ರಾಂಪುರದಲ್ಲಿ ಹಳೆಯ ವಿದ್ಯಾರ್ಥಿಗಳಿಂದ ಗುರುವಂದನೆ- ವಿದ್ಯೆ ಬೋಧಿಸಿದ ಗುರುಗಳನ್ನು ಮೆರವಣಿಗೆ ನಡೆಸಿದ ಶಿಷ್ಯಂದಿರು

ಬಾಗಲಕೋಟೆ: 20 ವರ್ಷಗಳ ಹಿಂದೆ ತಮಗೆ ವಿದ್ಯೆ ಬೋಧಿಸಿದ ಶಿಕ್ಷಕರನ್ನು ಮೆರವಣಿಗೆಯಲ್ಲಿ ಕರೆತಂದ ಶಿಷ್ಯಂದಿರು ಗುರುವಂದನೆ ಸಲ್ಲಿಸಿದ ಕಾರ್ಯಕ್ರಮ ಬಾಗಲಕೋಟೆ ತಾಲೂಕಿನ ರಾಂಪೂರದಲ್ಲಿರುವ ಸರಕಾರಿ ಪ್ರೌಢಶಾಲೆ ಸೀತಿಮನಿ ಆರ್. ಎಸ್. ಶಾಲೆಯಲ್ಲಿ ನಡೆಯಿತು.  ಈ ಶಾಲೆಯಲ್ಲಿ 2003-04ರಲ್ಲಿ ಎಸ್.ಎಸ್.ಎಲ್.ಸಿ ಪೂರ್ಣಗೊಳಿಸಿದ ವಿದ್ಯಾರ್ಥಿಗಳು ಈ ಅರ್ಥಪೂರ್ಣ ಗುರುವಂದನೆ ಮತ್ತು ಸ್ನೇಹ ಸಮ್ಮಿಲನ ಕಾರ್ಯಕ್ರಮ ಆಯೋಜಿಸಿ ಗಮನ ಸೆಳೆದರು. ಕಾರ್ಯಕ್ರಮ ಪ್ರಾರಂಭಕ್ಕೂ ಮುಂಚೆ ಊರಿನ ಪ್ರಮುಖ ಬೀದಿಗಳಲ್ಲಿ ಶಿಕ್ಷಕರನ್ನು ಅದ್ಧೂರಿಯಾಗಿ ಮೆರವಣಿಗೆ ಮೂಲಕ ಶಾಲೆಗೆ ಕರೆತರಲಾಯಿತು.  ಈ ಕಾರ್ಯಕ್ರಮದಲ್ಲಿ ಹಳೆ […]

ಬಸವಾದಿ ಶರಣರ ವೇಷಭೂಷಣ ಧರಿಸಿ ಗಮನ ಸೆಳೆದ ಆಕ್ಸಫರ್ಡ್ ಶಾಲೆಯ ಮಕ್ಕಳು

ವಿಜಯಪುರ: ನಗರದ ಆಕ್ಸಫರ್ಡ್ ಶಾಲೆಯ ವಿದ್ಯಾರ್ಥಿಗಳು ಬಸವಾದಿ ಶರಣರ ವೇಷಭೂಷಣಗಳನ್ನು ಧರಿಸಿ ಗಮನ ಸೆಳೆದಿದ್ದಾರೆ. ನಗರದ ಜಿ. ಪಂ. ಸಭಾಂಗಣದಲ್ಲಿ ಜಿಲ್ಲಾಡಳಿತದ ವತಿಯಿಂದ ಆಯೋಜಿಸಲಾಗಿದ್ದ ಸಾಂಸ್ಕೃತಿಕ ನಾಯಕ ವಿಶ್ವಗುರು ಬಸವಣ್ಣನವರ ಭಾವಚಿತ್ರ ಅನಾವರಣ ಕಾರ್ಯಕ್ರಮದಲ್ಲಿ ಪ್ರತಿಷ್ಠಿತ ಆಕ್ಸ್ಫರ್ಡ್ ಶಿಕ್ಷಣ ಸಂಸ್ಥೆಯ ಮುದ್ದು ಮಕ್ಕಳು ಬಸವಾದಿ ಶರಣರ ವೇಷಭೂಷಣಗಳನ್ನು ಧರಿಸಿ ಸಮಾರಂಭಕ್ಕೆ ಆಗಮಿಸಿ ಎಲ್ಲರ ಗಮನವನ್ನು ಸೆಳೆದರು. ಸಾಂಸ್ಕೃತಿಕ ನಾಯಕ ವಿಶ್ವಗುರು ಬಸವಣ್ಣನವರ ಭಾವಚಿತ್ರ ಅನಾವರಣಗೊಳಿಸಿದ ಜಿಲ್ಲಾ ಉಸ್ತುವಾರಿ ಸಚಿವ ಎಂ. ಬಿ. ಪಾಟೀಲ ಅವರಿಗೆ ಬಸವಾದಿ ಶರಣರ […]

ಬಸವಾದಿ ಶರಣರ ಆಶಯದಂತೆ ಸರಕಾರದ ಆಡಳಿತ ನಡೆಸುತ್ತಿದೆ- ಸಚಿವ ಡಾ. ಎಂ. ಬಿ. ಪಾಟೀಲ

ವಿಜಯಪುರ: ಜಿಲ್ಲೆಯ ಬಸವನ ಬಾಗೇವಾಡಿಯ ಇಂಗಳೇಶ್ವರಲ್ಲಿ ಜನಿಸಿದ ಅಣ್ಣ ಬಸವಣ್ಣ ಅವರನ್ನು ಕರ್ನಾಟಕ ರಾಜ್ಯದ ಸಾಂಸ್ಕೃತಿಕ ನಾಯಕ ಎಂದು ಕ್ಯಾಬಿನೆಟ್‍ನಲ್ಲಿ ನಿರ್ಣಯ ಮಾಡುವ ಮೂಲಕ ಬಸವಣ್ಣನವರಿಗೆ ಗೌರವ ಸೂಚಿಸಲಾಗಿದೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕೆ, ಮೂಲಸೌಲಭ್ಯ ಅಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಂ. ಬಿ. ಪಾಟೀಲ ಹೇಳಿದ್ದಾರೆ. ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ನಡೆದ ವಿಶ್ವಗುರು ಬಸವಣ್ಣ ಕರ್ನಾಟಕದ ಸಾಂಸ್ಕøತಿಕ ನಾಯಕ ಭಾವಚಿತ್ರ ಅನಾವರಣಗೊಳಿಸಿ, ಪುಷ್ಪಾರ್ಚನೆ ಮಾಡಿ ಅವರು ಮಾತನಾಡಿದರು. ಮುಖ್ಯಮಂತ್ರಿಗಳ ಬಳಿ ಈ ಬಗ್ಗೆ […]

ಭಾರತದ ಸಂವಿಧಾನ ಸಮಾನತೆಗೆ ಬುನಾದಿಯಾಗಿದೆ- ಎಚ್. ವೈ. ಸಿಂಗೆಗೋಳ

ವಿಜಯಪುರ: ಸಂವಿಧಾನ ಸಮಸಮಾಜದ ಬುನಾದಿಯಾಗಿದ್ದು, ಈ ಕುರಿತು ಜನಜಾಗೃತಿ ಮೂಡಬೇಕಿದೆ ಎಂದು ಸಿಂದಗಿ ಕೃಷಿ ಇಲಾಖೆ ಸಹಾಯಕ ನಿದೇ೯ಶಕ ಎಚ್. ವೈ. ಸಿಂಗೆಗೋಳ ಹೇಳಿದ್ದಾರೆ. ಸಿಂದಗಿ ತಾಲೂಕಿನ ಬ್ರಹ್ಮದೇವನಮಡು ಮತ್ತು ಹೊನ್ನಳ್ಳಿ ಗ್ರಾಮಗಳಗೆ ಆಗಮಿಸಿದ ಸಂವಿಧಾನ ಜಾಗೃತಿ ಜಾಥಾ ರಥವನ್ನು ಸ್ವಾಗತಿಸಿ, ಪುಷ್ಪಾಚ೯ನೆ ಮಾಡಿ ಅವರು ಮಾತನಾಡಿದರು. ದೇಶದ ಸವ೯ಧಮ೯, ಜಾತಿ ಜನರ ಹಿತ ಕಾಪಾಡುವ ಅಂಬೇಡ್ಕರ್ ಅವರ ಸಂವಿಧಾನವನ್ನು ಪ್ರತಿಯೊಬ್ಬರೂ ಗೌರವಿಸಬೇಕಿದೆ.  ಕಾನೂನುಗಳ ಪಾಲನೆ ಬದ್ದತೆ ಬೆಳಸಿಕೊಳ್ಳಬೇಕಿದೆ ಎಂದು ಅವರು ಹೇಳಿದರು. ಈ ಮಧ್ಯೆ ಬ್ರಹ್ಮದೇವರಮಡು […]

ರವಿ ಬೆಳಗೆರೆ ಸಾರಥ್ಯದ ಹಾಯ್ ಬೆಂಗಳೂರು ವಾರ ಪತ್ರಿಕೆ ಭಾವನ ಬೆಳಗೆರೆ ಸಂಪಾದಕತ್ವದಲ್ಲಿ ಶೀಘ್ರದಲ್ಲಿ ಪುನಾರಂಭ

ಬೆಂಗಳೂರು: ರವಿ ಬೆಳಗೆರೆ ಸಾರಥ್ಯದ ಹಾಯ್ ಬೆಂಗಳೂರು ವಾರ ಪತ್ರಿಕೆ ಅತೀ ಶೀಘ್ರದಲ್ಲಿ ಭಾವನಾ ಬೆಳಗೆರೆ ಸಂಪಾದಕತ್ವದಲ್ಲಿ ಪುನಾರಂಭವಾಗಲಿದೆ. ಬೆಂಗಳೂರಿನ ಹಾಯ್ ಬೆಂಗಳೂರು ಪತ್ರಿಕೆ ಕಚೇರಿಯಲ್ಲಿ ಹಿರಿಯ ಪತ್ರಕರ್ತ, ಸಾಹಿತಿ, ಬರಹಗಾರ ರವಿ ಬೆಳೆಗೆರೆ ಅವರ ಎರಡು ಪುಸ್ತಕಗಳಾದ ರಜನೀಶನ ಹುಡುಗಿಯರು, ಅರ್ತಿ ಪುಸ್ತಕಗಳ ಬಿಡುಗಡೆ ಕಾರ್ಯಕ್ರಮದಲ್ಲಿ ರವಿ ಬೆಳಗೆರೆ ಪುತ್ರಿ ಮತ್ತು ಪತ್ರಿಕೆಯ ಸಂಪಾದಕಿಯಾಗಿ ಕಾರ್ಯ ನಿರ್ವಹಿಸಲಿರುವ ಭಾವನಾ ಬೆಳಗೆರೆ ಈ ಘೋಷಣೆ ಮಾಡಿದ್ದಾರೆ. ಹಾಯ್ ಬೆಂಗಳೂರು ಮತ್ತು ಓ ಮನಸೆ ಪತ್ರಿಕೆಗಳನ್ನು ಪುನಾರಂಭಿಸುವಂತೆ ರಾಜ್ಯದ […]

ರಾಷ್ಟ್ರಪಿತನ ತತ್ವಗಳನ್ನು ಪಾಲಿಸಿ ವ್ಯಕ್ತಿತ್ವನ್ನು ಉತ್ತಮವಾಗಿ ರೂಪಿಸಿಕೊಳ್ಳಬಹುದು- ಶಂಕರಗೌಡ ಸೋಮನಾಳ

ವಿಜಯಪುರ: ಗಾಂಧೀಜಿಯವರ ತತ್ವಗಳನ್ನು ಪಾಲಿಸಿದರೆ ನಮ್ಮ ವ್ಯಕ್ತಿತ್ವವನ್ನು ಉತ್ತಮವಾಗಿ ರೂಪಿಸಿಕೊಳ್ಳಬಹುದು ಎಂದು ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯದ ಕುಲಸಚಿವ ಶಂಕರಗೌಡ ಸೋಮನಾಳ ಹೇಳಿದ್ದಾರೆ. ನಗರದ ಕರ್ನಾಟಕ ಗಾಂಧಿ ಸ್ಮಾರಕ ನಿಧಿ, ಬೆಂಗಳೂರು, ಗಾಂಧಿ ಅಧ್ಯಯನ ಕೇಂದ್ರ, ಎನ್.ಎಸ್.ಎಸ್ ಕೋಶ ಹಾಗೂ ಐಕ್ಯುಎಸಿ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯ ವಿಜಯಪುರ ವತಿಯಿಂದ ಗಾಂಧಿ ಸ್ಮಾರಕ ನಿಧಿಯ 75 ನೆಯ ವಾರ್ಷಿಕೋತ್ಸವ ಅಂಗವಾಗಿ ಹಮ್ಮಿಕೊಂಡಿದ್ದ ಗಾಂಧಿ ಚಿಂತನೆಗಳ ಮೂಲಕ ಮಾನವೀಯ ಮೌಲ್ಯಗಳು” ಕುರಿತ ಒಂದು ದಿನದ ರಾಷ್ಟ್ರೀಯ ವಿಚಾರ […]

ಅಡ್ವಾಣಿಗೆ ಭಾರತರತ್ನ ಸ್ವಾಗತಾರ್ಹ- ಶಿವಕುಮಾರ ಸ್ವಾಮೀಜಿಗೂ ನೀಡಲಿ- ಡಿಕೆಶಿಗೆ ಮುಂದೆ ಸಿಎಂ ಆಗುವ ಅರ್ಹತೆ ಇದೆ- ರಂಭಾಪುರಿ ಶ್ರೀ

ವಿಜಯಪುರ: ಬಿಜೆಪಿ ಹಿರಿಯ ಮುಖಂಡ ಮತ್ತು ಮಾಜಿ ಉಪಪ್ರಧಾನಿ ಎಲ್. ಕೆ. ಆಡ್ವಾಣಿ ಅವರಿಗೆ ಭಾರತ ರತ್ನ ಘೋಷಣೆ ಮಾಡಿರುವುದಕ್ಕೆ ಬಾಳೆಹೊನ್ನೂರು ಶ್ರೀ ರಂಭಾಪುರಿ ಪೀಠದ ಜಗದ್ಗುರು ಡಾ. ವೀರಸೋಮೇಶ್ವರ ರಾಜದೇಶಿಕೇಂದ್ರ ಶಿವಾಚಾರ್ಯರು ಸಂತಸ ವ್ಯಕ್ತಪಡಿಸಿದ್ದಾರೆ. ವಿಜಯಪುರ ಜಿಲ್ಲೆಯ ಬಸವನ ಬಾಗೇವಾಡಿ ತಾಲೂಕಿನ ಮನಗೂಳಿ ಪಟ್ಟಣದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ದೇಶದ ಹಿರಿಯ ನಾಯಕನಿಗೆ ಭಾರತ ರತ್ನ ನೀಡಲಾಗಿದೆ ಎಂದು ತಿಳಿಸಿದ್ದಾರೆ. ಭಾರತೀಯ ಜನತಾ ಪಕ್ಷ ಕಟ್ಟುವಲ್ಲಿ ಲಾಲ ಕೃಷ್ಣ ಅಡ್ವಾಣಿ ಪ್ರಮುಖ ಪಾತ್ರ ವಹಿಸಿದ್ದಾರೆ.  […]

ಬಸವ ನಾಡಿನಲ್ಲಿ ಮಡಿವಾಳ ಮಾಚಿದೇವ ಜಯಂತಿ ಆಚರಣೆ- ವಚನಗಳ ಮೂಲಕ ಸಮ ಸಮಾಜಕ್ಕೆ ಶರಣರು ಶ್ರಮಿಸಿದ್ದಾರೆ- ಮಹಾದೇವ ಮುರಗಿ

ವಿಜಯಪುರ: ಕಲ್ಯಾಣ ಕರ್ನಾಟಕದ ಬಸವ ಕಲ್ಯಾಣದ ಅನುಭವ ಮಂಟಪದ 12ನೇ ಶತಮಾನದಲ್ಲಿ ಸಮ ಸಮಾಜದ ಕನಸು ಕಂಡು ಆದಿಸೆಯಲ್ಲಿ ತಮ್ಮ ವಚನಗಳ ಮೂಲಕ ಪ್ರತಿಪಾದಿಸಿದ ಮಡಿವಾಳ ಮಾಚಿದೇವ ಶರಣರು ಎಂದು ಅಪರ ಜಿಲ್ಲಾಧಿಕಾರಿ ಮಹದೇವರ ಮುರಗಿ ಹೇಳಿದರು. ನಗರದ ಕಂದಗಲ್ಲ ಶ್ರೀ ಹನಮಂತರಾಯ ರಂಗಮಂದಿರದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ ಮತ್ತು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಯೋಗದಲ್ಲಿ ಮಡಿವಾಳ ಮಾಚಿದೇವ ಜಯಂತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಶರಣರ ಅಂದು ಹಾಕಿಕೊಟ್ಟ ಹಾಗೂ ತಿಳಿಸಿದ ವಿಚಾರಗಳು ಇಂದಿಗೂ […]

ಹುತಾತ್ಮರ ದಿನಾಚರಣೆ : ಹುತಾತ್ಮರಿಗೆ ಜಿಲ್ಲಾಡಳಿತದಿಂದ ಮೌನಾಚರಣೆ ಮೂಲಕ ನಮನ

ವಿಜಯಪುರ: ಸ್ವಾತಂತ್ರ್ಯ ಯೋಧರ ತ್ಯಾಗ ಬಲಿದಾನ ಹೋರಾಟ ನಮ್ಮೆಲ್ಲರಿಗೂ ಮಾರ್ಗದರ್ಶನ ಪ್ರತಿದಿನ ಆ ಹೋರಾಟಗಾರರ ತ್ಯಾಗ ಮತ್ತು ಬಲಿದಾನವನ್ನು ನೆನಪಿಸಿಕೊಳ್ಳುವುದು ನಮ್ಮೆಲ್ಲರ ಕರ್ತವ್ಯವಾಗಿದೆ ಎಂದು ಜಿಲ್ಲಾಧಿಕಾರಿ ಟಿ.ಭೂಬಾಲನ್ ಹೇಳಿದರು. ಯುವಜನ ವ್ಯವಹಾರ ಮತ್ತು ಕ್ರೀಡಾ ಸಚಿವಾಲಯ, ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಮಹಾನಗರಪಾಲಿಕೆ ಭಾರತೀಯ ಸೇವಾದಳ, ಭಾರತೀಯ ಸ್ಕೌಟ್ಸ್ ಹಾಗೂ ಗೈಡ್ಸ್ ಹಾಗೂ ನೆಹರು ಯುವ ಕೇಂದ್ರ ಇವರ ಸಹಯೋಗದಲ್ಲಿ ಹುತಾತ್ಮ ದಿನಾಚರಣೆ ಅಂಗವಾಗಿ ನಗರದ ಹುತಾತ್ಮರ (ಮೀನಾಕ್ಷಿ ಚೌಕ್) ವೃತ್ತದಲ್ಲಿರುವ ಸ್ಮಾರಕಕ್ಕೆ ಹಾಗೂ ಮಹಾತ್ಮ ಗಾಂಧಿಜಿಯವರ ಭಾವಚಿತ್ರಕ್ಕೆ […]

ಬಂಜಾರಾ ಕಸೂತಿ ಕಲೆ ಉತ್ತೇಜನಕ್ಕಾಗಿ ತರಬೇತಿ ಶಿಬಿರ ಆಯೋಜನೆ- ಆಶಾ ಎಂ. ಪಾಟೀಲ

ವಿಜಯಪುರ: ಬಂಜಾರಾ ಕಸೂತಿ ಕಲೆಯನ್ನು ಪ್ರೋತ್ಸಾಹಿಸಲು ಬಂಜಾರಾ ಕಸೂತಿ ಕಸೂತಿ ಸಂಸ್ಥೆ ಸ್ಥಾಪಿಸಿ ತರಬೇತಿ ಶಿಬಿರಗಳ ಆಯೋಜನೆ ಮೂಲಕ ಉತ್ತೇಜನ ನೀಡಲಾಗುತ್ತಿದೆ ಎಂದು ಸಂಸ್ಥೆಯ ಸಂಸ್ಥಾಪಕಿ ಆಶಾ ಎಂ.ಪಾಟೀಲ ಹೇಳಿದರು. ನಗರದ ಬಿ.ಎಲ್.ಡಿ.ಇ. ಸಂಸ್ಥೆಯ ಎ.ಎಸ್.ಪಾಟೀಲ ವಾಣಿಜ್ಯ ಮಹಾವಿದ್ಯಾಲಯದ ಐ.ಕ್ಯೂ.ಎ.ಸಿ ಮಹಿಳಾ ಸಬಲೀಕರಣ ಘಟಕ ಮತ್ತು ಬಂಜಾರಾ ಕಸೂತಿ ಸಂಸ್ಥೆಯ ಸಹಯೋಗದಲ್ಲಿ ವಿದ್ಯಾರ್ಥಿಗಳಿಗಾಗಿ ಒಂದು ವಾರದ ಬಂಜಾರಾ ಕಸೂತಿ ತರಬೇತಿ ಶಿಬಿರ ಉದ್ಘಾಟಿಸಿ ಅವರು ಮಾತನಾಡಿದರು. ವಿಜಯಪುರದ ಸಾಂಸ್ಕøತಿಕ ವೆಶಿಷ್ಟ್ಯತೆಯ ಸಂಕೇತವಾಗಿರುವ ಬಂಜಾರಾ ಕಸೂತಿ ಗ್ರಾಮೀಣ ಕರಕುಶಲ […]