ಅಹಿಂದ ಹೆಸರಿನಲ್ಲಿ ಆಡಳಿತ ನಡೆಸುತ್ತಿರುವ ಸರಕಾರ ದಲಿತ ವಿರೋಧಿಯಾಗಿದೆ- ಗೋಪಾಲ ಘಟಕಾಂಬಳೆ

ವಿಜಯಪುರ: ಅಹಿಂದ ಹೆಸರು ಹೇಳಿಕೊಂಡು ಆಡಳಿತ ನಡೆಸುತ್ತಿರುವ ರಾಜ್ಯ ಸರಕಾರ ದಲಿತರ ವಿರೋಧಿಯಾಗಿದೆ ಎಂದು ಬಿಜೆಪಿ ಎಸ್ಸಿ ಮೋರ್ಚಾ ರಾಜ್ಯ ಉಪಾಧ್ಯಕ್ಷ ಗೋಪಾಲ ಘಟಕಾಂಬಳೆ ಆರೋಪಿಸಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ವಾಲ್ಮೀಕಿ ನಿಗಮದಲ್ಲಿ ರೂ. 187 ಕೋ. ಹಗರಣ ಮಾಡಿದ್ದಾರೆ.  ಈ ಹಗರಣದಲ್ಲಿ ಸಚಿವರ ತಲೆದಂಡವಾಗಿದ್ದು, ಅನೇಕರನ್ನು ಬಂಧಿಸಲಾಗಿದೆ.  ಅಹಿಂದ ನಾಯಕರು ಎಂದು ಬಿಂಬಿಸಿ ದಲಿತರಿಗೆ ಕಾಂಗ್ರೆಸ್ ವಂಚಿಸುತ್ತಿದ್ದು, ಕೈ ಪಕ್ಷ ದಲಿತರ ವಿರೋಧಿಯಾಗಿದೆ ಎಂದು ಆರೋಪಿಸಿದರು. ರಾಜ್ಯ ಸರಕಾರ ಆಡಳಿತಕ್ಕೆ ಬಂದಮೇಲೆ ಭ್ರಷ್ಟಾಚಾರ ತಾಂಡವಾಡುತ್ತಿದೆ.  […]

ರಾಜ್ಯ ಸರಕಾರದಿಂದ ಸಹಕಾರ ಸಂಘಗಳ ವಿರುದ್ಧ ಕಾನೂನು ಜಾರಿಗೆ ಯತ್ನ- ಸಂಜಯ ಪಾಟೀಲ ಕನಮಡಿ ಆರೋಪ

ವಿಜಯಪುರ: ರಾಜ್ಯ ಸರಕಾರ ಸಹಕಾರ ಸಂಘಗಳ ವಿರುದ್ಧ ಕಾನೂನು ತರಲು ಹೊರಟಿದೆ ಎಂದು ಬಿಜೆಪಿ ಸಹಕಾರ ಪ್ರಕೋಷ್ಠದ ರಾಜ್ಯ ಸಂಚಾಲಕ ಸಂಜಯ ಪಾಟೀಲ ಕನಮಡಿ ಆರೋಪಿಸಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕೇಂದ್ರ ಸಹಕಾರ ಸಚಿವಾಲಯ ಸ್ಥಾಪನೆ ಮೂಲಕ ಪ್ರಧಾನಿ ನರೇಂದ್ರ ಮೋದಿ ಅವರು ದೇಶದ ಎಲ್ಲ ಸಹಕಾರಿಗಳ ಒಂದು ಬಹುದಿನಗಳ ಕನಸನ್ನು ನನಸು ಮಾಡಿದ್ದಾರೆ.  ಇದರಿಂದ ದೇಶದ ಎಲ್ಲ ಸಹಕಾರ ಸಂಸ್ಥೆಗಳು, ಸದಸ್ಯರ ಮಾಹಿತಿ ಸಂಗ್ರಹಿಸಲಾಯಿತು.  ಒಟ್ಟು ಮೂರು ಹಂತದ ಬೇರೆ ಬೇರೆ ಸ್ವರೂಪಗಳನ್ನೊಳಗೊಂಡ ಸಹಕಾರಿ […]

ದಕ್ಷಿಣ ಭಾರತದಲ್ಲಿ ಸತತವಾಗಿ 7ನೇ ಬಾರಿ ಸಂಸದನಾಗಿ ಆಯ್ಕೆಯಾದರೂ ಸಚಿವ ಸ್ಥಾನ ನೀಡಿಲ್ಲ- ದಲಿತರು ಬಿಜೆಪಿಗೆ ಮತ ಹಾಕಿಲ್ವಾ? ರಮೇಶ ಜಿಗಜಿಣಗಿ ಬೇಸರದ ನುಡಿ

ವಿಜಯಪುರ: ದಕ್ಷಿಣ ಭಾರತದಲ್ಲಿ ಸತತ ಏಳನೇ ಬಾರಿ ದಲಿತ ಸಮುದಾಯದಿಂದ ಸಂಸದನಾಗಿ ಆಯ್ಕೆಯಾಗಿದ್ದರೂ ಕೇಂದ್ರದಲ್ಲಿ ನನಗೆ ಸಚಿವ ಸ್ಥಾನ ನೀಡದಿರುವುದು ನೋವು ತಂದಿದೆ ಎಂದು ಸಂಸದ ರಮೇಶ ಜಿಗಜಿಣಗಿ ಹೇಳಿದ್ದಾರೆ. ವಿಜಯಪುರದಲ್ಲಿ ಸಂಸದರ ಕಚೇರಿಯಲ್ಲಿ ಪೂಜೆ ಸಲ್ಲಿಸಿ ಮಾತನಾಡಿದ ಅವರು, ದಕ್ಷಿಣ ಭಾರತದಲ್ಲಿ ದಲಿತ ಸಮುದಾಯದಿಂದ ಸತತವಾಗಿ ಏಳು ಬಾರಿ ಸಂಸದನಾಗಿ ನಾನೊಬ್ಬನೇ ಆಯ್ಕೆಯಾಗಿದ್ದೇನೆ.  ಹೀಗಿದ್ದರೂ ಸಚಿವ ಸ್ಥಾನಗಳನ್ನು ಮೇಲ್ವರ್ಗದವರಿಗೆ ನೀಡಿದ್ದಾರೆ ಎಂದು ಅಸಮಾಧಾನ ವ್ಯಕ್ತಪಡಿಸಿದರು. ನನಗೆ ಮಂತ್ರಿಗಿರಿ ಅವಶ್ಯಕತೆ ಇಲ್ಲ.  ನನಗೆ ಜನ ಅವಶ್ಯವಾಗಿದ್ದಾರೆ.  ಸಚಿವನಾಗಬೇಕು […]

ಶಾಸಕ ಯತ್ನಾಳ ವಕ್ಫ್ ಬಗ್ಗೆ ತಿಳಿದುಕೊಂಡು‌ ಮಾತನಾಡಲಿ- ಎಸ್. ಎಂ. ಪಾಟೀಲ ಗಣಿಹಾರ

ವಿಜಯಪುರ: ಶಾಸಕ ಬಸನಗೌಡ ಪಾಟೀಲ ಯತ್ನಾಳ ವಕ್ಫ್ ಬಗ್ಗೆ ತಿಳಿದುಕೊಂಡು‌ ಮಾತನಾಡಲಿ ಎಂದು ಕೆಪಿಸಿಸಿ ವಕ್ತಾರ ಎಸ್. ಎಂ. ಪಾಟೀಲ ಗಣಿಹಾರ ಹೇಳಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಇತ್ರೀಚೆಗೆ ಬಿಜೆಪಿ ನಡೆಸಿದ ಪ್ರತಿಭಟನೆ ಸಂದರ್ಭದಲ್ಲಿ ಯತ್ನಾಳ‌ ಅವರು ವಕ್ಫ್ ಕಾನೂನು ರದ್ದುಪಡಿಸಲು‌ ಪ್ರಧಾನಿಗೆ ಪತ್ರ ಬರೆಯುವಿದಾಗಿ ಹೇಳಿದ್ದಾರೆ. ಆದರೆ, ಸ್ವಾತಂತ್ರ್ಯ ಪೂರ್ವದಲ್ಲಿಯೇ ವಕ್ಫ್ ಕಾನೂನು ಇದೆ. ಮುಜರಾಯಿಯಂತೆ ವಕ್ಫ್ ನಲ್ಲೂ ಇದೆ. ಮುಸ್ಲಿಂ ಸಮಾಜಕ್ಕೆ ಸೇರಿದ ವ್ಯಕ್ತಿಗಳು, ವಸ್ತು ಅಥವಾ ಆಸ್ತಿಯನ್ನು ಅಲ್ಲಾ(ದೇವರು)ನ ಹೆಸರು ಮೇಲೆ […]

ಸಿಎಂ ಬದಲಾವಣೆ ಅಪ್ರಸ್ತುತ- ಅವರು ಆರೋಗ್ಯದಿಂದ, ಸಮರ್ಥವಾಗಿ ಆಡಳಿತ ನಡೆಸುತ್ತಿದ್ದಾರೆ- ದಿನೇಶ ಗುಂಡೂರಾವ

ವಿಜಯಪುರ: ರಾಜ್ಯದಲ್ಲಿ ಸಿಎಂ ಬದಲಾವಣೆ ಪ್ರಶ್ನೆಯೇ ಇಲ್ಲ.  ಈ ಕುರಿತು ಚರ್ಚೆಯೂ ನಡೆಯುತ್ತಿಲ್ಲ.  ವಿಷಯ ಈಗ ಅಪ್ರಸ್ತುತವಾಗಿದೆ ಎಂದು ಆರೋಗ್ಯ ಸಚಿವ ದಿನೇಶ ಗುಂಡೂರಾವ ಹೇಳಿದ್ದಾರೆ. ವಿಜಯಪುರ ನಗರದಲ್ಲಿ ಜಿಲ್ಲಾಸ್ಪತ್ರೆಯಲ್ಲಿರುವ ಶ್ರೀ ಪುಟ್ಟರಾಜ ಗವಾಯಿ ಟ್ರಾಮಾ ಸೆಂಟರ್ ಅಸ್ಥಿ ಚಿಕಿತ್ಸಾ ಕೇಂದ್ರಕ್ಕೆ ಭೇಟಿದ ಬಳಿಕ ಅವರು ತಮ್ಮನ್ನು ಭೇಟಿಯಾದ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದರು. ಸದ್ಯ ರಾಜ್ಯದಲ್ಲಿ ಸಿಎಂ ಬದಲಾವಣೆ ಇಲ್ಲ.  ಈ ಬಗ್ಗೆ ಯಾವ ಚರ್ಚೆಯೂ ನಡೆಯುತ್ತಿಲ್ಲ.  ಸಿಎಂ ಬದಲಾವಣೆ ವಿಚಾರ ಈಗ ಅಪ್ರಸ್ತುತವಾಗಿದೆ.  ಉಳಿದವರು ಏನೇ […]

ಚುನಾವಣೆಲ್ಲಿ ಪಕ್ಷವಿರೋಧಿ ಚಟುವಟಿಕೆ- ಬಿಜೆಪಿ ಸತ್ಯಶೋಧನೆ ಸಮಿತಿ ರಚಿಸಬೇಕು- ಶಾಸಕ ಯತ್ನಾಳ

ವಿಜಯಪುರ: ಲೋಕಸಭೆ ಚುನಾವಣೆಯಲ್ಲಿ ದೊಡ್ಡ ಜವಾಬ್ದಾರಿ ಹೊತ್ತವರು ಪಕ್ಷವಿರೋಧಿ ಚಟುವಟಿಕೆ ನಡೆಸಿರುವ ಕುರಿತು ತನಿಖೆ ನಡೆಸಲು ಸತ್ಯಶೋಧನೆ ಸಮಿತಿ ರಚಿಸಬೇಕು ಎಂದು ವಿಜಯಪುರ ನಗರ ಶಾಸಕ ಬಸನಗೌಡ ಪಾಟೀಲ ಯತ್ನಾಳ ಆಗ್ರಹಿಸಿದ್ದಾರೆ. ವಿಜಯಪುರದಲ್ಲಿ ತಮ್ಮನ್ನು ಭೇಟಿಯಾದ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಇತ್ತೀಚೆಗೆ ನಡೆದ ಲೋಕಸಭೆ ಚುನಾವಣೆಯಲ್ಲಿ ಕೆಲವು ಕ್ಷೇತ್ರಗಳಲ್ಲಿ ಬಿಜೆಪಿ ಅಭ್ಯರ್ಥಿಗಳು ಸೋತಿದ್ದಾರೆ.  ದಾವಣಗೆರೆ ಲೋಕಸಭೆ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಸೋಲಿಗೆ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಅವರೇ ಕಾರಣ ಎಂದು ಹರಿಹರ ಶಾಸಕ ಹರೀಶ ಮಾಡಿರುವ […]

ವಕ್ಫ್ ಆಸ್ತಿ ಯಾರಪ್ಪಂದೂ ಅಲ್ಲ- ಮುಸ್ಲಿಂ ಸಮುದಾಯದ ಅಭಿವೃದ್ಧಿಗೆ ದಾನಿಗಳು ನೀಡಿದ ಆಸ್ತಿಯದು- ಸಚಿವ ಜಮೀರ್ ಅಹ್ಮದ್ ಖಾನ್

ವಿಜಯಪುರ: ವಕ್ಫ್ ಆಸ್ತಿ ಯಾರಪ್ಪಂದೂ ಆಸ್ತಿ ಅಲ್ಲ ಎಂದು ಸಚಿವ ಜಮೀರ್ ಅಹ್ಮದ್ ಖಾನ್ ಹೇಳಿದ್ದಾರೆ.  ನಗರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, 12 ಲಕ್ಷ ಎಕರೆ ವಕ್ಫ್ ಆಸ್ತಿಯನ್ನು ದೇಶದ ಬಡವರಿಗೆ ಹಂಚಿಕೆ ಮಾಡಬೇಕು ಎಂದು ಶಾಸಕ ಯತ್ನಾಳ ನೀಡಿರುವ ಹೇಳಿಕೆಯ ಕುರಿತು ಕೇಳಲಾದ ಪ್ರಶ್ನೆಗೆ ಉತ್ತರಿಸಿದರು. ದೇಶದಲ್ಲಿ ಸುಮಾರು 12 ಲಕ್ಷ ಎಕರೆ ಜಮೀನು ವಕ್ಪ್ ಆಸ್ತಿಯಿದೆ.  ಅದನ್ನು ಬಡವರ ಕೆಲಸಕ್ಕೆ ಉಪಯೋಗಿಸಬೇಕು ಎಂದು ವಿಜಯಪುರ ನಗರ ಶಾಸಕ ಬಸನಗೌಡ ಪಾಟೀಲ ಯತ್ನಾಳ ನೀಡಿರುವ […]

ದೇಶದ ವಕ್ಫ್ ಆಸ್ತಿ ಬಡವರಿಗೆ ಹೋಗಬೇಕು- ಪ್ರಧಾನಿಗೆ ಪತ್ರ ಬರೆಯುತ್ತೇನೆ- ಶಾಸಕ ಯತ್ನಾಳ

ವಿಜಯಪುರ: ದೇಶದ ವಕ್ಫ ಆಸ್ತಿ ಬಡವರಿಗೆ ಹೋಗಬೇಕು.  ವಿಜಯಪುರದಲ್ಲಿರು ವಕ್ಪ ಅಪ್ ಆಸ್ತಿ ಕುರಿತು ಹೈಕೋರ್ಟಿಗೆ ಹೋಗುತ್ತೇನೆ ಎಂದು ಶಾಸಕ ಬಸನಗೌಡ ಪಾಟೀಲ ಯತ್ನಾಳ ಹೇಳಿದ್ದಾರೆ. ವಿಜಯಪುರದಲ್ಲಿ ಬಿಜೆಪಿ ಆಯೋಜಿಸಲಾಗಿದ್ದ ತೈಲ ಬೆಲೆ ಹೆಚ್ಚಳ ವಿರೋಧಿ ಪ್ರತಿಭಟನೆಯಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. ದೇಶದಲ್ಲಿ 12 ಲಕ್ಷ ಎಕರೆ ಜಮೀನು ವಕ್ಪ್ ಆಸ್ತಿ ಇದೆ.  ಇದನ್ನು‌ ಮಾಜಿ ಪ್ರಧಾನಿ ದಿ. ಜವಾಹರಲಾಲ ನೆಹರು ಮಾಡಿದ್ದಾರೆ.  ವಕ್ಪನವರು ಇದು ನಮ್ಮ ಆಸ್ತಿ ಎಂದರೆ ನ್ಯಾಯಾಲಯಕ್ಕೆ ಹೋಗಲಾಗಲ್ಲ.  ವಿಶೇಷ ನ್ಯಾಯಾಲಯಕ್ಕೆ ಹೋಗಬೇಕು.  […]

ಬಿಎಸ್‌ವೈ, ವಿಜಯೇಂದ್ರ ಜೊತೆ ಹೊಂದಾಣಕೆ ವಿಚಾರ- ನಾನು ಬಿಜೆಪಿ ರಾಜ್ಯಾಧ್ಯಕ್ಷ ನಾಗುವುದಾಗಿ ಹೇಳಿದ್ದೇನೆ- ಯತ್ನಾಳ

ವಿಜಯಪುರ: ಬಿ. ವೈ. ವಿಜಯೇಂದ್ರ ಮತ್ತು ತಮ್ಮ ಮಧ್ಯೆ ಹೊಂದಾಣಿಕೆ ಮಾಡಿಸಲು ಪ್ರಯತ್ನಗಳು ನಡೆಯುತ್ತಿವೆ.  ನಾನು ಬಿಜೆಪಿ ರಾಜ್ಯಾಧ್ಯಕ್ಷನಾಗುವುದಾಗಿ ಹೇಳಿದ್ದೇನೆ ಎಂದು ವಿಜಯಪುರ ನಗರ ಶಾಸಕ ಬಸನಗೌಡ ಪಾಟೀಲ ಯತ್ನಾಳ ಹೇಳಿದ್ದಾರೆ. ನಗರದಲ್ಲಿ ವಿಶ್ವ ಯೋಗದ ದಿನದ ಅಂಗವಾಗಿ ಜಿಲ್ಲಾ ಕ್ರೀಡಾಂಗಣದಲ್ಲಿ ಆಯೋಜಿಸಿದ್ದಾ ಕಾರ್ಯಕ್ರಮದಲ್ಲಿ ಪಾಲ್ಗೊಂಡ ಬಳಿಕ ತಮ್ಮನ್ನು ಭೇಟಿಯಾದ ಮಾಧ್ಯಮ ಪ್ರತನಿಧಿಗಳೊಂದಿಗೆ ಅವರು ಮಾತನಾಡಿದರು. ಇತ್ತೀಚೆಗೆ ಬಿಜೆಪಿ ಶಾಸಕ ಎನ್. ರವಿಕುಮಾರ ಮತ್ತೀತರು ವಿಜಯಪುರದಲ್ಲಿ ಶಾಸಕ ಯತ್ನಾಳ ಭೇಟಿಯಾಗಿದ್ದರು.  ಈ ಸಂದರ್ಭದಲ್ಲಿ ಬಿ. ವೈ. ವಿಜಯೇಂದ್ರ […]

ಕಾಂಗ್ರೆಸ್ ಶಾಸಕರು ಇನ್ನೊಂದು ತಿಂಗಳಲ್ಲಿ ಬಂಡಾಯವೇಳಲಿದ್ದಾರೆ- ಕೇಂದ್ರದಲ್ಲಿ ಬಿಜೆಪಿ ಸಂಸದರ ಸಂಖ್ಯೆ 272ಕ್ಕೇರಲಿದೆ- ಶಾಸಕ ಯತ್ನಾಳ

ವಿಜಯಪುರ: ಇನ್ನೊಂದು ತಿಂಗಳಲ್ಲಿ ಅನುದಾನ ವಿಚಾರದಲ್ಲಿ ಕಾಂಗ್ರೆಸ್ ಶಾಸಕರೇ ಬಂಡಾಯವೇಳಲಿದ್ದಾರೆ.  ಕೇಂದ್ರದಲ್ಲಿ ಬಿಜೆಪಿ ಸಂಸದರ ಸಂಖ್ಯೆ 272 ಆಗಲಿದೆ ಎಂದು ವಿಜಯಪುjರ ನಗರ ಶಾಸಕ ಬಸನಗೌಡ ಪಾಟೀಲ ಯತ್ನಾಳ ಭವಿಷ್ಯ ನುಡಿದಿದ್ದಾರೆ. ವಿಜಯಪುರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಗ್ಯಾರಂಟಿ ಯೋಜನೆಗಳು ವಿಫಲವಾಗಿವೆ.  ಗ್ಯಾರಂಟಿ‌ ಯೋಜನೆಗಳ ಮಧ್ಯೆಯೂ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಹೆಚ್ಚು ಸ್ಥಾನ ಗಳಿಸಿದೆ.  ಜನರು‌ ಗ್ಯಾರಂಟಿ ಬಗ್ಗೆ ಬೇಸತ್ತಿದ್ದಾರೆ ಎಂದು ಹೇಳಿದರು. ರಾಜ್ಯದಲ್ಲಿ ಗ್ಯಾರಂಟಿ ಯೋಜನೆಗಳು ವಿಫಲವಾಗಿವೆ.  ಎಲ್ಲದರ ಬೆಲೆ ಏರಿಕೆ ಮಾಡುತ್ತಿದ್ದಾರೆ.  […]