ಬೈ ಎಲೆಕ್ಷನ್ ನಿಂದ ಬಿಜೆಪಿ ಅವನತಿ ಶುರವಾಗಿದೆ- ಆಲಮೇಲದಲ್ಲಿ ಡಿ ಕೆ ಶಿವಕುಮಾರ ಹೇಳಿಕೆ

ವಿಜಯಪುರ: ಬೈ ಎಲೆಕ್ಷನ್ ನಿಂದ ಬಿಜೆಪಿ ಅವನತಿ ಶುರುವಾಗಿದೆ ಎಂದು ಕಾಂಗ್ರೆಸ್ ರಾಜ್ಯಾಧ್ಯಕ್ಷ ಡಿ. ಕೆ. ಶಿವಕುಮಾರ ಹೇಳಿದ್ದಾರೆ. ವಿಜಯಪುರ ಜಿಲ್ಲೆಯ ಸಿಂದಗಿ ಬೈ ಎಲೆಕ್ಷನ್ ಪ್ರಚಾರದಲ್ಲಿರುವ ಅವರು ಆಲಮೇಲ ಪಟ್ಟಣದಲ್ಲಿ ಬಹಿರಂಗ ಪ್ರಚಾರ ಸಂದರ್ಭದಲ್ಲಿ ಮಾತನಾಡಿದರು. ಆಲಮೇಲ‌ ಪಟ್ಟಣಕ್ಕೆ ಆಗಮಿಸಿದ ಡಿ. ಕೆ. ಶಿವಕುಮಾರ ಮತ್ತು ಮಾಜಿ ಸಚಿವ ಶಿವಾನಂದ ಪಾಟೀಲ, ಈಶ್ವರ ಖಂಡ್ರೆ, ವಿಧಾನ ಪರಿಷತ ಪ್ರತಿಪಕ್ಷದ ನಾಯಕ ಎಸ್. ಆರ್. ಪಾಟೀಲ, ಇಂಡಿ ಕಾಂಗ್ರೆಸ್ ಶಾಸಕ ಯಶವಂತರಾಯಗೌಡ ಪಾಟೀಲ ಅವರನ್ನು ಕಾರ್ಯಕರ್ತರು ಹೂಮಳೆ […]

ಬೈ ಎಲೆಕ್ಷನ್ ಬಳಿಕ ಸಭೆ ನಡೆಸಿ ಆರ್ಥಿಕತೆ ಸುಧಾರಿಸಿದರೆ ಪೆಟ್ರೋಲ್, ಡೀಸೆಲ್ ಬೆಲೆ ಇಳಿಕೆ ಕುರಿತು ನಿರ್ಧಾರ- ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ಹುಬ್ಬಳ್ಳಿ: ಆರ್ಥಿಕತೆಯ ಮೇಲೆ ತೈಲ ಬೆಲೆ ಪರಿಣಾಮ ಬೀರುತ್ತದೆ.  ಈ ಹಿನ್ನೆಲೆಯಲ್ಲಿ ಬೈ ಎಲೆಕ್ಷನ್ ಬಳಿಕ ರಾಜ್ಯದ ಆರ್ಥಿಕ ಸ್ಥಿತಿಗತಿ ಕುರಿತು ಸಭೆ ನಡೆಸಿ ಚರ್ಚಿಸಿ ತೈಲ ಬೆಲೆ ಇಳಿಕೆ ಬಗ್ಗೆ ನಿರ್ಧರಿಸುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ಧಾರವಾಡ ಜಿಲ್ಲೆಯ ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು, ಬೈ ಎಲೆಕ್ಷನ್ ಬಳಿಕ ಆರ್ಥಿಕ ಸ್ಥಿತಿಗತಿ ಕುರಿತು ಸಭೆ ನಡೆಸಿ ಪರಿಶೀಲನೆ ಮಾಡುತ್ತೇನೆ.  ಆ ಸಂದರ್ಭದಲ್ಲಿ ಆರ್ಥಿಕ ಸ್ಥಿತಿ ಸುಧಾರಿಸಿದ್ದರೆ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಇಳಿಕೆ ಬಗ್ಗೆ ಪರಿಶೀಲನೆ […]

ಡಬಲ್ ಎಂಜಿನ ಸರಕಾರದಿಂದಾಗಿ ಜನಸಾಮಾನ್ಯರು ಹೈರಾಣಾಗಿದ್ದಾರೆ- ಬೆಲೆ ಏರಿಕೆ ಜನಜೀವನವನ್ನು ಮತ್ತೆ ಹಳೆಯ ದಿನಗಳಿಗೆ ತಳ್ಳುತ್ತಿದೆ- ಎಂ ಎಲ್ ಸಿ ಸುನೀಲಗೌಡ ಪಾಟೀಲ

ವಿಜಯಪುರ: ಡಬಲ್ ಎಂಜಿನ್ ಸರಕಾರದಿಂದ ದೇಶ ಮತ್ತು ರಾಜ್ಯದಲ್ಲಿ ಜನಸಾಮಾನ್ಯರು ಹೈರಾಣಾಗಿದ್ದು, ಜನತೆಯ ಬದುಕನ್ನು ಹಳೆಯ ದಿನಗಳತ್ತ ತಳ್ಳುತ್ತಿದೆ ಎಂದು ವಿಧಾನ ಪರಿಷತ ಕಾಂಗ್ರೆಸ್ ಸದಸ್ಯ ಸುನೀಲಗೌಡ ಪಾಟೀಲ ಆರೋಪಿಸಿದ್ದಾರೆ. ವಿಜಯಪುರ ಜಿಲ್ಲೆಯ ಸಿಂದಗಿ ಬೈ ಎಲೆಕ್ಷನ್ ಪ್ರಚಾರದಲ್ಲಿರುವ ಅವರು, ಆಲಮೇಲ ತಾಲೂಕಿನ ರಾಮನಳ್ಳಿ, ಗುಡ್ಡಳ್ಳಿ, ತೋಂಟಾಪುರ, ವಿಭೂತಿಹಳ್ಳಿಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪರ ಬಿರುಸಿನ ಪ್ರಚಾರ ನಡೆಸಿ ಮಾತನಾಡಿದರು.     ಇಂದಿನ ಆಧುನಿಕ ಯುಗದಲ್ಲಿ ತಂತ್ರಜ್ಞಾನ ಹಳ್ಳಿ ಹಳ್ಳಿಗೂ ತಲುಪಿದೆ.  ಪ್ರತಿಯೊಬ್ಬರ ಬೆರಳ ತುದಿಯಲ್ಲಿ ವ್ಯವಹಾರ […]

ಅವರ ಅಪ್ಪನಿಗೆ ಹುಟ್ಟಿದ್ದರೆ, ತಾಕತ್ತಿದ್ದರೆ ಸಿಡಿ ಬಿಡುಗಡೆ ಮಾಡಲಿ- ಯತ್ನಾಳ ಸವಾಲು

ವಿಜಯಪುರ: ಅವರಪ್ಪನಿಗೆ ಹುಟ್ಟಿದ್ದರೆ ಅವರು ಯಾವ ಸಿಡಿ ಇವೆ ಎನ್ನುತ್ತಿದ್ದಾರೆ ಅವುಗಳನ್ನು ಬಿಡುಗಡೆ ಮಾಡಲಿ ಎಂದು ವಿಜಯಪುರ ನಗರ ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳ ಸವಾಲು ಹಾಕಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ತಮ್ಮ ವಿರುದ್ಧ ಸಿಡಿ ಬಿಡುಗಡೆ ಬೆದರಿಕೆ ಫೋಟೋ ವೈರಲ್ ವಿಚಾರ ವಿರುದ್ಧ ವಿಜಯಪುರ ನಗರ ಯತ್ನಾಳ ಖಾರವಾಗಿ ಪ್ರತಿಕ್ರಿಯೆ ನೀಡಿದ್ದಾರೆ. ಇದರಲ್ಲಿ ಯಾರ‌್ಯಾರು ಇದ್ದಾರೆ ಎಲ್ಲವೂ ಗೊತ್ತಿದೆ. ದಾಖಲೆ ಸಮೇತ ನಮ್ಮ ಬಳಿ ಮಾಹಿತಿ ಇದೆ. ಅವರಿಗೆಲ್ಲ ಸರಿಯಾಗಿ ತಕ್ಕ ಶಾಸ್ತಿ ಆಗುತ್ತದೆ. ನಮ್ಮ […]

ಬೈ ಎಲೆಕ್ಷನ್- ಅ. 17 ರಿಂದ ಸಿಎಂ ಬೊಮ್ಮಾಯಿ, ಅ. 20ರ ನಂತರ ಮಾಜಿ ಸಿಎಂ ಯಡಿಯೂರಪ್ಪ ಪ್ರಚಾರ

ಬೆಂಗಳೂರು: ವಿಜಯಪುರ ಜಿಲ್ಲೆಯ ಸಿಂದಗಿ ಮತ್ತು ಹಾವೇರಿ ಜಿಲ್ಲೆಯ ಹಾನಗಲ ಬೈ ಎಲೆಕ್ಷನ್ ಪ್ರಚಾರಕ್ಕೆ ತೆರಳಲು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮತ್ತು ಮಾಜಿ ಸಿಎಂ ಬಿ. ಎಸ್. ಯಡಿಯೂರಪ್ಪ ಸಿದ್ಧತೆ ನಡೆಸಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿ ಪ್ರತಿಕ್ರಿಯೆ ನೀಡಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಅ. 17 ರಂದು ಹಾನಗಲ್ ನಲ್ಲಿ ಬಿಜೆಪಿ ಅಭ್ಯರ್ಥಿ ಪರ ಪ್ರಚಾರ ಮಾಡುವುದಾಗಿ ತಿಳಿಸಿದರು.  ನಂತರ ಎರಡು ದಿನ ಸಿಂದಗಿಯಲ್ಲಿ ಪ್ರಚಾರ ಕೈಗೊಳ್ಳುವುದಾಗಿ ಅವರು ಮಾಹಿತಿ ನೀಡಿದರು. ಇದೇ ವೇಳೆ ಮಾಜಿ ಸಿಎಂ […]

ಸಿಂದಗಿ ಬೈ ಎಲೆಕ್ಷನ್- ಕಾಂಗ್ರೆಸ್ ಅಭ್ಯರ್ಥಿ ಪರ ಎಂ ಎಲ್ ಸಿ ಸುನೀಲಗೌಡ ಪಾಟೀಲ ಪ್ರಚಾರ

ವಿಜಯಪುರ: ವಿಜಯಪುರ ಜಿಲ್ಲೆಯ ಸಿಂದಗಿಯಲ್ಲಿ ಕಾಂಗ್ರೆಸ್ ಬಿರುಸಿನ ಪ್ರಚಾರ ಆರಂಭಿಸಿದೆ. ವಿಧಾನ ಪರಿಷತ ಸದಸ್ಯ ಸುನೀಲಗೌಡ ಪಾಟೀಲ ಕಾಂಗ್ರೆಸ್ ಅಭ್ಯರ್ಥಿ ಅಶೋಕ ಮನಗೂಳಿ ಪರ ಬಿರುಸಿನ ಪ್ರಚಾರ ನಡೆಸಿದ್ದಾರೆ.   ಮೊದಲಿಗೆ ಸುರಗಿಹಳ್ಳಿ ಗ್ರಾಮದಲ್ಲಿ ಅವರು ಪ್ರಚಾರ ಕೈಗೊಂಡರು.   ನಂತರ ಬಳಗಾನೋ ಗ್ರಾಮಕ್ಕೆ ತೆರಳಿದ ಅವರು ಮತಯಾಚನೆ ನಡೆಸಿದರು.   ಬಳಿಕ‌.ನಾಗರಹಳ್ಳಿ ಗ್ರಾಮದದಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಅಶೋಕ ಮನಗೂಳಿ ಪರ ಸುನೀಲಗೌಡ ಪಾಟೀಲ ಮತಯಾಚನೆ ನಡೆಸಿದರು. ಈ ಸಂದರ್ಭದಲ್ಲಿ ಕೆಪಿಸಿಸಿ ಸಂಚಾಲಕ ಮಲ್ಲನಗೌಡ ಬಿರದಾರ […]

ಸಿಎಂ ಬದಲಾವಣೆ ವಿರುದ್ಧ ಬಸವ ನಾಡಿನಲ್ಲಿ 20 ಸ್ವಾಮೀಜಿಗಳಿಂದ ಜಂಟಿ ಸುದ್ದಿಗೋಷ್ಠಿ- ಬೆಂಗಳೂರು, ದೆಹಲಿಯಲ್ಲಿ ಸಭೆಯ ಎಚ್ಚರಿಕೆ

ವಿಜಯಪುರ: ವಿಜಯಪುರದಲ್ಲಿ ವಿಜಯಪುರ ಮತ್ತು ಬಾಗಲಕೋಟೆ ಜಿಲ್ಲೆಯ ವೀರಶೈವ ಲಿಂಗಾಯಿತ ಮಠಗಳ 20 ಜನ ಸ್ವಾಮೀಜಿಗಳು ಜಂಟಿ ಸುದ್ದಿಗೋಷ್ಠಿ ನಡೆಸಿ ಸಿಎಂ ಬಿ. ಎಸ್. ಯಡಿಯೂರಪ್ಪ ಪರ ಭರ್ಜರಿ ಬ್ಯಾಟಿಂಗ್ ನಡೆಸಿದ್ದಾರೆ. ಯಡಿಯೂರಪ್ಪ ಅವರನ್ನು ಎರಡು ವರ್ಷಗಳ ಕಾಲ ಸಿಎಂ ಆಗಿ ಮುಂದುವರೆಸಬೇಕು. ಯಾವುದೇ ಕಾರಣಕ್ಕೂ ಬದಲಾವಣೆ ಮಾಡಬಾರದು. ‌ಒಂದು ವೇಳೆ ಬದಲಾವಣೆ ಮಾಡಿದರೆ ಉತ್ತರ ಕರ್ನಾಟಕದವರಿಗೆ ಆ ಸ್ಥಾನ ನೀಡಬೇಕು ಎಂದು ಮಠಾಧೀಶರು ಆಗ್ರಹಿಸಿದ್ದಾರೆ. ಬುರಣಾಪುರ ಸಿದ್ಧಾರೂಢ ಮಠದ ಯೋಗೇಶ್ವರಿ ಮಾತಾಜಿ ಮಾತನಾಡಿ, ಯಡಿಯೂರಪ್ಪ ಧೀಮಂತ […]

ಸಿಎಂ ವಿರುದ್ಧ ಷಡ್ಯಂತ್ರ ನಡೆಸುತ್ತಿರುವ ಸಚಿವರು, ಶಾಸಕರ ವಿರುದ್ಧ ಕ್ರಮ ಕೈಗೊಳ್ಳಲು ಶಾಸಕ ಎ. ಎಸ್. ಪಾಟೀಲ ನಡಹಳ್ಳಿ ಆಗ್ರಹ

ವಿಜಯಪುರ: ಸಿಎಂ ಬದಲಾವಣೆ ಕುರಿತು ಷಡ್ಯಂತ್ರ ನಡೆಸುತ್ತಿರುವ ಸಚಿವರನ್ನು ಸಂಪುಟದಿಂದ ಕೈ ಬಿಡಬೇಕು ಮತ್ತು ಇದರಲ್ಲಿ ಶಾಮೀಲಾಗಿರವ ಶಾಸಕರ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಬೇಕು ಎಂದು ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ಬಿಜೆಪಿ ಶಾಸಕ ಮತ್ತು ರಾಜ್ಯ ಆಹಾರ ಮತ್ತು ನಾಗರಿಕ ಸರಬರಾಜು ನಿಗಮದ ಅಧ್ಯಕ್ಷ ಎ. ಎಸ್. ಪಾಟೀಲ ನಡಹಳ್ಳಿ ಆಗ್ರಹಿಸಿದ್ದಾರೆ. ವಿಜಯಪುರ ಜಿಲ್ಲೆಯ ಮುದ್ದೇಬಿಹಾಳದಲ್ಲಿ ಮಾತನಾಡಿದ ಅವರು, ಮುಖ್ಯಮಂತ್ರಿ ಬದಲಾವಣೆ ಕೇವಲ ಗಾಳಿ ಸುದ್ದಿ. ಮುಂದಿನ ಸಾರ್ವತ್ರಿಕ ಚುನಾವಣೆಯವರೆಗೂ ಯಡಿಯೂರಪ್ಪ ಅವರೇ ಮುಖ್ಯಮಂತ್ರಿಯಾಗಿರುತ್ತಾರೆ. ಇದರಲ್ಲಿ ಯಾವುದೇ […]

ಲಾಕಡೌನ್ ನಿಂದ ಬಡವರು ಸಂಕಷ್ಟಕ್ಕೆ ಸಿಲುಕುತ್ತಾರೆ- ಲಾಕಡೌನ್ ಬೇಡ ಎಂದ ಸಂಸದ ರಮೇಶ ಜಿಗಜಿಣಗಿ

ವಿಜಯಪುರ- ಕೊರೊನಾ 2ನೇ ಅಲೆ ಹೆಚ್ಚಾಗುತ್ತಿರುವುದರಿಂದ ಒಂದು ವೇಳೆ ಲಾಕಡೌನ್ ಮಾಡಿದರೆ ಬಡವರು ಸಂಕಷ್ಟಕ್ಕೆ ಸಿಲುಕುತ್ತಾರೆ. ಈ ಹಿನ್ನೆಲೆಯಲೆಯಲ್ಲಿ ಲಾಕಡೌನ್ ಬದಲು ಪರ್ಯಾಯ ಮಾರ್ಗಗಳತ್ತ ಚಿಂತನೆ ನಡೆಸಬೇಕು ಎಂದು ವಿಜಯಪುರ ಬಿಜೆಪಿ ಸಂಸದ ರಮೇಶ ಜಿಗಜಿಣಗಿ ರಾಜ್ಯ ಸರಕಾರಕ್ಕೆ ಸಲಹೆ ನೀಡಿದ್ದಾರೆ.ವಿಜಯಪುರ ಜಿಲ್ಲೆಯ ಬುರಣಾಪುರದಲ್ಲಿ ಮಾತನಾಡಿದ ಅವರು, ದಿನೇ ದಿನೇ ರಾಜ್ಯದಲ್ಲಿ ಕೊರೊನಾ ಸೋಂಕು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ರಾಜ್ಯ ಸರಕಾರ ಕೊರೊನಾ 2ನೇ ಅಲೆ ನಿಯಂತ್ರಿಸಲು ಲಾಕಡೌನ್ ಬಗ್ಗೆ ಚಿಂತನೆ ನಡೆಸಿದೆ. ಆದರೆ, ಲಾಕಡೌನ್ ಮಾಡಿದರೆ ಸಾಲಸೋಲ […]

ಅಭಿವೃದ್ಧಿಗೆ ಗ್ರಾ. ಪಂ. ಸದಸ್ಯರು, ಪಿಡಿಓಗಳು ಶ್ರಮಿಸಲು ವಿಧಾನ ಪರಿಷತ ಸದಸ್ಯ ಸುನೀಲಗೌಡ ಪಾಟೀಲ ಕರೆ

ಬಸವ ನಾಡು ವಿಜಯಪುರ- ಗ್ರಾ. ಪಂ. ಸದಸ್ಯರು ಮತ್ತು ಪಿಡಿಓಗಳು ಸರಕಾರದ ಯೋಜನೆಗಳನ್ನು ಫಲಾನುಭವಿಗಳಿಗೆ ತಲುಪಿಸುವ ನಿಟ್ಟಿನಲ್ಲಿ ಪ್ರಾಮಾಣಿಕವಾಗಿ ಶ್ರಮಿಸಬೇಕು. ಈ ಮೂಲಕ ಗ್ರಾಮಗಳ ಅಭಿವೃದ್ಧಿಗೆ ಮುಂದಾಗಬೇಕು ಎಂದು ವಿಧಾನ ಪರಿಷತ ಕಾಂಗ್ರೆಸ್ ಸದಸ್ಯ ಸುನೀಲಗೌಡ ಪಾಟೀಲ ಕರೆ ನೀಡಿದ್ದಾರೆ.ವಿಜಯಪುರ ನಗರದ ಶ್ರೀ ಸಂಗನ ಬಸವ ಕಲ್ಯಾಣ ಮಂಟಪದಲ್ಲಿ ನಡೆದ ವಿಜಯಪುರ ತಾಲೂಕು ಪಂಚಾಯಿತಿ ವ್ಯಾಪ್ತಿಯ ಗ್ರಾಮ ಪಂಚಾಯಿತಿಗಳ ಪ್ರಗತಿ ಪರಿಶೀಲನೆ ಸಭೆ, ಅಹವಾಲು ಸ್ವೀಕಾರ ಮತ್ತು ಗ್ರಾಮ ಪಂಚಾಯಿತಿಗೆ ನೂತನವಾಗಿ ಆಯ್ಕೆಯಾದ ಸದಸ್ಯರಿಗೆ ಸನ್ಮಾನ ಕಾರ್ಯಕ್ರಮದ […]