ಸ್ವೀಪ್ ಸಮಿತಿ ವತಿಯಿಂದ ವಿಜಯಪುರದಲ್ಲಿ ಮೇಣದ ಬತ್ತಿ ಬೆಳಗಿಸಿಕೊಂಡು ಜಾಗೃತಿ ಜಾಥಾ
ವಿಜಯಪುರ: ಮತದಾನ ಮಾಡಿ ದೇಶದ ಏಳಿಗೆಗೆ ಸಹಕರಿಸಬೇಕು ಎಂದು ಜಿಲ್ಲಾ ಚುನಾವಣಾಧಿಕಾರಿ ಮತ್ತು ಜಿಲ್ಲಾಧಿಕಾರಿ ಟಿ. ಭೂಬಾಲನ್ ಹೇಳಿದ್ದಾರೆ. ಜಿಲ್ಲಾಡಳಿತ, ಜಿಲ್ಲಾ ಸ್ವೀಪ್ ಸಮಿತಿ, ವಿಜಯಪುರ ಮಹಾನಗರ ಪಾಲಿಕೆ ಸಹಯೋಗದಲ್ಲಿ ಲೋಕಸಭೆ ಚುನಾವಣೆ 2024ರ ಅಂಗವಾಗಿ ಮತದಾನ ಜಾಗೃತಿ ಮೂಡಿಸಲು ಆಯೋಜಿಸಲಾಗಿದ್ದ ಮೇಣದ ಬತ್ತಿ ಬೆಳಗಿಸಿಕೊಂಡು ಜಾಥಾ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು. ಎಲ್ಲರೂ ತಪ್ಪದೇ ಮತದಾನ ಮಾಡುವ ಜೊತೆಗೆ ನೆರೆಹೊರೆಯವರನ್ನು ಮತದಾನ ಮಾಡುವಂತೆ ಜಾಗೃತಿ ಮೂಡಿಸಬೇಕು. ಪ್ರಜ್ಞಾವಂತ ನಾಗರೀಕರಾಗಿ ದೇಶದ ಏಳಿಗೆಗ ಮತದಾನ ಮಾಡುವುದನ್ನು ಮರೆಯಬಾರದು […]
ಸಶಕ್ತ ಭಾರತ ನಿರ್ಮಾಣಕ್ಕಾಗಿ ಮತ ಚಲಾಯಿಸಿ: ಜಿಲ್ಲಾಧಿಕಾರಿ ಟಿ.ಭೂಬಾಲನ್
ವಿಜಯಪುರ: ಸಧೃಡ ಭಾರತ ನಿರ್ಮಾಣಕ್ಕಾಗಿ, ಸಶಕ್ತ ಭಾರತವನ್ನು ಮುನ್ನೆಡಸಲು ಯೋಗ್ಯ ವ್ಯಕ್ತಿಯನ್ನು ಆಯ್ಕೆ ಮಾಡಲು ಮತದಾನ ಅತ್ಯಗತ್ಯವಾಗಿದೆ. ಹಾಗಾಗಿ ಎಲ್ಲರೂ ಕಡ್ಡಾಯವಾಗಿ ಮತ ಚಲಾಯಿಸಬೇಕು ಎಂದು ಚುನಾವಣಾಧಿಕಾರಿ ಹಾಗೂ ಜಿಲ್ಲಾಧಿಕಾರಿ ಟಿ .ಭೂಬಾಲನ್ ಹೇಳಿದ್ದಾರೆ. ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಲೋಕಸಭೆ ಚುನಾವಣೆ-2024ರ ಅಂಗವಾಗಿ ಮತದಾನ ಜಾಗೃತಿ ಮೂಡಿಸುವ ಸ್ಥಬ್ಧಚಿತ್ರ ವಾಹನಕ್ಕೆ ಶುಕ್ರವಾರ ಹಸಿರು ನಿಶಾನೆ ತೋರುವುದರ ಮೂಲಕ ಮಾತನಾಡಿದರು. ಮತ ಚಲಾಯಿಸುವುದರ ಮೂಲಕ ದೇಶದ ಸಮಗ್ರತೆ ಹಾಗೂ ಪ್ರಗತಿಗೆ ಮುನ್ನುಡಿ ಬರೆಯಬೇಕು. ನಾವು ಹಾಕುವ ಮತ ಕೇವಲ […]
Video News: ಪ್ರೊ. ರಾಜು ಆಲಗೂರ ಕಾಂಗ್ರೆಸ್ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಕೆ- ಸಂಸದ ರಮೇಶ ಜಿಗಜಿಣಗಿ ವಿರುದ್ಧ ವಾಗ್ದಾಳಿ
ವಿಜಯಪುರ: ಲೋಕಸಭೆ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಪ್ರೊ. ರಾಜು ಆಲಗೂರ ಕಾಂಗ್ರೆಸ್ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದಾರೆ. ವಿಜಯಪುರ ನಗರದಲ್ಲಿ ಜಿಲ್ಲಾಧಿಕಾರಿ ಕಚೇರಿಗೆ ತೆರಳಿದ ಅವರು, ಚುನಾವಣಾಧಿಕಾರಿಯೂ ಆಗಿರುವ ಟಿ. ಭೂಬಾಲನ್ ಅವರಿಗೆ ತಮ್ಮ ನಾಮಪತ್ರ ಸಲ್ಲಿಸಿದರು. ಈ ಸಂದರ್ಭದಲ್ಲಿ ಸೂಚಕರಾದ ಹೊಮನಲ್ಲ ಸಾರವಾಡ, ಬೀರಪ್ಪ ಜುಮನಾಳ, ಅಮೋಘಸಿದ್ಧ ಬಿಜ್ಜರಗಿ, ಸುರೇಶಗೌಡ ಪಾಟೀಲ ಉಪಸ್ಥಿತರಿದ್ದರು. ನಾಮಪತ್ರ ಸಲ್ಲಿಸಿದ ಬಳಿಕ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಪ್ರೊ. ರಾಜು ಆಲಗೂರ, ರಾಜ್ಯ ಸರಕಾರದ ಕೆಲಸಗಳು ನಮ್ಮ ಕೈಹಿಡಿಯಲಿವೆ. ಜನ ನಮ್ಮ ಮೇಲೆ […]
ಕಾಂಗ್ರೆಸ್ ನೂತನ ಜಿಲ್ಲಾಧ್ಯಕ್ಷರಾಗಿ ಎಂ. ಎಸ್.ಲೋಣಿ ಅಧಿಕಾರ ಸ್ವೀಕಾರ- ಪ್ರೊ. ರಾಜು ಆಲಗೂರ ಎರಡು ಲಕ್ಷ ಮತಗಳಿಂದ ಗೆಲ್ಲಲಿದ್ದಾರೆ- ಲೋಣಿ ಭವಿಷ್ಯ
ವಿಜಯಪುರ: ಕಾಂಗ್ರೆಸ್ ಅಭ್ಯರ್ಥಿ ಪ್ರೊ. ರಾಜು ಆಲಗೂರ ಅವರು ಎರಡು ಲಕ್ಷಕ್ಕೂ ಅಧಿಕ ಮತಗಳ ಅಂತರದಿಂದ ಗೆಲ್ಲಲಿದ್ದಾರೆ ಎಂದು ಜಿಲ್ಲಾ ಕಾಂಗ್ರೆಸ್ ನೂತನ ಅಧ್ಯಕ್ಷ ಮಲ್ಲಿಕಾರ್ಜುನ ಎಸ್. ಲೋಣಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಪಕ್ಷದ ಜಿಲ್ಲಾ ಅಧ್ಯಕ್ಷ ಸ್ಥಾನ ವಹಿಸಿಕೊಂಡು ಅವರು ಮಾತನಾಡಿದರು. ಕಾಂಗ್ರೆಸ್ ಮುಖಂಡರು ಮತ್ತು ಕಾರ್ಯಕರ್ತರು ಈ ಲೋಕಸಭೆ ಚುನಾವಣೆಯನ್ನು ಸವಾಲಾಗಿ ಸ್ವೀಕರಿಸಿದ್ದಾರೆ. ತಮ್ಮ ಮೇಲೆ ವಿಶ್ವಾಸವಿಟ್ಟು, ಪಕ್ಷ ಈ ಮಹತ್ವದ ಜವಾಬ್ದಾರಿ ನೀಡಿದ್ದು, ಇದಕ್ಕೆ ತಕ್ಕಂತೆ ಶ್ರಮವಹಿಸಿ ಪಕ್ಷ ಸಂಘಟನೆಯಲ್ಲಿ […]
ರನ್ನಿಂಗ್ ಮಾಡಿ ಮತದಾನ ಜಾಗೃತಿ ಮೂಡಿಸಿದ ಜಿ. ಪಂ. ಸಿಇಓ ರಿಷಿ ಆನಂದ
ವಿಜಯಪುರ: ಒಂದು ದೇಶದ ಶಕ್ತಿಶಾಲಿ ಸಂಪನ್ಮೂಲ ಎಂದರೆ ಅದು ಯವಶಕ್ತಿ. ದೇಶಕ್ಕೆ ಯುವಕರ ಕೊಡುಗೆ ಅತ್ಯಂತ ಮಹತ್ವದಾಗಿದೆ. ದೇಶದ ಭವಿಷ್ಯ ನಿರ್ಮಾಣ ಕಾರ್ಯಕ್ಕೆ ಎಲ್ಲಾ ಯುವಕರು ಲೋಕಸಭಾ ಚುನಾವಣೆಯಲ್ಲಿ ಪಾರದರ್ಶಕ ಹಾಗೂ ಮುಕ್ತವಾಗಿ ಮತದಾನ ಮಾಡುವ ಮೂಲಕ ಸದೃಡ ದೇಶ ನಿರ್ಮಾಣಕ್ಕೆ ಕಾರಣಿಭೂತರಾಗಬೇಕು ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯ ನಿರ್ವಾಹಣಾಧಿಕಾರಿ ರಿಶಿ ಆನಂದ ಹೇಳಿದರು. ಜಿಲ್ಲಾ ಸ್ವೀಪ್ ಸಮಿತಿ, ಜಿಲ್ಲಾ ಪಂಚಾಯಿತಿ ಹಾಗೂ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಯೋಗದಲ್ಲಿ ನಗರದ ಡಾ. ಬಿ. […]
ದೇಶದ ರಕ್ಷಣೆ, ಉಳಿವಿಗಾಗಿ ಬಿಜೆಪಿಗೆ ಮತ ಹಾಕಬೇಕು- ಶಾಸಕ ಬಸನಗೌಡ ಪಾಟೀಲ ಯತ್ನಾಳ
ವಿಜಯಪುರ: ನಮ್ಮ ರಕ್ಷಣೆಗಾಗಿ, ದೇಶ ಉಳಿವಿಗಾಗಿ ಬಿಜೆಪಿಗೆ ಮತ ಹಾಕುವ ಕಾಲ ಬಂದಿದೆ. ನಮ್ಮವರು, ನಮ್ಮ ಮನೆಗಳು ಉಳಿಯಬೇಕೆಂದರೆ ಮೋದಿಯವರು ಮತ್ತೊಮ್ಮೆ ಪ್ರಧಾನಿ ಆಗಬೇಕು ಎಂದು ಶಾಸಕ ಬಸನಗೌಡ ಪಾಟೀಲ ಯತ್ನಾಳ ಹೇಳಿದ್ದಾರೆ. ನಗರದ ಬಿಜೆಪಿ ಜಿಲ್ಲಾ ಕಾರ್ಯಾಲಯದಲ್ಲಿ ನಡೆದ ಬಿಜೆಪಿ ಸಂಸ್ಥಾಪನೆ ದಿನಾಚರಣೆ ಹಾಗೂ ನಗರ ಮಂಡಲದ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭ ಉದ್ಘಾಟಿಸಿ ಅವರು ಮಾತನಾಡಿದರು. ದೇಶದಲ್ಲಿ ಕಳೆದ 10 ವರ್ಷಗಳಲ್ಲಿ ಆಗಿರುವ ಅಭಿವೃದ್ಧಿಯಿಂದ ಯಾರನ್ನು ಕೇಳಿದರೂ ಮೋದಿಗೆ ಮತ ಎನ್ನುತ್ತಾರೆ. ಯಾವ ಗ್ಯಾರಂಟಿಯೂ […]
ಕೆಪಿಸಿಸಿ ಅಧ್ಯಕ್ಷ ಡಿ. ಕೆ. ಶಿವಕುಮಾರ ಅವರಿಂದ ಬಿ ಫಾರಂ ಪಡೆದ ಪ್ರೊ. ರಾಜು ಆಲಗೂರ
ಬೆಂಗಳೂರು: ವಿಜಯಪುರ ಕಾಂಗ್ರೆಸ್ ಅಭ್ಯರ್ಥಿ ಪ್ರೊ. ರಾಜು ಆಲಗೂರ ಅವರು ಬೆಂಗಳೂರಿಗೆ ತೆರಳಿ ಕೆಪಿಸಿಸಿ ಅಧ್ಯಕ್ಷ ಡಿ. ಕೆ. ಶಿವಕುಮಾರ ಅವರಿಂದ ಬಿ. ಫಾರಂ ಪಡೆದರು. ಈ ಸಂದರ್ಭದಲ್ಲಿ ಸಿಂದಗಿ ಶಾಸಕ ಅಶೋಕ ಮನಗೂಳಿ, ಕೌಶಲ್ಯಾಭಿವೃದ್ಧಿ ನಿಗಮದ ಅಧ್ಯಕ್ಷೆ ಕಾಂತಾ ನಾಯಕ, ಕಾಂಗ್ರೆಸ್ ಜಿಲ್ಲಾ ಉಪಾಧ್ಯಕ್ಷ ಡಾ. ಗಂಗಾಧರ ಸಂಬಣ್ಣಿ, ಮುಖಂಡರಾದ ಮಲ್ಲಿಕಾರ್ಜುನ ಲೋಣಿ, ಪ್ರಫುಲ್ ಮಂಗಣ್ಣವರ ಮುಂತಾದವರು ಉಪಸ್ಥಿತರಿದ್ದರು.
ಮಹಿಳೆಯರು ಕಾಂಗ್ರೆಸ್ಸಿಗೆ ದೊಡ್ಡ ಶಕ್ತಿಯಾಗಿದ್ದಾರೆ- ಪ್ರೊ. ರಾಜು ಆಲಗೂರ
ವಿಜಯಪುರ: ಮಹಿಳೆಯರು ಕಾಂಗ್ರೆಸ್ ಪಕ್ಷಕ್ಕೆ ಮಹಿಳೆಯರೇ ದೊಡ್ಡ ಶಕ್ತಿಯಾಗಿದ್ದಾರೆ ಎಂದು ವಿಜಯಪುರ ಲೋಕಸಭೆ ಕಾಂಗ್ರೆಸ್ ಅಭ್ಯರ್ಥಿ ಪ್ರೊ. ರಾಜು ಆಲಗೂರ ಹೇಳಿದ್ದಾರೆ. ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಕಾಂಗ್ರೆಸ್ ಮಹಿಳಾ ಘಟಕ ಆಯೋಜಿಸಿದ್ದ ವಿಶ್ವ ಮಹಿಳಾ ದಿನಾಚರಣೆ ಸಭೆಯಲ್ಲಿ ಅವರು ಮಾತನಾಡಿದರು. ಸ್ವಾತಂತ್ರ್ಯದ ನಂತರ ಅಧಿಕಾರಕ್ಕೆ ಬಂದ ಕಾಂಗ್ರೆಸ್ ಮಹಿಳೆಯರಿಗೆ ನೂರಾರು ಯೋಜನೆಗಳನ್ನು ಹಾಕಿಕೊಂಡಿದೆ. ಅವರ ಅಭಿವೃದ್ಧಿಗೆ ಶ್ರಮಿಸಿದೆ. ಈಗ ಸಿಎಂ ಸಿದ್ದರಾಮಯ್ಯ ನೇತೃತ್ವದ ಸರಕಾರ ಮಹಿಳೆಯರಿಗೆ ಹಲವು ಗ್ಯಾರಂಟಿಗಳನ್ನು ಜಾರಿ ಮಾಡಿದ್ದು ದಾಖಲೆಯಾಗಿದೆ. ಇದೆಲ್ಲವನ್ನು ಪಕ್ಷದ ನಾಯಕರು […]
ವಿಜಯಪುರ ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಯಾಗಿ ಸನ್ನಿ ಎಸ್. ಗವಿಮಠ ನೇಮಕ
ವಿಜಯಪುರ: ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಯನ್ನಾಗಿ ಸನ್ನಿ ಎಸ್. ಗವಿಮಠ(ತ್ರಿಲೋಚನ) ಅವರನ್ನು ನೇಮಕ ಮಾಡಲಾಗಿದೆ. ಕಾಂಗ್ರೆಸ್ ಜಿಲ್ಲಾಧ್ಯಕ್ಷ ಮತ್ತು ವಿಜಯಪುರ ಲೋಕಸಭೆ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಪ್ರೊ. ರಾಜು ಆಲಗೂರ ಈ ನೇಮಕ ಮಾಡಿ ಆದೇಶ ಪತ್ರ ನೀಡಿ ಗೌರವಿಸಿದ್ದಾರೆ. ಸನ್ನಿ ಎಸ್. ಗವಿಮಠ ಮೂಲತಃ ಬಿಜೆಪಿ ಕಾರ್ಯಕರ್ತನಾಗಿದ್ದು, ಮಾಜಿ ಸಚಿವ ಅಪ್ಪು ಪಟ್ಟಣಶೆಟ್ಟಿ ಅವರ ಬೆಂಬಲಿಗನಾಗಿದ್ದಾನೆ. ಆದರೆ, ಕಳೆದ ವರ್ಷ ನಡೆದ ವಿಧಾನ ಸಭೆ ಚುನಾವಣೆಯಲ್ಲಿ ಅಪ್ಪು ಪಟ್ಟಣಶೆಟ್ಟಿ ಅವರಿಗೆ ಟಿಕೆಟ್ ಸಿಗದ ಹಿನ್ನೆಲೆಯಲ್ಲಿ ಅವರು […]
ಲೋಕಸಭೆ ಚುನಾವಣೆ- ಈ ಬಾರಿ 1919048 ಮತದಾರರು- 85 ವರ್ಷ ಮೇಲ್ಪಟ್ಟ ಮತದಾರರ ಸಂಖ್ಯೆ 17159
ವಿಜಯಪುರ: ಕೇಂದ್ರ ಚುನಾವಣೆ ಆಯೋಗ ಲೋಕಸಭೆಗೆ ದಿನಾಂಕ ನಿಗದಿಯಾಗಿದ್ದು, ಮಾ. 16 ರಿಂಂದಲೇ ಚುನಾವಣೆ ನೀತಿ ಸಂಹಿತೆ ಆರಂಭವಾಗಿದೆ. ಈ ಬಾರಿ ವಿಜಯಪುರ ಜಿಲ್ಲೆಯಲ್ಲಿ ಒಟ್ಟು 19 ಲಕ್ಷ 19 ಸಾವಿರದ 48 ಜನ ಮತದಾರರು ತಮ್ಮ ಹಕ್ಕು ಚಲಾಯಿಸಲಿದ್ದಾರೆ. ಈ ಕುರಿತು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಜಿಲ್ಲಾಧಿಕಾರಿ ಟಿ. ಭೂಬಾಲನ್, ಜೂನ್ 6 ರ ವರೆಗೆ ಮಾದರಿ ನೀತಿ ಸಂಹಿತೆ ಜಾರಿಯಲ್ಲಿರುತ್ತದೆ ಎಂದು ತಿಳಿಸಿದ್ದಾರೆ. ವಿಜಯಪುರ ಜಿಲ್ಲೆಯಲ್ಲಿ ರಾಜ್ಯದಲ್ಲಿ ಎರಡನೇ ಹಂತದಲ್ಲಿ ಮತದಾನ ನಡೆಯಲಿದ್ದು, ಏ. 12 […]