ಸುನೀಲಗೌಡ ಪಾಟೀಲ ಪರ ಮತ ಯಾಚಿಸಿದ ಬಸವನ ಬಾಗೇವಾಡಿ ಕಾಂಗ್ರೆಸ್ ಶಾಸಕ ಶಿವಾನಂದ ಪಾಟೀಲ

ವಿಜಯಪುರ: ಸ್ಥಳೀಯ ಸಂಸ್ಥೆಗಳ ಪ್ರತಿನಿಧಿಗಳ ಸಮಸ್ಯೆಗಳನ್ನು ಸದನದಲ್ಲಿ ಪ್ರಸ್ತಾಪಿಸುವ ಮೂಲಕ ವಿಧಾನ ಪರಿಷತ ಸದಸ್ಯ ಮತ್ತು ಕಾಂಗ್ರೆಸ್ ಅಭ್ಯರ್ಥಿ ಸುನೀಲಗೌಡ ಪಾಟೀಲ ಸ್ಪಂದಿಸಿದ್ದು, ಅವರಿಗೆ ಪ್ರಥಮ ಪ್ರಾಶಸ್ತ್ಯದ ಮತ ನೀಡುವಂತೆ ಬಸವನ ಬಾಗೇವಾಡಿ ಕಾಂಗ್ರೆಸ್ ಶಾಸಕ ಶಿವಾನಂದ ಪಾಟೀಲ ಹೇಳಿದ್ದಾರೆ. ಬಸವನ ಬಾಗೇವಾಡಿಯಲ್ಲಿ ವಿಧಾನ ಪರಿಷತ ಕಾಂಗ್ರೆಸ್ ಅಭ್ಯರ್ಥಿ ಸುನೀಲಗೌಡ ಪಾಟೀಲ ಪರ ಮತ ಯಾಚಿಸಿದ ಅವರು, ಸುನೀಲಗೌಡ ಪಾಟೀಲ ಅವರು ತಮ್ಮ ಮೂರು ವರ್ಷದ ಅವಧಿಯಲ್ಲಿ ಸದನದಲ್ಲಿ ಧ್ವನಿ ಎತ್ತುವ ಮೂಲಕ ಸ್ಪಂದಿಸಿದ್ದಾರೆ.  ಹೀಗಾಗಿ ಸ್ಥಳೀಯ […]

ವಿಪ ಚುನಾವಣೆ: ಅನಕ್ಷರಸ್ಥ, ಅಂಧ, ಅಸ್ವಸ್ಥ ಮತದಾರರು ಜೊತೆಗಾರರೊಬ್ಬರ ನೆರವು ಪಡೆಯಲು ಅವಕಾಶ- ಪಿ. ಸುನೀಲ ಕುಮಾರ

ವಿಜಯಪುರ: ನಗರ ಸ್ಥಳೀಯ ಸಂಸ್ಥೆಗಳಿಂದ ವಿಧಾನ ಪರಿಷತ್ ಚುನಾವಣೆಗೆ ನಡೆಯುವ ಚುನಾವಣೆ ಮತದಾನ ಸಂದರ್ಭದಲ್ಲಿ ಅನಕ್ಷರಸ್ಥ, ಅಂಧ ಹಾಗೂ ಅಸ್ವಸ್ಥ ಮತದಾರರೆ ಅವರು ಜೊತೆಗಾರರೊಬ್ಬರ ನೆರವು ಪಡೆಯಬಹುದಾಗಿದೆ ಎಂದು ವಿಜಯಪುರ ಚುನಾವಣಾಧಿಕಾರಿ ಮತ್ತು ಜಿಲ್ಲಾಧಿಕಾರಿ ಪಿ.ಸುನೀಲ ಕುಮಾರ್ ತಿಳಿಸಿದ್ದಾರೆ. ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ವಿಧಾನ ಪರಿಷತ್ ಚುನಾವಣೆಗೆ ಸಂಬಂಧಿಸಿದಂತೆ ಸ್ಫರ್ಧಿಸಿರುವ ಅಭ್ಯರ್ಥಿಗಳು ಮತ್ತು ರಾಜಕೀಯ ಪಕ್ಷಗಳ ಪ್ರತಿನಿಧಿಗಳೊಂದಿಗೆ ಸಭೆ ನಡೆಸಿದ ಅವರು, ಈ ವಿಧಾನ ಪರಿಷತ್ ಚುನಾವಣೆಗೆ ಸಂಬಂಧಿಸಿದಂತೆ ಮತ ಚಲಾಯಿಸಲು ಅನುಕೂಲವಾಗುವಂತೆ ಅನಕ್ಷರಸ್ಥ, ಅಂಧ ಹಾಗೂ ಅಸ್ವಸ್ಥ […]

ವಿಜಯಪುರ ಅವಿರೋಧ ಆಯ್ಕೆ ತಪ್ಪಲು ಕಾರಣ ಬಿಚ್ಚಿಟ್ಟ ಪಕ್ಷೇತರ ಅಭ್ಯರ್ಥಿ ಮಲ್ಲಿಕಾರ್ಜುನ ಎಸ್. ಲೋಣಿ.

ವಿಜಯಪುರ: ವಿಧಾನ ಪರಿಷತ್ತಿಗೆ ವಿಜಯಪುರದ ದ್ವಿಸದಸ್ಯ ಸ್ಥಾನಕ್ಕೆ ನಡೆಯುತ್ತಿರುವ ಚುನಾವಣೆ ಅವಿರೋಧ ಆಯ್ಕೆ ತಪ್ಪಲು ಕಾರಣವನ್ನು ಪಕ್ಷೇತರ ಅಭ್ಯರ್ಥಿ ಮಲ್ಲಿಕಾರ್ಜುನ ಲೋಣಿ ಬಿಚ್ಚಿಟ್ಟಿದ್ದಾರೆ. ವಿಜಯಪುರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನಾಮಪತ್ರ ವಾಪಸ್ ಪಡೆಯುವಂತೆ ಸಿಎಂ ಬಸವರಾಜ ಬೊಮ್ಮಾಯಿ, ಮಾಜಿ ಸಿಎಂ ಎಸ್. ಸಿದ್ಧರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ. ಕೆ.‌ ಶಿವಕುಮಾರ ತಮಗೆ ಕರೆ‌ ಮಾಡಿದ್ದರು. ‌ಮಾಜಿ ಡಿಸಿಎಂ ಗಳಾದ ಗೋವಿಂದ ಕಾರಜೋಳ ಮತ್ತು ಲಕ್ಷ್ಮಣ ಸವದಿ ಕೂಡ ಕರೆ ಮಾಡಿ ನಿಗಮ ಮಂಡಳಿ ಅಧ್ಯಕ್ಷ ಸ್ಥಾನ ನೀಡುವುದಾಗಿ […]

ವಿಜಯಪುರದಲ್ಲಿ ಅಂತಿಮವಾಗಿ ಏಳು ಅಭ್ಯರ್ಥಿಗಳು ಕಣದಲ್ಲಿ-ಐದು ಅಭ್ಯರ್ಥಿಗಳಿಂದ ನಾಮಪತ್ರ ವಾಪಸ್

ವಿಜಯಪುರ: ವಿಜಯಪುರ ಕ್ಷೇತ್ರದಿಂದ ಕಾಂಗ್ರೆಸ್ ಮತ್ತು ಬಿಜೆಪಿ ಅಭ್ಯರ್ಥಿಗಳ ಅವಿರೋಧ ಆಯ್ಕೆಯ ಕನಸು ಈಡೇರಿದೇ ಉಳಿದಿದೆ. ನಾಮಪತ್ರ ವಾಪಸ್ ಪಡೆಯುವ ಕೊನೆಯ ದಿನ ಪಕ್ಷೇತರ ಅಭ್ಯರ್ಥಿಯೊಬ್ಬರು ಸ್ಪಂದಿಸದ ಕಾರಣ ಈಗ ಚುನಾವಣೆ ಅನಿವಾರ್ಯವಾಗಿದೆ.   ವಿಜಯಪುರ ಮತಕ್ಷೇತ್ರದ ಸ್ಥಳೀಯ ಸಂಸ್ಥೆಗಳಿಂದ ವಿಧಾನ ಪರಿಷತ್ತಿನ ದ್ವಿಸದಸ್ಯ ಸ್ಥಾನಕ್ಕೆ ಚುನಾವಣೆ ನಡೆಯುತ್ತಿದೆ. ಈ ಎರಡು ಸ್ಥಾನಗಳಿಗೆ ಓರ್ವ ಪಕ್ಷೇತರ ಅಭ್ಯರ್ಥಿ ನಾಮಪತ್ರ ತಿರಸ್ಕೃತಗೊಂಡಿತ್ತು.   ನಾಮಪತ್ರ ವಾಪಸ್ ಪಡೆಯುವ ಕೊನೆಯ ದಿನದ ವರೆಗೆ ಒಟ್ಟು ಐದು ಅಭ್ಯರ್ಥಿಗಳು ತಮ್ಮ ಉಮೇದುವಾರಿಕೆ […]

ಪ್ರಬುದ್ದ, ಜಾಗರೂಕ ಮತದಾರರಿಂದ ಪ್ರಜಾಪ್ರಭುತ್ವ ಯಶಸ್ವಿಯಾಗಲು ಸಾಧ್ಯ- ಪಿಯು ಡಿಡಿ ಎಸ್. ಎನ್. ಬಗಲಿ

ವಿಜಯಪುರ: ಪ್ರಜಾಪಭುತ್ವದ ಯಶಸ್ಸು ಪ್ರಬುದ್ದ ಮತ್ತು ಜಾಗರೂಕ ಮತದಾರರಿಂದಲೇ ಸಾಧ್ಯ. ಉತ್ತಮ ನಾಗರಿಕನಾಗಿ ಸುಭದ್ರ ಸರಕಾರದ ರಚನೆಗಾಗಿ ಇಂದಿನ ಯುವಕರಿಗೆ ಸೂಕ್ತ ತರಬೇತಿ ಅಗತ್ಯ. ಮತದ ಮಹತ್ವ ತಿಳಿಸಲು ಪ್ರೌಢ ಹಾಗೂ ಪದವಿ ಪೂರ್ವ ಹಂತದಿಂದಲೇ ತರಭೇತಿ ನೀಡಬೇಕು ಎಂದು ಪದವಿ ಪೂರ್ವ ಶಿಕ್ಷಣ ಮಂಡಳಿ ಉಪ ನಿರ್ದೇಶಕ ಎಸ್.‌ಎನ್. ಬಗಲಿ ಹೇಳಿದ್ದಾರೆ. ವಿಜಯಪುರ ನಗರದ ಬಾಲಕಿಯರ ಸರಕಾರಿ ಪಿಯು ಕಾಲೇಜಿನ ಶಾರದಾ ಸಭಾ ಭವನದಲ್ಲಿ ಜಿಲ್ಲಾ ಸ್ವೀಪ್ ಸಮಿತಿ ಮತ್ರು ಪದವಿ ಪೂರ್ವ ಶಿಕ್ಷಣ ಇಲಾಖೆ […]

ವಿಪ ಚುನಾವಣೆ: ಓರ್ವ ಪಕ್ಷೇತರ ಅಭ್ಯರ್ಥಿ ನಾಮಪತ್ರ ವಾಪಸ್- ಕುತೂಹಲ ಕೆರಳಿಸಿದ ಉಳಿದ ಪಕ್ಷೇತರರ ನಡೆ

ವಿಜಯಪುರ: ವಿಜಯಪುರ ಸ್ಥಳೀಯ ಸಂಸ್ಥೆಗಳಿಂದ ವಿಧಾನ ಪರಿಷತ್ತಿನ ದ್ವಿಸದಸ್ಯ ಸ್ಥಾನಕ್ಕೆ ನಡೆಯುತ್ತಿರುವ ಚುನಾವಣೆಗೆ ಸ್ಪರ್ಧಿಸಿದ್ದ ಪಕ್ಷೇತರ ಅಭ್ಯರ್ಥಿಯೊಬ್ಬರು ತಮ್ಮ ನಾಮಪತ್ರವನ್ನು ಹಿಂಪಡೆದಿದ್ದಾರೆ ಎಂದು ವಿಜಯಪುರ ಜಿಲ್ಲಾಧಿಕಾರಿ ಪಿ. ಸುನೀಲ ಮುಮಾರ ತಿಳಿಸಿದ್ದಾರೆ. ಒಟ್ಟು 12 ಅಭ್ಯರ್ಥಿಗಳಲ್ಲಿ ಪಕ್ಷೇತರ ಅಭ್ಯರ್ಥಿ ತುಳಸಪ್ಪ ದಾಸರ ಅವರ ನಾಮಪತ್ರ ತಿರಸ್ಕೃತವಾಗಿದೆ. ಇವರು ಈ ಹಿಂದೆ ಬಾಗಲಕೋಟೆ ಜಿಲ್ಲೆಯಲ್ಲಿ ಚುನಾವಣೆಗೆ ಸ್ಪರ್ಧಿಸಿದ ಬಳಿಕ ಚುನಾವಣೆ ವೆಚ್ಚ ಸಲ್ಲಿಸದ ಹಿನ್ನೆಲೆಯಲ್ಲಿ ಇವರನ್ನು ಚುನಾವಣೆಗೆ ಸ್ಪರ್ಧಿಸದಂತೆ ಮೂರು ವರ್ಷಗಳ ಕಾಲ ಅನರ್ಹಗೊಳಿಸಲಾಗಿದೆ‌. ಈ ಹಿನ್ನೆಲೆಯಲ್ಲಿ ಅವರ […]

ವಿಜಯಪುರದಲ್ಲಿ ಓರ್ವ ಅಭ್ಯರ್ಥಿಯ ನಾಮಪತ್ರ ತಿರಸ್ಕೃತ- ನ. 26 ನಾಮಪತ್ರ ಹಿಂಪಡೆಯಲು ಕೊನೆಯ ದಿನ

ವಿಜಯಪುರ: ವಿಜಯಪುರ ಸ್ಥಳೀಯ ಸಂಸ್ಥೆಗಳಿಂದ ವಿಧಾನ ಪರಿಷತ್ತಿನ ದ್ವಿಸದಸ್ಯ ಸ್ಥಾನಕ್ಕೆ ನಡೆಯುತ್ತಿರುವ ಚುನಾವಣೆಗೆ ಸ್ಪರ್ಧಿಸಿರುವ ಅಭ್ಯರ್ಥಿಗಳ ನಾಮಪತ್ರ ಪರಿಶೀಲನೆ ಮುಕ್ತಾಯವಾಗಿದೆ. ಒಟ್ಟು 12 ಅಭ್ಯರ್ಥಿಗಳಲ್ಲಿ ಒಬ್ಬರ ನಾಮಪತ್ರ ತಿರಸ್ಕೃತವಾಗಿದೆ. ಪಕ್ಷೇತರ ಅಭ್ಯರ್ಥಿ ತುಳಸಪ್ಪ ದಾಸರ ಅವರ ನಾಮಪತ್ರ ತಿರಸ್ಕೃತವಾಗಿದೆ. ಇವರು ಈ ಹಿಂದೆ ಬಾಗಲಕೋಟೆ ಜಿಲ್ಲೆಯಲ್ಲಿ ಚುನಾವಣೆಗೆ ಸ್ಪರ್ಧಿಸಿದ ಬಳಿಕ ಚುನಾವಣೆ ವೆಚ್ಚ ಸಲ್ಲಿಸದ ಹಿನ್ನೆಲೆಯಲ್ಲಿ ಇವರನ್ನು ಚುನಾವಣೆಗೆ ಸ್ಪರ್ಧಿಸದಂತೆ ಮೂರು ವರ್ಷಗಳ ಕಾಲ ಅನರ್ಹಗೊಳಿಸಲಾಗಿದೆ‌. ಈ ಹಿನ್ನೆಲೆಯಲ್ಲಿ ಅವರ ನಾಮಪತ್ರ ತಿರಸ್ಕೃತವಾಗಿದೆ ಎಂದು ವಿಜಯಪುರ ಚುನಾವಣೆ […]

ವಿ.ಪ. ಚುನಾವಣೆ- ವಿಜಯಪುರ-ಬಾಗಲಕೋಟೆಯಿಂದ ಒಬ್ಬ ಅಭ್ಯರ್ಥಿ ಕಣಕ್ಕಿಳಿಸಲು ಚಿಂತನೆ- ಸಿದ್ಧರಾಮಯ್ಯ, ಡಿಕೆಶಿಗೆ ಕೆಲಸವಿಲ್ಲ- ಎಂ ಎಲ್ ಸಿ ಎನ್. ರವಿಕುಮಾರ

ವಿಜಯಪುರ: ವಿಧಾನ ಪರಿಷತ್ತಿನ ವಿಜಯಪುರ ಕ್ಸೇತ್ರದ ದ್ವಿಸದಸ್ಯ ಸ್ಥಾನಕ್ಕೆ ನಡೆಯುತ್ತಿರುವ ಚುನಾವಣೆಯಲ್ಲಿ ಒಬ್ಬ ಅಭ್ಯರ್ಥಿಯನ್ನು ಮಾತ್ರ ಕಣಕ್ಕಿಳಿಸುವ ಕುರಿತು ಚರ್ಚೆ ನಡೆದಿದ್ದು, ಇನ್ನೂ ಅಂತಿಮ ತೀರ್ಮಾನವಾಗಿಲ್ಲ ಎಂದು ವಿಧಾನ ಪರಿಷತ ಸದಸ್ಯ ಮತ್ತು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಎನ್. ರವಿಕುಮಾರ ತಿಳಿಸಿದ್ದಾರೆ. ವಿಜಯಪುರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಪ್ರಸಕ್ತ ವಿಧಾನ ಪರಿಷತ ಚುನಾವಣೆಯಲ್ಲಿ ರಾಜ್ಯಾದ್ಯಂತ ಕನಿಷ್ಠ 15 ಸ್ಥಾನಗಳನ್ನು ಗೆಲ್ಲುವ ವಿಶ್ವಾಸವಿದೆ.  ಈ ನಿಟ್ಟಿನಲ್ಲಿ ಕಾರ್ಯತಂತ್ರ ರೂಪಿಸಲಾಗುತ್ತಿದೆ ಎಂದು ತಿಳಿಸಿದರು. ವಿಧಾನ ಪರಿಷತ್ ಚುನಾವಣೆ […]

ಬಿಟ್ ಕಾಯಿನ್ ಪ್ರಕರಣ- ಶೇ. 100 ರಷ್ಟು ದಾಖಲೆ ಸಂಗ್ರಹ- ಸೂಕ್ತ ಸಮಯದಲ್ಲಿ ಬಿಡುಗಡೆ- ಡಿ. ಕೆ. ಶಿವಕುಮಾರ

ಬೆಂಗಳೂರು: ಬಿಟ್ ಕಾಯಿನ್ ಪ್ರಕರಣ ಸಂಬಂಧ ಶೇ. 100ರಷ್ಟು ಪರ್ಸೆಂಟ್ ದಾಖಲೆ ಸಂಗ್ರಹಿಸುತ್ತಿದ್ದೇವೆ. ಸೂಕ್ತ ಸಮಯ ಬಂದಾಗ ಅದನ್ನು ಬಿಡುಗಡೆ ಮಾಡುತ್ತೇವೆ. ನಾವು ಹೋಗಿ ಯಾವುದೇ ದಾಖಲೆ ಹುಡುಕುತ್ತಿಲ್ಲ. ಸರಕಾರದ ಮಂತ್ರಿಗಳು, ಅಧಿಕಾರಿಗಳೇ ನಮಗೆ ಅದನ್ನು ಒದಗಿಸುತ್ತಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ. ಕೆ. ಶಿವಕುಮಾರ ತಿಳಿಸಿದ್ದಾರೆ. ಬೆಂಗಳೂರಿನ ಪದ್ಮನಾಭನಗರದಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಈ ಮಾಹಿತಿ ನೀಡಿದರು. ಬಿಟ್ ಕಾಯಿನ್ ಹಗರಣದಲ್ಲಿ ಕಾಂಗ್ರೆಸ್ ಗಂಭೀರ ಆರೋಪ ಮಾಡುತ್ತಿದ್ದರೂ ಬಿಜೆಪಿ ಅದನ್ನು ಲೆಕ್ಕಕ್ಕೆ ತೆಗೆದುಕೊಳ್ಳುತ್ತಿಲ್ಲ ಎಂಬುದರ […]

ಗ್ರಾ. ಪಂ. ಸಿಬ್ಬಂದಿ ವೇತನ ವಿಚಾರ- 3 ತಿಂಗಳೊಳಗೆ ಸಮಿತಿ ವರದಿ ಜಾರಿಗೆ ಎಂ ಎಲ್ ಸಿ ಸುನೀಲಗೌಡ ಪಾಟೀಲ ಪತ್ರ

ವಿಜಯಪುರ: ಗ್ರಾಮ ಪಂಚಾಯಿತಿ ಸಿಬ್ಬಂದಿ ವೇತನ ಪಾವತಿಗೆ ಪಂಚಾಯಿತ ರಾಜ್ ಆಯುಕ್ತರ ಅಧ್ಯಕ್ಷತೆಯಲ್ಲಿ ಸಮಿತಿ ರಚಿಸಿರುವ ಸರಕಾರದ ಕ್ರಮವನ್ನು ವಿಧಾನ ಪರಿಷತ್ ಸದಸ್ಯ ಸುನೀಲಗೌಡ ಪಾಟೀಲ ಸ್ವಾಗತಿಸಿದ್ದಾರೆ.  ಅಲ್ಲದೇ, ಮೂರು ತಿಂಗಳ ಒಳಗಾಗಿ ವರದಿಯನ್ನು ಪಡೆದು, ಸಿಬ್ಬಂದಿಯ ಕುಂದು-ಕೊರತೆಗಳು ನಿವಾರಣೆ ಆಗುವ ದೃಷ್ಠಿಯಿಂದ ಕೂಡಲೇ ವರದಿಯನ್ನು ಜಾರಿಗೊಳಿಸಬೇಕು ಎಂದು ಅವರು ಒತ್ತಾಯಿಸಿದ್ದಾರೆ. ಈ ಕುರಿತು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯಿತಿ ರಾಜ್ ಸಚಿವ ಕೆ. ಎಸ್. ಈಶ್ವರಪ್ಪ ಹಾಗೂ ಪಂಚಾಯಿತಿ ರಾಜ್ ಆಯುಕ್ತರಿಗೆ ಪತ್ರ ಬರೆದಿರುವ ಅವರು, ಗ್ರಾಮ […]