ಜೂ. 17, 18 ರಂದು ಬಸವ ನಾಡಿನಲ್ಲಿ ರಾಜ್ಯ ಮಟ್ಟದ 11ನೇ ಕದಳಿ ಮಹಿಳಾ ಸಮಾವೇಶ

ವಿಜಯಪುರ: ಜೂ. 17 ಮತ್ತು 18 ರಂದು ಬಸವ ನಾಡು ವಿಜಯಪುರದಲ್ಲಿ ರಾಜ್ಯ ಮಟ್ಟದ ಕದಳಿ ಸಮಾವೇಶ ನಡೆಯಲಿದೆ ಎಂದು ಅಖಿಲ ಭಾರತ ಶರಣ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಅಪ್ಪಾರಾವ ಅಕ್ಕೋಣಿ ತಿಳಿಸಿದ್ದಾರೆ. ವಿಜಯಪುರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬಸವ ನಾಡಿನಲ್ಲಿ ಇದೇ ಮೊದಲ ಬಾರಿಗೆ ಮೈಸೂರಿನ ಅಖಿಲ ಭಾರತ ಶರಣ ಸಾಹಿತ್ಯ ಪರಿಷತ, ಜಿಲ್ಲಾ ಶರಣ ಸಾಹಿತ್ಯ ಪರಿಷತ, ರಾಜ್ಯ ಮತ್ತು ಜಿಲ್ಲಾ ಕದಳಿ ಮಹಿಳಾ ವೇದಿಕೆಗಳ ಸಂಯುಕ್ತಾಶ್ರಯದಲ್ಲಿ ನಗರದ ಶ್ರೀ ಗುರು ಸಂಗನಬಸವ ಸಮುದಾಯ […]

ವಿಜಯಪುರದಲ್ಲಿ ಜೂ. 29 ರಿಂದ ಎರಡು ದಿನ ಅಖಿಲ ಭಾರತ ದಲಿತ ಸಾಹಿತ್ಯ ಸಮ್ಮೇಳನ- ಡಾ. ಅರ್ಜುನ ಗೊಳಸಂಗಿ

ವಿಜಯಪುರ: ದಲಿತ ಪ್ರಜ್ಞೆಯೊಂದಿಗೆ, ಅಹಿಂದ ಪರಂಪರೆಯಲ್ಲಿ ಶೋಷಿತರ ಧ್ವನಿಯಾಗಿ ಕಾರ್ಯ ನಿರ್ವಹಿಸುತ್ತಿರುವ ಗದುಗಿನ ದಲಿತ ಸಾಹಿತ್ಯ ಪರಿಷತ್ ರಾಜ್ಯ ಘಟಕದ ಬೆಳ್ಳಿ ಸಂಭ್ರಮ ಅಂಗವಾಗಿ ಜೂ. 29 ಮತ್ತು 30 ರಂದು ಎರಡು ದಿನಗಳ ಕಾಲ 10ನೇ ಅಖಿಲ ಭಾರತ ದಲಿತ ಸಾಹಿತ್ಯ ಸಮ್ಮೇಳನವನ್ನು ನಡೆಯಲಿದೆ ಎಂದು ದಲಿತ ಸಾಹಿತ್ಯ ಪರಿಷತ್ ರಾಜ್ಯಾಧ್ಯಕ್ಷ ಡಾ. ಅರ್ಜುನ ಗೊಳಸಂಗಿ ತಿಳಿಸಿದ್ದಾರೆ.  ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಇಲ್ಲಿನ ಕಂದಗಲ್ ಹನುಮಂತರಾಯ ರಂಗಮಂದಿರದಲ್ಲಿ ಈ ಸಮ್ಮೇಳನ ನಡೆಯಲಿದ್ದು, ಇದನ್ನು ಅರ್ಥಪೂರ್ಣವಾಗಿ, […]

ಚಿಣ್ಣರಿಗಾಗಿ ಗೊಂಬೆ ಬ್ಯಾಂಕ್- ಮನೆಮನೆಗೆ ತೆರಳಿ ಸಂಗ್ರಹಿಸಿದ ಬೊಂಬೆಗಳನ್ನು ಅಂಗನವಾಡಿಗೆ ತೆರಳಿ ಮಕ್ಕಳಿಗೆ ನೀಡಿದ ಕಾಲೇಜು ವಿದ್ಯಾರ್ಥಿಗಳು

ವಿಜಯಪುರ: ಸಾಮಾಜಿಕ ಕಾರ್ಯಗಳ ಮೂಲಕ ಮಕ್ಕಳನ್ನು ಶಾಲೆಗಳಲ್ಲ ಆಕರ್ಷಿಸಲು ಕಾಲೇಜು ವಿದ್ಯಾರ್ಥಿಗಳು ಕೈಗೊಂಡ ಕ್ರಮ ಗಮನ ಸೆಳೆದಿದ್ದಾರೆ. ನಗರದ ಬಿ.ಎಲ್.ಡಿ.ಈ ಸಂಸ್ಥೆಯ ಎ. ಎಸ್. ಪಾಟೀಲ ವಾಣಿಜ್ಯ ಮಹಾವಿದ್ಯಾಲಯದ ವಿದ್ಯಾರ್ಥಿಗಳು ದೇಶಪಾಂಡೆ ಫೌಂಡೇಶನ್ ನ ಜೊತೆ ಒಡಂಬಡಿಕೆ ಮಾಡಿಕೊಂಡಿದ್ದು, ಈ ಫೌಂಡೇಶನ್ ಸ್ಕಿಲ್ ಪ್ಲಸ್ ಯೋಜನೆಯ ರೂಪಿಸಿದೆ.  ಅದರಂತೆ ಈ ವಿದ್ಯಾರ್ಥಿಗಳು ತಮ್ಮ ಸಾಮಾಜಿಕ ಕಾರ್ಯದ ಭಾಗವಾಗಿ ಶಾಲೆಗಳತ್ತ ಮಕ್ಕಳನ್ನು ಆಕರ್ಷಿಸಲು ಬಣ್ಣ ಬಣ್ಣದ ಗೊಂಬೆಗಳನ್ನು ಅಂಗನವಾಡಿ ಮಕ್ಕಳಿಗೆ ವಿತರಿಸಿದರು. ಕಲಿಕೆಯಯ ಜೊತೆಗೆ ಮನರಂಜನೆ ಮತ್ತು ಮಕ್ಕಳನ್ನು […]

ಅಹಿಂದ ವರ್ಗಕ್ಕಾಗಿ ಏಳಿಗೆಗಾಗಿ ದೇವರಾಜ ಅರಸ ಕೊಡುಗೆ ಅಪಾರ- ಸೋಮನಾಥ ಕಳ್ಳಿಮನಿ

ವಿಜಯಪುರ: ಹಿಂದುಳಿದವರು, ಅಲ್ಪಸಂಖ್ಯಾತರು ಮತ್ತು ದಲಿತರ ಏಳಿಗೆಗಾಗಿ ಮಾಜಿ ಮುಖ್ಯಮಂತ್ರಿ ದಿ. ದೇವರಾಜ ಅರಸ ಅವರ ಕೊಡುಗೆ ಅಪಾರವಾಗಿದೆ ಎಂದು ಅಹಿಂದ ಮುಖಂಡ ಸೋಮನಾಥ ಕಳ್ಳಿಮನಿ ಹೇಳಿದ್ದಾರೆ. ನಗರದಲ್ಲಿ ದೇವರಾಜ ಅರಸು ವಿಚಾರ ವೇದಿಕೆ ಮತ್ತು ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಹಯೋಗದಲ್ಲಿ ನಡೆದ ದೇವರಾಜ ಅರಸು ಅವರ ಪುಣ್ಯಸ್ಮರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಅಹಿಂದ ವರ್ಗದ ಕಲ್ಯಾಣಕ್ಕಾಗಿ ಹಗಲಿರುಳು ದುಡಿದು ಅವರನ್ನು ಆರ್ಥಿಕವಾಗಿ, ಶೈಕ್ಷಣಿಕವಾಗಿ ಮತ್ತು ರಾಜಕೀಯವಾಗಿ ಮೇಲೆತ್ತಲು ಇಂದಿರಾ ಗಾಂಧಿಜಿಯವರು ಜಾರಿಗೆ ತಂದಿದ್ದ […]

ಬಸವ ನಾಡಿನಲ್ಲಿ ಛತ್ರಪತಿ ಶಿವಾಜಿ ಅವರ 350ನೇ ರಾಜ್ಯಾಭಿಷೇಕ ದಿನ ಆಚರಣೆ-ಎಎಸ್ಪಿ ಶಂಕರ ಮಾರಿಹಾಳ ಭಾಗಿ

ವಿಜಯಪುರ: ನಗರದ ಶಿವಾಜಿ ವೃತ್ತದಲ್ಲಿ ಮರಾಠಾ ಸಮಾದ ವತಿಯಿಂದ ಶ್ರೀ ಛತ್ರಪತಿ ಶಿವಾಜಿ ಮಹಾರಾಜರ 350ನೇ ರಾಜ್ಯಾಭಿಷೇಕ ದಿನದ ಅಂಗವಾಗಿ ಪೂಜೆ ಸಲ್ಲಿಸಲಾಯಿತು.  ಎಎಸ್ಪಿ ಶಂಕರ ಮಾರಿಹಾಳ ಅವರು ಶಿವಾಜಿ ಮಹಾರಾಜರ ಪ್ರತಿಮೆಗೆ ಪೂಜೆ ನೆರವೇರಿಸಿದ ನಮನ ಸಲ್ಲಿಸಿದರು.  ಬಳಿಕ ಮಾತನಾಡಿದ ಅವರು, ಛತ್ರಪತಿ ಶಿವಾಜಿ ಮಹಾರಾಜರು ವಿಶ್ವದ ಶ್ರೇಷ್ಠ ನಾಯಕ.  ಅವರ ತತ್ವಾದರ್ಶಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ಹೇಳಿದರು. ಈ ಸಂದರ್ಭದಲ್ಲಿ ಮಹಾನಗರ ಪಾಲಿಕೆಯ ಬಿಜೆಪಿ ಸದಸ್ಯ ರಾಹುಲ ಜಾಧವ, ಮರಾಠಾ ಸಮಾಜ ಅಧ್ಯಕ್ಷ ವಿಜಯಕುಮಾರ […]

ತಾಯಿಗಿಂತಲೂ ಮಿಗಿಲಾದ ದೇವರಿಲ್ಲ-ಎಲ್ಲ ಪದಗಳ ಮೂರ್ತರೂಪವೇ ತಾಯಿ- ಎಂ. ಬಿ. ಪಾಟೀಲ ಭಾವನಾತ್ಮಕ ಟ್ವೀಟ್

ವಿಜಯಪುರ: ಮೂರನೇ ಬಾರಿ ಸಚಿವರಾದ ಬಳಿಕ ಇದೇ ಮೊದಲ ಬಾರಿಗೆ ತವರು ಜಿಲ್ಲೆ ವಿಜಯಪುರಕ್ಕೆ ಆಗಮಿಸಿರುವ ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಮೂಲಭೂತ ಸೌಕರ್ಯ ಅಭಿವೃದ್ಧಿ ಸಚಿವ ಎಂ. ಬಿ. ಪಾಟೀಲ ಅವರು ತಮ್ಮ ತಾಯಿ ಕಮಲಾಬಾಯಿ ಅವರನ್ನು ಭೇಟಿ ಮಾಡಿ ಆಶೀರ್ವಾದ ಪಡೆದಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ಅವರು, ತಾಯಿಗಿಂತಲೂ ಮಿಗಿಲಾದ ದೇವರಿಲ್ಲ.  ಮಮತೆ, ಪ್ರೀತಿ-ವಾತ್ಸಲ್ಯ ತ್ಯಾಗ, ಅನುಕಂಪ ಹೀಗೆ ಎಲ್ಲ ಪದಗಳ ಮೂರ್ತರೂಪವೇ ತಾಯಿ.  ನನ್ನ ಬೆಳವಣಿಗೆ, ಏಳಿಗೆ, ಶ್ರೇಯಸ್ಸು-ಯಶಸ್ಸು ಎಲ್ಲಕ್ಕೂ […]

ಬಸವ ನಾಡಿನಲ್ಲಿ ವಿನೂತನ ಕಾರ್ಯಕ್ರಮ- ಎತ್ತಿನ ಗಾಡಿಯಲ್ಲಿ ಮಕ್ಕಳನ್ನು ಕರೆತಂದು ಶಾಲೆ ಪ್ರಾರಂಭೋತ್ಸವ

ವಿಜಯಪುರ: ಬೇಸಿಗೆ ಬಿಡುವಿನ ನಂತರ ಇಂದಿನಿದ ಶಾಲೆಗಳು ಆರಂಭವಾಗಿದ್ದು, ಮಕ್ಕಳನ್ನು ಶಾಲೆಗೆ ಕರೆತರಲು ಬವಸ ನಾಡಿನ ಶಾಲೆಯೊಂದು ವಿನೂತನ ಕಾರ್ಯಕ್ರಮ ಆಯೋಜಿಸುವ ಮೂಲಕ ಗಮನ ಸೆಳೆದಿದೆ. ವಿಜಯಪುರ ನಗರದ ದಿವಟಗೇರಿ ಗಲ್ಲಿಯಲ್ಲಿರುವ ಶ್ರೀ ರುಕ್ಮಾಂಗದ ಶಿಕ್ಷಣ ಸಂಸ್ಥೆಯ ವಿದ್ಯಾರ್ಥಿಗಳನ್ನು ಆಡಳಿತ ಮಂಡಳಿ ವಿನೂತನವಾಗಿ ಸ್ವಾಗತಿಸುವ ಮೂಲಕ ಜನಮೆಚ್ಚುಗೆಗೆ ಪಾತ್ರವಾಗಿದೆ.  ವಿದ್ಯಾರ್ಥಿಗಳನ್ನು ವಿಶೇಷವಾಗಿ ಸಿಂಗರಿಸಲಾಗಿದ್ದ ಎತ್ತಿನ ಗಾಡಿಯಲ್ಲಿ ಕುಳ್ಳಿರಿಸಿಕೊಂಡು ಶಾಲೆಗೆ ಕರೆತರಲಾಯಿತು.  ಈ ಮೂಲಕ ಶಾಲೆ ಪ್ರಾರಂಭೋತ್ಸವ ಕಾರ್ಯಕ್ರಮಕ್ಕೆ ವಿಶೇಷ ಮೆರಗು ಕಲ್ಪಿಸಲಾಯಿತು. ಈ ಕಾರ್ಯಕ್ರಮದದಲ್ಲಿ ಅತಿಥಿಯಾಗಿ ಪಾಲ್ಗೊಂಡ […]

ಡಾ. ಬಿ. ಆರ್. ಅಂಬೇಡ್ಕರ ಚಿಂತನೆಯ ಪಕ್ಷ ಬೇಕು- ಪ್ರಕಾಶ ಅಂಬೇಡ್ಕರ

ವಿಜಯಪುರ: ಇಂದಿನ ಜಾತಿ ಆಧಾರಿತ ಪ್ರಜಾಪ್ರಭುತ್ವ ನಿರ್ಮೂಲನೆ ಮಾಡಬೇಕು.  ಸಂವಿಧಾನ ಶಿಲ್ಪಿ ಡಾ. ಬಿ. ಆರ್. ಅಂಬೇಡ್ಕರ ಅವರ ಚಿಂತನೆಯ ಪಕ್ಷ ಈಗ ಬೇಕಾಗಿದೆ ಎಂದು ಭಾರತ ರತ್ನ ಡಾ. ಬಿ. ಆರ್. ಅಂಬೇಡ್ಕರ ಅವರ ಮೊಮ್ಮಗ, ಮಾಜಿ ಸಂಸದ ಹಾಗೂ ಹಿರಿಯ ಚಿಂತಕ ಪ್ರಕಾಶ ಅಂಬೇಡ್ಕರ ಹೇಳಿದ್ದಾರೆ. ನಗರದ ಕಂದಗಲ್ಲ ಹನುಮಂತರಾಯ ರಂಗಮಂದಿರದಲ್ಲಿ ಗದಗಿನ ಲಡಾಯಿ ಪ್ರಕಾಶನ, ಧಾರವಾಡದ ಕವಿ ಪ್ರಕಾಶನ ಕವಲಕ್ಕಿ ಚಿತ್ತಾರ ಕಲಾ ಬಳಗ ಹಾಗೂ ವಿಜಯಪುರ ಮೇ ಸಾಹಿತ್ಯ ಬಳಗ ಸಂಯುಕ್ತಾಶ್ರಯದಲ್ಲಿ […]

ಮಖಣಾಪುರ ಎಲ್. ಟಿ.-2 ರಲ್ಲಿ ಗ್ರಾಮದೇವತೆ ಶ್ರೀ ದುರ್ಗಾದೇವಿ ಜಾತ್ರಾ ಮಹೋತ್ಸವ- ಡಾ. ದೇವಾನಂದ ಚವ್ಹಾಣ ಭಾಗಿ

ವಿಜಯಪುರ: ನಾಗಠಾಣ ಮತಕ್ಷೇತ್ರದ ವ್ಯಾಪ್ತಿಯ ವಿಜಯಪುರ ತಾಲೂಕಿನ ಮಖಣಾಪುರ ತಾಂಡಾ 2ರಲ್ಲಿ ಅತ್ಯಂತ ಸಂಭ್ರಮದಿಂದ ಜರುಗಿದ ಗ್ರಾಮ ದೇವತೆ ಶ್ರೀ ದುರ್ಗಾದೇವಿ ಜಾತ್ರಾ ಮಹೋತ್ಸವದಲ್ಲಿ ಡಾ. ದೇವಾನಂದ ಫೂ. ಚವ್ಹಾಣ ಭಾಗವಹಿಸಿ ಜಗನ್ಮಾತೆಯ ಆಶೀರ್ವಾದ ಪಡೆದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, ತಾಯಿ ದುರ್ಗಾದೇವಿಯನ್ನು ಭಕ್ತಿಯಿಂದ ನೆನೆದರೆ ಜೀವನದಲ್ಲಿ ಕಷ್ಟ-ನಷ್ಟಗಳು ದೂರ ಆಗುತ್ತದೆ.  ಮಖಣಾಪುರ ಜನರಿಗೆ ದುರ್ಗಾದೇವಿಯೇ ಶ್ರೀರಕ್ಷೆಯಾಗಿ ನಿಂತಿದ್ದಾಳೆ ಎಂದು ಹೇಳಿದರು. ಮಖಣಾಪೂರ ಜನತೆ ನನ್ನ ಮೇಲೆ ಪ್ರೀತಿ ವಿಶ್ವಾಸ ಇಟ್ಟುಕೊಂಡು ಇಲ್ಲಿಯ ವರೆಗೆ ಕರೆಸಿದ್ದಕ್ಕೆ […]

ಎಂ. ಬಿ. ಪಾಟೀಲ ಶ್ರೇಯಸ್ಸು ಬಯಸಿ ಯುವಕರಿಂದ ಕಣಬೂರಿನಲ್ಲಿ ದೀರ್ಘದಂಡ ನಮಸ್ಕಾರ

ವಿಜಯಪುರ: ಕೆ.ಪಿ.ಸಿ.ಸಿ. ಪ್ರಚಾರ ಸಮಿತಿ ಅಧ್ಯಕ್ಷ ಎಂ. ಬಿ. ಪಾಟೀಲ ಅವರು ಅತೀ ಹೆಚ್ಚು ಮತಗಳಿಂದ ಗೆಲುವು ಸಾಧಿಸಲಿ ಮತ್ತು ಸರಕಾರದಲ್ಲಿ ಉನ್ನತ ಸ್ಥಾನಕ್ಕೇರಲಿ ಎಂದು ಪ್ರಾರ್ಥಿಸಿ ಯುವಕರು ದೀರ್ಘದಂಡ ನಮಸ್ಕಾರ ಹಾಕಿ ಗಮನ ಸೆಳೆದಿದ್ದಾರೆ. ಬಬಲೇಶ್ವರ ತಾಲೂಕಿನ ಕಣಬೂರ ಗ್ರಾಮದ 24 ಯುವಕರು ಕೃಷ್ಣಾ ನದಿಯಿಂದ ಗ್ರಾಮದ ಶ್ರೀ ರಾಚೋಟೇಶ್ವರ ದೇವಸ್ಥಾನದ ವರೆಗೆ ದೀರ್ಘದಂಡ ನಮಸ್ಕಾರ ಹಾಕಿದರು.  ಅಲ್ಲದೇ, ಎಂ. ಬಿ. ಪಾಟೀಲರು ಉನ್ನತ ಸ್ಥಾನಕ್ಕೇರಲಿ.  ಈ ಭಾಗದಲ್ಲಿ ಮತ್ತು ನಾಡಿನಾದ್ಯಂತ ಹೆಚ್ಚೆಚ್ಚು ಅಭಿವೃದ್ಧಿ ಮಾಡಲಿ […]