪ್ರಕಟ

ವಿಜಯಪುರ: ನಗರದ ಶ್ರೀ ಸಿದ್ಧೇಶ್ವರ ದೇವಾಲಯದ ಬಳಿ ಇರುವ ಗ್ರಾಮ್ಯೋದ್ಯೋಗ ಎಣ್ಣೆ ಉತ್ಪಾದಕರ ಕೈಗಾರಿಕ ಸಹಕಾರ ಸಂಘಕ್ಕೆ 2024-29ರ ಅವಧಿಯ ಆಡಳಿತ ಮಂಡಳಿಗೆ ನಡೆದ ಚುನಾವಣೆ ಫಲಿತಾಂಶ ಪ್ರಕಟವಾಗಿದೆ. ನಿರ್ದೇಶಕರಾಗಿ ಆಯ್ಕೆಯಾದ ಅಭ್ಯರ್ಥಿಗಳು, ಪಡೆದ ಮತಗಳ ವಿವರ ಇಲ್ಲಿದೆ. ಸಾಮಾನ್ಯ ಕ್ಷೇತ್ರ ಚಂದ್ರಶೇಖರ ಇಜೇರಿ(224), ಸುರೇಶ ಗಚ್ಚಿನಕಟ್ಟಿ(243), ಸಿದ್ಧಪ್ಪ ಸಜ್ಜನ(243), ರಾಜಶೇಖರ ಸಜ್ಜನ(221), ಈರಪ್ಪ ಹಿಪ್ಪರಗಿ(219), ನಜೀರಅಹ್ಮದ ನಾಡೇವಾಲೆ(202), ಮಲ್ಲಿಕಾರ್ಜುನ ನುಚ್ಚಿ(200). ಪರಿಶಿಷ್ಟ ಜಾತಿ ಕ್ಷೇತ್ರ ದಶರಥ ಬಿರಾದಾರ(166) ಅವಿರೋದವಾಗಿ ಆಯ್ಕೆಯಾದ ಅಭ್ಯರ್ಥಿಗಳು ಅಶೋಕ ನ್ಯಾಮಗೌಡ(ಹಿಂದುಳಿದ ವರ್ಗ […]

ಗುಮ್ಮಟ ನಗರಿ ಮಹಾನಗರ ಪಾಲಿಕೆ ಕೈವಶ- ಅತೀ ಹೆಚ್ಚು ಸದಸ್ಯರಿದ್ದರೂ ಅರಳದ ತಾವರೆ

ವಿಜಯಪುರ: ಗುಮ್ಮಟ ನಗರಿ ವಿಜಯಪುರ ಮಹಾನಗರ ಪಾಲಿಕೆ ಕೈವಶವಾಗಿದೆ.  ಸಚಿವ ಎಂ. ಬಿ. ಪಾಟೀಲ ಅವರ ಕೈಚಳಕದಿಂದಾಗಿ ಮೇಯರ್ ಮತ್ತು ಉಪಮೇಯರ್ ಎರಡೂ ಸ್ಥಾನಗಳು ಕಾಂಗ್ರೆಸ್ ಪಾಲಾಗಿದ್ದು, ಚುನಾವಣೆ ಮತದಾನ ಬಹಿಷ್ಕರಿಸಿದ ಶಾಸಕ ಬಸನಗೌಡ ಪಾಟೀಲ ಯತ್ನಾಳ ನೇತೃತ್ವದಲ್ಲಿ ಬಿಜೆಪಿ ಕಾರ್ಪೊರೇಟರ್ ಗಳು ಚುನಾವಣಾಧಿಕಾರಿಗಳ ವಿರುದ್ಧ ಘೋಷಣೆ ಹಾಕುತ್ತ ಪಾಲಿಕೆಯಿಂದ ಹೊರ ನಡೆದರು. ಬೆಳಿಗ್ಗೆಯಿಂದ ನಡೆದ ಚುನಾವಣೆ ಪ್ರಕ್ರಿಯೆಯಲ್ಲಿ ಕಾಂಗ್ರೆಸ್ಸಿನಿಂದ ಮೆಹಜಬೀನ್ ಅಬ್ದುಲ್ ರಜಾಕ್ ಹೊರ್ತಿ ಮೇಯರ್ ಸ್ಥಾನಕ್ಕೆ ಮತ್ತು ದಿನೇಶ ಹಳ್ಳಿ ಉಪಮೇಯರ್ ಸ್ಥಾನಕ್ಕೆ ನಾಮಪತ್ರ […]

ಬಿಜೆಪಿ ಕಾರ್ಪೊರೇಟರ್ ಜೊತೆ ಸಭೆ ಮಧ್ಯೆ ಎಚ್.ಡಿ.ಕೆ ಗೆ ಕರೆ ಮಾಡಿದ ಬಿ. ವೈ. ವಿಜಯೇಂದ್ರ- ಯಾಕೆ ಗೊತ್ತಾ?

ವಿಜಯಪುರ: ಜಿಲ್ಲಾ ಪ್ರವಾಸದಲ್ಲಿದ್ದ ಬಿಜೆಪಿ ರಾಜ್ಯಾಧ್ಯಕ್ಷ ಬಿ. ವೈ. ವಿಜಯೇಂದ್ರ ಶನಿವಾರ ರಾತ್ರಿ ವಿಜಯಪುರ ಮಹಾನಗರ ಪಾಲಿಕೆ ಬಿಜೆಪಿ ಸದಸ್ಯರೊಂದಿಗೆ ಸಭೆ ನಡೆಸಿದ್ದಾರೆ. ದಿನವಿಡೀ ನಿಗದಿತ ಕಾರ್ಯಕ್ರಮ ಬಳಿಕ ರಾತ್ರಿ ವಾರ್ಡ್ ನಂಬರ್ 12 ರ ಬಿಜೆಪಿ ಸದಸ್ಯೆ ರಶ್ಮಿ ಕೋರಿ ಅವರ ನಿವಾಸದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷರು ಸಭೆ ನಡೆಸಿದರು.  ಸಂಜೆ ಪಕ್ಷದ ಕಚೇರಿಯಲ್ಲಿ ನಡೆದ ಬಿಜೆಪಿ ಕಾರ್ಯಕರ್ತರ ಸಭೆಗೆ ಮಹಾನಗರ ಪಾಲಿಕೆಯ ಬಿಜೆಪಿ ಸದಸ್ಯರು ಕಡಿಮೆ ಸಂಖ್ಯೆಯಲ್ಲಿ ಆಗಮಿಸಿದ್ದರು.  ಹೀಗಾಗಿ ಪ್ರತ್ಯೇಕ ಸಭೆ ನಡೆಸುವಂತೆ ಸದಸ್ಯರು […]