ರಾಹುಲ ಗಾಂಧಿ ವಿರುದ್ಧ ಕೇಂದ್ರ ಸರಕಾರ ದ್ವೇಷ ರಾಜಕಾರಣ ಆರೋಪ- ಗುಮ್ಮಟ ನಗರಿಯಲ್ಲಿ ಕಾಂಗ್ರೆಸ್ ಕಾರ್ಯಕರ್ತರಿಂದ ಮೌನ ಪ್ರತಿಭಟನೆ

ವಿಜಯಪುರ: ಪ್ರಜಾಪ್ರಭುತ್ವ ಉಳಿವಿಗಾಗಿ ದೇಶದ ಹಿತಾಸಕ್ತಿ ಕಾಪಾಡಲು ಹೋರಾಟ ನಡೆಸುತ್ತಿರುವ ಕಾಂಗ್ರೆಸ್ ನಾಯಕ ರಾಹುಲ ಗಾಂಧಿ ವಿರುದ್ಧ ಕೇಂದ್ರ ಸರಕಾರ ಸುಳ್ಳು ಆರೋಪಗಳನ್ನು ಮಾಡಿ ದ್ವೇಷ ರಾಜಕೀಯ ನಡೆಸುತ್ತಿದೆ ಎಂದು ಆರೋಪಿಸಿ ಕಾಂಗ್ರೆಸ್ ಕಾರ್ಯಕರ್ತರು ವಿಜಯಪುರ ನಗರದಲ್ಲಿ ಮೌನ ಪ್ರತಿಭಟನೆ ನಡೆಸಿದರು.  ನಗರದ ಜಿಲ್ಲಾಧಿಕಾರಿ ಕಚೇರಿ ಎದುರು ಜಿಲ್ಲಾ ಕಾಂಗ್ರೆಸ್ ವತಿಯಿಂದ ನಡೆದ ಹೋರಾಟದಲ್ಲಿ ಪಾಲ್ಗೋಂಡ ನಾನಾ ಮುಖಂಡರು ರಾಹುಲ ಗಾಂಧಿ ಅವರಿಗೆ ನೈತಿಕ ಬೆಂಬಲ ವ್ಯಕ್ತಪಡಿಸಿದರು. ಕಾಂಗ್ರೆಸ್ ಜಿಲ್ಲಾಧ್ಯಕ್ಷ ರಾಜು ಆಲಗೂರ ಮಾತನಾಡಿ, ರಾಹುಲ್ ಗಾಂಧಿ […]

ಅಭಿಮಾನಿಯ ಆಸೆ ಈಡೇರಿಸಿ ಸರಳತೆ ತೋರಿದ ಸಚಿವ ಎಂ. ಬಿ. ಪಾಟೀಲ- ಹೇಗೆ ಗೊತ್ತಾ?

ವಿಜಯಪುರ: ಬೃಹತ್ ಮತ್ತು ಮಧ್ಯಮ ಕೈಗಾರಿಕೆ, ಮೂಲಸೌಲಭ್ಯ ಅಭಿವೃದ್ಧಿ ಸಚಿವ ಎಂ. ಬಿ. ಪಾಟೀಲ ಅವರಿಗೆ ಕಾರ್ಯಕರ್ತರು ಮತ್ತು ಅಭಿಮಾನಿಗಳೆಂದರೆ ಎಲ್ಲಿಲ್ಲದ ಪ್ರೀತಿ ಮತ್ತು ಅಭಿಮಾನ.  ಬಬಲೇಶ್ವರ ತಾಲೂಕಿನ ಶೇಗುಣಸಿ ಬಳಿ ನಡೆದ ಮಧ್ಯಾಹ್ನ ನಡೆದ ಘಟನೆಯೊಂದು ಸಚಿವರ ಸರಳತೆಗೆ ಸಾಕ್ಷಿಯಾಯಿತು. ಶೇಗುಣಸಿ ಬಳಿ ಮುಳವಾಡ ಏತ ನೀರಾವರಿ ಹಂತ- 3ರಡಿ ಬರುವ ವಿತರಣೆ ಕಾಲುವೆಗಳ ನಿರ್ಮಾಣ ಕಾಮಗಾರಿಗಳಿಗೆ ಸಚಿವರು ಭೂಮಿಪೂಜೆ ನೆರವೇರಿಸುವ ಕಾರ್ಯಕ್ರಮ ನಡೆಯಿತು.  ಈ ಕಾರ್ಯಕ್ರಮ ಆರಂಭಕ್ಕೂ ಮುನ್ನ ವಾಹನವೊಂದರಲ್ಲಿ ಬಂದಿದ್ದ ಯುವಕನೊಬ್ಬ ಕಾರ್ಯಕ್ರಮ […]

ಸಾಲ, ತೆರಿಗೆಯ ಬರೆ ಎಳೆದ ಬಜೆಟ್- ಉಮೇಶ ಕಾರಜೋಳ

ವಿಜಯಪುರ : ಮುಖ್ಯಮಂತ್ರಿ ಎಸ್. ಸಿದ್ದರಾಮಯ್ಯ ಅವರು ಮಂಡಿಸಿರುವ ಬಜೆಟ್ ಹೇಗಿದೆ ಅಂದ್ರೆ ಸಾಲ ಮತ್ತು ತೆರಿಗೆಯ ಬರೆಯಾಗಿದೆ ಎಂದು ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಉಮೇಶ ಕಾರಜೋಳ ಟೀಕಿಸಿದ್ದಾರೆ. ಈ ಕುರಿತು ಮಾಧ್ಯಮ ಪ್ರಕಟಣೆ ನೀಡಿರುವ ಅವರು, ದಾಖಲೆಯ 14ನೇಯ ಬಾರಿ ಬಿಜೆಟ್ ಮಂಡಿಸುತ್ತಿರುವ ಸಿದ್ದರಾಮಯ್ಯ ಅವರ ಮೇಲೆ ಬೆಟ್ಟದಷ್ಟು ನಿರೀಕ್ಷೆಯಿತ್ತು.  ಆದರೆ, ಈ ಬಜೆಟ್ ನಲ್ಲಿ ತೆರಿಗೆಯ ಭಾರವೇ ತುಂಬಿದೆ.  ಅಬಕಾರಿ ಸುಂಕಗಳ ದರವನ್ನು ಶೇ. 20 ರಷ್ಟು ಹೆಚ್ಚಿಸಿದ್ದು, ಹಾಗೂ ಬಿಯರ್ ಮೇಲಿನ ಹೆಚ್ಚುವರಿ ಅಬಕಾರಿ […]

ರಾಜ್ಯದ ಸರ್ವಾಂಗೀಣ ಅಭಿವೃದ್ಧಿಗೆ ಪೂರಕವಾದ ಬಜೆಟ್- ಸಂಗಮೇಶ ಬಬಲೇಶ್ವರ

ವಿಜಯಪುರ: ಮುಖ್ಯಮಂತ್ರಿ ಎಸ್. ಸಿದ್ಧರಾಮಯ್ಯ ರಾಜ್ಯದ ಸರ್ವಾಂಗೀಣ ಅಭಿವೃದ್ಧಿಗೆ ಪೂರಕವಾದ ಬಜೆಟ್ ಮಂಡಿಸಿದ್ದಾರೆ ಎಂದು ಕೆಪಿಸಿಸಿ ಪ್ರಚಾರ ಸಮಿತಿ ಮುಖ್ಯ ವಕ್ತಾರ ಸಂಗಮೇಶ್ ಬಬಲೇಶ್ವರ ಹೇಳಿದ್ದಾರೆ. ರಾಜ್ಯ ಬಜೆಟ್ ಕುರಿತು ಮಾಧ್ಯಮ ಪ್ರಕಟಣೆ ನೀಡಿರುವ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯನವರು ಮಂಡಿಸಿರುವ ಈ ಬಜೆಟ್ ಮತ ನೀಡಿ ಸ್ಪಷ್ಟ ಬಹುಮತ ಕೊಟ್ಟು ಸರಕಾರ ರಚನೆಗೆ ಅವಕಾಶ ಮಾಡಿಕೊಟ್ಟ ರಾಜ್ಯದ ಎಲ್ಲ ಕ್ಷೇತ್ರದ ಜನರಿಗೂ ನ್ಯಾಯ ಒದಗಿಸಿಕೊಡುವ ಪ್ರಾಮಾಣಿಕ ಪ್ರಯತ್ನ ಮಾಡಿದ್ದಾರೆ.  ಹೀಗಾಗಿ ಜನರ ನಿರೀಕ್ಷೆಗೆ ಸಕಾರಾತ್ಮಕವಾಗಿ ಸ್ಪಂದಿಸಿರುವ ಈ […]

ಮತದಾರರ ಪಟ್ಟಿ ಪರಿಷ್ಕರಿಸಿ ಗೊಂದಲ ನಿವಾರಿಸಲು ಆಗ್ರಹ- ಜಿಲ್ಲಾ ಚುನಾವಣಾಧಿಕಾರಿಗೆ ಮನವಿ ಪತ್ರ ಸಲ್ಲಿಕೆ

ವಿಜಯಪುರ: ಮುಂಬರುವ ಜಿಲ್ಲಾ ಪಂಚಾಯಿತಿ, ತಾಲೂಕು ಪಂಚಾಯಿತಿ ಹಾಗೂ ಗ್ರಾಮ ಪಂಚಾಯಿತಿ ಅದ್ಯಕ್ಷ, ಉಪಾಧ್ಯಕ್ಷ ಚುನಾವಣೆಗಳು ನಡೆಯಲಿದ್ದು, ಈ ಚುನಾವಣೆಯಲ್ಲಿ ಯಾವುದೇ ಲೋಪವಾಗದಂತೆ ತಡೆಯಲು ಮತದಾರರ ಪಟ್ಟಿ ಪರಿಷ್ಕರಿಸಬೇಕು ಎಂದು ಆಗ್ರಹಿಸಿ ಡಾ. ಎ.ಪಿ.ಜೆ. ಅಬ್ದುಲ್ ಕಲಾಂ ಸಮಾಜ ಸೇವಾ ಸಮಿತಿ ವತಿಯಿಂದ ಜಿಲ್ಲಾ ಚುನಾವಣಾಧಿಕಾರಗೆ ಮನವಿ ಪತ್ರ ಸಲ್ಲಿಸಲಾಯಿತು.  ಈ ಸಂದರ್ಭದಲ್ಲಿ ಮಾತನಾಡಿದ ಸಮಿತಿ ಮುಖಂಡ ಮಲ್ಲಿಕಾರ್ಜುನ ಕೆಂಗನಾಳ, ಮುಂಬರುವ ಚುನಾವಣೆಗಳಲ್ಲಿ ಮತದಾರ ಪಟ್ಟಿಯಲ್ಲಿ ಯಾವುದೇ ಗೊಂದಲವಾಗಬಾರದು.  ಚುನಾವಣೆಗಳಲ್ಲಿ ಸ್ಪರ್ಧಿಸುವ ಸ್ಪರ್ಧಿಗಳಿಗೆ ಯಾವುದೇ ತರಹದ ಅನ್ಯಾಯ […]

ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಜೂ. 26ರಂದು ಗುಮ್ಮಟ ನಗರಿಗೆ ಭೇಟಿ

ವಿಜಯಪುರ: ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರಕಾರದ ಒಂಬತ್ತು ವರ್ಷಗಳ ಸಾಧನೆಯನು ಜನರಿಗೆ ತಲುಪಿಸಲು ಜೂ. 26 ರಂದು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಗುಮ್ಮಟ ನಗರಿಗೆ ಭೇಟಿ ನೀಡಲಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಈ ಕುರಿತು ಮಾಹಿತಿ ನೀಡಿದ ಬಿಜೆಪಿ ಜಿಲ್ಲಾಧ್ಯಕ್ಷ ಆರ್. ಎಸ್. ಪಾಟೀಲ ಕೂಚಬಾಳ, ಜೂ. 26 ರಂದು ಮ. 3ಕ್ಕೆ ನಗರದ ಸಂಗನಬಸವ ಸಮುದಾಯ ಭವನದಲ್ಲಿ ಕಾರ್ಯಕ್ರಮ ನಡೆಯಲಿದ್ದು, ಬಸವರಾಜ ಬೊಮ್ಮಾಯಿ ಕಾರ್ಯಕ್ರಮ ಉದ್ಗಾಟಿಸಲಿದ್ದಾರೆ ಎಂದು ತಿಳಿಸಿದರು. ಬಿಜೆಪಿ ಸರಕಾರದ ಒಂಬತ್ತು ವರ್ಷಗಳ […]

ಕೇಂದ್ರ ಸರಕಾರದಿಂದ ದ್ವೇಷ ರಾಜಕಾರಣ ಆರೋಪ- ಗುಮ್ಮಟ ನಗರಿಯಲ್ಲಿ ಕೈ ಕಾರ್ಯಕರ್ತರಿಂದ ಪ್ರತಿಭಟನೆ

ವಿಜಯಪುರ: ಕೇಂದ್ರ ಸರಕಾರ ಅಕ್ಕಿ ವಿತರಣೆ ವಿಚಾರದಲ್ಲಿ ಮಲತಾಯಿ ಧೋರಣೆ ಅನುಸರಿಸುತ್ತಿದ್ದು, ದ್ವೇಷ ರಾಜಕೀಯ ಮಾಡುತ್ತಿದೆ ಎಂದು ಆರೋಪಿಸಿ ನಗರದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ನಗರದ ಡಾ. ಬಿ. ಆರ್. ಅಂಬೇಡ್ಕರ ವೃತ್ತದಲ್ಲಿ ಪ್ರತಿಭಟನೆ ನಡೆಸಿ ಮಾತನಾಡಿದ ನಾನಾ ಮುಖಂಡರು, ರಾಜ್ಯ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ರಾಜ್ಯದ ಜನತೆಗೆ ಐದು ಜನಪರ ಗ್ಯಾರಂಟಿ ಯೋಜನೆಗಳನ್ನು ನೀಡುವುದಾಗಿ ಹೇಳಿತ್ತು.  ಅದರಲ್ಲಿ ಅನ್ನಭಾಗ್ಯ ಯೋಜನೆಯೂ ಒಂದಾಗಿದೆ.  ರಾಜ್ಯ ಹಸಿವು ಮುಕ್ತವಾಗಬೇಕು ಎಂಬ ಒಳ್ಳೆಯ ಉದ್ದೇಶದಿಂದ ಬಡವರಿಗೆ ತಲಾ 10 […]

ಗೋವುಗಳ ಗಣಿಯಾಗಲಿ- ಲದ್ದಿಜೀವಿಗಳ ಮೂಲಕ ರಚಿಸಿದ ಪಠ್ಯಕ್ರಮವನ್ನು ಬುದ್ದಿಜೀವಿಗಳ ಮೂಲಕ ತಿದ್ದುವ ಕೆಲಸ ನಡೆದಿದೆ- ಎಸ್. ಎಂ. ಪಾಟೀಲ ಗಣಿಹಾರ

ವಿಜಯಪುರ: ಗೋವುಗಳ ಗಣತಿ ನಡೆಯಬೇಕು.  ಯಾವ ಆರ್‌ ಎಸ್‌ ಎಸ್ ನಾಯಕರು ಗೋವುಗಳನ್ನು ಪೋಷಿಸುತ್ತಿದ್ದಾರೆ? ಗೋವುಗಳನ್ನು ಹೇಗೆ ಸಾಕುತ್ತಿದ್ದಾರೆ ಎಂಬ ಬಗ್ಗೆಯೂ ಗಣತಿ ನಡೆಯಬೇಕು ಎಂದು ಕೆಪಿಸಿಸಿ ವಕ್ತಾರ ಎಸ್. ಎಂ. ಪಾಟೀಲ ಗಣಿಹಾರ ಆಗ್ರಹಿಸಿದ್ದಾರೆ. ವಿಜಯಪುರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬಿಜೆಪಿಗೆ ನಿಜವಾಗಿಯೂ ಗೋವುಗಳಿಗೆ ಕಾಳಜಿ ಇದ್ದರೆ ಕೂಡಲೇ ಗೋಮುಕ್ತಿ ಕಾನೂನು ಜಾರಿಗೊಳಿಸಿ ಅನುಷ್ಠಾನಗೊಳಿಸಬೇಕು.  ಗೋವುಗಳ ರಕ್ಷಣೆ ಬಗ್ಗೆ ಮಾತನಾಡುವ ಅನೇಕರು ಕೋವಿಡ್ ಸಂದರ್ಭದಲ್ಲಿ ತಮ್ಮ ಸಂಬಂಧಿಕರ ಅಂತ್ಯಕ್ರಿಯೆ ಮಾಡಲಿಲ್ಲ.  ಗೋವುಗಳನ್ನು ಸಾಕಲು ಬಾರದವರು, ಗೋವುಗಳನ್ನು […]

ಸಚಿವ ಎಂ. ಬಿ. ಪಾಟೀಲರ ಸಾರ್ವಜನಿಕ ಸಂಪರ್ಕಾಧಿಕಾರಿಯಾಗಿ ಡಾ. ಮಹಾಂತೇಶ ಬಿರಾದಾರ ನೇಮಕ

ವಿಜಯಪುರ: ಬೃಹತ್ ಮತ್ತು ಮಧ್ಯಮ ಕೈಗಾರಿಕೆ, ಮೂಲಸೌಕರ್ಯ ಅಭಿವೃದ್ಧಿ ಹಾಗೂ ವಿಜಯಪುರ ಜಿಲ್ಲಾ ಉಸ್ತುವಾರಿ ಸಚಿವ ಎಂ. ಬಿ. ಪಾಟೀಲ ಅವರ ಸಾರ್ವಜನಿಕ ಸಂಪರ್ಕಾಧಿಕಾರಿಯಾಗಿ ಡಾ. ಮಹಾಂತೇಶ ಬಿರಾದಾರ ಅವರನ್ನು ನೇಮಕ ಮಾಡಲಾಗಿದೆ.  ಸದಾ ಸಮಾಜಪರ ಚಟುವಟಿಕೆಯಿಂದ ಹೆಸರು ಮಾಡಿರುವ ಡಾ. ಮಹಾಂತೇಶ ಬಿರಾದಾರ ಅವರು ಎಂ. ಬಿ. ಪಾಟೀಲರು ಈ ಹಿಂದೆ ಜಲಸಂಪನ್ಮೂಲ ಸಚಿವರಾಗಿದ್ದಾಗ ಮಾಧ್ಯಮ ಸಲಹೆಗಾರರಾಗಿ ಸೇವೆ ಸಲ್ಲಿಸಿದ್ದಾರೆ.  ಈಗ ಅವರನ್ನು ಸಚಿವ ಎಂ. ಬಿ. ಪಾಟೀಲ ಅವರ ಸಾರ್ವಜನಿಕ ಸಂಪರ್ಕಾಧಿಕಾರಿಯಾಗಿ ನೇಮಕ ಮಾಡಲಾಗಿದೆ.  […]

ಸಚಿವ ಶಿವಾನಂದ ಪಾಟೀಲರಿಗೆ ಶ್ರೀ ಹಡಪದ ಅಪ್ಪಣ್ಣ ವಿವಿದೋದ್ದೇಶ ಸಹಕಾರ ಸಂಘದ ಪದಾಧಿಕಾರಿಗಳಿಂದ ಸನ್ಮಾನ

ವಿಜಯಪುರ: ಸಕ್ಕರೆ ಮತ್ತು ಜವಳಿ ಖಾತೆ ಸಚಿವ ಶಿವಾನಂದ ಎಸ್. ಪಾಟೀಲ ಅವರನ್ನು ಶ್ರೀ ಹಡಪದ ಅಪ್ಪಣ್ಣ ವಿವಿದೋದ್ದೇಶಗಳ ಸಹಕಾರ ಸಂಘದ ಪದಾಧಿಕಾರಿಗಳು ಸನ್ಮಾನಿಸಿ ಗೌರವಿಸಿದರು. ಈ ಸಂದರ್ಭದಲ್ಲಿ ಸಂಘದ ಅಧ್ಯಕ್ಷ ನಿಂಗಪ್ಪ ಎ. ನಾವಿ, ಉಪಾಧ್ಯಕ್ಷ ಚಿದಾನಂದ ಹ. ತೊರವಿ, ನಿರ್ದೇಶಕರಾದ ವಿರೂಪಾಕ್ಷಿ ಗಿ. ಕತ್ನಳ್ಳಿ, ಶಿವಾನಂದ ಆರ್. ನಾವಿ, ನರಸು ನಾವಿ ಮುಂತಾದವರು ಉಪಸ್ಥಿತರಿದ್ದರು.