ಕಟೀಲ ಬರ ಅಧ್ಯಯನ ಬದಲು ಬಿಜೆಪಿ ಪ್ರತಿಪಕ್ಷದ ನಾಯಕನ ಆಯ್ಕೆ ಅಧ್ಯಯನ ನಡೆಸಲಿ- ಸುನೀಲಗೌಡ ಪಾಟೀಲ

ವಿಜಯಪುರ: ಬಿಜೆಪಿ ರಾಜ್ಯಾದ್ಯಕ್ಷ ನಳೀನ ಕುಮಾರ ಕಟೀಲ ಬರ ಅಧ್ಯಯನ ನಡೆಸುವ ಬದಲು ತಮ್ಮ ಪಕ್ಷದಲ್ಲಿ ಪ್ರತಿಪಕ್ಷದ ನಾಯಕನ ಆಯ್ಕೆಗೆ ಅಧ್ಯಯನ ನಡೆಸಲಿ ಎಂದು ಎಂ. ಎಲ್. ಸಿ. ಸುನೀಲಗೌಡ ಪಾಟೀಲ ವ್ಯಂಗ್ಯವಾಡಿದ್ದಾರೆ. ಈ ಕುರಿತು ಮಾಧ್ಯಮ ಪ್ರಕಟಣೆ ನೀಡಿರುವ ಅವರು, ಬರ ಅಧ್ಯಯನಕ್ಕೆ ತಿಕೋಟಾ ತಾಲೂಕಿಗೆ ಭೇಟಿ ನೀಡಿದ ಬಿಜೆಪಿ ರಾಜ್ಯಾಧ್ಯಕ್ಷ ನಳೀನಕುಮಾರ ಕಟೀಲ ನೇತೃತ್ವದ ತಂಡ ಜಿಲ್ಲೆಯಲ್ಲಿ ಸಚಿವ ಎಂ. ಬಿ. ಪಾಟೀಲ ಅವರು ಮಾಡಿರುವ ನೀರಾವರಿ ಯೋಜನೆಗಳನ್ನು ನೋಡಿ ಖುಷಿಪಟ್ಟಿದೆ ಎಂದು ತಿಳಿಸಿದ್ದಾರೆ. […]

ಸಿದ್ಧರಾಮಯ್ಯ ಎರಡನೇ ಬಾರಿಗೆ ಮುಖ್ಯಮಂತ್ರಿಯಾದರೂ ಆಡಳಿತ ನಡೆಸಲು ಬರುತ್ತಿಲ್ಲ- ರಾಜ್ಯಾಧ್ಯಕ್ಷ ನಳೀನ ಕುಮಾರ ಕಟೀಲ ವಾಗ್ದಾಳಿ

ವಿಜಯಪುರ: ಮುಖ್ಯಮಂತ್ರಿ ಎಸ್. ಸಿದ್ಧರಾಮಯ್ಯ ಅವರು ಎರಡು ಬಾರಿ ಸಿಎಂ ಆದರೂ ಅವರಿಗೆ ಆಡಳಿತ ನಡೆಸಲು ಬರುತ್ತಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಸಂಸದ ನಳೀನ ಕುಮಾರ ಕಟೀಲ ವಾಗ್ದಾಳಿ ನಡೆಸಿದ್ದಾರೆ. ಬಿಜೆಪಿ ಬರ ಅಧ್ಯಯನ ತಂಡದೊಂದಿಗೆ ತಿಕೋಟಾ ತಾಲೂಕಿನ ಬರಪೀಡಿದ ಜಾಲಗೇರಿ ಗ್ರಾಮಕ್ಕೆ ಭೇಟಿ ನೀಡಿದ ಅವರು, ಬರದಿಂದ ಉಂಟಾಗಿರುವ ಬೆಳೆಹಾನಿ ಕುರಿತು ರೈತರಿಂದ ಮಾಹಿತಿ ಪಡೆದರು. ಬಳಿಕ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಸಿಎಂ ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ನಡೆಸಿದರು. ಬರದ ವಿಚಾರದಲ್ಲಿ ರಾಜ್ಯದ […]

ಕೇಂದ್ರ ಬರ ಅಧ್ಯಯನ ತಂಡ ನ. 4ರಂದು ವಿಜಯಪುರ ಜಿಲ್ಲೆಗೆ ಭೇಟಿ- ಆರ್. ಎಸ್. ಪಾಟೀಲ ಕೂಚಬಾಳ

ವಿಜಯಪುರ: ಜಿಲ್ಲೆಯಲ್ಲಿ ಉಂಟಾಗಿರುವ ಬರ ಅಧ್ಯಯನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ನಳಿನಕುಮಾರ ಕಟೀಲ್‌ ನೇತೃತ್ವದ ತಂಡ ನ. 4ರಂದು ಭೇಟಿ ನೀಡಲಿದೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಆರ್‌. ಎಸ್. ಪಾಟೀಲ ಕೂಚಬಾಳ ತಿಳಿಸಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ತಂಡದಲ್ಲಿ ಸಂಸದರಾದ ರಮೇಶ ಜಿಗಜಿಣಗಿ, ಪಿ. ಸಿ. ಗದ್ದಿಗೌಡರ, ಶಾಸಕ ಬಸನಗೌಡ ಪಾಟೀಲ ಯತ್ನಾಳ, ಮಾಜಿ ಸಚಿವ ಮುರುಗೇಶ ನಿರಾಣಿ, ಮಾಜಿ ಶಾಸಕರಾದ ಪಿ. ರಾಜೀವ, ವೀರಣ್ಣ ಚರಂತಿಮಠ, ಎ. ಎಸ್‌. ಪಾಟೀಲ ನಡಹಳ್ಳಿ, ಸಿದ್ದು ಸವದಿ ಇರಲಿದ್ದಾರೆ ಎಂದು ತಿಳಿಸಿದರು. […]

ಹೆಸರು ಬದಲಾವಣೆ, ಜಿಲ್ಲೆ ವಿಭಜನೆ, ಮೆಟ್ರೋಗೆ ಹೊಸ ಹೆಸರು ಕುರಿತು ಸಚಿವ ಎಂ. ಬಿ. ಪಾಟೀಲ ಪ್ರತಿಕ್ರಿಯೆ

ವಿಜಯಪುರ: 12ನೇ ಶತಮಾನದ ಸಮಾನತೆಯ ಹರಿಕಾರ ಬಸವಣ್ಣನವರು ರಾಜ್ಯದ ಸಾಂಸ್ಕೃತಿಕ ರಾಯಭಾರಿಯನ್ನಾಗಿ ಘೋಷಿಸುವ ಕುರಿತು ಮುಖ್ಯಮಂತ್ರಿಗಳ ಜೊತೆ ಚರ್ಚಿಸುವುದಾಗಿ ಬೃಹತ್ ಮತ್ತು ಮಧ್ಯಮ ಕೈಗಾರಿಕೆ, ಮೂಲಸೌಲಭ್ಯ ಅಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಂ. ಬಿ. ಪಾಟೀಲ ತಿಳಿಸಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ವಿಜಯಪುರ ಜಿಲ್ಲೆಯ ಹೆಸರು ಬದಲಾವಣೆ ವಿಚಾರದಿಂದ ಹಿಡಿದು ಹೊಸ ಹೆಸರಿಡುವ ಕುರಿತು ಕೇಳಲಾದ ಎಲ್ಲ ಪ್ರಶ್ನೆಗಳಿಗೆ ಉತ್ತರಿಸಿದರು. ನಾನು ಜಲಸಂಪನ್ಮೂಲ ಸಚಿವನಾಗಿದ್ದಾಗ ನಮ್ಮ ಜಿಲ್ಲೆಯ ಹೆಸರು ಬಿಜಾಪುರದಿಂದ ವಿಜಯಪುರ ಎಂದು ಬದಲಾಯಿಸಲಾಗಿದೆ.  […]

ಸಿಎಂ ರನ್ನು ಕೆಳಗಿಳಿಸುವ ಹುನ್ನಾರ ನಡೆದಿದೆ- ಸರಕಾರ ತನ್ನ ತಪ್ಪಿನಿಂದ ಪತನವಾಗಲಿದೆ- ಶಾಸಕ ಯತ್ನಾಳ

ವಿಜಯಪುರ: ಮುಖ್ಯಮಂತ್ರಿ ಎಸ್. ಸಿದ್ಧರಾಮಯ್ಯ ಅವರನ್ನು ಅಧಿಕಾರದಿಂದ ಕೆಳಗಿಳಿಸುವ ಹುನ್ನಾರ ನಡೆದಿದೆ.  ಸಿಎಂ ರನ್ನು ಕೆಳಗಿಳಿಸಲು ದೆಹಲಿಯಲ್ಲಿ ಯಾರಾರನ್ನು ಭೇಟಿ ಮಾಡಿದ್ದಾರೆ ಎಂಬುದು ಗೊತ್ತಿದೆ ಎಂದು ಡಿಸಿಎಂ ಡಿ. ಕೆ. ಶಿವಕುಮಾರ ಹೆಸರು ಹೇಳದೇ ಶಾಸಕ ಬಸನಗೌಡ ಪಾಟೀಲ ಯತ್ನಾಳ ಹೊಸ ಬಾಂಬ್ ಸಿಡಿಸಿದ್ದಾರೆ. ವಿಜಯಪುರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯರನ್ನು ಕೆಳಗಿಳಿಸಲು ದೆಹಲಿಯಲ್ಲಿ ಎಲ್ಲಿಲ್ಲಿ ಓಡಾಡುತ್ತಿದ್ದಾರೆ ಎನ್ನುವ ಮಾಹಿತಿ ನಮಗೂ ಇದೆ ಎಂದು ಹೇಳಿದರು. ಚೆನ್ನಗಿರಿ ಶಾಸಕ ಡಿ. ಕೆ. ಶಿವಕುಮಾರ ಪರ 70 […]

ಕಾವೇರಿ ನೀರು ಬಿಡುಗಡೆಯಲ್ಲಿ ಪ್ರಧಾನಿ ಮಧ್ಯಸ್ಥಿಕೆ ವಹಿಸಲಿ- ಕರ್ನಾಟಕದಿಂದಲೇ ಬಿಜೆಪಿ ಹಿನ್ನೆಡೆ ಪ್ರಾರಂಭವಾಗಿದೆ- ಎಚ್. ಕೆ. ಪಾಟೀಲ

ವಿಜಯಪುರ: ಕಾವೇರಿ ಜಲವಿವಾದ ಸೇರಿದಂತೆ ಅಂತಾರಾಜ್ಯ ಸಮಸ್ಯೆಗಳನ್ನು ಬಗೆಹರಿಸಲು ಕೇಂದ್ರಕ್ಕೆ ಕಾಜಳಿ ಇಲ್ಲ ಎಂದು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಎಚ್. ಕೆ. ಪಾಟೀಲ ವಾಗ್ದಾಳಿ ನಡೆಸಿದ್ದಾರೆ. ನಗರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಕೇಂದ್ರ ಸರಕಾರದ ಅತ್ಯಂತ ನಿರ್ಲಕ್ಷ್ಯ ನೀತಿ, ಸಮಸ್ಯೆಗಳನ್ನು ಬಗೆಹರಿಸಬೇಕು ಎಂಬ ಯಾವುದೇ ರೀತಿಯ ಕಳಕಳಿ, ಕಾಳಜಿ, ಆತುರ ಎಲ್ಲಿಯೂ ಕಾಣುತ್ತಿಲ್ಲ ಎಂದು ಆರೋಪಿಸಿದರು. ಕರ್ನಾಟಕದಲ್ಲಿ 215ಕ್ಕೂ ಹೆಚ್ಚು ತಾಲೂಕುಗಳು ಬರಪೀಡಿತವಾಗಿವೆ ಎಂದು ರಾಜ್ಯ ಸರಕಾರ ಘೋಷಣೆ ಮಾಡಲಾಗಿದೆ.  ಕೇಂದ್ರ ಸರಕಾರದ […]

ಕಾವೇರಿ ವಿಚಾರದಲ್ಲಿ ಕಾನೂನು ಹೋರಾಟ ಮಾಡಬೇಕು- ಕಾಂಗ್ರೆಸ್ಸಿನಲ್ಲಿ ಎಲ್ಲರೂ ಒಗ್ಗಟ್ಟಾಗಿದ್ದೇವೆ- ಸಚಿವ ಸತೀಶ ಜಾರಕಿಹೊಳಿ

ವಿಜಯಪುರ: ಕಾವೇರಿ ನದಿ ನೀರು ಹಂಚಿಕೆ ವಿಚಾರದಲ್ಲಿ ಕಾನೂನು ಹೋರಾಟ ಮಾಡಬೇಕು.  ಕಾಂಗ್ರೆಸ್ಸಿಗರು ಒಗ್ಗಟ್ಟಾಗಿದ್ದಾರೆ ಎಂದು ಲೋಕೋಪಯೋಗಿ ಸಚಿವ ಸತೀಶ ಜಾರಕಿಹೊಳಿ ಹೇಳಿದ್ದಾರೆ. ವಿಜಯಪುರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಮಳೆಯ ಕೊರತೆಯ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಬರ ಎದುರಾಗಿದೆ.  ಈಗಾಗಲೇ ನಮ್ಮ ರಾಜ್ಯ ಬಹಳ ಸಂಕಷ್ಟದಲ್ಲಿದೆ.  ಕಾವೇರಿ ಭಾಗದ ರೈತರೂ ಕಷ್ಟದಲ್ಲಿದ್ದಾರೆ.  ಹೀಗಾಗಿ ಕಾವೇರಿ ನೀರು ಬಿಡುಗಡೆ ಮಾಡಬೇಕಾದ ಸನ್ನಿವೇಶ ಎದುರಾಗಿದೆ.  ನಮ್ಮ ಸರಕಾರ ಇದನ್ನು ಹೇಗೆ ನಿಭಾಯಿಸುತ್ತದೆ ಎಂಬುದನ್ನು ಕಾದು ನೋಡಬೇಕಿದೆ ಎಂದು ಹೇಳಿದರು. ಒಂದು […]

ವಿಜಯಪುರ ಮೇಯರ್, ಉಪಮೇಯರ್ ಚುನಾವಣೆ ಮುಂದೂಡಿಕೆ- ಸಂಜಯ ಶೆಟ್ಟೆಣ್ಣವರ

ವಿಜಯಪುರ: ಇದೇ ತಿಂಗಳು 30 ನಡೆಯಬೇಕಿದ್ದ ಮೇಯರ್ ಮತ್ತು ಉಪಮೇಯರ್ ಚುನಾವಣೆಯನ್ನು ಮುಂದೂಡಲಾಗಿದೆ. ಎರಡೂ ಸ್ಥಾನಗಳಿಗೆ ನಿಗದಿಯಾಗಿದ್ದ ಮೀಸಲಾತಿಯನ್ನು ಪ್ರಶ್ನಿಸಿ ಕಲಬುರಗಿ ಹೈಕೋರ್ಟ್ ನಲ್ಲಿ ರಿಟ್ ಅರ್ಜಿಯನ್ನು ಸಲ್ಲಿಸಲಾಗಿತ್ತು.  ಈ ಅರ್ಜಿಯ ವಿಚಾರಣೆ ನಡೆಸಿದ ಹೈಕೋರ್ಟ್ ಮುಂದಿನ ವಿಚಾರಣೆಯನ್ನು ಅಕ್ಟೋಬರ್ 30ಕ್ಕೆ ಮುಂದೂಡಿದೆ.  ಈ ಅರ್ಜಿಯ ವಿಚಾರಣೆ ಅ.30 ರಂದು ನಡೆಯಲಿದೆ.  ಹೀಗಾಗಿ  ಅಲ್ಲಿಯವರೆಗೆ ಚುನಾವಣೆ ನಡೆಸದಂತೆ ಹೈಕೋರ್ಟ್ ಸೂಚನೆ ನೀಡಿದೆ.  ಈ ಹಿನ್ನೆಲೆಯಲ್ಲಿ ಅ. 30 ರಂದು ನಡೆಯಬೇಕಿದ್ದಮೇ ಯರ್ ಮತ್ತು ಉಪಮೇಯರ್ ಚುನಾವಣೆಯನ್ನು ಮುಂದೂಡಲಾಗಿದೆ […]

ವಿಜಯಪುರ ಡಿಸಿಸಿ ಬ್ಯಾಂಕ್ ಅಧ್ಯಕ್ಷರಾಗಿ ಶಿವಾನಂದ ಪಾಟೀಲ, ಉಪಾಧ್ಯಕ್ಷರಾಗಿ ರಾಜಶೇಖರ ಗುಡದಿನ್ನಿ ಅವಿರೋಧವಾಗಿ ಪುನರಾಯ್ಕೆ

ವಿಜಯಪುರ: ರಾಜ್ಯದ ಪ್ರತಿಷ್ಠಿತ ವಿಜಯಪುರ ಜಿಲ್ಲಾ ‌ಕೇಂದ್ರ ಸಹಕಾರಿ ಬ್ಯಾಂಕಿನ ನೂತನ ಅಧ್ಯಕ್ಷರಾಗಿ ಸಚಿವ ಶಿವಾನಂದ ಎಸ್. ಪಾಟೀಲ ಮತ್ತು ಉಪಾಧ್ಯಕ್ಷರಾಗಿ ರಾಜಶೇಖರ ಬಿ. ಗುಡದಿನ್ನಿ ಪುನರಾಯ್ಕೆಯಾಗಿದ್ದಾರೆ. 2023 ರಿಂದ 2028ರ ವರೆಗೆ‌ ಐದು ವರ್ಷಗಳ ಅವಧಿಗಾಗಿ ನಡೆದ ಚುನಾವಣೆಯಲ್ಲಿ ಜವಳಿ, ಕಬ್ಬು, ಸಕ್ಕರೆ ಅಭಿವೃದ್ಧಿ ಮತ್ತು ಎ.ಪಿಎಂ.ಸಿ ಸಚಿವ ಶಿವಾನಂದ ಎಸ್. ಪಾಟೀಲ ಮತ್ತು ಉಪಾಧ್ಯಕ್ಷರಾಗಿ ರಾಜಶೇಖರ ಬಿ. ಗುಡದಿನ್ನಿ ಅವಿರೋಧವಾಗಿ ಆಯ್ಕೆಯಾದರು. ಶಿವಾನಂದ ಎಸ್. ಪಾಟೀಲ ಅವರು 1997 ರಿಂದ 2023ರ ವರೆಗೆ ಸತತವಾಗಿ […]

ಕರ್ನಾಟಕದಲ್ಲಿ ಬಿಜೆಪಿಗೆ ಭವಿಷ್ಯವಿಲ್ಲ- ವಿಧಾನ ಸಭೆ ಚುನಾವಣೆ ಸೋಲಿನಿಂದ ಮೋದಿ, ಶಾ ಚೇತರಿಸಿಕೊಂಡಿಲ್ಲ- ಎಂ. ಬಿ. ಪಾಟೀಲ

ವಿಜಯಪುರ: ರಾಜ್ಯದಲ್ಲಿ‌ ಬಿಜೆಪಿ ಚೇತರಿಕೆ ಕಾಣುವುದಿಲ್ಲ. ಹೀಗಾಗಿ ಆ ಪಕ್ಷದ ಹೈಕಮಾಂಡ್ ಇನ್ನೂ ಪ್ರತಿಪಕ್ಷದ ನಾಯಕನನ್ನು ಆಯ್ಕೆ ಮಾಡುತ್ತಿಲ್ಲ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕೆ, ಮೂಲಸೌಲಭ್ಯ ಅಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಂ. ಬಿ. ಪಾಟೀಲ ತಿಳಿಸಿದ್ದಾರೆ. ವಿಜಯಪುರದಲ್ಲಿ ಜಿಲ್ಲಾ ಮಹಿಳಾ ಕಾಂಗ್ರೆಸ್ ಕಟ್ಟಡಕ್ಕೆ ಭೂಮಿಪೂಜೆ ನೆರವೇರಿಸಿ ಅವರು ಮಾತನಾಡಿದರು. ರಾಜ್ಯದಲ್ಲಿ ಬಿಜೆಪಿ ಪರಿಸ್ಥಿತಿ ಸಂಪೂರ್ಣವಾಗಿ ಹದಗೆಟ್ಟು ಹೋಗಿದೆ. ಅದು ಮುಳುಗುತ್ತಿರುವ ಹಡಗು ಅಲ್ಲ. ಈಗಾಗಲೇ ಮುಳುಗಿ ಹೋಗಿರುವ ಹಡಗು. ಹೀಗಾಗಿ ಈ ಪಕ್ಷಕ್ಕೆ […]