ವಿಜಯಪುರ ನಗರ ಬಿಜೆಪಿ ಅಭ್ಯರ್ಥಿಯಾಗಿ ಯತ್ನಾಳ ಸಾಂಕೇತಿಕವಾಗಿ ನಾಮಪತ್ರ ಸಲ್ಲಿಕೆ

ವಿಜಯಪುರ: ವಿಧಾನ ಸಭೆ ಚುನಾವಣೆ ನಾಮಪತ್ರ ಸಲ್ಲಿಕೆ ಚುರುಕು ಪಡೆದಿದ್ದು, ವಿಜಯಪುರ ನಗರ ಮತಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ಬಸನಗೌಡ ಪಾಟೀಲ ಯತ್ನಾಳ ಸಾಂಕೇತಿಕವಾಗಿ ನಾಮಪತ್ರ ಸಲ್ಲಿಸಿದ್ದಾರೆ. ನಗರದ ಉಪವಿಭಾಗಾಧಿಕಾರಿಗಳ ಕಚೇರಿಯಲ್ಲಿ ಚುನಾವಣಾ ಅಧಿಕಾರಿ ಕ್ಯಾ. ಮಹೇಶ ಮಾಲಿಗಿತ್ತಿ ಅವರಿಗೆ ಯತ್ನಾಳ ತಮ್ಮ ನಾಮಪತ್ರ ಸಲ್ಲಿಸಿದರು. ನಾಳೆ ರವಿವಾರ ಪಂಚಕ ಆರಂಭವಾಗಲಿರುವ ಹಿನ್ನೆಲೆಯಲ್ಲಿ ಸಾಂಕೇತಿಕವಾಗಿ ನಾಮಪತ್ರ ಸಲ್ಲಿಸಿದರು.  ಈ ಸಂದರ್ಭದಲ್ಲಿ ಕಾರ್ಪೋರೇಟರ್ ಎಂ. ಎಸ್. ಕರಡಿ, ಕ್ಯಾಂಡಿಡೇಟ್ ಏಜೆಂಟ್ ಗುರು ಗಚ್ಚಿನಮಠ, ನ್ಯಾಯವಾದಿ ಸತೀಶಚಂದ್ರ ಕುಲಕರ್ಣಿ, ಎನ್. ಎಂ. […]

ಹಿಂದತ್ವದ ಜೊತೆ ಗೆ ಅಭಿವೃದ್ಧಿ ಮಾಡಿದ್ದೇನೆ- ನಾನು ರಾಜ್ಯದ ಇತರೆಡೆ ಪ್ರಚಾರಕ್ಕೆ ಹೋಗಬೇಕಿದೆ ನೀವೇ ಯತ್ನಾಳ ಎಂದು ತಿಳಿದು ಪ್ರಚಾರ- ಯತ್ನಾಳ

ವಿಜಯಪುರ:  ಹಿಂದುತ್ವದ ಜೊತೆ ಅಭಿವೃದ್ಧಿ ಕೆಲಸ ಕಾರ್ಯಗಳನ್ನು ಮಾಡಿದ್ದೇನೆ.  ಇಡೀ ರಾಜ್ಯ ವಿಜಯಪುರದತ್ತ ನೋಡುತ್ತಿದ್ದು, ನಾನು ಇತರೆಡೆ ಪ್ರಚಾರಕ್ಕೆ ಹೋಗಬೇಕಿದೆ.  ಹೀಗಾಗಿ ನೀವೇ ಯತ್ನಾಳ ಎಂದು ತಿಳಿದು ಪ್ರಚಾರ ಮಾಡಿ ಎಂದು ಬಿಜೆಪಿ ಅಭ್ಯರ್ಥಿ ಬಸನಗೌಡ ಪಾಟೀಲ ಯತ್ನಾಳ ಹೇಳಿದ್ದಾರೆ. ನಗರದ ಗುರುಕುಲ ರಸ್ತೆಯಲ್ಲಿ ಪ್ರಚಾರ ಕಾರ್ಯಾಲಯ ಉದ್ಘಾಟನೆ ಅಂಗವಾಗಿ ನಡೆದ ಗೋ ಮಾತೆ ಪೂಜೆ ನೆರವೇರಿಸಿ, ಹೋಮ ಹವನ ನಡೆಸಿ, ವಿಘ್ನೇಶ್ವರ ಪೂಜೆ ನೆರವೇರಿಸಿ ಅವರು ಮಾತನಾಡಿದರು. ಕರ್ನಾಟಕದಲ್ಲಿ ಗೂಂಡಾಗಿರಿ ನಗರವಾಗಿದ್ದ ವಿಜಯಪುರದಲ್ಲಿ ಜನಸಾಮಾನ್ಯರು ಜೀವನ […]

ಕಾಂಗ್ರೆಸ್ ಮುಖಂಡ ಅಶೋಕ ಮನಗೂಳಿ ಸಿಂದಗಿಯಲ್ಲಿ ನಾಮಪತ್ರ ಸಲ್ಲಿಕೆ

ವಿಜಯಪುರ: ಕಾಂಗ್ರೆಸ್ ಮುಖಂಡ ಅಶೋಕ‌ ಮನಗೂಳಿ ಸಿಂದಗಿ ಮತಕ್ಷೇತ್ರದಿಂದ ಆಯ್ಕೆ ಬಯಸಿ ನಾಮಪತ್ರ ಸಲ್ಲಿಸಿದ್ದಾರೆ. ಕಾಂಗ್ರೆಸ್ ಸಿಂದಗಿ‌ ಮತಕ್ಷೇತ್ರಕ್ಕೆ ಇನ್ನೂ ಯಾರಿಗೂ ಟಿಕೆಟ್ ಘೋಷಣೆ ಮಾಡಿಲ್ಲ. ಆದರೂ, ಗುರುವಾರ ಶುಭ ದಿನವಾಗಿರುವ ಹಿನ್ನೆಲೆಯಲ್ಲಿ ಬಿ ಫಾರಂ ಇಲ್ಲದೇ ಕಾಂಗ್ರೆಸ್ ಅಭ್ಯರ್ಥಿಯಾಗಿ‌ ನಾಮಪತ್ರ ಸಲ್ಲಿಸಿದರು. ಚುನಾವಣಾಧಿಕಾರಿ ಶಿದ್ರಾಮ ಮಾರಿಹಾಳ ಅವರಿಗೆ ಅಶೋಕ ಮನಗೂಳಿ‌ ತಮ್ಮ ನಾಮಪತ್ರ ಸಲ್ಲಿಸಿದರು. ಈ ಸಂದರ್ಭದಲ್ಲಿ ನ್ಯಾಯವಾದಿ ಬಿ. ಜಿ. ನೆಲ್ಲಗಿ, ರಮೇಶ ಭಂಟನೂರ, ಎಂ. ಕೆ. ಸೊನ್ನದ ಹಾಗೂ ಸಹಾಯಕ ಚುನಾವಣಾಧಿಕಾರಿ ತಹಸೀಲ್ದಾರ […]

ಶಾಸಕ‌ ರಮೇಶ ಭೂಸನೂರ ಸಿಂದಗಿಯಿಂದ ಮರು ಆಯ್ಕೆ ಬಯಸಿ ನಾಮಪತ್ರ ಸಲ್ಲಿಕೆ

ವಿಜಯಪುರ: ವಿಧಾನ ಸಭೆ ಚುನಾವಣೆಗೆ ನಾಮಪತ್ರ ಸಲ್ಲಿಕೆ ಆರಂಭವಾಗುತ್ತಿದ್ದಂತೆ ಶಾಸಕ ರಮೇಶ ಭೂಸನೂರ ತಮ್ಮ ನಾಮಪತ್ರ ಸಲ್ಲಿಸಿದ್ದಾರೆ. ಬಿಜೆಪಿ ಈಗಾಗಲೇ ರಮೇಶ ಭೂಸನೂರ ಅವರಿಗೆ ಟಿಕೆಟ್ ನೀಡಿದ್ದು, ತಹಸೀಲ್ದಾರ ಕಚೇರಿಗೆ ತೆರಳಿ ಚುನಾವಣಾಧಿಕಾರಿ‌ ಸಿದ್ರಾಮ ಮಾರಿಹಾಳ ಅವರಿಗೆ ತಮ್ಮ ನಾಮಪತ್ರ ಸಲ್ಲಿಸಿದರು. ಈ ಸಂದರ್ಭದಲ್ಲಿ ನ್ಯಾಯವಾದಿ ಅರವಿಂದ ಕನ್ನೂರ, ಮಲ್ಲಣ್ಣ ಸಾಲಿ, ಸಿದ್ಧರಾಮ ಪಾಟೀಲ ಹೂವಿನಹಳ್ಳಿ, ಪೀರು ಕೆರೂರ, ಮಂಡಲ ಅಧ್ಯಕ್ಷ ಈರಣ್ಣ ರಾವೂರ ಉಪಸ್ಥಿತರಿದ್ದರು. ಸಹಾಯಕ ಚುನಾವಣಾಧಿಕಾರಿ ನಿಂಗಣ್ಣ ಬಿರಾದಾರ, ಸುರೇಶ ಚವಲರ ಅವರೂ ಉಪಸ್ಥಿತರಿದ್ದರು.

ಮಹಿಳಾ ಸ್ವ-ಸಹಾಯ ಸಂಘದ ಸದಸ್ಯರಿಗೆ ಮತದಾನ ಜಾಗೃತಿ ಅಭಿಯಾನ

ವಿಜಯಪುರ: ಪ್ರತಿ ಪ್ರಜೆಯು ಮತದಾನ ಮಾಡುವುದು ಸಂವಿಧಾನ ಕಲ್ಪಿಸಿಕೊಟ್ಟಿರುವ ಹಕ್ಕು.  ಬರುವ ಮೇ-10ರ ಮತದಾನ ದಿನದಂದು ಎಲ್ಲರೂ ಪಾಲ್ಗೊಂಡು ಮತದಾನ ಮಾಡಬೇಕು ಎಂದು ಜಿಲ್ಲಾ ಕೌಶಲ್ಯಾಭಿವೃದ್ಧಿ ಅಧಿಕಾರಿ ಸಿ. ಬಿ. ಕುಂಬಾರ ಅವರು ಹೇಳಿದರು. ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಕೌಶಲ್ಯಾಭಿವೃದ್ಧಿ ಇಲಾಖೆ ಹಾಗೂ ಮಹಾ ನಗರಪಾಲಿಕೆ ಸಹಯೋಗದಲ್ಲಿ ಸ್ವೀಪ್ ಕಾರ್ಯಕ್ರಮದಡಿ ನಗರದ ಶಂಕರಲಿಂಗ ದೇವಸ್ಥಾನ ಜೋರಾಪುರ ಪೇಠದಲ್ಲಿ ಮಹಿಳಾ ಸ್ವ-ಸಹಾಯ ಸಂಘದ ಮಹಿಳೆಯರಿಗಾಗಿ ಆಯೋಜಿಸಿದ್ದ ಜಾಗೃತಿ ಅಭಿಯಾನ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದರು. ಮತದಾನದಿಂದ ಯಾರೂ ವಂಚಿತರಾಗಬಾರದು. ಮತದಾರರು […]

ವಿಧಾನಸಭೆ ಚುನಾವಣೆ ಮತದಾನ ಬಹಿಷ್ಕರಿಸಲು ನಿರ್ಧರಿಸಿದ ವಿಜಯಪುರ ನಗರ ಮತಕ್ಷೇತ್ರದ ಸೌಭಾಗ್ಯ ನಗರ ಮತದಾರರು

ವಿಜಯಪುರ: ನಾನಾ ಬೇಡಿಕೆಗಳು ಈಡೇರದ ಹಿನ್ನೆಲೆಯಲ್ಲಿ ವಿಜಯಪುರ ನಗರ ಮತಕ್ಷೇತ್ರದ ಶಿವಗಿರಿ ರಸ್ತೆಯಲ್ಲಿರುವ ಮತ್ತು 17ನೇ ವಾರ್ಡ್ ವ್ಯಾಪ್ತಿಯ ಸೌಭಾಗ್ಯ ನಗರ ನಿವಾಸಿಗಳು ಈ ಬಾರಿ ಚುನಾವಣೆ ಬಹಿಷ್ಕರಿಸಲು ನಿರ್ಧರಿಸಿದ್ದಾರೆ.  ಅಲ್ಲದೇ, ಈ ಕುರಿತು ಬಡಾವಣೆಯಲ್ಲಿ ಫ್ಲೆಕ್ಸ್ ಕೂಡ ಅಳವಡಿಸಿದ್ದಾರೆ.  ಈ ಕುರಿತು ಜಿಲ್ಲಾಧಿಕಾರಿ ಕಚೇರಿಗೆ ತೆರಳಿದ ಇಲ್ಲಿನ ಮುಖಂಡರು ಶ್ರೀ ಹನುಮಾನ ಮಂದಿರ ಸೇವಾ ಸಮಿತಿ ನೇತೃತ್ವದಲ್ಲಿ ಅಧಿಕಾರಿಗಳಿಗೆ ಮನವಿ ಪತ್ರ ಸಲ್ಲಿಸಿದ್ದಾರೆ. ತಮ್ಮ ಬಡಾವಣೆಯಲ್ಲಿ ಕಳೆದ ಐದು ವರ್ಷಗಳಿಂದ ರಸ್ತೆ ಮಾಡಿಲ್ಲ.  24×7 ಕುಡಿಯುವ […]

ದೃಢೀಕರಣವಿಲ್ಲದೇ ಯಾವುದೇ ಪ್ರಚಾರ ಸಾಮಗ್ರಿ ಮುದ್ರಿಸಿದರೆ ಪ್ರಜಾಪ್ರತಿನಿಧಿ ಕಾಯ್ದೆಯಡಿ ಕ್ರಮ- ಡಾ. ವಿಜಯಮಹಾಂತೇಶ ಬಿ. ದಾನಮ್ಮನವರ ಎಚ್ಚರಿಕೆ

ವಿಜಯಪುರ: ವಿಧಾನಸಭೆ ಚುನಾವಣೆಗೆ ಸಂಬಂಧಿಸಿದಂತೆ ಯಾವುದೇ ಪ್ರಚಾರ ಸಾಮಗ್ರಿಗಳನ್ನು ದೃಢೀಕರಣವಿಲ್ಲದೇ ಮುದ್ರಿಸಿದರೆ ಪ್ರಜಾಪ್ರತಿನಿಧಿ ಕಾಯ್ದೆಯಡಿ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾ ಚುನಾವಣಾಧಿಕಾರಿ ಮತ್ತು ಜಿಲ್ಲಾಧಿಕಾರಿ ಡಾ. ವಿಜಯಮಹಾಂತೇಶ ಬಿ. ದಾನಮ್ಮನವರ ಎಚ್ಚರಿಕೆ ನೀಡಿದ್ದಾರೆ.  ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ರಾಜಕೀಯ ಪಕ್ಷಗಳ ಪ್ರತಿನಿಧಿಗಳ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಚುನಾವಣೆಗೆ ಸಂಬಂಧಿಸಿದಂತೆ ಪ್ರಚಾರ ಸಾಮಗ್ರಿಗಳು ಮತ್ತು ಯಾವುದೇ ಕರಪತ್ರಗಳಲ್ಲಿ ಆಕ್ಷೇಪಾರ್ಹ ಅಂಶಗಳು ಇರಬಾರದು.  ಚುನಾವಣೆ ನಿಯಮದಂತೆ ಮುದ್ರಕರು ಪರಿಶೀಲಿಸಿ, ನಿಗದಿ ಪಡಿಸಿದ ನಮೂನೆ-ಎ ಹಾಗೂ ನಮೂನೆ-ಬಿ […]

ಅತ್ಯುತ್ತಮ ಶಿಕ್ಷಣ, ಉತ್ತಮ ಆರೋಗ್ಯಕ್ಕೆ ಆದ್ಯತೆ: ಆಪ್ ಅಭ್ಯರ್ಥಿ ಹಾಸಿಂಪೀರ ವಾಲೀಕಾರ

ವಿಜಯಪುರ: ಸರಕಾರಿ ಕ್ಷೇತ್ರದ ಉದ್ಯೋಗಗಳಲ್ಲಿಮಹಿಳೆಯರಿಗೆ ಶೇ. 33 ಮೀಸಲಾತಿ ನೀಡುವ ಮೂಲಕ ಮಹಿಳಾ ಸಬಲೀಕರಣಕ್ಕೆ ಒತ್ತು ನೀಡುತ್ತಿರುವ ಆಮ್ ಆದ್ಮಿ ಪಕ್ಷವನ್ನು ಎಲ್ಲರೂ ಬೆಂಬಲಿಸಬೇಕು ಎಂದು ವಿಜಯಪುರ ನಗರ ವಿಧಾನಸಭೆ ಕ್ಷೇತ್ರದ ಆಮ್ ಆದ್ಮಿ ಪಕ್ಷದ ಅಭ್ಯರ್ಥಿ ಹಾಸಿಂಪೀರ ವಾಲಿಕಾರ ಹೇಳಿದ್ದಾರೆ.  ನಗರದ 28ನೇ ವಾರ್ಡಿನ ರಾಮನಗರದಲ್ಲಿ ಆಮ್ ಆದ್ಮಿ ಪಕ್ಷದ ಪರ ಪ್ರಚಾರ ಕೈಗೊಂಡು ಅವರು ಮಾತನಾಡಿದರು. ಆಮ್ ಆದ್ಮಿ ಪಕ್ಷ ಜನರ ಸೇವೆಗಾಗಿ ಸ್ಥಾಪಿಸಲಾಗಿದ್ದು, ಈ ಪಕ್ಷದಲ್ಲಿ ಜನರ ಹಿತಕ್ಕಾಗಿ ಪ್ರಥಮ ಆದ್ಯತೆ ನೀಡಲಾಗುತ್ತದೆ.  […]

ಗಾನಯೋಗಿ ಸಂಘದ ವತಿಯಿಂದ ಮತದಾನ ಜಾಗೃತಿ ಕಾರ್ಯಕ್ರಮ

ವಿಜಯಪುರ: ಸಾಮಾಜಿಕ ಕಾಳಜಿಯ ಮೂಲಕ ಗಮನ ಸೆಳೆದಿರುವ ನಗರದ ಗಾನಯೋಗಿ ಸಂಘದ ವತಿಯಿಂದ ವಿಜಯಪುರ ನಗರದ ಹೃದಯ ಭಾಗದಲ್ಲಿರುವ ಗಾಂಧಿ ಚೌಕ್ ಬ್ರಿಜ್ ಕೆಳಗಡೆ ಗೋಡೆಗಳ ಮೇಲೆ ಮತದಾನ ಜಾಗೃತಿಯ ಕುರಿತು ನಾನ್ನುಡಿಗಳನ್ನು ಬರೆದು ಮತದಾರರಲ್ಲಿ ಜಾಗೃತಿ ಅರಿವು ಮೂಡಿಸಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಸಂಘದ ಅಧ್ಯಕ್ಷ ಪ್ರಕಾಶ ಆರ್. ಕೆ., ನಮ್ಮ ಭವಿಷ್ಯ ನಾವು ಮಾಡುವ ಮತದಾನದ ಮೇಲೆ ನಿಂತಿದೆ.  ಪ್ರತಿಯೊಬ್ಬರು ಮತದಾನ ಮಾಡಿ ಪ್ರಜಾಪ್ರಭುತ್ವವನ್ನು ಗಟ್ಟಿಗೊಳಿಸಬೇಕು ಎಂದು ಹೇಳಿದರು. ಮತದಾರರು ಯಾವುದೇ ಆಸೆ, ಆಮೀಷಗಳಿಗೆ […]

ಪ್ರತಿ ವಿಧಾನಸಭಾ ಕ್ಷೇತ್ರದಲ್ಲಿ 5 ಸಖಿ , 1 ವಿಶೇಷ ಚೇತನ ಮತದಾರರ ಬೂತ ಸ್ಥಾಪನೆ- ಡಾ. ದಾನಮ್ಮನವರ

ವಿಜಯಪುರ: ಪಾರದರ್ಶಕ ಮತ್ತು ನ್ಯಾಯಸಮ್ಮತ ಚುನಾವಣೆ ನಡೆಸಲು ಜಿಲ್ಲಾಡಳಿತದ ವತಿಯಿಂದ ಸಕಲ ಸಿದ್ಧತೆಗಳನ್ನು ಕೈಗೊಳ್ಳಲಾಗಿದ್ದು, ಪ್ರತಿ ವಿಧಾನಸಭೆ ಕ್ಷೇತ್ರಕ್ಕೆ 5‌ ಸಖಿ ಹಾಗೂ 1 ವಿಶೇಷ ಚೇತನ ಮತದಾರರ ಬೂತ್‍ಗಳನ್ನು ಸ್ಥಾಪಿಸಲಾಗುವುದು ಎಂದು ಜಿಲ್ಲಾ ಚುನಾವಣಾಧಿಕಾರಿ ಮತ್ತು ಜಿಲ್ಲಾಧಿಕಾರಿ ಡಾ. ವಿಜಯಮಹಾಂತೇಶ ಬಿ.‌ ದಾನಮ್ಮನವರ ಮಾಹಿತಿ ನೀಡಿದ್ದಾರೆ. ಮುಖ್ಯ ಚುನಾವಣಾಧಿಕಾರಿಗಳ ಅಧ್ಯಕ್ಷತೆಯಲ್ಲಿ ನಡೆದ ವಿಡಿಯೋ ಕಾನ್ಫರೆನ್ಸ್ ನಲ್ಲಿ ಮಾತನಾಡಿದ ಅವರು, ಜಿಲ್ಲೆಯ ಸಿದ್ಧತೆಗಳ ಕುರಿತು ಮಾಹಿತಿ ನೀಡಿದರು. ವೆಬ್‍ಕಾಸ್ಟಿಂಗ್‍ಗಾಗಿ ವಿಧಾನಸಭೆ ಕ್ಷೇತ್ರವಾರು 713 ಮತಗಟ್ಟೆಗಳನ್ನು ಗುರುತಿಸಲಾಗಿದ್ದು, ಇನ್ನುಳಿದಂತೆ […]