ಆಗಷ್ಟ 15ರೊಳಗೆ ವಿಜಯಪುರ ಸೈಕ್ಲಿಂಗ್ ವೆಲೊಡ್ರೊಮ್ ಉದ್ಘಾಟನೆ- ಕಾಮಗಾರಿ ಪೂರ್ಣಗೊಳಿಸಲು ಡಿಸಿ ಟಿ. ಭೂಬಾಲನ್ ಸೂಚನೆ

ವಿಜಯಪುರ: ಜಿಲ್ಲಾಧಿಕಾರಿ ಟಿ. ಭೂಬಾಲನ್ ಅವರು ಶನಿವಾರ ವಿಜಯಪುರ ನಗರ ವ್ಯಾಪ್ತಿಯ ಭೂತನಾಳ ಗ್ರಾಮದ ಹತ್ತಿರ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯಡಿ ನಿರ್ಮಾಣವಾಗುರುವ ಸೈಕ್ಲಿಂಗ್ ವೆಲೋಡ್ರೊಮ್ ಕಾಮಗಾರಿ ಮತ್ತು ನಿರ್ಮಿತಿ ಕೇಂದ್ರದಡಿ ನಿರ್ಮಾಣದ ಡಾರ್ಮಿಟರಿ ಕಾಮಗಾರಿಯನ್ನು ಪರಿಶೀಲನೆ ನಡೆಸಿದರು.  ಕೊನೆಯ ಹಂತದಲ್ಲಿರುವ  ಸೈಕ್ಲಿಂಗ್ ವೆಲೋಡ್ರೊಮ್ ಕಾಮಗಾರಿಯನ್ನು ಸಂಪೂರ್ಣ ಪರಿಶೀಲನೆ ನಡೆಸಿ, ಈ ಕಾಮಗಾರಿ ಈಗಾಗಲೇ ವಿಳಂಬವಾಗಿದ್ದು,  ಬೇಗ ಪೂರ್ಣಗೊಳಿಸಿ , ಅಗಸ್ಟ್ 15 ಸ್ವತಂತ್ರ ದಿನಾಚರಣೆ ಒಳಗಾಗಿ ಉದ್ಘಾಟನೆ ಮಾಡಬೇಕು ಎಂದು ಯುವ ಸಬಲೀಕರಣ ಮತ್ತು […]

ದರಬಾರ ಡಿಗ್ರಿ ಕಾಲೇಜಿನ ಯಶ ಆರ್. ಮುತ್ತಿನಪೆಂಡಿಮಠ ರಾಣಿ ಚನ್ನಮ್ಮ ವಿವಿ ಕ್ರಿಕೆಟ್ ತಂಡಕ್ಕೆ ಬ್ಲ್ಯೂ ಆಗಿ ಆಯ್ಕೆ

ವಿಜಯಪುರ: ನಗರದ ಪ್ರತಿಷ್ಠಿತ ಕುಮುದಬೇನ ದರಬಾರ ಬಿಬಿಎ, ಬಿಸಿಎ ಮತ್ತು ಬಿಕಾಂ ಕಾಲೇಜಿನ ಬಿ. ಕಾಂ. ಸೆಮಿಸ್ಟರ್ ವಿದ್ಯಾರ್ಥಿ ಮಾರ ಯಶ ಆರ್. ಮುತ್ತಿನಪೆಂಡಿಮಠ ಬೆಳಗಾವಿ ರಾಣಿ ಚನ್ನಮ್ಮ ವಿಶ್ವವಿದ್ಯಾಲಯ ಕ್ರಿಕೆಟ್ ತಂಡಕ್ಕೆ ಬ್ಲ್ಯೂ ಆಗಿ ಆಯ್ಕೆಯಾಗಿದ್ದಾನೆ. ಜಮಖಂಡಿಯ ವಾಣಿಜ್ಯ ಬಿ. ಎಚ್‌. ಎಸ್ ಕಲೆ ಮತ್ತು ಟಿಜಿಪಿ ವಿಜ್ಞಾನ ಮಹಾವಿದ್ಯಾಲಯದಲ್ಲಿ ಫೆಬ್ರವರಿ 7 ಮತ್ತು 8 ರಂದು ನಡೆದ ಅಂತರ ಮಹಾವಿದ್ಯಾಲಯಗಳ ಕ್ರಿಕೆಟ್ ಆಯ್ಕೆಯಾಗಿದ್ದಾರೆ. ವಿದ್ಯಾರ್ಥಿಯ ಈ ಸಾಧನೆಗೆ ಸಂಸ್ಥೆಯ ಅದ್ಯಕ್ಷೆ ರಾಧಾ ಆರ್. ದರಬಾರ […]

ಕ್ರಿಕೆಟ್, ಪುಟಬಾಲ್ ಜೊತೆ ಅಥ್ಲೇಟಿಕ್ಸ್ ಗೂ ಪ್ರೋತ್ಸಾಹ ಅಗತ್ಯ- ಪ್ರೋ. ಆರ್. ಸಿ. ಬಿದರಿ

ವಿಜಯಪುರ: ಕ್ರಿಕೆಟ್ ಮತ್ತು ಪುಟಬಾಲ್ ಜೊತೆ ಅಥ್ಲೇಟಿಕ್ಸ್ಗೂ ಪ್ರೋತ್ಸಾಹ ನೀಡುವುದು ಅಗತ್ಯವಾಗಿದೆ ಎಂದು ಬಿ.ಎಲ್.ಡಿ.ಇ ಡೀಮ್ಡ್ ವಿಶ್ವವಿದ್ಯಾಲಯದ ಜನರಲ್ ಮೆಡಿಸೀನ್ ವಿಭಾಗದ ಪ್ರಾಧ್ಯಾಪಕ ಪ್ರೋ. ಡಾ. ಆರ್. ಸಿ. ಬಿದರಿ ಹೇಳಿದ್ದಾರೆ. ನಗರದ ಬಿ.ಎಲ್.ಡಿ.ಇ ಸಂಸ್ಥೆಯ ಶ್ರೀ ಬಿ. ಎಂ. ಪಾಟೀಲ ವೈದ್ಯಕೀಯ ಕಾಲೇಜಿನ ಕ್ರೀಡಾಂಗಣದಲ್ಲಿ ರವಿವಾರ ದಿ. ಡಾ. ಸಿ. ಆರ್. ಬಿದರಿ ಸ್ಮರಣಾರ್ಥ ಆಯೋಜಿಸಲಾಗಿದ್ದ 9ನೇ ಅಂತರಶಾಲಾ ಕಾಲೇಜುಗಳ ಅಥ್ಲೇಟಿಕ್ ಕ್ರೀಡಾಕೂಟ ಸಮಾರೋಪ ಸಮಾರಂಭದಲ್ಲಿ ಅವರು ಮಾತನಾಡಿದರು. ನಮ್ಮ ತಂದೆ ಡಾ. ಸಿ. ಆರ್. […]

Rajeshwari Gayakwad: ಸತತ ಪರಿಶ್ರಮ, ಶ್ರದ್ಧೆ, ಶಿಸ್ತಿನಿಂದ ಕ್ರೀಡೆಗಳಲ್ಲಿ ಉನ್ನತ ಸಾಧನೆ ಮಾಡಬಹುದು- ಅಂತಾರಾಷ್ಟ್ರೀಯ ಕ್ರಿಕೆಟ್ ಮಹಿಳಾ ಆಟಗಾರ್ತಿ ರಾಜೇಶ್ವರಿ ಗಾಯಕವಾಡ

ವಿಜಯಪುರ: ಸತತ ಪರಿಶ್ರಮ, ಶ್ರದ್ಧೆ ಮತ್ತು ಶಿಸ್ತಿನಿಂದ ಕ್ರೀಡೆಗಳಲ್ಲಿ ಉನ್ನತ ಸಾಧನೆ ಮಾಡಬಹುದು.  ಇಲ್ಲಿ ಯಾವುದೇ ಶಾರ್ಟ್ ಕಟ್ ಇರುವುದಿಲ್ಲ ಎಂದು ಅಂತಾರಾಷ್ಟ್ರೀಯ ಖ್ಯಾತಿಯ ಮಹಿಳಾ ಕ್ರಿಕೆಟ್ ಆಟಗಾರ್ತಿ ರಾಜೇಶ್ವರಿ ಗಾಯಕವಾಡ ಹೇಳಿದ್ದಾರೆ. ನಗರದ ಬಿ.ಎಲ್.ಡಿ.ಇ ಡೀಮ್ಡ್ ವಿಶ್ವವಿದ್ಯಾಲಯದ ಶ್ರೀ ಬಿ. ಎಂ. ಪಾಟೀಲ ಮೆಡಿಕಲ್ ಕಾಲೇಜಿನ ಕ್ರೀಡಾಂಗಣದಲ್ಲಿ ಅಂತಾರಾಷ್ಟ್ರೀಯ ಖ್ಯಾತಿಯ ಅಥ್ಲೀಟ್ ಮತ್ತು ಖ್ಯಾತ ವೈದ್ಯ ದಿ. ಡಾ. ಸಿ. ಆರ್. ಬಿದರಿಯವರ ಪುಣ್ಯಸ್ಮರಣೆ ಅಂಗವಾಗಿ ಇಂದು ರವಿವಾರ ಆಯೋಜಿಸಲಾಗಿದ್ದ ಬಿ. ಎಲ್. ಡಿ. ಇ […]

ವಿಜಯಪುರ ಜಿಲ್ಲಾ ಮಟ್ಟದ ಥ್ರೊಬಾಲ್ ಚಾಂಪಿಯನ್ ಆದ ಎವಿಎಸ್ ಆಯುರ್ವೇದ ಕಾಲೇಜಿನ ವಿದ್ಯಾರ್ಥಿನಿಯರು- ರಾಜ್ಯ ಮಟ್ಟಕ್ಕೆ ಆಯ್ಕೆ

ವಿಜಯಪುರ: ಬಿ.ಎಲ್.ಡಿ.ಇ ಸಂಸ್ಥೆಯ ಎವಿಎಸ್ ಆಯುರ್ವೇದ ಮಹಾವಿದ್ಯಾಲಯದ ವಿದ್ಯಾರ್ಥಿನಿಯರು ಎಬಿವಿಪಿ ವಿಜಯಪುರ ಘಟಕ ಆಯೋಜಿಸಿದ್ದ ಜಿಲ್ಲಾ ಮಟ್ಟದ ಥ್ರೊಬಾಲ್ ವಿವೇಕ್ ಟ್ರೊಫಿ-2024 ಪಂದ್ಯಾವಳಿಯನ್ನು ಗೆದ್ದು, ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದೆ.   ಜ್ಞಾನ-ಶೀಲ-ಏಕತೆ ಸಾರಿದ ಸ್ವಾಮಿ ವಿವೇಕಾನಂದರ ಜಯಂತಿ ಸಾಕ್ಷೀಕರಿಸಲು ಮತ್ತು ಸ್ವಾಮಿ ವಿವೇಕಾನಂದ ಜಯಂತಿ ಅಂಗವಾಗಿ ಯುವ ಪೀಳಿಗೆಯ ಸರ್ವಾಂಗೀಣ ಅಭಿವೃದ್ದಿಗಾಗಿ ಎಬಿವಿಪಿ ವಿಜಯಪುರ ಘಟಕ ಖೇಲೋ ಭಾರತ ಅಡಿಯಲ್ಲಿ ಜಿಲ್ಲಾಮಟ್ಟದ ಕ್ರೀಡಾಕೂಟ ಥ್ರೋಬಾಲ್ ಪಂದ್ಯಾವಳಿ ಆಯೋಜಿಸಲಾಗಿತ್ತು. ಜನೇವರಿ 10 ರಂದು ಗುರುವಾರ ನಗರದ ಡಾ. ಬಿ.ಆರ್.ಅಂಬೇಡ್ಕರ […]

ಮಾದಕ ದ್ರವ್ಯದ ದುಷ್ಪರಿಣಾಮಗಳ ಬಗ್ಗೆ ಜನಜಾಗೃತಿಗಾಗಿ ಎಸ್ಪಿ ಋಷಿಕೇಶ ಸೋನಾವಣೆ ಭಗವಾನ ನೇತೃತ್ವದಲ್ಲಿ ವಾಕ್ ಆ್ಯಂಡ್ ರನ್

ವಿಜಯಪುರ: ಡ್ರಗ್ಸ್ ಮತ್ತು ಮಾದಕ ದ್ರವ್ಯ ಸೇವೆಯಿಂದಾಗುವ ದುಷ್ಪರಿಣಾಮಗಳ ಬಗ್ಗೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲು ಪೊಲೀಸರು ಎಸ್ಪಿ ಋಷಿಕೇಶ ಸೋನಾವಣೆ ಭಗವಾನ ನೇತೃತ್ವದಲ್ಲಿ ನಗರದಲ್ಲಿ ವಾಕ್ ಆ್ಯಂಡ್ ರನ್ ನಡೆಸಿದರು. ಡಾ. ಬಿ. ಆರ್. ಅಂಬೇಡ್ಕರ್ ಜಿಲ್ಲಾ ಕ್ರೀಡಾಂಗಣದಿಂದ ಆರಂಭವಾದ ಜಾಥಾ, ಅಂಬೇಡ್ಕರ್ ಸರ್ಕಲ್, ಗಾಂಧಿ ಸರ್ಕಲ್ ಮೂಲಕ ವಾಟರ್ ಟ್ಯಾಂಕ್, ಗೋದಾವರಿ ಹೋಟೆಲ್ ವರೆಗೆ ನಡೆಯಿತು.  ನಂತರ ಅಲ್ಲಿಂದ ಪೊಲೀಸ್ ಕವಾಯತು ಮೈದಾನದವರೆಗೆ ಸಾಗಿತು.  ಈ ಸಂದರ್ಭದಲ್ಲಿ ಕೈಯ್ಯಲ್ಲಿ ಡ್ರಗ್ಸ್ ಮತ್ತು ಮಾದಕ ದ್ರವ್ಯಗಳ ಸೇವನೆಯಿಂದಾಗುವ […]

ಎ.ಎಸ್.ಪಿ ಕಾಮರ್ಸ್ ಕಾಲೇಜಿನಲ್ಲಿ ಬಿಬಿಎ ವಿಭಾಗದಿಂದ ಮಂಚಾ-ಮಚ್ಚಾ ವೃತ್ತಿಪರ ಸ್ಪರ್ಧೆ ವಿಜೇತರಿಗೆ ಬಹುಮಾನ ವಿತರಣೆ

ವಿಜಯಪುರ: ನಗರದ ಬಿ.ಎಲ್.ಡಿ.ಇ ಸಂಸ್ಥೆಯ ಎ.ಎಸ್.ಪಿ. ಕಾಮರ್ಸ್ ಕಾಲೇಜಿನ ಬಿಬಿಎ ವಿಭಾಗ ಪಿಯುಸಿ ವಿದ್ಯಾರ್ಥಿಗಳಿಗೆ ಆಯೋಜಿದ್ದ ಜಿಲ್ಲಾ ಮಟ್ಟದ ಮಂಚ್- ಮಚ್ಚಾ ವೃತ್ತಿಪರ ಸ್ಪರ್ಧೆಯಲ್ಲಿ ಶ್ರೀ ಬಿ. ಎಂ. ಪಾಟೀಲ ಪಿಯು ಕಾಲೇಜಿನ ವಿಪ್ರೊ ತಂಡ ಸಮಗ್ರ ಚಾಂಪಿಯನ್ ಆಗಿ ಹೊರ ಹೊಮ್ಮಿದೆ. ಬಿ.ಎಲ್.ಡಿ.ಇ ಸಂಸ್ಥೆಯ ಹೊಸ ಆವರಣದಲ್ಲಿರುವ ಬಿಬಿಎ ಕಾಲೇಜಿನಲ್ಲಿ ನಡೆದ ಈ ವೃತ್ತಿಪರ ಸ್ಪರ್ಧೆಯಲ್ಲಿ ರ್ಯಾಂಪ್ ವಾಕ್, ಟೀಮ್ ಬಿಲ್ಡಿಂಗ್, ರಸಪ್ರಶ್ನೆ, ಅಡುಗೆ, ಛಾಯಾಚಿತ್ರ ಸ್ಪರ್ಧೆಗಳು ನಡೆದವು.  ಜಿಲ್ಲೆಯ ನಾನಾ ಭಾಗಗಳಿಂದ 29 ಪಿಯು […]

ಯುರೊ ಕಿಡ್ಸ್ ಪ್ರೀ ಸ್ಕೂಲ್ ವತಿಯಿಂದ ಮಕ್ಕಳು, ಪೋಷಕರಿಗೆ ವಾರ್ಷಿಕ ಕ್ರೀಡಾಕೂಟ

ವಿಜಯಪುರ: ನಗರದ ಘೇವರಚಂದ ಕಾಲನಿಯಲ್ಲಿರುವ ಯುರೋ ಕಿಡ್ಸ್ ಪ್ರೀ ಸ್ಕೂಲಿನ ಮಕ್ಕಳು ಮತ್ತು ಪೋಷಕರಿಗಾಗಿ ವಾರ್ಷಿಕ ಕ್ರೀಡಾಕೂಟ ನಡೆಯಿತು. ಶ್ರೀ ಶಿವಾಜಿ ಕೋ-ಆಪ್. ಬ್ಯಾಂಕಿನ ಪ್ರಧಾನ ವ್ಯವಸ್ಥಾಪಕ ಸಂಜಯ ವಿ. ಜಾಧವ ಕ್ರೀಡಾಕೂಟ ಉದ್ಘಾಟಿಸಿದರು ಬಳಿಕ ಮಾತನಾಡಿದ ಅವರು, ಶಾಲೆಯಲ್ಲಿ ಮಕ್ಕಳಿಗೆ ವಿದ್ಯಾಭ್ಯಾಸದ ಜೊತೆಯಲ್ಲಿ ಆರೋಗ್ಯದ ದೃಷ್ಟಿಯಿಂದ ಕ್ರೀಡಾ ಚಟುವಟಿಕೆಗಳಲ್ಲಿ ಭಾಗವಹಿಸುವುದು ತುಂಬಾ ಮುಖ್ಯವಾಗಿದೆ.  ಪೋಷಕರು ಮತ್ತು ಶಾಲಾ ಶಿಕ್ಷಕರು ಮಕ್ಕಳಿಗೆ ವಿದ್ಯೆಯ ಜೊತೆಯಲ್ಲಿ ಕ್ರೀಡಾಕೂಟಗಳಲ್ಲಿ ಭಾಗವಹಿಸಲು ಪ್ರೋತ್ಸಾಹಿಸಬೇಕು ಎಂದು ಹೇಳಿದರು. ಈ ಸಂದರ್ಭದಲ್ಲಿ ಶಾಲೆಯ ಮಕ್ಕಳು […]

ರಾತ್ರಿಯಿಡಿ ಡ್ಯೂಟಿ- ನಸುಕಿನ ಜಾವ 21 ಕಿ. ಮೀ. ಓಟದಲ್ಲಿ ಪಾಲ್ಗೊಂಡ ಡಿಆರ್ ಪೊಲೀಸ್ ಪೇದೆ ಭೀಮಾಶಂಕರ ಮಾಡಗ್ಯಾಳ- ಇವರ ಕ್ರೀಡಾಸ್ಪೂರ್ತಿ ಇತರರಿಗೆ ಮಾದರಿ

ವಿಜಯಪುರ: ರಾತ್ರಿಯಿಡಿ ಕರ್ತವ್ಯ ನಿರ್ವಹಿಸುವ ಜೊತೆಗೆ ನಸುಕಿನ ಜಾವ ನಡೆದ ವೃಕ್ಷೊಥಾನ್ ಹೆರಿಟೇಜ್ ರನ್-2023ರ 21 ಕಿ. ಮೀ. ಓಟದಲ್ಲಿ ಪಾಲ್ಗೋಂಡ ಜಿಲ್ಲಾ ಮೀಸಲು ಪೊಲೀಸ್ ಪಡೆಯ ಪೇದೆಯೊಬ್ಬರು ಕ್ರೀಡಾಭಿಮಾನ ಮೆರೆದಿದ್ದಾರೆ. ಹಳಗುಣಕಿ ಗ್ರಾಮದ ಮತ್ತು ವಿಜಯಪುರ ಮೀಸಲು ಪಡೆ ಪೊಲೀಸ್ ಪೇದೆಯಾಗಿರುವ ಭೀಮಾಶಂಕರ ಮಾಡಗ್ಯಾಳ(38) ಡಿಸೆಂಬರ್ 23ರಂದ ರಾತ್ರಿಯಿಡೀ ಕರ್ತವ್ಯ ನಿರ್ವಹಿಸಿದ್ದರು. ಅಲ್ಲದೇ, ಮರುದಿನ ಡಿಸೆಂಬರ್ 24 ರಂದು ರವಿವಾರ ಬೆಳಿಗ್ಗೆ 6 ಗಂಟೆಗೆ ಪ್ರಾರಂಭವಾದ 21 ಕಿ. ಮೀ. ಮ್ಯಾರಾಥಾನ್ ಓಟದಲ್ಲಿ ಪಾಲ್ಗೋಂಡಿದ್ದಾರೆ. ಅಷ್ಟೇ […]

ವೃಕ್ಷತ್ಥಾನ ಹೆರಿಟೇಜ್ ರನ್-2023: ನಾನಾ ವಿಭಾಗಗಳಲ್ಲಿ 60ಕ್ಕೂ ಹೆಚ್ಚು ವಿಜೇತರಿಗೆ ಪ್ರಶಸ್ತಿ ಪ್ರಧಾನ

ವಿಜಯಪುರ: ಪರಿಸರ, ಪ್ರಾಚೀನ ಸ್ಮಾರಕಗಳ ಸಂರಕ್ಷಣೆಗೆ ಆಯೋಜಿಸಿದ ಹೆರಿಟೇಜ್ ರನ್-2023 ಅಂಗವಾಗಿ ನಡೆದ ನಾನಾ ವಿಭಾಗಗಳ ಓಟಗಳಲ್ಲಿ ಖ್ಯಾತನಾಮರು ಪಾಲ್ಗೊಂಡು ಗಮನ ಸೆಳೆದರು.  ಈ ಸಂದರ್ಭದಲ್ಲಿ ನಾನಾ ವಿಭಾಗಗಳಲ್ಲಿ ಗೆಲುವು ಸಾಧಿಸಿದ ಸುಮಾರು 60ಕ್ಕೂ ಹೆಚ್ಚು ಜನರಿಗೆ ಪ್ರಶಸ್ತಿ ಪ್ರಧಾನ ಮಾಡಲಾಯಿತು.  ಈ ಸಂದರ್ಭದಲ್ಲಿ   ಜಿಲ್ಲಾಧಿಕಾರಿ ಟಿ.ಭೂಬಾಲನ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಋಷಿಕೇಶ ಸೊನಾವಣೆÉ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರಾಹುಲ್ ಶಿಂಧೆ, ಹಿರಿಯ ಐಎಎಸ್ ಅಧಿಕಾರಿ ಅಶೋಕ ದಳವಾಯಿ, ಎನ್ ಟಿಪಿಸಿಯ ಮುಖ್ಯಸ್ಥರಾದ ವಿ.ಕೆ ಪಾಂಡೆ,ಮುಖ್ಯ […]