ನಾನಾಗಲಿ, ಪಕ್ಷದ ಮುಖಂಡರು ಕೇಂದ್ರಕ್ಕೆ ಹೋಗಿ ಚಾಡಿ ಹೇಳಿಲ್ಲ- ಹುಡುಗಾಟಿಕೆ ಆರೋಪಗಳಿಗೆ ಉತ್ತರಿಸಲ್ಲ- ಬಿ. ವೈ. ವಿಜಯೇಂದ್ರ ಟಾಂಗ್

ವಿಜಯಪುರ: ನಾನಾಗಲಿ ಅಥವಾ ಪಕ್ಷದ ಮುಖಂಡರಾಗಲಿ ಕೇಂದ್ರಕ್ಕೆ ಹೋಗಿ ಯಾರ ಬಗ್ಗೆಯೂ ಚಾಡಿ ಹೇಳುವುದಾಗಲಿ, ದೂರು ನೀಡುವುದಾಗಲಿ, ಶಿಸ್ತು ಕ್ರಮ ಕೈಗೊಳ್ಳಬೇಕು ಎಂದು ನಾವು ಪ್ರಯತ್ನ ಮಾಡಿಲ್ಲ.  ಅದರ ಅವಶ್ಯಕತೆಯೂ ನಮಗಿಲ್ಲ.  ಆದರೆ,  ಮುಂದೆ ಸಂದರ್ಭ ಹೇಗೆ ಸೃಷ್ಠಿಯಾಗುತ್ತೆ ಅದರ ಮೇಲೆ ಕೇಂದ್ರ ವರಿಷ್ಠರು ತೀರ್ಮಾನ ಮಾಡುತ್ತಾರೆ ಎಂದು ಬಿಜೆಪಿ ನೂತನ ರಾಜ್ಯಾಧ್ಯಕ್ಷ ಬಿ. ವೈ. ವಿಜಯೇಂದ್ರ ಹೇಳಿದ್ದಾರೆ. ವಿಜಯಪುರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಏನೆ ಸಣ್ಣಪುಟ್ಟ ವ್ಯತ್ಯಾಸಗಳಿದ್ದರೂ, ವಯಸ್ಸಿನಲ್ಲಿ ಚಿಕ್ಕವನಾದರೂ ಪಕ್ಷದ ಅಧ್ಯಕ್ಷನಾಗಿ ಹಿತದೃಷ್ಠಿಯಿಂದ […]

ವಿಜಯಪುರಕ್ಕೆ ಬಿಜೆಪಿ ನೂತನ ರಾಜ್ಯಾಧ್ಯಕ್ಷ ಬಿ. ವೈ ವಿಜಯೇಂದ್ರ ಭೇಟಿ- ಸ್ವಾಗತಕ್ಕೆ ಸಜ್ಜಾದ ಕಾರ್ಯಕರ್ತರು

ವಿಜಯಪುರ: ಬಿಜೆಪಿ ರಾಜ್ಯಾಧ್ಯಕ್ಷರಾದ ನಂತರ ಶಾಸಕ ಬಿ. ವೈ. ವಿಜಯೇಂದ್ರ ಇದೇ ಮೊದಲ ಬಾರಿಗೆ ಬಸವ ನಾಡು ವಿಜಯಪುರ ಜಿಲ್ಲೆಗೆ ಭೇಟಿ ನೀಡುತ್ತಿದ್ದಾರೆ.  ಮೊದಲಿಗೆ ಬಬಲೇಶ್ವರ ತಾಲೂಕಿನ ಕೃಷ್ಣಾ ನಗರಕ್ಕೆ ಭೇಟಿ ನೀಡಲಿರುವ ಅವರು, ಕರ್ನಾಟಕ ರಾಜ್ಯ ಬಣಜಿಗ ಸಮಾಜದ ಬಬಲೇಶ್ವರ ಮತ್ತು ಬೀಳಗಿ ತಾಲೂಕು ಘಟಗಳು ಆಯೋಜಿಸಿರುವ ವಿಜಯಪುರ ಮತ್ತು ಬಾಗಲಕೋಟೆ ದಿಲ್ಲೆ ಬಣಜಿಕ ಸಮಾಜದ ಸಂಘಟನಾ ಸಮಾವೇಶ ಮತ್ತು ಬಡ ಪ್ರತಿಭಾವಂತ ವಿದ್ಯಾರ್ಥಿಗಳ ಶೈಕ್ಷಣಿಕ ದತ್ತು ಸ್ವೀಕಾರ ಮತ್ತು ಪ್ರತಿಭಾ ಪುರಸ್ಕಾರ ಮತ್ತು ಬಣಜಿಗ […]

ಗ್ರಾಂ. ಪಂ. ಸದಸ್ಯರ ಹಿತರಕ್ಷಣೆಯೇ ಸದಾ ಸಿದ್ಧನಿದ್ದೇನೆ- ಎಂಎಲ್‌ಸಿ ಸುನೀಲಗೌಡ ಪಾಟೀಲ

ವಿಜಯಪುರ: ಗ್ರಾಮ ಪಂಚಾಯಿತಿ ಸದಸ್ಯರ ಹಿತ ಕಾಪಾಡಲು ಸದಾ ಸಿದ್ಧನಿರುತ್ತೇನೆ ಎಂದು ವಿಧಾನ ಪರಿಷತ ಸದಸ್ಯ ಸುನೀಲಗೌಡ ಪಾಟೀಲ ಹೇಳಿದ್ದಾರೆ. ಇಂದು ಗುರುವಾರ ಬಬಲೇಶ್ವರ ತಾಲೂಕಿನ ಕೃಷ್ಣಾ ನಗರದಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯಿತಿ ರಾಜ್, ಜಿಲ್ಲಾ ಮತ್ತು ತಾಲೂಕು ಪಂಚಾಯಿತಿ ಆಶ್ರಯದಲ್ಲಿ 2023-24ನೇ ವರ್ಷದ ಮಹಾತ್ಮಾ ಗಾಂಧಿ ರಾಷ್ಟ್ರೀಯ ಉದ್ಯೋಗ ಖಾತ್ರಿ ಯೋಜನೆಯಡಿಯಲ್ಲಿ ಹೊಸೂರು ಗ್ರಾಮ ಪಂಚಾಯಿತಿಯ ನೂತನ ಕಟ್ಟಡಕ್ಕೆ ಭೂಮಿಪೂಜೆ ನೆರವೇರಿಸಿ ಅವರು ಮಾತನಾಡಿದರು. ಗ್ರಾಮ ಪಂಚಾಯಿತಿ ಸದಸ್ಯರಿಗೆ ಗೌರವ ಧನ ಹೆಚ್ಚಳಕ್ಕೆ ಸದನದ ಒಳಗೆ […]

ಮುಂದಿನ ವರ್ಷ ವಿಜಯಪುರ ಮೇಯರ್, ಉಪಮೇಯರ್ ಚುನಾವಣೆ- ದಿನಾಂಕ ಯಾವುದು ಗೊತ್ತಾ?

ವಿಜಯಪುರ: ಬಹುನಿರೀಕ್ಷಿತ ವಿಜಯಪುರ ಮಹಾನಗರ ಪಾಲಿಕೆ ಮೇಯರ್ ಮತ್ತು ಉಪಮೇಯರ್ ಚುನಾವಣೆಗೆ ಕೊನೆಗೂ ದಿನಾಂಕ ನಿಗದಿಯಾಗಿದೆ.  ಕಾರ್ಪೋರೇಟರ್ ಗಳಾಗಿ ಆಯ್ಕೆಯಾಗಿ ಒಂದು ವರ್ಷ ಎರಡು ತಿಂಗಳ ನಂತರ ಮೇಯರ್ ಮತ್ತು ಉಪಮೇಯರ್ ಚುನಾವಣೆ ದಿನಾಂಕ ನಿಗದಿ ಮಾಡಲಾಗಿದೆ. ಈ ಹಿಂದೆ ಮೂರ್ನಾಲ್ಕು ಬಾರಿ ಚುನಾವಣೆ ದಿನಾಂಕ ನಿಗದಿಯಾಗಿತ್ತು.  ಆದರೆ, ನಾನಾ ಕಾರ್ಪೋರೇಟರ್ ಗಳು ಮೇಯರ್ ಮತ್ತು ಉಪಮೇಯರ್ ಸ್ಥಾನಗಳಿಗೆ ನಿಗದಿಯಾಗಿರುವ ಮೀಸಲಾತಿ ಪ್ರಶ್ನಿಸಿ ಕಲಬುರಗಿ ಹೈಕೋರ್ಟ್ ಮೊರೆ ಹೋಗಿದ್ದರು.  ಈ ಕುರಿತು ವಿಚಾರಣೆ ನಡೆಸಿದ ಹೈಕೋರ್ಟ್ ಪೀಠ […]

ಭೀಮಾ ತೀರದ ಚಡಚಣ ಪ. ಪಂ. ಚುನಾವಣೆ- ಶೇ. 73.93 ಮತದಾನ- ಡಿ. 30 ರಂದು ಶನಿವಾರ ಬೆಳಿಗ್ಗೆ 8.30ರೊಳಗೆ ಎಲ್ಲ ಫಲಿತಾಂಶ ಪ್ರಕಟ ನಿರೀಕ್ಷೆ

ವಿಜಯಪುರ: ಜಿಲ್ಲೆಯ ಚಡಚಣ ಪಟ್ಟಣ ಪಂಚಾಯಿತಿಗೆ ನಡೆದ ಚುನಾವಣೆಯಲ್ಲಿ ಶೇ. 73.93 ರಷ್ಟು ಜನರು ತಮ್ಮ ಹಕ್ಕು ಚಲಾಯಿಸಿದ್ದು, ಶಾಂತಿಯುತ ಮತದಾನ ನಡೆದಿದೆ. ಚಡಚಣ ಪಟ್ಟಣ ಪಂಚಾಯಿಯ 16 ವಾರ್ಡುಗಳಿಗೆ ಚುನಾವಣೆ ನಡೆಯುತ್ತಿದ್ದು, 41 ಅಭ್ಯರ್ಥಿಗಳು ಕಣದಲ್ಲಿದ್ದಾರೆ.  ಬೆಳಿಗ್ಗೆಯಿಂದಲೇ ಮತದಾರರು ಉತ್ಸಾಹದಿಂದ ಮತಗಟ್ಟೆಗಳಿಗೆ ತೆರಳಿ ತಮ್ಮ ಹಕ್ಕು ಚಲಾಯಿಸಿದರು. ಒಟ್ಟು 16080 ಮತದಾರಲ್ಲಿ 11888 ಮತದಾರರು ತಮ್ಮ ಹಕ್ಕು ಚಲಾಯಿಸಿದ್ದಾರೆ.  ಇವರಲ್ಲಿ ಒಟ್ಟು 8062 ಪುರುಷರಲ್ಲಿ 6020 ಮತ್ತು 8018 ಮಹಿಳೆಯರಲ್ಲಿ 5868 ಮತದಾರರು ತಮ್ಮ ಹಕ್ಕು […]

ಇಂಡಿ ನೂತನ ಜಿಲ್ಲೆಯಾಗಲು ಕಾಲ ಇನ್ನೂ ಪಕ್ವವಾಗಿಲ್ಲ- ಡಿ. 29ರ ಸಭೆ ರದ್ದು ಪಡಿಸಬೇಕು- ಮಾಜಿ ಎಂಎಲ್ಸಿ ಅರುಣ ಶಹಾಪುರ

ವಿಜಯಪುರ: ಇಂಡಿ ನೂತನ ಜಿಲ್ಲೆಯಾಗಲು ಕಾಲ ಇನ್ನೂ ಪಕ್ವವಾಗಿಲ್ಲ.  ಹೀಗಾಗಿ ಡಿಸೆಂಬರ್ 29 ರಂದು ಈ ಕುರಿತು ಕರೆಯಲಾದ ಸಭೆಯನ್ನು ರದ್ದು ಪಡಿಸಬೇಕು ಎಂದು ವಿಧಾನ ಪರಿಷತ ಮಾಜಿ ಸದಸ್ಯ ಅರುಣ ಶಹಾಪುರ ಹೇಳಿದ್ದಾರೆ. ವಿಜಯಪುರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಇಂಡಿ ನೂತನ ಜಿಲ್ಲೆ ಮಾಡುವ ಕುರಿತು ಜನಾಭಿಪ್ರಾಯ ಸಂಗ್ರಹಿಸಲು ಸಿಂದಗಿ ತಹಸೀಲ್ದಾರರು ಡಿಸೆಂಬರ್ 29 ರಂದು ಸಭೆ ಕರೆದಿದ್ದಾರೆ.  ಇದು ಸರಿಯಲ್ಲ.  ಸರಕಾರ ವಿಜಯಪುರ ಜಿಲ್ಲೆಯನ್ನು ವಿಭಜಿಸುವ ಪ್ರಸ್ತಾಪ ಹೊಂದಿದೆಯೇ ಎಂಬುದನ್ನು ಸರಕಾರ ಸ್ಪಷ್ಟಪಡಿಸಬೇಕು ಎಂದು […]

ಭ್ರಷ್ಚಾಚಾರ ಆರೋಪ- ಶಾಸಕರ ವಿಚಾರಣೆ ನಡೆಸಬೇಕು- ಬಿಜೆಪಿ ನಾಯಕರ ಮೌನ, ಸಮ್ಮತಿ ಲಕ್ಷಣಂ ಎಂಬಂತಿದೆ- ಎಸ್. ಎಂ. ಪಾಟೀಲ ಗಣಿಹಾರ

ವಿಜಯಪುರ: ಬಿಜೆಪಿ ಸರಕಾರದ ಅವಧಿಯಲ್ಲಿ ಕೊರೊನಾ ನಿರ್ವಹಣೆಯಲ್ಲಿ ರೂ. 40 ಸಾವಿರ ಕೋ. ಭ್ರಷ್ಟಾಚಾರ ನಡೆದಿದೆ ಎಂದು ಆರೋಪಿಸಿರುವ ಶಾಸಕ ಬಸನಗೌಡ ಪಾಟೀಲ ಯತ್ನಾಳ ಅವರನ್ನು ವಿಚಾರಣೆ ನಡೆಸಿ ಮತ್ತಷ್ಟು ಸತ್ಯಾಂಶ ಹೊರಬರಲು ಕ್ರಮ ಕೈಗೊಳ್ಳಬೇಕು ಎಂದು ಕಾಂಗ್ರೆಸ್ ಮುಖಂಡ ಎಸ್. ಎಂ. ಪಾಟೀಲ ಗಣಿಹಾರ ಆಗ್ರಹಿಸಿದ್ದಾರೆ. ವಿಜಯಪುರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಯತ್ನಾಳ ಅವರ ಹೇಳಿಕೆಯನ್ನು ರಾಜ್ಯ ಸರಕಾರ ಗಂಭೀರವಾಗಿ ಪರಿಗಣಿಸಬೇಕು.  ಈ ಕುರಿತು ಯತ್ನಾಳ ಅವರನ್ನು ವಿಚಾರಣೆ ನಡೆಸಿದರೆ ಮತ್ತಷ್ಟು ಸತ್ಯಾಂಶ ಹೊರಬರಲಿದೆ.  ಹೀಗಾಗಿ […]

ಲೋಕಸಭೆ ಚುನಾವಣೆಗೆ ಟಿಕೇಟ್ ನೀಡಿ- ಸಚಿವ ಸತೀಶ ಜಾರಕಿಹೊಳಿಗೆ ಅರ್ಜಿ ಸಲ್ಲಿಸಿದ ಅರ್ಜುನ ರಾಠೋಡ

ವಿಜಯಪುರ: ಮುಂಬರುವ ಲೋಕಸಭೆ ಚುನಾವಣೆಯಲ್ಲಿ ತಮಗೆ ಕಾಂಗ್ರೆಸ್ ಟಿಕೆಟ್ ನೀಡುವಂತೆ ಆಗ್ರಹಿಸಿ ಜಿ. ಪಂ. ಮಾಜಿ ಅಧ್ಯಕ್ಷ ಅರ್ಜುನ ರಾಠೋಡ ಮನವಿ ಪತ್ರ ಸಲ್ಲಿಸಿದ್ದಾರೆ.  ವಿಜಯಪುರಕ್ಕೆ ಭೇಟಿ ನೀಡಿದ್ದ ಸಚಿವ ಸತೀಶ ಜಾರಕಿಹೊಳಿ ಅವರನ್ನು ಭೇಟಿ ಮಾಡಿದ ಅರ್ಜುನ ರಾಠೋಡ, ಕಳೆದ ಹಲವಾರು ವರ್ಷಗಳಿಂದ ಕಾಂಗ್ರೆಸ್ ಪಕ್ಷಕ್ಕೆ ನಿಷ್ಠೆಯಿಂದ ಕೆಲಸ ಮಾಡುತ್ತಿದ್ದೇನೆ.  ಈವರೆಗೆ ನಡೆದ ಎಲ್ಲ ವಿಧಾನ ಸಭೆ ಮತ್ತು ವಿಧಾನ ಪರಿಷತ ಮತ್ತು ಲೋಕಸಭೆ ಚುನಾವಣೆಯಲ್ಲಿ ಪಕ್ಷದ ಅಭ್ಯರ್ಥಿಗಳ ಗೆಲುವಿಗಾಗಿ ಶ್ರಮಿಸಿದ್ದೇನೆ.  ಅಷ್ಟೇ ಅಲ್ಲ, ಪಕ್ಷದ […]

ವೀರಶೈವ ಮಹಾಸಭೆ ಬಿ ಎಸ್ ವೈ ಅಂದರೆ ಭೀಮಣ್ಣ, ಶಾಮನೂರು, ಯಡಿಯೂರಪ್ಪ ಆಗಿದೆ- ಕೊರೊನಾ ಸಂದರ್ಭದಲ್ಲಿ ರೂ 40000 ಕೋ. ಭ್ರಷ್ಟಾಚಾರ ನಡೆದಿದೆ- ಯತ್ನಾಳ ಆರೋಪ

ವಿಜಯಪುರ: ಅಖಿಲ ಭಾರತ ವೀರಶೈವ ಮಹಾಸಭೆ ಬಿ ಎಸ್ ವೈ ಅಂದರೆ ಭೀಮಣ್ಣ ಖಂಡ್ರೆ, ಶಾಮನೂರು ಶಿವಶಂಕರಪ್ಪ ಮತ್ತು ಬಿ. ಎಸ್. ಯಡಿಯೂರಪ್ಪ ಅವರ ಕುಟುಂಬದಂತಾಗಿದೆ ಎಂದು ಶಾಸಕ ಬಸನಗೌಡ ಪಾಟೀಲ ಯತ್ನಾಳ ವಾಗ್ದಾಳಿ ನಡೆಸಿದ್ದಾರೆ. ವಿಜಯಪುರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಬಿ. ಎಸ್. ಯಡಿಯೂರಪ್ಪ ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿ ಕಾಣಿಸಿಕೊಂಡ ಕೊರೊನಾ ಚಿಕಿತ್ಸೆ ವಿಚಾರದಲ್ಲಿ ರೂ. 40 ಸಾವಿರ ಕೋಟಿ ಭ್ರಷ್ಟಾಚಾರ ನಡೆದಿದೆ ಎಂದು ಗಂಭೀರ ಆರೋಪ ಮಾಡಿದರು. ವೀರಶೈವ ಮಹಾಸಭೆ ಮಹಾಧಿವೇಶನ ವಿಚಾರ ದಾವಣಗೆರೆಯಲ್ಲಿ […]

ರಾಜ್ಯದ ಎಲ್ಲಡೆ ಮಾದಿಗ ಮುನ್ನಡೆ ಸಮಾವೇಶ- ಕಾಂಗ್ರೆಸ್ ವಿರುದ್ಧ ಮಾಜಿ ಡಿಸಿಎಂ ಗೋವಿಂದ ಕಾರಜೋಳ

ವಿಜಯಪುರ: ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು, ಮಾದಿಗರಿಗೆ ಮಿಸಲಾತಿ ಕೊಡಿಸುವ ಮತ್ತು ಸಾಮಾಜಿಕ ನ್ಯಾಯ ಕೊಡಿಸುವ ಹೋರಾಟದಲ್ಲಿ ನಾನು ನಿಮ್ಮ ಜೊತೆಗಿದ್ದೇನೆ ಎಂದು ನಮ್ಮನ್ನು ಅಪ್ಪಿಕೊಂಡಿದ್ದಾರೆ.  ಆದರೆ, ಕಾಂಗ್ರೆಸ್ ಮುಖ್ಯಮಂತ್ರಿ ನೀವು ನಮ್ಮವರು ಎಂದು ಮಾದಿಗರನ್ನು ಎಂದಿಗೂ ಅಪ್ಪಿಕೊಂಡು ಮಾತನಾಡಿಲ್ಲ ಎಂದು ಮಾಜಿ ಡಿಸಿಎಂ ಗೋವಿಂದ ಕಾರಜೋಳ ಪರೋಕ್ಷವಾಗಿ ಸಿದ್ದರಾಮಯ್ಯ ಅವರನ್ನು ಟೀಕಿಸಿದ್ದಾರೆ.  ನಗರದ ಅಥಣಿ ರಸ್ತೆಯ ಇಟಗಿ ಪೆಟ್ರೋಲ್ ಪಂಪ್ ಬಳಿ ಇರುವ ಸಾಯಿ ಗಾರ್ಡನ್‌ನಲ್ಲಿ ನಡೆದ ರಾಜ್ಯದ ಎಲ್ಲಡೆ ಮಾದಿಗ ಮುನ್ನಡೆ ಸಮಾವೇಶದಲ್ಲಿ […]