ಮತದಾರರ ಪಟ್ಟಿ ಪರಿಷ್ಕರಿಸಿ ಗೊಂದಲ ನಿವಾರಿಸಲು ಆಗ್ರಹ- ಜಿಲ್ಲಾ ಚುನಾವಣಾಧಿಕಾರಿಗೆ ಮನವಿ ಪತ್ರ ಸಲ್ಲಿಕೆ
ವಿಜಯಪುರ: ಮುಂಬರುವ ಜಿಲ್ಲಾ ಪಂಚಾಯಿತಿ, ತಾಲೂಕು ಪಂಚಾಯಿತಿ ಹಾಗೂ ಗ್ರಾಮ ಪಂಚಾಯಿತಿ ಅದ್ಯಕ್ಷ, ಉಪಾಧ್ಯಕ್ಷ ಚುನಾವಣೆಗಳು ನಡೆಯಲಿದ್ದು, ಈ ಚುನಾವಣೆಯಲ್ಲಿ ಯಾವುದೇ ಲೋಪವಾಗದಂತೆ ತಡೆಯಲು ಮತದಾರರ ಪಟ್ಟಿ ಪರಿಷ್ಕರಿಸಬೇಕು ಎಂದು ಆಗ್ರಹಿಸಿ ಡಾ. ಎ.ಪಿ.ಜೆ. ಅಬ್ದುಲ್ ಕಲಾಂ ಸಮಾಜ ಸೇವಾ ಸಮಿತಿ ವತಿಯಿಂದ ಜಿಲ್ಲಾ ಚುನಾವಣಾಧಿಕಾರಗೆ ಮನವಿ ಪತ್ರ ಸಲ್ಲಿಸಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಸಮಿತಿ ಮುಖಂಡ ಮಲ್ಲಿಕಾರ್ಜುನ ಕೆಂಗನಾಳ, ಮುಂಬರುವ ಚುನಾವಣೆಗಳಲ್ಲಿ ಮತದಾರ ಪಟ್ಟಿಯಲ್ಲಿ ಯಾವುದೇ ಗೊಂದಲವಾಗಬಾರದು. ಚುನಾವಣೆಗಳಲ್ಲಿ ಸ್ಪರ್ಧಿಸುವ ಸ್ಪರ್ಧಿಗಳಿಗೆ ಯಾವುದೇ ತರಹದ ಅನ್ಯಾಯ […]
ಏಕರೂಪ ನಾಗರಿಕ ಸಂಹಿತೆ ಡಾ. ಅಂಬೇಡ್ಕರ ಆಶಯವಾಗಿತ್ತು- ಅದನ್ನು ಸಾಕಾರಗೊಳಿಸಲು ಮೋದಿ ಪ್ರತಿಪಾದಿಸುತ್ತಿದ್ದಾರೆ- ರಮೇಶ ಜಿಗಜಿಣಗಿ
ವಿಜಯಪುರ: ದೇಶದಲ್ಲಿರುವ ಎಲ್ಲ ನಿವಾಸಿಗಳು ಸಹೋದರರು. ಎಲ್ಲರಿಗೂ ಒಂದೇ ಕಾನೂನು ಇರಬೇಕು ಎಂಬುದು ಸಂವಿಧಾನ ಶಿಲ್ಪಿ ಡಾ. ಬಿ. ಆರ್. ಅಂಬೇಡ್ಕರ ಅವರ ಆಶಯವಾಗಿತ್ತು. ಈ ಆಶಯ ಸಾಕಾರಗೊಳಿಸಲು ನಮ್ಮ ಹೆಮ್ಮೆಯ ಪ್ರಧಾನಿ ನರೇಂದ್ರ ಮೋದಿ ಅವರು ಏಕರೂಪ ನಾಗರಿಕ ಸಂಹಿತೆ ಅವಶ್ಯಕತೆಯನ್ನು ಪ್ರತಿಪಾದಿಸಿದ್ದಾರೆ ಎಂದು ಬಿಜೆಪಿ ಸಂಸದ ರಮೇಶ ಜಿಗಜಿಣಗಿ ಹೇಳಿದ್ದಾರೆ. ಈ ಕುರಿತು ಮಾಧ್ಯಮ ಪ್ರಕಟಣೆ ನೀಡಿರುವ ಅವರು, ಏಕರೂಪ ನಾಗರಿಕ ಸಂಹಿತೆ ಡಾ. ಬಿ. ಆರ್. ಅಂಬೇಡ್ಕರ ಅವರ ಕನಸು ಮತ್ತು ಆಶಯವಾಗಿತ್ತು. […]
ಪ್ರಧಾನಿ ಅಕ್ಕಿ ನೀಡುವ ಕುರಿತು ಮುಖ್ಯಮಂತ್ರಿ ಸಿದ್ಧರಾಮಯ್ಯ ಹೇಳಿಕೆ- ಸಂಸದ ರಮೇಶ ಜಿಗಜಿಣಗಿ ತರಾಟೆ
ವಿಜಯಪುರ: ಪ್ರಧಾನ ಮಂತ್ರಿಗಳು ಅವರಪ್ಪನ ಮನೆಯಿಂದ ಅಕ್ಕಿ ಕೊಡುತ್ತಾರಾ? ಎಂದು ಹೇಳಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಈ ಹಿಂದೆ ಕಾಂಗ್ರೆಸ್ ಸರಕಾರ ಅಕ್ಕಿಯನ್ನು ಕೊಟ್ಟಿದ್ದು ಯಾರಪ್ಪನ ಮನೆಯಿಂದ? ಅದು ಸಹ ರಾಜ್ಯದ ಜನತೆಯ ಹಣದಿಂದಲೇ ಎಂಬುದು ಅವರು ಮರೆತಂತಿದೆ ಎಂದು ಸಂಸದ ರಮೇಶ ಜಿಗಜಿಣಗಿ ಹೇಳಿದ್ದಾರೆ. ಈ ಕುರಿತು ಮಾಧ್ಯಮ ಪ್ರಕಟಣೆ ನೀಡಿರುವ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೊಸದಾಗಿ ಸಿಎಂ ಆದ ಮೇಲೆ ಕೇವಲ ಪ್ರಧಾನಿ ನರೇಂದ್ರ ಮೋದಿ ಅವರನ್ನು ಟೀಕೆ ಮಾಡುವುದೇ ಕಾಯಕವನ್ನಾಗಿ ಮಾಡಿಕೊಂಡಿದ್ದಾರೆ […]
ಯತ್ನಾಳರಿಂದ ಬಿಜೆಪಿಗೆ ಡ್ಯಾಮೇಜ್- ನಿರಾಣಿ: ನಾನಾರಿಗೂ ಹೆದರಲ್ಲ ನನ್ನ ರಾಜಕೀಯವೇ ಬೇರೆ- ಜಿಗಜಿಣಗಿ: ಯತ್ನಾಳ ಇಂಥ ರಾಜಕೀಯ ನಿಲ್ಲಿಸಲಿ- ನಡಹಳ್ಳಿ
ವಿಜಯಪುರ: ಶಾಸಕ ಬಸನಗೌಡ ಪಾಟೀಲ ಯತ್ನಾಳ ವಿರುದ್ಧ ಮಾಜಿ ಸಚಿವ ಮುರುಗೇಶ ನಿರಾಣಿ, ಸಂಸದ ರಮೇಶ ಜಿಗಜಿಣಗಿ ಮತ್ತು ಮಾಜಿ ಶಾಸಕ ಎ. ಎಸ್. ಪಾಟೀಲ ನಡಹಳ್ಳಿ ತೀವ್ರ ವಾಗ್ದಾಳಿ ನಡೆಸಿದ್ದಾರೆ. ವಿಜಯಪುರದಲ್ಲಿ ಜಂಟಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮಾಜಿ ಸಚಿವ ಮುರುಗೇಶ ನಿರಾಣಿ, ಹೇಳಿಕೆ ಮತ್ತು ವರ್ತನೆಯಿಂದ ಬಿಜೆಪಿಗೆ ಡ್ಯಾಮೇಜ್ ಆಗಿದ್ದು, ಅವರ ಪಾಪದ ಕೊಡ ತುಂಬಿದೆ ಎಂದು ವಾಗ್ದಾಳಿ ನಡೆಸಿದರು. ಸಂಕೇಶ್ವರ ತ್ಯಾಗದಿಂದ ಯತ್ನಾಳ ಕೇಂದ್ರ ಸಚಿವರಾಗಿದ್ದರು ಅಟಲ್ ಬಿಹಾರಿ ವಾಜಪೇಯಿ ಅವರು ಪ್ರಧಾನಿಯಾಗಿದ್ದಾಗ ಅಂದಿನ […]
ಬಿಜೆಪಿ ಸಭೆಯಲ್ಲಿ ಗದ್ದಲ- ಯತ್ನಾಳ ವಿರುದ್ಧ ಹರಿಹಾಯ್ದ ನಿರಾಣಿ, ನಡಹಳ್ಳಿ- ವಾಗ್ದಾಳಿ ಯಾವುದೇ ಗೊಂದಲವಿಲ್ಲ ಎಂದ ಬೊಮ್ಮಾಯಿ
ವಿಜಯಪುರ: ವಿಜಯಪುರ ನಗರದಲ್ಲಿ ನಡೆದ ಬಿಜೆಪಿ ಕಾರ್ಯಕರ್ತರ ಸಭೆಯಲ್ಲಿ ಯತ್ನಾಳ ಬೆಂಬಲಿಗರು ಗದ್ದಲ ಎಬ್ಬಿಸಿದ ಘಟನೆ ನಡೆದಿದೆ. ಮಧ್ಯಾಹ್ನ 3 ಗಂಟೆಗೆ ಆರಂಭವಾಗಬೇಕಿದ್ದ ಸಭೆ ಮೂರು ಗಂಟೆ ತಡವಾಗಿ ಸಂಜೆ 6 ಗಂಟೆಗೆ ಆರಂಭವಾಯಿತು. ನಗರದ ಸಂಗನಬಸವ ಸಮುದಾಯ ಭವನದಲ್ಲಿ ನಡೆದ ಸಭೆಯಲ್ಲಿ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ, ಸಂಸದರಾದ ರಮೇಶ ಜಿಗಜಿಣಗಿ, ಅಣ್ಣಾಸಾಹೇಬ ಜೊಲ್ಲೆ, ಮಾಜಿ ಸಚಿವರಾದ ಮುರುಗೇಶ ನಿರಾಣಿ, ಶಶಿಕಲಾ ಜೊಲ್ಲೆ ಹಾಗೂ ವಿಧಾನಸಭೆ ಚುನಾವಣೆಯಲ್ಲಿ ಪರಾಜಿತರಾಗಿರುವ ಅಭ್ಯರ್ಥಿಗಳು ಭಾಗವಹಿಸಿದ್ದರು. ಈ ಸಂದರ್ಭದಲ್ಲಿ ಸಂಸದ […]
ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಜೂ. 26ರಂದು ಗುಮ್ಮಟ ನಗರಿಗೆ ಭೇಟಿ
ವಿಜಯಪುರ: ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರಕಾರದ ಒಂಬತ್ತು ವರ್ಷಗಳ ಸಾಧನೆಯನು ಜನರಿಗೆ ತಲುಪಿಸಲು ಜೂ. 26 ರಂದು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಗುಮ್ಮಟ ನಗರಿಗೆ ಭೇಟಿ ನೀಡಲಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಈ ಕುರಿತು ಮಾಹಿತಿ ನೀಡಿದ ಬಿಜೆಪಿ ಜಿಲ್ಲಾಧ್ಯಕ್ಷ ಆರ್. ಎಸ್. ಪಾಟೀಲ ಕೂಚಬಾಳ, ಜೂ. 26 ರಂದು ಮ. 3ಕ್ಕೆ ನಗರದ ಸಂಗನಬಸವ ಸಮುದಾಯ ಭವನದಲ್ಲಿ ಕಾರ್ಯಕ್ರಮ ನಡೆಯಲಿದ್ದು, ಬಸವರಾಜ ಬೊಮ್ಮಾಯಿ ಕಾರ್ಯಕ್ರಮ ಉದ್ಗಾಟಿಸಲಿದ್ದಾರೆ ಎಂದು ತಿಳಿಸಿದರು. ಬಿಜೆಪಿ ಸರಕಾರದ ಒಂಬತ್ತು ವರ್ಷಗಳ […]
ಕೆ ಇ ಆರ್ ಸಿ ವಿದ್ಯುತ್ ದರ ಹೆಚ್ಚಿಸಿದೆ- ಜುಲೈ ಮೊದಲ ವಾರ ದೆಹಲಿಗೆ ಭೇಟಿ ನೀಡುತ್ತೇನೆ- ಎಂ. ಬಿ. ಪಾಟೀಲ
ವಿಜಯಪುರ: ವಿದ್ಯುತ್ ದರ ಹೆಚ್ಚಳ ಸರಕಾರ ಕೈಗೊಂಡ ನಿರ್ಧಾರವಲ್ಲ. ಅದು ಸ್ವಾಯತ್ತ ಸಂಸ್ಥೆಯಾಗಿರುವ ಕೆ. ಇ. ಆರ್. ಸಿ ಮಾಡಿರುವ ತೀರ್ಮಾನವಾಗಿದೆ. ವಿದ್ಯುತ್ ದರ ಹೆಚ್ಚಳಕ್ಕೂ ನಮಗೂ ಯಾವುದೇ ಸಂಬಂಧವಿಲ್ಲ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕೆ, ಮೂಲಸೌಲಭ್ಯ ಅಭಿವೃದ್ಧಿ ಮತ್ತು ವಿಜಯಪುರ ಜಿಲ್ಲಾ ಉಸ್ತುವಾರಿ ಸಚಿವ ಎಂ. ಬಿ. ಪಾಟೀಲ ಹೇಳಿದ್ದಾರೆ. ವಿಜಯಪುರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ನಮ್ಮ ಸರಕಾರ ಅಧಿಕಾರಕ್ಕೆ ಬರುವ ಮುಂಚೆಯೇ ಕೆ. ಇ. ಆರ್. ಸಿ ವಿದ್ಯುತ್ ದರ ಹೆಚ್ಚಳ […]
ಕೇಂದ್ರ ಸರಕಾರದಿಂದ ದ್ವೇಷ ರಾಜಕಾರಣ ಆರೋಪ- ಗುಮ್ಮಟ ನಗರಿಯಲ್ಲಿ ಕೈ ಕಾರ್ಯಕರ್ತರಿಂದ ಪ್ರತಿಭಟನೆ
ವಿಜಯಪುರ: ಕೇಂದ್ರ ಸರಕಾರ ಅಕ್ಕಿ ವಿತರಣೆ ವಿಚಾರದಲ್ಲಿ ಮಲತಾಯಿ ಧೋರಣೆ ಅನುಸರಿಸುತ್ತಿದ್ದು, ದ್ವೇಷ ರಾಜಕೀಯ ಮಾಡುತ್ತಿದೆ ಎಂದು ಆರೋಪಿಸಿ ನಗರದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ನಗರದ ಡಾ. ಬಿ. ಆರ್. ಅಂಬೇಡ್ಕರ ವೃತ್ತದಲ್ಲಿ ಪ್ರತಿಭಟನೆ ನಡೆಸಿ ಮಾತನಾಡಿದ ನಾನಾ ಮುಖಂಡರು, ರಾಜ್ಯ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ರಾಜ್ಯದ ಜನತೆಗೆ ಐದು ಜನಪರ ಗ್ಯಾರಂಟಿ ಯೋಜನೆಗಳನ್ನು ನೀಡುವುದಾಗಿ ಹೇಳಿತ್ತು. ಅದರಲ್ಲಿ ಅನ್ನಭಾಗ್ಯ ಯೋಜನೆಯೂ ಒಂದಾಗಿದೆ. ರಾಜ್ಯ ಹಸಿವು ಮುಕ್ತವಾಗಬೇಕು ಎಂಬ ಒಳ್ಳೆಯ ಉದ್ದೇಶದಿಂದ ಬಡವರಿಗೆ ತಲಾ 10 […]
ಅನ್ನಭಾಗ್ಯ ಅಕ್ಕಿ ವಿಚಾರ- ಕೇಂದ್ರ ಈ ಯೋಜನೆಯಡಿ ನೀಡುವ ಅಕ್ಕಿ ಪ್ರಮಾಣ, ಸರಕಾರದ ಪಾತ್ರದ ಬಗ್ಗೆ ಸಿಎಂ ಸ್ಪಷ್ಟಪಡಿಸಲಿ- ರಮೇಶ ಜಿಗಜಿಣಗಿ
ವಿಜಯಪುರ: ಅನ್ನಭಾಗ್ಯ ಯೋಜನೆಗೆ ಸಂಬಂಧಿಸಿದಂತೆ ಕೇಂದ್ರ ಸರಕಾರ ನೀಡುವ ಅಕ್ಕಿ ಪ್ರಮಾಣ ಮತ್ತು ಇದರಲ್ಲಿ ರಾಜ್ಯ ಸರಕಾರದ ಪಾತ್ರವನ್ನು ಮುಖ್ಯಮಂತ್ರಿ ಎಸ್. ಸಿದ್ಧಾರಮಯ್ಯ ಸ್ಪಷ್ಟಪಡಿಸಬೇಕು ಎಂದು ಬಿಜೆಪಿ ಸಂಸದ ರಮೇಶ ಜಿಗಜಿಣಗಿ ಆಗ್ರಹಿಸಿ್ದ್ದಾರೆ. ಈ ಕುರಿತು ಮಾಧ್ಯಮ ಪ್ರಕಟಣೆ ನೀಡಿರುವ ಅವರು, ಈ ಯೋಜನೆಯಲ್ಲಿ ಕೇಂದ್ರ ಸರಕಾರದ ಪಾತ್ರವನ್ನು ಸ್ಪಷ್ಟವಾಗಿ ಜನರ ಮುಂದೆ ಹೇಳುವ ಮೂಲಕ ಜನರಲ್ಲಿರುವ ಗೊಂದಲವನ್ನು ನಿವಾರಿಸಬೇಕು ಎಂದು ಒತ್ತಾಯಿಸಿದ್ದಾರೆ. ಅಕ್ಕಿ ವಿಷಯವಾಗಿ ದಿನಕ್ಕೊಂದು ಹೇಳಿಕೆ ನೀಡುವ ಮೂಲಕ ರಾಜ್ಯ ಸರಕಾರ ಜನರ ದಿಕ್ಕು […]
ಗೋವುಗಳ ಗಣಿಯಾಗಲಿ- ಲದ್ದಿಜೀವಿಗಳ ಮೂಲಕ ರಚಿಸಿದ ಪಠ್ಯಕ್ರಮವನ್ನು ಬುದ್ದಿಜೀವಿಗಳ ಮೂಲಕ ತಿದ್ದುವ ಕೆಲಸ ನಡೆದಿದೆ- ಎಸ್. ಎಂ. ಪಾಟೀಲ ಗಣಿಹಾರ
ವಿಜಯಪುರ: ಗೋವುಗಳ ಗಣತಿ ನಡೆಯಬೇಕು. ಯಾವ ಆರ್ ಎಸ್ ಎಸ್ ನಾಯಕರು ಗೋವುಗಳನ್ನು ಪೋಷಿಸುತ್ತಿದ್ದಾರೆ? ಗೋವುಗಳನ್ನು ಹೇಗೆ ಸಾಕುತ್ತಿದ್ದಾರೆ ಎಂಬ ಬಗ್ಗೆಯೂ ಗಣತಿ ನಡೆಯಬೇಕು ಎಂದು ಕೆಪಿಸಿಸಿ ವಕ್ತಾರ ಎಸ್. ಎಂ. ಪಾಟೀಲ ಗಣಿಹಾರ ಆಗ್ರಹಿಸಿದ್ದಾರೆ. ವಿಜಯಪುರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬಿಜೆಪಿಗೆ ನಿಜವಾಗಿಯೂ ಗೋವುಗಳಿಗೆ ಕಾಳಜಿ ಇದ್ದರೆ ಕೂಡಲೇ ಗೋಮುಕ್ತಿ ಕಾನೂನು ಜಾರಿಗೊಳಿಸಿ ಅನುಷ್ಠಾನಗೊಳಿಸಬೇಕು. ಗೋವುಗಳ ರಕ್ಷಣೆ ಬಗ್ಗೆ ಮಾತನಾಡುವ ಅನೇಕರು ಕೋವಿಡ್ ಸಂದರ್ಭದಲ್ಲಿ ತಮ್ಮ ಸಂಬಂಧಿಕರ ಅಂತ್ಯಕ್ರಿಯೆ ಮಾಡಲಿಲ್ಲ. ಗೋವುಗಳನ್ನು ಸಾಕಲು ಬಾರದವರು, ಗೋವುಗಳನ್ನು […]