ಇಂಡಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಶಾಸಕ ಯಶವಂತರಾಯಗೌಡ ವಿ. ಪಾಟೀಲ ಸಾಂಕೇತಿಕವಾಗಿ ನಾಮಪತ್ರ ಸಲ್ಲಿಕೆ
ವಿಜಯಪುರ: ವಿಧಾನ ಸಭೆ ಚುನಾವಣೆ ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಆರಂಭವಾಗುತ್ತಿದ್ದಂತೆ ಅಭ್ಯರ್ಥಿಗಳು ತಂತಮ್ಮ ನಾಮಪತ್ರಗಳನ್ನು ಸಲ್ಲಿಸುತ್ತಿದ್ದು, ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ ಕೂಡ ನಾಮಪತ್ರ ಸಲ್ಲಿಸಿದ್ದಾರೆ. ಇಂಡಿಯಲ್ಲಿ ಚುನಾವಣಾಧಿಕಾರಿ ರಾಮಚಂದ್ರ ಗಡದೆ ಅವರಿಗೆ ಯಶವಂತರಾಯಗೌಡ ವಿ. ಪಾಟೀಲ ಕಾಂಗ್ರೆಸ್ ಅಭ್ಯರ್ಥಿಯಾಗಿ ಸಾಂಕೇತಿಕವಾಗಿ ತಮ್ಮ ನಾಮಪತ್ರ ಸಲ್ಲಿಸಿದರು. ಈ ಸಂದರ್ಭದಲ್ಲಿ ಕಾಂಗ್ರೆಸ್ ಮುಖಂಡರಾದ ಜೆಟ್ಟೆಪ್ಪ ರವಳಿ, ಧರ್ಮರಾಜ ವಾಲಿಕಾರ, ವಿಶ್ವನಾಥ ಬಿರಾದಾರ, ಶಿವಾನಂದ ನಿಂಬಾಳ ಮುಂತಾದವರು ಉಪಸ್ಥಿತರಿದ್ದರು. ಈಗಾಗಲೇ ಎರಡು ಬಾರಿ ಶಾಸಕರಾಗಿ ಆಯ್ಕೆಯಾಗಿರುವ ಯಶವಂತರಾಯಗೌಡ ಪಾಟೀಲ ಅವರಿಗೆ […]
ಕಾಂಗ್ರೆಸ್ ಮುಖಂಡ ಅಶೋಕ ಮನಗೂಳಿ ಸಿಂದಗಿಯಲ್ಲಿ ನಾಮಪತ್ರ ಸಲ್ಲಿಕೆ
ವಿಜಯಪುರ: ಕಾಂಗ್ರೆಸ್ ಮುಖಂಡ ಅಶೋಕ ಮನಗೂಳಿ ಸಿಂದಗಿ ಮತಕ್ಷೇತ್ರದಿಂದ ಆಯ್ಕೆ ಬಯಸಿ ನಾಮಪತ್ರ ಸಲ್ಲಿಸಿದ್ದಾರೆ. ಕಾಂಗ್ರೆಸ್ ಸಿಂದಗಿ ಮತಕ್ಷೇತ್ರಕ್ಕೆ ಇನ್ನೂ ಯಾರಿಗೂ ಟಿಕೆಟ್ ಘೋಷಣೆ ಮಾಡಿಲ್ಲ. ಆದರೂ, ಗುರುವಾರ ಶುಭ ದಿನವಾಗಿರುವ ಹಿನ್ನೆಲೆಯಲ್ಲಿ ಬಿ ಫಾರಂ ಇಲ್ಲದೇ ಕಾಂಗ್ರೆಸ್ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದರು. ಚುನಾವಣಾಧಿಕಾರಿ ಶಿದ್ರಾಮ ಮಾರಿಹಾಳ ಅವರಿಗೆ ಅಶೋಕ ಮನಗೂಳಿ ತಮ್ಮ ನಾಮಪತ್ರ ಸಲ್ಲಿಸಿದರು. ಈ ಸಂದರ್ಭದಲ್ಲಿ ನ್ಯಾಯವಾದಿ ಬಿ. ಜಿ. ನೆಲ್ಲಗಿ, ರಮೇಶ ಭಂಟನೂರ, ಎಂ. ಕೆ. ಸೊನ್ನದ ಹಾಗೂ ಸಹಾಯಕ ಚುನಾವಣಾಧಿಕಾರಿ ತಹಸೀಲ್ದಾರ […]
ಶಾಸಕ ರಮೇಶ ಭೂಸನೂರ ಸಿಂದಗಿಯಿಂದ ಮರು ಆಯ್ಕೆ ಬಯಸಿ ನಾಮಪತ್ರ ಸಲ್ಲಿಕೆ
ವಿಜಯಪುರ: ವಿಧಾನ ಸಭೆ ಚುನಾವಣೆಗೆ ನಾಮಪತ್ರ ಸಲ್ಲಿಕೆ ಆರಂಭವಾಗುತ್ತಿದ್ದಂತೆ ಶಾಸಕ ರಮೇಶ ಭೂಸನೂರ ತಮ್ಮ ನಾಮಪತ್ರ ಸಲ್ಲಿಸಿದ್ದಾರೆ. ಬಿಜೆಪಿ ಈಗಾಗಲೇ ರಮೇಶ ಭೂಸನೂರ ಅವರಿಗೆ ಟಿಕೆಟ್ ನೀಡಿದ್ದು, ತಹಸೀಲ್ದಾರ ಕಚೇರಿಗೆ ತೆರಳಿ ಚುನಾವಣಾಧಿಕಾರಿ ಸಿದ್ರಾಮ ಮಾರಿಹಾಳ ಅವರಿಗೆ ತಮ್ಮ ನಾಮಪತ್ರ ಸಲ್ಲಿಸಿದರು. ಈ ಸಂದರ್ಭದಲ್ಲಿ ನ್ಯಾಯವಾದಿ ಅರವಿಂದ ಕನ್ನೂರ, ಮಲ್ಲಣ್ಣ ಸಾಲಿ, ಸಿದ್ಧರಾಮ ಪಾಟೀಲ ಹೂವಿನಹಳ್ಳಿ, ಪೀರು ಕೆರೂರ, ಮಂಡಲ ಅಧ್ಯಕ್ಷ ಈರಣ್ಣ ರಾವೂರ ಉಪಸ್ಥಿತರಿದ್ದರು. ಸಹಾಯಕ ಚುನಾವಣಾಧಿಕಾರಿ ನಿಂಗಣ್ಣ ಬಿರಾದಾರ, ಸುರೇಶ ಚವಲರ ಅವರೂ ಉಪಸ್ಥಿತರಿದ್ದರು.
ಮಹಿಳಾ ಸ್ವ-ಸಹಾಯ ಸಂಘದ ಸದಸ್ಯರಿಗೆ ಮತದಾನ ಜಾಗೃತಿ ಅಭಿಯಾನ
ವಿಜಯಪುರ: ಪ್ರತಿ ಪ್ರಜೆಯು ಮತದಾನ ಮಾಡುವುದು ಸಂವಿಧಾನ ಕಲ್ಪಿಸಿಕೊಟ್ಟಿರುವ ಹಕ್ಕು. ಬರುವ ಮೇ-10ರ ಮತದಾನ ದಿನದಂದು ಎಲ್ಲರೂ ಪಾಲ್ಗೊಂಡು ಮತದಾನ ಮಾಡಬೇಕು ಎಂದು ಜಿಲ್ಲಾ ಕೌಶಲ್ಯಾಭಿವೃದ್ಧಿ ಅಧಿಕಾರಿ ಸಿ. ಬಿ. ಕುಂಬಾರ ಅವರು ಹೇಳಿದರು. ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಕೌಶಲ್ಯಾಭಿವೃದ್ಧಿ ಇಲಾಖೆ ಹಾಗೂ ಮಹಾ ನಗರಪಾಲಿಕೆ ಸಹಯೋಗದಲ್ಲಿ ಸ್ವೀಪ್ ಕಾರ್ಯಕ್ರಮದಡಿ ನಗರದ ಶಂಕರಲಿಂಗ ದೇವಸ್ಥಾನ ಜೋರಾಪುರ ಪೇಠದಲ್ಲಿ ಮಹಿಳಾ ಸ್ವ-ಸಹಾಯ ಸಂಘದ ಮಹಿಳೆಯರಿಗಾಗಿ ಆಯೋಜಿಸಿದ್ದ ಜಾಗೃತಿ ಅಭಿಯಾನ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದರು. ಮತದಾನದಿಂದ ಯಾರೂ ವಂಚಿತರಾಗಬಾರದು. ಮತದಾರರು […]
ಎರಡು ದಿನಗಳಲ್ಲಿ ಮುಂದಿನ ನಿರ್ಧಾರ- ಟಿಕೆಟ್ ಸಿಗದ ಕುರಿತು ಮಾಜಿ ಸಚಿವ ಅಪ್ಪು ಪಟ್ಟಣಶೆಟ್ಟಿ ಅಸಮಾಧಾನ
ವಿಜಯಪುರ: ಬಸನಗೌಡ ಪಾಟೀಲ ಯತ್ನಾಳ ಅವರಿಗೆ ಟಿಕೆಟ್ ನೀಡಿರುವುದಕ್ಕೆ ಮಾಜಿ ಸಚಿವ ಮತ್ತು ಬಿಜೆಪಿ ಮುಖಂಡ ಅಪ್ಪು ಪಟ್ಟಣಶೆಟ್ಟಿ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದು, ಎರಡು ದಿನಗಳಲ್ಲಿ ಬೆಂಬಲಿಗರು, ಕಾರ್ಯಕರ್ತರು, ಹಿತೈಷಿಗಳು, ನಾನಾ ಸಮಾಜದ ಮುಖಂಡರ ಸಭೆ ಕರೆದು ಸೂಕ್ತ ನಿರ್ಧಾರ ಕೈಗೊಳ್ಳುವುದಾಗಿ ತಿಳಿಸಿದ್ದಾರೆ. ವಿಜಯಪುರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ವಿಜಯಪುರ ನಗರ ಮತಕ್ಷೇತ್ರದಿಂದ ನನಗೆ ಟಿಕೆಟ್ ಸಿಗುವ ನಿರೀಕ್ಷೆಯಿತ್ತು. ಈಗ ಟಿಕೆಟ್ ಕೈತಪ್ಪಿಸುವುದರಿಂದ ನೋವು ಆಗಿದೆ. ಅಸಮಾಧಾನ ಕೂಡ ಆಗಿದೆ. ಕಾರ್ಯಕರ್ತರಿಗೂ ಇದರಿಂದ ನೋವು ಮತ್ತು […]
ವಿಧಾನಸಭೆ ಚುನಾವಣೆ ಮತದಾನ ಬಹಿಷ್ಕರಿಸಲು ನಿರ್ಧರಿಸಿದ ವಿಜಯಪುರ ನಗರ ಮತಕ್ಷೇತ್ರದ ಸೌಭಾಗ್ಯ ನಗರ ಮತದಾರರು
ವಿಜಯಪುರ: ನಾನಾ ಬೇಡಿಕೆಗಳು ಈಡೇರದ ಹಿನ್ನೆಲೆಯಲ್ಲಿ ವಿಜಯಪುರ ನಗರ ಮತಕ್ಷೇತ್ರದ ಶಿವಗಿರಿ ರಸ್ತೆಯಲ್ಲಿರುವ ಮತ್ತು 17ನೇ ವಾರ್ಡ್ ವ್ಯಾಪ್ತಿಯ ಸೌಭಾಗ್ಯ ನಗರ ನಿವಾಸಿಗಳು ಈ ಬಾರಿ ಚುನಾವಣೆ ಬಹಿಷ್ಕರಿಸಲು ನಿರ್ಧರಿಸಿದ್ದಾರೆ. ಅಲ್ಲದೇ, ಈ ಕುರಿತು ಬಡಾವಣೆಯಲ್ಲಿ ಫ್ಲೆಕ್ಸ್ ಕೂಡ ಅಳವಡಿಸಿದ್ದಾರೆ. ಈ ಕುರಿತು ಜಿಲ್ಲಾಧಿಕಾರಿ ಕಚೇರಿಗೆ ತೆರಳಿದ ಇಲ್ಲಿನ ಮುಖಂಡರು ಶ್ರೀ ಹನುಮಾನ ಮಂದಿರ ಸೇವಾ ಸಮಿತಿ ನೇತೃತ್ವದಲ್ಲಿ ಅಧಿಕಾರಿಗಳಿಗೆ ಮನವಿ ಪತ್ರ ಸಲ್ಲಿಸಿದ್ದಾರೆ. ತಮ್ಮ ಬಡಾವಣೆಯಲ್ಲಿ ಕಳೆದ ಐದು ವರ್ಷಗಳಿಂದ ರಸ್ತೆ ಮಾಡಿಲ್ಲ. 24×7 ಕುಡಿಯುವ […]
ಕಾಂಗ್ರೆಸ್ ಅಧಿಕಾರಕ್ಕೆ ಬಂದ ಬಳಿಕ ರಾಜ್ಯದ ಬಾಕಿ ಇರುವ ಎಲ್ಲ ನೀರಾವರಿ ಯೋಜನೆಗಳನ್ನು ಪೂರ್ಣಗೊಳಿಸಲಿದೆ- ಎಂ. ಬಿ. ಪಾಟೀಲ
ವಿಜಯಪುರ: ಕಾಂಗ್ರೆಸ್ ಸರಕಾರ ಅಧಿಕಾರಕ್ಕೆ ಬಂದ ನಂತರ ರಾಜ್ಯದಲ್ಲಿ ಬಾಕಿ ಇರುವ ಎಲ್ಲ ನೀರಾವರಿ ಯೋಜನೆಗಳನ್ನು ಪೂರ್ಣಗೊಳಿಸುವುದಾಗಿ ಕೆ.ಪಿ.ಸಿ.ಸಿ ಪ್ರಚಾರ ಸಮಿತಿ ಅಧ್ಯಕ್ಷ ಎಂ. ಬಿ. ಪಾಟೀಲ ಹೇಳಿದರು. ಬಬಲೇಶ್ವರ ತಾಲೂಕಿನ ಹಲಗಣಿ, ಶೇಗುಣಸಿ, ಮದಗುಣಕಿ, ಕಂಬಾಗಿ, ನಂದ್ಯಾಳ, ಬೋಳಚಿಕ್ಕಲಕಿ ಮತ್ತು ಸಂಗಾಪುರ ಎಸ್. ಎಚ್ ಗ್ರಾಮಗಳಿಗೆ ಭೇಟಿ ನೀಡಿದ ಅವರು ಗ್ರಾಮಸ್ಥರೊಂದಿಗೆ ಮಾತನಾಡಿದರು. 2013 ರಿಂದ 2018ರ ಅವಧಿಯಲ್ಲಿ ಜಲಸಂಪನ್ಮೂಲ ಸಚಿವನಾಗಿ ಶಕ್ತಿಮೀರಿ ಸಾಕಷ್ಟು ನೀರಾವರಿ ಕೆಲಸ ಮಾಡಿದ್ದೇನೆ. ಮುಂದೆ ಕಾಂಗ್ರೆಸ್ ಮತ್ತೆ ಅಧಿಕಾರಕ್ಕೆ ಬರಲಿದ್ದು, […]
ದೃಢೀಕರಣವಿಲ್ಲದೇ ಯಾವುದೇ ಪ್ರಚಾರ ಸಾಮಗ್ರಿ ಮುದ್ರಿಸಿದರೆ ಪ್ರಜಾಪ್ರತಿನಿಧಿ ಕಾಯ್ದೆಯಡಿ ಕ್ರಮ- ಡಾ. ವಿಜಯಮಹಾಂತೇಶ ಬಿ. ದಾನಮ್ಮನವರ ಎಚ್ಚರಿಕೆ
ವಿಜಯಪುರ: ವಿಧಾನಸಭೆ ಚುನಾವಣೆಗೆ ಸಂಬಂಧಿಸಿದಂತೆ ಯಾವುದೇ ಪ್ರಚಾರ ಸಾಮಗ್ರಿಗಳನ್ನು ದೃಢೀಕರಣವಿಲ್ಲದೇ ಮುದ್ರಿಸಿದರೆ ಪ್ರಜಾಪ್ರತಿನಿಧಿ ಕಾಯ್ದೆಯಡಿ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾ ಚುನಾವಣಾಧಿಕಾರಿ ಮತ್ತು ಜಿಲ್ಲಾಧಿಕಾರಿ ಡಾ. ವಿಜಯಮಹಾಂತೇಶ ಬಿ. ದಾನಮ್ಮನವರ ಎಚ್ಚರಿಕೆ ನೀಡಿದ್ದಾರೆ. ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ರಾಜಕೀಯ ಪಕ್ಷಗಳ ಪ್ರತಿನಿಧಿಗಳ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಚುನಾವಣೆಗೆ ಸಂಬಂಧಿಸಿದಂತೆ ಪ್ರಚಾರ ಸಾಮಗ್ರಿಗಳು ಮತ್ತು ಯಾವುದೇ ಕರಪತ್ರಗಳಲ್ಲಿ ಆಕ್ಷೇಪಾರ್ಹ ಅಂಶಗಳು ಇರಬಾರದು. ಚುನಾವಣೆ ನಿಯಮದಂತೆ ಮುದ್ರಕರು ಪರಿಶೀಲಿಸಿ, ನಿಗದಿ ಪಡಿಸಿದ ನಮೂನೆ-ಎ ಹಾಗೂ ನಮೂನೆ-ಬಿ […]
ಅತ್ಯುತ್ತಮ ಶಿಕ್ಷಣ, ಉತ್ತಮ ಆರೋಗ್ಯಕ್ಕೆ ಆದ್ಯತೆ: ಆಪ್ ಅಭ್ಯರ್ಥಿ ಹಾಸಿಂಪೀರ ವಾಲೀಕಾರ
ವಿಜಯಪುರ: ಸರಕಾರಿ ಕ್ಷೇತ್ರದ ಉದ್ಯೋಗಗಳಲ್ಲಿಮಹಿಳೆಯರಿಗೆ ಶೇ. 33 ಮೀಸಲಾತಿ ನೀಡುವ ಮೂಲಕ ಮಹಿಳಾ ಸಬಲೀಕರಣಕ್ಕೆ ಒತ್ತು ನೀಡುತ್ತಿರುವ ಆಮ್ ಆದ್ಮಿ ಪಕ್ಷವನ್ನು ಎಲ್ಲರೂ ಬೆಂಬಲಿಸಬೇಕು ಎಂದು ವಿಜಯಪುರ ನಗರ ವಿಧಾನಸಭೆ ಕ್ಷೇತ್ರದ ಆಮ್ ಆದ್ಮಿ ಪಕ್ಷದ ಅಭ್ಯರ್ಥಿ ಹಾಸಿಂಪೀರ ವಾಲಿಕಾರ ಹೇಳಿದ್ದಾರೆ. ನಗರದ 28ನೇ ವಾರ್ಡಿನ ರಾಮನಗರದಲ್ಲಿ ಆಮ್ ಆದ್ಮಿ ಪಕ್ಷದ ಪರ ಪ್ರಚಾರ ಕೈಗೊಂಡು ಅವರು ಮಾತನಾಡಿದರು. ಆಮ್ ಆದ್ಮಿ ಪಕ್ಷ ಜನರ ಸೇವೆಗಾಗಿ ಸ್ಥಾಪಿಸಲಾಗಿದ್ದು, ಈ ಪಕ್ಷದಲ್ಲಿ ಜನರ ಹಿತಕ್ಕಾಗಿ ಪ್ರಥಮ ಆದ್ಯತೆ ನೀಡಲಾಗುತ್ತದೆ. […]
ಗಾನಯೋಗಿ ಸಂಘದ ವತಿಯಿಂದ ಮತದಾನ ಜಾಗೃತಿ ಕಾರ್ಯಕ್ರಮ
ವಿಜಯಪುರ: ಸಾಮಾಜಿಕ ಕಾಳಜಿಯ ಮೂಲಕ ಗಮನ ಸೆಳೆದಿರುವ ನಗರದ ಗಾನಯೋಗಿ ಸಂಘದ ವತಿಯಿಂದ ವಿಜಯಪುರ ನಗರದ ಹೃದಯ ಭಾಗದಲ್ಲಿರುವ ಗಾಂಧಿ ಚೌಕ್ ಬ್ರಿಜ್ ಕೆಳಗಡೆ ಗೋಡೆಗಳ ಮೇಲೆ ಮತದಾನ ಜಾಗೃತಿಯ ಕುರಿತು ನಾನ್ನುಡಿಗಳನ್ನು ಬರೆದು ಮತದಾರರಲ್ಲಿ ಜಾಗೃತಿ ಅರಿವು ಮೂಡಿಸಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಸಂಘದ ಅಧ್ಯಕ್ಷ ಪ್ರಕಾಶ ಆರ್. ಕೆ., ನಮ್ಮ ಭವಿಷ್ಯ ನಾವು ಮಾಡುವ ಮತದಾನದ ಮೇಲೆ ನಿಂತಿದೆ. ಪ್ರತಿಯೊಬ್ಬರು ಮತದಾನ ಮಾಡಿ ಪ್ರಜಾಪ್ರಭುತ್ವವನ್ನು ಗಟ್ಟಿಗೊಳಿಸಬೇಕು ಎಂದು ಹೇಳಿದರು. ಮತದಾರರು ಯಾವುದೇ ಆಸೆ, ಆಮೀಷಗಳಿಗೆ […]