ಸುನೀಲಗೌಡರು ಎಂ.ಎಲ್.ಸಿಯಾಗಲು ಹರಕೆ ಹೊತ್ತಿದ್ದ ಗ್ರಾ. ಪಂ. ಸದಸ್ಯ: 30 ಕಿ. ಮೀ. ಪಾದಯಾತ್ರೆ ನಡೆಸಿ ಹರಕೆ ಪೂರೈಸಿದ ಆದಿಲ್ ವಾಲಿಕಾರ

ವಿಜಯಪುರ: ಗ್ರಾಮ ಪಂಚಾಯಿತಿ ಸದಸ್ಯರಿಗೆ ಕೇರಳ ಮಾದರಿಯಲ್ಲಿ ಗೌರವ ಧನ ಹೆಚ್ಚಳ, ಬಸ್ ಪಾಸ್ ಸೌಲಭ್ಯ ಮತ್ತು ಇತರ ಸೌಕರ್ಯಗಳನ್ನು ಸರಕಾರ ಒದಗಿಸುವವರೆಗೂ ವಿರಮಿಸುವುದಿಲ್ಲ ಎಂದು ವಿಧಾನ ಪರಿಷತ ಸದಸ್ಯ ಸುನೀಲಗೌಡ ಪಾಟೀಲ ಹೇಳಿದ್ದಾರೆ. ವಿಜಯಪುರ ಜಿಲ್ಲೆಯ ತಿಕೋಟಾ ತಾಲೂಕಿನ ಅರಕೇರಿ ಅಮೋಘಸಿದ್ಧ ದೇವಸ್ಥಾನಕ್ಕೆ ಗ್ರಾ. ಪಂ. ಸದಸ್ಯರೂ ಸೇರಿದಂತೆ ಆಗಮಿಸಿದ 150 ಜನ ಪಾದಯಾತ್ರಿಗಳನ್ನು ಸನ್ಮಾನಿಸಿ ಅವರು ಮಾತನಾಡಿದರು. ಗ್ರಾ. ಪಂ. ಸದಸ್ಯರ ಗೌರವಧನ ಹೆಚ್ಚಳದ ಬಗ್ಗೆ ವಿಧಾನ ಪರಿಷತ್ತಿನಲ್ಲಿ ಮೊದಲ ಬಾರಿಗೆ ನಾನು ಧ್ವನಿ […]

ಮೀಸಲಾತಿ ಸಂಬಂಧ ವರಿಷ್ಠರು ಬೆಳಿಗ್ಗೆ ನನ್ನ ಜೊತೆ ಮಾತನಾಡಿದ್ದಾರೆ- ಈ ಹಿಂದೆ ಮಾಜಿ ಸಚಿವನ ಕೊಲೆಗೆ ಸುಪಾರಿ ಆರೋಪದಲ್ಲಿ ನನ್ನನ್ನು ಸಿಲುಕಿಸಲು ಪ್ರಯತ್ನಿಸಿದ್ದರು- ಯತ್ನಾಳ

ವಿಜಯಪುರ: ಮೀಸಲಾತಿ ವಿಚಾರದಲ್ಲಿ ಬಿಜೆಪಿ ಹೈಕಮಾಂಡಿಗೆ ಪಂಚಮಸಾಲಿ ಸಮುದಾಯದ ಹೋರಾಟ ಮನವರಿಕೆಯಾಗಿದೆ.  ಬೆಳಿಗ್ಗೆಯಷ್ಟೇ ಹೈಕಮಾಂಡ್ ನವರು ನನ್ನ ಜೊತೆ ಮಾತನಾಡಿದ್ದಾರೆ ಎಂದು ವಿಜಯಪುರ ನಗರ ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳ ಹೇಳಿದ್ದಾರೆ. ವಿಜಯಪುರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಪಂಚಮಸಾಲಿ ಮೀಸಲಾತಿ ಹೋರಾಟದ ವಿಚಾರವಾಗಿ ನಮ್ಮ ಕೇಂದ್ರ ನಾಯಕ ಮಂಡಳಿ, ಪಕ್ಷದ ಹೈಕಮಾಂಡ ಇಂದು ಬೆಳಿಗ್ಗೆ ಫೋನ್ ಮಾಡಿ ಮಾತನಾಡಿದೆ.  ಕರ್ನಾಟಕದ ಮೀಸಲಾತಿ ವಿಚಾರ ಮತ್ತು ಈ ಬಗ್ಗೆ ಇರುವ ಗೊಂದಲ ನಿವಾರಣೆ ಮಾಡಲು ಸಭೆ […]

ಕೊಲೆ ಪ್ರಕರಣದ ತನಿಖೆಯನ್ನು ಸಿಬಿಐ ತನಿಖೆಗೆ ಆಗ್ರಹಿಸಿ ಸಿಎಂ ಗೆ ಪತ್ರ ಬರೆದ ಯತ್ನಾಳ- ಯಾವ ಕೇಸ್ ಗೊತ್ತಾ?

ವಿಜಯಪುರ: ಕೊಲೆ ಆರೋಪ ಪ್ರಕರಣವನ್ನು ಸಿಬಿಐ ತನಿಖೆಗೆ ಒಳಪಡಿಸಬೇಕು ಎಂದು ಆಗ್ರಹಿಸಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ವಿಜಯಪುರ ನಗರ ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳ ಪತ್ರ ಬರೆದಿದ್ದಾರೆ.  ಈ ಪತ್ರದ ಪ್ರತಿ ಬಸವನಾಡು ವೆಬ್ ಗೆ ಲಭ್ಯವಾಗಿದ್ದು, ಸಚಿವ ಮುರುಗೇಶ ನಿರಾಣಿ ಹೆಸರು ಹೇಳದೇ ಪತ್ರ ಬರೆದು ಸಿಬಿಐ ತನಿಖೆ ನಡೆಸುವಂತೆ ಆಗ್ರಹಿಸಿದ್ದಾರೆ. ವಿಜಯಪುರದಲ್ಲಿ ಕಾರು ಚಾಲಕನೊಬ್ಬನ ಕೊಲೆಯಾಗಿದ್ದು, ಈ ಕುರಿತು ತನಿಖೆಯಾದರೆ ಸತ್ಯ ಹೊರಬರಲಿದೆ ಎಂದು ಶನಿವಾರ ಸಚಿವ ಮುರುಗೇಶ ನಿರಾಣಿ ಆರೋಪಿಸಿದ್ದರು.  ಈ […]

ನಾ ನಾಯಕಿ ಸಮಿತಿ ರಚಿಸುವ ಮೂಲಕ ಮಹಿಳೆಯರನ್ನು ಮುಖ್ಯವಾಹಿನಿಗೆ ತರಲಾಗುತ್ತಿದೆ- ಕಾಂತಾ ನಾಯಕ

ವಿಜಯಪುರ: ನಾ ನಾಯಕಿ ಎಂಬ ಸಮಿತಿ ರಚಿಸುವ ಮೂಲಕ ಮಹಿಳೆಯರನ್ನು ಮುಖ್ಯ ವಾಹಿನಿಗೆ ತರಲಾಗುತ್ತಿದೆ ಎಂದು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಕಾಂತಾ ನಾಯಕ ಹೇಳಿದರು.  ವಿಜಯಪುರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕೆಪಿಸಿಸಿ ಅಧ್ಯಕ್ಷ ಡಿ. ಕೆ. ಶಿವಕುಮಾರ ಕಳೆದ ಒಂದೂವರೆ ವರ್ಷ ಹಿಂದೆ ನಾ ನಾಯಕಿ ಎಂಬ ಸಮಿತಿಗೆ ಚಾಲನೆ ನೀಡಿದ್ದಾರೆ.  ಈ ಸಮಿತಿಯ ಮೂಲಕ ಗ್ರಾಮೀಣ ಮತ್ತು ತಾಲೂಕು ಮಟ್ಟದ ಪ್ರತಿ ಹಂತದಲ್ಲಿಯೂ ಮಹಿಳೆಯರು ತಮ್ಮ ನಾಯಕತ್ವದ ಗುಣಗಳ ಮೂಲಕ ರಾಜಕೀಯಕ್ಕೆ ತರಲು ಶ್ರಮಿಸಲಾಗುತ್ತಿದೆ ಎಂದು […]

ಬಿಜೆಪಿ ಬಿಜಿನೆಸ್ ಜನತಾ ಪಾರ್ಟಿಯಾಗಿದೆ- ಜನರನ್ನು ಎರೋಪ್ಲೇನ್ ಹತ್ತಿಸುತ್ತಿದೆ- ಮಧು ಬಂಗಾರಪ್ಪ

ವಿಜಯಪುರ: ಬಿಜೆಪಿ ಬಿಜಿನೆಸ್ ಜನತಾ ಪಾರ್ಟಿಯಾಗಿದೆ.  ಜನರಿಗೆ ಏರೋಪ್ಲೇನ್ ಹತ್ತಿಸುತ್ತಿದೆ ಎಂದು ಕೆಪಿಸಿಸಿ ಹಿಂದುಳಿದ ವರ್ಗಗಳ ರಾಜ್ಯಾಧ್ಯಕ್ಷ ಮತ್ತು ಮಾಜಿ ಶಾಸಕ ಮಧು ಬಂಗಾರಪ್ಪ ಟೀಕಿಸಿದ್ದಾರೆ.  ವಿಜಯಪುರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯ ಸರಕಾರ ಅಭಿವೃದ್ಧಿಯನ್ನು ಸಂಪೂರ್ಣಾಗಿ ಕಡೆಗಣಿಸಿದೆ.  ರಸ್ತೆ, ಚರಂಡಿ ಸೇರಿದಂತೆ ಎಲ್ಲ ಕಾಮಗಾರಿಗಳಲ್ಲಿ ಕಮಿಷನ್ ಹೊಡೆಯುತ್ತಿದೆ.  ಬಿಜೆಪಿಯವರು ದೇಶ ಆಳಲು ಬಂದಿಲ್ಲ ಎಂದು ವಾಗ್ದಾಳಿ ನಡೆಸಿದರು. ಬಿಜೆಪಿ ರಾಜ್ಯಾಧ್ಯಕ್ಷ ನಳೀನಕುಮಾರ ಕಟೀಲ ವಿರುದ್ಧ ಟೀಕಾಪ್ರಹಾರ ನಡೆಸಿದ ಅವರು, ಕಟೀಲ ಜಿಹಾದ್ ಹೆಸರಿನಲ್ಲಿ ರಾಜಕೀಯ ಮಾಡುತ್ತಿದ್ದಾರೆ.  […]

ಡಿ. 30ರಂದು ಗುಮ್ಮಟ ನಗರಿಯಲ್ಲಿ ಕೃಷ್ಣಾ ಜನಾಂದೋಲನ ಸಮಾವೇಶ- ಎಂ. ಬಿ. ಪಾಟೀಲ

ವಿಜಯಪುರ: ಕೃಷ್ಣಾ ನೀರಾವರಿ ಯೋಜನೆಗಳನ್ನು ಅನುಷ್ಠಾನಗೊಳಿಸಲು ರಾಜ್ಯ ಬಿಜೆಪಿ ಸರಕಾರ ತೋರುತ್ತಿರುವ ವಿಳಂಬ ನೀತಿಯನ್ನು ಖಂಡಿಸಿ ಹಾಗೂ ಬಿಜೆಪಿ ಸರಕಾರದ ವೈಫಲ್ಯದ ಕುರಿತು ಕೃಷ್ಣಾ ಜಲಾಂದೋಲನ ಸಮಾವೇಶ ದಿ. 30 ರಂದು ಗುಮ್ಮಟ ನಗರಿ ವಿಜಯಪುರದಲ್ಲಿ ನಡೆಯಲಿದೆ. ಡಿ. 30ರಂದು ಶುಕ್ರವಾರ ಮ. 3ಕ್ಕೆ ವಿಜಯಪುರ ನಗರದ ದರ್ಬಾರ ಹೈಸ್ಕೂಲ್ ಮೈದಾನದಲ್ಲಿ ಈ ಸಮಾವೇಶ ನಡೆಯಲಿದೆ. ಇದರಲ್ಲಿ ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪಸಿಂಗ್ ಸುರ್ಜೆವಾಲಾ, ಕೆಪಿಸಿಸಿ ಅಧ್ಯಕ್ಷ ಡಿ. ಕೆ. ಶಿವಕುಮಾರ, ಮಾಜಿ ಮುಖ್ಯಮಂತ್ರಿ ಎಸ್. ಸಿದ್ದರಾಮಯ್ಯ, […]

Land Acquisition: ವಿಜಯಪುರ ಜಿಲ್ಲೆಯ ಭೂಸ್ವಾಧೀನ ತಾರತಮ್ಯ ನಿವಾರಣೆಗೆ ಸಚಿವ ಸಂಪುಟ ನಿರ್ಣಯ: ಗೋವಿಂದ ಕಾರಜೋಳ

ಬೆಂಗಳೂರು: ಕೃಷ್ಣಾ ಮೇಲ್ದಂಡೆ ಯೋಜನೆಯ ಹಂತ-3 ರಡಿ ಭೂಸ್ವಾಧೀನಕ್ಕೆ ಒಳಪಡುವ ಜಮೀನುಗಳಿಗೆ ಏಕರೂಪದ ಬೆಲೆ ನಿಗದಿಪಡಿಸಿ ಐತೀರ್ಪನ್ನು ರಚಿಸುವ ಮೂಲಕ ಪರಿಹಾರ ವಿತರಿಸಲು ಇಂದು ನಡೆದ ಸಚಿವ ಸಂಪುಟದ ಸಭೆಯಲ್ಲಿ ಮಹತ್ವದ ಐತಿಹಾಸಿಕ ನಿರ್ಣಯ ಕೈಗೊಳ್ಳಲಾಗಿದೆ ಎಂದು ಜಲಸಂಪನ್ಮೂಲ ಸಚಿವ ಗೋವಿಂದ ಕಾರಜೋಳ ತಿಳಿಸಿದ್ದಾರೆ. ಕೃಷ್ಣಾ ನದಿಯ ಎಡದಂಡೆಯಲ್ಲಿ ಮುಳುಗಡೆಯಾಗಲಿರುವ ವಿಜಯಪುರ ಜಿಲ್ಲೆಯ ಬಬಲೇಶ್ವರ ತಾಲ್ಲೂಕಿನ 14 ಗ್ರಾಮಗಳು ಕೊಲ್ಹಾರ ತಾಲ್ಲೂಕಿನ ಆರು ಗ್ರಾಮಗಳು, ನಿಡಗುಂದಿ ತಾಲ್ಲೂಕಿನ ಒಂಬತ್ತು ಗ್ರಾಮಗಳು ಮುಳುಗಡೆ ಹೊಂದುತ್ತಿವೆ. ಮುಳಗುಡೆ ಹೊಂದಲಿರುವ ಜಮೀನುಗಳ […]

ಶಿಕ್ಷಕರ, ವಿವಿಗಳ ಸಮಸ್ಯೆ ನಿವಾರಣೆಗೆ ಅದತ್ಯೆ ನೀಡುವಂತೆ ಮಾಜಿ ಎಂಎಲ್ಸಿ ಅರುಣ ಶಹಾಪುರ ಆಗ್ರಹ

ವಿಜಯಪುರ:  ಬೆಳಗಾವಿಯಲ್ಲಿ ನಡೆಯಲಿರುವ ಚಳಿಗಾಲದ ಅಧಿವೇಶನದಲ್ಲಿ ಶಿಕ್ಷಕರ, ಶಾಲಾ-ಕಾಲೇಜುಗಳ ಮತ್ತು ವಿಶ್ವವಿದ್ಯಾಲಯಗಳ ನಾನಾ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಒದಗಿಸುವ ನಿಟ್ಟಿನಲ್ಲಿ ಸರಕಾರ ಕ್ರಮ ಕೈಗೊಳ್ಳಬೇಕು ಎಂದು ವಿಧಾನ ಪರಿಷತ ಮಾಜಿ ಸದಸ್ಯ ಅರುಣ ಶಹಾಪುರ ಆಗ್ರಹಿಸಿದ್ದಾರೆ. ಈ ಕುರಿತು ಮಾಧ್ಯಮ ಪ್ರಕಟಣೆ ನೀಡಿರುವ ಅವರು, ಶಿಕ್ಷಣ ಕ್ಷೇತ್ರದಲ್ಲಿ ಸಾಕಷ್ಟು ಸುಧಾರಣೆ ಕ್ರಮಗಳನ್ನು ಕೈಗೊಂಡಿದ್ದು, ರಾಷ್ಟ್ರೀಯ ಶಿಕ್ಷಣ ನೀತಿ -2020 ಜಾರಿಗೊಳಿಸಿದ ಮೊದಲ ರಾಜ್ಯ ಎಂದು ಕರ್ನಾಟಕ ಹೆಗ್ಗಳಿಕೆ ಪಡೆದುಕೊಂಡಿದೆ.  ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಉನ್ನತ ಶಿಕ್ಷಣ ಸಚಿವ […]

ವೀರಶೈವ ಮಹಾಸಭೆ ನಿರ್ಧಾರಕ್ಕೆ ಬದ್ಧ- ವಸಂತ ಋುತು ಬಂದಾಗ ಕಾಗೆ ಯಾವುದು? ಕೋಗಿಲೆ ಯಾವುದು ಗೊತ್ತಾಗುತ್ತೆ- ವಚನಾನಂದ ಸ್ವಾಮೀಜಿ

ವಿಜಯಪುರ: ಈ ಮಧ್ಯೆ, ದಾವಣಗೆರೆಯಲ್ಲಿ ವೀರಶೈವ ಮಹಾಸಭೆ ಮೂರು ದಿನಗಳ ಕಾಲ ನಡೆಯಲಿದೆ.  ಈ ಸಭೆಯಲ್ಲಿ ಕೈಗೊಳ್ಳಲಾಗುವ ನಿರ್ಧಾರಕ್ಕೆ ನಾವು ಬದ್ಧರಾಗಿರುತ್ತೇವೆ ಎಂದು ತಿಳಿಸಿದ ವಚನಾನಂದ ಶ್ರೀಗಳು, ಮೂರನೇ ಪೀಠ ಮೂರಾಬಟ್ಟೆ ಎಂಬುದು ಯತ್ನಾಳ ವಿಚಾರ ಕುರಿತು ಪ್ರತಿಕ್ರಿಯೆ ನೀಡಿದರು.  ಮಾತನಾಡುವವರ ಬಗ್ಗೆ ಏನೂ ಮಾಡಲು ಆಗುವುದಿಲ್ಲ.  ಅವರು ಮಾತಾಡುತ್ತಲೇ ಇರುತ್ತಾರೆ.  ಬೈದವರೆನ್ನ ಬಂಧುಗಳೆನ್ನೆ.  ಇದು ಬಸವ ಧರ್ಮ ಹೇಳುತ್ತದೆ.  ಎತ್ತರದಲ್ಲಿ ಇರುವುದರ ಬಗ್ಗೆ ಎಲ್ಲರೂ ಮಾತಾಡುತ್ತಾರೆ.  ನಾವು ನಮ್ಮ ಕೆಲಸ ಮಾಡುತ್ತಿರಬೇಕು ಎಂದು ವಚನಾನಂದ ಸ್ವಾಮೀಜಿ […]

ಹಮೀದ್ ಮುಶ್ರಿಫ್ ಜನಸಂಪರ್ಕ ಕಚೇರಿಯಲ್ಲಿ ಸೋನಿಯಾ ಗಾಂಧಿ‌ ಜನ್ಮದಿನ ಆಚರಣೆ

ವಿಜಯಪುರ: ಕಾಂಗ್ರೆಸ್ ಮುಖಂಡ ಅಬ್ದುಲ್ ಹಮೀದ್ ಮುಶ್ರಿಫ್ ಅವರ ಜನಸಂಪರ್ಕ ಕಚೇರಿಯಲ್ಲಿ ಸೋನಿಯಾ ಗಾಂಧಿ ಅವರ ಜನ್ಮದಿನ ಆಚರಿಸಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಹಮೀದ್ ಮುಶ್ರಿಫ್, ಸೋನಿಯಾ ಗಾಂಧಿ ಜೀವನ ಆದರ್ಶಗಳನ್ನು ಶ್ಲಾಘಿಸಿದರು. ಅವರ ನೇತೃತ್ವದಲ್ಲಿ ಮತ್ತೆ ದೇಶದಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದೆ ಬರುಲಿದೆ. ದೇಶಕ್ಕಾಗಿ ಹಲವಾರು ತ್ಯಾಗಗಳನ್ನು ಮಾಡಿರುವ ಸೋನಿಯಾ ಗಾಂಧಿ ಜೀವನ ಸಾಕಷ್ಟು ಏರಿಳಿತಗಳಿಂದ ಕೂಡಿದ್ದರೂ ಧೃತಿಗೆಡದೆ ಪಕ್ಷವನ್ನು ಬಲಿಷ್ಠಗೊಳಿಸುವ ಪ್ರಾಮಾಣಿಕ ಪ್ರಯತ್ನದಲ್ಲಿ ನಿರತರಾಗಿದ್ದಾರೆ.‌‌ ಒಬ್ಬ ಮಹಿಳೆಯಾಗಿ ಒಂದು ರಾಷ್ಟ್ರೀಯ ಪಕ್ಷದ ಪರಮೋಚ್ಛ […]