ವಿಜಯಪುರದಲ್ಲಿ ಸಂಸ್ಕೃತೋತ್ಸವ ಕಾರ್ಯಕ್ರಮ- ಪೇಜಾವರ ಶ್ರೀ, ಬಸವಲಿಂಗ ಸ್ವಾಮೀಜಿ ಚಾಲನೆ

ವಿಜಯಪುರ: ನಗರದ ಕಂದಗಲ ಹಣಮಂತರಾಯ ರಂಗ ಮಂದಿರದಲ್ಲಿ ಸಂಸ್ಕೃತೋತ್ಸವ ಕಾರ್ಯಕ್ರಮ ನಡೆಯಿತು. ಈ ಕಾರ್ಯಕ್ರಮವನ್ನು ಪೇಜಾವರ ಮಠದ ಶ್ರೀ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಮತ್ತು ಜ್ಞಾನಯೋಗಾಶ್ರಮದ ಅಧ್ಯಕ್ಷ ಶ್ರೀ ಬಸವಲಿಂಗ ಸ್ವಾಮೀಜಿ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಪೇಜಾವರ ಶ್ರೀಗಳು, ಸಂಸ್ಕೃತ ಅತ್ಯಂತ ಪ್ರಾಚೀನವಾದ ಭಾಷೆಯಾಗಿದೆ.  ಇಂದು ಅದು ಕೇವಲ ಕೆಲವೇ ಜನ ಬಳಿಕೆ ಮಾಡುವ ಭಾಷೆಯಾಗಿದೆ.  ದೇಶದ ಪ್ರತಿಯೊಂದು ಭಾಷೆಯಲ್ಲೂ ನಾವು ಶೇ. 60ರಷ್ಟು ಸಂಸ್ಕೃತ ಭಾಷೆಯ ಶಬ್ದಗಳನ್ನು ಬಳಿಕೆ ಕಾಣುತ್ತೇವೆ.  ನಿಸರ್ಗದ ಪ್ರಾಣಿ ಪಕ್ಷಿಗಳ […]

ಅಕ್ಷರದವ್ವ ಸಾವಿತ್ರಿಬಾಯಿ ಫುಲೆಯವರ 193ನೇ ಜನ್ಮದಿನ, ಪ್ರಶಸ್ತಿ ಪ್ರಧಾನ ಸಮಾರಂಭ- ದಲಿತ ವಿದ್ಯಾರ್ಥಿ ಪರಿಷತನಿಂದ ಆಯೋಜನೆ

ವಿಜಯಪುರ: ದಲಿತ ವಿದ್ಯಾರ್ಥಿ ಪರಿಷತ್ ವತಿಯಿಂದ ನಗರದ ಕಂದಗಲ್ ಹನುಮಂತರಾಯ ರಂಗಮಂದಿರದಲ್ಲಿ ಸಾವಿತ್ರಿಬಾಯಿ ಫುಲೆ ಅವರ 193ನೇ ಜನ್ಮದಿನದ ಅಂಗವಾಗಿ 2024ನೇ ವರ್ಷದ ರಾಜ್ಯಮಟ್ಟದ ಅಕ್ಷರದವ್ವ ಸಾವಿತ್ರಿಬಾಯಿ ಫುಲೆ ಪ್ರಶಸ್ತಿ ಪ್ರಧಾನ ಸಮಾರಂಭ ಹಾಗೂ ಅಕ್ಷರದವ್ವ ಸಾವಿತ್ರಿಬಾಯಿ ಫುಲೆ ನಾಟಕ ಪ್ರದರ್ಶನ ನಡೆಯಿತು.  ಈ ಕಾರ್ಯಕ್ರಮವನ್ನು ಪ್ರಜಾ ಪರಿವರ್ತನ ವೇದಿಕೆ ಹಾಗೂ ಕೆಪಿಸಿಸಿ ರಾಜ್ಯ ಉಪಾಧ್ಯಕ್ಷ ಬಿ. ಗೋಪಾಲ ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು, ಸಾವಿತ್ರಿಬಾಯಿ ಫುಲೆ ಅವರು ಅಂದಿನ ದಿನಗಳಲ್ಲಿ ಮೆಲ್ಜಾತಿಯವರ ತುಳಿತ, ಹೆಣ್ಣುಮಕ್ಕಳು, ಶೊಷಿತ […]

ವಿಜಯಪುರದ ಐಶ್ವರ್ಯ ನಗರದಲ್ಲಿ ರಾಮ ಮಂದಿರ ಉದ್ಘಾಟನೆ ಆಮಂತ್ರಣ ಮಂತ್ರಾಕ್ಷತೆ ವಿತರಣೆ

ವಿಜಯಪುರ: ಅಯೋಧ್ಯೆಯಲ್ಲಿ ಶ್ರೀರಾಮ ಮಂದಿರ ಉದ್ಘಾಟನೆಗೆ ಸಿದ್ಧವಾಗಿದ್ದು, ಈ ಕಾರ್ಯಕ್ರಮದ ಮಂತ್ರಾಕ್ಷತೆ ಮತ್ತು ಆಮಂತ್ರಣ ಪತ್ರಿಕೆ ವಿತರಣೆ ಕಾರ್ಯಕ್ರಮ ನಗರದಲ್ಲಿ ನಡೆಯಿತು. ನಗರದ ಜ್ಞಾನಯೋಗಾಶ್ರಮ ಬಳಿ ಇರುವ ಐಶ್ವರ್ಯ ನಗರದ ಶ್ರೀ ವೀರಾಂಜನೇಯ ದೇವಾಲಯದಲ್ಲಿ ಅಯೋಧ್ಯದಿಂದ ಬಂದಿರುವ ಮಂತ್ರಾಕ್ಷತೆ, ಆಮಂತ್ರಣ ಪತ್ರಿಕೆ, ಅಯೋಧ್ಯೆ ದೇವಾಲಯದ ಚಿತ್ರಗಳನ್ನು ವಿತರಿಸಲಾಯಿತು.  ಐಶ್ವರ್ಯ ನಗರದ ಸುತ್ತಲಿನ ಬಡಾವಣೆಗಳ ರಾಮಭಕ್ತರು ಈ ಕಾರ್ಯಕ್ರಮದಲ್ಲಿ ಪಾಲ್ಗೊಂಡರು ಈ ಸಂದರ್ಭದಲ್ಲಿ ಮುಖಂಡರಾದ ಗಿರೀಶ ಪಾಟೀಲ, ಸಿದ್ದು ಕರಲಗಿ, ವಿರಾಜ ಅಂಗಡಿ, ಜಯಪ್ರಕಾಶ ಅಂಬಲಿ, ರವಿ ಹಿತ್ತಲಮನಿ, […]

ಸಿದ್ದೇಶ್ವರ ಸ್ವಾಮೀಜಿಗಳ ನೀತಿ, ಆದರ್ಶಗಳನ್ನು ಸರಕಾರ ಪಾಲಿಸಲಿದೆ-ನಾನು ಬಸವಾದಿ ಶರಣರ ಅನುಯಾಯಿ- ಸಿಎಂ ಸಿದ್ಧರಾಮಯ್ಯ

ವಿಜಯಪುರ: ನಾನು ಬಸವಾದಿ ಶರಣರ ಅನುಯಾಯಿ.  ಶ್ರೀ ಸಿದ್ಧೇಶ್ವರ ಸ್ವಾಮೀಜಿಗಳ ನೀತಿ ಆದರ್ಶಗಳನ್ನು ನಾನು ಮತ್ತು ನಮ್ಮ ಸರಕಾರ ಪಾಲನೆ ಮಾಡಲಿದೆ ಎಂದು ಮುಖ್ಯಮಂತ್ರಿ ಎಸ್. ಸಿದ್ಧರಾಮಯ್ಯ ಹೇಳಿದ್ದಾರೆ. ವಿಜಯಪುರ ನಗರದ ಜ್ಞಾನಯೋಗಾಶ್ರಮದ ಶ್ರೀ ಸಿದ್ದೇಶ್ವರ ಸ್ವಾಮೀಜಿ ಲಿಂಗೈಕ್ಯರಾಗಿ ಇಂದಿಗೆ ಒಂದು ವರ್ಷ ಪೂರ್ಣವಾಗುತ್ತಿರುವ ಹಿನ್ನೆಲೆಯಲ್ಲಿ ಆಯೋಜಿಸಲಾದ ಶ್ರೀ ಸಿದ್ದೇಶ್ವರ ಸ್ವಾಮೀಜಿಗಳ ಗುರುನಮನ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು. ನಾನು ಬಸವಾದಿ ಶರಣರ ಅನುಯಾಯಿ.  ಅವರು ಜಾತಿ ಮತ್ತು ಧರ್ಮ ರಹಿತವಾದ ಸಮಾಜ ನಿರ್ಮಾಣ ಗುರಿ […]

ಶ್ರೀ ಸಿದ್ಧೇಶ್ವರ ಅಪ್ಪನವರಂಥ ಗುರು ಮತ್ತೊಬ್ಬರು ಸಿಗಲು ಸಾಧ್ಯವಿಲ್ಲ- ಸಂಸದ ರಮೇಶ ಜಿಗಜಿಣಗಿ ಭಾವುಕ ನುಡಿ

ವಿಜಯಪುರ: ಶ್ರೀ ಸಿದ್ದೇಶ್ವರ ಅಪನವರಂಥ ಗುರು ಮತ್ತೊಬ್ಬರು ಸಿಗಲು ಸಾಧ್ಯವಿಲ್ಲ ಎಂದು ಸಂಸದ ರಮೇಶ ಜಿಗಜಿಣಗಿ ಹೇಳಿದ್ದಾರೆ. ನಗರದ ಜ್ಞಾನಯೋಗಾಶ್ರಮದಲ್ಲಿ ನಡೆಯುತ್ತಿರುವ ಗುರುನಮನ ಮಹೋತ್ಸವದ ಅಂಗವಾಗಿ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. ನಾನು ಸಮಾಜದ ಅತ್ಯಂತ ಸಣ್ಣ ವ್ಯಕ್ತಿ.  ಆದರೆ, ಶ್ರೀಗಳು ನನ್ನನ್ನು ಅತ್ಯಂತ ಆತ್ಮೀಯವಾಗಿ ಮಾತನಾಡಿಸುತ್ತಿದ್ದರು.  ತಮ್ಮ ಪಕ್ಕದಲ್ಲಿಯೇ ಕೂಡಿಸಿಕೊಂಡು ಊಟ ಮಾಡುತ್ತಿದ್ದರು.  ಅವರಂಥ ಸಂತರನ್ನು ನನ್ನ ಇಡೀ ಜೀವನದಲ್ಲಿಯೇ ಕಂಡಿಲ್ಲ.  ವ್ಯಕ್ತಿತ್ವದಿಂದಲೇ ಅವರು ಜಗತ್ಪ್ರಸಿದ್ಧಿಯನ್ನು ಗಳಿಸಿದ್ದರು.  ಸ್ವಂತಕ್ಕೆ ಏನನ್ನು ಭಯಸದೆ ಸದಾ ಸಮಾಜಕ್ಕೆ […]

ಜ್ಞಾನಯೋಗಾಶ್ರಮದಲ್ಲಿ ಶತಮಾನದ ಸಂತನಿಗೆ ಗುರುನಮನ- ಸಾಗರೋಪಾದಿಯಲ್ಲಿ ಹರಿದು ಬರುತ್ತಿದೆ ಶ್ರೀ ಸಿದ್ಧೇಶ್ವರ ಸ್ವಾಮೀಜಿ ಭಕ್ತಗಣ

ವಿಜಯಪುರ: ಹೊಸ ವರ್ಷವನ್ನು ವಿಶ್ವಾದ್ಯಂತ ಸಡಗರ ಮತ್ತು ಸಂಭ್ರಮದಿಂದ ಆರಂಭಿಸಿದ್ದಾರೆ.  ಆದರೆ, ಇದೇ ವೇಳೆ, ಬಸವ ನಾಡಿನ ಜನ ಮಾತ್ರ ಇದನ್ನು ಶ್ರದ್ಧಾ ಭಕ್ತಿಯಿಂದ ಶತಮಾನದ ಸಂತ ಶ್ರೀ ಸಿದ್ಧೇಶ್ವರ ಸ್ವಾಮೀಜಿಗಳ ಪುಣ್ಯಭೂಮಿಗೆ ಭೇಟಿ ನೀಡುವ ಮೂಲಕ ತಮ್ಮ ಚಟುವಟಿಕೆಗಳನ್ನು ಪ್ರಾರಂಭಿಸಿದ್ದಾರೆ. ನಡೆದಾಡಿದ ದೇವರು ಶ್ರೀ ಸಿದ್ಧೇಶ್ವರ ಸ್ವಾಮೀಜಿಗಳು ದೇಹತ್ಯಾಗ ಮಾಡಿ ಈಗ ಒಂದು ವರ್ಷ ಪೂರ್ಣವಾಗುತ್ತಿದೆ.  ಈ ಹಿನ್ನೆಲೆಯಲ್ಲಿ ಕಳೆದ ಸುಮಾರು ಒಂದು ತಿಂಗಳಿಂದ ಗುರುನಮನ ಕಾರ್ಯಕ್ರಮದ ಅಂಗವಾಗಿ ನಾನಾ ಧಾರ್ಮಿಕ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳು […]

Year End Poem: 2023 ವರ್ಷಾಂತ್ಯದ ಸಂದರ್ಭದಲ್ಲಿ ಡಾ. ಅರುಣ ಚಂ. ಇನಾಮದಾರ ರಚಿಸಿರುವ ಕವನ

ವಿಜಯಪುರ: ಸಾಕಷ್ಟು ನಲಿವು ಮತ್ತು ನೋವಗಳನ್ನು ನೀಡಿದ ವರ್ಷ 2023.  ಈ ವರ್ಷದಲ್ಲಿ ಹಲವರಿಗೆ ಒಳ್ಳೆಯದಾಗಿದ್ದರೆ, ಮತ್ತೆ ಕೆಲವರಿಗೆ ಸಂಕಷ್ಟ ತಂದಿದೆ.  ಈ ಸಂದರ್ಭದಲ್ಲಿ ಚರ್ಮರೋಗ ಖ್ಯಾತ ತಜ್ಞ ಮತ್ತು ವಿಜಯಪುರದ ಪ್ರತಿಷ್ಠಿತ ಬಿ.ಎಲ್.ಡಿ.ಇ ಡೀಮ್ಡ್ ವಿಶ್ವವಿದ್ಯಾಲಯದ ಸಮಕುಲಪತಿ ಡಾ. ಅರುಣ ಚಂ. ಇನಾಮದಾರ ಅವರು  ನೆನಪು ಹೆಸರಿನಲ್ಲಿ ಕವಿತೆಯೊಂದನ್ನು ರಚಿಸಿದ್ದಾರೆ. ಮುಪ್ಪಾವಸ್ಥೆಯಲ್ಲಿರುವ ದಂಪತಿ ತಮ್ಮ ಯೌವ್ವನಾವಸ್ಥೆಯ ನೆನಪುಗಳನ್ನು ಸ್ಮರಿಸುವ ಪದ್ಯ ಇದಾಗಿದೆ.  ಅಲ್ಲದೇ, ಮುಂಬರುವ ಹೊಸ ವರ್ಷವನ್ನು ಸ್ವಾಗತಿಸುವ ಸಂದೇಶವೂ ಇದರಲ್ಲಿದೆ. ಡಾ. ಅರುಣ ಚಂ. […]

ಕೃಷ್ಣಾ ನಗರದಲ್ಲಿ ಬಣಜಿಗ ಸಮಾಜದಿಂದ ಪ್ರತಿಭಾ ಪುರಸ್ಕಾರ, ಪ್ರಶಸ್ತಿ ಪ್ರಧಾನ ಸಮಾರಂಭ- ಜಗದೀಶ ಶೆಟ್ಟರ, ಬಿ. ವೈ. ವಿಜಯೇಂದ್ರ ಭಾಗಿ

ವಿಜಯಪುರ: 12ನೇ ಶತಮಾನದಲ್ಲಿ ಅನುಭವ ಮಂಟಪ ಸ್ಥಾಪಿಸುವ ಮೂಲಕ ಜಗಜ್ಯೋತಿ ಬಸವೇಶ್ವರರು ಜಾತಿ ವ್ಯವಸ್ಥೆ ಹೋಗಲಾಡಿಸಿ ಸಮಾನತೆಗೆ ನಾಂದಿ ಹಾಡಿದ್ದಾರೆ  ಎಂದು ಮಾಜಿ ಸಿಎಂ ಜಗದೀಶ ಶೆಟ್ಟರ ಹೇಳಿದ್ದಾರೆ. ಬಬಲೇಶ್ವರ ತಾಲೂಕಿನ ಕೃಷ್ಣಾ ನಗರದ ನಂದಿ ಸಹಕಾರಿ ಸಕ್ಕರೆ ಕಾರ್ಖಾನೆಯ ಕೆ. ಎಚ್. ಪಾಟೀಲ ಮೆಮೋರಿಯಲ್, ಸಭಾ ಭವನದಲ್ಲಿ ಕರ್ನಾಟಕ ರಾಜ್ಯ ಬಣಜಿಗ ಸಮಾಜದ ಕ್ಷೇಮಾಭಿವೃದ್ಧಿ ಸಂಘದ ಬಬಲೇಶ್ವರ ತಾಲೂಕು ಮತ್ತು ಬೀಳಗಿ ತಾಲೂಕು ಘಟಕಗಳು ಆಯೋಜಿಸಿದ್ದ ವಿಜಯಪುರ ಮತ್ತು ಬಾಗಲಕೋಟೆ ಜಿಲ್ಲೆಗಳ ಬಣಜಿಗ ಸಮಾಜದ ಸಂಘಟನಾ […]

ವಿಜಯಪುರ ಜಿಲ್ಲಾಡಳಿತದಿಂದ ರಾಷ್ಟ್ರಕವಿ ಕುವೆಂಪು ಅವರ ಜನ್ಮದಿನದ ಅಂಗವಾಗಿ ವಿಶ್ವಮಾನವ ದಿನಾಚರಣೆ

ವಿಜಯಪುರ: ಜ್ಞಾನಪೀಠ ಪುರಸ್ಕೃತ ಕನ್ನಡದ ಮೊದಲ ಸಾಹಿತಿ, ಕನ್ನಡ ನಾಡು-ನುಡಿಗೆ ತಮ್ಮ ಜೀವನವ ಮುಡಿಪಾಗಿಟ್ಟು, ಕನ್ನಡ ಸಾಹಿತ್ಯ ಲೋಕದ ದಿಗ್ಗಜ, ರಾಷ್ಟ್ರ ಕವಿ, ವಿಶ್ವ ಮಾನವರಾಗಿ ರಾಷ್ಟ್ರದಲ್ಲಿ ತಮ್ಮ ಸಾಹಿತ್ಯ ಸಂಚಲನದಿAದ ಮೆರಗು ನೀಡಿ ರಾಷ್ಟ್ರ ಕವಿ ಎನಿಸಿಕೊಂಡವರು ಕುವೆಂಪು ಅವರು ಮಾತ್ರ ಎಂದು ಹೇಳಿದರು. ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಆಯೋಜಿಸಲಾದ ರಾಷ್ಟ್ರಕವಿ ಕುವೆಂಪು ಅವರ ಜನ್ಮದಿನದ ಅಂಗವಾಗಿ ವಿಶ್ವಮಾನವ ದಿನಾಚರಣೆ ಕಾರ್ಯಕ್ರಮವನ್ನು […]

ಡಾ. ಬಿ. ಆರ್. ಅಂಬೇಡ್ಕರ ಅವರ ಬದುಕು, ಸಾಧನೆ: ವಿಶೇಷ ಉಪನ್ಯಾಸಕ ಕಾರ್ಯಕ್ರಮ

ವಿಜಯಪುರ: ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಡಾ. ಬಿ. ಆರ್. ಅಂಬೇಡ್ಕರ್ ಓದು ಎಂಬ ಡಾ. ಬಿ.ಆರ್.ಅಂಬೇಡ್ಕರ್ ಅವರ ಬದುಕು ಮತ್ತು ಸಾಧನೆಗಳ ಕುರಿತು ವಿಶೇಷ ನಗರದ ದರಬಾರ ಶಾಲೆಯಲ್ಲಿ ವಿಶೇಷ ಉಪನ್ಯಾಸ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮವನ್ನು ಉದ್ಘಾಟಿಸಿದ ವಿದ್ಯಾವರ್ಧಕ ಸಂಘದ ಸಂಯೋಜನಾಧಿಕಾರಿ ಡಾ. ವಿ. ಬಿ. ಗ್ರಾಮ ಪುರೋಹಿತ ಅವರು, ಪ್ರಬಂಧ ಸ್ಪರ್ಧೆಯಲ್ಲಿ ವಿಜೇತ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಿ ಮಾತನಾಡಿ, ಡಾ.ಅಂಬೇಡ್ಕರ್ ಅವರಲ್ಲಿನ ಓದಿನ ಹಂಬಲ ಇಂದಿನ ವಿದ್ಯಾರ್ಥಿಗಳಿಗೆ ಮಾದರಿಯಾಗಿದೆ ಎಂದು ಹೇಳಿದರು. ಪ್ರಾಚಾರ್ಯ […]