ವಿಧಾನಸಭೆ ಚುನಾವಣೆ: ಮತದಾನದ ಮಮತೆಯ ಕರೆಯೋಲೆ ಪತ್ರ ನೀಡಿ ಮತದಾನ ಜಾಗೃತಿ

ವಿಜಯಪುರ: ಬಬಲೇಶ್ವರ ತಾಲೂಕಿನ ಜೈನಾಪುರ ಗ್ರಾಮ ಪಂಚಾಯತ ವತಿಯಿಂದ ಮದುವೆಯ ಆಮಂತ್ರಣ ಪತ್ರಿಕೆ ರೀತಿಯಲ್ಲಿ ಮತದಾನದ ಕರೆಯೋಲೆ ಪತ್ರ ತಯಾರಿಸಿ ಮತದಾರರನ್ನು ಜಾಗೃತಿ ಮೂಡಿಸುವ ಮೂಲಕ  ವಿನೂತನ ಪ್ರಯೋಗ ಮಾಡಿ ವಿಶಿಷ್ಠ ರೀತಿಯಲ್ಲಿ ಮತದಾನದ ಜಾಗೃತಿ ಕಾರ್ಯಕ್ರಮ ನಡೆಯಿತು. ಆಮಂತ್ರಣ ಪತ್ರಿಕೆಯಲ್ಲಿ ದಿನದ ವೈಶಿಷ್ಟತೆ ದಿನಾಂಕ, ಮಹೂರ್ತವನ್ನು ಮತಗಟ್ಟೆಯ ವಿಳಾಸ ಸಮೇತ ಉಲ್ಲೇಖಿಸಿ. ಈ ಚುನಾವಣಾ ಉತ್ಸವವನ್ನು ಮೇ-೧೦ರಂದು ಕರ್ನಾಟಕ ಚುನಾವಣಾ ಆಯೋಗ ನಿಶ್ಚಯಿಸುವುದರಿಂದ ಸಹ ಕುಟುಂಬ ಸಮೇತರಾಗಿ ಆಗಮಿಸಿ ತಮ್ಮ ಸ್ವ ಇಚ್ಛೆಯಂತೆ ತಮ್ಮ ಅಮೂಲ್ಯವಾದ […]

ವಿಧಾನಸಭೆ ಚುನಾವಣೆ ಕಡ್ಡಾಯವಾಗಿ ಮತದಾನ ಮಾಡಲು ಕಾರ್ಯ ನಿರ್ವಾಹಣಾಧಿಕಾರಿ ಬಸವರಾಜ ಐನಾಪುರ ಕರೆ

ವಿಜಯಪುರ: ಸುಭದ್ರ ರಾಷ್ಟ್ರ ನಿರ್ಮಾಣಕ್ಕಾಗಿ ಪ್ರತಿಯೊಬ್ಬ ಅರ್ಹ ಮತದಾರರು ಮೇ 10 ರಂದು ನಡೆಯುವ ಮತದಾನದಲ್ಲಿ ಕಡ್ಡಾಯವಾಗಿ ಮತ ಚಲಾಯಿಸುವಂತೆ ತಿಕೋಟಾ ತಾ. ಪಂ. ಕಾರ್ಯ ನಿರ್ವಾಹಣಾಧಿಕಾರಿ ಬಸವರಾಜ ಐನಾಪುರ ಅವರು ಕರೆ ನೀಡಿದರು. ತಿಕೋಟಾ ತಾ. ಪಂ. ಹಾಗೂ ತಾಲೂಕಾ ಸ್ವೀಪ್ ಸಮಿತಿ ವತಿಯಿಂದ ತಿಕೋಟಾ ನಗರದಲ್ಲಿ ಮತದಾನ ಜಾಗೃತಿಗಾಗಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು. ಮತದಾರರು ಯಾವುದೇ ಒತ್ತಡ, ಆಸೆ- ಆಮಿಷಗಳಿಗೆ ಒಳಗಾಗದೆ ತಮ್ಮ ಅಮೂಲ್ಯವಾದ ಮತವನ್ನು ಚಲಾಯಿಸಬೇಕು. ಮತದಾನದ ದಿನದಂದು ಎಲ್ಲ […]

ನಮಗೆ ರೈಲು ಬಿಡುವವರ ಬೇಡ- ನೀರು ಕೊಡುವವರು ಬೇಕು- ವಿಕ್ರಮಸಿಂಹ ಸಾವಂತ

ವಿಜಯಪುರ: ನಮಗೆ ರೈಲು ಬಿಡುವವರು ಬೇಡ, ನೀರು ಕೊಡುವವರು ಬೇಕು ಎಂದು ಮಹಾರಾಷ್ಟ್ರದ ಸಾಂಗಲಿ ಜಿಲ್ಲೆಯ ಜತ ಶಾಸಕ ವಿಕ್ರಮದಾದಾ ಸಾವಂತ ಹೇಳಿದ್ದಾರೆ. ತಿಕೋಟಾ ತಾಲೂಕಿನ ಬಾಬಾನಗರ ಮತ್ತು ಹೊನವಾಡ ಗ್ರಾಮಗಳಲ್ಲಿ ಕೆ.ಪಿ.ಸಿ.ಸಿ. ಪ್ರಚಾರ ಸಮಿತಿ ಅಧ್ಯಕ್ಷ ಎಂ. ಬಿ. ಪಾಟೀಲ ಪರ ಮತಯಾಚಿಸಿ ಅವರು ಮಾತನಾಡಿದರು. ಮಹಾರಾಷ್ಟ್ರ ಡಿಸಿಎಂ ದೇವೇಂದ್ರ ಫಡ್ನವೀಸ್ ಇತ್ತೀಚೆಗೆ ನೀಡಿದ ಹೇಳಿಕೆ ಬಗ್ಗೆ ಅವರು ಬಾಬಾನಗರದಲ್ಲಿ ತೀಕ್ಷ್ಣವಾಗಿ ಪ್ರತಿಕ್ರಿಯೆ ನೀಡಿದರು. ತುಬಚಿ-ಬಬಲೇಶ್ವರ ಏತ ನೀರಾವರಿ ಜನಕ ಮತ್ತು ಆಧುನಿಕ ಭಗೀರಥ ಎಂ. […]

ವಿಧಾನಸಭೆ ಚುನಾವಣೆ: ಜಿಲ್ಲೆಯ ಚುನಾವಣೆ ಸಿದ್ಧತೆಗಳ ಕುರಿತು ಮಾಹಿತಿ ಒದಗಿಸಿದ ಜಿಲ್ಲಾ ಚುನಾವಣಾಧಿಕಾರಿಗಳು

ವಿಜಯಪುರ: ವಿಜಯಪುರ ಜಿಲ್ಲೆಯ 8 ವಿಧಾನಸಭೆ ಮತಕ್ಷೇತ್ರಗಳ ವ್ಯಾಪ್ತಿಯಲ್ಲಿ ಮೇ 10 ರಂದು ಜರುಗುವ ಮತದಾನ ಹಾಗೂ ಮೇ. ೧೩ ರಂದು ನಡೆಯುವ ಮತ ಏಣಿಕೆ ಕಾರ್ಯಕ್ಕೆ ಎಲ್ಲ ಅಗತ್ಯ ಸಿದ್ಧತೆಗಳನ್ನು ಕೈಗೊಳ್ಳಲಾಗಿದೆ ಎಂದು ಜಿಲ್ಲಾ ಚುನಾವಣಾಧಿಕಾರಿಗಳಾದ ಜಿಲ್ಲಾಧಿಕಾರಿ ಡಾ. ವಿಜಯಮಹಾಂತೇಶ ದಾನಮ್ಮನವರ ತಿಳಿಸಿದರು. ಜಿಲ್ಲಾ ಪಂಚಾಯಿತಿ ಕಟ್ಟಡದಲ್ಲಿರುವ ಎನ್‌ಐಸಿ ಕೇಂದ್ರದಲ್ಲಿ ಚುನಾವಣಾ ಆಯೋಗದೊಂದಿಗೆ ವಿಜಯಪುರ ಜಿಲ್ಲೆಯ ಸಿದ್ಧತೆಗಳ ಕುರಿತು ವಿಡಿಯೋ ಕಾನ್ಫರೆನ್ಸ್ ನಲ್ಲಿ ಮಾಹಿತಿ ನೀಡಿದ ಅವರು, ಜಿಲ್ಲೆಯ 8 ವಿಧಾನಸಭಾ ಮತಕ್ಷೇತ್ರಗಳಲ್ಲಿ 966535 ಪುರುಷ, […]

ಬಿಜೆಪಿ ಅಭ್ಯರ್ಥಿಗೆ ಜನರೇ ಶಕ್ತಿ ಜನರೇ ಆಸ್ತಿ- ಉಮೇಶ ಕಾರಜೋಳ

ವಿಜಯಪುರ: ನಾಗಠಾಣ ಬಿಜೆಪಿ ಅಭ್ಯರ್ಥಿ ಸಂಜೀವ ಐಹೊಳಿ ಅವರಿಗೆ ಜನರೇ ಆಸ್ತಿ ಎಂದು ಬಿಜೆಪಿ ಜಿಲ್ಲಾ ಉಪಾಧ್ಕಕ್ಷ ಉಮೇಶ ಕಾರಜೋಳ ಹೇಳಿದ್ದಾರೆ. ನಾಗಠಾಣ ಮತಕ್ಷೇತ್ರ ವ್ಯಾಪ್ತಿಯ ಜಂಬಗಿ, ಅಂಕಲಗಿ, ಆಹೇರಿ ಗ್ರಾಮಗಳಲ್ಲಿ ಪ್ರಚಾರ ನಡೆಸಿ ಅವರು ಮಾತನಾಡಿದರು. ನಾಗಠಾಣ ಮತಕ್ಷೇತ್ರದ ಪ್ರಗತಿಗೆ ಜನತೆ ಬಿಜೆಪಿ ಅಭ್ಯರ್ಥಿಯನ್ನು ಬೆಂಬಲಿಸಬೇಕು.  ಈ ಭಾಗಕ್ಕೆ ಹೊರ್ತಿ ರೇವಣಸಿದ್ದೇಶ್ವರ ಯೋಜನೆ ಮೂಲಕ ಬಿಜೆಪಿ ಸರಕಾರ ಅನ್ನದಾತನ ಶ್ರೇಯೋಭಿವೃದ್ಧಿಗೆ ಶ್ರಮಿಸಿದೆ.  ಹೀಗಾಗಿ ಜನತೆ ಬಿಜೆಪಿಗೆ ಇನ್ನೊಮ್ಮೆ ಆಶೀರ್ವದಿಸಿದರೆ ಈ ಎಲ್ಲ ಅಭಿವೃದ್ಧಿ ಕಾರ್ಯಗಳ ಪರಂಪರೆ […]

ಮೀಸಲಾತಿ ವಿಚಾರದಲ್ಲಿ ಬಿಜೆಪಿ ಬಂಜಾರಾ ಸಮುದಾಯದ ಬೆನ್ನಿಗೆ ಚೂರಿ ಹಾಕಿದೆ- ಚುನಾವಣೆಯಲ್ಲಿ ತಕ್ಕ ಪಾಠ ಕಲಿಸಲಾಗುವುದು- ಪ್ರಕಾಶ ರಾಠೋಡ

ವಿಜಯಪುರ: ಮೀಸಲಾತಿ ವಿಚಾರದಲ್ಲಿ ಬಿಜೆಪಿ ಬಂಜಾರ ಸಮುದಾಯದ ಬೆನ್ನಿಗೆ ಚೂರಿ ಹಾಕಿದ್ದು, ಈ ಚುನಾವಣೆಯಲ್ಲಿ ಸಮುದಾಯ ತಕ್ಕ ಪಾಠ ಕಲಿಸಲಿದೆ ಎಂದು ವಿಧಾನ ಪರಿಷತ ಪ್ರತಿಪಕ್ಷದ ಮುಖ್ಯ ಸಚೇತಕ ಪ್ರಕಾಶ ರಾಠೋಡ ಹೇಳಿದ್ದಾರೆ. ತಿಕೋಟಾ ತಾಲೂಕಿನ ಟಕ್ಕಳಕಿ ಎಲ್.ಟಿ.1 ರಲ್ಲಿ ಕೆ.ಪಿ.ಸಿ.ಸಿ ಪ್ರಚಾರ ಸಮಿತಿ ಅಧ್ಯಕ್ಷ ಎಂ. ಬಿ. ಪಾಟೀಲ ಪರ ಪ್ರಚಾರ ಕೈಗೊಂಡು ಅವರು ಮಾತನಾಡಿದರು. 1978ರಲ್ಲಿ ಇಂದಿರಾಗಾಂಧಿ ಪ್ರಧಾನಿಯಾಗಿದ್ದ ಸಂದರ್ಭದಲ್ಲಿ ರಾಜ್ಯದಲ್ಲಿ ದೇವರಾಜ ಅರಸ ಅವರು ಮುಖ್ಯಮಂತ್ರಿಯಾಗಿದ್ದಾಗ ನಮ್ಮ ತಂದೆ ಕೆ.ಟಿ.ರಾಠೋಡ ಸಚಿವರು ಹಾಗೂ […]

ಜಿಲ್ಲಾ ಸ್ವೀಪ್ ಸಮಿತಿಯಿಂದ ಜಿಲ್ಲಾ ಪಂಚಾಯಿತಿ ಆವರಣದಲ್ಲಿ ಮತದಾನ ಜಾಗೃತಿಗಾಗಿ ಸೈಕಲ್ ಜಾಥಾ: ಸಿಇಓ ರಾಹುಲ್ ಶಿಂಧೆ ಚಾಲನೆ

ವಿಜಯಪುರ: ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಮತದಾನ ಜಾಗೃತಿಗಾಗಿ ಜಿಲ್ಲಾ ಸ್ವೀಪ್ ಸಮಿತಿ ಹಾಗೂ ಜಿಲ್ಲಾ ಸ್ಕೌಟ್ಸ್ ಹಾಗೂ ಗೈಡ್ಸ್ ಸಹಯೋಗದಲ್ಲಿ ಸೈಕಲ್ ಜಾಥಾ ಆಯೋಜಿಸಲಾಗಿತ್ತು.  ಈ ಸೈಕಲ್ ಜಾಥಾಕ್ಕೆ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ರಾಹುಲ ಶಿಂಧೆ ಚಾಲನೆ ನೀಡಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಅವರು, ಕರ್ನಾಟಕ ವಿಧಾನಸಭೆ ಚುನಾವಣೆ-2023ರ ಹಿನ್ನೆಲೆಯಲ್ಲಿ ಜಿಲ್ಲಾದ್ಯಂತ ಈಗಾಗಲೇ ಹಲವಾರು ರೀತಿಯಲ್ಲಿ ಮತದಾನ ಜಾಗೃತಿ ಕಾರ್ಯಕ್ರಮ ಆಯೋಜಿಸಿ ಮತದಾರರನ್ನು ಆಕರ್ಷಿಸುವ ನಿಟ್ಟಿನಲ್ಲಿ ಜಿಲ್ಲಾ ಸ್ವೀಪ್ ಸಮಿತಿ ಕಾರ್ಯ ನಿರ್ವಹಿಸುತ್ತಿದೆ.  ಈಗ […]

ಹಂಚನಾಳದಲ್ಲಿ ಮನೆಮನೆಗೆ ತೆರಳಿ ಎಂ. ಬಿ. ಪಾಟೀಲ ಪರ ಮತಯಾಚನೆ ಮಾಡಿದ ಎಂಎಲ್ಸಿ ಸುನೀಲಗೌಡ ಪಾಟೀಲ

ವಿಜಯಪುರ: ಎಂ. ಬಿ. ಪಾಟೀಲರು ಶ್ರಮಿಕ ವರ್ಗದ ಕಲ್ಯಾಣಕ್ಕಾಗಿ ಹಲವಾರು ಯೋಜನೆಗಳನ್ನು ರೂಪಿಸಿ ಅನುಷ್ಠಾನಗೊಳಿಸಿದ್ದಾರೆ ಎಂದು ವಿಧಾನ ಪರಿಷತ್ ಸದಸ್ಯ ಸುನೀಲಗೌಡ ಪಾಟೀಲ ಹೇಳಿದ್ದಾರೆ. ಬಬಲೇಶ್ವರ ಮತಕ್ಷೇತ್ರದ ಹಂಚನಾಳ ಎಲ್.ಟಿ.-1, ಎಲ್.ಟಿ.-2, ಎಲ್.ಟಿ.-3, ಹಂಚನಾಳ ಪಿ.ಎಚ್. ಗ್ರಾಮ, ಬರಟಗಿ ಎಲ್.ಟಿ.-3 ಮತ್ತು ಎಲ್.ಟಿ.-3 ಬಿ ಗಳಲ್ಲಿ ಮನೆ ಮನೆಗೆ ತೆರಳಿ ಕೆ.ಪಿ.ಸಿ.ಸಿ ಪ್ರಚಾರ ಸಮಿತಿ ಅಧ್ಯಕ್ಷ ಎಂ. ಬಿ. ಪಾಟೀಲರ ಪರ ಮತಯಾಚಿಸಿ ಅವರು ಮಾತನಾಡಿದರು. ಜಲಸಂಪನ್ಮೂಲ ಸಚಿವರಾಗಿ ಮತ್ತು ಶಾಸಕರಾಗಿ ಎಂ. ಬಿ. ಪಾಟೀಲರು ನೀರಾವರಿ […]

ಗುಮ್ಮಟ ನಗರಿಯಲ್ಲಿ ಬಣಜಿಗ ಸಮುದಾಯದ ಸಭೆ: ಯತ್ನಾಳಗೆ ಬೆಂಬಲ

ವಿಜಯಪುರ: ಬಣಜಿಗ ಸಮುದಾಯ ವಿಜಯಪುರ ನಗರದ ಅಭಿವೃದ್ಧಿ ಮತ್ತು ಸುರಕ್ಷತೆಗಾಗಿ ಬಿಜೆಪಿ ಅಭ್ಯರ್ಥಿ ಬಸನಗೌಡ ಪಾಟೀಲ ಯತ್ನಾಳ ಅವರನ್ನು ಬೆಂಬಲಿಸಲು ಸಭೆಯಲ್ಲಿ ನಿರ್ಧರಿಸಿದೆ. ನಗರದಲ್ಲಿ ನಡೆದ ಸಭೆಯಲ್ಲಿ ಮಾತನಾಡಿದ ನಾನಾ ಮುಖಂಡರು, ಯತ್ನಾಳ ಅವರ ಗೆಲುವಿಗಾಗಿ ಪ್ರಾಮಾಣಿಕವಾಗಿ ಶ್ರಮಿಸುವುದಾಗಿ ಒಮ್ಮತದ ನಿರ್ಣಯ ಕೈಗೊಂಡಿದೆ.  ಗೊಂದಲ ಸೃಷ್ಟಿಸಲು ಕೆಲವರು ತಪ್ಪು ಸಂದೇಶ ನೀಡಿ, ಪಂಚಮಸಾಲಿ ಹಾಗೂ ಬಣಜಿಗ ಸಮುದಾಯಗಳ ಮಧ್ಯೆ ಇದ್ದ ಅನ್ಯೋನ್ಯತೆ ಕೆಡಿಸಲು ಯತ್ನಿಸಿದ್ದರು.  ಇದರಿಂದ ಆಗುತ್ತಿದ್ದ ಸಮಸ್ಯೆ ತಪ್ಪಿಸಲು ಸಭೆ ನಡೆಸುವ ಮೂಲಕ ಸಮಾಜಕ್ಕೆ ಸಂದೇಶ […]

ಎಂ. ಬಿ. ಪಾಟೀಲ ಬೆಂಬಲಿಸಿ ಚುಣಾವಣೆ ಕಣದಿಂದ ನಿವೃತ್ತಿ ಘೋಷಿಸಿದ ಬಬಲೇಶ್ವರ ಪಕ್ಷೇತರ ಅಭ್ಯರ್ಥಿ ದುಂಡಸಿ ಅಬ್ದುಲ್ ರಹಿಮಾನ ಮಹಮ್ಮದ ಹನೀಫ

ವಿಜಯಪುರ: ಕೆ.ಪಿ.ಸಿ.ಸಿ ಪ್ರಚಾರ ಸಮಿತಿ ಅಧ್ಯಕ್ಷ ಎಂ. ಬಿ. ಪಾಟೀಲ ಅವರನ್ನು ಬೆಂಬಲಿಸಿ, ಬಬಲೇಶ್ವರ ಪಕ್ಷೇತರ ಅಭ್ಯರ್ಥಿ ದುಂಡಸಿ ಅಬ್ದುಲ್‍ರಹಿಮಾನ ಮಹಮ್ಮದ ಹನೀಫ್ ಕಣದಿಂದ ನಿವೃತ್ತಿ ಘೋಷಿಸಿದ್ದಾರೆ. ಈ ಕುರಿತು ವಿಡಿಯೋ ಹೇಳಿಕೆ ನೀಡಿರುವ ಅವರು, ನಾನು ಬಬಲೇಶ್ವರ ಮತಕ್ಷೇತ್ರಕ್ಕೆ ಪ್ರಚಾರಕ್ಕೆ ತೆರಳಿದಾಗ ಅಲ್ಲಿನ ಮತದಾರರು ಎಂ. ಬಿ. ಪಾಟೀಲ ಅವರ ಅಭಿವೃದ್ಧಿಯ ಜಪ ಮಾಡುತ್ತಿದ್ದಾರೆ. ಹೀಗಾಗಿ ನಾನು ಕೂಡ ಅವರನ್ನು ಬೆಂಬಲಿಸಿ ಚುನಾವಣೆ ಕಣದಿಂದ ನಿವೃತ್ತಿಯಾಗುತ್ತಿದ್ದೇನೆ ಎಂದು ಅವರು ತಿಳಿಸಿದ್ದಾರೆ. ಇನ್ನು ಮುಂದೆ ನಾನು ಕಾಂಗ್ರೆಸ್‍ನ್ನು […]