ರಕ್ತಬಸಿದು ಪಕ್ಷ ಕಟ್ಟಿದ್ದೇನೆ ಆದರೆ ನನ್ನನ್ನು ಡಿಸಿಎಂ ಸ್ಥಾನ ಕಿತ್ತುಕೊಂಡರು ಬಿಜೆಪಿ ವಿರುದ್ಧ ಶಾಸಕ ಲಕ್ಷ್ಮಣ ಸವದಿ ವಾಗ್ದಾಳಿ
ವಿಜಯಪುರ: ರಕ್ತಬಸಿದು ಪಕ್ಷ ಕಟ್ಟಿದ್ದೇನೆ. ಆದರೆ, ನನ್ನ ಡಿಸಿಎಂ ಸ್ಥಾನ ಕಿತ್ತುಕೊಂಡರು ಎಂದು ಬೆಳಗಾವಿ ಜಿಲ್ಲೆಯ ಅಥಣಿ ಶಾಸಕ ಲಕ್ಷ್ಮಣ ಸವದಿ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ವಿಜಯಪುರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಸರಕಾರದಲ್ಲಿ ಲಕ್ಷ್ಣಣ ಸವದಿಗೆ ಯಾವುದೇ ಸ್ಥಾನಮಾನ ನೀಡಿಲ್ಲ ಎಂಬ ಆರೋಪದ ಕುರಿತು ಖಾರವಾಗಿ ಪ್ರತಿಕ್ರಿಯೆ ನೀಡಿದರು. ಅಂಥದ್ದೇನೂ ಇಲ್ಲ. ನಾನು ಬಿಜೆಪಿ ಸೇರಿದಾಗ ಅಥಣಿ ಮತ್ತು ಕಾಗವಾಡ ಸುತ್ತಮುತ್ತ ಗ್ರಾಮ ಪಂಚಾಯಿತಿಯಿಂದ ಹಿಡಿದು ಎಲ್ಲಿಯೂ ಬಿಜೆಪಿಯ ಜನಪ್ರತಿನಿಧಿ ಇರಲಿಲ್ಲ. ನಾನು ರಕ್ತಬಸಿದು […]
ಏ. 29 ರಂದು ಬಾಗಲಕೋಟೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಪ್ರಚಾರ- ರಮೇಶ ಜಿಗಜಿಣಗಿ, ಪಿ. ಸಿ. ಗದ್ದಿಗೌಡರ ಪರ ಮತಾಯನೆ
ವಿಜಯಪುರ: ಪ್ರಧಾನಿ ನರೇಂದ್ರ ಮೋದಿ ಅವರು ಏ. 29 ರಂದು ಬಾಗಲಕೋಟೆಗೆ ಆಗಮಿಸಲಿದ್ದು, ವಿಜಯಪುರ ಸಂಸದ ರಮೇಶ ಜಿಗಜಿಣಗಿ ಮತ್ತು ಬಾಗಲಕೋಟೆ ಸಂಸದ ಪಿ. ಸಿ. ಗದ್ದಿಗೌಡರ ಪತ ಪ್ರಚಾರ ನಡೆಸಲಿದ್ದಾರೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಆರ್. ಎಸ್. ಪಾಟೀಲ ಕೂಚಬಾಳ ಹೇಳಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಏ.29 ರಂದು ಬೆ. 11 ಗಂಟೆಗೆ ಬಾಗಲಕೋಟೆ ನವನಗರದ ತೋಟಗಾರಿಕಾ ವಿಶ್ವವಿದ್ಯಾಲಯದ ಆವರಣದಲ್ಲಿ ನಡೆಯುವ ಬೃಹತ್ ಬಹಿರಂಗ ಸಭೆಯಲ್ಲಿ ಪ್ರಧಾನಿ ನರೇಂದ್ರ ಮೋದಿಯವರು ಉಭಯ ಜಿಲ್ಲೆಯ ಜನತೆಯನ್ನುದ್ದೇಶಿಸಿ […]
ಮನೆಯಿಂದಲೇ ಮತದಾನ ವ್ಯವಸ್ಥೆಗೆ ಹಿರಿಹಿರಿ ಹಿಗ್ಗಿದ ಹಿರಿಯ ನಾಗರಿಕರು, ವಿಶೇಷ ಚೇತನ ಮತದಾರರು
ವಿಜಯಪುರ: ಲೋಕಸಭೆ ಚುನಾವಣೆಗೆ ಸಂಬಂಧಿಸಿದಂತೆ ಚುನಾವಣೆ ಆಯೋಗವು 85 ವರ್ಷ ಮೇಲ್ಪಟ್ಟವರು ಮತ್ತು ವಿಕಲಚೇತನರಿಗೆ ಮನೆಯಿಂದಲೇ ಮತದಾನ ಮಾಡಲು ನೀಡಿರುವ ವಿಶೇಷ ಸೌಲಭ್ಯ ಬಳಸಿಕೊಂಡು ಜಿಲ್ಲೆಯ ಹಿರಿಯ ನಾಗರೀಕರು ಮತ್ತು ವಿಶೇಷ ಚೇತನರು ತಮ್ಮ ಹಕ್ಕು ಚಲಾಯಿಸಿ ಸಂತಸ ವ್ಯಕ್ತಪಡಿಸಿದ್ದಾರೆ. ಜಿಲ್ಲಾದ್ಯಂತ ಏ. 27 ರಂದು ಮನೆಯಿಂದ ಮತದಾನ ಮಾಡಲು ಒಪ್ಪಿಗೆ ಪತ್ರ ನೀಡಿರುವ 85 ವರ್ಷಕ್ಕೂ ಮೇಲ್ಪಟ್ಟವರು ಮತ್ತು ವಿಕಲಚೇತನ ಮತದಾರರ ಮನೆಗಳಿಗೆ ವೇಳಾಪಟ್ಟಿ ಮತ್ತು ರೂಟ್ ಮ್ಯಾಪ್ ಸಿದ್ದಪಡಿಸಿಕೊಂಡಿರುವ ಮತಗಟ್ಟೆ ಸಿಬ್ಬಂದಿ ತೆರಳಿ ಮತದಾನ […]
ಇಂಡಿಯಾ ಮೈತ್ರಿಕೂಟ ಅಧಿಕಾರಕ್ಕೆ ಬಂದರೆ ರೈತರು, ಮಹಿಳೆಯರು, ಯುವಕರಿಗೆ ಕಾಟಾ ಕಟ್.. ಕಟಾ ಕಟ್.. ಕಟಾ ಕಟ್… ಎಂದು ಪ್ರತಿ ತಿಂಗಳು ಹಣ ಸಿಗಲಿದೆ- ರಾಹುಲ ಗಾಂಧಿ
ವಿಜಯಪುರ: ಕೇಂದ್ರದಲ್ಲಿ ಇಂಡಿ ಮೈತ್ರಿಕೂಟ ಅಧಿಕಾರಕ್ಕೆ ಬಂದರೆ ರೈತರು, ಮಹಿಳೆಯರು ಮತ್ತು ಯುವಕರಿಗೆ ಬ್ಯಾಂಕ್ ಖಾತೆಗಳಿಗೆ ಪ್ರತಿ ತಿಂಗಳು ಕಟಾ ಕಟ್.. ಕಟಾ ಕಟ್.. ಕಟಾ ಕಟ್. ಎಂಬಂತೆ ಹಣ ಜಮೆಯಾಗಲಿದೆ ಎಂದು ಸಂಸದ ಮತ್ತು ಎಐಸಿಸಿ ರಾಷ್ಟ್ರೀಯ ಮುಖಂಡ ರಾಹುಲ ಗಾಂಧಿ ಹೇಳಿದ್ದಾರೆ. ವಿಜಯಪುರದಲ್ಲಿ ಸಾರ್ವಜನಿಕ ಸಭೆಯನ್ನು ಉದ್ದೇಶಿಸಿ ಅವರು ಮಾತನಾಡಿದರು. ನಮ್ಮ ಮೈತ್ರಿಕೂಟ ಅಧಿಕಾರಕ್ಕೆ ಬಂದರೆ ದೇಶದಲ್ಲಿರುವ ಬಡವರ ಪಟ್ಟಿ ತಯಾರಿಸಿ ಪ್ರತಿಯೊಂದು ಕುಟುಂಬದ ಓರ್ವ ಮಹಿಳೆಗೆ ಪ್ರತಿ ವರ್ಷ ರೂ. 1 ಲಕ್ಷ […]
ನಾಳೆ ಗುಮ್ಮಟ ನಗರಿಯಲ್ಲಿ ರಾಹುಲ ಗಾಂಧಿ ಪ್ರಚಾರ- ಸಿದ್ಧತೆ ಪರಿಶೀಲಿಸಿದ ಸಚಿವ ಎಂ. ಬಿ. ಪಾಟೀಲ
ವಿಜಯಪುರ: ಕಾಂಗ್ರೆಸ್ ರಾಷ್ಟ್ರೀಯ ಮುಖಂಡ ರಾಹುಲ ಗಾಂಧಿ ಅವರು ಏ. 26 ರಂದು ಶುಕ್ರವಾತ ನಗರಕ್ಕೆ ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ಕೈಗಾರಿಕೆ, ಮೂಲಸೌಲಭ್ಯ ಅಭಿವೃದ್ಧಿ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಎಂ. ಬಿ. ಪಾಟೀಲ ಅವರು ಇಂದು ಗುರುವಾರ ಬಿ.ಎಲ್.ಡಿ.ಇ ನ್ಯೂ ಕ್ಯಾಂಪಸ್ ಗೆ ಭೇಟಿ ನೀಡಿದರು. ಸಂಸದ ಮತ್ತು ಎಐಸಿಸಿ ರಾಷ್ಟ್ರೀಯ ಮುಖಂಡ ರಾಹುಲ ಗಾಂಧಿ ಅವರು ವಿಜಯಪುರ ಕಾಂಗ್ರೆಸ್ ಅಭ್ಯರ್ಥಿ ಪ್ರೊ. ರಾಜು ಆಲಗೂರ ಪರ ಮತಯಾಚನೆ ಮಾಡಲಿದ್ದಾರೆ. ಈ ಹಿನ್ನೆಲೆಯಲ್ಲಿ ಕಾರ್ಯಕ್ರಮ ನಡೆಯಲಿರುವ ಸ್ಥಳದಲ್ಲಿ […]
ಅಭ್ಯರ್ಥಿಗಳ ಚುನಾವಣೆ ವೆಚ್ಚಗಳ ಲೆಕ್ಕಪತ್ರ ತಪಾಸಣೆ ದಿನಾಂಕ ನಿಗದಿ ಪಡಿಸಿದ ಟಿ. ಭೂಬಾಲನ
ವಿಜಯಪುರ: ಪರಿಶಿಷ್ಟ ಜಾತಿ ಮೀಸಲು ಲೋಕಸಭೆ ಮತಕ್ಷೇತ್ರಕ್ಕೆ ಸ್ಪರ್ಧಿಸಿರುವ ಅಭ್ಯರ್ಥಿಗಳ ಲೆಕ್ಕಪತ್ರವನ್ನು ಜನಪ್ರತಿನಿಧಿಗಳ ಕಾಯ್ದೆ 1951 ರ ಕಲಂ 77(1)ರ ಪ್ರಕಾರ ವೆಚ್ಚ ವೀಕ್ಷಕರು ತಪಾಸಣೆ ನಡೆಸಲಿದ್ದಾರೆ. ಏಪ್ರೀಲ್ 26ರಂದು ಮೊದಲ ಮತ್ತು ಮೇ 1ರಂದು 2ನೇ ಹಾಗೂ ಮೇ 5 ರಂದು ಬೆಳಿಗ್ಗೆ 11 ಗಂಟೆಯಿಂದ 3ನೇ ತಪಾಸಣೆ ಮಾಡಲಾಗುತ್ತಿದೆ. ಈ ನಿಗದಿತ ದಿನಗಳಂದು ಅಭ್ಯರ್ಥಿಗಳು ತಮ್ಮ ಚುನಾವಣೆ ಏಜೆಂಟರುಗಳ ಮೂಲಕ ಬಿಳಿ ಬಣ್ಣದ ದೈನಂದಿನ ಖರ್ಚು ವೆಚ್ಚಗಳ ಪುಸ್ತಕ ಭಾಗ-ಎ, ಗುಲಾಬಿ ಬಣ್ಣದ ನಗದು […]
ದೇಶದ ಸುರಕ್ಷತೆ, ಅಭಿವೃದ್ಧಿಗಾಗಿ ಮೋದಿಯನ್ನು ಮತ್ತೋಮ್ಮೆ ಪ್ರಧಾನಿ ಮಾಡೋಣ- ಸಂಸದ ರಮೇಶ ಜಿಗಜಿಣಗಿ
ವಿಜಯಪುರ: ಪ್ರಧಾನಿ ನರೇಂದ್ರ ಮೋದಿ ಅವರಿಂದ ದೇಶ ಸುರಕ್ಷಿತವಾಗಿದೆ. ಎಲ್ಲಾ ಕ್ಷೇತ್ರಗಳಲ್ಲಿಯೂ ಅಭಿವೃದ್ಧಿ ಆಗುತ್ತಿದೆ. ಅವರನ್ನು ಮತ್ತೊಮ್ಮೆ ಪ್ರಧಾನಿಯಾಗಿ ತಮ್ಮ ಸೇವೆ ಮಾಡಲು ಬೆಂಬಲಿಸಬೇಕು ಎಂದು ಸಂಸದ ರಮೇಶ ಜಿಗಜಿಣಗಿ ಮನವಿ ಮಾಡಿದರು. ವಿಜಯಪುರ ನಗರ ಮತಕ್ಷೇತ್ರ ವ್ಯಾಪ್ತಿಯ ವಾರ್ಡ 26ರ ವ್ಯಾಪ್ತಿಯ ದಿವಟಗೇರಿ ಗಲ್ಲಿಯಲ್ಲಿ ಬಿಜೆಪಿ ನಗರ ಮಂಡಲ ವತಿಯಿಂದ ವಿಜಯಪುರ ಲೋಕಸಭೆ ಮತಕ್ಷೇತ್ರದ ಬಿಜೆಪಿ ಅಭ್ಯರ್ಥಿ ರಮೇಶ ಜಿಗಜಿಣಗಿ ಅವರ ಪ್ರಚಾರದ ಅಂಗವಾಗಿ ಆಯೋಜಿಸಲಾಗಿದ್ದ ಬಾವುರಾವ ದೇಶಪಾಂಡೆ ಮಹಾಶಕ್ತಿ ಕೇಂದ್ರದ ಸಭೆಯಲ್ಲಿ ಅವರು ಮಾತನಾಡಿದರು. […]
ಇಂಚಗೇರಿ ಮಠಕ್ಕೆ ತೆರಳಿ ಆಶೀರ್ವಾದ ಪಡೆದ ಕಾಂಗ್ರೆಸ್ ಅಭ್ಯರ್ಥಿ ಪ್ರೊ. ರಾಜು ಆಲಗೂರ
ವಿಜಯಪುರ: ಕಾಂಗ್ರೆಸ್ ಅಭ್ಯರ್ಥಿ ಪ್ರೊ. ರಾಜು ಆಲಗೂರ ಅವರು ವಿಜಯಪುರ ಜಿಲ್ಲೆಯ ಚಡಚಣ ತಾಲೂಕಿನ ಸುಕ್ಷೇತ್ರ ಇಂಚಗೇರಿ ಮಠಕ್ಕೆ ಭೇಟಿ ನೀಡಿ ಶ್ರೀ ರೇವಣಸಿದ್ದೇಶ್ವರ ಮಹಾರಾಜರ ಆಶೀರ್ವಾದ ಪಡೆದರು. ಈ ಸಂದರ್ಭದಲ್ಲಿ ಪ್ರೊ. ರಾಜು ಆಲಗೂರ ಅವರಿಗೆ ಆಶೀರ್ವದಿಸಿದ ಶ್ರೀಗಳು, ನಿಮಗೆ ಒಳ್ಳೆಯದಾಗುತ್ತದೆ ಎಂದು ಹೇಳಿದರು. ಈ ಸಂದರ್ಭದಲ್ಲಿ ಕಾಂಗ್ರೆಸ್ ಹಿರಿಯ ಮುಖಂಡ ಡಿ.ಎಲ್. ಚವ್ಹಾಣ, ಜಿ. ಪಂ. ಮಾಜಿ ಸದಸ್ಯ ಕಾಳು ಬೆಳ್ಳುಂಡಗಿ, ಮುಖಂಡರಾದ ಅಶೋಕ ಬೆಳ್ಳುಂಡಗಿ, ಮಲ್ಲಣ್ಣ ಸಕ್ರಿ(ಸಾಲಿ), ಕೆ. ಎಂ. ಅರವತ್ತಿ, ರೇವಣಸಿದ್ದ […]
ಕಾಂಗ್ರೆಸ್ ಅಭ್ಯರ್ಥಿಯಾಗಿ ಮೂರನೇ ಬಾರಿಗೆ ನಾಮಪತ್ರ ಸಲ್ಲಿಸಿದ ಪ್ರೊ. ರಾಜು ಆಲಗೂರ
ವಿಜಯಪುರ: ಕಾಂಗ್ರೆಸ್ ಅಭ್ಯರ್ಥಿಯಾಗಿ ಪ್ರೊ. ರಾಜು ಆಲಗೂರ ಅವರು ಮೂರನೇ ಬಾರಿಗೆ ನಾಮಪತ್ರ ಸಲ್ಲಿಸಿದ್ದಾರೆ. ಜಿಲ್ಲಾಧಿಕಾರಿ ಕಚೇರಿಗೆ ತೆರಳಿದ ಅವರು ಚುನಾವಣಾಧಿಕಾರಿ ಟಿ. ಭೂಬಾಲನ್ ಅವರಿಗೆ ತಮ್ಮ ನಾಮಪತ್ರ ಸಲ್ಲಿಸಿದರು. ಈ ಸಂದರ್ಭದಲ್ಲಿ ವಿಧಾನ ಪರಿಷತ ಶಾಸಕ ಪ್ರಕಾಶ ರಾಠೋಡ, ಕಾಂಗ್ರೆಸ್ ಜಿಲ್ಲಾಧ್ಯಕ್ಷ ಮಲ್ಲಿಕಾರ್ಜುನ ಲೋಣಿ, ಹಿರಿಯ ಮುಖಂಡ ಡಿ. ಎಲ್. ಚವ್ಹಾಣ ಹಾಗೂ ನಿಂಗಪ್ಪ ಪೂಜಾರಿ ಉಪಸ್ಥಿತರಿದ್ದರು.
ಮನರೇಗಾ ಕಾರ್ಮಿಕರಿಗೆ ಮತದಾನ ಜಾಗೃತಿ ಮೂಡಿಸಿದ ಜಿ.ಪಂ. ಸಿಇಓ ರಿಷಿ ಆನಂದ
ವಿಜಯಪುರ: ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಮತದಾನದ ದಿನ ಕಡ್ಡಾಯವಾಗಿ ಮತಗಟ್ಟೆಗಳಿಗೆ ಬಂದು ಎಲ್ಲರೂ ಮತದಾನ ಮಾಡಿ, ಮತದಾನವನ್ನು ನಿಮಗಾಗಿ, ನಿಮ್ಮ ಭವಿಷ್ಯಕ್ಕಾಗಿ, ನಮ್ಮ ಸಮಾಜಕ್ಕಾಗಿ ಮತ್ತು ನಮ್ಮ ದೇಶಕ್ಕಾಗಿ ಮತದಾನ ಮಾಡಿ ಚುನಾವಣೆ ಪ್ರಕ್ರಿಯೆಯನ್ನು ಯಶಸ್ವಿಗೊಳಿಸಬೇಕು ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯ ನಿರ್ವಾಹಣಾಧಿಕಾರಿ ರಿಶಿ ಆನಂದ ಹೇಳಿದರು. ವಿಜಯಪುರ ತಾಲೂಕಿನ ನಾಗಠಾಣ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮಹಾತ್ಮ ಗಾಂಧಿ ನರೇಗಾ ಯೋಜನೆಯಡಿ ಕೆರೆ ಹೂಳೆತ್ತುವ ಕಾಮಗಾರಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿ ನರೇಗಾ ಕಾರ್ಮಿಕರಿಗೆ ಮತದಾನ […]