ಸಚಿವ ಎಂ. ಬಿ. ಪಾಟೀಲರ ಸಾರ್ವಜನಿಕ ಸಂಪರ್ಕಾಧಿಕಾರಿಯಾಗಿ ಡಾ. ಮಹಾಂತೇಶ ಬಿರಾದಾರ ನೇಮಕ
ವಿಜಯಪುರ: ಬೃಹತ್ ಮತ್ತು ಮಧ್ಯಮ ಕೈಗಾರಿಕೆ, ಮೂಲಸೌಕರ್ಯ ಅಭಿವೃದ್ಧಿ ಹಾಗೂ ವಿಜಯಪುರ ಜಿಲ್ಲಾ ಉಸ್ತುವಾರಿ ಸಚಿವ ಎಂ. ಬಿ. ಪಾಟೀಲ ಅವರ ಸಾರ್ವಜನಿಕ ಸಂಪರ್ಕಾಧಿಕಾರಿಯಾಗಿ ಡಾ. ಮಹಾಂತೇಶ ಬಿರಾದಾರ ಅವರನ್ನು ನೇಮಕ ಮಾಡಲಾಗಿದೆ. ಸದಾ ಸಮಾಜಪರ ಚಟುವಟಿಕೆಯಿಂದ ಹೆಸರು ಮಾಡಿರುವ ಡಾ. ಮಹಾಂತೇಶ ಬಿರಾದಾರ ಅವರು ಎಂ. ಬಿ. ಪಾಟೀಲರು ಈ ಹಿಂದೆ ಜಲಸಂಪನ್ಮೂಲ ಸಚಿವರಾಗಿದ್ದಾಗ ಮಾಧ್ಯಮ ಸಲಹೆಗಾರರಾಗಿ ಸೇವೆ ಸಲ್ಲಿಸಿದ್ದಾರೆ. ಈಗ ಅವರನ್ನು ಸಚಿವ ಎಂ. ಬಿ. ಪಾಟೀಲ ಅವರ ಸಾರ್ವಜನಿಕ ಸಂಪರ್ಕಾಧಿಕಾರಿಯಾಗಿ ನೇಮಕ ಮಾಡಲಾಗಿದೆ. […]
ಎಂ. ಬಿ. ಪಾಟೀಲರಿಗೆ ವಿಜಯಪುರ ಜಿಲ್ಲೆಯ ಉಸ್ತುವಾರಿ- ಉಳಿದ ಸಚಿವರಿಗೆ ಯಾವ ಜಿಲ್ಲೆಯ ಉಸ್ತುವಾರಿ? ಇಲ್ಲಿದೆ ಮಾಹಿತಿ
ಬೆಂಗಳೂರು: ಅಂತೂ ಇಂದೂ ಅಳೆದು ತೂಗಿ ಮುಖ್ಯಮಂತ್ರಿ ಎಸ್. ಸಿದ್ಧರಾಮಯ್ಯ ಜಿಲ್ಲಾ ಉಸ್ತುವಾರಿ ಸಚಿವರ ನೇಮಕ ಮಾಡಿದ್ದಾರೆ. ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಮೂಲಭೂತ ಸೌಕರ್ಯ ಸಚಿವ ಎಂ. ಬಿ. ಪಾಟೀಲ ಅವರಿಗೆ ನಿರೀಕ್ಷೆಯಂತೆ ವಿಜಯಪುರ ಜಿಲ್ಲೆಯ ಉಸ್ತುವಾರಿ ವಹಿಸಲಾಗಿದೆ. ಸಚಿವರು ಮತ್ತು ಅವರಿಗೆ ವಹಿಸಲಾಗಿರುವ ಜಿಲ್ಲೆಗಳ ಉಸ್ತುವಾರಿ ಮಾಹಿತಿ ಇಲ್ಲಿದೆ. ಡಿ. ಕೆ. ಶಿವಕುಮಾರ- ಬೆಂಗಳೂರು ನಗರ ಡಾ. ಜಿ. ಪರಮೇಶ್ವರ- ತುಮಕೂರು ಎಚ್. ಕೆ. ಪಾಟೀಲ- ಗದಗ ಕೆ. ಎಚ್. ಮುನಿಯಪ್ಪ- ಬೆಂಗಳೂರು […]
ಸಚಿವ ಶಿವಾನಂದ ಪಾಟೀಲರಿಗೆ ಶ್ರೀ ಹಡಪದ ಅಪ್ಪಣ್ಣ ವಿವಿದೋದ್ದೇಶ ಸಹಕಾರ ಸಂಘದ ಪದಾಧಿಕಾರಿಗಳಿಂದ ಸನ್ಮಾನ
ವಿಜಯಪುರ: ಸಕ್ಕರೆ ಮತ್ತು ಜವಳಿ ಖಾತೆ ಸಚಿವ ಶಿವಾನಂದ ಎಸ್. ಪಾಟೀಲ ಅವರನ್ನು ಶ್ರೀ ಹಡಪದ ಅಪ್ಪಣ್ಣ ವಿವಿದೋದ್ದೇಶಗಳ ಸಹಕಾರ ಸಂಘದ ಪದಾಧಿಕಾರಿಗಳು ಸನ್ಮಾನಿಸಿ ಗೌರವಿಸಿದರು. ಈ ಸಂದರ್ಭದಲ್ಲಿ ಸಂಘದ ಅಧ್ಯಕ್ಷ ನಿಂಗಪ್ಪ ಎ. ನಾವಿ, ಉಪಾಧ್ಯಕ್ಷ ಚಿದಾನಂದ ಹ. ತೊರವಿ, ನಿರ್ದೇಶಕರಾದ ವಿರೂಪಾಕ್ಷಿ ಗಿ. ಕತ್ನಳ್ಳಿ, ಶಿವಾನಂದ ಆರ್. ನಾವಿ, ನರಸು ನಾವಿ ಮುಂತಾದವರು ಉಪಸ್ಥಿತರಿದ್ದರು.
ವಿದ್ಯುತ್ ದರ ಹೆಚ್ಚಳ, ಗೋಹತ್ಯೆ ನಿಷೇಧ ರದ್ದು ಕುರಿತು ಸಚಿವರ ಹೇಳಿಕೆ ಖಂಡಿಸಿ ಬಿಜೆಪಿಯಿಂದ ವಿಜಯಪುರ ನಗರದಲ್ಲಿ ಪ್ರತಿಭಟನೆ
ವಿಜಯಪುರ: ಉಚಿತ ವಿದ್ಯುತ್ ಗ್ಯಾರಂಟಿ ಎನ್ನುವ ಹೆಸರಿನಲ್ಲಿ ಕಾಂಗ್ರೆಸ್ ಸರಕಾರ ಜನತೆಗೆ ಮೋಸ ಮಾಡುತ್ತಿದೆ ಎಂದು ಆರೋಪಿಸಿ ಬಿಜೆಪಿ ಕಾರ್ಯಕರ್ತರು ನಗರದಲ್ಲಿ ಪ್ರತಿಭಟನೆ ನಡೆಸಿದರು. ಬಿಜೆಪಿ ನಗರ ಘಟಕದ ಪದಾಧಿಕಾರಿಗಳು ಶ್ರೀ ಸಿದ್ದೇಶ್ವರ ದೇವಾಲಯದ ಎದುರು ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಮಹಾನಗರ ಪಾಲಿಕೆ ಸದಸ್ಯ ಶಿವರುದ್ರ ಬಾಗಲಕೋಟ ಮಾತನಾಡಿ, ಪಶು ಸಂಗೋಪನೆ ಸಚಿವರು ರಾಜ್ಯದಲ್ಲಿ ವಯಸ್ಸಾದ ಹಸುಗಳನ್ನು ಸಾಕಲು ಕಷ್ಟವಾಗುತ್ತದೆ. ಆದ್ದರಿಂದ ಗೋ ಹತ್ಯೆ ನಿಷೇಧ ಕಾನೂನನ್ನು ರದ್ದು ಮಾಡಿ ಗೋಹತ್ಯೆಗೆ […]
40% ಭ್ರಷ್ಟಾಚಾರ, ದುಂದುವೆಚ್ಚಕ್ಕೆ ಕಡಿವಾಣ ಹಾಕಿ ಗ್ಯಾರಂಟಿ ಸ್ಕೀಂ ಗಳಿಗೆ ಹಣ ಹೊಂದಿಸುತ್ತೇವೆ- ಎಂ. ಬಿ. ಪಾಟೀಲ
ವಿಜಯಪುರ: 40% ಭ್ರಷ್ಟಾಚಾರಕ್ಕೆ ಮತ್ತು ದುಂದುವೆಚ್ಚಕ್ಕೆ ಕಡಿವಾಣ ಹಾಕುತ್ತೇವೆ. ನಿರುಪಯುಕ್ತ ಯೋಜನೆಗಳನ್ನು ಕೈಬಿಟ್ಟು ಇತರ ಯೋಜನೆಗಳಿಗೆ ತೊಂದರೆಯಾಗದಂತೆ ಕಾಂಗ್ರೆಸ್ ಗ್ಯಾರಂಟಿ ಸ್ಕೀಂಗಳಿಗೆ ಸಿಎಂ ನೇತೃತ್ವದಲ್ಲಿ ಹಣ ಹೊಂದಿಸುತ್ತೇವೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಮೂಲಭೂತ ಸೌಕರ್ಯ ಅಭಿವೃದ್ಧಿ ಸಚಿವ ಎಂ. ಬಿ. ಪಾಟೀಲ ತಿಳಿಸಿದ್ದಾರೆ. ವಿಜಯಪುರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, 2013- 18ರ ಅವಧಿಯಲ್ಲಿ ಜಲಸಂಪನ್ಮೂಲ ಸಚಿವನಾಗಿ ವಿಜಯಪುರ ಜಿಲ್ಲೆಗೆ ಅಂಟಿದ್ದ ಬರಪೀಡಿತ ಜಿಲ್ಲೆ ಹಣೆಪಟ್ಟಿ ಹೋಗಲಾಡಿಸಲು ಯಶಸ್ವಿಯಾಗಿದ್ದೇನೆ. ಈಗ ಕೈಗಾರಿಕೆ ಸಚಿವನಾಗಿ ರಾಜ್ಯಾದ್ಯಂತ […]
ರಾಜ್ಯದ ಇತರೆಡೆ ಕೈಗಾರಿಕೆ ಸ್ಥಾಪಿಸಲು ಉತ್ತೇಜನ ನೀಡುತ್ತೇವೆ- ನಾಡನ್ನು ಸರ್ವಜನಾಂಗದ ಶಾಂತಿ ತೋಟ ಮಾಡುತ್ತೇವೆ- ಎಂ. ಬಿ. ಪಾಟೀಲ
ವಿಜಯಪುರ, ಜೂನ್ 03: ಬೆಂಗಳೂರು ಜೊತೆ ರಾಜ್ಯದ ಇತರ ಜಿಲ್ಲೆಗಳಲ್ಲೂ ಕೈಗಾರಿಕೆಗಳನ್ನು ಸ್ಥಾಪಿಸುವ ಗುರಿ ಹೊಂದಿದ್ದೇನೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಮೂಲಭೂತ ಸೌಕರ್ಯ ಅಭಿವೃದ್ಧಿ ಸಚಿವ ಎಂ.ಬಿ.ಪಾಟೀಲ ಭರವಸೆ ನೀಡಿದ್ದಾರೆ. ಸಚಿವರಾದ ಬಳಿಕ ಇದೇ ಮೊದಲ ಬಾರಿಗೆ ತವರು ಜಿಲ್ಲೆ ವಿಜಯಪುರಕ್ಕೆ ಆಗಮಿಸಿ ಬೃಹತ ರೋಡ್ ಶೋನಲ್ಲಿ ಪಾಲ್ಗೊಂಡ ಬಳಿಕ ಶ್ರೀ ಸಿದ್ಧೇಶ್ವರ ದೇವಸ್ಥಾನದ ಬಳಿ ಸಾರ್ವಜನಿಕರನ್ನು ಉದ್ದೇಶಿಸಿ ಮಾತನಾಡಿದರು. ರಾಜ್ಯದ ಇತರೆಡೆ ಕೈಗಾರಿಕೆಗಳನ್ನು ಸ್ಥಾಪಿಸುವುದರಿಂದ ನಿರುದ್ಯೋಗ ಸಮಸ್ಯೆಗೆ ಪರಿಹಾರ ಸಿಗಲಿದೆ. ಯುವಕರಿಗೆ […]
ಸಚಿವರಾದ ನಂತರ ತವರಿಗೆ ಬಂದ ಎಂ. ಬಿ. ಪಾಟೀಲರಿಗೆ ಅದ್ದೂರಿ ಸ್ವಾಗತ ನೀಡಿದ ಬಸವ ನಾಡಿನ ಜನತೆ
ವಿಜಯಪುರ: ಸಚಿವರಾದ ಬಳಿಕ ಇದೇ ಮೊದಲ ಬಾರಿಗೆ ತವರು ಜಿಲ್ಲೆ ವಿಜಯಪುರಕ್ಕೆ ಆಗಮಿಸಿದ ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಮೂಲಭೂತ ಸೌಕರ್ಯ ಅಭಿವೃದ್ಧಿ ಸಚಿವ ಎಂ. ಬಿ. ಪಾಟೀಲ ಅವರಿಗೆ ವಿಜಯಪುರ ನಗರದಲ್ಲಿ ಭರ್ಜರಿ ಸ್ವಾಗತ ನೀಡಲಾಯಿತು. ನಗರದ ಗುರುಪಾದೇಶ್ವರ ನಗರದಲ್ಲಿರುವ ತೋಂಟದಾರ್ಯ ಶಾಖಾ ಮಠಕ್ಕೆ ಭೇಟಿ ನೀಡಿದ ಅವರು, ಗದಗ-ಡಂಬಳ-ಯಡಿಯೂರು ಮಠದ ಜಗದ್ಗುರುಗಳಾದ ಡಾ. ಸಿದ್ದರಾಮ ಮಹಾಸ್ವಾಮಿಗಳು ಮತ್ತು ವಿಜಯಪುರ ಷಣ್ಮುಖಾರೂಡ ಮಠದ ಶ್ರೀ ಅಭಿನವ ಸಿದ್ದಾರೂಢ ಮಹಾಸ್ವಾಮಿಜಿ ಅವರನ್ನು ಗೌರವಿಸಿ ಆಶೀರ್ವಾದ ಪಡೆದರು. […]
ಶನಿವಾರ ಸಚಿವ ಎಂ. ಬಿ. ಪಾಟೀಲ ಬಸವ ನಾಡಿಗೆ ಆಗಮನ- ಭರ್ಜರಿ ಸ್ವಾಗತಕ್ಕೆ ಸಜ್ಜಾದ ತವರು ಜಿಲ್ಲೆಯ ಜನರು
ವಿಜಯಪುರ: ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ಎಂ.ಬಿ.ಪಾಟೀಲ ಅವರು ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಮೂಲಭೂತ ಸೌಕರ್ಯ ಅಭಿವೃದ್ಧಿ ಸಚಿವರಾದ ನಂತರ ಇದೇ ಮೊದಲ ಬಾರಿಗೆ ಜೂನ್ 3 ರಂದು ಶನಿವಾರ ತವರು ಜಿಲ್ಲೆ ವಿಜಯಪುರಕ್ಕೆ ಆಗಮಿಸುತ್ತಿದ್ದು, ಅವರನ್ನು ಅದ್ದೂರಿಯಾಗಿ ಸ್ವಾಗತಿಸಲು ಸಚಿವರ ಅಭಿಮಾನಿಗಳು, ಬೆಂಬಲಿಗರು ಮತ್ತು ಕಾಂಗ್ರೆಸ್ ಕಾರ್ಯಕರ್ತರು ನಿರ್ಧರಿಸಿದ್ದಾರೆ. ವಿಜಯಪುರದಲ್ಲಿ ನಡೆದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಕೆಪಿಸಿಸಿ ಪ್ರಚಾರ ಸಮಿತಿ ಮುಖ್ಯ ವಕ್ತಾರ ಸಂಗಮೇಶ ಬಬಲೇಶ್ವರ ಮಾತನಾಡಿ, ಎಂ.ಬಿ.ಪಾಟೀಲರು ಜಲಸಂಪನ್ಮೂಲ ಸಚಿವರಾಗಿ ಜಿಲ್ಲೆಯಲ್ಲಿ […]
ಬಿಜೆಪಿಯವರು ಇಂಥದ್ದನ್ನು ಹೇಳಿಯೇ 65ಕ್ಕೆ ಬಂದು ನಿಂತಿದ್ದಾರೆ- ಲಕ್ಷ್ಮಣ ಸವದಿ ವಾಗ್ದಳಿ
ವಿಜಯಪುರ: ಕಾಂಗ್ರೆಸ್ ಗ್ಯಾರಂಟಿ ಸ್ಕೀಂ ಗಳ ಬಗ್ಗೆ ಬಿಜೆಪಿ ನಾಯಕರು ಮಾಡುತ್ತಿರುವ ಟೀಕೆಗಳ ಕುರಿತು ಮಾಜಿ ಡಿಸಿಎಂ ಮತ್ತು ಅಥಣಿ ಕಾಂಗ್ರೆಸ್ ಶಾಸಕ ಲಕ್ಷ್ಮಣ ಸವದಿ ಖಾರವಾಗಿ ಪ್ರತಿಕ್ರಿಯೆ ನೀಡಿದ್ದಾರೆ. ವಿಜಯಪುರ ಜಿಲ್ಲೆಯ ಇಂಡಿ ತಾಲೂಕಿನ ಸುಕ್ಷೇತ್ರ ಇಂಚಗೇರಿಯಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಗ್ಯಾರಂಟಿ ಯೋಜನೆಗಳ ಜಾರಿ ಸಾಧ್ಯವಿಲ್ಲ ಎಂದು ಟೀಕೆ ಮಾಡುತ್ತಿರುವ ಬಿಜೆಪಿ ನಾಯಕರು ಈಗ 65 ಸ್ಥಾನಗಳಿಗೆ ಬಂತು ನಿಂತಿದ್ದಾರೆ. ಒಳ್ಳೆಯ ಕೆಲಸ ಮಾಡುವ ಸರಕಾರವನ್ನು ಪ್ರೋತ್ಸಾಹಿಸಬೇಕು. ಅನಾವಶ್ಯಕವಾಗಿ ಟೇಕೆ ಮಾಡುವುದು […]
ಸಚಿವರಿಗೆ ಖಾತೆ ಹಂಚಿಕೆ- ವೈರಲ್ ಆಗಿದ್ದ ಪಟ್ಟಿಯಲ್ಲಿ ಕೆಲವರ ಖಾತೆ ಬದಲಾವಣೆ
ಬೆಂಗಳೂರು: ಅಂತೂ ಇಂತೂ ಮುಖ್ಯಮಂತ್ರಿ ಎಸ್. ಸಿದ್ಧರಾಮಯ್ಯ ಅವರ ನೇತೃತ್ವದ ಸರಕಾರದಲ್ಲಿ ಸಚಿರವಾದ 34 ಜನರಿಗೆ ಅಳೆದು ತೂಗಿ ಖಾತೆ ಹಂಚಿಕೆ ಮಾಡಲಾಗಿದೆ. ರವಿವಾರ ರಾತ್ರಿ ಖಾತೆಗಳಿಗೆ ರಾಜ್ಯಪಾಲರು ಅಂಕಿತ ಹಾಕಿದ್ದು, ಯಾರಾರಿಗೆ ಯಾವ ಖಾತೆಗಳನ್ನು ಹಂಚಿಕೆ ಮಾಡಲಾಗಿದೆ ಎಂಬುದರ ಮಾಹಿತಿ ಇಲ್ಲಿದೆ. 1. ಎಸ್. ಸಿದ್ಧರಾಮಯ್ಯ- ಹಣಕಾಸು, ಸಂಪುಟ ವ್ಯವಹಾರ, ಆಡಳಿತ ಸುಧಾರಣೆ, ಗುಪ್ತದಳ, ವಾರ್ತಾ ಇಲಾಖೆ, ಐಟಿ-ಬಿಟಿ, ಮೂಲಭೂತ ಸೌಕರ್ಯ ಅಭಿವೃದ್ಧಿ ಮತ್ತು ಹಂಚಿಕೆಯಾಗದ ಎಲ್ಲಖಾತೆಗಳು 2. ಡಿ. ಕೆ. ಶಿವಕುಮಾರ- ಭಾರಿ ಮತ್ತು […]