Karjol Brothers Voting: ಡಾ. ಗೋಪಾಲ ಕಾರಜೋಳ, ಉಮೇಶ ಕಾರಜೋಳ ದಂಪತಿಯಿಂದ ಮತದಾನ

ವಿಜಯಪುರ: ವಿಜಯಪುರ ಮಹಾನಗರ ಪಾಲಿಕೆ ಮತದಾನ ಚುರುಕು ಪಡೆದುಕೊಂಡಿದ್ದು, ಜಲಸಂಪನ್ಮೂಲ ಸಚಿವ ಗೋವಿಂದ ಕಾರಜೋಳ ಅವರ ಪುತ್ರರಾದ ಡಾ ಗೋಪಾಲ ಕಾರಜೋಳ ಮತ್ತು ಉಮೇಶ ಕಾರಜೋಳ ದಂಪತಿ ಸಮೇತ ಬಂದು ತಮ್ಮ ಹಕ್ಕು ಚಲಾಯಿಸಿದ್ದಾರೆ. ವಿಜಯಪುರ ನಗದ ಮತ್ತು ನಾಗಠಾಣ ಮತಕ್ಷೇತ್ರದ ವ್ಯಾಪ್ತಿಯಲ್ಲಿರುವ ವಾರ್ಡ್ ಸಂಖ್ಯೆ 12ರಲ್ಲಿ ಬರುವ ಸರಕಾರಿ ಶಾಲೆ ಸಂಖ್ಯೆ 37ರಲ್ಲಿರುವ ಮತಗಟ್ಟೆ ಸಂಖ್ಯೆ 98ರಲ್ಲಿ ಪತ್ನಿ ಡಾ. ನಿವೇದಿತಾ ಕಾರಜೋಳ ಜೊತೆ ಅಗಮಿಸಿದ ಡಾ. ಗೋಪಾಲ ಕಾರಜೋಳ ತಮ್ಮ ಹಕ್ಕು ಚಲಾಯಿಸಿದರು. ಈ […]

DC Family Voting: ಪತ್ನಿ ಶ್ವೇತಾ ಜೊತೆ ಆಗಮಿಸಿ ಮತದಾನ ಮಾಡಿದ ಜಿಲ್ಲಾಧಿಕಾರಿ ಡಾ. ವಿಜಯಮಹಾಂತೇಶ ಬಿ. ದಾನಮ್ಮನವರ

ವಿಜಯಪುರ: ವಿಜಯಪುರ ಮಹಾನಗರ ಪಾಲಿಕೆ ಚುನಾವಣೆ ಬಿರುಸಿನಿಂದ ಸಾಗಿದೆ. ಜಿಲ್ಲಾಧಿಕಾರಿ ಡಾ. ವಿಜಯಮಹಾಂತೇಶ ಬಿ. ದಾನಮ್ಮನವರ ತಮ್ಮ ಪತ್ನಿ ಶ್ವೇತಾ ದಾನಮ್ಮನವರ ಜೊತೆ ವಿಜಯಪುರ ನಗರದ ಸರಕಾರಿ ಬಾಲಕರ ಶಾಲೆಯಲ್ಲಿರುವ ಮತಗಟ್ಟೆ ಸಂಖ್ಯೆ 219ರಲ್ಲಿ ಸದರಿಯಲ್ಲಿ ನಿಂತು ತಮ್ಮ ಹಕ್ಕು ಚಲಾಯಿಸಿದರು. ಸರತಿ ಸಾಲಿನಲ್ಲಿ ನಿಂತು ದರಬಾರ ಶಾಲೆಯಲ್ಲಿ ಸ್ಥಾಪಿಲಾಗಿರುವ 219 ರ ಮತಗಟ್ಟೆಗೆ ತೆರಳಿ ತಮ್ಮ ಮತದಾನ ಹಕ್ಕನ್ನು ಚಲಾಯಿಸುವ ಮೂಲಕ ಮತದಾನ ಮಹತ್ವ ಸಾರಿದರು. ಮತಗಟ್ಟೆಗಳಿಗೆ ಭೇಟಿ ನೀಡಿದ ಡಿಸಿ, ಎಸ್ಪಿ ಚುನಾವಣೆ ಶಾಂತಿಯತವಾಗಿ […]

Yatnal Family Voting: ಕುಟುಂಬ ಸಮೇತ ಬಂದು ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಮತದಾನ ಮಾಡಿದ ಶಾಸಕ ಯತ್ನಾಳ

ವಿಜಯಪುರ: ವಿಜಯಪುರ ನಗರ ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳ ಮಹಾನಗರ ಪಾಲಿಕೆಯ ಚುನಾವಣೆಯಲ್ಲಿ ತಮ್ಮ ಮತದಾನ ಮಾಡಿದ್ದಾರೆ. ವಿಜಯಪುರ ನಗರದ ಎಸ್ ಎಸ್ ಹೈಸ್ಕೂಲ್ ಲಿನಲ್ಲಿರುವ ಮತಗಟ್ಟೆಗೆ ಕುಟುಂಬ ಸಮೇತ ಆಗಮಿಸಿದ ಅವರು, ತಮ್ಮ ಹಕ್ಕು ಚಲಾಯಿಸಿದರು.  ಪತ್ನಿ ಸುಜಾತಾ, ಮಕ್ಕಳಾದ ರಾಮನಗೌಡ ಮತ್ತು ಆದರ್ಶಗೌಡ ಜೊತೆ ಆಗಮಿಸಿದ ಅವರು ಮತ ಚಲಾಯಿಸಿದರು. ಬಳಿಕ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಈ ಬಾರಿ ಮಹಾನಗರ ಪಾಲಿಕೆಯಲ್ಲಿ ಬಿಜೆಪಿ ಸ್ಪಷ್ಟ ಬಹುಮತ ಪಡೆಯಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. […]

Sunilgouda Patil Voting: ಎಂ ಎಲ್ ಸಿ ಸುನೀಲಗೌಡ ಪಾಟೀಲರಿಂದ ಮತದಾನ

ವಿಜಯಪುರ: ವಿಜಯಪುರ ಮಹಾನಗರ ಪಾಲಿಕೆಗೆ ನಡೆಯುತ್ತಿರುವ ಚುನಾವಣೆಗೆ ಮತದಾನ ಬಿರುಸಿನಿಂದ ಸಾಗಿದ್ದು, ವಿಧಾನ ಪರಿಷತ ಕಾಂಗ್ರೆಸ್ ಸದಸ್ಯ ಸುನೀಲಗೌಡ ಪಾಟೀಲ ತಮ್ಮ ಹಕ್ಕು ಚಲಾಯಿಸಿದ್ದಾರೆ. ವಿಜಯಪುರ ನಗರದ ವಾರ್ಡ ಸಂಖ್ಯೆ 11ರಲ್ಲಿ ಬರುವ ಮದ್ದಿನ ಖಣಿ ಬಳಿ ಇರುವ ಮತಗಟ್ಟೆಗಯಲ್ಲಿ ಸದರಿಯಲ್ಲಿ ನಿಂತ ಅವರು, ತಮ್ಮ ಪಾಳಿ ಬಂದ ನಂತರ ಮತದಾನ ಮಾಡಿದರು. ಬಳಿಕ ಮಾತನಾಡಿದ ಅವರು, ಮಹಾನಗರ ಪಾಲಿಕೆಯ ಚುನಾವಣೆಯಲ್ಲಿ ಕಾಂಗ್ರೆಸ್ ಹೆಚ್ಚು ಸ್ಥಾನ ಗಳಿಸಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. ಮತದಾರರ ಪಟ್ಟಿ ಗೊಂದಲ ವಿಚಾರ […]

Election Preparation: ಮಹಾನಗರ ಪಾಲಿಕೆ ಚುನಾವಣೆ: ಮಸ್ಟರಿಂಗ್ ಕೇಂದ್ರಕ್ಕೆ ಭೇಟಿ ನೀಡಿ, ಪರಿಶೀಲನೆ ನಡೆಸಿದ ಡಿಸಿ, ಎಸ್ಪಿ

ವಿಜಯಪುರ: ಮಹಾನಗರ ಪಾಲಿಕೆ ಚುನಾವಣೆಗೆ ಕ್ಷಣಗಣನೆ ಆರಂಭವಾಗಿದ್ದು, ಶುಕ್ರವಾರ ಮತದಾನ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಮತಪೆಟ್ಟಿಗೆ ಮತ್ತು ಮತದಾನಕ್ಕೆ ಅಗತ್ಯವಾಗಿರುವ ಇವಿಎಂ ಮತ್ತೀತರ ಸಲಕರಣೆಗಳನ್ನು ವಿತರಿಸುವ ಕೇಂದ್ರಕ್ಕೆ ವಿಜಯಪುರ ಜಿಲ್ಲಾಧಿಕಾರಿ ಡಾ. ವಿಜಯಮಹಾಂತೇಶ ಬಿ. ದಾನಮ್ಮನವರ ಮತ್ತು ಎಸ್ಪಿ ಎಚ್. ಡಿ. ಆನಂದಕುಮಾರ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಮಸ್ಟರಿಂಗ್ ಕೇಂದ್ರವಾಗಿರುವ ವಿಜಯಪುರ ನಗರದ ವಿ. ವಿ. ದರಬಾರ ಕೇಂದ್ರಕ್ಕೆ ಭೇಟಿ ನೀಡಿ, ಶಾಂತಿಯುತ ಮತದಾನ ನಡೆಸಲು ತಮಗೆ ವಹಿಸಿದ ಜವಾಬ್ದಾರಿಯಿಂದ ಅತ್ಯಂತ ಸಮರ್ಥವಾಗಿ ನಿಭಾಯಿಸಬೇಕು.  ಚುನಾವಣೆ […]

Campaign Close: ಮಹಾನಗರ ಪಾಲಿಕೆ ಚುನಾವಣೆ: ಬಹಿರಂಗ ಪ್ರಚಾರ ಅಂತ್ಯ- ನಾನಾ ಬಡಾವಣೆಗಳಲ್ಲಿ ಪ್ರಚಾರ ನಡೆಸಿದ ಅಭ್ಯರ್ಥಿಗಳು

ವಿಜಯಪುರ: ಅ. 28ರಂದು ಶುಕ್ರವಾರ ನಡೆಯಲಿರುವ ವಿಜಯಪುರ ಮಹಾನಗರ ಪಾಲಿಕೆ ಚುನಾವಣೆಗೆ ಬಹಿರಂಗ ಪ್ರಚಾರ ಸಂಜೆ ಅಂಕೊಂಡಿದೆ. ಈ ಹಿನ್ನೆಲೆಯಲ್ಲಿ ನಿಗದಿತ ಸಮಯಕ್ಕೂ ಮುಂಚೆ ನಾನಾ ರಾಷ್ಟ್ರೀಯ ಮತ್ತು ಪ್ರಾದೇಶಿಕ ಹಾಗೂ ಪಕ್ಷೇತರ ಅಭ್ಯರ್ಥಿಗಳು ತಂತಮ್ಮ ವಾರ್ಡುಗಳಲ್ಲಿ ಬಹಿರಂಗ ಪ್ರಚಾರ ನಡೆಸಿದರು. ವಿಜಯಪುರ ನಗರದ ವಾರ್ಡ್ ಸಂಖ್ಯೆ 32 ರಲ್ಲಿ ಪಕ್ಷೇತರ ಅಭ್ಯರ್ಥಿ ಹೇರಲಗಿ ಸಂಗಪ್ಪ ಬಸವರಾಜ ತಮ್ಮ ವಾರ್ಡ್ ವ್ಯಾಪ್ತಿಯ ಲಿಂಗೇಶ್ವರ ಗುಡಿ ಹತ್ತಿರ, ನವಿ ಗಲ್ಲಿ, ಬಣಗಾರ ಗಲ್ಲಿ, ಹಿರೇಮಠ ಗಲ್ಲಿ, ಕೊಪ್ಪದ ಗಲ್ಲಿ, […]

MBP Campaign: ವಿಜಯಪುರದಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳ ಪರ ಎಂ. ಬಿ. ಪಾಟೀಲ ಬಿರುಸಿನ ಪ್ರಚಾರ

ವಿಜಯಪುರ: ದೇಶದಲ್ಲಿ ಪ್ರತಿ ವರ್ಷ ಎರಡು ಕೋಟಿ ಉದ್ಯೋಗ ಸೃಷ್ಠಿ ಮಾಡುತ್ತೇನೆ ಎಂದು ಅಧಿಕಾರಕ್ಕೆ ಬಂದ ಬಿಜೆಪಿಯವರು ಎಂಟು ವರ್ಷಗಳಲ್ಲಿ 16 ಕೋಟಿ ಉದ್ಯೋಗ ಸೃಷ್ಠಿ ಮಾಡಬೇಕಿತ್ತು. ಆದರೆ ಉದ್ಯೋಗ ಸೇರಬೇಕಿದ್ದವರು ಇದ್ದ ಉದ್ಯೋಗ ಕಳೆದುಕೊಂಡು ನಿರುದ್ಯೋಯಾಗಿದ್ದಾರೆ. ಇಂಥವರಿಗೆ ನೀವು ಮತ ನೀಡಬೇಕಾ? ಎಂದು ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ಎಂ. ಬಿ. ಪಾಟೀಲ ಪ್ರಶ್ನಿಸಿದ್ದಾರೆ‌. ವಿಜಯಪುರ ನಗರದಲ್ಲಿ ಮಹಾನಗರ ಪಾಲಿಕೆ ಚುನಾವಣೆ ಅಂಗವಾಗಿ 26 ವಾರ್ಡುಗಳಲ್ಲಿ ಅವರು ಪ್ರಚಾರ ನಡೆಸಿದರು‌.   ವಾರ್ಡ್ ಸಂಖ್ಯೆ 12 […]

Election Vehicles: ಮಹಾನಗರ ಪಾಲಿಕೆ ಚುನಾವಣೆ: ಮತಗಟ್ಟೆ ಸಿಬ್ಬಂದಿಗಳು ಮಸ್ಟರಿಂಗ್ ಕೇಂದ್ರಕ್ಕೆ ತೆರಳಲು ವಾಹನ ವ್ಯವಸ್ಥೆ ಜಿಲ್ಲಾಧಿಕಾರಿ

ವಿಜಯಪುರ: ವಿಜಯಪುರ ಮಹಾನಗರ ಪಾಲಿಕೆಗೆ ಅ. 28 ರಂದು ಮತದಾನ ನಡೆಯಲಿದ್ದು, ಸುವ್ಯವಸ್ಥಿತವಾಗಿ ಮತದಾನ ನಡೆಯುವ ದೃಷ್ಟಿಯಿಂದ ನಾನಾ ತಾಲೂಕುಗಳಿಂದ  ಅವಶ್ಯಕ ಮತಗಟ್ಟೆ ಸಿಬ್ಬಂದಿಗಳನ್ನು ನಿಯೋಜಿಸಿ ಆದೇಶಿಸಲಾಗಿದ್ದು, ನಿಯೋಜಿತ ಮತಗಟ್ಟೆ ಸಿಬ್ಬಂದಿಗಳು ಮಸ್ಟರಿಂಗ್ ಕೇಂದ್ರಕ್ಕೆ ತೆರಳಲು  ಜಿಲ್ಲೆಯ ಆಯಾ ತಾಲೂಕುಗಳಿಂದ ವಾಹನ ವ್ಯವಸ್ಥೆ ಮಾಡಲಾಗಿದೆ ಎಂದು ಜಿಲ್ಲಾ ಚುನಾವಣಾಧಿಕಾರಿ ಮತ್ತು ಜಿಲ್ಲಾಧಿಕಾರಿ ಡಾ. ವಿಜಯಮಹಾಂತೇಶ ಬಿ. ದಾನಮ್ಮನವರ ಅವರು ತಿಳಿಸಿದ್ದಾರೆ. ನಿಯೋಜಿತ ಮತಗಟ್ಟೆ ಸಿಬ್ಬಂದಿಗಳು ಸಮಯಕ್ಕೆ ಸರಿಯಾಗಿ ಮಸ್ಟರಿಂಗ್ ಕೇಂದ್ರವಾದ ವಿಜಯಪುರ ನಗರದ ವಿ.ಬಿ.ದರಬಾರ ಶಾಲೆಗೆ ತಲುಪಲು […]

Reservatin Ibrahim: ಮುಸ್ಲಿಂ ಮೀಸಲಾತಿ ವಿಚಾರ: ಯಡಿಯೂರಪ್ಪರಿಂದ ರದ್ದುಪಡಿಸಲು ಸಾಧ್ಯವಾಗದದ್ದು ಬೊಮ್ಯಾಯಿಂದ ಹೇಗೆ ಸಾಧ್ಯ? ಸಿ ಎಂ ಇಬ್ರಾಹಿಂ

ವಿಜಯಪುರ: ಮಾಜಿ ಸಿಎಂ ಬಿ. ಎಸ್. ಯಡಿಯೂರಪ್ಪ ಸಿಎಂ ಆಗಿದ್ದಾಗ ಮುಸ್ಲಿಮರ ಮೀಸಲಾತಿ ರದ್ದುಗೊಳಿಸಲು ಸಾಧ್ಯವಾಗಲಿಲ್ಲ.  ಈಗಿನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಂದ ಸಾಧ್ಯವಾಗುತ್ತಾ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಸಿ. ಎಂ. ಇಬ್ರಾಹಿಂ ವಾಗ್ದಾಳಿ ನಡೆಸಿದ್ದಾರೆ. ವಿಜಯಪುರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮಾಜಿ ಪ್ರಧಾನಿ ಎಚ್. ಡಿ. ದೇವೇಗೌಡರು ಅಧಿಕಾರದಲ್ಲಿದ್ದಾಗ ಸಂವಿಧಾನ ಬದ್ಧವಾಗಿ, ಸಮಿತಿ ರಚಿಸಿ ಆ ಕಮೀಟಿ ವರದಿ ಆಧಾರದ ಮೇಲೆ ಮುಸ್ಲಿಮರಿಗೆ ಶೇ. 4 ರಷ್ಟು ಮೀಸಲಾತಿ ನೀಡಲಾಗಿದೆ.  ಯಡಿಯೂರಪ್ಪ ಸಿಎಂ ಇದ್ದಾಗ ಈ […]

BJP Expel: ಬಿಜೆಪಿಯಿಂದ 14 ಮುಖಂಡರ ಉಚ್ಛಾಟನೆ- ಆರ್. ಎಸ್. ಪಾಟೀಲ ಕೂಚಬಾಳ

ವಿಜಯಪುರ: ವಿಜಯಪುರ‌ ಮಹಾನಗರ ಪಾಲಿಕೆ ಚುನೆವಣೆಯಲ್ಲಿ ಬಂಡಾಯದ ಬೇಗುದಿಗೆ ಸಿಲುಕಿರುವ ಬಿಜೆಪಿ ಈಗ ಕ್ರಮ ಕೈಗೊಳ್ಳುವ ಮೂಲಕ ಬಿಜೆಪಿ ಅಭ್ಯರ್ಥಿಗಳಿಗೆ ತಟ್ಟಿರುವ ಬಿಸಿ ಕಡಿಮೆ ಮಾಡಲು ಮುಂದಾಗಿದೆ. ಬಿಜೆಪಿ ಟಿಕೆಟ್ ಸಿಗದ ಹಿನ್ನೆಲೆಯಲ್ಲಿ ಪಕ್ಷೇತರರಾಗಿ ಮತ್ತು ಪಕ್ಷಾಂತರವಾಗಿ ಬೇರೆ ಪಕ್ಷಗಳ ಅಭ್ಯರ್ಥಿಗಳಾಗಿ ಕಣಕ್ಕಿಳಿದಿದ್ದಾರೆ. ಈ ಹಿನ್ನೆಲೆಯಲ್ಲಿ ನಾನಾ ವಾರ್ಡುಗಳಲ್ಲಿ ಕಣದಲ್ಲಿರುವ ಅಭ್ಯರ್ಥಿಗಳನ್ನು ಉಚ್ಛಾಟನೆ ಮಾಡಿ ಬಿಜೆಪಿ ಜಿಲ್ಲಾಧ್ಯಕ್ಷ ಆರ್. ಎಸ್. ಪಾಟೀಲ ಕೂಚಬಾಳ ಆದೇಶ ಹೊರಡಿಸಿದ್ದಾರೆ. ವಿಜಯಪುರ ಮಹಾನಗರ ಪಾಲಿಕೆ ಚುನಾವಣೆ ಹಿನ್ನೆಲೆಯಲ್ಲಿ ಪಕ್ಷ ವಿರೋಧಿ ಚಟುವಟಿಕೆಗಳ […]