ಮ.2 ಗಂ. ವರೆಗೆ ಶೇ. 57.98 ರಷ್ಟು ಮತದಾನ- ಜಿಲ್ಲಾಧಿಕಾರಿ ಪಿ. ಸುನೀಲ ಕುಮಾರ

ವಿಜಯಪುರ: ವಿಧಾನ ಪರಿಷತ ಚುನಾವಣೆಯಲ್ಲಿ ವಿಜಯಪುರ ಮತಕ್ಷೇತ್ರ ವ್ಯಾಪ್ತಿಯಲ್ಲಿ ಮ.2ರ ವರೆಗೆ ಶೇ. 57.98 ರಷ್ಟು ಮತದಾನ ದಾಖಲಾಗಿದೆ. ವಿಜಯಪುರ ಮತ್ತು 57.98 ರಷ್ಟು ಮತದಾನ ದಾಖಲಾಗಿದೆ ಎಂದು ವಿಜಯಪುರ ಜಿಲ್ಲಾಧಿಕಾರಿ ಪಿ. ಸುನೀಲ ಕುಮಾರ ತಿಳಿಸಿದ್ದಾರೆ. ಸಂ. 4 ಗಂಟೆಯ ವರೆಗೆ ಮತದಾನ ನಡೆಯಲಿದೆ.

ಕೋರವಾರ ಗ್ರಾಮ ಪಂಚಾಯತಿಯಲ್ಲಿ ಒಟ್ಟಿಗೆ ಬಂದು ಮತ ಚಲಾಯಿಸಿದ 14 ಜನ ಸದಸ್ಯರು

ವಿಜಯಪುರ: ವಿಜಯಪುರ ಜಿಲ್ಲೆಯಲ್ಲಿ ವಿಧಾನ ಪರಿಷತ್ ದ್ವಿಸದಸ್ಯ ಸ್ಥಾನಕ್ಕೆ ನಡೆಯುತ್ತಿರುವ ಚುನಾವಣೆಯ ಮತದಾನ ಭರದಿಂದ ಸಾಗಿದೆ. ದೇವರ ಹಿಪ್ಪರಗಿ ತಾಲೂಕಿನ ಕೋರವಾರ ಗ್ರಾಮ ಪಂಚಾಯತಿಯಲ್ಲಿ ಒಟ್ಟು 22 ಜನ ಸದಸ್ಯರಲ್ಲಿ 14 ಜನರ ಜನ ಒಟ್ಟಿಗೆ ಬಂದು ತಮ್ಮ ಮತ ಚಲಾಯಿಸಿದ್ದಾರೆ. ಗ್ರಾಮ ಪಂಚಾಯಿತಿ ಅಧ್ಯಕ್ಷ ರಾಜು ಛಾಯಾಗೋಳ ನೇತೃತ್ವದಲ್ಲಿ ಗ್ರಾಮ ಪಂಚಾಯತಿ ಮತಗಟ್ಟೆಗೆ ಆಗಮಿಸಿದ 14 ಸದಸ್ಯರು ತಮ್ಮ ಮತ ಚಲಾಯಿಸಿದ್ದಾರೆ.

ಶಾಸಕ ಎ. ಎಸ್ ಪಾಟೀಲ ನಡಹಳ್ಳಿ ಮತದಾನ- ಬಿಜೆಪಿ ಪಿ. ಎಚ್. ಪೂಜಾರ ಗೆಲುವಿನ ವಿಶ್ವಾಸ ವ್ಯಕ್ತಪಡಿಸಿದ ಶಾಸಕ

ವಿಜಯಪುರ: ವಿಜಯಪುರ ಮತ್ತು ಬಾಗಲಕೋಟೆ ಜಿಲ್ಲೆಗಳ ಸ್ಥಳೀಯ ಸಂಸ್ಥೆಗಳಿಂದ ವಿಧಾನ ಪರಿಷತ್ತಿನ ದ್ವಿಸದಸ್ಯ ಸ್ಥಾನಕ್ಕೆ ನಡೆಯುತ್ತಿರುವ ಚುನಾವಣೆ ಮತದಾನ ಬಿರುಸಿನಿಂದ ಸಾಗಿದೆ. ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ಬಿಜೆಪಿ ಶಾಸಕ ಎ. ಎಸ್. ಪಾಟೀಲ ನಡಹಳ್ಳಿ ಮುದ್ದೇಬಿಹಾಳ ಪುರಸಭೆಯಲ್ಲಿ ತಮ್ಮ ಮತ ಚಲಾಯಿಸಿದ್ದಾರೆ. ಬಳಿಕ ಮಾತನಾಡಿದ ಅವರು, ಬಿಜೆಪಿ ಅಭ್ಯರ್ಥಿ ಪಿ. ಎಚ್. ಪೂಜಾರ ಗೆಲುವು ಸಾಧಿಸಲಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. ಮುದ್ದೇಬಿಹಾಳ ಮತ್ತು ದೇವರ ಹಿಪ್ಪರಗಿ ವಿಧಾನಸಭೆ ಕ್ಷೇತ್ರಗಳ ವ್ಯಾಪ್ತಿಯಲ್ಲಿ 1100 ಮತದಾರರಿದ್ದು, ಅವರಲ್ಲಿ ಬಿಜೆಪಿ ಅಭ್ಯರ್ಥಿ […]

ಮೂರು ವರ್ಷಗಳಲ್ಲಿ ಮಾಡಿದ ಕೆಲಸ, ಹಾಲಿ, ಮಾಜಿ‌ ಕಾಂಗ್ರೆಸ್ ಶಾಸಕರು, ಮುಖಂಡರ ಬೆಂಬಲ ಗೆಲುವಿಗೆ ಸಹಕಾರಿಯಾಗಿವೆ ಸುನೀಲಗೌಡ ಪಾಟೀಲ

ವಿಜಯಪುರ: ವಿಧಾನ ಪರಿಷತ ಸದಸ್ಯನಾಗಿ ಮೂರು ವರ್ಷ ಮಾಡಿರುವ ಸೇವೆ ಮತ್ತು ಕಾಂಗ್ರೆಸ್ ಹಾಲಿ ಮತ್ತು ಮಾಜಿ ಶಾಸಕರು, ಮುಖಂಡರು, ಮತದಾರರ ಬೆಂಬಲದಿಂದ ವಿಧಾನ ಪರಿಷತ ಚುನಾವಣೆಯಲ್ಲಿ ಭಾರಿ ಅಂತರದ ಗೆಲುವು ಸಾಧಿಸುವುದಾಗಿ ಎಂ ಎಲ್ ಸಿ ಮತ್ತು ಕಾಂಗ್ರೆಸ್ ಅಭ್ಯರ್ಥಿ ಸುನೀಲಗೌಡ ಪಾಟೀಲ ತಿಳಿಸಿದ್ದಾರೆ. ವಿಜಯಪುರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಳೆದ ಸಲಕ್ಕಿಂತಲೂ ಹೆಚ್ಚಿನ ಮತಗಳನ್ನು ಈ ಬಾರಿ ಪಡೆಯಲಿದ್ದೇನೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. ಶಾಸನ ಸಭೆ ಚುನಾಯಿತ ಪ್ರತಿ‌ನಿಧಿಗಳ ಮಾದರಿಯಲ್ಲಿ ಗ್ರಾ. ಪಂ. ಸದಸ್ಯರಿಗೂ […]

ವಿಪ ಚುನಾವಣೆ: ತಮ್ಮ ಗೆಲುವು ಖಚಿತ- ಪಕ್ಷೇತರ ಅಭ್ಯರ್ಥಿ ಮಲ್ಲಿಕಾರ್ಜುನ ಲೋಣಿ

ವಿಜಯಪುರ: ಡಿ. 10 ರಂದು ನಡೆಯಲಿರುವ ವಿಧಾನ ಪರಿಷತ್ ಚುನಾವಣೆಯಲ್ಲಿ ತಮ್ಮ‌ಗೆಲುವು ಖಚಿತ ಎಂದು ಪಕ್ಷೇತರ ಅಭ್ಯರ್ಥಿ ಮಲ್ಲಿಕಾರ್ಜುನ ಲೋಣಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ವಿಜಯಪುರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬೆಳಗಾವಿ ಮಾದರಿಯಲ್ಲಿ ಎಲ್ಲ ಮತಗಟ್ಟೆಗಳಲ್ಲಿ ಸಿಸಿಟಿವಿ ಅಳವಡಿಸಬೇಕು.  ಈ ಕುರಿತು ಈಗಾಗಲೇ ಜಿಲ್ಲಾಧಿಕಾರಿ ಮತ್ತು ಎಸ್ಪಿಯವರಿಗೆ ಮನವಿ ಪತ್ರ ಸಲ್ಲಿಸಿರುವುದಾಗಿ ತಿಳಿಸಿದರು. ಅಶಕ್ತರು, ಅಂಧರು ಮತ್ತು ಅಂಗವಿಕಲರ ಮತದಾನ ದುರುಪಯೋಗವಾಗದಂತೆ ತಡೆಗಟ್ಟಲು ಕ್ರಮ ಕೈಗೊಳ್ಳಬೇಕು ಎಂದು ಅವರು ಒತ್ತಾಯಿಸಿದರು. ನೂತನವಾಗಿ ಆಯ್ಕೆಯಾಗಿರುವ ಗ್ರಾಮ ಪಂಚಾಯತಿ ಸದಸ್ಯರಿಗೆ ಪ್ರಥಮ […]

ಪಕ್ಷೇತರ ಅಭ್ಯರ್ಥಿ ಕಾಂಗ್ರೆಸ್ ಸದಸ್ಯರೇ ಅಲ್ಲ- ಎಂ ಎಲ್ ಸಿ ಸುನೀಲಗೌಡ ಪಾಟೀಲರಿಗೆ ಮತ ನೀಡಿ- ಪ್ರೊ. ರಾಜು ಆಲಗೂರ

ವಿಜಯಪುರ: ಕಾಂಗ್ರೆಸ್ ಅನ್ಯಾಯ ಮಾಡಿದೆ ಎಂದು ಹೇಳುತ್ತಿರುವ ಪಕ್ಷೇತರ ಅಭ್ಯರ್ಥಿ ಮಲ್ಲಿಕಾರ್ಜುನ್ ಲೋಣಿ ಕಾಂಗ್ರೆಸ್ ಪ್ರಾಥಮಿಕ ಸದಸ್ಯತ್ವವನ್ನೂ ಕೂಡ ಹೊಂದಿಲ್ಲ. ಕಾಂಗ್ರೆಸ್ ಚಟುವಟಿಕೆಗಳಲ್ಲಿ ಭಾಗವಹಿಸಿಲ್ಲ. ಅವರು ಕಾಂಗ್ರೆಸ್ ಪಕ್ಷದ ಕಾರ್ಯಾಲಯಕ್ಕೂ ಬಂದಿಲ್ಲ ಎಂದು ವಿಜಯಪುರ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಪ್ತೊ. ರಾಜು ಆಲಗೂರ ಹೇಳಿದ್ದಾರೆ. ವಿಜಯಪುರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪ್ರತಿಪಕ್ಷಗಳು ಪಕ್ಷೇತರ ಅಭ್ಯರ್ಥಿಗೆ ಕುಮ್ಮಕ್ಕು ನೀಡುತ್ತಿವೆ ಎಂದು ಆರೋಪಿಸಿದರು. ಸ್ಥಳೀಯ ಸಂಸ್ಥೆಗಳಿಗೆ ಬಲ‌ ತುಂಬಿದ್ದು ಕಾಂಗ್ರೆಸ್. ಈ ಮೊದಲು ಸ್ವಾವಲಂಬನೆ ಇರದ ಗ್ರಾಮ ಪಂಚಾಯಿತಿಗಳಿಗೆ ಆರ್ಥಿಕ ಸ್ವಾವಲಂಬನೆ […]

ಲಿಂಗಾಯಿತ ಪಂಚಮಸಾಲಿ ಸಮಾಜವನ್ನು ಒಡೆಯಲು ಪ್ರಯತ್ನ ನಡೆದಿದೆ-ಕೂಡಲ ಸಂಗಮ ಶ್ರೀ ಅಸಮಾಧಾನ

ವಿಜಯಪುರ: ಲಿಂಗಾಯಿತ ಪಂಚಮಸಾಲಿ ಸಮಾಜವನ್ನು ಒಡೆಯಲು ಯಾರಿಂದಲೂ ಸಾಧ್ಯವಿಲ್ಲ ಎಂದು ಲಿಂಗಾಯಿತ ಪಂಚಮಸಾಲಿ ಪೀಠದ ಜಗದ್ಗುರು ಶ್ರೀ ಬಸವಜಯ ಮೃತ್ಯುಂಜಯ ಸ್ವಾಮೀಜಿ ಹೇಳಿದ್ದಾರೆ. ವಿಜಯಪುರದಲ್ಲಿ ಮಾತನಾಡಿದ ಅವರು, ಕೆಲವು ಜನ ಪಂಚಮಸಾಲಿ ನಾಯಕರೇ ಹೋರಾಟ ಒಡೆಯಲು ಪ್ರಯತ್ನ ಮಾಡುತ್ತಿದ್ದಾರೆ.  ಕಿತ್ತೂರು ಚೆನ್ನಮ್ಮ ಕಾಲದಿಂದಲೂ ಪಂಚಮಸಾಲಿ ಸಮುದಾಯವನ್ನು ಒಡೆಯಲು ಕೆಲವು ಪಟ್ಟಭದ್ರ ಹಿತಾಸಕ್ತಿಗಳು ಕೆಲಸ ಮಾಡುತ್ತಿವೆ.  ಈಗ ಕಷ್ಟಪಟ್ಟು ಪಾದಯಾತ್ರೆ ಸತ್ಯಾಗ್ರಹ ಮಾಡಿ ಸಮಾಜವನ್ನು ಒಗ್ಗೂಡಿಸಿದ್ದೇವೆ.  ಇದನ್ನು ಒಡೆಯಲು ಕೆಲವೊಂದು ಶಕ್ತಿಗಳು ಪ್ರಯತ್ನ ಮಾಡುತ್ತಿವೆ.  ಯಾರು ಏನೇ ಪ್ರಯತ್ನ […]

ವಿಪ ಚುನಾವಣೆ: ಬಿಜೆಪಿ ಅಭ್ಯರ್ಥಿ ಪರ ಕಾರಜೋಳ, ಜಿಗಜಿಣಗಿ ಪ್ರಚಾರ

ವಿಜಯಪುರ: ವಿಧಾನ ಪರಿಷತ ಬಿಜೆಪಿ ಅಭ್ಯರ್ಥಿ ಪಿ. ಎಚ್. ಪೂಜಾರ ಪರ ಸಚಿವ ಗೋವಿಂದ ಕಾರಜೋಳ, ಸಂಸದ ರಮೇಶ ಜಿಗಜಿಣಗಿ ಪ್ರಚಾರ ನಡೆಸಿದರು. ವಿಜಯಪುರ ನಗರದ ಸಾಯಿ ವಿಹಾರದಲ್ಲಿ ನಾಗಠಾಣ ವಿಧಾನಸಭೆ ಮತಕ್ಷೇತ್ರದ ಪ್ರಚಾರ ಸಭ ನಡೆಯಿತು.‌ ಈ ಸಂದರ್ಭದಲ್ಲಿ ಪಕ್ಷದ ಅಭ್ಯರ್ಥಿಯಾದ ಪಿ. ಎಚ್. ಪೂಜಾರ ಪರ ಸಚಿವರಾದ ಗೋವಿಂದ ಕಾರಜೋಳ, ಸಂಸದ ರಮೇಶ ಜಿಗಜಿಣಗಿ, ಮಾಜಿ ಸಚಿವ ಅಪ್ಪು ಪಟ್ಟಣಶೆಟ್ಟಿ, ಎಸ್. ಕೆ. ಬೆಳ್ಳುಬ್ಬಿ, ಅಪ್ಪಾಸಾಹೇಬ ಪಟ್ಟಣಶೆಟ್ಟಿ ಸೇರಿದಂತೆ ವಿಧಾನ ಪರಿಷತ ಸದಸ್ಯರಾದ ನಾರಾಯಣಸಾ […]

ಸುನೀಲಗೌಡ ಪಾಟೀಲ ಗೆಲ್ಲಿಸಲು ಎಸ್. ಆರ್. ಪಾಟೀಲ ಸಂಕಲ್ಪ ಮಾಡಿದ್ದಾರೆ- ಕಾಂಗ್ರೆಸ್ ಗೆಲುವ ಶತಸಿದ್ಧ- ಎಂ ಎಲ್ ಸಿ ಪ್ರಕಾಶ ರಾಠೋಡ

ವಿಜಯಪುರ: ಎಸ್ .ಆರ್. ಪಾಟೀಲರು ರಾಜ್ಯದ ಹಿರಿಯ ನಾಯಕರು, ಅವರಿಗೆ ದೊಡ್ಡಮಟ್ಟದ ಸ್ಥಾನಮಾನವನ್ನು ಪಕ್ಷ ನೀಡಲಿದೆ.  ಸುನೀಲಗೌಡ ಪಾಟೀಲ ಅವರ ಗೆಲುವಿಗೆ ಎಸ್. ಆರ್.  ಪಾಟೀಲ ಸಂಕಲ್ಪ ಮಾಡಿದ್ದಾರೆ,  ಹೀಗಾಗಿ ನಮ್ಮಲ್ಲಿ ಅಸಮಾಧಾನದ ಪ್ರಶ್ನೆಯೇ ಇಲ್ಲ ಎಂದು ಪ್ರಕಾಶ ರಾಠೋಡ ಹೇಳಿದ್ದಾರೆ. ವಿಜಯಪುರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಚುನಾವಣೆಯಲ್ಲಿ ಪಕ್ಷೇತರ ಅಭ್ಯರ್ಥಿ ಗೆಲ್ಲುವುದೇ ಇಲ್ಲ, ಅವರನ್ನು ಕೂಡಲೇ ಕಾಂಗ್ರೆಸ್ಸಿನಿಂದ ಉಚ್ಛಾಟನೆ ಮಾಡಬೇಕು ಎಂದು ಒತ್ತಾಯಿಸುವೆ,  ಈ ಚುನಾವಣೆಯಲ್ಲಿ ಸುನೀಲಗೌಡ ಪಾಟೀಲ ಗೆಲುವು ಶತಸಿದ್ಧ ಎಂದು ಹೇಳಿದರು. […]

ಸುನೀಲಗೌಡ ಪಾಟೀಲ ಪರ ಮತ ಯಾಚಿಸಿದ ಬಸವನ ಬಾಗೇವಾಡಿ ಕಾಂಗ್ರೆಸ್ ಶಾಸಕ ಶಿವಾನಂದ ಪಾಟೀಲ

ವಿಜಯಪುರ: ಸ್ಥಳೀಯ ಸಂಸ್ಥೆಗಳ ಪ್ರತಿನಿಧಿಗಳ ಸಮಸ್ಯೆಗಳನ್ನು ಸದನದಲ್ಲಿ ಪ್ರಸ್ತಾಪಿಸುವ ಮೂಲಕ ವಿಧಾನ ಪರಿಷತ ಸದಸ್ಯ ಮತ್ತು ಕಾಂಗ್ರೆಸ್ ಅಭ್ಯರ್ಥಿ ಸುನೀಲಗೌಡ ಪಾಟೀಲ ಸ್ಪಂದಿಸಿದ್ದು, ಅವರಿಗೆ ಪ್ರಥಮ ಪ್ರಾಶಸ್ತ್ಯದ ಮತ ನೀಡುವಂತೆ ಬಸವನ ಬಾಗೇವಾಡಿ ಕಾಂಗ್ರೆಸ್ ಶಾಸಕ ಶಿವಾನಂದ ಪಾಟೀಲ ಹೇಳಿದ್ದಾರೆ. ಬಸವನ ಬಾಗೇವಾಡಿಯಲ್ಲಿ ವಿಧಾನ ಪರಿಷತ ಕಾಂಗ್ರೆಸ್ ಅಭ್ಯರ್ಥಿ ಸುನೀಲಗೌಡ ಪಾಟೀಲ ಪರ ಮತ ಯಾಚಿಸಿದ ಅವರು, ಸುನೀಲಗೌಡ ಪಾಟೀಲ ಅವರು ತಮ್ಮ ಮೂರು ವರ್ಷದ ಅವಧಿಯಲ್ಲಿ ಸದನದಲ್ಲಿ ಧ್ವನಿ ಎತ್ತುವ ಮೂಲಕ ಸ್ಪಂದಿಸಿದ್ದಾರೆ.  ಹೀಗಾಗಿ ಸ್ಥಳೀಯ […]