ಜಿಲ್ಲೆಯಲ್ಲಿ ದಲಿತರ ಹೆಸರಿನಲ್ಲಿ ಅನಗತ್ಯವಾಗಿ ಜನರನ್ನು ಎತ್ತಿ ಕಟ್ಟಿದ ಆರೋಪ- ನಾನಾ ಸಂಘಟನೆಗಳ ಸಭೆಯಲ್ಲಿ ಕೈಗೊಂಡ ನಿರ್ಣಯಗಳೇನು ಗೊತ್ತಾ?
ವಿಜಯಪುರ: ಬಸವ ನಾಡು ವಿಜಯಪುರ ಜಿಲ್ಲೆಯಲ್ಲಿ ಕೆಲವು ಸಂಘಟನೆಯವರು ದಲಿತರ ಹೆಸರಿನಲ್ಲಿ ಅನಗತ್ಯವಾಗಿ ಕೆಲವರನ್ನು ಎತ್ತಿ ಕಟ್ಟಿ ಸುಳ್ಳು ಪ್ರಕರಣ ದಾಖಲಿಸುವುದು, ಬೆದರಿಗೆ ಹಾಕುವುದು, ತೇಜೋವಧೆ ಮಾಡುವುದು ಇತ್ಯಾದಿ ಕಿರುಕುಳ ಗುರಿತು ಸಮಾಲೋಚನೆ ಸಭೆ ವಿಜಯಪುರ ನಗರದ ರಾಣಿ ಚೆನ್ನಮ್ಮ ಸಮುದಾಯ ಭವನದಲ್ಲಿ ನಡೆಯಿತು. ಈ ಸಭೆಯ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಣ್ಣ ಕೈಗಾರಿಕೆಗಳ ಸಂಘದ ವಿಜಯಪುರ ಜಿಲ್ಲಾಧ್ಯಕ್ಷ ಮತ್ತು ವಿಜಯಪುರ ಜಿಲ್ಲಾ ಕಾಂಗ್ರೆಸ್ ಸೇವಾದಳ ಅಧ್ಯಕ್ಷ ಡಾ. ಗಂಗಾಧರ ಸಂಬಣ್ಣಿ, ನ್ಯಾಯವಾದಿ ಮತ್ತು ಗಡಿ ಅಭಿವೃದ್ಧಿ […]
ಮೇಕೆದಾಟು ವಿಚಾರ: ಸರಣಿ ಟ್ವೀಟ್ ಗಳ ಮೂಲಕ ವಾಗ್ದಾಳಿ ನಡೆಸಿದ ಮಾಜಿ ಸಚಿವ ಎಂ. ಬಿ. ಪಾಟೀಲ
ವಿಜಯಪುರ: ಮೇಕೆದಾಟು ಪಾದಯಾತ್ರೆ ವಿಚಾರದ ಕುರಿತು ದಿನಪತ್ರಿಕೆಗಳಲ್ಲಿ ಪ್ರಕಟವಾದ ಜಾಹಿರಾತು ಮತ್ತು ಜಲಸಂಪನ್ಮೂಲ ಸಚಿವ ಗೋವಿಂದ ಕಾರಜೋಳ ಹೇಳಿಕೆಗಳ ವಿರುದ್ಧ ಜಲಸಂಪನ್ಮೂಲ ಖಾತೆ ಮಾಜಿ ಸಚಿವ ಎಂ. ಬಿ. ಪಾಟೀಲ ವಾಗ್ದಾಳಿ ನಡೆಸಿದ್ದಾರೆ. ದಿನಪತ್ರಿಕೆಗಳಲ್ಲಿ ಪಾದಯಾತ್ರೆ ಕುರಿತು ಪ್ರಕಟವಾಗಿರುವ ಜಾಹಿರಾತುಗಳ ಬಗ್ಗೆ ಆಕ್ರೋಶ ವ್ಯಕ್ತಪಡಿಸಿರುವ ಅವರು, ಸರಣಿ ಟ್ವೀಟ್ ಮಾಡುವ ಮೂಲಕ ಪಾದಯಾತ್ರೆ ಟೀಕಿಸುತ್ತಿರುವವರಿಗೆ ಪ್ರತ್ಯುತ್ತರ ನೀಡಿದ್ದಾರೆ. ರಾಜ್ಯದ ಹಿತಕ್ಕಾಗಿ ಕಾವೇರಿ-ಮೇಕೆದಾಟು ವಿಚಾರದಲ್ಲಿ ನಡೆದ ಕಾನೂನಾತ್ಮಕ ಹೋರಾಟದಲ್ಲಿ ನನ್ನ ಸ್ವಂತ ಆಸ್ತಿ ರೀತಿಯಲ್ಲಿ ಹಗಲು-ರಾತ್ರಿ ಹೋರಾಡಿದ್ದೇನೆ. ರಾಜ್ಯದ […]
ಮೇಕೆದಾಟು ಪಾದಯಾತ್ರೆ: ಕಾಂಗ್ರೆಸ್ ವಿರುದ್ಧ ಜಲಸಂಪನ್ಮೂಲ ಸಚಿವ ಗೋವಿಂದ ಕಾರಜೋಳ ಆರೋಪ-ಕ್ಷಮೆ ಕೇಳಿ ಎಂದ ವಿಜುಗೌಡ ಪಾಟೀಲ
ಬಾಗಲಕೋಟೆ/ವಿಜಯಪುರ: ಮೇಕೆದಾಟು ಯೋಜನೆ ಅನುಷ್ಠಾನ ವಿಚಾರ ಕುರಿತು ಜಲಸಂಪನ್ಮೂಲ ಸಚಿವ ಗೋವಿಂದ ಕಾರಜೋಳ ಮತ್ತೆ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಬಾಗಲಕೋಟೆಯಲ್ಲಿ ಮಾತನಾಡಿದ ಅವರು, ಮೇಕೆದಾಟು ಯೋಜನೆ ವಿಚಾರದಲ್ಲಿ ಕಾಂಗ್ರೆಸ್ ಏನೇನು ಮಾಡಿದೆ ಎನ್ನುವ ದಾಖಲೆ ನೀಡಿದ್ದೇನೆ. ಇವರ ಪಾದಯಾತ್ರೆ ಬಗ್ಗೆ ಮತ್ತೆ ಪೂರಕ ದಾಖಲಾತಿ ನೀಡುವೆ. ಮೇಕೆದಾಟು ಯೋಜನೆಯಲ್ಲಿ ಕಾಂಗ್ರೆಸ್ ಸರಕಾರ ಏನೇನು ಮಾಡಿದೆ ಎಂಬುದರ ಕುರಿತು ಇನ್ನೂ ದಾಖಲೆಗಳಿವೆ. ನನ್ನ ಬಳಿ ಇರುವ ದಾಖಲೆಗಳನ್ನ ಯಾವುದು ಎಂದು ಹೇಳಬೇಕು ಅನಿಸುತ್ತೆ ಅದನ್ನು ಅಂದು ಬಿಡುಗಡೆ […]
ಬಿಜೆಪಿ ರಾಜ್ಯ ರೈತ ಮೋರ್ಚಾಗೆ ರವಿಕಾಂತ ಬಗಲಿ ನೇಮಕ
ವಿಜಯಪುರ: ವಿಜಯಪುರ ನಗರಸಭೆಯ ಮಾಜಿ ಸದಸ್ಯ, ರವಿಕಾಂತ ಬಗಲಿ ಅವರನ್ನು ಬಿಜೆಪಿ ರೈತ ಮೋರ್ಚಾ ರಾಜ್ಯ ಕಾರ್ಯದರ್ಶಿಯನ್ನಾಗಿ ನೇಮಕ ಮಾಡಲಾಗಿದೆ. ಬಿಜೆಪಿ ಜಿಲ್ಲಾ ಮಾಜಿ ಪ್ರಧಾನ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸಿರುವ ಅವರನ್ನು ಈಗ ರೈತ ಮೋರ್ಚಾಗೆ ನೇಮಕ ಮಾಡಲಾಗಿದೆ. ರಾಜ್ಯಸಭೆ ಸದಸ್ಯ ಮತ್ತು ಬಿಜೆಪಿ ರೈತ ಮೋರ್ಚಾ ರಾಜ್ಯಾಧ್ಯಕ್ಷ ಈರಣ್ಣ ಕಡಾಡಿ ಈ ನೇಮಕ ಮಾಡಿದ್ದಾರೆ. ಬಿಜೆಪಿಯಲ್ಲಿ ತಮಗೆ ಹೊಸ ಜವಾಬ್ದಾರಿ ನೀಡಿರುವುದಕ್ಕೆ ರವಿಕಾಂತ ಸಿದ್ದಪ್ಪ ಬಗಲಿ ಸಂತಸ ವ್ಯಕ್ತಪಡಿಸಿದ್ದಾರೆ. ಅಲ್ಲದೇ, ಈರಣ್ಣ ಕಡಾಡಿ ಹಾಗೂ ಬಿಜೆಪಿ […]
ಪ್ರಧಾನಿ ನರೇಂದ್ರ ಮೋದಿ ಆಯುರಾರೋಗ್ಯಕ್ಕಾಗಿ ಪ್ರಾರ್ಥಿಸಿ ಬಸವ ನಾಡಿನಲ್ಲಿ ಬಿಜೆಪಿಯಿಂದ ವಿಶೇಷ ಪೂಜೆ
ವಿಜಯಪುರ: ಪಂಜಾಬಿನಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಭದ್ರತೆಯಲ್ಲಿ ಉಂಟಾದ ಲೋಪದ ಹಿನ್ನೆಲೆಯಲ್ಲಿ ಮತ್ತು ಪ್ರಧಾನಿಯ ಆರೋಗ್ಯ ಮತ್ತು ಆಯೋಷ್ಯಕ್ಕಾಗಿ ಪ್ರಾರ್ಥಿಸಿ ಬಸವ ನಾಡು ವಿಜಯಪುರದಲ್ಲಿ ಬಿಜೆಪಿ ವತಿಯಿಂದ ವಿಶೇಷ ಪೂಜೆ ಸಲ್ಲಿಸಲಾಯಿತು. ವಿಜಯಪುರ ನಗರದ ಜೋರಾಪುರ ಪೇಟೆಯಲ್ಲಿರುವ ಶ್ರೀ ಶಂಕರಲಿಂಗ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಲಾಯಿತು. ಮಾಜಿ ಸಚಿವ ಅಪ್ಪು ಪಟ್ಟಣಶೆಟ್ಟಿ, ರಾಜ್ಯ ಬೀಜ ಮತ್ತು ಸಾವಯವ ಪ್ರಮಾಣನ ಸಂಸ್ಥೆಯ ಅಧ್ಯಕ್ಷ ವಿಜುಗೌಡ ಪಾಟೀಲ ನೇತೃತ್ವದಲ್ಲಿ ವಿಶೇಷ ಪೂಜೆ ಸಲ್ಲಿಸಲಾಯಿತು. ಬಿಜೆಪಿ ಕಾರ್ಯಕರ್ತರು […]
ಜ. 20ರೊಳಗೆ ಸಚಿವ ಸಂಪುಟ ವಿಸ್ತರಣೆ- ಎಲ್ಲ ಜಿಲ್ಲೆಗಳಿಗೂ ಪ್ರಾತಿನಿಧ್ಯದ ವಿಶ್ವಾಸವಿದೆ- ಮೇಕೆದಾಟು ವಿಚಾರದಲ್ಲಿ ಕೈ ನಾಯಕರು ಸಿನೇಮಾ ಶೂಟಿಂಗ್ ಗೆ ಹೊರಟಂತಿದೆ- ಯತ್ನಾಳ
ವಿಜಯಪುರ: ಜ. 14 ರ ನಂತರ ಸಚಿವ ಸಂಪುಟದಲ್ಲಿ ಬದಲಾವಣೆ ಆಗಲಿದೆ. ಈಗಾಗಲೇ ಈ ಕುರಿತು ಹೇಳಿದ್ದೇನೆ. ಜ. 20 ರೊಳಗಾಗಿ ಎಲ್ಲಾ ಜಿಲ್ಲೆಗಳಿಗೂ ಪ್ರಾತಿನಿಧ್ಯ ಕೊಡುವ ಕೆಲಸವನ್ನು ಬಿಜೆಪಿ ಹೈಕಮಾಂಡ್ ಮಾಡಲಿದೆ ಎಂದು ವಿಜಯಪುರ ನಗರ ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳ ಹೇಳಿದ್ದಾರೆ. ವಿಜಯಪುರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಹೆಚ್ಚು ಕ್ರಿಯಾಶೀಲ ಆಗಿರುವವರನ್ನು ಸಚಿವರನ್ನಾಗಿ ಮಾಡಬೇಕು. ಜ. 8 ಹಾಗೂ 9 ರಂದು ನಡೆಯುವ ಪಕ್ಷದ ಚಿಂತನಾ ಬೈಠಕ್ ನಡೆಯಲಿದೆ. ಅಲ್ಲಿ ಈ […]
ಹೊಸ ವರ್ಷ ಹಿನ್ನೆಲೆ- ಹಾಲಿ, ಮಾಜಿ ಸಿಎಂ ಭೇಟಿ ಮಾಡಿ ಶುಭ ಕೋರಿದ ಜಲಸಂಪನ್ಮೂಲ ಸಚಿವ ಗೋವಿಂದ ಕಾರಜೋಳ
ಬೆಂಗಳೂರು: ಹೊಸ ವರ್ಷ ಹಿನ್ನೆಲೆಯಲ್ಲಿ ಜಲಸಂಪನ್ಮೂಲ ಸಚಿವ ಗೋವಿಂದ ಕಾರಜೋಳ ಅವರು ಮಾಜಿ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಅವರನ್ನು ಭೇಟಿ ಮಾಡಿ ಶುಭಾಷಯ ಕೋರಿದರು. ಈ ಸಂದರ್ಭದಲ್ಲಿ ಯಡಿಯೂರಪ್ಪ ಅವರ ನಿವಾಸದಲ್ಲಿ ಉಪಹಾರ ಸೇವಿಸಿದರು. ಸಿಎಂ ಬಸವರಾಜ ಬೊಮ್ಮಾಯಿ, ಸಚಿವರ ಡಾ. ಸಿ. ಎನ್. ಅಶ್ವತ್ಥ ನಾರಾಯಣ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು. ಬಳಿಕ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಭೇಟಿ ಮಾಡಿದ ಗೋವಿಂದ ಕಾರಜೋಳ ಸಿಎಂಗೆ ಹೊಸ ವರ್ಷದ ಶುಭಾಷಯ ಕೋರಿದರು. ನಂತರ ಸಿಎಂ […]
ಹೊಸ ವರ್ಷ ಹಿನ್ನೆಲೆ- ದೇವಸ್ಥಾನಕ್ಕೆ ತೆರಳಿ ಆಶೀರ್ವಾದ, ಮಾಜಿ ಸಿಎಂ ಭೇಟಿ ಮಾಡಿ ಶುಭ ಕೋರಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ
ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಹೊಸ ವರ್ಷದ ಅಂಗವಾಗಿ ಬೆಂಗಳೂರಿನಲ್ಲಿರುವ ವೈಯಾಲಿಕಾವಲ್ ಬಡಾವಣೆಯಲ್ಲಿರುವ ಟಿಟಿಡಿ ದೇವಸ್ಥಾನಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು. ಈ ಸಂದರ್ಭದಲ್ಲಿ ದೇವಸ್ಥಾನದಲ್ಲಿರುವ ಅರ್ಚಕರು ವಿಶೇಷ ಪೂಜೆ ಮಾಡಿ ಆಶೀರ್ವದಿಸಿದರು. ಈ ಸಂದರ್ಭದಲ್ಲಿ ಸಚಿವ ಮುನಿರತ್ನ ಟಿಟಿಡಿ ನಿರ್ದೇಶಕ ಶಶಿಧರ ಉಪಸ್ಥಿತರಿದ್ದರು. ಬಳಿಕ ಮಾಜಿ ಸಿಎಂ ಬಿ. ಎಸ್. ಯಡಿಯೂರಪ್ಪ ಅವರ ಬಳಿಗೆ ತೆರಳಿದ ಬಸವರಾಜ ಬೊಮ್ಮಾಯಿ, ನೂತನ ವರ್ಷದ ಅಂಗವಾಗಿ ಶುಭ ಕೋರಿದರು.
ಸ್ಥಳೀಯ ಸಂಸ್ಥೆಗಳ ಚುನಾವಣೆ: ಬಿಜೆಪಿ ಜನವಿರೋಧಿ ಆಡಳಿತಕ್ಕೆ ಮತದಾರರು ತಕ್ಕ ಉತ್ತರ ನೀಡಿದ್ದಾರೆ- ಸಂಗಮೇಶ ಬಬಲೇಶ್ವರ
ವಿಜಯಪುರ: ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ರಾಜ್ಯಾದ್ಯಂತ ಕಾಂಗ್ರೆಸ್ ಅಭ್ಯರ್ಥಿಗಳನ್ನು ಅತಿ ಹೆಚ್ಚಿನ ಸಂಖ್ಯೆಯಲ್ಲಿ ಗೆಲ್ಲಿಸುವುದರ ಮೂಲಕ ಮತದಾರರು ಬಿಜೆಪಿಯ ಜನವಿರೋಧಿ ಆಡಳಿತಕ್ಕೆ ಜನ ತಕ್ಕ ಉತ್ತರ ನೀಡಿದ್ದಾರೆ ಎಂದು ಕಾಂಗ್ರೆಸ್ ಮುಖಂಡ ಸಂಗಮೇಶ ಬಬಲೇಶ್ವರ ಹೇಳಿದ್ದಾರೆ. ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ಅವರು, ಎಲ್ಲ ವಸ್ತುಗಳ ಬೆಲೆ ಗಗನಕ್ಕೇರಿದೆ. ಶ್ರೀಸಾಮಾನ್ಯರು ಬದುಕುವುದು ಕಷ್ಟವಾಗಿದೆ. ರೈತ ಬೆಳೆದ ಬೆಳೆಗೆ ಸೂಕ್ತ ಬೆಲೆ ದೊರೆಯುತ್ತಿಲ್ಲ. ಇಂಥ ಮಾನವೀಯ ಸಂವೇದನೆಯನ್ನೇ ಕಳೆದುಕೊಂಡಿರುವವರು ಅಧಿಕಾರದಲ್ಲಿ ಮುಂದುವರಿಯಬಾರದು ಎಂದು ಜನ ತೀರ್ಮಾನಿಸಿದ್ದಾರೆ ಎಂದು […]
ಕಾಂಗ್ರೆಸ್ ದೇಶದ ಸರ್ವ ಜನರ ಮನದಲ್ಲಿ ಬೇರೂರಿದೆ- ಪ್ರೊ. ರಾಜು ಆಲಗೂರ
ವಿಜಯಪುರ: ಕಾಂಗ್ರೆಸ್ ದೇಶದ ದುಡಿಯುವ ವರ್ಗಗಳ, ನಿಜವಾದ ದೇಶ ಭಕ್ತರ, ಪ್ರಜಾಪ್ರಭುತ್ವವಾದಿ ಹೋರಾಟಗಾರರು, ವೀರ ಯೋಧರು, ವಿದ್ಯಾರ್ಥಿಗಳು, ಯುವಜನರ ಹೃದಯದಲ್ಲಿ ಬೇರೂರಿದೆ ಎಂದು ವಿಜಯಪುರ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಪ್ರೊ. ರಾಜು ಆಲಗೂರ ಹೇಳಿದ್ದಾರೆ. ವಿಜಯಪುರದಲ್ಲಿ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ನಡೆದ 137ನೇ ಕಾಂಗ್ರೆಸ್ ಸಂಸ್ಥಾಪನಾ ದಿನಾಚರಣೆಯಲ್ಲಿ ಮಾತನಾಡಿದರು. ರಾಷ್ಟ್ರಪಿತ ಮಹಾತ್ಮಾ ಗಾಂಧಿ ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿದ ಅವರು, ಸ್ವಾತಂತ್ರ್ಯ ಹೋರಾಟದಲ್ಲಿ ಬ್ರಿಟೀಷರ ವಿರುದ್ಧ ಹೋರಾಟ ಮಾಡಿದ ಫಕ್ಷ ಕಾಂಗ್ರೆಸ್. ಇದು ಬಿಜೆಪಿಗೆ ಗೊತ್ತಿರಲಿ ಎಂದು ಅವರು […]