ಕರ್ನಾಟಕದಲ್ಲಿ ಬಿಜೆಪಿ ಮತ್ತೆ ಅಧಿಕಾರಕ್ಕೆ ಬರಲಿದೆ- ಲಿಂಗಾಯಿತರಿಗೆ ಸಿದ್ಧರಾಮಯ್ಯ ಅವಮಾನ ಮಾಡಿದ್ದಾರೆ- ಮಹಾ ಡಿಸಿಎಂ ದೇವೇಂದ್ರ ಫಡ್ನವೀಸ
ವಿಜಯಪುರ: ಮಹಾರಾಷ್ಟ್ರ ಡಿಸಿಎಂ ದೇವೇಂದ್ರ ಫಡ್ನವೀಸ್ ಬಸವ ನಾಡು ವಿಜಯಪುರ ಜಿಲ್ಲೆಯ ಇಂಡಿಯಲ್ಲಿ ಭರ್ಜರಿ ಪ್ರಚಾರ ಕೈಗೊಂಡಿದ್ದಾರೆ. ಇಂಡಿ ಬಿಜೆಪಿ ಅಭ್ಯರ್ಥಿ ಕಾಸುಗೌಡ ಬಿರಾದಾರ ಪರ ಪ್ರಚಾರ ನಡೆಸಿದ ಅವರು, ರಾಜ್ಯ ಮತ್ತು ಕೇಂದ್ರ ಸರಕಾರಗಳು ಕರ್ನಾಟದಲ್ಲಿ ಸಾಕಷ್ಟು ಅಭಿವೃದ್ಧಿ ಕಾರ್ಯ ಮಾಡಿವೆ ಎಂದು ಹೇಳಿದರು. ಇಂಡಿ ಮತಕ್ಷೇತ್ರಕ್ಕೆ ಬಿಜೆಪಿ ಸರಕಾರ ಶ್ರೀ ರೇವಣಸಿದ್ದೇಶ್ವರ ಏತ ನೀರಾವರಿ ಯೋಜನೆ ಕೊಡುಗೆ ನೀಡಿದ್ದೆ. ಈ ಮೂಲಕ ಈ ಭಾಗದ ಜನರಿಗೆ ನೀರಿನ ಸಮಸ್ಯೆ ನೀಗಲಿದೆ. ಕಳೆದ ಬಾರಿ ಬಿಜೆಪಿಗೆ […]
ಜಿಲ್ಲೆಯ 8 ವಿಧಾನಸಭೆ ಮತಕ್ಷೇತ್ರಗಳಲ್ಲಿ ಅಂತಿಮವಾಗಿ 95 ಅಭ್ಯರ್ಥಿಗಳು ಕಣದಲ್ಲಿ ಉಳಿದಿರುವ 95 ಅಭ್ಯರ್ಥಿಗಳ ವಿವರ ಈ ಕೆಳಗಿನಂತಿದೆ.
ವಿಜಯಪುರ: ರಾಜ್ಯ ವಿಧಾನಸಭೆ ಚುನಾವಣೆಗೆ ಜಿಲ್ಲೆಯ ಎಂಟು ಮತಕ್ಷೇತ್ರಗಳಿಗೆ ನಾಮಪತ್ರ ಸಲ್ಲಿಸಿದ 122 ಅಭ್ಯರ್ಥಿಗಳ ಪೈಕಿ 7 ಅಭ್ಯರ್ಥಿಗಳ ನಾಮಪತ್ರಗಳು ತಿರಸ್ಕೃತವಾಗಿ 115 ಅಭ್ಯರ್ಥಿಗಳ ನಾಮಪತ್ರ ಕ್ರಮ ಬದ್ಧವಾಗಿದ್ದವು. ನಾಮಪತ್ರ ಹಿಂಪಡೆಯುವ ದಿನವಾದ ಒಟ್ಟು 20 ಅಭ್ಯರ್ಥಿಗಳು ತಮ್ಮ ನಾಮಪತ್ರಗಳನ್ನು ಹಿಂದಕ್ಕೆ ಪಡೆದಿದ್ದರಿಂದ ಈಗ ಒಟ್ಟು 95 ಅಭ್ಯರ್ಥಿಗಳು ಅಂತಿಮವಾಗಿ ಚುನಾವಣೆ ಕಣದಲ್ಲಿ ಉಳಿದಿದ್ದಾರೆ ಎಂದು ಜಿಲ್ಲಾ ಚುನಾವಣಾಧಿಕಾರಿ ಮತ್ತು ಜಿಲ್ಲಾಧಿಕಾರಿ ಡಾ. ವಿಜಯಮಹಾಂತೇಶ ಬಿ. ದಾನಮ್ಮನವರ ತಿಳಿಸಿದ್ದಾರೆ. ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, […]
ವಿಜಯಪುರ ನಗರದಲ್ಲಿ ಭೂಮಾಪಿಯಾ ಸಂಪೂರ್ಣ ಬಂದ್ ಆಗಿದೆ- ಬಸನಗೌಡ ಪಾಟೀಲ ಯತ್ನಾಳ
ವಿಜಯಪುರ: ನಗರದಲ್ಲಿ ಭೂಮಾಪಿಯಾದದವರದೇ ದರ್ಬಾರ ಆಗಿತ್ತು. ಅದನ್ನು ಸಂಪೂರ್ಣ ಬಂದ ಮಾಡಿರುವೆ. ಎಲ್ಲಿಯೇ ಖಾಲಿ ಜಾಗ ಇದ್ದರೂ, ಓಣಿಯ ಜನರನ್ನು ಸೇರಿಸಿ ಉದ್ಯಾನ, ಸಮುದಾಯ ಭವನ, ಓಪನ್ ಮಾಡಲಾಗುವುದು ಎಂದು ವಿಜಯಪುರ ನಗರ ಬಿಜೆಪಿ ಅಭ್ಯರ್ಥಿ ಬಸನಗೌಡ ರಾ. ಪಾಟೀಲ ಯತ್ನಾಳ ಹೇಳಿದರು. ಮತಕ್ಷೇತ್ರ ವ್ಯಾಪ್ತಿಯ ಶಾಸ್ತ್ರಿ ನಗರದಲ್ಲಿ ಮತಯಾಚನೆ ನಡೆಸಿ ಮಾತನಾಡಿದ ಅವರು, ವಿಜಯಪುರಕ್ಕೆ ಕೋಟಿ ಎನ್ನುವುದು ಗೊತ್ತೆ ಇರಲಿಲ್ಲ. ಕಳೆದ ಐದು ವರ್ಷಗಳಲ್ಲಿ ನೂರಾರು ಕೋಟಿ ಅನುದಾನ ತರುವ ಮೂಲಕ ಜನರ ನಿರೀಕ್ಷೆ ಮೀರಿ […]
ಕೇಂದ್ರ, ರಾಜ್ಯ ಸರಕಾರಗಳ ಯೋಜನೆ ಕುರಿತು ಜಾಗೃತಿ ಮೂಡಿಸಿ ಯತ್ನಾಳ ಗೆಲುವಿಗೆ ಶ್ರಮಿಸಿ- ಆರ್. ಎಸ್. ಪಾಟೀಲ ಕೂಚಬಾಳ
ವಿಜಯಪುರ: ಕೇಂದ್ರ ಮತ್ತು ರಾಜ್ಯ ಸರಕಾರಗಳ ಜನಪರ ಯೋಜನೆಗಳು ಹಾಗೂ ನಗರದಲ್ಲಿ ಕೈಗೊಂಡ ಅಭಿವೃದ್ಧಿ ಕಾಮಗಾರಿಗಳ ಕುರಿತಂತೆ ಜನಸಾಮಾನ್ಯರಿಗೆ ತಿಳಿಸುವ ಮೂಲಕ ಬಸನಗೌಡ ಪಾಟೀಲ ಯತ್ನಾಳ ಅವರ ಗೆಲುವಿಗೆ ಪ್ರತಿಯೊಬ್ಬ ಕಾರ್ಯಕರ್ತರು ಶ್ರಮಿಸಬೇಕು ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಆರ್. ಎಸ್. ಪಾಟೀಲ ಕೂಚಬಾಳ ಹೇಳಿದರು. ನಗರ ಮತಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಸನಗೌಡ ಪಾಟೀಲ ಯತ್ನಾಳ ಅವರ ಚುನಾವಣೆ ಪ್ರಚಾರ ಕಾರ್ಯಾಲಯದಲ್ಲಿ ನಡೆದ ಪದಾಧಿಕಾರಿಗಳ ಸಭೆಯಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. ಪ್ರತಿಪಕ್ಷಗಳ ಊಹಾಪೋಹಗಳಿಗೆ ಜನ ಕಿವಿಗೊಡುವುದಿಲ್ಲ. ಅಭಿವೃದ್ಧಿ ಮಾಡಿದವರಿಗೆ […]
ಸಿದ್ಧರಾಮಯ್ಯ ವೀರಶೈವ ಲಿಂಗಾಯಿತರ ಕ್ಷಮೆ ಕೇಳಲಿ- ಲಿಂಗಾಯತ ಡ್ಯಾಂ ಒಡೆಯಲು ಜಗತ್ತಿನ ಯಾವ ಶಕ್ತಿಯಿಂದಲೂ ಸಾಧ್ಯವಿಲ್ಲ-ಯತ್ನಾಳ
ವಿಜಯಪುರ: ಸಿದ್ಧರಾಮಯ್ಯ ಇಡೀ ವೀರಶೈವ ಲಿಂಗಾಯಿತರನ್ನು ಅವಮಾನ ಮಾಡಿದ್ದಾರೆ. ಅವರು ಕ್ಷಮೆ ಕೇಳಬೇಕು ಎಂದು ಬಸನಗೌಡ ಪಾಟೀಲ ಯತ್ನಾಳ ಹೇಳಿದ್ದಾರೆ. ವಿಜಯಪುರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಲಿಂಗಾಯತರೆಲ್ಲರೂ ಬ್ರಷ್ಟರು ಎಂದು ಸಿದ್ರಾಮಯ್ಯ ಹೇಳಿದ್ದಾರೆ. ಇವರ ದ್ವೇಷ ಇದ್ದರೆ ವ್ಯಕ್ತಿಗತವಾಗಿ ಮತ್ತು ವೈಯಕ್ತಿಕವಾಗಿ ಮಾತನಾಡಬೇಕು. ಅದನ್ನು ಬಿಟ್ಟು ಇಡೀ ಲಿಂಗಾಯತ ಸಿಎಂ ಗಳು ಭ್ರಷ್ಟರು ಎಂಬುದು ಎಷ್ಟು ಸರಿ. ಧರ್ಮ ಒಡೆಯಲು ನಿಂತವರಿಗೆ ಕಳೆದ ಬಾರಿ ಪಾಠ ಕಲಿಸಿದ್ದಾರೆ. ಹೀಗಾಗಿಯೇ ಕಳೆದ ಚುನಾವಣೆಯಲ್ಲಿ ಲಿಂಗಾಯತರು ಶಕ್ತಿ ಪ್ರದರ್ಶನ ಮಾಡಿದ್ದಾರೆ. […]
ಸಾಮಾನ್ಯ ವೀಕ್ಷಕರು ಹಾಗೂ ವೆಚ್ಚ ವೀಕ್ಷಕರಿಂದ ಚುನಾವಣಾ ಸಿದ್ಧತೆಗಳ ಬಗ್ಗೆ ಪರಿಶೀಲನೆ
ವಿಜಯಪುರ: ನ್ಯಾಯ ಸಮ್ಮತವಾಗಿ ಚುನಾವಣೆ ನಡೆಸಲು ಎಲ್ಲಾ ಹಂತದ ಅಧಿಕಾರಿಗಳು ಕಟಿಬದ್ಧರಾಗಿ ಕರ್ತವ್ಯ ನಿರ್ವಹಿಸಬೇಕು ಹಾಗೂ ಚುನಾವಣಾ ಆಯೋಗದ ನಿರ್ದೇಶನವನ್ನು ತಪ್ಪದೇ ಪಾಲಿಸಬೇಕು ಎಂದು ಬಿಜಾಪೂರ ನಗರ ಹಾಗೂ ನಾಗಠಾಣ ವಿಧಾನಸಭಾ ಮತಕ್ಷೇತ್ರಗಳ ಸಾಮಾನ್ಯ ವೀಕ್ಷಕ ಉದೀತ ಪ್ರಕಾಶ ರೈ ಅವರು ಸೂಚಿನೆ ನೀಡದರು. ಜಿ. ಪಂ. ಸಭಾಂಗಣದಲ್ಲಿ ನಾನಾ ತಂಡಗಳ ನೋಡಲ್ ಅಧಿಕಾರಿಗಳ, ನಿರ್ವಚನಾಧಿಕಾರಿ ಹಾಗೂ ಸಹಾಯಕ ಚುನಾವಣಾಧಿಕಾರಿಗಳೊಂದಿಗೆ ನಡೆದ ವಿಧಾನಸಭೆ ಚುನಾವಣೆ ಸಂದರ್ಭದಲ್ಲಿ ಕೈಗೊಳ್ಳಬೇಕಾದ ಸಿದ್ಧತೆಗಳ ಕುರಿತ ಪರಿಶೀಲನಾ ಸಭೆಯಲ್ಲಿ ಮಾತನಾಡಿದ ಅವರು, ಜಿಲ್ಲೆಯಲ್ಲಿ […]
ವಿಜಯಪುರ ಸೈನಿಕ ಶಾಲೆ ಮತ ಎಣಿಕೆ ಕೇಂದ್ರ ಭೇಟಿ ನೀಡಿ ಸಿದ್ಧತೆ ಪರಿಶೀಲಿಸಿದ ಚುನಾವಣೆ ವೀಕ್ಷಕರು
ವಿಜಯಪುರ: ವಿಧಾನಸಭೆ ಸಾರ್ವತ್ರಿಕ ಚುನಾವಣೆಯ ಅಂಗವಾಗಿ ಮೇ.10 ರಂದು ಮತದಾನ ನಡೆಯಲಿದ್ದು, ಜಿಲ್ಲೆಯ ಎಂಟೂ ವಿಧಾನಸಭಾ ಕ್ಷೇತ್ರಗಳ ಮತ ಎಣಿಕೆ ಕಾರ್ಯ ವಿಜಯಪುರದ ಸೈನಿಕ ಶಾಲೆಯಲ್ಲಿ ನಡೆಯಲಿದ್ದು, ಮತ ಏಣಿಕೆ ಕೇಂದ್ರಕ್ಕೆ ಶನಿವಾರ ಚುನಾವಣಾ ಸಾಮಾನ್ಯ ವೀಕ್ಷಕರು ಹಾಗೂ ವೆಚ್ಚ ವೀಕ್ಷಕರು ಭೇಟಿ ನೀಡಿ, ಮತ ಎಣಿಕೆ ಕಾರ್ಯದ ಸಿದ್ಧತೆ ಕುರಿತು ಪರಿಶೀಲನೆ ನಡೆಸಿದರು. 26-ಮುದ್ದೇಬಿಹಾಳ ಮತ್ತು 27-ದೇವರ ಹಿಪ್ಪರಗಿ ವಿಧಾನಸಭೆ ಮತಕ್ಷೇತ್ರದ ಸಾಮಾನ್ಯ ವೀಕ್ಷಕರಾದ ಎಂ. ಅರವಿಂದ, 28-ಬಸವನ ಬಾಗೇವಾಡಿ ಮತ್ತು 29-ಬಬಲೇಶ್ವರ ವಿಧಾನ ಸಭೆ […]
ಶೇ.90 ಮತದಾನ ಮಾಡಿದರೆ, 40 ಸಾವಿರ ಮತಗಳಿಂದ ಗೆಲುವು- ಯತ್ನಾಳ
ವಿಜಯಪುರ: ಕಳೆದ ಬಾರಿ ಮುಸ್ಲಿಂ ಸಮುದಾಯ ಪ್ರದೇಶಗಳಲ್ಲಿ ಸಾವಿರಕ್ಕೆ ಒಂದೇರಡು ಮತಗಳು ಮಾತ್ರ ನಮಗೆ ಬಿದ್ದಿವೆ. ಅದೇ ರೀತಿ ನಮ್ಮ ಹಿಂದೂಗಳು ಕೂಡ ಜಾಗೃತರಾಗಿ ಒಂದಾಗಿ ಹೆಚ್ಚಿನ ಪ್ರಮಾಣದಲ್ಲಿ ನನಗೆ ಮತ ನೀಡಬೇಕು ಎಂದು ವಿಜಯಪುರ ನಗರ ಬಿಜೆಪಿ ಅಭ್ಯರ್ಥಿ ಬಸನಗೌಡ ರಾ ಪಾಟೀಲ ಯತ್ನಾಳ ಹೇಳಿದ್ದಾರೆ. ನಗರದ ವಾರ್ಡ ನಂ. 29 ಮತ್ತು 30ರ ಕಾಸಗೇರಿ ಓಣಿ, ಗೌಡರ ಓಣಿ, ರಾಮನಗರ, ರಾಜಾಜಿನಗರದಲ್ಲಿ ಮತಯಾಚನೆ ಮಾಡಿ ಮಾತನಾಡಿದ ಅವರು, ಕಳೆದ ಬಾರಿ ನಮ್ಮವರು ಶೇ. 58 […]
ಎಸ್.ಯು.ಸಿ.ಐ ಕಮ್ಯೂನಿಸ್ಟ್ ಪಕ್ಷದ ಚುನಾವಣೆ ಪ್ರಚಾರಕ್ಕೆ ಚಾಲನೆ
ವಿಜಯಪುರ: ಎಸ್.ಯು.ಸಿ.ಐ ಕಮ್ಯೂನಿಸ್ಟ್ ಪಕ್ಷದ ಅಭ್ಯರ್ಥಿ ಮಲ್ಲಿಕಾರ್ಜುನ ಎಚ್.ಟಿ ಅವರು ನಗರದಲ್ಲಿರುವ ಹುತಾತ್ಮಹ ವೃತ್ತಕ್ಕೆ ತೆರಳಿ ಸ್ವಾತಂತ್ರ್ಯ ಹೋರಾಟಗಾರರ ಹುತಾತ್ಮ ಸ್ಥಂಭಕ್ಕೆ ಮಾಲಾರ್ಪಣೆ ಮಾಡಿ ತಮ್ಮ ಚುನಾವಣಾ ಪ್ರಚಾರಕ್ಕೆ ಚಾಲನೆ ನೀಡಿದ್ದಾರೆ. ಈ ಸಂದರ್ಭದಲ್ಲಿ ಮಾತನಾಡಿದ ಅವರು, ಸ್ವಾತಂತ್ರ್ಯ ಹೋರಾಟಗಾರರು ಬಡತನ ನಿರುದ್ಯೋಗ, ಜಾತಿಪದ್ದತಿ, ಭ್ರಷ್ಟಾಚಾರ ಮುಂತಾದ ಸಮಸ್ಯೆಗಳಿಂದ ಮುಕ್ತವಾದ ಸ್ವಾತಂತ್ರ್ಯ ಬಯಸಿದ್ದರು. ಆದರೆ, ಸ್ವಾತಂತ್ರ್ಯ ಬಂದ ನಂತರ ಅಧಿಕಾರಕ್ಕೆ ಬಂದ ಕಾಂಗ್ರೆಸ್, ಬಿಜೆಪಿ ಹಾಗೂ ಎಲ್ಲ ಪ್ರಾದೇಶಿಕ ಪಕ್ಷಗಳು ಈ ಸಮಸ್ಯೆಗಳನ್ನು ಬಗೆಹರಿಸಲಿಲ್ಲ ಎಂದು ಆರೋಪಿಸಿದರು. […]
ಜಿಲ್ಲೆಯ ಜನ ನೆಮ್ಮದಿಯಿಂದ ಜೀವನ ಸಾಗಿಸುವ ಕೆಲಸ ಮಾಡಿದ್ದೇನೆ- ಎಂ. ಬಿ. ಪಾಟೀಲ
ವಿಜಯಪುರ: ಜಿಲ್ಲೆಯ ಜನ ನೆಮ್ಮದಿಯ ಬದುಕು ಸಾಗಿಸುವ ಕೆಲಸ ಮಾಡಿದ್ದೇನೆ ಎಂದು ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ಎಂ. ಬಿ. ಪಾಟೀಲ ತಿಳಿಸಿದ್ದಾರೆ. ಬಬಲೇಶ್ವರ ತಾಲೂಕಿನ ಯಕ್ಕುಂಡಿಯಲ್ಲಿ ನಡೆದ ಜಲ ರತ್ನಾಕರ ಪ್ರಶಸ್ತಿ ಪ್ರಧಾನ ಮತ್ತು ಮೂರು ಪುಸ್ತಕ ಬಿಡುಗಡೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಜಲಸಂಪನ್ಮೂಲ ಸಚಿವನಾಗಿದ್ದಾಗ ಶ್ರೀ ಸಿದ್ದೇಶ್ವರ ಸ್ವಾಮೀಜಿಗಳ ಆಶಯದಂತೆ ಈ ಬಾಗದಲ್ಲಿ ರೂ. 14000 ಕೋ. ವೆಚ್ಚದಲ್ಲಿ ನಾನಾ ನೀರಾವರಿ ಯೋಜನೆಗಳನ್ನು ಮಾಡಿದ್ದೇನೆ. ಇದರಿಂದಾಗಿ ರೈತರು ತೋಟಗಾರಿಕೆ ಬೆಳೆಗಳ ರಕ್ಷಣೆಗಾಗಿ ಪ್ರತಿವರ್ಷ ಟ್ಯಾಂಕರ್ […]