ಬಸವ ನಾಡಿನಲ್ಲಿ ಗುರು ಪೂರ್ಣಿಮೆ ಸಂಭ್ರಮ- ಜ್ಞಾನಯೋಗಾಶ್ರಮಕ್ಕೆ ಭಕ್ತರ ದಂಡು

ವಿಜಯಪುರ: ಬಸವನಾಡು ವಿಜಯಪುರ ಜಿಲ್ಲಾದ್ಯಂತ ಗುರು ಪೂರ್ಣಿಮೆ ಹಬ್ಬದ ಸಂಭ್ರಮ ಮನೆ ಮಾಡಿದೆ.   ವಿಜಯಪುರ ನಗರದ ಜ್ಞಾನಯೋಗಾಶ್ರಮದಲ್ಲಿ ಗುರುಪೂರ್ಣಿಮಾ ಮಹೋತ್ಸವ ನಡೆಯುತ್ತಿದ್ದುಗುರು ಪೂರ್ಣಿಮೆ ಅಂಗವಾಗಿ ವೇದಾಂತಕೇಸರಿ ಮಲ್ಲಿಕಾರ್ಜುನ ಮಹಾಶಿವಯೋಗಿಗಳ ಗದ್ದುಗೆಗೆ ಆಶ್ರಮದ ಸ್ವಾಮೀಜಿಗಳು ಪೂಜೆ ಸಲ್ಲಿಸಿದರು. ಬೆಳಗ್ಗೆ 4.30ಕ್ಕೆ ಮಹಾ ಜಪಯೋಗದಿಂದ ಪ್ರಾರಂಭವಾಗಿರುವ ನಾನಾ ಧಾರ್ಮಿಕ ಕಾರ್ಯಕ್ರಮಗಳು ಈಗಲೂ ಮುಂದುವರೆದಿವೆ.   ಶ್ರೀ ಮಲ್ಲಿಕಾರ್ಜುನ ಶಿವಯೋಗಿಗಳು ಶತಮಾನದ ಸಂತ ಶ್ರೀ ಸಿದ್ದೇಶ್ವರ ಸ್ವಾಮೀಜಿಗಳ ಗುರುಗಳಾಗಿದ್ದರು.  ಪ್ರತಿ ವರ್ಷ ಗುರು ಪೂರ್ಣಿಮೆ ದಿನ ಇಲ್ಲಿ ಜಾತ್ರೆ ನಡೆಯುತ್ತದೆ.  , ಬೆಳಿಗ್ಗೆಯಿಂದಲೇ […]

ಅಖಿಲ ಭಾರತ ವೀರಶೈವ ಮಹಾಸಭೆ ಮಹಿಳಾ ಘಟಕದ ನೂತನ ಪದಾಧಿಕಾರಿಗಳ ಅವಿರೋಧ ಆಯ್ಕೆ

ವಿಜಯಪುರ: ಅಖಿಲ ಭಾರತ ವೀರಶೈವ ಮಹಾಸಭಾ ವಿಜಯಪುರ ಜಿಲ್ಲಾ ಮಹಿಳಾ ಘಟಕದ ಮುುಂದಿನ ಐದು ವರ್ಷಗಳ ಅವಧಿಗೆ ಕಾರ್ಯ ನಿರ್ವಾಹಕ ಸದಸ್ಯರಾಗಿ 11 ಜನ ಆಯ್ಕೆಯಾಗಿದ್ದಾರೆ.  ಈ ಕುರಿತು ಮಾಧ್ಯಮ ಪ್ರಕಟಣೆ ನೀಡಿರುವ ಚುನಾವಣೆ ಅಧಿಕಾರಿಗಳು, ಶಾರದಾ ಬಸಯ್ಯ ಹಿರೇಮಠ, ಶಿವಲೀಲಾ ಎಂ. ಮಠಪತಿ, ಜ್ಯೋತಿ ರಾ. ಬಾಗಲಕೋಟ, ಅಶ್ವಿನಿ ನಿ. ಆಣೆಪ್ಪನವರ, ವಿದ್ಯಾವತಿ ಕೃಷ್ಣಪ್ಪ ಅಂಕಲಗಿ, ಕಮಲಾ ಸುರೇಶ ಗೆಜ್ಜಿ, ಶಾರದಾ ಗು. ಕೊಪ್ಪ(ಐಹೊಳ್ಳಿ), ಶಾರದಾ ಗು. ಪಾಟೀಲ, ಶೈಲಜಾ ಬ. ಮೋದಿ, ವಂದನಾ ಸಿದ್ರಾಮಪ್ಪ […]

ಅಖಿಲ ಭಾರತ ವೀರಶೈವ ಮಹಾಸಭೆ ಜಿಲ್ಲಾಧ್ಯಕ್ಷರಾಗಿ ವಿ. ಸಿ. ನಾಗಠಾಣ ಪುನರಾಯ್ಕೆ

ವಿಜಯಪುರ: ಅಖಿಲ ಭಾರತ ವೀರಶೈವ ಮಹಾಸಭಾ ವಿಜಯಪುರ ಜಿಲ್ಲಾಧ್ಯಕ್ಷರಾಗಿ ಅವಿರೋಧವಾಗಿ ವೀರಭದ್ರಪ್ಪ ಚನಬಸಪ್ಪ ನಾಗಠಾಣ ಪುನರಾಯ್ಕೆಯಾಗಿದ್ದಾರೆ.  ಐದು ವರ್ಷಗಳ ಅವಧಿಗೆ ಅವರು ಜಿಲ್ಲಾಧ್ಯಕ್ಷರಾಗಿ ಈ ಬಾರಿ ಅವಿರೋಧವಾಗಿ ಆಯ್ಕೆಯಾಗಿದ್ದು, ಸತತ ಎರಡನೇ ಬಾರಿಗೆ ಜಿಲ್ಲಾಧ್ಯಕ್ಷರಾಗಿ ಆಯ್ಕೆಯಾದಂತಾಗಿದೆ. ಈ ಮಧ್ಯೆ ಕಾರ್ಯಕಾರಿ ಸಮಿತಿ ಸದಸ್ಯರಾಗಿ ಸೋಮನಗೌಡ ಪಾಟೀಲ, ಷಣ್ಮುಖಪ್ಪ ಕಸಬೇಗೌಡರ, ಅಪ್ಪಾಸಾಬ ಕೋರಿ, ಮಹಾದೇವ ಅವರಾದಿ, ರುದ್ರಪ್ಪ ತೋಟದ, ದೊಡ್ಡಣ್ಣ ಭಜಂತ್ರಿ, ಪರಶುರಾಮ ಪೋಳ, ಜಿ. ಬಿ. ಸಾಲಕ್ಕಿ, ವಿ. ಎಸ್. ತೇಲಿ, ಸಹದೇವ ನಾಡಗೌಡರ, ಮಲ್ಲಪ್ಪ ಯಾದವಾಡ, […]

ನೈರ್ಮಲ್ಯವನ್ನು ಪಾಲಿಸುವಲ್ಲಿ ವಿದ್ಯಾರ್ಥಿಗಳ ಪಾತ್ರ ಬಹುಮುಖ್ಯ- ಶಿಫಾ ಜಮಾದಾರ

ವಿಜಯಪುರ: ನೈರ್ಮಲ್ಯವನ್ನು ಪಾಲಿಸುವಲ್ಲಿ ವಿದ್ಯಾರ್ಥಿಗಳು ಮತ್ತು ಸ್ವಚ್ಚತೆಯ ಪ್ರಾಮುಖ್ಯತೆ ಹಾಗೂ ನೈರ್ಮಲ್ಯದ ವಾತಾವರಣವನ್ನು ಪ್ರೇರೆಪಿಸುವಲ್ಲಿ ಶಾಲೆ- ಕಾಲೇಜುಗಳ ಪಾತ್ರ ಮುಖ್ಯವಾಗಿದೆ ಎಂದು ಲಾಡಲಿ ಫೌಂಡೇಶನ ಟ್ರಸ್ಟಿನ ಸ್ವಚ್ಚತಾ ರಾಯಭಾರಿ ಶಿಫಾ ಜಮಾದಾರ ಅಭಿಪ್ರಾಯಪಟ್ಟಿದ್ದಾರೆ.  ನಗರದ ಅಫಜಲಪೂರ ಟಕ್ಕೆಯಲ್ಲಿ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆ ಸಂಖ್ಯೆ- 49ರಲ್ಲಿ ನವದೆಹಲಿಯ ಲಾಡಲಿ ಫೌಂಡೇಶನ್ ಮತ್ತು ವಿಜಯಪುರ ಜಿಲ್ಲಾಡಳಿತ ಸಹಯೋಗದಲ್ಲಿ ನಡೆದ ಶಾಲೆಯ ಮಕ್ಕಳಲ್ಲಿ ಸ್ವಚ್ಚತೆಯ ಅರಿವು ತರಬೇತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ವಿದ್ಯಾರ್ಥಿಗಳು ನೈರ್ಮಲ್ಯ ಮತ್ತು ನೈರ್ಮಲ್ಯದ ಮೂಲ […]

ಸಹಿಷ್ಣುತೆಯನ್ನು ಕೆದಕುವುದು ಕೆಲವರ ಚಾಳಿಯಾಗಿದೆ- ರಾಮ ಮಂದಿರ ಕಾಮಗಾರಿಯಲ್ಲಿ ದೋಷವಿಲ್ಲ- ಪೇಜಾವರ ಶ್ರೀ ವಿಶ್ವಪ್ರಸನ್ನತೀರ್ಥ ಸ್ವಾಮೀಜಿ

ವಿಜಯಪುರ: ಹಿಂದೂಗಳ ಸಹಿಷ್ಣತೆ ಹೊಂದಿದವವರನ್ನು ಮತ್ತು ಕೆಡವುದುದ  ಕೆಲವರ ಚಾಳಿಯಾಗಿದೆ ಎಂದು ಪೇಜಾವರ ಮಠದ ಶ್ರೀ ವಿಶ್ವಪ್ರಸನ್ನತೀರ್ಥ ಸ್ವಾಮೀಜಿ ಹೇಳಿದ್ದಾರೆ. ವಿಜಯಪುರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಹಿಂದೂಗಳ ಕುರಿತು ಲೋಕಸಭೆ ಪ್ರತಿಪಕ್ಷದ ನಾಯಕ ರಾಹುಲ ಗಾಂಧಿ ನೀಡಿರುವ ಹೇಳಿಕೆಯ ಕುರಿತು ಕೇಳಲಾದ ಪ್ರಶ್ನೆಗೆ ಖಾರವಾಗಿ ಪ್ರತಿಕ್ರಿಯೆ ನೀಡಿದರು. ರಾಹುಲ್ ಗಾಂಧಿ ಹೇಳಿಕೆಗೆ ವಿರೋಧ ವ್ಯಕ್ತಪಡಿಸಿದ ಶ್ರೀಗಳು, ಸಹಿಷ್ಣು ಆಗಿರುವವರನ್ನು ಕೆದಕುವುದು,ಮತ್ತು ಕೆಡುವುವುದು ಕೆಲವರ ಚಾಳಿ ಆಗಿದೆ.  ಸಹಿಷ್ಟತೆ ಗುಣ ಹೊಂದಿರುವವರನ್ನು  ಕೂಡ ಕೆಣಕಬೇಕು.  ಹಾಗೆ ಕೆಣಕಿ ಒಂದಿಷ್ಟು […]

ಯಕ್ಕುಂಡಿಯಲ್ಲಿ ಶ್ರೀ ಹನುಮಾನ ದೇವಸ್ಥಾನದ ಕಳಸಾರೋಹಣ ಕಾರ್ಯಕ್ರಮ- ಕಾಶಿ ಜಗದ್ಗುರುಗಳು ಭಾಗಿ

ವಿಜಯಪುರ: ಬಬಲೇಶ್ವರ ತಾಲೂಕಿನ ಯಕ್ಕುಂಡಿ ಗ್ರಾಮದಲ್ಲಿ ಶ್ರೀ ಹನುಮಾನ ದೇವಸ್ಥಾನದ ಬದರಿನಾಥ ಶೈಲಿಯ ಶಿಖರದ ಕಳಸಾರೋಣದ ನಾನಾ ಧಾರ್ಮಿಕ ಕಾರ್ಯಕ್ರಮಗಳು ನಡೆದವು. ಈ ಕಾರ್ಯಕ್ರಮದ ಅಂಗವಾಗಿ ಗ್ರಾಮದ ಪ್ರಮುಖ ರಸ್ತೆಗಳಲ್ಲಿ ಆರತಿ ಮತ್ತು ಕುಂಭಮೇಳದೊಂದಿಗೆ ಕಾಶಿ ಜಗದ್ಗುರುಗಳ ಅಡ್ಡ ಪಲ್ಲಕ್ಕಿ ಉತ್ಸವ, ಶಿಖರದ ಪಂಚ ಕಳಸ ಮೆರವಣಿಗೆ ಹಾಗೂ ಧರ್ಮಸಭೆ ನಡೆಯಿತು.  ಈ ಧರ್ಮಸಭೆಯನ್ನು ಕಾಶಿ ಜಗದ್ಗುರು ಡಾ. ಚಂದ್ರಶೇಖರ ಶಿವಾಚಾರ್ಯರ ಅಡ್ಡಪಲ್ಲಕ್ಕಿ ಉತ್ಸವ ನಡೆಯಿತು. ಈ ಸಂದರ್ಭದಲ್ಲಿ ಮಾತನಾಡಿದ ಜಗದ್ಗುರುಗಳು, ಕಾರ್ಯಕ್ರಮ ಯಶಸ್ವಿಯಾಗಿ ನಡೆದಿರುವುದು ಗ್ರಾಮಸ್ಥರ […]

ಹಲಸಂಗಿ ಗೆಳೆಯರ ಪ್ರತಿಷ್ಠಾನದಿಂದ ವಿಶೇಷ ಉಪನ್ಯಾಸ ಕಾರ್ಯಕ್ರಮ

ವಿಜಯಪುರ: ಹಲಸಂಗಿ ಗೆಳೆಯರ ಪ್ರತಿಷ್ಠಾನದ ವತಿಯಿಂದ ಇಂಡಿ ತಾಲೂಕಿನ ಝಳಕಿ ಸರಕಾರಿ ಪ್ರಥಮ ದರ್ಜೆ ಕಾಲೇಜ್‌ನಲ್ಲಿ ವಿಶೇಷ ಉಪನ್ಯಾಸ ಕಾರ್ಯಕ್ರಮ ನಡೆಯಿತು.  ಈ ಕಾರ್ಯಕ್ರಮದಲ್ಲಿ ಕಾಲೇಜಿನ ಪ್ರಾಚಾರ್ಯ ಪ್ರೊ. ವಲ್ಲಭ ಕಬಾಡೆ ಅಧ್ಯಕ್ಷತೆ ವಹಿಸಿದ್ದರು.  ಸಿಕ್ಯಾಬ್ ಮಹಿಳಾ ಪದವಿ ಮಹಾವಿದ್ಯಾಲಯದ ಕನ್ನಡ ವಿಭಾಗದ ಮುಖ್ಯಸ್ಥ ಡಾ. ಮಲ್ಲಿಕಾರ್ಜುನ ಮೇತ್ರಿ ಸರಕಾರಿ ಪ್ರಥಮ ದರ್ಜೆ ಕಾಲೇಜ್‌ನ ಉಪನ್ಯಾಸಕ ಡಾ. ರಮೇಶ ತೇಲಿ ಅವರು ಉಪನ್ಯಾಸ ನೀಡಿದರು. ಹಲಸಂಗಿ ಗೆಳೆಯರು 800 ತ್ರಿಪದಿ, ಗರತಿ ಹಾಡು ಸಂಗ್ರಹಿಸಿ ಅಚ್ಚರಿ ಮೂಡಿಸಿದ್ದಾರೆ.  […]

ಸಾಹಿತ್ಯದ ಬಗ್ಗೆ ಅಭಿರುಚಿ ಬೆಳೆಸಿಕೊಳ್ಳಬೇಕು- ಜ್ಞಾನದಿಂದ ಜೀವನದಲ್ಲಿ ಸಾಧನೆ ಸಾಧ್ಯ- ಅಪ್ಪು ಪಟ್ಟಣಶೆಟ್ಟಿ

ವಿಜಯಪುರ: ಸಾಹಿತ್ಯದ ಬಗ್ಗೆ ಎಲ್ಲರೂ ಅಭಿರುಚಿ ಬೆಳೆಸಿಕೊಳ್ಳಬೇಕು.  ಜ್ಞಾನದಿಂದ ಜೀವನದಲ್ಲಿ ಅನೇಕ ಸಾಧನೆ ಮಾಡಬಹುದು ಎಂದು ಮಾಜಿ ಸಚಿವ ಅಪ್ಪು ಪಟ್ಟಣಶೆಟ್ಟಿ ಹೇಳಿದ್ದಾರೆ. ನಗರದ ಕಂದಗಲ್ ಹನುಮಂತರಾಯ ರಂಗಮಂದಿರದಲ್ಲಿ ನಡೆದ ಸಾಹಿತಿ ಶ್ರೀ ಎನ್. ಆರ್. ಕುಲಕರ್ಣಿ ಅವರ ಬಕುಲ ಪುಷ್ಪ ಅಭಿನಂದನೆ ಗ್ರಂಥ ಬಿಡುಗಡೆ ಮತ್ತು ಗ್ರಂಥ ತುಲಾಭಾರ ಸಮಾರಂಭ ಉದ್ಘಾಟಿಸಿ ಅವರು ಮಾತನಾಡಿದರು. ಸಂಪತ್ತಿನಿಂದ ಜ್ಞಾನ ಸಂಪಾದಿಸಲು ಸಾಧ್ಯವಿಲ್ಲ.  ಆದರೆ, ಜ್ಞಾನ ಸಂಪಾದಿಸಿದರೆ ಅದರಿಂದ ಜೀವನದಲ್ಲಿ ಯಶಸ್ಸು ಸಾಧಿಸಬಹುದು.  ಎನ್. ಆರ್. ಕುಲಕರ್ಣಿ ಅವರಂತೆ […]

ಗುಮ್ಮಟ ನಗರಿಯಲ್ಲಿ ಬಕ್ರೀದ್ ಆಚರಣೆ- ನಾನಾ ಈದ್ಗಾಗಳಲ್ಲಿ ಮುಸ್ಲಿಂ ಬಾಂಧವರಿಂದ ಸಾಮೂಹಿಕ‌ ಪ್ರಾರ್ಥನೆ

ವಿಜಯಪುರ: ತ್ಯಾಗ ಮತ್ತು ಬಲಿದಾನದ ಪ್ರತೀಕವಾಗಿರು ಬಕ್ರೀದ್ ಹಬ್ಬವನ್ನು ವಿಜಯಪುರ ಜಿಲ್ಲಾದ್ಯಂತ ಆಚರಿಸಲಾಗುತ್ತಿದೆ. ಗುಮ್ಮಟ ನಗರಿ ವಿಜಯಪುರದಲ್ಲಿ‌ರು ಈದ್ಗಾಗಳಲ್ಲಿ ಮುಸ್ಲಿಂ ಬಾಂಧವರು ಸಾಮೂಹಿಕ ಪ್ರಾರ್ಥನೆ ಸಲ್ಲಿಸಿದರು. ಅಲ್ಲಾಹ ನಾಡಿನಾದ್ಯಂತ ಸುಖ, ಶಾಂತಿ, ಸಮೃದ್ಧಿ‌ ಕರುಣಿಸಲಿ ಎಂದು ಪ್ರಾರ್ಥಿಸಿದರು.  ಬಳಿಕ ಪರಸ್ಪರ ಶುಭಾಷಯ ಕೋರಿದರು. ದಖನಿ‌ ಶಾಹಿ‌ ಈದ್ಗಾದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮುಸ್ಲಿಂ‌ ಧರ್ಮಗುರು ಸಯ್ಯದ್ ಮೊಹಮ್ಮದ್ ತನ್ವಿರಪೀರಾ ಹಾಶ್ಮಿ ಸಾಮೂಹಿಕ ಪ್ರಾರ್ಥನೆಯ ನೇತೃತ್ವ ವಹಿಸಿ ಪವಿತ್ರ ಸಂದೇಶ ನೀಡಿದರು. ಈ ಸಂದರ್ಭದಲ್ಲಿ ಕಾಂಗ್ರೆಸ್ ಮುಖಂಡರಾದ ಅಬ್ದುಲ್ ಹಮೀದ್ […]

ವಿಜಯಪುರ ಜ್ಞಾನಯೋಗಾಶ್ರಮದಲ್ಲಿ ಜೂ. 15 ಸಿರಿಗೆರೆ ತರಳಬಾಳು ಕಲಾ ಸಂಘದ ವತಿಯಿಂದ ಶರಣ ಸಂಕಲ್ಪ ನೃತ್ಯರೂಪಕ

ವಿಜಯಪುರ: ಸಿರಿಗೆರೆ ತರಳಬಾಳು ಕಲಾ ಸಂಘದ ವತಿಯಿಂದ ತರಳಬಾಳು ಜಗದ್ಗುರು ಡಾ. ಶಿವಮೂರ್ತಿ ಶಿವಾಚಾರ್ಯ ಮಹಾಸ್ವಾಮಿಜಿಯವರ ನೇತೃತ್ವದಲ್ಲಿ ಶರಣ ಸಂಕುಲ ನೃತ್ಯರೂಪಕ ಕಾರ್ಯಕ್ರಮ ದಿ.15 ಶನಿವಾರ ಸಂ. 6.30ಕ್ಕೆ ಟೆಗೆ ವಿಜಯಪುರದ ಜ್ಞಾನಯೋಗಾಶ್ರಮದಲ್ಲಿ ನಡೆಯಲಿದೆ.  ಕಳೆದ 25 ವರ್ಷಗಳಿಂದ ದೇಶಾದ್ಯಂತ 12ನೇ ಶತಮಾನದ ಶಿವಶರಣರ ತತ್ವಗಳನ್ನು ಜನಸಾಮಾನ್ಯರಿಗೂ ಅರ್ಥವಾಗುವಂತೆ ನೃತ್ಯ, ಸಂಗೀತ ಮತ್ತು ಅಭಿನಯಗಳ ಮೂಲಕ ಪ್ರದರ್ಶಿಸುವ ಶರಣಸಂಕುಲ ಕಾರ್ಯಕ್ರಮ ಇದೀಗ ರಜತ ಮಹೋತ್ಸವ ಆಚರಿಸುತ್ತಿದೆ. ವಿಜಯಪುರದ ಜ್ಞಾನಯೋಗಾಶ್ರಮದಲ್ಲಿ ಅನುಭವ ಮಂಟಪದ ಬಸವಣ್ಣ, ಅಲ್ಲಮಪ್ರಭು, ಅಕ್ಕಮಹಾದೇವಿ, ಅಕ್ಕಮಹಾದೇವಿಗೆ […]