ವಿಧಾನಸಭೆ ಚುನಾವಣೆ: ಮತ ಎಣಿಕೆ ಅಧಿಕಾರಿ, ಸಿಬ್ಬಂದಿಗಳಿಗೆ ತರಬೇತಿ- ಸುಗಮವಾಗಿ ಮತ ಎಣಿಕೆ ಕಾರ್ಯಕ್ಕೆ ಸನ್ನದ್ಧರಾಗ: ಡಾ. ವಿಜಯಮಹಾಂತೇಶ ಬಿ. ದಾನಮ್ಮನವರ

ವಿಜಯಪುರ: ವಿಧಾನಸಭೆ ಸಾರ್ವತ್ರಿಕ ಚುನಾವಣೆ ಅಂಗವಾಗಿ ಮೇ 10ರಂದು ಜಿಲ್ಲೆಯ 8 ವಿಧಾನಸಭಾ ಕ್ಷೇತ್ರಗಳಲ್ಲಿ ಸುಸೂತ್ರವಾಗಿ ಮತದಾನ  ನಡೆದಿದ್ದು, ಮೇ 13 ರ ಮತ ಎಣಿಕೆ ನಡೆಯಲಿದ್ದು, ಸುಗಮವಾಗಿ ಮತ ಎಣಿಕೆ ಕಾರ್ಯ ನಡೆಸುವಂತೆ ನಿಯೋಜಿತ ಅಧಿಕಾರಿಗಳಿಗೆ ಜಿಲ್ಲಾ ಚುನಾವಣಾಧಿಕಾರಿ ಜಿಲ್ಲಾಧಿಕಾರಿ ಡಾ. ವಿಜಯಮಹಾಂತೇಶ ಬಿ, ದಾನಮ್ಮನವರ ಅವರು ಸೂಚನಾ ನೀಡಿದರು. ನಗರದ ಸೈನಿಕ ಶಾಲೆಯ ಸಭಾಂಗಣದಲ್ಲಿ ವಿಧಾನಸಭೆ ಚುನಾವಣೆಗೆ ಸಂಬಂಧಿಸಿದಂತೆ ಮತ ಎಣಿಕೆಗೆ ನಿಯೋಜಿಸಿರುವ ಅಧಿಕಾರಿಸ ಸಿಬ್ಬಂದಿಗಳಿಗೆ ಆಯೋಜಿಸಿದ 2ನೇ ಹಂತದ ತರಬೇತಿ ಕಾರ್ಯಕ್ರಮದಲ್ಲಿ ಜಿಲ್ಲಾ […]

ಬಸವನಾಡಿನಲ್ಲಿ ಮತ ಎಣಿಕೆಗೆ ಸಕಲ ಸಿದ್ಧತೆ- ಭೇಟಿ ನೀಡಿ ಪರಿಶೀಲನೆ ನಡೆಸಿದ ಡಿಸಿ ಡಾ. ದಾನಮ್ಮನವರ

ವಿಜಯಪುರ: ವಿಧಾನಸಭಾೆ ಸಾರ್ವತ್ರಿಕ ಚುನಾವಣೆ ಅಂಗವಾಗಿ ಮೇ.10ರಂದು ಜಿಲ್ಲೆಯ 8 ವಿಧಾನಸಭಾ ಕ್ಷೇತ್ರಗಳಲ್ಲಿ  ಸುಸೂತ್ರವಾಗಿ ಮತದಾನ ನಡೆದಿದ್ದು, ಮತ ಎಣಿಕೆ ಕಾರ್ಯ ಮೇ 13ರಂದು ಶನಿವಾರ ವಿಜಯಪುರ ನಗರದ ಸೈನಿಕ ಶಾಲೆಯಲ್ಲಿ ನಡೆಯಲಿದ್ದು, ಜಿಲ್ಲಾಡಳಿತದಿಂದ ಸಕಲ ವ್ಯವಸ್ಥೆ ಕೈಗೊಳ್ಳಲಾಗಿದೆ ಎಂದು ಜಿಲ್ಲಾ ಚುನಾವಣಾಧಿಕಾರಿ ಜಿಲ್ಲಾಧಿಕಾರಿ ಡಾ. ವಿಜಯಮಹಾಂತೇಶ ಬಿ. ದಾನಮ್ಮನವರ ಅವರು ತಿಳಿಸಿದ್ದಾರೆ.  ಒಡೆಯರ ಸದನ ಈ ಕಟ್ಟಡದಲ್ಲಿ ಮುದ್ದೇಬಿಹಾಳ ಮತ್ತು ದೇವರ ಹಿಪ್ಪರಗಿ ಮತಕ್ಷೇತ್ರಗಳ ಮತ ಎಣಕಿೆ ನಡೆಯಲಿದೆ. ಆದಿಲ್ ಶಾಹಿ ಸದನ ಈ ಕಟ್ಟಡದಲ್ಲಿ […]

ಬಸವನಾಡಿಲ್ಲಿ ಒಟ್ಟು ಶೇ. 71.34 ಮತದಾನ- ಬಬಲೇಶ್ವರ ಅತೀ ಹೆಚ್ಚು ಶೇ. 81.79, ಬಿಜಾಪುರ ನಗರದಲ್ಲಿ ಅತೀ ಕಡಿಮೆ ಶೇ. 64.59 ಮತದಾನ

ವಿಜಯಪುರ: ಬಸವನಾಡು ವಿಜಯಪುರ ಜಿಲ್ಲೆಯಲ್ಲಿ ನಡೆದ ಮತದಾನ ಒಂದೆರಡು ಅಹಿತಕರ ಘಟನೆಗಳನ್ನು ಹೊರತು ಪಡಿಸಿ ಸಂಪೂರ್ಣ ಶಾಂತಿಯುತವಾಗಿದ್ದು, ಬಬಲೇಶ್ವರ ಮತಕ್ಷೇತ್ರದಲ್ಲಿ ಜಿಲ್ಲೆಯಲ್ಲಿಯೇ ಅತೀ ಹೆಚ್ಚು ಅಂದರೆ ಶೇ. 81.79ರಷ್ಟು ಮತದಾನ ದಾಖಲಾಗಿದೆ.  ಬಿಜಾಪುರ ನಗರದಲ್ಲಿ ಅತೀ ಕಡಿಮೆ ಶೇ. 64.59 ಮತದಾನ ದಾಖಲಾಗಿದೆ. ಈಗ ಎಲ್ಲ ವಿದ್ಯುನ್ಮಾನ ಮತಯಂತ್ರಗಳನ್ನು ಮತ ಎಣಿಕೆ ನಡೆಯಲಿರುವ ವಿಜಯಪುರ ನಗರದ ಸೈನಿಕ ಶಾಲೆಯ ಭದ್ರತಾ ಕೊಠಡಿಯಲ್ಲಿ ಸುರಕ್ಷಿತವಾಗಿ ಇಡಲಾಗಿದೆ.  ಅಲ್ಲದೇ, ಈ ಭದ್ರತಾ ಕೊಠಡಿಗಳ ಸುತ್ತಮುತ್ತ ಅರೆ ಸೇನಾಪಡೆ ಮತ್ತು ಪೊಲೀಸರ ಬಿಗೀ […]

ಇಂಡಿ ಆದರ್ಶ ವಿದ್ಯಾಲಯಕ್ಕೆ ಭೇಟಿ ಜಿ. ಪಂ. ಸಿಇಓ ರಾಹುಲ ಶಿಂಧೆ ಭೇಟಿ- ಮಸ್ಟರಿಂಗ್ ಕಾರ್ಯದ ಪೂರ್ವಸಿದ್ಧತೆ ಪರಿಶೀಲನೆ

ವಿಜಯಪುರ: ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯ ನಿರ್ವಾಹಕ ಅಧಿಕಾರಿ ರಾಹುಲ ಶಿಂಧೆ ಅವರು ಇಂಡಿ ಪಟ್ಟಣದ ಸರಕಾರಿ ಆದರ್ಶ ವಿದ್ಯಾಲಯಕ್ಕೆ ಭೇಟಿ ನೀಡಿ ಮಸ್ಟರಿಂಗ್ ಕಾರ್ಯದ ಪೂರ್ವ ಸಿದ್ಧತೆಯನ್ನು ಪರಿಶೀಲನೆ ನಡೆಸಿದರು. ಮಸ್ಟರಿಂಗ್ ಕೇಂದ್ರದ ಪ್ರತಿ ಕೋಣೆಗಳಿಗೆ ತೆರಳಿ ಚುನಾವಣೆ ಅಧಿಕಾರಿಗಳಿಂದ ಪೂರ್ವ ಸಿದ್ಧತೆಯ ಬಗ್ಗೆ ಮಾಹಿತಿಯನ್ನು ಪಡೆದ ಅವರು, ಈಗಾಗಲೇ ಎಲ್ಲ ಪೂರ್ವಸಿದ್ಧತೆಯನ್ನು ಪರಿಶೀಲಿಸಲಾಗಿದ್ದು, ಎಲ್ಲವೂ ಸರಳವಾಗಿ ನಡೆಯುತ್ತಿದೆ.  ಈ ಬಾರಿಯ ಚುನಾವಣೆಯನ್ನು ಅತ್ಯಂತ ಸುಸೂತ್ರವಾಗಿ ನಡೆಸಿಕೊಂಡು ಹೋಗುವಂತೆ ಅಧಿಕಾರಿಗಳಿಗೆ ತಿಳಿಸಲಾಗಿದೆ.  ಚುನಾವಣೆಯ ಸಂದರ್ಭದಲ್ಲಿ ಯಾವದೇ […]

ವಿಧಾನಸಭೆ ಚುನಾವಣೆ: ಮೇ 10ರಂದು ಮತದಾನ- ಸೈನಿಕ್ ಶಾಲೆ ಮಸ್ಟರಿಂಗ್ ಕೇಂದ್ರಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಜಿಲ್ಲಾಧಿಕಾರಿ

ವಿಜಯಪುರ: ಮುಕ್ತ ನ್ಯಾಯ ಸಮ್ಮತ ಹಾಗೂ ಸುಗಮ ಚುನಾವಣೆಗೆ ಜಿಲ್ಲಾಡಳಿತದ ವತಿಯಿಂದ ಸಕಲ ಸಿದ್ಧತೆಗಳನ್ನು ಕೈಗೊಂಡಿದ್ದು, ಮೇ 10ರಂದು ಬುಧವಾರ ಮತದಾನ ಹಾಗೂ ಮೇ 13ರಂದು ಶನಿವಾರ ಮತ ಎಣಿಕೆ ನಡೆಯಲಿರುವ ನಗರದ ನಗರದ ಸೈನಿಕ ಶಾಲೆಯಲ್ಲಿ ಮತ ಏಣಿಕೆ ಕೇಂದ್ರಕ್ಕೆ ಜಿಲ್ಲಾಧಿಕಾರಿ ಡಾ. ವಿಜಯಮಹಾಂತೇಶ ಬಿ. ದಾನಮ್ಮನವರ ಭೇಟಿ ನೀಡಿ ಸಿದ್ಧತೆಗಳ ಪರಿಶೀಲನೆ ನಡೆಸಿದರು.  ಆತ್ಮ ಸ್ಥೈರ್ಯ ತುಂಬಿದ ಜಿಲ್ಲಾಧಿಕಾರಿ ವಿಧಾನಸಭೆ ಚುನಾವಣಾ ಹಿನ್ನೆಲೆಯಲ್ಲಿ ಬಬಲೇಶ್ವರ ಮತಕ್ಷೇತ್ರಕ್ಕೆ ಸಂಬಂಧಿಸಿದಂತೆ ಬಬಲೇಶ್ವರದ ಸರ್ಕಾರಿ ಐಟಿಐ ಕಾಲೇಜಿನಲ್ಲಿ,ಬಿಜಾಪೂರ ನಗರ […]

ಈ ಚುನಾವಣೆ ಹಿಂದುತ್ವ, ಅಭಿವೃದ್ಧಿ, ಸ್ವಾಭಿಮಾನದ ಮೇಲೆ ನಡೆಯುತ್ತಿದೆ- ಕನಿಷ್ಠ ಶೇ. 90ರಷ್ಟು ಮತದಾನ ಮಾಡಬೇಕು- ಯತ್ನಾಳ

ವಿಜಯಪುರ: ಈ ಚುನಾವಣೆ ಹಿಂದುತ್ವ, ಅಭಿವೃದ್ಧಿ, ಸ್ವಾಭಿಮಾನದ ಮೇಲೆ ನಡೆಯುತ್ತಿದೆ.  ಕನಿಷ್ಠ ಶೇ. 90 ರಷ್ಟು ಮತದಾನ ಮಾಡುವ ಮೂಲಕ ಬಿಜೆಪಿ ಗೆಲ್ಲಿಸಬೇಕು ಎಂದು ಬಿಜೆಪಿ ಅಭ್ಯರ್ಥಿ ಬಸನಗೌಡ ಪಾಟೀಲ ಯತ್ನಾಳ ಹೇಳಿದರು. ನಗರದಲ್ಲಿ ರೋಡ್ ಶೋ ದಲ್ಲಿ ಪಾಲ್ಗೋಂಡು ಮಾತನಾಡಿದ ಅವರು, ಹಿಂದುತ್ವ ಸೋಲಿಸಲು ಎಲ್ಲರೂ ಒಂದಾಗಿದ್ದಾರೆ.  ಆದರೆ, ಯಾವ ಕಾರಣಕ್ಕೂ ಅವರ ಉದ್ದೇಶ ಈಡೇರಲು ಸಾಧ್ಯವಿಲ್ಲ.  ನಮ್ಮವರು ಕೂಡ ಒಂದಾಗಿದ್ದಾರೆ ಎಂದು ಅವರು ತಿಳಿಸಿದರು. ಐದು ವರ್ಷ ಅಧಿಕಾರ ಕೊಟ್ಟಿದ್ದೀರಿ.  ಮಹಾಮಾರಿ ಕೊರೊನಾದಿಂದ ಎರಡು ವರ್ಷ […]

ಎಸ್. ಯು. ಸಿ. ಐ ಅಭ್ಯರ್ಥಿಯಿಂದ ಗುಮ್ಮಟ ನಗರಿಯಲ್ಲಿ ರೋಡ್ ಶೋ ಮೂಲಕ ಮತಯಾಚನೆ

ವಿಜಯಪುರ: ಎಸ್. ಯು. ಸಿ. ಐ ಕಮ್ಯೂನಿಷ್ಟ್ ಪಕ್ಷದ ಅಭ್ಯರ್ಥಿ ಮಲ್ಲಿಕಾರ್ಜುನ ಎಚ್. ಟಿ. ಅವರು ಚುನಾವಣೆ ಬಹಿರಂಗ ಸಭೆಯ ಕೊನೆಯ ದಿನ ನಗರದ ಪ್ರಮುಖ ರಸ್ತೆಗಳು ಮತ್ತು ಪ್ರಮುಖ ಬಡಾವಣೆಗಳಲ್ಲಿ ರೋಡ್ ಶೋ ಮೂಲಕ ಮತಯಾಚನೆ ನಡೆಸಿದರು.  ವಿಜಯಪುರ ನಗರದ ಜಲನಗರ, ಕಿರ್ತಿನಗರ, ಶ್ರೀ ಸಿದ್ದೇಶ್ವರ ರಸ್ತೆ, ತೊರವಿ ರಸ್ತೆ, ಸ್ಟೇಷನ್ ರಸ್ತೆ, ಬಾಗಲಕೋಟ ರಸ್ತೆ, ಜುಮ್ಮಾ ಮಸೀದಿ ರಸ್ತೆಗಳಲ್ಲಿ ತಮ್ಮ ಕಾರ್ಯಕರ್ತರು ಮತ್ತು ಬೆಂಬಲಿಗರೊಂದಿಗೆ ರೋಡ್ ಶೋ ಮಾಡಿದ ಅವರು ಮತಯಾಚನೆ ನಡೆಸಿದರು. ಈ […]

ಮುಕ್ತ, ನ್ಯಾಯಸಮ್ಮತ ಚುನಾವಣೆಗೆ ಜಿಲ್ಲಾಡಳಿತ ಸನ್ನದ್ದ: ಮೇ 10ರಂದು ಮತದಾನ- ಜಿಲ್ಲೆಯ 8 ಕ್ಷೇತ್ರದಲ್ಲಿ 95 ಅಭ್ಯರ್ಥಿಗಳು ಕಣದಲ್ಲಿ

ವಿಜಯಪುರ: ಮುಕ್ತ ನ್ಯಾಯಸಮ್ಮತ ಹಾಗೂ ಸುಗಮ ಚುನಾವಣೆಗೆ ಜಿಲ್ಲಾಡಳಿತದ ವತಿಯಿಂದ ಸಕಲ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದ್ದು, ಮೇ.10ರಂದು ನಡೆಯಲಿರುವ ಮತದಾನಕ್ಕೆ ಎಲ್ಲಾ ಅಗತ್ಯ ಸಿದ್ಧತೆಗಳನ್ನು ಕೈಗೊಳ್ಳಲಾಗಿದೆ. ಪ್ರಜಾಸತ್ತಾತ್ಮಕ ವಿಧಾನದ ಮೂಲಕ ಸುಭದ್ರವಾದ ಸರ್ಕಾರವನ್ನು ರಚಿಸುವ ಪ್ರಕ್ರಿಯೆಯಲ್ಲಿ ಪ್ರತಿಯೊಂದು ಮತವು ಅಮೂಲ್ಯವಾಗಿರುವುದರಿಂದ  ಜಿಲ್ಲೆಯ ಅರ್ಹ ಎಲ್ಲ ಮತದಾರರು ಮತದಾನದ ಹಬ್ಬದಲ್ಲಿ ಭಾಗವಹಿಸಿ ತಪ್ಪದೇ ಮತ ಚಲಾಯಿಸುಂತೆ ಜಿಲ್ಲಾ ಚುನಾವಣಾಧಿಕಾರಿಗಳಾದ ಜಿಲ್ಲಾಧಿಕಾರಿ ಡಾ.ವಿಜಯಮಹಾಂತೇಶ ದಾನಮ್ಮನವರ ಹೇಳಿದ್ದಾರೆ.  ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಲ್ಲಿಂದು ವಿಧಾನಸಭೆ ಸಾರ್ವತ್ರಿಕ ಚುನಾವಣೆ ಸಿದ್ಧತಾ ಕಾರ್ಯಗಳ ಬಗ್ಗೆ ವಿವರ […]

ಜಿಲ್ಲಾ ಸ್ವೀಪ್ ಸಮಿತಿ ವತಿಯಿಂದ 120 ಮೀಟರ್ ಧ್ವಜ್ ಪ್ರದರ್ಶನ- ಮಾನವ ಸರಪಳಿ ನಿರ್ಮಿಸಿ ಮತದಾನ ಜಾಗೃತಿ- ಕಡ್ಡಾಯವಾಗಿ ಮತದಾನ ಮಾಡಲು ಕರೆ

ವಿಜಯಪುರ: ಪ್ರಜಾಪ್ರಭುತ್ವ ಹಬ್ಬಕ್ಕೆ ಇನ್ನೂ ಕೇವಲ ಮೂರು ದಿನ ಮಾತ್ರ ಬಾಕಿಯಿದ್ದು, ಎಲ್ಲ ಅರ್ಹ ಮತದಾರರು ತಮ್ಮ ಪರಿವಾರದ ಅರ್ಹ ಮತದಾರರೊಂದಿಗೆ ಕಡ್ಡಾಯವಾಗಿ ಮತದಾನ ಕೇಂದ್ರಕ್ಕೆ ತೆರಳಿ ಮತದಾನ ಮಾಡುವಂತೆ ಜಿಲ್ಲಾ ಚುನಾವಣಾಧಿಕಾರಿಗಳಾದ   ಜಿಲ್ಲಾಧಿಕಾರಿ ಡಾ. ವಿಜಯಮಹಾಂತೇಶ ಬಿ. ದಾನಮ್ಮನವರ ಅವರು ಮನವಿ ಮಾಡಿದ್ದಾರೆ.  ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಮಹಾನಗರ ಪಾಲಿಕೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಆರೋಗ್ಯ ಇಲಾಖೆ ಹಾಗೂ ಜಿಲ್ಲಾ ಸ್ವೀಪ್ ಸಮಿತಿ, ಸಹಯೊಗದಲ್ಲಿ ನಗರದ ಶ್ರೀ ಸಿದ್ದೇಶ್ವರ ದೇವಸ್ಥಾನದ ಆವರಣದಲ್ಲಿ ಮತದಾನ […]

ವಿಧಾನಸಭೆ ಚುನಾವಣೆ: ಮತದಾನ ಕುರಿತು ಜನರಲ್ಲಿ ಜಾಗೃತಿ ಮೂಡಿಸಿದ ಜಿ. ಪಂ. ಸಿಇಒ ರಾಹುಲ ಶಿಂಧೆ

ವಿಜಯಪುರ: ಕಳೆದ ಚುನಾವಣೆಗಿಂತ ಈ ಬಾರಿ ಚುನಾವಣೆಯಲ್ಲಿ ಜಿಲ್ಲೆಯಾದ್ಯಂತ ಮತದಾನ ಪ್ರಮಾಣ ಹೆಚ್ಚಾಗಲಿದೆ ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರಾಹುಲ್ ಶಿಂಧೆ ಅವರು ಹೇಳಿದರು. ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಹಾಗೂ ಜಿಲ್ಲಾ ಸ್ವೀಪ್ ಸಮಿತಿ ವತಿಯಿಂದ ನಗರದ ಕೇಂದ್ರ ಬಸ್ ನಿಲ್ದಾಣದಲ್ಲಿ ಆಯೋಜಿಸಿದ್ದ ಮತದಾನ ಜಾಗೃತಿ ಕಾರ್ಯಕ್ರಮದ ಅಂಗವಾಗಿ ಜಿಲ್ಲೆಯ ವಿವಿಧೆಡೆ ಸಂಚರಿಸುವ ಬಸ್‌ಗಳಿಗೆ ಮತದಾನ ಜಾಗೃತಿ ಸ್ವೀಕರ್ಸ್ಗಳನ್ನು ಅಂಟಿಸುವುದು, ಬಸ್ ನಿಲ್ದಾಣದಲ್ಲಿ ಸೇಲ್ಪಿ ಸ್ಟ್ಯಾಂಡ್ ಅಳವಡಿಸಿ, ಕರ ಪತ್ರ ಹಂಚಿ, ಜಾಗೃತಿ ಗೀತೆಗಳನ್ನು ಹಾಡಿ, […]