ವಿದ್ಯುತ್ ದರ ಹೆಚ್ಚಳ, ಗೋಹತ್ಯೆ ನಿಷೇಧ ರದ್ದು ಕುರಿತು ಸಚಿವರ ಹೇಳಿಕೆ ಖಂಡಿಸಿ ಬಿಜೆಪಿಯಿಂದ ವಿಜಯಪುರ ನಗರದಲ್ಲಿ ಪ್ರತಿಭಟನೆ

ವಿಜಯಪುರ: ಉಚಿತ ವಿದ್ಯುತ್ ಗ್ಯಾರಂಟಿ ಎನ್ನುವ ಹೆಸರಿನಲ್ಲಿ ಕಾಂಗ್ರೆಸ್ ಸರಕಾರ ಜನತೆಗೆ ಮೋಸ ಮಾಡುತ್ತಿದೆ ಎಂದು ಆರೋಪಿಸಿ ಬಿಜೆಪಿ ಕಾರ್ಯಕರ್ತರು ನಗರದಲ್ಲಿ ಪ್ರತಿಭಟನೆ ನಡೆಸಿದರು. ಬಿಜೆಪಿ ನಗರ ಘಟಕದ ಪದಾಧಿಕಾರಿಗಳು ಶ್ರೀ ಸಿದ್ದೇಶ್ವರ ದೇವಾಲಯದ ಎದುರು ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಮಹಾನಗರ ಪಾಲಿಕೆ ಸದಸ್ಯ ಶಿವರುದ್ರ ಬಾಗಲಕೋಟ ಮಾತನಾಡಿ, ಪಶು ಸಂಗೋಪನೆ ಸಚಿವರು ರಾಜ್ಯದಲ್ಲಿ ವಯಸ್ಸಾದ ಹಸುಗಳನ್ನು ಸಾಕಲು ಕಷ್ಟವಾಗುತ್ತದೆ.  ಆದ್ದರಿಂದ ಗೋ ಹತ್ಯೆ ನಿಷೇಧ ಕಾನೂನನ್ನು ರದ್ದು ಮಾಡಿ ಗೋಹತ್ಯೆಗೆ […]

ಶನಿವಾರ ಸಚಿವ ಎಂ. ಬಿ. ಪಾಟೀಲ ಬಸವ ನಾಡಿಗೆ ಆಗಮನ- ಭರ್ಜರಿ ಸ್ವಾಗತಕ್ಕೆ ಸಜ್ಜಾದ ತವರು ಜಿಲ್ಲೆಯ ಜನರು

ವಿಜಯಪುರ: ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ಎಂ.ಬಿ.ಪಾಟೀಲ ಅವರು ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಮೂಲಭೂತ ಸೌಕರ್ಯ ಅಭಿವೃದ್ಧಿ ಸಚಿವರಾದ ನಂತರ ಇದೇ ಮೊದಲ ಬಾರಿಗೆ ಜೂನ್ 3 ರಂದು ಶನಿವಾರ ತವರು ಜಿಲ್ಲೆ ವಿಜಯಪುರಕ್ಕೆ ಆಗಮಿಸುತ್ತಿದ್ದು, ಅವರನ್ನು ಅದ್ದೂರಿಯಾಗಿ ಸ್ವಾಗತಿಸಲು ಸಚಿವರ ಅಭಿಮಾನಿಗಳು, ಬೆಂಬಲಿಗರು ಮತ್ತು ಕಾಂಗ್ರೆಸ್ ಕಾರ್ಯಕರ್ತರು ನಿರ್ಧರಿಸಿದ್ದಾರೆ. ವಿಜಯಪುರದಲ್ಲಿ ನಡೆದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಕೆಪಿಸಿಸಿ ಪ್ರಚಾರ ಸಮಿತಿ ಮುಖ್ಯ ವಕ್ತಾರ ಸಂಗಮೇಶ ಬಬಲೇಶ್ವರ ಮಾತನಾಡಿ, ಎಂ.ಬಿ.ಪಾಟೀಲರು ಜಲಸಂಪನ್ಮೂಲ ಸಚಿವರಾಗಿ ಜಿಲ್ಲೆಯಲ್ಲಿ […]

ಬಿಜೆಪಿಯವರು ಇಂಥದ್ದನ್ನು ಹೇಳಿಯೇ 65ಕ್ಕೆ ಬಂದು ನಿಂತಿದ್ದಾರೆ- ಲಕ್ಷ್ಮಣ ಸವದಿ ವಾಗ್ದಳಿ

ವಿಜಯಪುರ: ಕಾಂಗ್ರೆಸ್ ಗ್ಯಾರಂಟಿ ಸ್ಕೀಂ ಗಳ ಬಗ್ಗೆ ಬಿಜೆಪಿ ನಾಯಕರು ಮಾಡುತ್ತಿರುವ ಟೀಕೆಗಳ ಕುರಿತು ಮಾಜಿ ಡಿಸಿಎಂ ಮತ್ತು ಅಥಣಿ ಕಾಂಗ್ರೆಸ್ ಶಾಸಕ ಲಕ್ಷ್ಮಣ ಸವದಿ ಖಾರವಾಗಿ ಪ್ರತಿಕ್ರಿಯೆ ನೀಡಿದ್ದಾರೆ. ವಿಜಯಪುರ ಜಿಲ್ಲೆಯ ಇಂಡಿ ತಾಲೂಕಿನ ಸುಕ್ಷೇತ್ರ ಇಂಚಗೇರಿಯಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಗ್ಯಾರಂಟಿ ಯೋಜನೆಗಳ ಜಾರಿ ಸಾಧ್ಯವಿಲ್ಲ ಎಂದು ಟೀಕೆ ಮಾಡುತ್ತಿರುವ ಬಿಜೆಪಿ ನಾಯಕರು ಈಗ 65 ಸ್ಥಾನಗಳಿಗೆ ಬಂತು ನಿಂತಿದ್ದಾರೆ.  ಒಳ್ಳೆಯ ಕೆಲಸ ಮಾಡುವ ಸರಕಾರವನ್ನು ಪ್ರೋತ್ಸಾಹಿಸಬೇಕು.  ಅನಾವಶ್ಯಕವಾಗಿ ಟೇಕೆ ಮಾಡುವುದು […]

ಶಾಸಕ ಶಿವಾನಂದ ಪಾಟೀಲರಿಗೆ ಡಿಸಿಎಂ, ವಿಜಯಾನಂದ ಕಾಶಪ್ಪನವರ ಅವರಿಗೆ ಸಚಿವ ಸ್ಥಾನ ನೀಡಿ- ಪಂಚಮಸಾಲಿ ಮುಖಂಡ ಶಂಕರಗೌಡ ಬಿರಾದಾರ ಆಗ್ರಹ

ವಿಜಯಪುರ: ಆರು ಬಾರಿ ಶಾಸಕರಾಗಿ ಆಯ್ಕೆಯಾಗಿರುವ ಮತ್ತು ಲಿಂಗಾಯತ ಪಂಚಮಸಾಲಿ ಸಮುದಾಯದ ಹಿರಿಯ ಶಾಸಕ ಶಿವಾನಂದ ಪಾಟೀಲ ಅವರಿಗೆ ಉಪಮುಖ್ಯಮಂತ್ರಿ ಸ್ಥಾನ ಮತ್ತು ಜಲಸಂಪನ್ಮೂಲ ಖಾತೆ ನೀಡಬೇಕು ಎಂದು ಅಖಿಲ ಭಾರತ ಲಿಂಗಾಯಿತ ಪಂಚಮಸಾಲಿ ಮಹಾಸಭಾ ಯುವ ಘಟಕದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಶಂಕರಗೌಡ ಬಿರಾದಾರ ಆಗ್ರಹಿಸಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಬಾರಿಯ ಚುನಾವಣೆಯಲ್ಲಿ ಶಿವಾನಂದ ಪಾಟೀಲರು ಅತೀ ಹೆಚ್ಚು ಮತ ಪಡೆದು ಆಯ್ಕೆಯಾಗಿದ್ದಾರೆ.  ಕಳೆದ ಮೂರು ದಶಕಗಳಿಂದ ಶಾಸಕರಾಗಿ ಮತ್ತು ಸಚಿವರಾಗಿ ಬಸವನ […]

ಕಾಂಗ್ರೆಸ್ ಬಹುಮತ ಪಡೆಯಲು ಲಿಂಗಾಯಿತರ ಪಾತ್ರ ದೊಡ್ಡದು- ಸಮುದಾಯದ ಎಂ. ಬಿ. ಪಾಟೀಲರನ್ನು ಸಿಎಂ ಮಾಡಬೇಕು- ಸಂಗಮೇಶ ಬಬಲೇಶ್ವರ

ವಿಜಯಪುರ: ಕಾಂಗ್ರೆಸ್ ಬಹುಮತ ಪಡೆಯುವಲ್ಲಿ ಲಿಂಗಾಯಿತ ಪಾತ್ರ ಪ್ರಮುಖವಾಗಿದ್ದು, ಸಮುದಾಯಕ್ಕೆ ಸೇರಿರುವ ಎಂ. ಬಿ. ಪಾಟೀಲರನ್ನು ಮುಖ್ಯಮಂತ್ರಿಯನ್ನಾಗಿ ಮಾಡಬೇಕು ಎಂದು ಅಖಿಲ ಭಾರತ ಲಿಂಗಾಯತ ಪಂಚಮಸಾಲಿ ಸಮಾಜದ ರಾಷ್ಟ್ರೀಯ ವಕ್ತಾರ ಸಂಗಮೇಶ ಬಬಲೇಶ್ವರ ಆಗ್ರಹಿಸಿದ್ದಾರೆ ಈ ಕುರಿತು ಮಾಧ್ಯಮ ಪ್ರಕಟಣೆ ನೀಡಿರುವ ಅವರು, ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಸ್ಪಷ್ಟ ಬಹುಮತ ಪಡೆಯುವುದಕ್ಕೆ ಲಿಂಗಾಯತ ಸಮುದಾಯದ ಕೊಡುಗೆ ಅಪಾರವಾಗಿದೆ.  ನಮ್ಮನ್ನು ಬಳಸಿ ಬಿಸಾಡಿರುವ ಬಿಜೆಪಿಗೆ ಲಿಂಗಾಯತರು ಈಗ ತಕ್ಕಪಾಠ ಕಲಿಸಿದ್ದಾರೆ. ಕಾಂಗ್ರೆಸ್ಸಿನ ಕಡೆ ವಾಲಿರುವ ಲಿಂಗಾಯತ ಸಮುದಾಯದ ಮತಗಳನ್ನು […]

ಬಸವನ ಬಾಗೇವಾಡಿಯಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಗೆದ್ದಿದ್ದಾರೆ- ಶಿವಾನಂದ ಪಾಟೀಲರಿಗೆ ಡಿಸಿಎಂ ಆಗುವ ಅರ್ಹತೆ ಇದೆ- ಸಂಯುಕ್ತಾ ಪಾಟೀಲ

ವಿಜಯಪುರ: ಬಸವನ ಬಾಗೇವಾಡಿಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಶಿವಾನಂದ ಪಾಟೀಲ ಪುನರಾಯ್ಕೆಯಾಗಿರುವುದಕ್ಕೆ ಕಾಂಗ್ರೆಸ್ ಕಾರ್ಯಕರ್ತರು ಕಾರಣ.  ಈ ಗೆಲವು ಕೇವಲ ಕಾಂಗ್ರೆಸ್ ಪಕ್ಷದ ಜಯವಲ್ಲ.  ಶಿವಾನಂದ ಪಾಟೀಲ ಅವರ ಜಯವಲ್ಲ.  ಇದು ಸಮಸ್ತ ಕಾಂಗ್ರೆಸ್ ಕಾರ್ಯಕರ್ತರ ಗೆಲುವು ಎಂದು ಡಿಸಿಸಿ ಬ್ಯಾಂಕ್ ನಿರ್ದೇಶಕಿ ಮತ್ತು ಶಾಸಕ ಶಿವಾನಂದ ಪಾಟೀಲ ಅವರ ಜೇಷ್ಠ ಪುತ್ರಿ ಸಂಯುಕ್ತಾ ಪಾಟೀಲ ತಿಳಿಸಿದ್ದಾರೆ. ವಿಜಯಪುರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾರ್ಯಕರ್ತರು ಮಾಡಿರುವ ಶ್ರಮದ ಫಲವಾಗಿ ಶಿವಾನಂದ ಪಾಟೀಲ ಅವರು ಮರುಆಯ್ಕೆಯಾಗಿದ್ದಾರೆ ಎಂದು ತಿಳಿಸಿದರು. ಬಸವನ […]

ಯತ್ನಾಳ ಆಗ್ತಾರಾ ಪ್ರತಿಪಕ್ಷದ ನಾಯಕ? ಅಥವಾ ಬಿಜೆಪಿ ರಾಜ್ಯಾಧ್ಯಕ್ಷ? ಹೈಕಮಾಂಡ್ ನಲ್ಲಿ ನಡೆದಿದೆ ಚಿಂತನೆ

ವಿಜಯಪುರ: ಮಾತುಗಳ ಮೂಲಕವೇ ಎದುರಾಳಿಗಳನ್ನು ಸಮರ್ಥವಾಗಿ ಎದುರಿಸಿ ಕಟ್ಟಿಹಾಕುವ ಸಾಮರ್ಥ್ಯ ಹೊಂದಿರುವ ವಿಜಯಪುರ ನಗರ ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳ ಅವರಿಗೆ ರಾಜ್ಯ ವಿಧಾನ ಸಭೆ ಪ್ರತಿಪಕ್ಷದ ನಾಯಕ ಅಥವಾ ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನ ಒಲಿದು ಬರಲಿದೆ ಎಂದು ಮೂಲಗಳು ತಿಳಿಸಿವೆ. ಈ ಮುಂಚೆಯಿಂದಲೂ ತಮ್ಮಿಷ್ಟದಂತೆ ಸ್ವಪಕ್ಷದವರಿರಲಿ ಅಥವಾ ಪ್ರತಿಪಕ್ಷದವರೇ ಆಗಿರಲಿ ನೇರವಾಗಿ ತಮ್ಮದೇ ವ್ಯಂಗ್ಯಭರಿತ ಮಾತುಗಳಿಂದ ವಾಗ್ದಾಳಿ ನಡೆಸುವ ಯತ್ನಾಳ ಅವರ ಬಿಜೆಪಿ ಸರಕಾರದಲ್ಲಿ ಸಚಿವ ಸ್ಥಾನದಿಂದ ವಂಚಿತರಾಗಿದ್ದರು.  ಆದರೆ, ಈಗ ರಾಜ್ಯದಲ್ಲಿ ಬಿಜೆಪಿ […]

ಇಂಡಿಯಲ್ಲಿ ಸತತ ಮೂರನೇ ಬಾರಿ ಗೆದ್ದು ಹ್ಯಾಟ್ರಿಕ್ ಸಾಧನೆ ಮಾಡಿದ ಯಶವಂತರಾಯಗೌಡ ವಿ. ಪಾಟೀಲ

ವಿಜಯಪುರ: ಇಂಡಿ ಕಾಂಗ್ರೆಸ್ ಶಾಸಕ ಯಶವಂತರಾಯಗೌಡ ವಿ. ಪಾಟೀಲ ಸತತ ಮೂರನೇ ಬಾರಿಗೆ ಆಯ್ಕೆಯಾಗುವ ಮೂಲಕ ಹ್ಯಾಟ್ರಿಕ್ ಸಾಧನೆ ಮಾಡಿದ್ದಾರೆ. ಈ ಬಾರಿ ಯಶವಂತರಾಯಗೌಡ ವಿ. ಪಾಟೀಲ ಅವರು, ತಮ್ಮ ಸಮೀಪದ ಪ್ರತಿಸ್ಪರ್ಧಿ ಜೆಡಿಎಸ್ ಅಭ್ಯರ್ಥಿ ಬಿ. ಡಿ. ಪಾಟೀಲ ಅವರನ್ನು 10329 ಮತಗಳ ಅಂತರದಿಂದ ಭರ್ಜರಿ ಗೆಲುವು ಸಾಧಿಸಿದ್ದಾರೆ. ಯಶವಂತರಾಯಗೌಡ ಪಾಟೀಲ ಅವರಿಗೆ 71785 ಮತಗಳನ್ನು ಪಡೆದರೆ ಅವರ ಸಮೀಪದ ಪ್ರತಿಸ್ಪರ್ಧಿ ಜೆಡಿಎಸ್ ಅಭ್ಯರ್ಥಿ ಬಿ. ಡಿ. ಪಾಟೀಲ ಅವರಿಗೆ 61456 ಮತಗಳು ಬಂದವು.  ಬಿಜೆಪಿ […]

ಅಭಿವೃದ್ಧಿ ಸುರಕ್ಷತೆ ಹಿಂದುತ್ವವನ್ನು ಮನಸ್ಸಿನಲ್ಲಿಟ್ಟುಕೊಂಡು ಜನ ಮತ್ತೊಮ್ಮೆ ನನಗೆ ಆಶೀರ್ವಾದ ಮಾಡಿದ್ದಾರೆ- ಯತ್ನಾಳ

ವಿಜಯಪುರ: ಬಹಳ ಪೈಪೋಟಿಯಿಂದ ಕೂಡಿದೆ ಎಂದೇ ನಿರೀಕ್ಷಿಸಲಾಗಿದ್ದ ಬಿಜಾಪುರ ನಗರ ಮತಕ್ಷೇತ್ರಕ್ಕೆ ನಡೆದ ಚುನಾವಣೆಯಲ್ಲಿ ಶಾಸಕ ಬಸನಗೌಡ ಪಾಟೀಲ ಯತ್ನಾಳ ಕಳೆದ ಸಲಕ್ಕಿಂತಲೂ ಹೆಚ್ಚು ಮತಗಳ ಅಂತರದಿಂದ ಗೆಲ್ಲುವ ಮೂಲಕ ಬಿಜೆಪಿಯಲ್ಲಿರುವ ತಮ್ಮ ವಿರೋಧಿಗಳಿಗೆ ತಕ್ಕ ಉತ್ತರ ನೀಡಿದ್ದಾರೆ.  ಬಿ ಎಸ್. ಯಡಿಯೂರಪ್ಪ, ವಿಜಯೇಂದ್ರ, ನರೇಂದ್ರ ಮೋದಿ, ಅಮಿತ್ ಶಾ ಅವರನ್ನು ತಮ್ಮ ನೇರ ಮಾತುಗಳಿಂದಲೇ ತರಾಟೆಗೆ ತೆಗೆದುಕೊಂಡು ಮತ್ತು ತಮಗನಿಸಿದ್ದನ್ನು ನೇರವಾಗಿ ಹೇಳುವ ಮೂಲಕ ದೇಶಾದ್ಯಂತ ಚರ್ಚೆಗೆ ಗ್ರಾಸವಾಗಿದ್ದ ಯತ್ನಾಳ ಅವರು, ಮತ್ತೋಮ್ಮೆ ಬಿಜೆಪಿ ಟೆಕೆಟ್ […]

ವಿಧಾನಸಭೆ ಚುನಾವಣೆ: ಮತ ಎಣಿಕೆ ಅಧಿಕಾರಿ, ಸಿಬ್ಬಂದಿಗಳಿಗೆ ತರಬೇತಿ- ಸುಗಮವಾಗಿ ಮತ ಎಣಿಕೆ ಕಾರ್ಯಕ್ಕೆ ಸನ್ನದ್ಧರಾಗ: ಡಾ. ವಿಜಯಮಹಾಂತೇಶ ಬಿ. ದಾನಮ್ಮನವರ

ವಿಜಯಪುರ: ವಿಧಾನಸಭೆ ಸಾರ್ವತ್ರಿಕ ಚುನಾವಣೆ ಅಂಗವಾಗಿ ಮೇ 10ರಂದು ಜಿಲ್ಲೆಯ 8 ವಿಧಾನಸಭಾ ಕ್ಷೇತ್ರಗಳಲ್ಲಿ ಸುಸೂತ್ರವಾಗಿ ಮತದಾನ  ನಡೆದಿದ್ದು, ಮೇ 13 ರ ಮತ ಎಣಿಕೆ ನಡೆಯಲಿದ್ದು, ಸುಗಮವಾಗಿ ಮತ ಎಣಿಕೆ ಕಾರ್ಯ ನಡೆಸುವಂತೆ ನಿಯೋಜಿತ ಅಧಿಕಾರಿಗಳಿಗೆ ಜಿಲ್ಲಾ ಚುನಾವಣಾಧಿಕಾರಿ ಜಿಲ್ಲಾಧಿಕಾರಿ ಡಾ. ವಿಜಯಮಹಾಂತೇಶ ಬಿ, ದಾನಮ್ಮನವರ ಅವರು ಸೂಚನಾ ನೀಡಿದರು. ನಗರದ ಸೈನಿಕ ಶಾಲೆಯ ಸಭಾಂಗಣದಲ್ಲಿ ವಿಧಾನಸಭೆ ಚುನಾವಣೆಗೆ ಸಂಬಂಧಿಸಿದಂತೆ ಮತ ಎಣಿಕೆಗೆ ನಿಯೋಜಿಸಿರುವ ಅಧಿಕಾರಿಸ ಸಿಬ್ಬಂದಿಗಳಿಗೆ ಆಯೋಜಿಸಿದ 2ನೇ ಹಂತದ ತರಬೇತಿ ಕಾರ್ಯಕ್ರಮದಲ್ಲಿ ಜಿಲ್ಲಾ […]