ಗುಮ್ಮಟ ನಗರಿಯಲ್ಲಿ ಜಿಲ್ಲಾಡಳಿತದ ವತಿಯಿಂದ ಡಾ. ಬಿ. ಆರ್. ಅಂಬೇಡ್ಕರ್ 67ನೇ ಮಹಾ ಪರಿನಿರ್ವಾಣ ದಿನದ ಅಂಗವಾಗಿ ಗೌರವ ಸಮರ್ಪಣೆ

ವಿಜಯಪುರ: ಜಿಲ್ಲಾಡಳಿತದ ವತಿಯಿಂದ ಸಂವಿಧಾನ ಶಿಲ್ಪಿ, ಭಾರತ ರತ್ನ ಡಾ.ಬಿ.ಆರ್. ಅಂಬೇಡ್ಕರ್ ಅವರ ಮಹಾ ಪರಿನಿರ್ವಾಣ ದಿನದ ಪ್ರಯುಕ್ತ ಜಿಲ್ಲಾಧಿಕಾರಿ ಟಿ. ಭೂಬಾಲನ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಋಷಿಕೇಶ ಸೋನಾವಣೆ ಹಾಗೂ ಜಿಪಂ ಸಿಇಒ ರಾಹುಲ್ ಶಿಂಧೆ ಅವರು ನಗರದ  ಅಂಬೇಡ್ಕರ್ ವೃತ್ತದಲ್ಲಿನ ಡಾ. ಬಿ. ಆರ್. ಅಂಬೇಡ್ಕರ್ ಪ್ರತಿಮೆಗೆ ಮಾಲಾರ್ಪಣೆ ಮತ್ತು ಪುಷ್ಪಾರ್ಚನೆ ಮಾಡಿ, ಗೌರವ ಸಲ್ಲಿಸಿದರು. ಈ ಸಂದರ್ಭದಲ್ಲಿ ಅಪರ ಜಿಲ್ಲಾಧಿಕಾರಿಗಳಾದ ಮಹಾದೇವ ಮುರಗಿ, ವಿಜಯಪುರ ಉಪ ವಿಭಾಗಾಧಿಕಾರಿ ಬಸಣೆಪ್ಪ ಕಲಶೆಟ್ಟಿ,ಸಮಾಜ ಕಲ್ಯಾಣ ಇಲಾಖೆಯ […]

ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ಶಾಲೆಯಲ್ಲಿ ಕರ್ನಾಟಕ ಸಂಭ್ರಮ ಅಂಗವಾಗಿ ಚಿಗುರು ಸಾಂಸ್ಕೃತಿಕ ಕಾರ್ಯಕ್ರಮ

ವಿಜಯಪುರ: ಮಕ್ಕಳಲ್ಲಿರುವ ಕಲಾ ಪ್ರತಿಭೆಯನ್ನು ಗುರುತಿಸಿ ಪ್ರೊತ್ಸಾಹಿಸುವ ಅವಶ್ಯಕತೆ ಇದೆ ಎಂದು ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ಪ್ರಾಥಮಿಕ ಹಾಗೂ ಪ್ರೌಢಶಾಲೆಯ ಅಧ್ಯಕ್ಷ ಸುರೇಶ ದೇಸಾಯಿ ಅಭಿಪ್ರಾಯಪಟ್ಟರು. ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ನಗರದ ವಿವೇಕನಗರದ ಶಿವಶರಣೆ ಹೆಮರೆಡ್ಡಿ ಮಲ್ಲಮ್ಮ ಪ್ರಾಥಮಿಕ ಹಾಗೂ ಪ್ರೌಢಶಾಲೆಯಲ್ಲಿ ಕರ್ನಾಟಕ ಸಂಭ್ರಮ-50ರ ಅಂಗವಾಗಿ ಆಯೋಜಿಸಿದ ಚಿಗುರು ಸಾಂಸ್ಕೃತಿಕ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಶೈಕ್ಷಣಿಕ ಹಾಗೂ ಕ್ರೀಡೆಯ ಜೊತೆಗೆ ಮಕ್ಕಳಿಗೆ ನಮ್ಮ ಕಲೆ ಸಂಸ್ಕೃತಿ ಸಾಹಿತ್ಯವನ್ನು ಪರಿಚಯಿಸುವುದರೊಂದಿಗೆ ಅವರಲ್ಲಿ ಅಡಗಿರುವ ಕಲಾ […]

ಮಾಜಿ ಸಚಿವ ಅಪ್ಪ ಪಟ್ಟಣಶೆಟ್ಟಿ ಅವರಿಂದ ಪ್ರತಿ ಸೋಮವಾರ ಅನ್ನದಾಸೋಹ- ಶಿವಾಜಿ ಚೌಕಿನಲ್ಲಿ ಬಸವಲಿಂಗ ಸ್ವಾಮೀಜಿ ಚಾಲನೆ

ವಿಜಯಪುರ: ಸಚಿವ ಅಪ್ಪು ಪಟ್ಟಣಶೆಟ್ಟಿ ಅವರು ನಗರದ ಶಿವಾಜಿ ಚೌಕಿನಲ್ಲಿ ಶ್ರೀ ಗಜಾನನ ಉತ್ಸವ ಮಹಾಮಂಡಳ ವತಿಯಿಂದ ಪ್ರತಿ ಸೋಮವಾರ ಅನ್ನದಾಸೋಹ ಸೇವೆ ಪ್ರಾರಂಭಿಸಿದ್ದಾರೆ. ಈ ಕಾರ್ಯಕ್ಕೆ ಜ್ಞಾನಯೋಗ್ರಾಮದ ಅಧ್ಯಕ್ಷ ಶ್ರೀ ಬಸವಲಿಂಗ ಸ್ವಾಮೀಜಿ ಪೂಜೆ ಮಾಡುವ ಮೂಲಕ ಚಾಲನೆ ನೀಡಿದರು.  ಬಳಿಕ ಮಾತನಾಡಿದ ಅವರು, ಅನ್ನ ದಾಸೋಹ ಕಾರ್ಯಕ್ರಮವನ್ನು ಅಚ್ಚುಕಟ್ಟಾಗಿ ಮಾಡಲಾಗಿದೆ.  ವಿಜಯಪುರದ ಶಿವಾಜಿ ಚೌಕಿನಲ್ಲಿ ಇನ್ನು ಮುಂದೆ ಪ್ರತಿ ಸೋಮವಾರ ಅನ್ನದಾಸೋಹ ವ್ಯವಸ್ಥೆ ಮಾಡುತ್ತಿರುವುದು ಅಭಿನಂದನಾರ್ಹವಾಗಿದೆ.  ಜ್ಞಾನಯೋಗಾಶ್ರಮದಲ್ಲಿ ನಿರಂತರ ಅನ್ನ‌ಪ್ರಸಾದ ಇರುತ್ತದೆ.  ಅದೇ ರೀತಿ […]

ಬಸವ ನಾಡಿನಲ್ಲಿ ಬಸನಗೌಡರ ಮದುವೆ ಆರತಕ್ಷತೆ ಸಂಭ್ರಮ- ಮಠಾಧೀಶರ ಸಾನಿಧ್ಯದಲ್ಲಿ ಬಂದು ಹರಸಿದರು ಲಕ್ಷಾಂತರ ಜನ

ವಿಜಯಪುರ:ಬಸವ ನಾಡಿನಲ್ಲಿ ನಡೆಯಿತು ಬಸನಗೌಡರ ಮದುವೆ ಆರತಕ್ಷತೆ ಸಂಭ್ರಮ.  ಮಠಾಧೀಶರ ಸಾನಿಧ್ಯದ ಕಾರ್ಯಕ್ರಮಕ್ಕೆ ಸಾಗರೋಪಾದಿಯಲ್ಲಿ ಬಂದು ಹರಸಿದರು ಲಕ್ಷಾಂತರ ಜನ.   ಇದು ಬೃಹತ್ ಮತ್ತು ಮಧ್ಯಮ ಕೈಗಾರಿಕೆ, ಮೂಲ ಸೌಕರ್ಯ ಅಭಿವೃದ್ಧಿ ಸಚಿವ ಎಂ. ಬಿ. ಪಾಟೀಲ ಮತ್ತು ಆಶಾ ಎಂ. ಪಾಟೀಲ ದಂಪತಿಯ ಹಿರಿಯ ಪುತ್ರ ಹಾಗೂ ಬಿ.ಎಲ್.ಡಿ.ಇ ಸಂಸ್ಥೆ ನಿರ್ದೇಶಕ ಬಸನಗೌಡ ಪಾಟೀಲ ಹಾಗೂ ಹಿರಿಯ ಶಾಸಕ ಡಾ. ಶ್ಯಾಮನೂರು ಶಿವಶಂಕರಪ್ಪ ಅವರ ಮೊಮ್ಮಗಳಾದ ಅಖಿಲಾ ಅವರ ವಿವಾಹ ಆರತಕ್ಷತೆ ಕಾರ್ಯಕ್ರಮದ ಝಲಕ್.  ನಾಡಿನ […]

ದಾಸ ಸಾಹಿತ್ಯಕ್ಕೆ ವೈಚಾರಿಕ ನೆಲೆಗಟ್ಟನ್ನು ಒದಗಿಸಿದ ಸಂತ ಕನಕದಾಸರು- ಸಚಿವ .ಎಂ. ಬಿ. ಪಾಟೀಲ

ವಿಜಯಪುರ: ದಾಸ ಸಾಹಿತ್ಯಕ್ಕೆ ವೈಚಾರಿಕೆ ನೆಲೆಗಟ್ಟನ್ನು ಒದಗಿಸಿದ ಭಕ್ತ ಶ್ರೇಷ್ಠ ಸಂತ ಕನಕದಾಸರು ತಮ್ಮ ಕೀರ್ತನೆಗಳ ಮೂಲಕ ಸಮಾಜದಲ್ಲಿ ಉನ್ನತ ಚಿಂತನೆಗಳನ್ನು ಬಿತ್ತಿದ್ದಾರೆ ಎಂದು ಬೃಹತ್ ಮತ್ತು ಮಧ್ಯಮ, ಮೂಲ ಸೌಕರ್ಯ ಅಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಂ. ಬಿ. ಪಾಟೀಲ ಹೇಳಿದ್ದಾರೆ.  ಜಿಲ್ಲಾಡಳಿತ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ನಗರದ ಕಂದಗಲ್ ಹನುಮಂತರಾಯ ರಂಗಮಂದಿರದಲ್ಲಿ ಆಯೋಜಿಸಿದ್ದ ಸಂತ ಕನಕದಾಸ ಜಯಂತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಕನಕದಾಸರ ಚಿಂತನೆಗಳು ದಾಸ ಸಾಹಿತ್ಯಕ್ಕೆ […]

ಮಕ್ಕಳನ್ನು ಅನಧಿಕೃತವಾಗಿ ದತ್ತು ಪಡೆಯುವುದು ಕಾನೂನು ಬಾಹಿರ- ಹೆಚ್ಚುವರಿ ಎಸ್ಪಿ ಶಂಕರ ಮಾರಿಹಾಳ

ವಿಜಯಪುರ: ಅನಧಿಕೃತವಾಗಿ ಮಕ್ಕಳನ್ನು ದತ್ತು ಪಡೆದುಕೊಳ್ಳುವುದು ಕಾನೂನು ಬಾಹಿರವಾಗಿದೆ. ಕಾನೂನು ಬದ್ಧವಾಗಿ ಅಗತ್ಯ ದಾಖಲಾತಿಗಳೊಂದಿಗೆ ದತ್ತು ಸ್ವೀಕಾರ ಕೇಂದ್ರ ಸಂಪರ್ಕಿಸಿ ದತ್ತು ಪಡೆದುಕೊಳ್ಳಬೇಕು. ಮಕ್ಕಳ ಹಕ್ಕುಗಳ ರಕ್ಷಣೆಯಾಗುವಂತೆ ನೋಡಿಕೊಳ್ಳಬೇಕು ಎಂದು ಹೆಚ್ಚುವರಿ ಎಸ್ಪಿ ಶಂಕರ ಮಾರಿಹಾಳ ಹೇಳಿದ್ದಾರೆ. ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ, ಜಿಲ್ಲಾ ಮಕ್ಕಳ ರಕ್ಷಣಾ ಘಟಕ, ಕಾರ್ಮಿಕ ಇಲಾಖೆ, ಜಿಲ್ಲಾ ಬಾಲಭವನ, ಸರ್ಕಾರಿ ಮಕ್ಕಳ ಪಾಲನಾ ಸಂಸ್ಥೆಗಳು ಹಾಗೂ ಸ್ವಯಂ ಸೇವಾ ಸಂಸ್ಥೆಗಳ […]

ಸಾಧನೆ ನಿರಂತರವಾಗಿರಬೇಕು – ಎಸ್. ಎಂ. ಪಾಟೀಲ ಗಣಿಹಾರ

ವಿಜಯಪುರ: ಸಾಧನೆ ನಿರಂತರವಾಗಿರಬೇಕು.  ಸಾಧಕರಿಗೆ ಶಕ್ತಿ ತುಂಬವ ಕೆಲಸ ಮಾಡಬೇಕು ಎಂದು ಮಧುವನ ಗೆಳೆಯರ ಬಳಗದ ಮುಖಂಡ ಎಸ್. ಎಂ. ಪಾಟೀಲ ಗಣಿಹಾರ ಹೇಳಿದ್ದಾರೆ. ನಗರದ ಹೊಟೇಲ್ ಮಧುವನ ಇಂಟರನ್ಯಾಷನಲ್ ನಲ್ಲಿ ಮಧುವನ ಗೆಳೆಯರ ಬಳಗದ ವತಿಯಿಂದ ಆಯೋಜಿಸಲಾಗಿದ್ದ ರಾಜ್ಯ ಮತ್ತು ರಾಷ್ಟ್ರ ಮಟ್ಟದ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರಿಗೆ ಸನ್ಮಾನ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ನಾನಾ ಕ್ಷೇತ್ರಗಳಲ್ಲಿ ಗಣನೀಯ ಸಾಧನೆ ಮಾಡಿರುವ ಮಹನೀಯರಿಗೆ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಸಿಕ್ಕಿದ್ದು ತುಂಬ ಸಂತಸವನ್ನುಂಟು ಮಾಡಿದೆ.  ಇವರ ಸಾಧನೆ […]

ಸಾರವಾಡ ದ್ಯಾಮವ್ವದೇವಿ, ಬುರಣಾಪುರ ರಸ್ತೆಯ ಘತ್ತರಗಿ ಭಾಗಮ್ಮ ಜಾತ್ರಾ ಮಹೋತ್ಸವದಲ್ಲಿ ಸಚಿವ ಎಂ. ಬಿ. ಪಾಟೀಲ ಭಾಗಿ

ವಿಜಯಪುರ: ಬೃಹತ್ ಮತ್ತು ಮಧ್ಯಮ ಕೈಗಾರಿಕೆ, ಮೂಲಸೌಕರ್ಯ ಅಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಂ. ಬಿ. ಪಾಟೀಲ ಅವರು ಇಂದು ಸೋಮವಾರ ಬಬಲೇಶ್ವರ ತಾಲೂಕಿನ ಸಾರವಾಡ ದ್ಯಾಮವ್ವದೇವಿ ಮತ್ತು ವಿಜಯಪುರ ನಗರದ ಬುರಣಾಪುರ ರಸ್ತೆಯಲ್ಲಿರುವ ಘತ್ತರಗಿ ಭಾಗಮ್ಮ ದೇವಿಯ ಜಾತ್ರೆಯಲ್ಲಿ ಪಾಲ್ಗೋಂಡು ದೇವಿಯ ಆಶೀರ್ವಾದ ಪಡೆದರು.  ಬಬಲೇಶ್ವರ ತಾಲೂಕಿನ ಸಾರವಾಡ ಗ್ರಾಮದಲ್ಲಿ ನಡೆಯುತ್ತಿರುವ ದ್ಯಾಮವ್ವದೇವಿ ದೇವಸ್ಥಾನದ ಉದ್ಘಾಟನೆ ಮತ್ತು ಜಾತ್ರಾ ಮಹೋತ್ಸವದಲ್ಲಿ ಪಾಲ್ಗೋಂಡ ಸಚಿವರು ದೇವಿಗೆ ವಿಶೇಷ ಪೂಜೆ ಸಲ್ಲಿಸಿದರು.   ಈ ಸಂದರ್ಭದಲ್ಲಿ ಸಾರವಾಡ ಗ್ರಾಮಸ್ಥರು […]

ಬಸವ ನಾಡಿನಲ್ಲಿ ಗಮನ ಸೆಳೆದ ಗಣವೇಷಧಾರಿಗಳ ಪಥ ಸಂಚಲನ- ಜಾತಿ, ಸಮಾಜ ವಿಂಗಡಣೆ ಬಗ್ಗೆ ಎಚ್ಚರಿಕೆ ಅಗತ್ಯ- ನರೇಂದ್ರ

ವಿಜಯಪುರ: ಕೊರೊನಾದಂಥ ಅನೇಕ ವೈರಸ್ ನಮ್ಮ ಜೊತೆಗಿದ್ದು ಜಾತಿಗಳ ನಡುವೆ ವಿಘಟನೆ ಮತ್ತು ಹಿಂದೂ ಸಮಾಜದಲ್ಲಿ ಒಡಕು ಮೂಡಿಸುವ  ಪ್ರಯತ್ನ ಮಾಡುತ್ತವೆ ಎಂದು ಆರ್ ಎಸ್ ಎಸ್ ಉತ್ತರ ಕರ್ನಾಟಕ ಪ್ರಾಂತ ಪ್ರಚಾರಕ ನರೇಂದ್ರ ಹೇಳಿದ್ದಾರೆ. ನಗರದ ದರಬಾರ ಹೈಸ್ಕೂಲ್ ಮೈದಾನದಲ್ಲಿ ಆರ್ ಎಸ್ ಎಸ್ ನಗರ ವಾರ್ಷಿಕೋತ್ಸವದತ ಅಂಗವಾಗಿ ನಡೆದ ಸಾರ್ವಜನಿಕ ಸಭೆಯಲ್ಲಿ ಅವರು ಮಾತನಾಡಿದರು. ಹಿಂದೂ ಎಂಬುದು ಕೇವಲ ಮೆರವಣಿಗೆಯ ಘೋಷಣೆಗೆ ಸೀಮಿತವಾಗಬಾರದು.  ಪ್ರತಿದಿನ ಹಿಂದೂ ಆಗಬೇಕು.  ಹಿಂದೂ ಸಮಾಜ ಎಷ್ಟು ಬೇಗ ಸಂಘಟಿತವಾಗುತ್ತದೆಯೋ […]

ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ ಸಿಗುವವರೆಗೆ ಯಾವುದೇ ತ್ಯಾಗಕ್ಕೂ ಸಿದ್ದ- ಬಸವಜಯ ಮೃತ್ಯುಂಜಯ ಮಹಾಸ್ವಾಮೀಜಿ

ವಿಜಯಪುರ: ಪಂಚಮಸಾಲಿ ಸಮುದಾಯಕ್ಕೆ ಮೀಸಲಾತಿಗಾಗಿ ಅನೇಕ ರೀತಿ ಹೋರಾಟ ಮಾಡಿದರೂ, ಯಾವುದೇ ಸರಕಾರ ಸರಿಯಾಗಿ ಸ್ಪಂಧಿಸಿಲ್ಲ.  ಬೇಡಿಕೆ ಈಡೇರುವವರೆಗೂ ಯಾವುದೇ ತ್ಯಾಗಕ್ಕೂ ಸಿದ್ಧ ಎಂದು ಕೂಡಲ ಸಂಗಮ ಲಿಂಗಾಯಿತ ಪಂಚಮಸಾಲಿ ಪೀಠದ ಜಗದ್ಗುರು ಬಸವಜಯ ಮೃತ್ಯುಂಜಯ ಸ್ವಾಮೀಜಿ ಹೇಳಿದ್ದಾರೆ. ತಿಕೋಟಾ ತಾಲೂಕಿನ ಕನಮಡಿ ಬಳಿಯ ಸುಕ್ಷೇತ್ರ ಗಡಿಭಾಗದಲ್ಲಿರುವ ಶ್ರೀ ಧರಿದೇವರ ದೇವಸ್ಥಾನದ ಬಳಿಯ ಪ್ರೌಢಶಾಲೆಯ ಆವರಣದಲ್ಲಿ ಇಷ್ಟಲಿಂಗ ಪೂಜೆಯೊಂದಿಗೆ ರಾಷ್ಟ್ರೀಯ ಹೆದ್ದಾರಿ ತಡೆ, ಚನ್ನಮ್ಮ ಜಯಂತಿ ವಿಜಯೋತ್ಸವ ಹಾಗೂ ಪಂಚಮಸಾಲಿ ಸಮಾಜದ ಬೃಹತ್ ಸಮಾವೇಶ ಉದ್ಘಾಟಿಸಿ ಅವರು […]