ಸಿಂದಗಿ ತಹಸೀಲ್ದಾರ ಕಚೇರಿಯಲ್ಲಿ ಮಹಾಯೋಗಿ ವೇಮನ ಜಯಂತಿ ಆಚರಣೆ

ವಿಜಯಪುರ: ಮಹಾಯೋಗಿ ವೇಮನ ಜಯಂತಿಯನ್ನು ವಿಜಯಪುರ ಜಿಲ್ಲೆಯ ಸಿಂದಗಿಯಲ್ಲಿ ಆಚರಿಸಲಾಯಿತು. ಸಿಂದಗಿ ತಹಸೀಲ್ದಾರ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ತಹಸೀಲ್ದಾರ ಸಂಜೀವಕುಮಾರ ದಾಸರ ವೇಮನ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿದರು.  ಬಳಿಕ ಮಾತನಾಡಿದ ಅವರು, ಸಮಾನತೆಯ ಸಮಾಜ ನಿರ್ಮಾಣಕ್ಕಾಗಿ ತಮ್ಮನ್ನೇ ಸಮರ್ಪಿಸಿಕೊಂಡ ಮಹಾನ್ ಚೇತನಕ್ಕೆ ವೇಮನ್ ಅವರಿಗೆ ಅನಂತ ನಮನಗಳು ಎಂದು ಹೇಳಿದರು. ಈ ಸಂದರ್ಭದಲ್ಲಿ ಖಂಡರಾದ ಅನಂತರಡ್ಡಿ ದೇವರಡ್ಡಿ, ರವಿ ಮಂಗಳೂರ, ಸಂಗನಗೌಡ ಪಾಟೀಲ, ಬಸವರಾಜ ಕೋಳೂರ, ರಾಜೇಂದ್ರರಡ್ಡಿ ದೇಸಾಯಿ ಉಪಸ್ಥಿತರಿದ್ದರು.

ಸಿದ್ದೇಶ್ವರ ಶ್ರೀಗಳು ಬೇಗ ಗುಣಮುಖರಾಗಲಿ ಎಂದು ಹಾರೈಸಿ ಹಜರತ್ ಮುರ್ತುಜಾ ಖಾದ್ರಿ ದರ್ಗಾದಲ್ಲಿ ಯಾಸೀನ ಜವಳಿ ಮತ್ತೀತತರಿಂದ ವಿಶೇಷ ಪ್ರಾರ್ಥನೆ

ವಿಜಯಪುರ: ನಡೆದಾಡುವ ದೇವರೆಂದೇ ಹೆಸರಾಗಿರುವ ವಿಜಯಪುರದ ಜ್ಞಾನಯೋಗಾಶ್ರಮದ ಶ್ರೀ ಸಿದ್ದೇಶ್ವರ ಶ್ರೀಗಳು ಬೇಗ ಗುಣಮುಖರಾಗಲಿ ಎಂದು ಹಾರೈಸಿ ಅಲ್ಪಸಂಖ್ಯಾತ ಸಮುದಾಯದ ಮುಖಂಡ ಯಾಸೀನ ಜವಳಿ ಮತ್ತು ಇತರರು ವಿಜಯಪುರ ನಗರದ ಹಜರತ್ ಮುರ್ತುಜಾ ಖಾದ್ರಿ ದರ್ಗಾದಲ್ಲಿ ವಿಶೇಷ ಪ್ರಾರ್ಥನೆ ಸಲ್ಲಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಯಾಸೀನ ಜವಳಿ, ನಡೆದಾಡುವ ದೇವರಾದ ಶ್ರೀ ಸಿದ್ಧೇಶ್ವರ ಶ್ರೀಗಳು ಬೇಗನೇ ಗುಣಮುಖರಾಗಲಿ.  ಸಿದ್ದೇಶ್ವರ ಶ್ರೀಗಳ ಆಧ್ಯಾತ್ಮಿದ ಕುಡುಗೆ ನಿರಂತವರವಾಗಿರಲಿ.  ಪ್ರವಚನಗಳ ಮೂಲಕ ಅವರು ನಾಡಿನ ಜನತೆಗೆ ನೀಡುತ್ತಿರುವ ಸಂದೇಶಗಳು ಮುಂದುರವರೆಯಬೇಕು.  ಈ […]

ವಿಶ್ವದಲ್ಲಿ ಜ್ಞಾನವೇ ಎಲ್ಲಕ್ಕಿಂತ ಮಿಗಿಲು- ಸಾಮಾಜಿಕ ಹೋರಾಟಗಾರ್ತಿ ಮೇಧಾ ಪಾಟ್ಕರ

ವಿಜಯಪುರ: ವಿಶ್ವದಲ್ಲಿ ಜ್ಞಾನ ಎಲ್ಲಕ್ಕಿಂತಲೂ ಮಿಗಿಲಾಗಿದೆ.  ಜ್ಞಾನ ಜೋಳಿಗೆಯ ಮೂಲಕ ಪುಸ್ತಕಗಳನ್ನು ಸಂಗ್ರಹಿಸಿ ಸರಕಾರಿ ಶಾಲೆಗಳ ಗ್ರಂಥಾಲಯಗಳಿಗೆ ನೀಡುತ್ತಿರುವುದು ನಿಜಕ್ಕೂ ಅಭಿಮಾನದ ಸಂಗತಿ ಎಂದು ನರ್ಮದಾ ಬಚಾವೋ ಆಂದೋಲನದ ರೂವಾರಿ ಮತ್ತು ಸಾಮಾಜಿಕ ಹೋರಾಟಗಾರ್ತಿ ಮೇಧಾ ಪಾಟ್ಕರ ಹೇಳಿದ್ದಾರೆ. ವಿಜಯಪುರ ನಗರದಲ್ಲಿ ಸಿ ಎನ್ ಎಫ್ ಇ ಸಂಸ್ಥೆಯಲ್ಲಿ ಕಾಂಗ್ರೆಸ್ ಮುಖಂಡ ಮತ್ತು ಸಮಾಜ ಸೇವಕ ಸಂಗಮೇಶ ಬಬಲೇಶ್ವರ ಕೈಗೊಂಡಿರುವ ಜ್ಞಾನ ಜೋಳಿಗೆ ಕಾರ್ಯಕ್ರಮಗಳ ಬಗ್ಗೆ ಮಾಹಿತಿ ಪಡೆದ ಅವರು, ತಮ್ಮ ಬಳಿಯಿದ್ದ ಪುಸ್ತಕವನ್ನು ಜ್ಞಾನ ಜೋಳಿಗೆಗೆ […]

ನಾಲತವಾಡದಲ್ಲಿ ಅಯ್ಯಪ್ಪ ಸ್ವಾಮಿ ಪೂಜಾ ಕಾರ್ಯ 25 ವರ್ಷಗಳಿಂದ ನಡೆಯುತ್ತಿರುವ ಕೈಂಕರ್ಯ

ವಿಜಯಪುರ: ವಿಜಯಪುರ ಜಿಲ್ಲೆಯ ನಾಲತವಾಡ ಪಟ್ಟಣದಲ್ಲಿ ಅಯ್ಯಪ್ಪ ಸ್ವಾಮಿ ಪೂಜಾ ಕಾರ್ಯ ನಡೆಯಿತು. ಸತತವಾಗಿ 25 ವರ್ಷಗಳಿಂದ ಇಲ್ಲಿನ ಯುವಕರು ಅಯ್ಯಪ್ಪ ಸ್ವಾಮಿ ಮಾಲೆಯನ್ನು ಧರಿಸುತ್ತಿದ್ದಾರೆ.  ನಾಲತವಾಡ ಪಟ್ಟಣದಲ್ಲಿ 32 ಜನ ಅಯ್ಯಪ್ಪ ಮಾಲೆ ಹಾಕಿಕೊಂಡಿದ್ದಾರೆ. ಈ ಕಾರ್ಯಕ್ರಮದ ಅಂಗವಾಗಿ ಶ್ರೀ ವೀರೇಶ್ವರ ಮಠದಲ್ಲಿ ಹಿರುಮುಡಿ ಕಟ್ಟಿದರು.  ನಂತರ ಮಠದಿಂದ ಎಲ್ಲರೂ ಶಬರಿಯ ಅಯ್ಯಪ್ಪ ಸ್ವಾಮಿ ದರ್ಶನಕ್ಕೆ ತೆರಳಿದರು.  

2ಎ ಮೀಸಲಾತಿ ಹೋರಾಟಕ್ಕೆ ವರ್ಷ ತುಂಬುತ್ತಿರುವ ಹಿನ್ನೆಲೆ- ಜ. 14 ರಂದು ಕೂಡಲ ಸಂಗಮದಲ್ಲಿ ಜಾಗರಣೆ ಕಾರ್ಯಕ್ರಮ- ಪಂಚಮಸಾಲಿ ಜಗದ್ಗುರು ಬಸವಜಯ ಮೃತ್ಯುಂಜಯ ಸ್ವಾಮೀಜಿ

ವಿಜಯಪುರ: ಲಿಂಗಾಯಿತ ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ ನೀಡುವಂತೆ ಆಗ್ರಹಿಸಿ ಕೂಡಲ ಸಂಗಮ ಲಿಂಗಾಯಿತ ಪಂಚಮಸಾಲಿ ಪೀಠದ ಜಗದ್ಗುರು ಶ್ರೀ ಬಸವಜಯ ಮೃತ್ಯುಂಜಯ ಸ್ವಾಮೀಜಿ ನೇತೃತ್ವದಲ್ಲಿ ನಡೆಯುತ್ತಿರುವ ಹೋರಾಟಕ್ಕೆ ಒಂದು ವರ್ಷ ಪೂರ್ಣವಾಗುತ್ತಿದೆ.  ಈ ಹಿನ್ನೆಲೆಯಲ್ಲಿ ಜ. 14 ರಂದು ಬಾಗಲಕೋಟೆ ಜಿಲ್ಲೆಯ ಕೂಡಲ ಸಂಗಮದಲ್ಲಿ ಸಂಕ್ರಾಂತಿ ಹಬ್ಬದ ದಿನ ಪಂಚಮಸಾಲಿ ವರ್ಷಾಚರಣೆ ಮತ್ತು ಜಾಗರಣೆ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದು ಕೂಡಲ ಸಂಗಮ ಲಿಂಗಾಯಿತ ಪಂಚಮಸಾಲಿ ಪೀಠದ ಜಗದ್ಗುರು ಶ್ರೀ ಬಸವಜಯ ಮೃತ್ಯುಂಜಯ ಸ್ವಾಮೀಜಿ ಹೇಳಿದ್ದಾರೆ. ವಿಜಯಪುರದಲ್ಲಿ […]

ವಚನ ಪಿತಾಮಹ ಸಮಾಧಿಗೆ ತೆರಳಿ ಧ್ಯಾನ ಮಾಡಿ ಚೈತನ್ಯ ಪಡೆದ ಶಾಸಕ ಎಂ. ಬಿ. ಪಾಟೀಲ

ವಿಜಯಪುರ : ವಚನ ಪಿತಾಮಹ ಡಾ. ಫ. ಗು. ಹಳಕಟ್ಟಿ ಅವರೆಂದರೆ ಮಾಜಿ ಸಚಿವ ಎಂ. ಬಿ. ಪಾಟೀಲ ಅವರಿಗೆ ಅತೀವ ಅಭಿಮಾನ, ಹೆಮ್ಮೆ ಮತ್ರು ಪೂಜನೀಯ ಭಾವನೆಯಿದೆ.   ಈ ಹಿನ್ನೆಲೆಯಲ್ಲಿಯೇ ಅವರು ಬಿ ಎಲ್ ಡಿ ಇ ಸಂಸ್ಥೆಯಲ್ಲಿ ವಚನ ಪಿತಾಮಹ ಡಾ. ಫ. ಗು. ಹಳಕಟ್ಟಿ ಅವರ ಹೆಸರಿನಲ್ಲಿ ಸಂಶೋಧನಾ ಕೇಂದ್ರ ತೆರೆದು ನಾನಾ ರೀತಿಯಲ್ಲಿ ಸಾಹಿತ್ಯ ಕೃಷಿ ಮಾಡುತ್ತಿದ್ದಾರೆ. ಬಿ ಎಲ್ ಡಿ ಇ ಸಂಸ್ಥೆ ಸ್ಥಾಪನೆಯಲ್ಲಿ ಡಾ. ಫ. ಗು. ಹಳಕಟ್ಟಿ […]

ಗ್ರಾಮಗಳು ಅಭಿವೃದ್ಧಿಯಾದರೆ ದೇಶ ಸಮೃದ್ಧಿಯಾಗುತ್ತದೆ- ಶ್ರೀ ಸಿದ್ಧೇಶ್ವರ ಸ್ವಾಮೀಜಿ

ವಿಜಯಪುರ: ಗ್ರಾಮಗಳು ಅಭಿವೃದ್ಧಿಯಾದರೆ ದೇಶ ಸಮೃದ್ಧಿಯಾಗುತ್ತದೆ ಎಂದು ವಿಜಯಪುರ ಜ್ಞಾನಯೋಗಾಶ್ರಮದ ಶ್ರೀ ಸಿದ್ದೇಶ್ವರ ಸ್ವಾಮೀಜಿ ಹೇಳಿದ್ದಾರೆ. ವಿಜಯಪುರ ಜಿಲ್ಲೆಯ ಬಬಲೇಶ್ವರ ತಾಲೂಕಿನ ಸುಕ್ಷೇತ್ರ ಉಪ್ಪಲದಿನ್ನಿಯಲ್ಲಿ ಉಪ್ಪಲಗಿರಿ ಸಂಗಮನಾಥ ದೇವಸ್ಥಾನದ ಆವರಣದಲ್ಲಿ ನಡೆದ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ನಿಯಮಿತದ ನೂತನ ಕಟ್ಟಡ ಉದ್ಘಾಟನಾ ಸಮಾರಂಭದಲ್ಲಿ ಅವರು ಮಾತನಾಡಿದರು. ಕಾರ್ಯಕ್ರಮದ ದಿವ್ಯ ಸಾನಿಧ್ಯ ವಹಿಸಿದ್ದ ಶ್ರೀಗಳು, ಭೂಮಿತಾಯಿ ನಾವೆಲ್ಲರೂ ಸಂತೋಷದಿಂದ ಇರಲು ಬಾಳೆ,  ಕಬ್ಬು, .ಮಾವು, ಲಿಂಬೆ, ಸೇಬು,  ದ್ರಾಕ್ಷಿ, ಬಿಳಿಜೋಳ, ಗೋದಿ,  ತೊಗರಿ, ಹೆಸರು, ಸಜ್ಜೆ, […]

ಮಹಿಳಾ ಸಂಕುಲಕ್ಕೆ ಸದಾ ಸ್ಫೂರ್ತಿಯ ಸೆಲೆ ಸಾವಿತ್ರಿಬಾಯಿ ಫುಲೆ- ಸಂಗಮೇಶ ಬಬಲೇಶ್ವರ

ವಿಜಯಪುರ: ದೇಶದ ಮೊದಲ ಶಿಕ್ಷಕಿ ಮಹಿಳಾ ಸಂಕುಲಕ್ಕೆ ಸದಾ ಸ್ಫೂರ್ತಿಯ ಸೆಲೆಯಾಗಿರುವ ಸಾವಿತ್ರಿಬಾಯಿ ಪುಲೆಯವರ ತ್ಯಾಗಮಯ ಮತ್ತು ಆದರ್ಶ ಜೀವನ ದೇಶದ ಮಹಿಳೆಯರಿಗೆ ಸದಾ ಸ್ಫೂರ್ತಿಯ ಸೆಲೆಯಾಗಿದೆ ಎಂದು ಕಾಂಗ್ರೆಸ್ ಮುಖಂಡ ಮತ್ತು ಎಂ. ಎಸ್. ಬಬಲೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಸಂಗಮೇಶ ಬಬಲೇಶ್ವರ ಹೇಳಿದರು. ವಿಜಯಪುರ ಜಿಲ್ಲೆಯ ಬಬಲೇಶ್ವರ ತಾಲೂಕಿನ ಮದಗುಣಕಿ ಗ್ರಾಮದಲ್ಲಿರುವ ಶ್ರೀ ಶಿವಯ್ಯ ಸ್ವಾಮೀಜಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆದ ಅಕ್ಷರದವ್ವ ಸಾವಿತ್ರಿಬಾಯಿ ಫುಲೆಯವರ ಜನ್ಮದಿನದ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಸಮಾರಂಭದ […]

ಹಲಸಂಗಿ ಗೆಳೆಯರ ಪ್ರತಿಷ್ಠಾನದ ಪ್ರಶಸ್ತಿ ಪ್ರಧಾನ ಸಮಾರಂಭ

ವಿಜಯಪುರ: ಹಲಸಂಗಿ ಗೆಳೆಯರ ಪ್ರತಿಷ್ಠಾನದ ವತಿಯಿಂದ ಪ್ರಶಸ್ತಿ ಪ್ರಧಾನ ಸಮಾರಂಭ ವಿಜಯಪುರ ನಗರದ ಕಂದಗಲ್ ಶ್ರೀ ಹನುಮಂತರಾಯ ರಂಗಮಂದಿರದಲ್ಲಿ ನಡೆಯಿತು. ವಿಜಯಪುರ ಜಿಲ್ಲಾಡಳಿತ, ಕನ್ನಡ ಸಂಸ್ಕೃತಿ ಇಲಾಖೆ ಹಾಗೂ ಹಲಸಂಗಿ ಗೆಳೆಯರ ಪ್ರತಿಷ್ಠಾನದ ಸಂಯುಕ್ತಾಶ್ರಯದಲ್ಲಿ ವಿಜಯಪುರದ ಹಲಸಂಗಿ ಗೆಳೆಯರ ಪ್ರತಿಷ್ಠಾನದಿಂದ 2021ನೇ ವರ್ಚದ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲಾಗಿತ್ತು. ಈ ಕಾರ್ಯಕ್ರಮದಲ್ಲಿ ಖ್ಯಾತ ಕವಿ ಡಾ. ಅರವಿಂದ ಮಾಲಗತ್ತಿ ಅವರಿಗೆ ಅವರ ಕಾವ್ಯ ಸಾಧನೆಗಾಗಿ ಹಲಸಂಗಿ ಗೆಳೆಯರ ಪ್ರತಿಷ್ಠಾನದ 2021 ನೇ ವರ್ಷದ ಪ್ರಶಸ್ತಿ ನೀಡಿ ಗೌರವಿಸಲಾಯಿತು. […]

ಹಲಸಂಗಿ ಗೆಳೆಯರ ಸಾಹಿತ್ಯವನ್ನು ವಿಶ್ವಮಟ್ಟಕ್ಕೆ ಪರಿಚಯಿಸುವ ಕೆಲಸ ಆಗಬೇಕಿದೆ- ಕಲಬುರಗಿ ವಿವಿ ಡಾ. ಎಚ್. ಟಿ. ಪೋತೆ

ವಿಜಯಪುರ: ಹಲಸಂಗಿ ಗೆಳೆಯರ ಶ್ರೇಷ್ಠ ಸಾಹಿತ್ಯವನ್ನು ವಿಶ್ವ ಮಟ್ಟಕ್ಕೆ ಪರಿಚಯಿಸುವ ಕೆಲಸ ಆಗಬೇಕಿದೆ. ಈ ನಿಟ್ಟಿನಲ್ಲಿ ಅವರ ಸಾಹಿತ್ಯವನ್ನು ಇಂಗ್ಲೀಷ್ ಭಾಷೆಗೆ ಅನುವಾದಿಸಲು ಜಿಲ್ಲಾಡಳಿತ ಹಾಗೂ ಸರಕಾರ ಪ್ರಯತ್ನಿಸಬೇಕು ಎಂದು ಕಲಬುರಗಿ ವಿಶ್ವವಿದ್ಯಾಲಯದ ಕನ್ನಡ ಅಧ್ಯಯನ ಸಂಸ್ಥೆಯ ಪ್ರಾಧ್ಯಾಪಕ ಮತ್ತು ನಿರ್ದೇಶಕ ಡಾ. ಎಚ್. ಟಿ. ಪೋತೆ ಹೇಳಿದ್ದಾರೆ‌. ವಿಜಯಪುರ ನಗರದ ಕಂದಗಲ್ ಹನುಮಂತರಾಯ ರಂಗಮಂದಿರದಲ್ಲಿ ಜಿಲ್ಲಾಡಳಿತ, ಕನ್ನಡ ಸಂಸ್ಕೃತಿ ಇಲಾಖೆ ಹಾಗೂ ಹಲಸಂಗಿ ಗೆಳೆಯರ ಪ್ರತಿಷ್ಠಾನದ ಸಂಯುಕ್ತ ಆಶ್ರಯದಲ್ಲಿ ಆಯೋಜಿಸಲಾದ ವಿಚಾರ ಸಂಕಿರಣ ಮತ್ತು ಭಾವಚಿತ್ರಗಳ […]