ನನ್ನ ವಿರುದ್ಧ ಬೇನಾಮಿ ಮೊಬೈಲ್ ನಂಬರ ಬಳಸಿ ಅಪಪ್ರಚಾರ- ಇದಾವುದೂ ಪರಿಣಾಮ ಬೀರಲ್ಲ- ರಮೇಶ ಜಿಗಜಿಣಗಿ

ವಿಜಯಪುರ: ಕೈಲಾಗದವರು ಮೈ ಪರಚಿಕೊಂಡರು ಎಂಬಂತೆ ಕೆಲವು ದುಷ್ಠರು ನನ್ನ ವಿರುದ್ಧ ಅನಾಮಿಕ ಮೊಬೈಲ್ ನಂಬರ್ ಗಳನ್ನು ಬಳಸಿ ಅಪಪ್ರಚಾರ ಮಾಡುತ್ತಿದ್ದು, ಅವರ ವಿರುದ್ಧ ದೂರು ನೀಡಲು ಕ್ರಮ ಕೈಗೊಂಡಿರುವುದಾಗಿ ಸಂಸದ ರಮೇಶ ಜಿಗಜಿಣಗಿ ತಿಳಿಸಿದ್ದಾರೆ. ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ಅವರು, ಕೆಲವು ಮೊಬೈಲ್ ನಂಬರುಗಳಿಂದ ಜಿಲ್ಲೆಯಲ್ಲಿ ಪಂಚಾಯಿತಿ ಸದಸ್ಯರು ಮತ್ತು ಸ್ಥಳೀಯ ಜನಪ್ರತಿನಿಧಿಗಳಿಗೆ ಕರೆ ಮಾಡುತ್ತಿದ್ದಾರೆ.  ಅಲ್ಲದೇ, ನನ್ನ ಬಗ್ಗೆ ರಾಜಕೀಯ ಷಡ್ಯಂತ್ರ ರೂಪಿಸುತ್ತಿದ್ದಾರೆ. ನೇರವಾಗಿ ನನ್ನನ್ನು ಎದುರಿಸಲು ಹಿಂಜರಿಯುತ್ತಿರುವ ದುರುಳರು ನಡೆಸುತ್ತಿರುವ […]

ಯತ್ನಾಳ‌ ಅಸ್ವಸ್ಥ- ಸಿಎಂ, ಸ್ಪೀಕರ, ಬೊಮ್ಮಾಯಿ, ಬಿ ಎಸ್ ವೈ ಆಸ್ತತ್ರೆಗೆ ಭೇಟಿ- ಆರಾಮವಾಗಿರುವೆ ಎಂದ ಶಾಸಕ

ಬೆಂಗಳೂರು: ಅಧಿವೇಶನ‌ ಸಂದರ್ಭದಲ್ಲಿ ಉಂಟಾದ ಗದ್ದಲದಲ್ಲಿ ಅಸ್ವಸ್ಥರಾದ ವಿಜಯಪುರ ನಗರ ಶಾಸಕ‌ ಬಸನಗೌಡ ಪಾಟೀಲ ಯತ್ನಾಳ ಬೆಂಗಳೂರಿನ ಪೋರ್ಟೀಸ್ ಆಸ್ಪತ್ರೆಗೆ ದಾಖಲಾಗಿದ್ದು, ಇದೀಗ ಚೇತರಿಸಿಕೊಳ್ಳುತ್ತಿದ್ದಾರೆ. ಈ ಮಧ್ಯೆ, ಮುಖ್ಯಮಂತ್ರಿ ಎಸ್. ಸಿದ್ಧರಾಮಯ್ಯ, ಸ್ಪೀಕರ್ ಯು. ಟಿ. ಖಾದರ, ಮಾಜಿ ಸಿಎಂ ಗಳಾದ ಬಿ. ಎಸ್. ಯಡಿಯೂರಪ್ಪ, ಬಸವರಾಜ ಬೊಮ್ಮಾಯಿ, ಮುಖಂಡರಾದ ಸಿ. ಟಿ. ರವಿ ಸೇರಿದಂತೆ ಅನೇಕ ನಾಯಕರು ಆಸ್ಪತ್ರೆಗೆ ಭೇಟಿ ನೀಡಿ ಯತ್ನಾಳ ಅವರ ಆರೋಗ್ಯ ವಿಚಾರಿಸಿದ್ದಾರೆ. ಮಧ್ಯಾಹ್ನ ವಿಧಾನ ಸಭೆ ಅಧಿವೇಶನದಲ್ಲಿ ಗದ್ದಲ ಉಂಟಾಗಿತ್ತು.  […]

ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ- ವರ್ಗಾವಣೆ ದಂಧೆ ನಡೆಯುತ್ತಿದೆ- ಆರ್. ಎಸ್. ಪಾಟೀಲ ಕೂಚಬಾಳ

ವಿಜಯಪುರ: ರಾಜ್ಯದಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಹದಗೆಟ್ಟಿದ್ದು, ವರ್ಗಾವಣೆ ದಂಧೆ ನಡೆಯುತ್ತಿದೆ ಎಂದು ವಿಜಯಪುರ ಬಿಜೆಪಿ ಜಿಲ್ಲಾಧ್ಯಕ್ಷ ಆರ್. ಎಸ್. ಪಾಟೀಲ ಕೂಚಬಾಳ ಆರೋಪಿಸಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಸುಳ್ಳು ಭರವಸೆ ನೀಡಿ ರಾಜ್ಯದಲ್ಲಿ ಅಧಿಕಾರಕ್ಕೆ ಬಂದಿದೆ ಎಂದು ಕಿಡಿಕಾರಿದರು. ಕಾಂಗ್ರೆಸ್ ಒಂದು ಕೈಯಲ್ಲಿ ಯೋಜನೆ ನೀಡಿ ಮತ್ತೊಂದು ಕಡೆಗೆ ಕಸಿದುಕೊಳ್ಳುವ ಕೆಲಸ ಮಾಡುತ್ತಿದೆ.  ನಾನಾ ಕಡೆಗಳಲ್ಲಿ ಹತ್ಯೆಗಳು ಆಗುತ್ತಿವೆ.  ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಇಲ್ಲದಂತೆ ಆಗಿದೆ.  ಜೈನ ಮುನಿಗಳ ಹತ್ಯೆ ಪ್ರಕರಣದ ತನಿಖೆಯನ್ನು […]

ರಾಹುಲ ಗಾಂಧಿ ವಿರುದ್ಧ ಕೇಂದ್ರ ಸರಕಾರ ದ್ವೇಷ ರಾಜಕಾರಣ ಆರೋಪ- ಗುಮ್ಮಟ ನಗರಿಯಲ್ಲಿ ಕಾಂಗ್ರೆಸ್ ಕಾರ್ಯಕರ್ತರಿಂದ ಮೌನ ಪ್ರತಿಭಟನೆ

ವಿಜಯಪುರ: ಪ್ರಜಾಪ್ರಭುತ್ವ ಉಳಿವಿಗಾಗಿ ದೇಶದ ಹಿತಾಸಕ್ತಿ ಕಾಪಾಡಲು ಹೋರಾಟ ನಡೆಸುತ್ತಿರುವ ಕಾಂಗ್ರೆಸ್ ನಾಯಕ ರಾಹುಲ ಗಾಂಧಿ ವಿರುದ್ಧ ಕೇಂದ್ರ ಸರಕಾರ ಸುಳ್ಳು ಆರೋಪಗಳನ್ನು ಮಾಡಿ ದ್ವೇಷ ರಾಜಕೀಯ ನಡೆಸುತ್ತಿದೆ ಎಂದು ಆರೋಪಿಸಿ ಕಾಂಗ್ರೆಸ್ ಕಾರ್ಯಕರ್ತರು ವಿಜಯಪುರ ನಗರದಲ್ಲಿ ಮೌನ ಪ್ರತಿಭಟನೆ ನಡೆಸಿದರು.  ನಗರದ ಜಿಲ್ಲಾಧಿಕಾರಿ ಕಚೇರಿ ಎದುರು ಜಿಲ್ಲಾ ಕಾಂಗ್ರೆಸ್ ವತಿಯಿಂದ ನಡೆದ ಹೋರಾಟದಲ್ಲಿ ಪಾಲ್ಗೋಂಡ ನಾನಾ ಮುಖಂಡರು ರಾಹುಲ ಗಾಂಧಿ ಅವರಿಗೆ ನೈತಿಕ ಬೆಂಬಲ ವ್ಯಕ್ತಪಡಿಸಿದರು. ಕಾಂಗ್ರೆಸ್ ಜಿಲ್ಲಾಧ್ಯಕ್ಷ ರಾಜು ಆಲಗೂರ ಮಾತನಾಡಿ, ರಾಹುಲ್ ಗಾಂಧಿ […]

ಅಭಿಮಾನಿಯ ಆಸೆ ಈಡೇರಿಸಿ ಸರಳತೆ ತೋರಿದ ಸಚಿವ ಎಂ. ಬಿ. ಪಾಟೀಲ- ಹೇಗೆ ಗೊತ್ತಾ?

ವಿಜಯಪುರ: ಬೃಹತ್ ಮತ್ತು ಮಧ್ಯಮ ಕೈಗಾರಿಕೆ, ಮೂಲಸೌಲಭ್ಯ ಅಭಿವೃದ್ಧಿ ಸಚಿವ ಎಂ. ಬಿ. ಪಾಟೀಲ ಅವರಿಗೆ ಕಾರ್ಯಕರ್ತರು ಮತ್ತು ಅಭಿಮಾನಿಗಳೆಂದರೆ ಎಲ್ಲಿಲ್ಲದ ಪ್ರೀತಿ ಮತ್ತು ಅಭಿಮಾನ.  ಬಬಲೇಶ್ವರ ತಾಲೂಕಿನ ಶೇಗುಣಸಿ ಬಳಿ ನಡೆದ ಮಧ್ಯಾಹ್ನ ನಡೆದ ಘಟನೆಯೊಂದು ಸಚಿವರ ಸರಳತೆಗೆ ಸಾಕ್ಷಿಯಾಯಿತು. ಶೇಗುಣಸಿ ಬಳಿ ಮುಳವಾಡ ಏತ ನೀರಾವರಿ ಹಂತ- 3ರಡಿ ಬರುವ ವಿತರಣೆ ಕಾಲುವೆಗಳ ನಿರ್ಮಾಣ ಕಾಮಗಾರಿಗಳಿಗೆ ಸಚಿವರು ಭೂಮಿಪೂಜೆ ನೆರವೇರಿಸುವ ಕಾರ್ಯಕ್ರಮ ನಡೆಯಿತು.  ಈ ಕಾರ್ಯಕ್ರಮ ಆರಂಭಕ್ಕೂ ಮುನ್ನ ವಾಹನವೊಂದರಲ್ಲಿ ಬಂದಿದ್ದ ಯುವಕನೊಬ್ಬ ಕಾರ್ಯಕ್ರಮ […]

ಪೆನಡ್ರೈವ್ ಬಿಡುಗಡೆ ಮಾಡಿದ ಮೇಲೆ ಉತ್ತರಿಸುತ್ತೇವೆ- ಬಿಜೆಪಿಯವರಿಗೆ ತಾಳ್ಮೆ ಇರಲಿ- ಸಚಿವ ಎಂ. ಬಿ. ಪಾಟೀಲ

ವಿಜಯಪುರ: ಜೆಡಿಎಸ್ ಮುಖಂಡ ಎಚ್. ಡಿ. ಕುಮಾರಸ್ವಾಮಿ ಅವರ ಪೆನ್‌ ಡ್ರೈವ್ ನಲ್ಲಿದೆ ಎನ್ನಲಾದ ಆಡಿಯೋ ಕುರಿತು ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಮೂಲಸೌಲಭ್ಯ ಅಭಿವೃದ್ಧಿ ಸಚಿವ ಎಂ. ಬಿ. ಪಾಟೀಲ ಖಾರವಾಗಿ ಪ್ರತಿಕ್ರಿಯೆ ನೀಡಿದ್ದಾರೆ. ವಿಜಯಪುರ ಜಿಲ್ಲೆಯ ಬಬಲೇಶ್ವರ ತಾಲೂಕಿನ‌ ಶೇಗುಣಸಿ ಬಳಿ ಮುಳವಾಡ ಏತ ನೀರಾವರಿ ಹಂತ- 3ರಡಿ ಬರುವ ವಿತರಣೆ ಕಾಲುವೆಗಳ ನಿರ್ಮಾಣ ಕಾಮಗಾರಿಗಳಿಗೆ ಭೂಮಿ ಪೂಜೆ ನೆರವೇರಿಸಿದ ಬಳಿಕ ‌ ಅವರು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದರು. ಪೆನ್‌ ಡ್ರೈವ್ ಬಿಡುಗಡೆ […]

ಬಿಜೆಪಿಯವರು ಪ್ರತಿಪಕ್ಷದ ನಾಯಕನ ಸ್ಥಾನಕ್ಕೂ ದರ ನಿಗದಿ ಪಡಿಸಿರಬಹುದು- ಸಚಿವ ಎಂ. ಬಿ. ಪಾಟೀಲ ವ್ಯಂಗ್ಯ

ವಿಜಯಪುರ: ಬಿಜೆಪಿಯವರು ಪ್ರತಿಪಕ್ಷದ ನಾಯಕನ ಸ್ಥಾನಕ್ಕೂ ದರ ಫಿಕ್ಸ್ ಮಾಡಿದ್ದಾರಾ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕೆ, ಮೂಲಸೌಲಭ್ಯ ಅಭಿವೃದ್ಧಿ ಹಾಗೂ ವಿಜಯಪುರ ಜಿಲ್ಲಾ ಉಸ್ತುವಾರಿ ಸಚಿವ ಎಂ. ಬಿ. ಪಾಟೀಲ ವ್ಯಂಗ್ಯವಾಡಿದ್ದಾರೆ. ವಿಜಯಪುರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಪ್ರತಿಪಕ್ಷದ ನಾಯಕ ಆಯ್ಕೆಗೆ ಬಿಜೆಪಿ ವಿಳಂಬ ಮಾಡುತ್ತಿರುವ ಕುರಿತು ಕೇಳಲಾದ ಪ್ರಶ್ನೆಗೆ ವ್ಯಂಗ್ಯಭರಿತವಾಗಿ ಪ್ರತಿಕ್ರಿಯೆ ನೀಡಿದರು. ಈ ಹಿಂದೆ ಮುಖ್ಯಮಂತ್ರಿ ಹುದ್ದೆಗೆ ರೂ. 2500 ಕೋ. ಕೊಡಬೇಕು ಎಂದು ಬಿಜೆಪಿಯಲ್ಲಿದ್ದವರೇ ಹೇಳಿದ್ದರು.  ಸಿಎಂ ಪಟ್ಟಕ್ಕೆ ರೂ. […]

ಸಾಲ, ತೆರಿಗೆಯ ಬರೆ ಎಳೆದ ಬಜೆಟ್- ಉಮೇಶ ಕಾರಜೋಳ

ವಿಜಯಪುರ : ಮುಖ್ಯಮಂತ್ರಿ ಎಸ್. ಸಿದ್ದರಾಮಯ್ಯ ಅವರು ಮಂಡಿಸಿರುವ ಬಜೆಟ್ ಹೇಗಿದೆ ಅಂದ್ರೆ ಸಾಲ ಮತ್ತು ತೆರಿಗೆಯ ಬರೆಯಾಗಿದೆ ಎಂದು ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಉಮೇಶ ಕಾರಜೋಳ ಟೀಕಿಸಿದ್ದಾರೆ. ಈ ಕುರಿತು ಮಾಧ್ಯಮ ಪ್ರಕಟಣೆ ನೀಡಿರುವ ಅವರು, ದಾಖಲೆಯ 14ನೇಯ ಬಾರಿ ಬಿಜೆಟ್ ಮಂಡಿಸುತ್ತಿರುವ ಸಿದ್ದರಾಮಯ್ಯ ಅವರ ಮೇಲೆ ಬೆಟ್ಟದಷ್ಟು ನಿರೀಕ್ಷೆಯಿತ್ತು.  ಆದರೆ, ಈ ಬಜೆಟ್ ನಲ್ಲಿ ತೆರಿಗೆಯ ಭಾರವೇ ತುಂಬಿದೆ.  ಅಬಕಾರಿ ಸುಂಕಗಳ ದರವನ್ನು ಶೇ. 20 ರಷ್ಟು ಹೆಚ್ಚಿಸಿದ್ದು, ಹಾಗೂ ಬಿಯರ್ ಮೇಲಿನ ಹೆಚ್ಚುವರಿ ಅಬಕಾರಿ […]

ರಾಜ್ಯದ ಸರ್ವಾಂಗೀಣ ಅಭಿವೃದ್ಧಿಗೆ ಪೂರಕವಾದ ಬಜೆಟ್- ಸಂಗಮೇಶ ಬಬಲೇಶ್ವರ

ವಿಜಯಪುರ: ಮುಖ್ಯಮಂತ್ರಿ ಎಸ್. ಸಿದ್ಧರಾಮಯ್ಯ ರಾಜ್ಯದ ಸರ್ವಾಂಗೀಣ ಅಭಿವೃದ್ಧಿಗೆ ಪೂರಕವಾದ ಬಜೆಟ್ ಮಂಡಿಸಿದ್ದಾರೆ ಎಂದು ಕೆಪಿಸಿಸಿ ಪ್ರಚಾರ ಸಮಿತಿ ಮುಖ್ಯ ವಕ್ತಾರ ಸಂಗಮೇಶ್ ಬಬಲೇಶ್ವರ ಹೇಳಿದ್ದಾರೆ. ರಾಜ್ಯ ಬಜೆಟ್ ಕುರಿತು ಮಾಧ್ಯಮ ಪ್ರಕಟಣೆ ನೀಡಿರುವ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯನವರು ಮಂಡಿಸಿರುವ ಈ ಬಜೆಟ್ ಮತ ನೀಡಿ ಸ್ಪಷ್ಟ ಬಹುಮತ ಕೊಟ್ಟು ಸರಕಾರ ರಚನೆಗೆ ಅವಕಾಶ ಮಾಡಿಕೊಟ್ಟ ರಾಜ್ಯದ ಎಲ್ಲ ಕ್ಷೇತ್ರದ ಜನರಿಗೂ ನ್ಯಾಯ ಒದಗಿಸಿಕೊಡುವ ಪ್ರಾಮಾಣಿಕ ಪ್ರಯತ್ನ ಮಾಡಿದ್ದಾರೆ.  ಹೀಗಾಗಿ ಜನರ ನಿರೀಕ್ಷೆಗೆ ಸಕಾರಾತ್ಮಕವಾಗಿ ಸ್ಪಂದಿಸಿರುವ ಈ […]

ಸರ್ವರಿಗೂ ಸಮಬಾಳು, ಸರ್ವರಿಗೂ ಸಮಪಾಲು- ಸರ್ವಾಂಗೀಣ ಅಭಿವೃದ್ಧಿಯ ಬಜೆಟ್- ಸುನೀಲಗೌಡ ಪಾಟೀಲ

ವಿಜಯಪುರ: ಮುಖ್ಯಮಂತ್ರಿ ಎಸ್. ಸಿದ್ಧರಾಮಯ್ಯ ಅವರು ರಾಜ್ಯದ ಸರ್ವಾಂಗೀಣ ಅಭಿವೃದ್ಧಿಯನ್ನು ಗಮನದಲ್ಲಿಟ್ಟುಕೊಂಡು ಸರ್ವರಿಗೂ ಸಮಬಾಳು, ಸರ್ವರಿಗೂ ಸಮಪಾಲು ತತ್ವದಡಿ ಜನಪರ ಬಜೆಟ್ ಮಂಡಿಸಿದ್ದಾರೆ ಎಂದು ವಿಧಾನ ಪರಿಷತ ಸದಸ್ಯ ಸುನೀಲಗೌಡ ಪಾಟೀಲ ತಿಳಿಸಿದ್ದಾರೆ. ಈ ಕುರಿತು ಮಾಧ್ಯಮ ಪ್ರಕಟಣೆ ನೀಡಿರುವ ಅವರು, ಕಾಂಗ್ರೆಸ್ ನೀಡಿದ್ದ ಭರವಸೆಯಂತೆ ಎಲ್ಲ ಗ್ಯಾರಂಟಿ ಸ್ಕೀಂಗಳನ್ನು ಬಲಪಡಿಸಲು ಈ ಬಜೆಟ್ ನಲ್ಲಿ ಆದ್ಯತೆ ನೀಡಲಾಗಿದೆ. ರೈತರು, ಮಹಿಳೆಯರು, ಯುವಕರು, ಹಿರಿಯರು, ಅಲ್ಪಸಂಖ್ಯಾತರು, ಹಿಂದುಳಿದವರು, ದಲಿತರು ಸೇರಿದಂತೆ ಎಲ್ಲ ವರ್ಗದವರ ಕಲ್ಯಾಣಕ್ಕಾಗಿ ಯೋಜನೆಗಳನ್ನು ರೂಪಿಸಲಾಗಿದೆ […]