ಸಿಎಂ ಭೇಟಿ ಮಾಡಿದ ಸಿಂದಗಿ ಶಾಸಕ ರಮೇಶ ಭೂಸನೂರ

ಬೆಂಗಳೂರು: ವಿಜಯಪುರ ಜಿಲ್ಲೆಯ ಸಿಂದಗಿ ಶಾಸಕರಾಗಿ ಬೈ ಎಲೆಕ್ಷನ್ ನಲ್ಲಿ ಗೆಲುವು ಸಾಧಿಸಿದ ರಮೇಶ ಭೂಸನೂರ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಭೇಟಿ ಮಾಡಿ ಕೃತಜ್ಞತೆ ಸಲ್ಲಿಸಿದ್ದಾರೆ. ಬೆಂಗಳೂರಿಗೆ ತೆರಳಿದ ಅವರು, ಸಿಎಂ ನಿವಾಸದಲ್ಲಿ ಭೇಟಿ ಮಾಡಿ ತಮ್ಮ ಗೆಲುವಿಗೆ ಸಹಕರಿಸಿದ್ದಕ್ಕಾಗಿ ಕೃತಜ್ಞತೆ ಸಲ್ಲಿಸಿದರು. ಅಲ್ಲದೇ, ಹನುಮಂತ ದೇವರ ಭಾವಚಿತ್ರ ನೀಡಿ ಗೌರವಿಸಿದರು. ಈ ಸಂದರ್ಭದಲ್ಲಿ ಜಲಸಂಪನ್ಮೂಲ ಸಚಿವ ಗೋವಿಂದ ಕಾರಜೋಳ, ಸಚಿವ ಕೆ. ಎಸ್. ಈಶ್ವರಪ್ಪ, ಮಾಜಿ ಡಿಸಿಎಂ ಲಕ್ಷ್ಮಣ ಸವದಿ ಮತ್ತು ಇತರರು ಉಪಸ್ಥಿತರಿದ್ದರು.

ಸಿಂದಗಿ ಬೈ ಎಲೆಕ್ಷನ್ ಬಿಜೆಪಿ ಭರ್ಜರಿ ಗೆಲುವಿನ ಗುಟ್ಟನ್ನು ಬಿಚ್ಚಿಟ್ಟ ಜಿಲ್ಲಾಧ್ಯಕ್ಷ ಆರ್. ಎಸ್. ಪಾಟೀಲ ಕೂಚಬಾಳ

ವಿಜಯಪುರ: ವಿಜಯಪುರ ಜಿಲ್ಲೆಯ ಸಿಂದಗಿ ಬೈ ಎಲೆಕ್ಷನ್ ನಲ್ಲಿ ಬಿಜೆಪಿ ಅಭ್ಯರ್ಥಿ ರಮೇಶ ಭೂಸನೂರ 31085 ಮತಗಳ ಭಾರಿ ಅಂತರದಿಂದ ಗೆಲುವು ಸಾಧಿಸಿರುವುದು ಸ್ವತಃ ಬಿಜೆಪಿ ನಾಯಕರಿಗೆ ಅಚ್ಚರಿ ಮೂಡಿಸಿದ್ದು, ನಿರೀಕ್ಷೆಗೂ ಮೀರಿ ಮತಗಳು ಬರಲು ಕಾರಣವೇನು ಎಂಬುದನ್ನು ವಿಜಯಪುರ ಬಿಜೆಪಿ ಜಿಲ್ಲಾಧ್ಯಕ್ಷ ಆರ್. ಎಸ್. ಪಾಟೀಲ ಕೂಚಬಾಳ ಬಿಚ್ಚಿಟ್ಟಿದ್ದಾರೆ. ವಿಜಯಪುರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ವಿಜಯಪುರ: ಸಿಂದಗಿ ಬೈ ಎಲೆಕ್ಷನ್ ನಲ್ಲಿ ಬಿಜೆಪಿಗೆ ನಿರೀಕ್ಷೆಗೂ ಮೀರಿ ಬೆಂಬಲ ಸಿಕ್ಜಿದೆ.  ಸಿಂದಗಿ ಮತದಾರರು, ಬಿಜೆಪಿ ಕಾರ್ಯಕರ್ತರಿಗೆ ಕೃತಜ್ಞತೆಗಳು.  […]

ಸಿಂದಗಿಯಲ್ಲಿ ಬಿಜೆಪಿ ಅಭ್ಯರ್ಥಿ ಗೆಲುವು ಹಿನ್ನೆಲೆ- 65 ಕಿ, ಮೀ, ದೀಡ ನಮಸ್ಕಾರ ಆರಂಭಿಸಿದ ಅಭಿಮಾನಿ

ವಿಜಯಪುರ: ವಿಜಯಪುರ ಜಿಲ್ಲೆಯ ಸಿಂದಗಿ ಬೈ ಎಲೆಕ್ಷನ್ ನಲ್ಲಿ ಬಿಜೆಪಿ ಅಭ್ಯರ್ಥಿ ರಮೇಶ ಭೂಸನೂರ 31085 ಮತಗಳ ಭಾರಿ ಅಂತರದಿಂದ ಗೆಲುವು ಸಾಧಿಸಿದ್ದು, ಈ ಗೆಲುವಿಗಾಗಿ ಹರಕೆ ಹೊತ್ತಿದ್ದ ಅಭಿಮಾನಿಗಳು ಮತ್ತು ಕಾರ್ಯಕರ್ತರು ಈಗ ಹರಕೆ ತೀರಿಸುತ್ತಿದ್ದಾರೆ. ರಮೇಶ ಭೂಸನೂರ ಮೂರನೇ ಬಾರಿಗೆ ಶಾಸಕರಾಗಿ ಆಯ್ಕೆಯಾಗಿದ್ದು, ಅದೂ ಕೂಡ ಭಾರಿ ಅಂತರದಿಂದ ಗೆಲುವು ಸಾಧಿಸಿರುವದು ರಾಜ್ಯಾದ್ಯಂತ ಈಗ ಚರ್ಚೆಗೆ ಕಾರಣವಾಗಿದೆ.  ಈ ಮಧ್ಯೆ ತಮ್ಮ ನೆಚ್ಚಿನ ನಾಯಕನ ಭರ್ಜರಿ ಗೆಲುವು ತಿಳಿದ ತಕ್ಷಣದಿಂದಲೂ ಬಿಜೆಪಿ ಕಾರ್ಯಕರ್ತರು ತರಹೇವಾಹಿ […]

ಸಿದ್ಧರಾಮಯ್ಯ ದಲಿತರ ಕ್ಷಮೆ ಯಾಚಿಸಲು ಆಗ್ರಹಿಸಿ ವಿಜಯಪುರದಲ್ಲಿ ಬಿಜೆಪಿ ಮುಖಂಡರಿಂದ ಬೃಹತ್ ಪ್ರತಿಭಟನೆ

ವಿಜಯಪುರ: ಮಾಜಿ ಮುಖ್ಯಮಂತ್ರಿ ಮತ್ತು ವಿಧಾನ ಸಭೆ ಪ್ರತಿಪಕ್ಷದ ನಾಯಕ ಎಸ್. ಸಿದ್ಧರಾಮಯ್ಯ ದಲಿತರ ಕ್ಷಮೆ ಯಾಚಿಸಬೇಕು ಎಂದು ಆಗ್ರಹಿಸಿ ಬಿಜೆಪಿ ಮುಖಂಡರು ವಿಜಯಪುರ ನಗರದಲ್ಲಿ ಬೃಹತ್ ಪ್ರತಿಭಟನೆ ನಡೆಸಿದ್ದಾರೆ. ದಲಿತರು ಹೊಟ್ಟೆ ಪಾಡಿಗಾಗಿ ಬಿಜೆಪಿಯಲ್ಲಿ ಇದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಎಸ್. ಸಿದ್ಧರಾಮಯ್ಯ ಟೀಕಿಸಿದ್ದಾರೆ ಎಂದು ಆರೋಪಿಸಲಾಗಿದೆ.  ಇದು ಬಿಜೆಪಿಯಲ್ಲಿರುವ ದಲಿತ ಮುಖಂಡರಲ್ಲಿ ಆಕ್ರೋಶಕ್ಕೆ ಕಾರಣವಾಗಿದೆ.  ಈ ಹಿನ್ನೆಲೆಯಲ್ಲಿ ವಿಜಯಪುರ ನಗರದಲ್ಲಿರುವ ಮಹಾತ್ಮಾ ಗಾಂಧಿ ವೃತ್ತದಲ್ಲಿ ಬಿಜೆಪಿ ಮುಖಂಡರು ಮತ್ತು ಕಾರ್ಯಕರ್ತರು ಬೃಹತ್ ಪ್ರತಿಭಟನೆ ನಡೆಸಿದರು. […]

ಕಾಂಗ್ರೆಸ್ ಮತದಾರರ ತೀರ್ಪನ್ನು ಗೌರವಿಸುತ್ತದೆ- ಕೆಪಿಸಿಸಿ ಸದಸ್ಯ ಸಂಗಮೇಶ ಬಬಲೇಶ್ವರ

ವಿಜಯಪುರ: ಕಾಂಗ್ರೆಸ್ ಪಕ್ಷ ಸದಾ ಜನರ ತೀರ್ಪನ್ನು ಗೌರವಿಸುತ್ತದೆ ಎಂದು ಕೆಪಿಸಿಸಿ ಸದಸ್ಯ ಸಂಗಮೇಶ ಬಬಲೇಶ್ವರ ತಿಳಿಸಿದ್ದಾರೆ. ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, ಸಿಂದಗಿ ಬೈ ಎಲೆಕ್ಷನ್ ನಲ್ಲಿ ಗೆಲುವಿನ ನಿರೀಕ್ಷೆಯನ್ನು ಇಟ್ಟುಕೊಂಡಿದ್ದೇವು.  ಆದರೆ ಜನರು ವ್ಯತಿರಿಕ್ತ ತೀರ್ಪನ್ನು ನೀಡಿದ್ದಾರೆ.  ಕಾಂಗ್ರೆಸ್ ಪಕ್ಷ ಸದಾ ಜನರ ತೀರ್ಪನ್ನು ಗೌರವಿಸುತ್ತದೆ. ಸೋಲಿನ ಆತ್ಮಾವಲೋಕನ ಮಾಡಿಕೊಂಡು ಇಂದಿನಿಂದಲೇ ಪಕ್ಷ ದ ಸಂಘಟನೆಯಲ್ಲಿ ತೊಡಗುತ್ತೇವೆ ಎಂದು ತಿಳಿಸಿದ್ದಾರೆ. ಪಕ್ಷದ ಅಭ್ಯರ್ಥಿಯ ಪರವಾಗಿ ಹಗಲಿರುಳೆನ್ನದೇ ಶ್ರಮ ವಹಿಸಿ ಕೆಲಸ ಮಾಡಿದ […]

ಸಿಂದಗಿ ಬೈ ಎಲೆಕ್ಷನ್ 2023ರ ಸಾರ್ವತ್ರಿಕ ಚುನಾವಣೆಯಲ್ಲಿ ಬಿಜೆಪಿ 140 ಸ್ಥಾನ ಗೆಲ್ಲಲು ದಿಕ್ಸೂಚಿಯಾಗಲಿದೆ- ಮಾಜಿ ಡಿಸಿಎೞ ಲಕ್ಷ್ಮಣ ಸವದಿ

ವಿಜಯಪುರ: ಸಿಂದಗಿ ಬೈ ಎಲೆಕ್ಷನ್ ನಲ್ಲಿ ಬಿಜೆಪಿ ಅಭ್ಯರ್ಥಿ ರಮೇಶ ಭೂಸನೂರ ಭರ್ಜರಿ ಗೆಲುವು ಸಾಧಿಸಿರುವುದಕ್ಕೆ ಮಾಡಿ ಡಿಸಿಎಂ ಮತ್ತು ಸಿಂದಗಿ ಬೈ ಎಲೆಕ್ಷನ್ ಬಿಜೆಪಿ ಉಸ್ತುವಾರಿ ಲಕ್ಷ್ಮಣ ಸವದಿ ಹರ್ಷ ವ್ಯಕ್ತಪಡಿಸಿದ್ದು, ಈ ಮತಕ್ಷೇತ್ರದ ಜನರ ಬೇಡಿಕೆಗಳನ್ನು ಈಡೇರಿಸುವುದಾಗಿ ತಿಳಿಸಿದ್ದಾರೆ. ವಿಜಯಪುರದಲ್ಲಿ ಮಾತನಾಡಿದ ಅವರು, ಸಿಂದಗಿ ಮತಕ್ಷೇತ್ರದ ಮತದಾರರನ್ನು ಖುಷಿ ಪಡಿಸುವ ಕೆಸಸವನ್ನು ಮಾಡುತ್ತೇವೆ.  2023ಕ್ಕೆ ಮತ್ತೆ ಬಿಜೆಪಿ ಅಭ್ಯರ್ಥಿಯನ್ನು ಗೆಲ್ಲಿಸುವಂಥ ಮನಸ್ಸನ್ನು ಪರಿವರ್ತನೆ ಮಾಡುವ ಕೆಲಸವನ್ನು ಮಾಡುತ್ತೇವೆ.  ಇದು 2023ರ ಸಾರ್ವತ್ರಿಕ ಚುನಾವಣೆಗೆ ದಿಕ್ಸೂಚಿಯಲ್ಲ.  […]

25 ಸಾವಿರ ಮತಗಳ ಅಂತರ ನಿರೀಕ್ಷಿಸಿದ್ದೆ- ಒಂದು ವಾರದಲ್ಲಿ ಎಲ್ಲ ನಾಯಕರನ್ನು ಕರೆಯಿಸಿ ವಿಜಯೋತ್ಸವ ಮಾಡುತ್ತೇವೆ ಎಂದ ಸಿಂದಗಿ ನೂತನ ಶಾಸಕ ರಮೇಶ ಭೂಸನೂರ

ವಿಜಯಪುರ: ಸಿಂದಗಿ ಬೈ ಎಲೆಕ್ಷನ್ ನಲ್ಲಿ 25 ಸಾವಿರ ಮತಗಳ ಅಂತರ ನಿರೀಕ್ಷೆ ಮಾಡಿದ್ದೆ.  ಆದರೆ, ನಿರೀಕ್ಷೆಗೂ ಮೀರಿ ಜನ ತಮಗೆ ಭಾರಿ ಅಂತರದಿಂದ ಗೆಲ್ಲಿಸಿದ್ದಾರೆ.  ಚುನಾವಣೆಯಲ್ಲಿ ಪ್ರಚಾರ ಕೈಗೊಂಡ ಎಲ್ಲ ಬಿಜೆಪಿ ನಾಯಕರನ್ನು ಕರೆಯಿಸಿ ವಿಜಯೋತ್ಸವ ಮಾಡುವುದಾಗಿ ಸಿಂದಗಿ ನೂತನ ಬಿಜೆಪಿ ಶಾಸಕ ರಮೇಶ ಭೂಸನೂರ ತಿಳಿಸಿದ್ದಾರೆ. ವಿಜಯಪುರದಲ್ಲಿ ಚುನಾವಣೆ ಗೆಲುವಿನ ಸಂದರ್ಭದಲ್ಲಿ ಮಾತನಾಡಿದ ಅವರು, ತಮ್ಮ ಗೆಲುವಿಗೆ ಬಿಜೆಪಿ ರಾಜ್ಯಾಧ್ಯಕ್ಷ ನಳೀನ ಕುಮಾರ ಕಟೀಲ, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಉಸ್ತುವಾರಿ ಲಕ್ಷ್ಮಣ ಸವದಿ, ವಿ. […]

ಮತಗಟ್ಟೆಗೆ ಬಂದು ಆರತಿ ಬೆಳಗಿ ಗಮನ ಸೆಳೆದ ಹಿಂದೂ-ಮುಸ್ಲಿಂ ಮಹಿಳೆಯರು- ಸಿಂದಗಿ ಬೈ ಎಲೆಕ್ಷನ್ ಮಂದಗತಿಯಲ್ಲಿ ಸಾಗಿರುವ ಮತದಾನ

ವಿಜಯಪುರ: ಬಸವ ನಾಡು ವಿಜಯಪುರ ಜಿಲ್ಲೆಯ ಸಿಂದಗಿ ಬೈ ಎಲೆಕ್ಷನ್ ಮತದಾನ ಆರಂಭವಾಗಿದ್ದು, ಹಿಂದೂ ಮತ್ತು ಮುಸ್ಲಿಂ ಮಹಿಳೆಯರು ಮತಗಟ್ಟೆ ಆಗಮಿಸಿ ಆರತಿ ಬೆಳಗಿ ಪೂಜೆ ಸಲ್ಲಿಸಿದ ಘಟನೆ ನಡೆದಿದೆ. ಬೆಳಿಗ್ಗೆ 7 ಗಂಟೆಯಿಂದಲೇ ಮತದಾನ ಆರಂಭವಾಗಿದ್ದು, ಸಂಜೆಯವರೆಗೆ ನಡೆಯಲಿರುವ ಮತದಾನದಲ್ಲಿ ಮತದಾರರು ಆರು ಜನ ಅಭ್ಯರ್ಥಿಗಳ ರಾಜಕೀಯ ಭವಿಷ್ಯ ಬರೆಯಲಿದ್ದಾರೆ. ಬಿಜೆಪಿಯಿಂದ ರಮೇಶ ಭೂಸನೂರ, ಕಾಂಗ್ರೆಸ್ಸಿನಿಂದ ಅಶೋಕ ಮನಗೂಳಿ ಮತ್ತು ಜೆಡಿಎಸ್ ನಿಂದ ನಾಜಿಯಾ ಶಕೀಲ ಅಂಗಡಿ ಸೇರಿದಂತೆ ಒಟ್ಟು ಆರು ಜನ ಅಭ್ಯರ್ಥಿಗಳು ಕಣದಲ್ಲಿದ್ದಾರೆ.  […]

ಸೆರಗು ಒಡ್ಡಿ ಮಗನ ಪರ ಮತಯಾಚಿಸಿದ ಕಾಂಗ್ರೆಸ್ ಅಭ್ಯರ್ಥಿ ತಾಯಿ ಸಿದ್ದಮ್ಮ ಮನಗೂಳಿ- ಬಿಜೆಪಿಯಿಂದ ಹಣ ಪಡೆದು ಕಾಂಗ್ರೆಸ್ಸಿಗೆ ಮತ ಹಾಕಿ ಎಂದ ಸಿದ್ಧರಾಮಯ್ಯ

ವಿಜಯಪುರ: ಸಿಂದಗಿ ಬೈ ಎಲೆಕ್ಷನ್ ಕಾಂಗ್ರೆಸ್ ಅಭ್ಯರ್ಥಿ ಅಶೋಕ ಮನಗೂಳಿ ಅವರ ತಾಯಿ ಮತ್ತು ದಿ. ಶಾಸಕ ಎಂ. ಸಿ. ಮನಗೂಳಿ ಅವರ ಪತ್ನಿ ಸಿದ್ದಮ್ಮ ಮನಗೂಳಿ ಇಳಿ ವಯಸ್ಸಿನಲ್ಲಿ ತಮ್ಮ ಸೆರಗನ್ನು ಚಾಚಿ ಮತದಾರರಿಂದ ಮತಭಿಕ್ಷೆ ಕೇಳಿದ ಪ್ಸಸಂಗ ವಿಜಯಪುರ ಜಿಲ್ಲೆಯ ಸಿಂದಗಿಯಲ್ಲಿ ನಡೆದಿದೆ. ಸಿಂದಗಿ ಪಟ್ಟಣದಲ್ಲಿ ನಡೆದ ಬಹಿರಂಗ ಸಭೆಯಲ್ಲಿ ಕಾರ್ಯಕ್ರಮಕ್ಕೆ ಆಗಮಿಸಿದ್ದ ಸಿದ್ದಮ್ಮ ಮನಗೂಳಿ ಮಾಜಿ ಮುಖ್ಯಮಂತ್ರಿ ಎಸ್.ಸಿದ್ಧರಾಮಯ್ಯ ಸಮ್ಮುಖದಲ್ಲಿ ತಮ್ಮ ಮಗ ಅಶೋಕ ಮನಗೂಳಿ ಪರ ಸೆರಗನ್ನು ಒಡ್ಡಿ ಮತಯಾಚಿಸಿದರು. ಇದಕ್ಕೂ […]

ಕಾಂಗ್ರೆಸ್ ನಾಯಕರಾದ ಕಾಂತಾ ನಾಯಕ, ಬಾಪುಗೌಡ ಪಾಟೀಲ ಮುಂತಾದವರಿಂದ ಸಿಂದಗಿ ಮತಕ್ಷೇತ್ರದಲ್ಲಿ ಬಿರುಸಿನ ಪ್ರಚಾರ

ವಿಜಯಪುರ: ವಿಜಯಪುರ ಜಿಲ್ಲೆಯ ಸಿಂದಗಿ ಬೈ ಎಲೆಕ್ಷನ್ ಪ್ರಚಾರ ಬಿರುಸಿನಿಂದ ಸಾಗಿದ್ದು, ಕಾಂಗ್ರೆಸ್ ನಾಯಕರು ಸಿಂದಗಿ ಮತಕ್ಷೇತ್ರಾದ್ಯಂತ ಬಿರುಸಿನ ಪ್ರಚಾರ ಕೈಗೊಂಡಿದ್ದಾರೆ. ಮಾಜಿ ಸಚಿವ ಮತ್ತು ಹೂವಿನ ಹಡಗಲಿ ಶಾಸಕ ಪಿ. ಟಿ. ಪರಮೇಶ್ವರ ನಾಯಕ, ಹಗರಿಬೊಮ್ಮನಹಳ್ಳಿ ಶಾಸಕ ಭೀಮಾ ನಾಯಕ, ವಿಧಾನ ಪರಿಷತ ಸದಸ್ಯ ಪ್ರಕಾಶ ರಾಠೋಡ, ಶಿವಕಾಂತಮ್ಮ ನಾಯಕ ಸೇರಿದಂತೆ ನಾನಾ ಮುಖಂಡರು ಸಿಂದಗಿ.ತಾಂಡಾ ಮತ್ತು ದೇವರ ನಾವದಗಿ ತಾಂಡಾಗಳಲ್ಲಿ ಬಿರುಸಿನ ಪ್ರಚಾರ ಕೈಗೊಂಡರು. ವಿಜಯಪುರ ಜಿಲ್ಲಾ ಕಿಸಾನ್ ಕಾಂಗ್ರೆಸ್ ಅಧ್ಯಕ್ಷ ಬಾಪುಗೌಡ ಎಂ. […]