ಮುಂಬರುವ ಚುನಾವಣೆಯಲ್ಲಿ ಮಹಿಳೆಯರಿಗೆ ಹೆಚ್ಚಿಗೆ ಟಿಕೆಟ್ ನೀಡಬೇಕು- ಡಾ. ಸರಸ್ವತಿ ಚಿಮ್ಮಲಗಿ

ವಿಜಯಪುರ: ರಾಷ್ಟ್ರ ನಿರ್ಮಾಣದಲ್ಲಿ ಪ್ರಮುಖ ಪಾತ್ರ ವಹಿಸುವ ಮಹಿಳೆಯರಿಗೆ ಸ್ವಾತಂತ್ರ್ಯ ಬಂದು 75 ವರ್ಷ ಕಳೆದರೂ ಇನ್ನೂ ಸೂಕ್ತ ಸ್ಥಾನಮಾನ ಸಿಗುತ್ತಿಲ್ಲ.  ಇದಕ್ಕೆ ರಾಜಕೀಯ ಕ್ಷೇತ್ರವೂ ಹೊರತಾಗಿಲ್ಲ.  ಮುಂಬರುವ ಚುನಾವಣೆಯಲ್ಲಿ ಮಹಿಳೆಯರಿಗೆ ಹೆಚ್ಚಿನ ಟಿಕೆಟ್ ನೀಡಬೇಕು ಎಂದು ಸಾಹಿತಿ ಮತ್ತು ಮಹಿಳಾಪರ ಹೋರಾಟಗಾರ್ತಿ ಡಾ. ಸರಸ್ವತಿ ಚಿಮ್ಮಲಗಿ ಹೇಳಿದ್ದಾರೆ.  ನಗರದಲ್ಲಿ ಜ್ಞಾನದೀಪ ಗ್ರಾಮೀಣಾಭಿವೃದ್ಧಿ ಸಂಸ್ಥೆ ಮತ್ತು ಯುಗದರ್ಶಿನಿ ಫೌಂಡೇಶನ್ ವತಿಯಿಂದ ಆಯೋಜಿಸಲಾಗಿದ್ದ ಜಂಟಿ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿದರು. ಎಲ್ಲ ರಾಜಕೀಯ ಪಕ್ಷಗಳ ನಾಯಕರು ಮಹಿಳಾ ಸಬಲೀಕರಣ ಕುರಿತು […]

ಮೀಸಲಾತಿಯಲ್ಲಿ ನನ್ನ ಪಾತ್ರ ದೊಡ್ಡದಿದೆ- ಹೈಕಮಾಂಡಿಗೆ ನನ್ನ ಶಕ್ತಿ ಗೊತ್ತಾಗಿದೆ- ಕೂಡಲ ಸಂಗಮ ಶ್ರೀಗಳ ಮೇಲೆ ಯಾರೂ ಒತ್ತಡ ಹಾಕಿಲ್ಲ- ಯತ್ನಾಳ

ವಿಜಯಪುರ: ಮೀಸಲಾತಿ ಆಗಬೇಕಾದರೆ ನನ್ನ ದೊಡ್ಡ ಕೊಡುಗೆ ಇದೆ.  ನಾನು ಎಲ್ಲ ಅಧಿಕಾರ ತ್ಯಾಗ ಮಾಡಿದ ಕಾರಣ ಹೈಕಮಾಂಡ್ ನನ್ನ ಜೊತೆ ಚರ್ಚಿಸಿ ನಮ್ಮ ಸಮಾಜ ಮೀಸಲಾತಿ ನೀಡಿದೆ.  ಮಾತ್ರವಲ್ಲ ಇತರ ಸಮಾಜಗಳ ಮೀಸಲಾತಿ ಪ್ರಮಾಣ ಹೆಚ್ಚಿಸಿದೆ ಎಂದು ಶಾಸಕ ಬಸನಗೌಡ ಪಾಟೀಲ ಯತ್ನಾಳ ಹೇಳಿದ್ದಾರೆ. ವಿಜಯಪುರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಹೈಕಮಾಂಡಿಗೆ ಬಸನಗೌಡರ ಜನಪ್ರೀಯತೆ ಗೊತ್ತಾಗಿದೆ. ಅದಕ್ಕೆ ಮೀಸಲಾತಿ ಸಿಕ್ಕಿದೆ.  ನಮಗೆಲ್ಲ ಮೀಸಲಾತಿ ನೀಡಬೇಕಾದರೆ, ಅದಕ್ಕೂ ಮೊದಲು ಎಸ್.ಸಿ.ಎಸ್.ಟಿ. ಜನಾಂಗಕ್ಕೆ ಮೀಸಲಾತಿ ಪ್ರಮಾಣ ಹೆಚ್ಚಳ […]

ಬಸವಜಯ ಮೃತ್ಯುಂಜಯ ಸ್ವಾಮೀಜಿ ಒತ್ತಡದಿಂದಾಗಿ ಕಣ್ಣೀರಿಟ್ಟಿದ್ದಾರೆ- ಸಂಗಮೇಶ ಬಬಲೇಶ್ವರ

ವಿಜಯಪುರ: ಕೂಡಲಸಂಗಮ ಜಗದ್ಗುರುಗಳು ಕೆಲವರ ಒತ್ತಡ ತಾಳಲಾರದೆ ಕಣ್ಣೀರಿಟ್ಟಿದ್ದಾರೆ ಎಂದು ಅಖಿಲ ಭಾರತ ಲಿಂಗಾಯಿತ ಪಂಚಮಸಾಲಿ ಸಮಾಜದ ರಾಷ್ಟ್ರೀಯ ವಕ್ತಾರ ಸಂಗಮೇಶ ಬಬಲೇಶ್ವರ ಆರೋಪಿಸಿದ್ದಾರೆ. ಈ ಕುರಿತು ಮಾಧ್ಯಮ ಪ್ರಕಟಣೆ ನೀಡಿರುವ ಅವರು, ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ  ದೊರಕಿಸಿ ಕೊಡುವ ಮೂಲಕ ಸಮುದಾಯದ ಮಕ್ಕಳ ಶೈಕ್ಷಣಿಕ ಹಾಗೂ ಉದ್ಯೋಗದ ಮೀಸಲಾತಿಗಾಗಿ ಐತಿಹಾಸಿಕ ಹೋರಾಟ ಮಾಡಿದ ಬಸವಜಯ ಮೃತ್ಯುಂಜಯ ಮಹಾಸ್ವಾಮಿಗಳ ಕಣ್ಣೀರಿನ ಶಾಪ ಸಮುದಾಯವನ್ನು ಹಾಗೂ ಸಮುದಾಯದ ಜಗದ್ಗುರುಗಳನ್ನು ಅತ್ಯಂತ ಕೆಟ್ಟದಾಗಿ ನಡೆಸಿಕೊಂಡವರಿಗೆ ತಟ್ಟದೇ ಬಿಡುವುದಿಲ್ಲ ಎಂದು […]

ವಿಜಯಪುರ ಜಿಲ್ಲೆಯಲ್ಲಿ ರಾಷ್ಟ್ರೀಯ ಪಕ್ಷಗಳು ಗಾಣಿಗ ಸಮಾಜಕ್ಕೆ ಟಿಕೆಟ್ ನೀಡಲು ಸಮಾಜ ಮುಖಂಡರ ಆಗ್ರಹ

ವಿಜಯಪುರ: ವಿಜಯಪುರ ಜಿಲ್ಲೆಯ ಎಂಟು ವಿಧಾನಸಭೆ ಕ್ಷೇತ್ರಗಳಲ್ಲಿ ಒಂದು ಮೀಸಲು ಕ್ಷೇತ್ರ ಹೊರತು ಪಡಿಸಿ ಇತರೆ ಕ್ಷೇತ್ರಗಳಲ್ಲಿ ಗಾಣಿಗ ಸಮಾಜಕ್ಕೆ ರಾಷ್ಟ್ರೀಯ ಪಕ್ಷಗಳು ಟಿಕೆಟ್ ನೀಡಬೇಕು ಎಂದು ಗಾಣಿಗರ ಸಮಾಜದ ಮುಖಂಡ ಎಂ. ಎಸ್. ಶಿರಾಡೋಣ ಹೇಳಿದರು. ವಿಜಯಪುರ ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜಿಲ್ಲೆಯಲ್ಲಿ ಗಾಣಿಗ ಸಮುದಾಯದ ಜನಸಂಖ್ಯೆ ಹಾಗೂ ಮತದಾರರು ಹೆಚ್ಚಿನ ಪ್ರಮಾಣದಲ್ಲಿದೆ. ರಾಷ್ಟ್ರೀಯ ಪಕ್ಷಗಳು ಸಮುದಾಯದ ನಾಯಕರಿಗೆ ಆದ್ಯತೆ ನೀಡಬೇಕು ಎಂದು ಹೇಳಿದರು. ಈ ಸಂದರ್ಭದಲ್ಲಿ ಗಾಣಿಗ ಸಮಾಜದ ಜಿಲ್ಲಾ ಕಾರ್ಯಾಧ್ಯಕ್ಷ ಡಾ. […]

ಅನುಮತಿ ಪಡೆಯದೆ ಪ್ರಚಾರ ಫಲಕ ಅಳವಡಿಸಿದರೆ ಸೂಕ್ತ ಕ್ರಮ- ಪೌರಾಯುಕ್ತ ವಿಜಯಕುಮಾರ ಮೆಕ್ಕಳಕಿ ಎಚ್ಚರಿಕೆ

ವಿಜಯಪುರ: ರಾಜ್ಯ ವಿಧಾನಸಭೆ ಸಾರ್ವತ್ರಿಕ ಚುನಾವಣೆ- 2023 ಅಂಗವಾಗಿ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಅನಧಿಕೃತ ಜಾಹೀರಾತು, ಬ್ಯಾನರ್‌ಗಳು, ಬಂಟಿಂಗ್ಸ್ ಮತ್ತು ಹೋರ್ಡಿಂಗ್ ಅಳವಡಿಸುವುದನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ.  ಹೀಗಾಗಿ ಅನುಮತಿ ಪಡೆಯದೇ ಪ್ರಚಾರ ಫಲಕ ಅಳವಡಿಸಿದ್ದಲ್ಲಿ ಸಂಬಂಧಿಸಿದವರ ವಿರುದ್ಧ ಕಾನೂನು ಪ್ರಕಾರ ಕ್ರಮ ಕೈಗೊಳ್ಳಲಾಗುವುದು ಎಂದು ಮಹಾನಗರ ಪಾಲಿಕೆ ಆಯುಕ್ತ ವಿಜಯಕುಮಾರ ಮೆಕ್ಕಳಕಿ ಎಚ್ಚರಿಕೆ ನೀಡಿದ್ದಾರೆ.  ರಾಜಕೀಯ ಪಕ್ಷಗಳಿಗೆ ಅಥವಾ ವ್ಯಕ್ತಿಗಳಿಗೆ ಸಂಬಂಧಿಸಿದ ಜಾಹೀರಾತು ಫಲಕ, ಪ್ರಚಾರ ಫಲಕ, ಬ್ಯಾನರ್, ಬಂಟಿಂಗ್, ಮತ್ತು ಹೋರ್ಡಿಂಗ್ಸ್ ಗಳನ್ನು ಅಳವಡಿಸಲು ಮಹಾನಗರ […]

ಈ ಬಾರಿಯೂ ಕೇಸರಿ ಗುಲಾಲ್ ಹಾರಬೇಕು-ಯತ್ನಾಳ, ನಮ್ಮ ಅಭ್ಯರ್ಥಿ ಯತ್ನಾಳ 50 ಸಾವಿರ ಮತಗಳಿಂದ ಗೆಲ್ಲಿಸಬೇಕು- ಕಾರಜೋಳ

ವಿಜಯಪುರ: ಈ ಬಾರಿಯೂ ಗುಮ್ಮಟ ನಗರಿ ವಿಜಯಪುರದಲ್ಲಿ ಗುಲಾಲ್ ಹಾರಬೇಕು ಎಂದು ಶಾಸಕ ಬಸನಗೌಡ ಪಾಟೀಲ ಯತ್ನಾಳ ಹೇಳಿದ್ದಾರೆ. ಬಿಜೆಪಿ ವಿಜಯ ಸಂಕಲ್ಪ ಯಾತ್ರೆಯ ಅಂಗವಾಗಿ ವಿಜಯಪುರ ನಗರದಲ್ಲಿ ನಡೆದ ರೋಡ್ ಶೋ ಬಳಿಕ ಸಭೆಯಲ್ಲಿ ಅವರು ಮಾತನಾಡಿದರು. ಬಹಳ ಸಂತೋಷವಾಗುತ್ತಿದೆ ನಿಮ್ಮೆಲ್ಲರ ಅಭಿಮಾನ, ನಿಮ್ಮಲ್ಲರ ಹಿಂದುತ್ವದ ಶಕ್ತಿ, ವಿಜಯಪುರ ಇಲ್ಲಿ ಛತ್ರಪತಿ ಶಿವಾಜಿ ಮಹಾರಾಜರ, ಮಹಾರಾಣಾ ಪ್ರತಾಪರ, ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ, ಡಾ. ಬಾಬಾಸಾಹೇಬ ಅಂಬೇಡ್ಕರ, ಅಹಿಲ್ಯಾಬಾಯಿ ಹೋಳ್ಕರ, ಮಹಾತ್ಮಾ ಬಸವೇಶ್ವರ ಎಲ್ಲರ ಊರಾಗಿ ಉಳಿಯಲಿದೆ.  […]

ಬಸವ ನಾಡಿನಲ್ಲಿ ಬಿಜೆಪಿ ಸರಕಾರ 10000 ಉದ್ಯೋಗ ಸೃಷ್ಟಿಯಾಗಲಿದೆ- ಬಸನಗೌಡ ಪಾಟೀಲ ಯತ್ನಾಳ

ವಿಜಯಪುರ: ನಗರದಲ್ಲಿ ರಾಜ್ಯ ಸರkeರದ ದೂರದೃಷ್ಟಿಯ ಫಲದಿಂದ ಸಾವಿರಾರು ಕೋಟಿ ರೂಪಾಯಿ ಅನುದಾನ ನೀಡಿ ದ್ರಾಕ್ಷಾರಸ ಉತ್ಪಾದನೆ ಘಟಕ ಪ್ರಾರಂಭವಾಗಲಿದ್ದು ಇದರಿಂದ ಸುಮಾರು 10 ಸಾವಿರ ಯುವಕರಿಗೆ ಉದ್ಯೋಗ ಸಿಗಲಿದೆ ಎಂದು ಶಾಸಕ ಬಸನಗೌಡ ಪಾಟೀಲ ಯತ್ನಾಳ ಹೇಳಿದರು. ವಿಜಯಪುರದಲ್ಲಿ ನಡೆದ ವಿಜಯ ಸಂಕಲ್ಪ ಯಾತ್ರೆಯಲ್ಲಿ ಮಾತನಾಡಿದ ಅವರು, ಬಿಜೆಪಿ ನೇತೃತ್ವದ ಕೇಂದ್ರ ಮತ್ತು ರಾಜ್ಯ ಸರಕಾರಗಳು ವಿಜಯಪುರ ನಗರ ಅಭಿವೃದ್ಧಿಗೆ  ಸಾವಿರ ಕೋಟಿಗೂ ಹೆಚ್ಚು ರೂಪಾಯಿ ಅನುದಾನ ನೀಡಿದ್ದು, ಇದರಿಂದ ಈ ಹಿಂದೆಂದಿಗಿಂತಲೂ ಹೆಚ್ಚು ಅಭಿವೃದ್ಧಿಯಾಗಿದೆ.  […]

ಗುಮ್ಮಟ ನಗರಿಯಲ್ಲಿ ಮಾ. 10 ರಂದು ಬಿಜೆಪಿ ವಿಜಯ ಸಂಕಲ್ಪ ಯಾತ್ರೆ- ಬಸನಗಡೌ ಪಾಟೀಲ ಯತ್ನಾಳ

ವಿಜಯಪುರ: ದೇಶದಲ್ಲಿ ಸಾಕಷ್ಟು ಅಭಿವೃದ್ಧಿ ಕಾರ್ಯಗಳು ನಡೆಯುತ್ತಿವೆ. ಅದಕ್ಕಾಗಿಯೇ ದೇಶದಾದ್ಯಂತ ಬಿಜೆಪಿಗೆ ಅಭೂತಪೂರ್ವ ಬೆಂಬಲ ದೊರೆಯುತ್ತಿದೆ ಎಂದು ನಗರ ಶಾಸಕ ಬಸನಗೌಡ ರಾ ಪಾಟೀಲ ಯತ್ನಾಳ ಹೇಳಿದರು. ನಗರದ ಜಿಲ್ಲಾ ಬಿಜೆಪಿ ಕಾರ್ಯಾಲಯದಲ್ಲಿ ನಡೆದ ವಿಜಯ ಸಂಕಲ್ಪ ಯಾತ್ರೆಯ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಅವರು, ಇಡೀ ಜಗತ್ತಿಗೆ ಭಯ ಹುಟ್ಟಿಸಿದ್ದ ಕೊರಾನಾ ನಿರ್ವಹಣೆಯಲ್ಲಿ ಭಾರತ ಮಾದರಿ ಆಗಿದೆ.  ಮುಂದುವರೆದ ಹಾಗೂ ಅತೀ ಕಡಿಮೆ ಜನಸಂಖ್ಯೆ ಹೊಂದಿರುವ ದೇಶ ಮಾಡಲಾಗದ ಸಾಧನೆಯನ್ನು ಭಾರತ ಮಾಡಿದ್ದು, ಕೋವಿಡ್ ಲಸಿಕೆ ನೀಡುವಲ್ಲಿ […]

ವಿಜಯಪುರದಲ್ಲಿ ಶಿವಾಜಿ‌ ಜಯಂತಿ ಆಚರಣೆ- ಕಾರ್ಯಕ್ರಮದಲ್ಲಿ ಯತ್ನಾಳ ಹೇಳಿದ್ದೇನು ಗೊತ್ತಾ?

ವಿಜಯಪುರ: ಮಾಜಿ ಸಿಎಂ ಎಸ್. ಸಿದ್ಧರಾಮಯ್ಯ ಮತ್ತು ಬಿಜೆಪಿಯಲ್ಲಿರುವ ತಮ್ಮ ವಿರೋಧಿಗಳ ಹೆಸರು ಹೇಳದೇ ಶಾಸಕ ಬಸನಗೌಡ ಪಾಟೀಲ‌ ಯತ್ನಾಳ ತೀವ್ರ ವಾಗ್ದಾಳಿ ನಡೆಸಿದ್ದಾರೆ. ವಿಜಯಪುರ ನಗರದಲ್ಲಿ ಶಿವಾಜಿ ಚೌಕಿನಲ್ಲಿ ಆಯೋಜಿಸಲಾಗಿದ್ದ ಶಿವಾಜಿ ಜಯಂತಿ ಕಾರ್ಯಕ್ರಮದಲ್ಲಿ ಶಿವಾಜಿ ಧರಿಸುತ್ತಿದ್ದ ಪೇಟಾ ಮಾದರಿಯ ಪೇಟಾ ಧರಿಸಿ ಮಾತನಾಡಿದ ಅವರು ಹಿಂದುತ್ವ ಪ್ರತಿಪಾದಿಸುತ್ತಲೇ ತಮ್ಮ ಕಾಂಗ್ರೆಸ್ ಹಾಗೂ ತಮ್ಮ ವಿರೋಧಿಗಳ ವಿರುದ್ಧ ವಾಗ್ದಾಳಿ ನಡೆಸಿದರು. ಛತ್ರಪತಿ ಶಿವಾಜಿ ಮಹಾರಾಜರೂ ಯುದ್ಧ ಮಾಡಿದ್ದಾರೆ. ಅವರ ಸೈನ್ಯದಲ್ಲಿಯೂ ಮುಸ್ಲಿಂ ಸೈನಿಕರಿದ್ದರು. ಶಿವಾಜಿ ಮಹಾರಾಜರು […]

ಫೆ. 23ರಂದು ಬಬಲೇಶ್ವರದಲ್ಲಿ ಪ್ರಜಾಧ್ವನಿ ಯಾತ್ರೆ- ಆಧುನಿಕ ಭಗೀರಥನ ಪರ ಚುನಾವಣೆ ಪ್ರಚಾರಕ್ಕೆ ರಣಕಹಳೆ ಮೊಳಗಿಸಲಿರುವ ಸಿದ್ಧರಾಮಯ್ಯ

ವಿಜಯಪುರ: ಬಬಲೇಶ್ವರದಲ್ಲಿ ಫೆ. 23 ರಂದು ಗುರುವಾರ ಮಾಜಿ ಮುಖ್ಯಮಂತ್ರಿ ಮತ್ತು ವಿಧಾನ ಸಭೆ ಪ್ರತಿಪಕ್ಷದ ನಾಯಕ ಎಸ್. ಸಿದ್ದರಾಮಯ್ಯನವರ ನೇತೃತ್ವದಲ್ಲಿ ಪ್ರಜಾಧ್ವನಿ ನಡೆಯಲಿದ್ದು, ಮತಕ್ಷೇತ್ರದ 75 ಸಾವಿರ ಜನರು ಪಾಲ್ಗೊಳ್ಳುವ ಮೂಲಕ ಮುಂಬರುವ ವಿಧಾನಸಭೆ ಚುನಾವಣೆಗೆ ರಣಕಹಳೆ ಮೊಳಗಿಸಲಿದ್ದಾರೆ ಎಂದು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಈರಗೊಂಡ ಬಿರಾದಾರ ತಿಳಿಸಿದ್ದಾರೆ. ಈ ಕುರಿತು ಮಾಧ್ಯಮ ಪ್ರಕಟಣೆ ನೀಡಿರುವ ಅವರು, ಬಬಲೇಶ್ವರ ಬಸ್‍ಸ್ಟ್ಯಾಂಡ್ ಹತ್ತಿರದ ನಿಡೋಣಿ ರಸ್ತೆಯಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ 50 ಸಾವಿರ ಜನ ಕುಳಿತುಕೊಂಡು ನೋಡುವ ಬೃಹತ್ […]