ಬಡವರು, ದೀನದಲೀತರು, ಕಾರ್ಮಿಕರು, ಅಲ್ಪಸಂಖ್ಯಾತರು, ಹಿಂದುಳಿದವರ ಏಳಿಗೆಗಾಗಿ ಕಾಂಗ್ರೆಸ್ ಕೆಲಸ ಮಾಡುತ್ತಿದೆ- ಅಭಿಷೇಕ ದತ್ತ

ವಿಜಯಪುರ: ಕಾಂಗ್ರೆಸ್ ಪಕ್ಷ ಬಡವರು, ರೈತರು, ಕಾರ್ಮಿಕರು, ದೀನದಲಿತರು, ಅಲ್ಪಸಂಖ್ಯಾತರು ಹಾಗೂ ಹಿಂದುಳಿದವರನ್ನು ಸಾಮಾಜಿಕ, ಆರ್ಥಿಕ, ಶೈಕ್ಷಣಿಕವಾಗಿ ಸೇರಿದಂತೆ ಎಲ್ಲ ರಂಗಗಳಲ್ಲಿ ಏಳಿಗೆಯಾಗಲು ಶ್ರಮಿಸುತ್ತಿದೆ ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ಅಭಿಷೇಕ ದತ್ತ ಹೇಳಿದ್ದಾರೆ. ವಿಜಯಪುರದಲ್ಲಿ ಪಕ್ಷದ ಕಚೇರಿಗೆ ಭೇಟಿ ನೀಡಿದ ಅವರು, ಮುಂಬರುವ ಲೋಕಸಭೆ ಚುನಾವಣೆ ಮತ್ತು ಪಕ್ಷದ ಮುಖಂಡರನ್ನು ಹಾಗೂ ಕಾರ್ಯಕರ್ತರನ್ನು ನಿಗಮ ಮಂಡಳಿಗಳಲ್ಲಿ ನೇಮಕದ ಕುರಿತು ಮತ್ತು ಕೆಪಿಸಿಸಿ ಘೋಷಣೆ ಮಾಡಿರುವ ಗ್ಯಾರಂಟಿ ಯೋಜನೆಗಳನ್ನು ಜನರಿಗೆ ಸರಿಯಾದ ರೀತಿಯಲ್ಲಿ ಮುಟ್ಟಿಸುವ ಕುರಿತು ಕಾಂಗ್ರೆಸ್ […]

ಎಲ್ಲರನ್ನು ವಿಶ್ವಾಸಕ್ಕೆ ಪಡೆದು ಜವಾಬ್ದಾರಿಯನ್ನು ಸಮರ್ಥವಾಗಿ ನಿಭಾಯಿಸುವೆ- ಆರ್. ಎಸ್. ಪಾಟೀಲ ಕೂಚಬಾಳ

ವಿಜಯಪುರ: ಪಕ್ಷದ ಕಾರ್ಯಕರ್ತರು ಮತ್ತು ಹಿರಿ ಮುಖಂಡರ ಆಶೀರ್ವಾದದಿಂದ ತಮಗೆ ಮತ್ತೋಮ್ಮೆ ಬಿಜೆಪಿ ಜಿಲ್ಲಾಧ್ಯ್ಕಷ ಸ್ಥಾನದ ಜವಾಬ್ದಾರಿ ಒಲಿದು ಬಂದಿದೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಆರ್. ಎಸ್. ಪಾಟೀಲ ಕೂಚಬಾಳ ತಿಳಿಸಿದ್ದಾರೆ. ವಿಜಯಪುರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಮಮಂದಿರ ಲೋಕಾರ್ಪಣೆಯ ಈ ಶುಭ ಸಂದರ್ಭದಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷನಾಗಿ ಪುನರಾಯ್ಕೆಯಾಗಿರುವುದು ನನ್ನ ಸುದೈವ.  ಜಿಲ್ಲಾ ಬಿಜೆಪಿಯಲ್ಲಿ ಯಾವ ಬಣವೂ ಇಲ್ಲ.  ಎಲ್ಲ ನಾಯಕರು ನನ್ನ ಆಯ್ಕೆಗೆ ಸಹಕರಿಸಿ ಈ ಜವಾಬ್ದಾರಿಯನ್ನು ಹೊರೆಸಿದ್ದಾರೆ, ಅವರ ವಿಶ್ವಾಸವನ್ನು ಉಳಿಸಿಕೊಳ್ಳುವ ನಿಟ್ಟಿನಲ್ಲಿ ಪ್ರಾಮಾಣಿಕವಾಗಿ […]

2024 ಮತ್ತೊಮ್ಮೆ ಮೋದಿ: ವಿಜಯಪುರ ಬಿಜೆಪಿ ಜಿಲ್ಲಾ ಕಾರ್ಯಾಲಯದಲ್ಲಿ ಗೋಡೆ ಬರಹಕ್ಕೆ ಚಾಲನೆ

ವಿಜಯಪುರ: 2024 ಮತ್ತೊಮ್ಮೆ ಮೋದಿ ಎಂಬ ಗೋಡೆ ಬರಹವನ್ನು ವಿಜಯಪುರದ ಬಿಜೆಪಿ ಜಿಲ್ಲಾ ಕಾರ್ಯಾಲಯದಲ್ಲಿ ಬರೆಯುವ ಮೂಲಕ ಬಿಜೆಪಿ ಎಸ್.ಸಿ. ಮೋರ್ಚಾ ರಾಜ್ಯ ಪ್ರಧಾನ ಕಾರ್ಯದರ್ಶಿ ಉಮೇಶ ಕಾರಜೋಳ ಚಾಲನೆ ನೀಡಿದರು. ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಎಲ್ಲ ವಾರ್ಡ್ ಗಳಲ್ಲಿ ಈ ಸಂದೇಶದ ಗೋಡೆಬರಹವನ್ನು ಬರೆಯುವ ಕಾರ್ಯಕ್ರಮವನ್ನು ಜಿಲ್ಲಾ ಬಿಜೆಪಿ ರೂಪಿಸಿರುವ ಈ ಕಾರ್ಯಕ್ರಮಕ್ಕೆ ಅವರು ಚಾಲನೆ ನೀಡಿದರು. ಬಳಿಕ ಮಾತನಾಡಿದ ಅವರು, ದೇಶ ಇನ್ನಷ್ಟೂ ಅಭಿವೃದ್ಧಿ ಪಥದತ್ತ ಮುನ್ನಡೆಯಲು ಮೋದಿಜಿ ಅವರು ಇನ್ನೊಮ್ಮೆ ಪ್ರಧಾನಿಯಾಗಬೇಕು.  ಭಾರತವನ್ನು […]

ಮುಂದಿನ ವರ್ಷ ವಿಜಯಪುರ ಮೇಯರ್, ಉಪಮೇಯರ್ ಚುನಾವಣೆ- ದಿನಾಂಕ ಯಾವುದು ಗೊತ್ತಾ?

ವಿಜಯಪುರ: ಬಹುನಿರೀಕ್ಷಿತ ವಿಜಯಪುರ ಮಹಾನಗರ ಪಾಲಿಕೆ ಮೇಯರ್ ಮತ್ತು ಉಪಮೇಯರ್ ಚುನಾವಣೆಗೆ ಕೊನೆಗೂ ದಿನಾಂಕ ನಿಗದಿಯಾಗಿದೆ.  ಕಾರ್ಪೋರೇಟರ್ ಗಳಾಗಿ ಆಯ್ಕೆಯಾಗಿ ಒಂದು ವರ್ಷ ಎರಡು ತಿಂಗಳ ನಂತರ ಮೇಯರ್ ಮತ್ತು ಉಪಮೇಯರ್ ಚುನಾವಣೆ ದಿನಾಂಕ ನಿಗದಿ ಮಾಡಲಾಗಿದೆ. ಈ ಹಿಂದೆ ಮೂರ್ನಾಲ್ಕು ಬಾರಿ ಚುನಾವಣೆ ದಿನಾಂಕ ನಿಗದಿಯಾಗಿತ್ತು.  ಆದರೆ, ನಾನಾ ಕಾರ್ಪೋರೇಟರ್ ಗಳು ಮೇಯರ್ ಮತ್ತು ಉಪಮೇಯರ್ ಸ್ಥಾನಗಳಿಗೆ ನಿಗದಿಯಾಗಿರುವ ಮೀಸಲಾತಿ ಪ್ರಶ್ನಿಸಿ ಕಲಬುರಗಿ ಹೈಕೋರ್ಟ್ ಮೊರೆ ಹೋಗಿದ್ದರು.  ಈ ಕುರಿತು ವಿಚಾರಣೆ ನಡೆಸಿದ ಹೈಕೋರ್ಟ್ ಪೀಠ […]

ಇಂಡಿ ನೂತನ ಜಿಲ್ಲೆಯಾಗಲು ಕಾಲ ಇನ್ನೂ ಪಕ್ವವಾಗಿಲ್ಲ- ಡಿ. 29ರ ಸಭೆ ರದ್ದು ಪಡಿಸಬೇಕು- ಮಾಜಿ ಎಂಎಲ್ಸಿ ಅರುಣ ಶಹಾಪುರ

ವಿಜಯಪುರ: ಇಂಡಿ ನೂತನ ಜಿಲ್ಲೆಯಾಗಲು ಕಾಲ ಇನ್ನೂ ಪಕ್ವವಾಗಿಲ್ಲ.  ಹೀಗಾಗಿ ಡಿಸೆಂಬರ್ 29 ರಂದು ಈ ಕುರಿತು ಕರೆಯಲಾದ ಸಭೆಯನ್ನು ರದ್ದು ಪಡಿಸಬೇಕು ಎಂದು ವಿಧಾನ ಪರಿಷತ ಮಾಜಿ ಸದಸ್ಯ ಅರುಣ ಶಹಾಪುರ ಹೇಳಿದ್ದಾರೆ. ವಿಜಯಪುರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಇಂಡಿ ನೂತನ ಜಿಲ್ಲೆ ಮಾಡುವ ಕುರಿತು ಜನಾಭಿಪ್ರಾಯ ಸಂಗ್ರಹಿಸಲು ಸಿಂದಗಿ ತಹಸೀಲ್ದಾರರು ಡಿಸೆಂಬರ್ 29 ರಂದು ಸಭೆ ಕರೆದಿದ್ದಾರೆ.  ಇದು ಸರಿಯಲ್ಲ.  ಸರಕಾರ ವಿಜಯಪುರ ಜಿಲ್ಲೆಯನ್ನು ವಿಭಜಿಸುವ ಪ್ರಸ್ತಾಪ ಹೊಂದಿದೆಯೇ ಎಂಬುದನ್ನು ಸರಕಾರ ಸ್ಪಷ್ಟಪಡಿಸಬೇಕು ಎಂದು […]

ಭ್ರಷ್ಚಾಚಾರ ಆರೋಪ- ಶಾಸಕರ ವಿಚಾರಣೆ ನಡೆಸಬೇಕು- ಬಿಜೆಪಿ ನಾಯಕರ ಮೌನ, ಸಮ್ಮತಿ ಲಕ್ಷಣಂ ಎಂಬಂತಿದೆ- ಎಸ್. ಎಂ. ಪಾಟೀಲ ಗಣಿಹಾರ

ವಿಜಯಪುರ: ಬಿಜೆಪಿ ಸರಕಾರದ ಅವಧಿಯಲ್ಲಿ ಕೊರೊನಾ ನಿರ್ವಹಣೆಯಲ್ಲಿ ರೂ. 40 ಸಾವಿರ ಕೋ. ಭ್ರಷ್ಟಾಚಾರ ನಡೆದಿದೆ ಎಂದು ಆರೋಪಿಸಿರುವ ಶಾಸಕ ಬಸನಗೌಡ ಪಾಟೀಲ ಯತ್ನಾಳ ಅವರನ್ನು ವಿಚಾರಣೆ ನಡೆಸಿ ಮತ್ತಷ್ಟು ಸತ್ಯಾಂಶ ಹೊರಬರಲು ಕ್ರಮ ಕೈಗೊಳ್ಳಬೇಕು ಎಂದು ಕಾಂಗ್ರೆಸ್ ಮುಖಂಡ ಎಸ್. ಎಂ. ಪಾಟೀಲ ಗಣಿಹಾರ ಆಗ್ರಹಿಸಿದ್ದಾರೆ. ವಿಜಯಪುರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಯತ್ನಾಳ ಅವರ ಹೇಳಿಕೆಯನ್ನು ರಾಜ್ಯ ಸರಕಾರ ಗಂಭೀರವಾಗಿ ಪರಿಗಣಿಸಬೇಕು.  ಈ ಕುರಿತು ಯತ್ನಾಳ ಅವರನ್ನು ವಿಚಾರಣೆ ನಡೆಸಿದರೆ ಮತ್ತಷ್ಟು ಸತ್ಯಾಂಶ ಹೊರಬರಲಿದೆ.  ಹೀಗಾಗಿ […]

ಓಡಿಶಾ ಕಾಂಗ್ರೆಸ್ ಸಂಸದರ ಧೀರಜ ಸಾಹು ಬಂಧಿಸಲು ಆಗ್ರಹ- ವಿಜಯಪುರದಲ್ಲಿ ಬಿಜೆಪಿ ಪ್ರತಿಭಟನೆ

ವಿಜಯಪುರ: ಒಡಿಶಾದ ಕಾಂಗ್ರೆಸ್‌ ಸಂಸದ ಧೀರಜ ಸಾಹು ಅವರ ಮನೆಯಲ್ಲಿ ರೂ. 300 ಕೋ.  ಗೂ ಹೆಚ್ಚು ನಗದು ಹಣ ಪತ್ತೆಯಾಗಿದ್ದು, ಕೂಡಲೇ ಭ್ರಷ್ಟ ಸಂಸದರನ್ನು ಬಂಧಿಸಬೇಕು ಎಂದು ಆಗ್ರಹಿಸಿ ಬಿಜೆಪಿ ವತಿಯಿಂದ ನಗರದಲ್ಲಿ ಪ್ರತಿಭಟನೆ ನಡೆಸಲಾಯಿತು. ನಗರದ ಶ್ರೀ ಸಿದ್ದೇಶ್ಶ್ವರ ದೇವಾಸ್ಥಾನದ ಎದುರು ನಡೆದ ಪ್ರತಿಭಟನೆಯಲ್ಲಿ ಮಾತನಾಡಿದ ಬಿಜೆಪಿ ಜಿಲ್ಲಾಧ್ಯಕ್ಷ ಆರ್. ಎಸ್. ಪಾಟೀಲ ಕೂಚಬಾಳ, ಕಾಂಗ್ರೆಸ್‌ನ ರಾಜ್ಯಸಭೆ ಸದಸ್ಯ ಧೀರಜ ಸಾಹು ಅವರ ಮನೆಯಲ್ಲಿ ಕೋಟ್ಯಂತರ ನಗದು ಪತ್ತೆಯಾಗಿದೆ.  ಇದರಿಂದಾಗಿ ಕಾಂಗ್ರೆಸ್ ಪ್ರಜಾಪ್ರಭುತ್ವ ವಿರೋಧಿ, […]

ವಿಜಯಪುರ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಇಂದಿರಾ ಗಾಂಧಿಯವರ 106ನೇ ಜನ್ಮದಿನ ಆಚರಣೆ

ವಿಜಯಪುರ: ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಭಾರತರತ್ನ ಮಾಜಿ ಪ್ರಧಾನಿ ದಿ. ಇಂದಿರಾ ಗಾಂಧಿಯವರ 106ನೇ ಜನ್ಮದಿನ ಆಚರಿಸಲಾಯಿತು.  ಕಾಂಗ್ರೆಸ್ ಜಿಲ್ಲಾಧ್ಯಕ್ಷ ಪ್ರೊ. ರಾಜು ಆಲಗೂರ ನೇತೃತ್ವದಲ್ಲಿ ನಡೆದ ಕಾರ್ಯಕ್ರಮದಲ್ಲಿ ಇಂದಿರಾ ಗಾಂಧಿ ಅವರ ಭಾವಚಿತ್ರಕ್ಕೆ ನಾನಾ ಮುಖಂಡರು ನಮನ ಸಲ್ಲಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಪ್ರೊ. ರಾಜು ಆಲಗೂರ, ಇಂದಿರಾ ಗಾಂಧಿ ದೇಶದ ಅವರು ಮೊದಲ ಮಹಿಳಾ ಪ್ರಧಾನಿಯಾಗಿ ಬಾಳಿನುದ್ದಕ್ಕೂ ಹೋರಾಡಿ ಭಾರತದ ಸರ್ವತೋಮುಖ ಅಬಿವೃದ್ಧಿ ಮತ್ತು ಐಕ್ಯತೆಗೆ ಶ್ರಮಿಸಿದ ದಿಟ್ಟ, ಉಕ್ಕಿನ ಮಹಿಳೆಯಾಗಿದ್ದಾರೆ.  ಸ್ತ್ರೀ ಅಬಲೆಯಲ್ಲ.  […]

ಬಿಜೆಪಿ ರಾಜ್ಯಾಧ್ಯಕ್ಷ, ಪ್ರತಿಪಕ್ಷದ ನಾಯಕನ ಆಯ್ಕೆಯಲ್ಲಿ ಉ.ಕ, ಲಿಂಗಾಯಿತ, ಪಂಚಮಸಾಲಿ ಸಮುದಾಯಕ್ಕೆ ಅನ್ಯಾಯ ಮಾಡಿದೆ- ಕೂಡಲ ಸಂಗಮ ಸ್ವಾಮೀಜಿ

ವಿಜಯಪುರ: ಬಿಜೆಪಿ ರಾಜ್ಯಾಧ್ಯ್ಕಕ್ಷ ಮತ್ತು ಪ್ರತಿಪಕ್ಷದ ನಾಯಕನ ಆಯ್ಕೆಯಲ್ಲಿ ಉತ್ತರ ಕರ್ನಾಟಕ, ಲಿಂಗಾಯಿತ ಹಾಗೂ ಪಂಚಮಸಾಲಿ ಲಿಂಗಾಯಿತ ಸಮಾಜಕ್ಕೆ ಅನ್ಯಾಯ ಮಾಡಲಾಗಿದೆ ಎಂದು ಕೂಡಲ ಸಂಗಮ ಲಿಂಗಾಯಿತ ಪಂಚಮಸಾಲಿ ಪೀಠದ ಜಗದ್ಗುರು ಬಸವಜಯ ಮೃತ್ಯುಂಜಯ ಸ್ವಾಮೀಜಿ ಆರೋಪಿಸಿದ್ದಾರೆ. ವಿಜಯಪುರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬಿಜೆಪಿ ರಾಜ್ಯಧ್ಯಕ್ಷರಾಗಿ ಬಿ. ವೈ. ವಿಜಯೇಂದ್ರ ಮತ್ತು ಪ್ರತಿಪಕ್ಷದ ನಾಯಕನಾಗಿ ಆರ್. ಅಶೋಕ ನೇಮಕಕ್ಕೆ ಪರೋಕ್ಷವಾಗಿ ಅಸಮಾಧಾನ ಹೊರ ಹಾಕಿದರು. ಬಿಜೆಪಿ ಪಕ್ಷದ ವರಿಷ್ಠರು ಏನು ತೀರ್ಮಾನ ಮಾಡಿದ್ದಾರೆ ಅದರ ಬಗ್ಗೆ ಮಾತನಾಡುವುದಿಲ್ಲ.  […]

ವಿಜಯಪುರ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಪಂ. ಜವಾಹರಲಾಲ ನೆಹರು ಜನ್ಮದಿನೋತ್ಸವ ಆಚರಣೆ

ವಿಜಯಪುರ: ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಮಾಜಿ ಪ್ರಧಾನಿ ಪಂ. ಜವಾಹರಲಾಲ ೆಹರು ಅವರ 135ನೇ ಜನ್ಮದಿನವನ್ನು ಆಚರಿಸಲಾಯಿತು.   ಈ ಸಂದರ್ಭದಲ್ಲಿ ಮಾತನಾಡಿದ ಕೆಪಿಸಿಸಿ ಸದಸ್ಯ ಅಬ್ದುಲ್ ಹಮೀದ್ ಮುಷ್ರಿಫ್, ಪಂ. ಜವಾಹರಲಾಲ ನೆಹರೂ ಅವರು ಈ ದೇಶವನ್ನು ಎತ್ತರಕ್ಕೆ ಕರೆದೊಯ್ದ ಮಹಾನ್ ನಾಯಕರಾಗಿದ್ದಾರೆ.  ಸ್ವತಂತ್ರ ಭಾರತದ ಮೊದಲ ಪ್ರಧಾನ ಮಂತ್ರಿಯಾಗಿ ಶಿಕ್ಷಣಕ್ಕೆ ಮತ್ತು ಆರ್ಥಿಕತೆಯ ಸುಧಾರಣೆಗಾಗಿ ಹಲವಾರು ಯೋಜನೆಗಳನ್ನು ಜಾರಿಗೊಳಿಸಿ ಭದ್ರ ಬುನಾದಿ ಹಾಕಿದ್ದಾರೆ ಎಂದು ಹೇಳಿದರು. ಲೋಕತಂತ್ರ, ಜಾತ್ಯತೀತತೆ, ವಿಜ್ಞಾನ ಕ್ಷೇತ್ರ ಮತ್ತು ಔದ್ಯೋಗಿಕ ಕ್ಷೇತ್ರಗಳನ್ನು […]