ಗೃಹಲಕ್ಷ್ಮಿ ಯೋಜನೆಗೆ ಹೆದರಿ ಕೇಂದ್ರ ಸರಕಾರ ಅಡುಗೆ ಅನಿಲ ಬೆಲೆ ಇಳಿಕೆ ಮಾಡಿದೆ- ಸಚಿವ ಎಂ. ಬಿ. ಪಾಟೀಲ

ವಿಜಯಪುರ: ನಮ್ಮ ಗೃಹಲಕ್ಷ್ಮಿ ಯೋಜನೆಗೆ ಅಂಜಿ (ಹೆದರಿ) ಕೇಂದ್ರ ಸರಕಾರ ಅಡುಗೆ ಅನೀಲ ಸಿಲಿಂಡರ್ ಬೆಲೆಯನ್ನು ಇಳಿಸಿದೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕೆ, ಮೂಲಸೌಲಭ್ಯ ಅಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಂ. ಬಿ. ಪಾಟೀಲ ತಿಳಿಸಿದ್ದಾರೆ. ವಿಜಯಪುರದಲ್ಲಿ ಗೃಹಲಕ್ಷ್ಮಿ ಯೋಜನೆ ಅನುಷ್ಠಾನ ಉದ್ಗಾಟಿಸಿದ ಬಳಿಕ ಮಾಧ್ಯಮ ಪ್ರತಿನಿಧಿಗಳೊಂದಿಗೆ ಅವರು ಮಾತನಾಡಿದರು. ಕರ್ನಾಟಕದಲ್ಲಿರುವ ಐದು ಗ್ಯಾರಂಟಿ ಯೋಜನೆಗಳನ್ನು ನಾಳೆ ದೇಶಾದ್ಯಂತ ಮಾಡುವುದಾಗಿ ನಮ್ಮ ಮಲ್ಲಿಕಾರ್ಜುನ ಖರ್ಗೆ ಅವರು ಹೇಳಿದ್ದಾರೆ.  ರಾಷ್ಚ್ರಾದ್ಯಂತ ಅನೇಕ ರಾಜ್ಯಗಳಲ್ಲಿ ಚುನಾವಣೆಗಳು ಬರಲಿವೆ.  […]

ರಾಜ್ಯ ಸರಕಾರದ ಡೇಂಜರ್ ಕೆಲಸದ ಸುದ್ದಿ 2 ದಿನಗಳಲ್ಲಿ ಹೊರಬರಲಿದೆ- ವಿಜಯಪುರದಿಂದ ಖರ್ಗೆ ಸೇರಿದಂತೆ ಯಾರೇ ಸ್ಪರ್ಧಿಸಿದರು ಪರಿಣಾಮ ಬೀರದು- ರಮೇಶ ಜಿಗಜಿಣಗಿ

ವಿಜಯಪುರ: ರಾಜ್ಯದಲ್ಲಿ ಕಾಂಗ್ರೆಸ್ಸಿನವರು ಇನ್ನೊಂದು ಡೇಂಜರಸ್ ಕೆಲಸ ಮಾಡುತ್ತಿದ್ದು, ಇನ್ನೆರಡು ದಿನಗಳಲ್ಲಿ ಅದು ಹೊರ ಬೀಳಲಿದೆ ಎಂದು ಲೋಕಸಭೆ ಬಿಜೆಪಿ ಸಂಸದ ರಮೇಶ ಜಿಗಜಿಣಗಿ ಹೊಸ ಬಾಂಬ್ ಸಿಡಿಸಿದ್ದಾರೆ. ವಿಜಯಪುರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಗ್ಯಾರಂಟಿ ಯೋಜನೆಗಳಿಗಾಗಿ ಜನರಿಗೆ ಪುಕ್ಸಟ್ಟೆ ಹಣ ನೀಡಲು ದಲಿತರ ಕರ್ಯಾಣಕ್ಕಾಗಿ ಮೀಸಲಿಟ್ಟಿದ್ದ ಎಸ್. ಇ. ಪಿ. ಟಿ. ಎಸ್. ಪಿ ಹಣವನ್ನೂ ಕಸಿದುಕೊಂಡಿದ್ದಾರೆ.  ಇವರು ಮಾಡುತ್ತಿರುವ ಡೇಂಜರಸ್ ಕೆಲಸದ ಬಗ್ಗೆ ಇನ್ನೆರಡು ದಿನಗಳಲ್ಲಿ ಎಲ್ಲವೂ ಹೊರ ಬೀಳಲಿದೆ ಎಂದು ಹೇಳಿದರು. ರಾಜ್ಯ […]

ಏಳೆಂಟು ತಿಂಗಳಲ್ಲಿ ರಾಜ್ಯ ಸರಕಾರ ಪತನ- ಬಿಜೆಪಿ ಮತ್ತೆ ಅಧಿಕಾರಕ್ಕೆ ಬರಲಿದೆ- ಬಸನಗೌಡ ಪಾಟೀಲ ಯತ್ನಾಳ

ವಿಜಯಪುರ: ಏಳೆಂಟು ತಿಂಗಳಲ್ಲಿ ರಾಜ್ಯ ಸರಕಾರ ಪತನವಾಗಲಿದೆ ಎಂದು ಶಾಸಕ ಬಸನಗೌಡ ಪಾಟೀಲ ಯತ್ನಾಳ ಭವಿಷ್ಯ ನುಡಿದಿದ್ದಾರೆ. ವಿಜಯಪುರ ನಗರದಲ್ಲಿಬ ವಿಧಾನಸಭೆ ಚುನಾವಣೆಯಲ್ಲಿ ಗೆಲುವಿನ ಬಳಿಕ ಕಾರ್ಯಕರ್ತರಿಗೆ ಅಭಿನಂದನೆ ಮತ್ತು ಔತಣಕೂಟ ಸಭೆಯಲ್ಲಿ ಅವರು ಮಾತನಾಡಿದರು. ರಾಜ್ಯ ವಿಧಾನಸಭೆ ಚುನಾವಣೆಯಲ್ಲಿ ಹಲವಾರು ಕಾರಣಗಳಿಂದ ಬಿಜೆಪಿಗೆ ಸೋಲಾಯಿತು. ಅನೇಕ‌ ತಪ್ಪು ನಿರ್ಣಯಗಳು, ಕಾಂಗ್ರೆಸ್ ಗ್ಯಾರಂಟಿ ಯೋಜನೆಗಳ ಘೋಷಣೆ, ಬಿಜೆಪಿ ಸರಕಾರದಲ್ಲಿ ಕೆಲವು ಸಚಿವರು ಮಾಡಿದ ಭ್ರಷ್ಟಾಚಾರ, ಬಿಜೆಪಿ ಸರಕಾರದಲ್ಲಿ ಹಿಂದುತ್ವ ನಿರ್ಲಕ್ಷ್ಯ ಮಾಡಲಾಯಿತು. ಈ ಎಲ್ಲ ವಿಚಾರಗಳಿಂದ ಚುನಾವಣೆಯಲ್ಲಿ […]

ಬಿಜೆಪಿ ಅವಧಿಯಲ್ಲಿ ಟೆಂಡರ್ ಗಾತ್ರ ಹೆಚ್ಚಿಸಿರುವ ಕುರಿತು ಸಮಗ್ರ ತನಿಖೆಯಾಗಬೇಕು- ಎಸ್. ಎಂ. ಪಾಟೀಲ ಗಣಿಹಾರ

ವಿಜಯಪುರ: ರಾಜ್ಯದಲ್ಲಿ ಬಿಜೆಪಿ ಸರಕಾರ ಅಧಿಕಾರದಲ್ಲಿದ್ದಾಗ ಟೆಂಡರ್ ಗಾತ್ರ ಹಚ್ಚಿಸಿರುವ ಕುರಿತು ಸಮಗ್ರ ತನಿಖೆಯಾಗಬೇಕು ಎಂದು ಅಹಿಂದ ಮತ್ತು ಕಾಂಗ್ರೆಸ್ ಮುಖಂಡ ಎಸ್. ಎಂ. ಪಾಟೀಲ ಗಣಿಹಾರ ಆಗ್ರಹಿಸಿದ್ದಾರೆ. ವಿಜಯಪುರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬಿಜೆಪಿ ಸರಕಾರದ ಅವಧಿಯಲ್ಲಿ 40 ಪರ್ಸೆಂಟ್ ಕಮಿಷನ್ ಭಾಗವಾಗಿ ನಾನಾ ಟೆಂಡರ್ ಗಳ ಅಂದಾಜು ವೆಚ್ಚವನ್ನು ಹೆಚ್ಚಿಸಲಾಗಿದೆ.  ಈ ಹೆಚ್ಚಳಕ್ಕೆ ಏನು ಕಾರಣ? ಯಾವ ದರಕ್ಕೆ ಗುತ್ತಿಗೆ ನೀಡಲಾಗಿದೆ? ಸೇರಿದಂತೆ ಎಲ್ಲ ಅಂಶಗಳ ಕುರಿತು ಸಮಗ್ರ ತನಿಖೆಯಾಗಬೇಕು ಎಂದು ಹೇಳಿದರು. ಬಿಜೆಪಿ […]

ಬವಸ ನಾಡಿನಲ್ಲಿ ಇನ್ನು ಮುಂದೆ ಮೀಟ್ ಯುವರ್ ಮಿನಿಸ್ಟರ್ ಕ್ರಾರ್ಯಕ್ರಮ

ವಿಜಯಪುರ: ಜಿಲ್ಲೆಯ ಜನತೆಯ ಅಹವಾಲು ಆಲಿಸಲು ಬೃಹತ್ ಮತ್ತು ಮಧ್ಯಮ ಕೈಗಾರಿಕೆ, ಮೂಲಸೌಲಭ್ಯ ಅಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಂ. ಬಿ. ಪಾಟೀಲ ವಿನೂತನ ಕಾರ್ಯಕ್ರಮ ನಡೆಸಲು ನಿರ್ಧರಿಸಿದ್ದಾರೆ. ಜಲನಾಯಕ ಎಂ. ಬಿ. ಪಾಟೀಲ ಅವರು ಸಾರ್ವಜನಿಕರ ಸಮಸ್ಯೆ ಆಲಿಸಲು ಈಗ ಹೊಸದೊಂದು ಯೋಜನೆ ರೂಪಿಸಿದ್ದು, ಅದರಂತೆ ಈಗ ಜಿಲ್ಲೆಯ ಜನತೆಗಾಗಿ ಪ್ರತಿ ತಿಂಗಳು ಜಿಲ್ಲಾ ಮಟ್ಟದ ನಿಮ್ಮ ಮಂತ್ರಿ ಭೇಟಿ ಮಾಡಿ(ಮೀಟ್ ಯುವರ್ ಮಿನಿಸ್ಟರ್) ಕಾರ್ಯಕ್ರಮ ನಡೆಸಲಿದ್ದಾರೆ. ವಿಜಯಪುರ ಜಿಲ್ಲೆಯ ಜನತೆಗಾಗಿ ವಿಶೇಷ ಜಿಲ್ಲಾ […]

ಬಸವನಾಡಿನ ಶಾಸಕರೊಂದಿಗೆ ಸಿಎಂ ಸಭೆ- ಜಿಲ್ಲೆಯ ಸಚಿವರು, ಶಾಸಕರು ಭಾಗಿ

ಬೆಂಗಳೂರು: ವಿಜಯಪುರ ಜಿಲ್ಲೆಯ ಸಚಿವರು ಮತ್ತು ಶಾಸಕರುಗಳ ಜೊತೆಗೆ ಮುಖ್ಯಮಂತ್ರಿ ಎಸ್. ಸಿದ್ಧರಾಮಯ್ಯ ತಮ್ಮ ಗೃಹ ಕಚೇರಿ ಕೃಷ್ಣಾದಲ್ಲಿ ಸಭೆ ನಡೆಸಿದರು.  ಸಚಿವರು ಮತ್ತು ಶಾಸಕರ ಕ್ಷೇತ್ರಗಳ ಅಭಿವೃದ್ಧಿ, ಅನುದಾನ ಹಂಚಿಕೆ ಮತ್ತು ಲೋಕಸಭೆ ಚುನಾವಣೆ ಸಿದ್ದತೆ ಕುರಿತು ಚರ್ಚಿಸಿದರು. ಈ ಸಂದರ್ಭದಲ್ಲಿ ಡಿಸಿಎಂ ಡಿ. ಕೆ. ಶಿವಕುಮಾರ, ವಿಜಯಪುರ ಜಿಲ್ಲಾ ಉಸ್ತುವಾರಿ ಸಚಿವ ಎಂ. ಬಿ. ಪಾಟೀಲ, ಜವಳಿ, ಸಕ್ಕರೆ ಮತ್ತು ಎಂಪಿಎಸಿ ಸಚಿವ ಶಿವಾನಂದ ಪಾಟೀಲ, ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ, ಮುದ್ದೇಬಿಹಾಳ ಶಾಸಕ […]

ಸಚಿವ ಶಿವಾನಂದ ಪಾಟೀಲ ಸೇರಿ ಹಲವು ಮಂತ್ರಿಗಳು ದೆಹಲಿಗೆ- ಯಾಕೆ ಗೊತ್ತಾ?

ವಿಜಯಪುರ: ಹೈಕಮಾಂಡ್ ನಿಂದ ಬುಲಾವ್ ಬಂದಿರುವ ಹಿನ್ನೆಲೆಯಲ್ಲಿ ಕೆಲವು ಸಚಿವರು ದೆಹಲಿಗೆ ತೆರಳುತ್ತಿದ್ದೇವೆ ಎಂದು ಜವಳಿ ಮತ್ತು ಸಕ್ಕರೆ ಹಾಗೂ ಎಪಿಎಂಸಿ ಸಚಿವ ಶಿವಾನಂದ ಎಸ್. ಪಾಟೀಲ ತಿಳಿಸಿದ್ದಾರೆ. ವಿಜಯಪುರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಸಚಿವ ಸಂಪುಟ ರಚನೆಯಾದ ಮೇಲೆ ಬಹಳಷ್ಟು ಸಚಿವರು ವರಿಷ್ಠರನ್ನು ಭೇಟಿ ಮಾಡಿಲ್ಲ ಈ ಹಿನ್ನೆಲೆಯಲ್ಲಿ ಕರೆದಿದ್ದಾರೆ ಎಂದು ತಿಳಿಸಿದರು. ಮಂತ್ರಿ ಮಂಡಳ ರಚನೆಯಾದ ಮೇಲೆ ಅಧಿವೇಶನ, ಕಾರ್ಯಕ್ರಮ ನಡೆದ ಹಿನ್ನೆಲೆಯಲ್ಲಿ ಸಾಧ್ಯವಾಗಿಲ್ಲ.  ಬೆಂಗಳೂರಿಗೆ ಬಂದಾಗ ನಮ್ಮನ್ನು ಭೇಟಿ ಮಾಡಬೇಕು ಎಂಬುದು […]

ಅಪರಾಧಿಗಳು ಯಾವುದೇ ಜಾತಿ, ಧರ್ಮ, ಪಕ್ಷದವರಿದ್ದರೂ ಶಿಕ್ಷೆಯಾಗಬೇಕು- ನಿರಪರಾಧಿಗಳಿಗೆ ಅನ್ಯಾಯವಾಗಬಾರದು- ಎಂ. ಬಿ. ಪಾಟೀಲ

ವಿಜಯಪುರ: ಕೆಜೆ ಹಳ್ಳಿ ಮತ್ತು ಡಿಜೆ ಹಳ್ಳಿ ಗಲಭೆ ಪ್ರಕರಣಗಳ ಕುರಿತು ಶಾಸಕ ತನ್ವೀರ್ ಸೇಠ ಗೃಹ ಸಚಿವ ಡಾ. ಜಿ. ಪರಮೇಶ್ವರ ಅವರಿಗೆ ಪತ್ರ ಬರೆದಿರುವುದು ತಪ್ಪಲ್ಲ.  ಅದೊಂದು ಸಹಜ ಪ್ರಕ್ರಿಯೆಯಾಗಿದೆ.  ಆ ಪತ್ರದ ಬಗ್ಗೆ ನನಗೆ ಹೆಚ್ಚಿನ ಮಾಹಿತಿ ಇಲ್ಲ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕೆ, ಮೂಲಸೌಲಭ್ಯ ಅಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಂ. ಬಿ. ಪಾಟೀಲ ಹೇಳಿದ್ದಾರೆ. ವಿಜಯಪುರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಇದು ರೊಟೀನ್ ಮ್ಯಾಟರ್.  ತನ್ವಿರ್ […]

ಸರಕಾರ ಬೀಳಿಸುವುದು ಹಗಲು ಕನಸು- ಬೆಂಗಳೂರು ಗ್ರಾಮೀಣ ಭಾಗಕ್ಕೆ ಮುಂಬೈ, ಕೊಲ್ಕೊತ್ತಾ ಮಾದರಿಯಲ್ಲಿ ರೇಲ್ವೆ ಸೇವೆಗೆ ಯೋಜನೆ- ಎಂ ಬಿ ಪಾಟೀಲ

ವಿಜಯಪುರ: ಸರಕಾರ ಪತನ ಹಗಲು ಕನಸು.  ನಾವೆಲ್ಲ 136 ಜನ ಒಗ್ಗಟ್ಟಿನಿಂದ ಇದ್ದೇವೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕೆ, ಮೂಲಸೌಲಭ್ಯ ಅಭಿವೃದ್ಧಿ ಹಾಗೂ ವಿಜಯಪುರ ಜಿಲ್ಲಾ ಉಸ್ತುವಾರಿ ಸಚಿವ ಎಂ. ಬಿ. ಪಾಟೀಲ ಹೇಳಿದ್ದಾರೆ. ವಿಜಯಪುರ ಜಿಲ್ಲೆಯ ಕನ್ನೂರಿನಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ರಾಜ್ಯ ಸರಕಾರ ಕೆಡವಲು ಸಿಂಗಾಪುರದಲ್ಲಿ ಷಡ್ಯಂತ್ರ ನಡೆಯುತ್ತಿದೆ ಎಂದು ಡಿಸಿಎಂ ಡಿ. ಕೆ. ಶಿವಕುಮಾರ ನೀಡಿರುವ ಹೇಳಿಕೆಯ ಕುರಿತು ಮಾಧ್ಯಮ ಪ್ರತಿನಿಧಿಗಳು ಕೇಳಿದ ಪ್ರಶ್ನೆಗೆ ಉತ್ತರಿಸಿದರು. ನಾವು 136 ಶಾಸಕರು […]

ರಾಜ್ಯ ಸರಕಾರದಿಂದ ಸರ್ವಾಧಿಕಾರಿ ಧೋರಣೆ ಆರೋಪ- ಗುಮ್ಮಟ ನಗರಿಯಲ್ಲಿ ಬಿಜೆಪಿಯಿಂದ ಹಲಗೆ ಬಾರಿಸಿ ಪ್ರತಿಭಟನೆ

ವಿಜಯಪುರ: ಕಾಂಗ್ರೆಸ್ ಸರಕಾರ ಸರ್ವಾಧಿಕಾರಿ ಧೋರಣೆ ಅನುಸರಿಸುತ್ತಿದೆ ಎಂದು ಆರೋಪಿಸಿ ಬಿಜೆಪಿ ಕಾರ್ಯಕರ್ತರು ನಗರದಲ್ಲಿ ಪ್ರತಿಭಟನೆ ನಡೆಸಿದರು. ವಿಧಾನಸಭೆ ಅಧಿವೇಶನದಲ್ಲಿ ಮಾರ್ಷಲ್‌ ಗಳು ದೌರ್ಜನ್ಯ ಎಸಗಿದ್ದಾರೆ.  ಅಲ್ಲದೇ, ಕಾಂಗ್ರೆಸ್ ಸರಕಾರದ ಸಂವಿಧಾನ ವಿರೋಧಿ ಧೋರಣೆ ಅನುಸರಿಸುವ ಮೂಲಕ 10 ಶಾಸಕರನ್ನು ಅಮಾನತು ಮಾಡಿದೆ.  ಸಭಾಧ್ಯಕ್ಷರ ಈ ನಡೆ ಅಸಂವಿಧಾನಿಕವಾಗಿದೆ.  ಅಲ್ಲದೇ, ಹಿರಿಯ ಶಾಸಕರೆಂಬ ಕಾಳಜಿಯೂ ಇಲ್ಲದೆ ವಿಜಯಪುರ ನಗರ ಶಾಸಕ ಬಸನಗೌಡ ಪಾಟೀಲ ಯತ್ನಾಳ ಅವರನ್ನು ಎಳೆದಾಡಿ ಅಪಮಾನ ಮಾಡಲಾಗಿದೆ ಎಂದು ಆರೋಪಿಸಿ ಬಿಜೆಪಿ ಪ್ರತಿಭಟನೆ ನಡೆಸಿತು.  […]