ಪ್ರತಿ ವಿಧಾನಸಭಾ ಕ್ಷೇತ್ರದಲ್ಲಿ 5 ಸಖಿ , 1 ವಿಶೇಷ ಚೇತನ ಮತದಾರರ ಬೂತ ಸ್ಥಾಪನೆ- ಡಾ. ದಾನಮ್ಮನವರ

ವಿಜಯಪುರ: ಪಾರದರ್ಶಕ ಮತ್ತು ನ್ಯಾಯಸಮ್ಮತ ಚುನಾವಣೆ ನಡೆಸಲು ಜಿಲ್ಲಾಡಳಿತದ ವತಿಯಿಂದ ಸಕಲ ಸಿದ್ಧತೆಗಳನ್ನು ಕೈಗೊಳ್ಳಲಾಗಿದ್ದು, ಪ್ರತಿ ವಿಧಾನಸಭೆ ಕ್ಷೇತ್ರಕ್ಕೆ 5‌ ಸಖಿ ಹಾಗೂ 1 ವಿಶೇಷ ಚೇತನ ಮತದಾರರ ಬೂತ್‍ಗಳನ್ನು ಸ್ಥಾಪಿಸಲಾಗುವುದು ಎಂದು ಜಿಲ್ಲಾ ಚುನಾವಣಾಧಿಕಾರಿ ಮತ್ತು ಜಿಲ್ಲಾಧಿಕಾರಿ ಡಾ. ವಿಜಯಮಹಾಂತೇಶ ಬಿ.‌ ದಾನಮ್ಮನವರ ಮಾಹಿತಿ ನೀಡಿದ್ದಾರೆ. ಮುಖ್ಯ ಚುನಾವಣಾಧಿಕಾರಿಗಳ ಅಧ್ಯಕ್ಷತೆಯಲ್ಲಿ ನಡೆದ ವಿಡಿಯೋ ಕಾನ್ಫರೆನ್ಸ್ ನಲ್ಲಿ ಮಾತನಾಡಿದ ಅವರು, ಜಿಲ್ಲೆಯ ಸಿದ್ಧತೆಗಳ ಕುರಿತು ಮಾಹಿತಿ ನೀಡಿದರು. ವೆಬ್‍ಕಾಸ್ಟಿಂಗ್‍ಗಾಗಿ ವಿಧಾನಸಭೆ ಕ್ಷೇತ್ರವಾರು 713 ಮತಗಟ್ಟೆಗಳನ್ನು ಗುರುತಿಸಲಾಗಿದ್ದು, ಇನ್ನುಳಿದಂತೆ […]

ಅಪ್ಪುಗೆ ವಿಜಯಪುರ ನಗರ ಮತಕ್ಷೇತ್ರದಿಂದ ಬಿಜೆಪಿ ಟಿಕೆಟ್ ಕೊಡಿ- ಯತ್ನಾಳಗೆ ಬೇರೆ ಕ್ಷೇತ್ರ ಕ್ಷೇತ್ರದಿಂದ ಟಿಕೆಟ್ ನೀಡಿ- ಘಟಕಾಂಬಳೆ, ಹದನೂರ ಆಗ್ರಹ

ವಿಜಯಪುರ: ಚುನಾವಣೆ ನಾಮಪತ್ರ ಸಲ್ಲಿಕೆ ಸಮೀಪಿಸುತ್ತಿದ್ದಂತೆ ವಿಜಯಪುರ ನಗರ ಮತಕ್ಷೇತ್ರದಿಂದ ಬಿಜೆಪಿ ಟಿಕೆಟ್ ನ್ನು ಪಟ್ಟಣಶೆಟ್ಟಿ ಮತ್ತು ಯತ್ನಾಳ ಅವರಿಗೆ ನೀಡಬೇಕು ಎಂಬ ಎಂದು ಇಬ್ಬರೂ ನಾಯಕರ ಬೆಂಬಲಿಗರ ಆಗ್ರಹ ಹೆಚ್ಚಾಗುತ್ತಿದೆ. ನಗರದಲ್ಲಿ ಜಂಟಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಸಚಿವ ಅಪ್ಪು ಪಟ್ಟಣಶೆಟ್ಟಿ ಬೆಂಬಲಿಗದರು ಈ ಬಾರಿ ವಿಜಯಪುರ ನಗರ ಮತಕ್ಷೇತ್ರದಿಂದ ಅಪ್ಪು ಪಟ್ಟಣಶೆಟ್ಟಿ ಅವರಿಗೆ ಟಿಕೆಟ್ ನೀಡಬೇಕು ಎಂದು ಅಗ್ರಹಿಸಿದ್ದಾರೆ. ಮಾಜಿ ಉಪಮೇಯರ್ ಗೋಪಾಲ ಘಟಕಾಂಬಳೆ ಮಾತನಾಡಿ, ಫೈರ್ ಬ್ರ್ಯಾಂಡ್ ಎಂದೇ ಗುರುತಿಸಿಕೊಂಡಿರುವ ಯತ್ನಾಳ ಅವರಿಗೆ […]

ರಾಜ್ಯ ಸರಕಾರಿ ನೌಕರರಿಗೆ ರಾಷ್ಟ್ರೀಯ ಪಿಂಚಣಿ ವ್ಯವಸ್ಥೆ ಬದಲು ಹಳೆಯ ಪಿಂಚಣಿ ಯೋಜನೆಗೆ ಮರುಜಾರಿಗೆ ಕೇಂದ್ರ ಸ್ಪಂದನೆ- ಅರುಣ ಶಹಾಪುರ ಸಂತಸ

ವಿಜಯಪುರ: ಸರಕಾರಿ ನೌಕರರಿಗೆ ಹಳೆಯ ಪಿಂಚಣಿ ಯೋಜನೆ ಮರುಜಾರಿಗೆ ಕೇಂದ್ರ ಸರಕಾರ ಸಕಾರಾತ್ಮಕವಾಗಿ ಸ್ಪಂದಿಸಿದ್ದು, ಇದರ ಪರಾಮರ್ಶೆ ಮತ್ತು ಸುಧಾರಣೆಗಾಗಿ ಕೇಂದ್ರ ಹಣಕಾಸು ಸಚಿವಾಲಯ ನಾಲ್ಕು ಜನರ ಸಮಿತಿ ರಚಿಸಿದೆ.  ಕೇಂದ್ರದ ಈ ನಿರ್ಧಾರಕ್ಕೆ ಕೃತಜ್ಞತೆ ಸಲ್ಲಿಸುವುದಾಗಿ ಮಾಜಿ ಎಂಎಲ್‌ಸಿ ಮತ್ತು ರಾಜ್ಯ ಮಾಧ್ಯಮಿಕ ಶಿಕ್ಷಕ ಸಂಘದ ಕಾರ್ಯಾಧ್ಯಕ್ಷ ಅರುಣ ಶಹಾಪುರ ತಿಳಿಸಿದ್ದಾರೆ. ಈ ಕುರಿತು ಮಾಧ್ಯಮ ಪ್ರಕಟಣೆ ನೀಡಿರುವ ಅವರು, ಕೇಂದ್ರ ಸರಕಾರ ನೌಕರರ ಹಿತ ಕಾಪಾಡಲು ಮುಂದಾಗಿರುವುದು ಸ್ವಾಗತಾರ್ಹವಾಗಿದೆ.  ರಾಷ್ಟ್ರೀಯ ಪಿಂಚಣಿ ವ್ಯವಸ್ಥೆಯಲ್ಲಿ ಆಗಬೇಕಿರುವ […]

ಗುಮ್ಮಟ ನಗರಿಯಿಂದ ಯತ್ನಾಳಗೆ ಟಿಕೆಟ್ ನೀಡಬೇಕು- ಬಿಜೆಪಿ ಕಾರ್ಪೋರೇಟರ್ ಗಳ ಆಗ್ರಹ

ವಿಜಯಪುರ: ಗುಮ್ಮಟ ನಗರಿ ವಿಜಯಪುರ ನಗರ ಮತಕ್ಷೇತ್ರದಿಂದ ಬಸನಗೌಡ ಪಾಟೀಲ ಯತ್ನಾಳ ಅವರಿಗೆ ಬಿಜೆಪಿ ಟಿಕೆಟ್ ನೀಡಬೇಕು ಎಂದು ಮಹಾನಗರ ಪಾಲಿಕೆಯ ಬಿಜೆಪಿ ಸದಸ್ಯರು ಆಗ್ರಹಿಸಿದ್ದಾರೆ. ವಿಜಯಪುರದಲ್ಲಿ ಜಂಟಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಪ್ರೇಮಾನಂದ ಬಿರಾದಾರ, ಮಾಜಿ ಉಪಮೇಯರ್ ರಾಜೇಶ ದೇವಗಿರಿ ಮತ್ತೀತರರು, ಕಳೆದ ಮಹಾನಗರ ಪಾಲಿಕೆ ಚುನಾವಣೆ ಸಂದರ್ಭದಲ್ಲಿ ಪಕ್ಷ ವಿರೋಧಿ ಚಟುವಟಿಕೆ ಹಿನ್ನೆಲೆಯಲ್ಲಿ ಉಚ್ಛಾಟಿತರಾಗಿರುವ ಮುಖಂಡರು ಯತ್ನಾಳ ವಿರುದ್ಧ ಇಲ್ಲಸಲ್ಲದ ಆರೋಪ ಮಾಡುತ್ತಿರುವುದು ಸರಿಯಲ್ಲ ಎಂದು ಹೇಳಿದರು.   ಮಹಾನಗರ ಪಾಲಿಕೆಯ ಬಿಜೆಪಿಯ 18 ಕಾರ್ಪೋರೇಟರ್ […]

ಒಳಮೀಸಲಾತಿ ರದ್ದು ಪಡಿಸಲು ಆಗ್ರಹಿಸಿ ಬಂಜಾರಾ ಸಮುದಾಯದಿಂದ ಪ್ರತಿಭಟನೆ, ಮನವಿ ಪತ್ರ ಸಲ್ಲಿಕೆ

ವಿಜಯಪುರ: ಒಳಮೀಸಲಾತಿ ವರ್ಗೀಕರಣ ಅವೈಜ್ಞಾನಿಕವಾಗಿದ್ದು, ಅದನ್ನು ರದ್ದು ಪಡಿಸುವಂತೆ ಆಗ್ರಹಿಸಿ ಆಲ್ ಇಂಡಿಯಾ ಬಂಜಾರ ಸೇವಾ ಸಂಘ(ಎ.ಐ.ಬಿ.ಎಸ್‌.ಎಸ್‌.) ವತಿಯಿಂದ ಜಿಲ್ಲಾಧಿಕಾರಿಗಳಿಗೆ ಮನವಿ ಪತ್ರ ಸಲ್ಲಿಸಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಜಿ. ಪಂ. ಮಾಜಿ ಅಧ್ಯಕ್ಷ ಅರ್ಜುನ ಹೀರು ರಾಠೋಡ, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತರಾತುರಿಯಲ್ಲಿ , ಸಚಿವರಾದ ಗೋವಿಂದ ಕಾರಜೋಳ, ಅಂಗಾರಾ, ಪ್ರಭು ಚವ್ಹಾಣ, ಡಿ. ಸುಧಾಕರ ಅವರನ್ನೊಳಗೊಂಡ ಐದು ಜನರ ಉಪಸಮಿತಿ ರಸಿಚಿ ಚುನಾವಣೆ ಸಂರ್ಭದಲ್ಲಿ ಪರಿಶಿಷ್ಠ ಜಾತಿಯಲ್ಲಿರುವ 101 ಸಮುದಾಯಗಳನ್ನು ಒಡೆಯುವ ಕೆಲಸ […]

ನ್ಯಾಯಸಮ್ಮತ ಚುನಾವಣೆಗೆ ಜಿಲ್ಲಾಡಳಿತ ಸನ್ನದ್ಧ: ಡಾ. ವಿಜಯಮಹಾಂತೇಶ ಬಿ. ದಾನಮ್ಮನವರ

ವಿಜಯಪುರ: ನ್ಯಾಯಸಮ್ಮತ, ಪಾರದರ್ಶಕ ಚುನಾವಣೆಗೆ ಎಲ್ಲ ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ ಎಂದು ಜಿಲ್ಲಾ ಚುನಾವಣಾಧಿಕಾರಿಗಳಾದ ಜಿಲ್ಲಾಧಿಕಾರಿ ಡಾ.ವಿಜಯಮಹಾಂತೇಶ ದಾನಮ್ಮನವರ ತಿಳಿಸಿದರು. ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ರಾಜ್ಯ ಚುನಾವಣೆ ಆಯೋಗದಿಂದ ನಡೆದ ವಿಡಿಯೋ ಕಾನ್ಫರೆನ್ಸಲ್ಲಿ  ಮಾತನಾಡಿದ ಅವರು, ಜಿಲ್ಲೆಯ ಎಂಟು ವಿಧಾನ ಸಭೆ ಮತಕ್ಷೇತ್ರಗಳಲ್ಲಿ ಸುಗಮವಾಗಿ ಮತದಾನ ನಡೆಯಲು ಎಲ್ಲ ಪೂರ್ವ ತಯಾರಿ ಮಾಡಿಕೊಳ್ಳಲಾಗಿದೆ. ವಿಶೇಷವಾಗಿ ಕಳೆದ ಚುನಾವಣೆಗಳಲ್ಲಿ ಅತಿ ಕಡಿಮೆ ಮತದಾನವಾದ ಮತಗಟ್ಟೆಗಳಲ್ಲಿ ವಿಶೇಷ ಮುತುವರ್ಜಿ ವಹಿಸಿ ಜಾಗೃತಿ ಕಾರ್ಯಕ್ರಮಗಳನ್ನು ಕೈಗೊಂಡು ಮತದಾನದ ಮಹತ್ವದ ಕುರಿತು ಅರಿವು […]

ಒಳಮೀಸಲಾತಿಗೆ ವಿರೋಧ- ತಿಕೋಟಾ ತಾಲೂಕು ಬಂಜಾರ ಸಮುದಾಯದಿಂದ ತಹಸೀಲ್ದಾರ್ ಗೆ ಮನವಿ ಪತ್ರ ಸಲ್ಲಿಕೆ

ವಿಜಯಪುರ: ಒಳಮೀಸಲಾತಿಯನ್ನು ವಿರೋಧಿಸಿ ತಾಲೂಕು ಬಂಜಾರಾ ಸಮುದಾಯದ ಮುಖಂಡರು ತಿಕೋಟಾದಲ್ಲಿ ತಹಸೀಲ್ದಾರ್ ಗೆ ಮನವಿ ಪತ್ರ ಸಲ್ಲಿಸಿದ್ದಾರೆ. ನ್ಯಾಯಮೂರ್ತಿ ಸದಾಶಿವ ಆಯೋಗದ ಅವೈಜ್ಞಾನಿಕ ವರದಿಯನ್ನು ಅನುಷ್ಠಾನಗೊಳಿಸಲಾಗಿದ್ದು, ಅದನ್ನು ಹಿಂಪಡೆಯಬೇಕು.  2012ರಲ್ಲಿ ನ್ಯಾಯಮೂರ್ತಿ ಸದಾಶಿವ ಆಯೋಗದ ವರದಿಯನ್ನು ಅಂದಿನ ಸಮಾಜ ಕಲ್ಯಾಣ ಸಚಿವ ನಾರಾಯಣಸ್ವಾಮಿ ಸರಕಾರಕ್ಕೆ ಸಲ್ಲಿಸಿದ್ದಾರೆ.  ಇದು ಅವೈಜ್ಞಾನಿಕ ಅಷ್ಟೇ ಅಲ್ಲ, ಕಾನೂನುಬಾಹಿರವೂ ಆಗಿದೆ.  ಅಲ್ಲದೇ, ಇದನ್ನು ವಿರೋಧಿಸಿ ಈಗಾಗಲೇ ಹಲವಾರು ಬಾರಿ ಬಂಜಾರ, ಭೋವಿ, ವಡ್ಡರ, ಕೊರಚ, ಕರೊವ ಸಮುದಾಯದವರು ರಾಜ್ಯಾದ್ಯಂತ ಹೋರಾಟವನ್ನು ಮಾಡಿದ್ದಾರೆ.  2020ರಲ್ಲಿ […]

ದೇವರ ಹಿಪ್ಪರಗಿಯಿಂದ ಸ್ಪರ್ಧಿಸಲು ಕಾಂಗ್ರೆಸ್ ಟಿಕೆಟ್ ನೀಡಬೇಕು- ಎಸ್. ಆರ್. ಪಾಟೀಲರಿಗೆ ನೀಡಿದರೆ ಕೆಲಸ ಮಾಡಲ್ಲ- ಬಾಪುಗೌಡ ಪಾಟೀಲ ವಡವಡಗಿ

ವಿಜಯಪುರ: ಈ ಬಾರಿಯ ವಿಧಾನ ಸಭೆ ಚುನಾವಣೆಯಲ್ಲಿ ದೇವರ ಹಿಪ್ಪರಗಿ ಮತಕ್ಷೇತ್ರದಿಂದ ನನಗೆ ಟಿಕೆಟ್ ನೀಡಬೇಕು ಎಂದು ಜಿಲ್ಲಾ ಕಿಸಾನ್ ಕಾಂಗ್ರೆಸ್ ಅಧ್ಯಕ್ಷ ಬಾಪುಗೌಡ ಮಲ್ಲನಗೌಡ ಪಾಟೀಲ(ವಡವಡಗಿ) ಆಗ್ರಹಸಿದ್ದಾರೆ. ವಿಜಯಪುರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ದೇವರ ಹಿಪ್ರರಗಿ ಮತಕ್ಷೇತ್ರದವನಾಗಿ ಕಳೆದ 19 ವರ್ಷಗಳಿಂದ ಕಾಂಗ್ರೆಸ್ ಸಂಘಟನೆಗಾಗಿ ಬಹಳಷ್ಟು ದುಡಿದಿದ್ದೇನೆ.  2005 ರಿಂದ ದೇವರ ಹಿಪ್ಪರಗಿ ಮತಕ್ಷೇತ್ರದಲ್ಲಿ ಸಮಾಜ ಸೇವೆ ಮಾಡುತ್ತ ಕಾಂಗ್ರೆಸ್ ಬಲಪಡಿಸಿದ್ದೇನೆ.  ಈ ಕ್ಷೇತ್ರದಿಂದ ಎ. ಎಸ್. ಪಾಟೀಲ ನಡಹಳ್ಳಿ ಎರಡು ಬಾರಿ ಶಾಸಕರಾಗಿ ಆಯ್ಕೆಯಾಗಲು […]

ವಿಧಾನಸಭೆ ಚುನಾವಣೆ: ಚುನಾವಣಾಧಿಕಾರಿಗಳಿಂದ ರಾಜಕೀಯ ಪಕ್ಷಗಳ ಪ್ರತಿನಿಧಿಗಳೊಂದಿಗೆ ಸಭೆ

ವಿಜಯಪುರ: ವಿಧಾನಸಭೆ ಚುನಾವಣೆ ಈಗಾಗಲೇ ಘೋಷಣೆಯಾಗಿದ್ದು, ಮಾದರಿ ನೀತಿ ಸಂಹಿತೆ ಜಾರಿಯಲ್ಲಿರುವುದರಿಂದ ಚುನಾವಣಾ ಆಯೋಗವು ಜಾರಿಗೊಳಿಸಿರುವ ನೀತಿ ಸಂಹಿತೆಗಳನ್ನು ತಪ್ಪದೇ ಪಾಲಿಸುವಂತೆ ನಾನಾ ರಾಜಕೀಯ ಪಕ್ಷಗಳ ಪ್ರತಿನಿಧಿಗಳಿಗೆ ವಿಜಯಪುರ ನಗರ ವಿಧಾನಸಭೆ ಮತಕ್ಷೇತ್ರದ ಚುನಾವಣಾಧಿಕಾರಿ ಮತ್ತು ಉಪವಿಭಾಗಾಧಿಕಾರಿ ಕ್ಯಾ. ಮಹೇಶ ಮಾಲಗಿತ್ತಿ  ಸೂಚನೆ ನೀಡಿದರು. ವಿಜಯಪುರ ನಗರ ಮತಕ್ಷೇತ್ರದ ಚುನಾವಣಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಾನಾ ರಾಜಕೀಯ ಪಕ್ಷಗಳ ಪ್ರತಿನಿಧಿಗಳೊಂದಿಗೆ ಸಭೆ ನಡೆಸಿದ ಅವರು, ವಿಧಾನಸಭೆ ಚುನಾವಣೆಗೆ ಏ. 13 ಗುರವಾರ ಅಧಿಸೂಚನೆ ಹೊರಡಿಸುವುದು. ನಾಮಪತ್ರ ಸಲ್ಲಿಸಲು ಏ. […]

ಅಪ್ಪು ಪಟ್ಟಣಶೆಟ್ಟಿಗೆ ಟಿಕೆಟ್ ಕೊಡಿ- ಬಣಜಿಗರಿಂದ ಬಿ. ಎಸ್. ಯಡಿಯೂರಪ್ಪ, ಬಿ. ವೈ. ವಿಜಯೇಂದ್ರ, ಜಗದೀಶ ಶೆಟ್ಟರ ಭೇಟಿ- ಮನವಿ ಪತ್ರ ಸಲ್ಲಿಕೆ

ಬೆಂಗಳೂರು: ಮಾಜಿ ಸಚಿವ ಅಪ್ಪು ಪಟ್ಟಣಶೆಟ್ಟಿ ಅವರಿಗೆ ವಿಜಯಪುರ ನಗರ ಮತಕ್ಷೇತ್ರದಿಂದ ಬಿಜೆಪಿ ಟಿಕೆಟ್ ನೀಡುವಂತೆ ಆಗ್ರಹಿಸಿ ಬಣಜಿಗ ಸಮಾಜದ ಮುಖಂಡರು ಮಾಜಿ ಸಿಎಂ ಗಳಾದ ಬಿ. ಎಸ್. ಯಡಿಯೂರಪ್ಪ, ಜಗದೀಶ ಶೆಟ್ಟರ ಮತ್ತು ಬಿಜೆಪಿ ರಾಜ್ಯ ಉಪಾಧ್ಯಕ್ಷ ವಿ. ವೈ. ವಿಜಯೇಂದ್ರ ಅವರನ್ನು ಭೇಟಿ ಮಾಡಿ ಆಗ್ರಹಿಸಿದ್ದಾರೆ.  ಬಣಜಿಗ ಸಂಘದ ರಾಜ್ಯಾಧ್ಯಕ್ಷ ಅಂದಾನೆಪ್ಪ ಜವಳಿ ಅವರ ನೇತೃತ್ವದಲ್ಲಿ ಬಿಜೆಪಿ ಮುಖಂಡರನ್ನು ಭೇಟಿ ಮಾಡಿದ ವಿಜಯಪುರ ಜಿಲ್ಲೆಯ ಸುಮಾರು 150 ಜನ ಬಣಜಿಗರ ನಿಯೋಗ ಈ ಮನವಿ […]