ಬೆಳಗಾವಿಯಲ್ಲಿ ಸಂಗೊಳ್ಳಿ ರಾಯಣ್ಣ ಪ್ರತಿಮೆ ಸ್ಥಳಕ್ಕೆ ಭೇಟಿ ನೀಡಿದ ಸಚಿವ ಕೆ. ಎಸ್. ಈಶ್ವರಪ್ಪ
ಬೆಳಗಾವಿ: ಬೆಳಗಾವಿಯ ಅನಗೋಳದ ಕನಕದಾಸ ಕಾಲೋನಿಯಲ್ಲಿನ ರಾಯಣ್ಣ ಮೂರ್ತಿ ಸ್ಥಳಕ್ಕೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯಿತಿ ರಾಜ್ ಸಚಿವ ಕೆ. ಎಸ್. ಈಶ್ವರಪ್ಪ ಭೇಟಿ ನೀಡಿ ಸಂಗೊಳ್ಳಿ ರಾಯಣ್ಣ ಪ್ರತಿಮೆ ಗೆ ನಮಸ್ಕರಿಸಿ, ಮಾಲಾರ್ಪಣೆ ಮಾಡಿದರು. ಈ ಸಂದರ್ಭದಲ್ಲಿ ಸಚಿವ ಕುರಿಬ ಸಮುದಾಯದ ಮುಖಂಡರು ಸಚಿವ ಕೆ. ಎಸ್. ಈಶ್ವರಪ್ಪ ಜೊತೆಗಿದ್ದರು. ಬಳಿಕ ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಸಚಿವರು, ಬೆಳಗಾವಿ ಪ್ರಕರಣಗಳ ಕುರಿತು ಕಾಂಗ್ರೆಸ್ ನಲ್ಲೇ ಎರಡು ಧ್ವನಿ ಇದೆ. ಸದನದಲ್ಲಿ ಎಂಇಎಸ್ ಬ್ಯಾನ್ ಮಾಡಬೇಕು ಎಂದು […]
ಸೇನೆಯಲ್ಲಿಯೂ ನನ್ನ ಅಭಿಮಾನಿಗಳಿದ್ದಾರೆ- ನನಗೆ ಗೃಹ ಖಾತೆ ಕೊಟ್ಟು ನೋಡಿ ಎಂದು ಸಿಎಂ ಗೆ ಹೇಳಿದ್ದೆ- ಶಾಸಕ ಯತ್ನಾಳ
ವಿಜಯಪುರ: ಭಾರತೀಯ ಸೇನೆಯಲ್ಲಿಯೂ ನನ್ನ ಅಭಿಮಾನಿಗಳಿದ್ದಾರೆ. ನನ್ನ ಭಾಷಣ ಕೇಳುತ್ತಾರೆ. ಮಾತನಾಡಿದರೆ ನಿಮ್ಮಂತೆ ಗಂಡಸರ ರೀತಿ ಮಾತನಾಡಬೇಕು ಎಂದು ಯೋಧರು ಹೇಳುತ್ತಾರೆ ಎಂದು ವಿಜಯಪುರ ನಗರ ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳ ಹೇಳಿದ್ದಾರೆ. ವಿಜಯಪುರದಲ್ಲಿ ವಿಜಯವಾಣಿ-ದಿಗ್ವಿಜಯ ವಾಹಿನಿ ಆಯೋಜಿಸಿದ್ದ 1971ರ ಭಾರತ ಪಾಕಿಸ್ತಾನ ಯುದ್ಧ ಸುವರ್ಣ ವರ್ಷ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ನನ್ನ ಭಾಷಣ ಕೇಳಿ ಸೈನಿಕರು ಖುಷಿಯಾಗಿದ್ದಾರೆ. ಇದು ನನಗೆ ಖುಷಿ ತಂದಿದೆ. ಮೊನ್ನೆ ಗೃಹ ಖಾತೆ ನೀಡುವಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ […]
ವಿಜಯಪುರ ಜಿಲ್ಲಾ ಕಾಂಗ್ರೆಸ್ ಸಮಿತಿ ನೂತನ ಪದಾಧಿಕಾರಿಗಳ ಪದಗ್ರಹಣ
ವಿಜಯಪುರ: ವಿಜಯಪುರ ಜಿಲ್ಲಾ ಕಾಂಗ್ರೆಸ್ ಸಮಿತಿ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭ ವಿಜಯಪುರದಲ್ಲಿ ನಡೆಯಿತು. ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಜಿಲ್ಲಾಧ್ಯಕ್ಷ ಮತ್ತು ಮಾಜಿ ಶಾಸಕ ಪ್ರೊ. ರಾಜು ಆಲಗೂರ ನಾನಾ ಘಟಕಗಳ ನೂತನ ಪದಾಧಿಕಾರಿಗಳಿಗೆ ನೇಮಕಾತಿ ಆದೇಶ ಪತ್ರ ನೀಡಿದರು. ಈ ಸಂದರ್ಭದಲ್ಲಿ ಮಾತನಾಡಿದ ಪ್ರೊ. ರಾಜು ಆಲಗೂರ, ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರ ನಿರ್ದೇಶನದಂತೆ ಕೆಪಿಸಿಸಿ ಅಧ್ಯಕ್ಷ ಡಿ. ಕೆ. ಶಿವಕುಮಾರ ಅವರು ನೂತನ ಪದಾಧಿಕಾರಿಗಳ ಪಟ್ಟಿಗೆ ಅನುಮೋದನೆ ನೀಡಿದ್ದಾರೆ […]
ಸಂಜೆ ಗೆಲುವು, ತಡರಾತ್ರಿ ವಿಜಯದ ಸರ್ಟಿಫಿಕೇಟ್ ಪಡೆದ ಪಿ. ಎಚ್ ಪೂಜಾರ
ವಿಜಯಪುರ: ವಿಜಯಪುರ ಮತ್ತು ಬಾಗಲಕೋಟೆ ಸ್ಥಳೀಯ ಸಂಸ್ಥೆಗಳಿಂದ ವಿಧಾನ ಪರಿಷತ್ತಿನ ದ್ವಿಸದಸ್ಯ ಸ್ಥಾನಗಳಿಗೆ ನಡೆದ ಚುನಾವಣೆಯಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿ ತಲಾ ಒಂದು ಸ್ಥಾನಗಳನ್ನು ಗಳಿಸಿವೆ. ಕಾಂಗ್ರೆಸ್ ಅಭ್ಯರ್ಥಿ ಸುನೀಲಗೌಡ ಪಾಟೀಲ ಮೊದಲ ಸುತ್ತಿನಲ್ಲಿಯೇ ನಿಗದಿಗಿಂತ ಅತ್ಯಧಿಕ ಪ್ರಥಮ ಪ್ರಾಶಸ್ತ್ಯದ ಮತಗಳನ್ನು ಪಡೆಯುವ ಮೂಲಕ ಗೆಲುವಿನ ನಗೆ ಬೀರಿದರು. ಆದರೆ ಬಿಜೆಪಿ ಅಭ್ಯರ್ಥಿ ಮತ್ತು ಮಾಜಿ ಶಾಸಕ ಪಿ. ಎಚ್. ಪೂಜಾರ ಗೆಲುವಿಗಾಗಿ ಬಹಳಷ್ಟು ಸಮಯ ಕಾಯಬೇಕಾಯಿತು. ಪ್ರಥಮ ಸುತ್ತಿನಲ್ಲಿ ಮಿಗದಿತ ಗುರಿ ತಲುಪದ ಅವರು, ದ್ವಿತೀಯ […]
ಗೆದ್ದರೂ ಸರ್ಟಿಫಿಕೇಟ್ ಗಾಗಿ ಕಾದು ಸುಸ್ತಾದ ಅಭ್ಯರ್ಥಿಗಳು- ಕಾರಣವೇನು ಗೊತ್ತಾ?
ವಿಜಯಪುರ: ವಿಜಯಪುರ ಮತ್ತು ಬಾಗಲಕೋಟೆ ಸ್ಥಳೀಯ ಸಂಸ್ಥೆಗಳಿಂದ ವಿಧಾನ ಪರಿಷತ್ತಿನ ದ್ವಿಸದಸ್ಯ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿ ಅಭ್ಯರ್ಥಿಗಳು ಗೆಲುವು ಸಾಧಿಸಿದ್ದಾರೆ. ಆದರೆ, ಉಭಯ ಅಭ್ಯರ್ಥಿಗಳು ಗೆಲುವಿನ ಸರ್ಟಿಪಿಕೇಟ್ ಗಾಗಿ ತಡರಾತ್ರಿವರೆಗೆ ಕಾಯ್ದ ಘಟನೆ ವಿಜಯಪುರದಲ್ಲಿ ನಡೆದಿದೆ. ವಿಜಯಪುರ ನಗರದಲ್ಲಿರುವ ವಿ. ಭ. ದರವಾರ ಹೈಸ್ಕೂಲ್ ಮತ ಎಣಿಕೆ ಕೇಂದ್ರದಲ್ಲಿ ಈ ಅಭ್ಯರ್ಥಿಗಳು ಮತ್ತು ಅವರ ಬೆಂಬಲಿಗರು ಕಾದು ಕಾದು ಸುಸ್ತಾದ ಘಟನೆ ನಡೆಯಿತು. ನೀಲಗೌಡ ಪಾಟೀಲ(ಕಾಂಗ್ರೆಸ್) ಮತ್ತು ಪಿ. ಎಚ್. ಪೂಜಾರ(ಬಿಜೆಪಿ) ಗೆಲುವು […]
ವಿಪ ಚುನಾವಣೆ: 4000 ಮತಗಳನ್ನು ಪಡೆದು ಗೆಲ್ಲುವೆ- ಮಲ್ಲಿಕಾರ್ಜುನ ಲೋಣಿ
ವಿಜಯಪುರ : ವಿಧಾನ ಪರಿಷತ ಚುನಾವಣೆಯಲ್ಲಿ 4000 ಪ್ರಥಮ ಪ್ರಾಶಸ್ತ್ಯದ ಮತಗಳನ್ನು ಪಡೆದು ಗೆಲ್ಲುವುದಾಗಿ ಪಕ್ಷೇತರ ಅಭ್ಯರ್ಥಿ ಮಲ್ಲಿಕಾರ್ಜುನ ಲೋಣಿ ವಿಶ್ಬಾಸ ವ್ಯಕ್ತಪಡಿಸಿದ್ದಾರೆ. ವಿಜಯಪುರದಲ್ಲಿ ವಿ. ಭ. ದರಬಾರ ಹೈಸ್ಕೂಲ್ ಮತ ಎಣಿಕೆ ಕೇಂದ್ರದಲ್ಲಿ ಮಾಧ್ಯಮ ಪ್ರತಿನಿಧಿಗಳ ಜೊತೆ ಅವರು ಮಾತನಾಡಿದರು. ಈ ಚುನಾವಣೆಯಲ್ಲಿ ಶೇ. 100 ರಷ್ಟು ಗೆಲ್ಲುವ ವಿಶ್ವಾಸವಿದೆ. ಎಲ್ಲ ಮತದಾರರು ಯಾವುದೇ ಆಮಿಷಗಳಿಗೆ ಒಳಗಾಗದೆ ನನಗೆ ಮತ ಹಾಕುವ ಮೂಲಕ ತಮ್ಮ ಅಭಿಮಾನವನ್ನು ಉಳಿಸಿಕೊಳ್ಳುತ್ತಾರೆ ಎಂಬ ವಿಶ್ವಾಸವಿದೆ ಎಂದು ಅವರು ತಿಳಿಸಿದರು. ಖಂಡಿತವಾಗಿಯೂ […]
ಕಾಂಗ್ರೆಸ್ ಸದಸ್ಯತ್ವ ಅಭಿಯಾನಕ್ಕೆ ವಿಜಯಪುರ ನಗರದ ವಾರ್ಡ್ ನಂ. 1 ರಲ್ಲಿ ಸಂಗಮೇಶ ಬಬಲೇಶ್ವರ ಚಾಲನೆ
ವಿಜಯಪುರ: ರಾಜ್ಯಾದ್ಯಂತ ಕಾಂಗ್ರೆಸ್ ಸದಸ್ಯತ್ವ ಅಭಿಯಾನ ಆರಂಭವಾಗಿದೆ. ರಾಜ್ಯಾದ್ಯಂತ ಏಕಕಾಲಕ್ಕೆ ನಡೆಯುತ್ತಿರುವ ಈ ಅಭಿಯಾನಕ್ಕೆ ನಾನಾ ಕಡೆಗಳಲ್ಲಿ ಚಾಲನೆ ನೀಡಲಾಗಿದೆ. ವಿಜಯಪುರ ನಗರದ ವಾರ್ಡ್ ಸಂಖ್ಯೆ 1 ರಲ್ಲಿ ಕೆಪಿಸಿಸಿ ಮುಖಂಡ ಸಂಗಮೇಶ ಬಬಲೇಶ್ವರ ಚಾಲನೆ ನೀಡಿ ಮಾತನಾಡಿದರು. ಈ ಸಂದರ್ಭದಲ್ಲಿ ಮಂಜುನಾಥ ನಿಡೋನಿ, ದಾವಲ್ ಮುಂತಾದವರು ಉಪಸ್ಥಿತರಿದ್ದರು.
ಆಲಮಟ್ಟಿಯಲ್ಲಿ 24 ಸದಸ್ಯರಿಂದ ಒಟ್ಟಾಗಿ ಬಂದು ಮತ ಚಲಾವಣೆ
ವಿಜಯಪುರ: ವಿಜಯಪುರ ಮತ್ತು ಬಾಗಲಕೋಟೆ ಸ್ಥಳೀಯ ಸಂಸ್ಥೆಗಳಿಂದ ವಿಧಾನ ಪರಿಷತ್ತಿನ ದ್ವಿಸದಸ್ಯ ಸ್ಥಾನಕ್ಕೆ ನಡೆಯುತ್ತಿರುವ ಚುನಾವಣೆಯಲ್ಲಿ ಗ್ರಾಮ ಪಂಚಾಯಿತಿಗಳಲ್ಲಿ ಸದಸ್ಯರು ಒಟ್ಟಾಗಿ ಬಂದು ತಮ್ಮ ಮತ ಚಲಾಯಿಸಿ ಗಮನ ಸೆಳೆದಿದ್ದಾರೆ. ವಿಜಯಪುರ ಜಿಲ್ಲೆಯ ನಿಡಗುಂದಿ ತಾಲೂಕಿನ ಆಲಮಟ್ಟಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಕೂಡ ಸದಸ್ಯರು ತಮ್ಮ ಒಗ್ಗಟ್ಟು ಪ್ರದರ್ಶಿಸಿದ್ದಾರೆ. ಆಲಮಟ್ಟಿ ಗ್ರಾಮ ಪಂಚಾಯಿತಿಯಲ್ಲಿ ಒಟ್ಟು 26 ಜನ ಸದಸಸ್ಯರಲ್ಲಿ 24 ಜನ ಸದಸ್ಯರು ಗ್ರಾಮ ಪಂಚಾಯಿತಿಯ ಮತಗಟ್ಟೆಗೆ ಬಂದು ತಮ್ಮ ಮತ ಚಲಾಯಿಸುವ ಮೂಲಕ ಒಗ್ಗಟ್ಟು ಪ್ರದರ್ಶಿಸಿದ್ದಾರೆ. […]
ಸಿಂದಗಿಯಲ್ಲಿ ಮತದಾನ ಮಾಡಿದ ಶಾಸಕ ರಮೇಶ ಭೂಸನೂರ
ವಿಜಯಪುರ: ವಿಧಾನ ಪರಿಷತ ಚುನಾವಣೆಯಲ್ಲಿ ಬಿಜೆಪಿ ಶಾಸಕ ರಮೇಶ ಭೂಸನೂರ ಮತದಾನ ಮಾಡಿದ್ದಾರೆ. ವಿಜಯಪುರ ಮತ್ತು ಬಾಗಲಕೋಟೆ ಜಿಲ್ಲೆಗಳ ಸ್ಥಳೀಯ ಸಂಸ್ಥೆಗಳಿಂದ ವಿಧಾನ ಪರಿಷತ್ತಿನ ದ್ವಿಸದಸ್ಯ ಸ್ಥಾನಕ್ಕೆ ಚುನಾವಣೆ ನಡೆಯುತ್ತಿದೆ. ಈ ಹಿನ್ನೆಲೆಯಲ್ಲಿ ಸಿಂದಗಿ ಪುರಸಭೆ ಮತಗಟ್ಟೆಯಲ್ಲಿ ಬಿಜೆಪಿ ಶಾಸಕ ರಮೇಶ ಭೂಸನೂರ ತಮ್ಮ ಹಕ್ಕು ಚಲಾಯಿಸಿದರು.
ಒಟ್ಟಿಗೆ ಬಂದು ಮತ ಚಲಾಯಿಸಿದ ಅರಕೇರಿ ಗ್ರಾಮ ಪಂಚಾಯಿತಿಯ 28 ಜನ ಸದಸ್ಯರು
ವಿಜಯಪುರ: ವಿಜಯಪುರ ಮತ್ತು ಬಾಗಲಕೋಟೆ ಸ್ಥಳೀಯ ಸಂಸ್ಥೆಗಳಿಂದ ವಿಧಾನ ಪರಿಷತ್ತಿನ ದ್ವಿಸದಸ್ಯ ಸ್ಥಾನಕ್ಕೆ ನಡೆಯುತ್ತಿರುವ ಚುನಾವಣೆಯಲ್ಲಿ ಗ್ರಾಮ ಪಂಚಾಯಿತಿಗಳಲ್ಲಿ ಸದಸ್ಯರು ಒಟ್ಟಾಗಿ ಬಂದು ತಮ್ಮ ಮತ ಚಲಾಯಿಸಿ ಗಮನ ಸೆಳೆದಿದ್ದಾರೆ. ವಿಜಯಪುರ ತಾಲೂಕಿನ ಅರಿಕೇರಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಕೂಡ ಸದಸ್ಯರು ತಮ್ಮ ಒಗ್ಗಟ್ಟು ಪ್ರದರ್ಶಿಸಿದ್ದಾರೆ. ಅರಕೇರಿ ಗ್ರಾಮ ಪಂಚಾಯಿತಿಯಲ್ಲಿ ಒಟ್ಟು 29 ಜನ ಸದಸ್ಯರಿದ್ದು, ಅವರಲ್ಲಿ ಓರ್ವ ಸದಸ್ಯ ಅನಾರೋಗ್ಯದ ಹಿನ್ನೆಲೆಯಲ್ಲಿ ಮಹಾರಾಷ್ಟ್ರದ ಪುಣೆಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಉಳಿದ 28 ಜನ ಸದಸ್ಯರು ಅರಕೇರಿ […]