ಜಮೀರ್ ಅಹ್ಮದ್ ಜೊತೆಗುಡಿ ಹಾದಿ ಬಿಟ್ಟಿದ್ದಾರೆ- ಕಾಶಿ ಮಥುರಾ ದೇವಸ್ಥಾನಗಳೂ ನಮ್ಮ ಪಾಲಾಗಲಿವೆ- ಶಾಸಕ ಯತ್ನಾಳ ವಾಗ್ದಾಳಿ
ವಿಜಯಪುರ: ಸಿಎಂ ಎಸ್. ಸಿದ್ಧರಾಮಯ್ಯ ಅವರು ಜಮೀರ್ ಅಹ್ಮದ್ ಜೊತೆಗೂಡಿ ಹಾದಿ ಬಿಟ್ಟಿದ್ದಾರೆ ಎಂದು ಶಾಸಕ ಬಸನಗೌಡ ಪಾಟೀಲ ಯತ್ನಾಳ ವಾಗ್ದಾಳಿ ನಡೆಸಿದ್ದಾರೆ. ಅಯೋಧ್ಯೆಯಲ್ಲಿ ರಾಮ ಮಂದಿರ ಉದ್ಘಾಟನೆ ಹಿನ್ನೆಲೆ ವಿಜಯಪುರ ನಗರದಲ್ಲಿ ಅಯೋಧ್ಯೆಯ ಮಂತ್ರಾಕ್ಷತೆ ಕಳಸದ ಭವ್ಯ ಮೆರವಣಿಗೆ ನಡೆಯಿತು. ಈ ಮೆರವಣಿಗೆಯಲ್ಲಿ ಪಾಲ್ಗೊಂಡ ಬಳಿಕ ಅವರು ಮಾಧ್ಯಮ ಪ್ರತಿನಿಧಿಗಳ ಗಳ ಜೊತೆ ಮಾತನಾಡಿದರು. ಸಿಎಂ ಸಿದ್ದರಾಮಯ್ಯ ಮತ್ತು ಸಚಿವ ಜಮೀರ್ ಅಹ್ಮದ್ ಖಾನ್ ಐಷಾರಾಮಿ ವಿಮಾನದಲ್ಲಿ ಪ್ರಯಾಣ ವಿಚಾರ ಕುರಿತು ಕೇಳಲಾದ ಪ್ರಶ್ನೆಗೆ ಉತ್ತರಿಸಿದ […]
ಪ್ರತಿಪಕ್ಷದ ನಾಯಕ ರಾಜ್ಯಾಧ್ಯಕ್ಷನ ರೀತಿಯಲ್ಲಿ ಅಧಿವೇಶನದಲ್ಲಿ ಸಮರ್ಥವಾಗಿ ಮಾತನಾಡಿದ್ದೇನೆ ಎಂದು ಕಾಂಗ್ರೆಸ್ಸಿಗರು ಹೇಳುತ್ತಿದ್ದಾರೆ- ಯತ್ನಾಳ
ವಿಜಯಪುರ: ಬೆಳಗಾವಿ ಅಧಿವೇಶನದಲ್ಲಿ ಪ್ರತಿಪಕ್ಷದ ನಾಯಕ, ಅಧ್ಯಕ್ಷನಾಗಿ ಮಾಡಬೇಕಾದ ಕೆಲಸವನ್ನು ನಾನು ಸಮರ್ಥವಾಗಿ ನಿಭಾಯಿಸಿದ್ದೇನೆ. ಇದನ್ನು ಕಾಂಗ್ರೆಸ್ ಮುಖಂಡರೇ ಹೇಳುತ್ತಿದ್ದಾರೆ. ಈ ಮೂಲಕ ನಾನು ಉತ್ತರ ಕರ್ನಾಟಕದ ನಾಯಕರೂ ಸಮರ್ಥವಾಗಿ ಕೆಲಸ ಮಾಡುತ್ತಾರೆ ಎಂಬುದನ್ನು ತೋರಿಸಿದ್ದೇನೆ ಎಂದು ಶಾಸಕ ಬಸನಗೌಡ ಪಾಟೀಲ ಯತ್ನಾಳ ಹೇಳಿದ್ದಾರೆ. ನಗರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಬೆಳಗಾವಿ ಅಧಿವೇಶನದಲ್ಲಿ ಉತ್ತರ ಕರ್ನಾಟಕದ ಸಮಸ್ಯೆಗಳ ಕುರಿತು ಚರ್ಚೆ ನಡೆದಿರುವುದು ಸಮಾಧಾನ ತಂದಿದೆ. ಮೂರು ದಿನಗಳ ಕಾಲ ನಡೆದ ಸುದೀರ್ಘ ಚರ್ಚೆಯ ಬಳಿಕ ಮುಖ್ಯಮಂತ್ರಿ […]
ಓಡಿಶಾ ಕಾಂಗ್ರೆಸ್ ಸಂಸದರ ಧೀರಜ ಸಾಹು ಬಂಧಿಸಲು ಆಗ್ರಹ- ವಿಜಯಪುರದಲ್ಲಿ ಬಿಜೆಪಿ ಪ್ರತಿಭಟನೆ
ವಿಜಯಪುರ: ಒಡಿಶಾದ ಕಾಂಗ್ರೆಸ್ ಸಂಸದ ಧೀರಜ ಸಾಹು ಅವರ ಮನೆಯಲ್ಲಿ ರೂ. 300 ಕೋ. ಗೂ ಹೆಚ್ಚು ನಗದು ಹಣ ಪತ್ತೆಯಾಗಿದ್ದು, ಕೂಡಲೇ ಭ್ರಷ್ಟ ಸಂಸದರನ್ನು ಬಂಧಿಸಬೇಕು ಎಂದು ಆಗ್ರಹಿಸಿ ಬಿಜೆಪಿ ವತಿಯಿಂದ ನಗರದಲ್ಲಿ ಪ್ರತಿಭಟನೆ ನಡೆಸಲಾಯಿತು. ನಗರದ ಶ್ರೀ ಸಿದ್ದೇಶ್ಶ್ವರ ದೇವಾಸ್ಥಾನದ ಎದುರು ನಡೆದ ಪ್ರತಿಭಟನೆಯಲ್ಲಿ ಮಾತನಾಡಿದ ಬಿಜೆಪಿ ಜಿಲ್ಲಾಧ್ಯಕ್ಷ ಆರ್. ಎಸ್. ಪಾಟೀಲ ಕೂಚಬಾಳ, ಕಾಂಗ್ರೆಸ್‌ನ ರಾಜ್ಯಸಭೆ ಸದಸ್ಯ ಧೀರಜ ಸಾಹು ಅವರ ಮನೆಯಲ್ಲಿ ಕೋಟ್ಯಂತರ ನಗದು ಪತ್ತೆಯಾಗಿದೆ. ಇದರಿಂದಾಗಿ ಕಾಂಗ್ರೆಸ್ ಪ್ರಜಾಪ್ರಭುತ್ವ ವಿರೋಧಿ, […]
ಮೂರು ರಾಜ್ಯಗಳಲ್ಲಿ ಗೆಲುವು ಹಿನ್ನೆಲೆ- ವಿಜಯಪುರದಲ್ಲಿ ಬಿಜೆಪಿ ಕಾರ್ಯಕರ್ತರಿಂದ ವಿಜಯೋತ್ಸವ
ವಿಜಯಪುರ: ಮೂರು ರಾಜ್ಯಗಳಲ್ಲಿ ಬಿಜೆಪಿ ಬಹುಮತ ಸಾಧಿಸಿದ ಹಿನ್ನೆಲೆಯಲ್ಲಿ ಪಕ್ಷದ ಕಾರ್ಯಕರ್ತರು ನಗರದಲ್ಲಿ ವಿಜಯೋತ್ಸವ ಆಚರಿಸಿದರು. ವಿಜಯಪುರ ಗ್ರಾಮದೇವತೆ ಶ್ರೀ ಸಿದ್ದೇಶ್ವರ ಗುಡಿಯ ಎದುರು ಬಿಜೆಪಿ ಜಿಲ್ಲಾಧ್ಯಕ್ಷ ಆರ್. ಎಸ್. ಪಾಟೀಲ ಕೂಚಬಾಳ ನೇತೃತ್ವದಲ್ಲಿ ಸೇರಿದ ನೂರಾರು ಬಿಜೆಪಿ ಕಾರ್ಯಕರ್ತರು ಪಟಾಕಿ ಸಿಡಿಸಿ ಪರಸ್ಪರ ಸಿಹಿ ತಿನ್ನಿಸಿ ಬಿಜೆಪಿ ಪರ ಘೋಷಣೆ ಹಾಕಿ ಸಂಭ್ರಮಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಆರ್. ಎಸ್. ಪಾಟೀಲ ಕೂಚಬಾಳ, ರಾಜಸ್ತಾನ, ಮಧ್ಯಪ್ರದೇಶ ಮತ್ತು ಛತ್ತೀಸಘಢ ರಾಜ್ಯಗಳಲ್ಲಿ ಬಿಜೆಪಿ ಭರ್ಜರಿ ಜಯ ಸಾಧಿಸಿದ್ದು, […]
ಭ್ರೂಣ ಹತ್ಯೆ, ಮಕ್ಕಳ ಮಾರಾಟದ ವಿರುದ್ಧ ಕಠಿಣ ಕ್ರಮ ಕೈಗೊಳ್ಳುತ್ತೇವೆ- ಬಿಜೆಪಿಯವರೆಲ್ಲ ಸತ್ಯ ಹರಿಶ್ಚಂದ್ರರಾ? ಎಂ. ಬಿ. ಪಾಟೀಲ ಪ್ರಶ್ನೆ
ವಿಜಯಪುರ: ಐಟಿ, ಇಡಿ, ಸಿಬಿಐ ತನಿಖಾ ಸಂಸ್ಥೆಗಳು ಭಾರತೀಯ ಜನತಾ ಪಕ್ಷದ ಮೋರ್ಚಾಗಳಾಗಿವೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕೆ, ಮೂಲಸೌಕರ್ಯ ಅಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಂ. ಬಿ. ಪಾಟೀಲ ಹೇಳಿದ್ದಾರೆ. ವಿಜಯಪುರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಭ್ರೂಣಹತ್ಯೆ ವಿರುದ್ಧ ಕಿಡಿ ಕಾರಿದರು. ಅಲ್ಲದೇ, ನಿಗಮ, ಮಂಡಳಿ ಆಯ್ಕೆ ವಿಚಾರ ಸಿಎಂ, ಡಿಸಿಎಂ, ಕೆಪಿಸಿಸಿ ಉಸ್ತುವಾರಿ ನೋಡಿಕೊಳ್ಳಲಿದ್ದಾರೆ ಎಂದು ತಿಳಿಸಿದರು. ಬಿಜೆಪಿಯವರು ಐಟಿ, ಇಡಿ, ಸಿಬಿಐ ಯನ್ನು ತಮ್ಮ ಅನುಕೂಲಕ್ಕೆ ತಕ್ಕಂತೆ ಬಳಸುತ್ತಿದ್ದಾರೆ. ಆ […]
ಶಾಸಕಾಂಗ ಸಭೆಯಲ್ಲಿ ನಾನಷ್ಟೇ ಅಲ್ಲ, ಹಲವಾರು ಶಾಸಕರು ಬಿ. ಆರ್. ಪಾಟೀಲರ ಮಾತಿಗೆ ಸಹಮತ ವ್ಯಕ್ತಪಡಿಸಿದ್ದಾರೆ- ಯಶವಂತರಾಯಗೌಡ ಪಾಟೀಲ
ವಿಜಯಪುರ: ನಾನು ಆಳಂದ ಶಾಸಕ ಬಿ. ಆರ್. ಪಾಟೀಲ ಜೊತೆ ಮಾತನಾಡಿಲ್ಲ. ನನಗೆ ಆ ವಿಷಯ ಗೊತ್ತೂ ಇಲ್ಲ. ನಾನು ಎರಡ್ಮೂರು ದಿನಗಳಿಂದ ಮತಕ್ಷೇತ್ರದಲ್ಲಿ ಇರಲಿಲ್ಲ. ತಿಳಿದುಕೊಂಡು ಹೇಳುತ್ತೇನೆ ಎಂದು ಶಾಸಕ ಬಿ. ಆರ್. ಪಾಟೀಲ ಅವರ ಪತ್ರದ ಕುರಿತು ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ ಸ್ಪಷ್ಟಪಡಿಸಿದ್ದರೆ. ವಿಜಯಪುರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಶಾಸಕಾಂಗ ಪಕ್ಷದ ಸಭೆಯಲ್ಲಿ ಮತ್ತು ವಿಧಾನ ಸಭೆಯಲ್ಲಿ ಈ ವಿಷಯ ಪ್ರಸ್ತಾಪವಾಗಿತ್ತು. ನಾನು ಓರ್ವ ಹಿರಿಯ ಶಾಸಕರು ವ್ಯಕ್ತಪಡಿಸಿರುವ ಆತಂಕಗಳ ಹಿನ್ನೆಲೆಯಲ್ಲಿ […]
ಶಾಸಕ ಬಿ. ಆರ್. ಪಾಟೀಲ ಅವರ ಪತ್ರದ ಕುರಿತು ಮುಖ್ಯಮಂತ್ರಿಗಳು ಕ್ರಮ ಕೈಗೊಳ್ಳುತ್ತಾರೆ- ಸಚಿವ ಕೃಷ್ಣ ಭೈರೇಗೌಡ
ವಿಜಯಪುರ: ಕಲಬುರಗಿ ಜಿಲ್ಲೆಯ ಆಳಂದ ಕಾಂಗ್ರೆಸ್ ಶಾಸಕ ಬಿ. ಆರ್. ಪಾಟೀಲ ಅವರು ತಮ್ಮ ವಿರುದ್ಧ ಬರೆದಿರುವ ಪತ್ರದ ಕುರಿತು ಮುಖ್ಯಮಂತ್ರಿಗಳೇ ತೀರ್ಮಾನ ಕೈಗೊಳ್ಳುತ್ತಾರೆ ಎಂದು ಕಂದಾಯ ಸಚಿವ ಕೃಷ್ಠ ಭೈರೇಗೌಡ ತಿಳಿಸಿದ್ದಾರೆ. ವಿಜಯಪುರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಶಾಸಕ ಬಿ. ಆರ್. ಪಾಟೀಲ ಅವರು ಮುಖ್ಯಮಂತ್ರಿಗೆ ಪತ್ರ ಬರೆದ ವಿಚಾರ ಕುರಿತು ತೀಕ್ಷ್ಣವಾಗಿ ಪ್ರತಿಕ್ರಿಯೆ ನೀಡಿದರು. ಶಾಸಕರು ಸಿಎಂ ಗೆ ಪತ್ರ ಬರೆದಿದ್ದಾರೆ. ಈ ಪತ್ರದ ಬಗ್ಗೆ ಮುಖ್ಯಮಂತ್ರಿಗಳು ತೀರ್ಮಾನ ತೆಗೆದುಕೊಳ್ಳುತ್ತಾರೆ. ನಾನು ಸದನದಲ್ಲಿ […]
ಲೋಕಸಭೆ ಟಿಕೆಟ್ ನನಗೆ ಸಿಗಲಿದೆ- ಹೈಕಮಾಂಡ್ ಮೇಲೆ ಸಂಪೂರ್ಣ ವಿಶ್ವಾಸವಿದೆ- ರಮೇಶ ಜಿಗಜಿಣಗಿ
ವಿಜಯಪುರ: ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಈ ಬಾರಿಯೂ ನನಗೇ ಟಿಕೆಟ್ ಸಿಗುತ್ತದೆ ಎಂಬ ಸಂಪೂರ್ಣ ವಿಶ್ವಾಸವಿದೆ ಎಂದು ಸಂಸದ ರಮೇಶ ಜಿಗಜಿಣಗಿ ಹೇಳಿದ್ದಾರೆ. ವಿಜಯಪುರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಲೋಕಸಭೆ ಚುನಾವಣೆ ವಿಷಯದಲ್ಲಿ ನಮ್ಮ ರಾಷ್ಟ್ರೀಯ ನಾಯಕರು ಯಾರಿಗೆ ಟಿಕೆಟ್ ಕೊಡುತ್ತಾರೆ ಅವರು ಅಭ್ಯರ್ಥಿಯಾಗುತ್ತಾರೆ. ನಾನೇ ಅಭ್ಯರ್ಥಿಯಾಗಬೇಕು ಎಂದು ಹಟ ಇಲ್ಲ. ಯಾರು ಗೆಲ್ಲುತ್ತಾರೆ? ಗೆಲ್ಲಲು ಸಾಧ್ಯವಿದೆ ಅದರ ಕುರಿತು ಪಕ್ಷದವರು ಯೋಚನೆ ಮಾಡಿ ಟಿಕೆಟ್ ಕೊಡುತ್ತಾರೆ ಎಂಬ ಸಂಪೂರ್ಣ ವಿಶ್ವಾಸ ನನಗಿದೆ. ಪಕ್ಷದವರು ನನಗೇ […]
ಡಿಸಿಎಂ ಕೇಸ್ ನಲ್ಲಿ ಸರಕಾರ ಕಾನೂನು ಪ್ರಕಾರ ಕ್ರಮ ಕೈಗೊಂಡಿದೆ- ಕೇಂದ್ರದಿಂದ ತನಿಖಾ ಸಂಸ್ಥೆಗಳ ದುರ್ಬಳಕೆಯಾಗುತ್ತಿದೆ- ಎಂ. ಬಿ. ಪಾಟೀಲ
ವಿಜಯಪುರ: ರಾಜ್ಯ ಸಚಿವ ಸಂಪುಟ ಕಾನೂನು ಪ್ರಕಾರವೇ ಡಿಸಿಎಂ ಡಿ. ಕೆ. ಶಿವಕುಮಾರ ವಿರುದ್ಧ ಸಿಬಿಐ ತನಿಖೆಗೆ ನೀಡಿರುವ ಆದೇಶ ರದ್ದು ಪಡಿಸುವಂತೆ ಶಿಫಾರಸು ಮಾಡಿದೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕೆ, ಮೂಲಸೌಕರ್ಯ ಅಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಂ. ಬಿ. ಪಾಟೀಲ ತಿಳಿಸಿದ್ದಾರೆ. ವಿಜಯಪುರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ರಾಜ್ಯ ಸರಕಾರದ ಈ ನಿರ್ಧಾರದಿಂದ ಕಾನೂನು ಸಮರಕ್ಕೆ ಕಾರಣವಾಗಬಹುದಾ ಎಂದು ಕೇಳಲಾದ ಪ್ರಶ್ನೆಗೆ ಸಚಿವರು ತೀಕ್ಷ್ಣವಾಗಿ ಉತ್ತರಿಸಿದರು. ಸಿಬಿಐ ಈ ವಿಚಾರದಲ್ಲಿ […]
ತಾಯಿ, ದೇವರ ಸಾಕ್ಷಿಯಾಗಿ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಪರ ಕೆಲಸ ಮಾಡುತ್ತೇವೆ- ಡಿಕೆಶಿ ಸಿಬಿಐ ಪ್ರಕರಣದ ವಿರುದ್ಧ ನ್ಯಾಯಲಯಕ್ಕೆ ಮೊರೆ- ಯತ್ನಾಳ
ವಿಜಯಪುರ: ತಾಯಿ ಸಾಕ್ಷಿಯಾಗಿ, ದೇವರ ಸಾಕ್ಷಿಯಾಗಿ ಹೇಳುತ್ತಿದ್ದೇವೆ. ಮುಂಬರುವ ಲೋಕಸಭೆಯಲ್ಲಿ ಬಿಜೆಪಿ ಪರ ಕೆಲಸ ಮಾಡಿ ನರೇಂದ್ರ ಮೋದಿ ಮೂರನೇ ಬಾರಿ ಪ್ರಧಾನಿಯನ್ನಾಗಿ ಮಾಡುತ್ತೇವೆ ಎಂದು ನಗರ ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳ ಹೇಳಿದ್ದಾರೆ. ವಿಜಯಪುರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಬಿಜೆಪಿ ರಾಜ್ಯಾಧ್ಯಕ್ಷ ಆಯ್ಕೆ ವಿಚಾರದ ಹಿನ್ನೆಲೆಯಲ್ಲಿ ತಮ್ಮ ಮುಂದಿನ ನಿರ್ಧಾರವೇನು ಎಂದು ಪತ್ರಕರ್ತರು ಕೇಳಿದ ಪ್ರಶ್ನೆಗೆ ಅವರು ಉತ್ತರಿಸಿದರು. ಭಾರತ ಮತ್ತೋಂದು ಇಸ್ರೆಲ್ ಆಗಬಾರದು ನಾನು, ಶಾಸಕರಾದ ಸುನೀಲಕುಮಾರ, ರಮೇಶ ಜಾರಕಿಹೊಳಿ, ಅರವಿಂದ […]