ತಿಕೋಟಾ ನರ್ಸಿಂಗ್ ಕಾಲೇಜಿನ ಇಬ್ಬರು ವಿದ್ಯಾರ್ಥಿಗಳು ರಾಜೀವ ಗಾಂಧಿ ವಿವಿ ಕಬಡ್ಡಿ ತಂಡಕ್ಕೆ ಆಯ್ಕೆ

ವಿಜಯಪುರ: ಬಿ.ಎಲ್.ಡಿ.ಇ ಸಂಸ್ಥೆಯ ತಿಕೋಟಾ ನರ್ಸಿಂಗ್ ಕಾಲೇಜಿನ ಬಿ.ಎಸ್ಸಿ ನರ್ಸಂಗ್ 2ನೇ ಸೆಮಿಸ್ಟರ್ ವಿದ್ಯಾರ್ಥಿಗಳಾದ ಕುಮಾರ ಸಾನ್ವಿ ಮತ್ತು ಐಶ್ವರ್ಯ ಪಾರೆ ಅವರು ರಾಜೀವ ಗಾಂಧಿ ಆರೋಗ್ಯ ವಿಜ್ಞಾನ ವಿಶ್ವವಿದ್ಯಾಲಯದ ಕಬಡ್ಡಿ ತಂಡಕ್ಕೆ ಆಯ್ಕೆಯಾಗುವ ಮೂಲಕ ಗಮನ ಸೆಳೆದಿದ್ದಾರೆ. ಅಲ್ಲದೇ, ಇದೇ ಕಾಲೇಜಿನ ದೈಹಿಕ ನಿರ್ದೇಶಕ ಭೀಮರಾವ ದೇಸಾಯಿ ನಿರ್ದೇಶಕರಾಗಿ ಆಯ್ಕೆಯಾಗಿದ್ದಾರೆ. ಈ ವಿದ್ಯಾರ್ಥಿಗಳು ಮತ್ತು ತರಬೇತುದಾರರು ಇನ್ನು ಮುಂದೆ ರಾಜೀವ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯವನ್ನು ಕಬಡ್ಡಿಯಲ್ಲಿ ಪ್ರತಿನಿಧಿಸಲಿದ್ದಾರೆ.   ಯುನಿವರ್ಸಿಟಿ ಬ್ಲ್ಯೂ ಆಗಿ ಆಯ್ಗೆಯಾದ […]

ಸೈಕ್ಲಿಂಗ್ ವೆಲೊಡ್ರೊಂ ಕಾಮಗಾರಿ ಶೀಘ್ರ ಪೂರ್ಣಗೊಳಿಸಿ- ಎನ್. ಮಂಜುನಾಥ ಪ್ರಸಾದ ಸೂಚನೆ

ವಿಜಯಪುರ: ನಗರದ ಹೊರವಲಯದ ಭೂತನಾಳ ಗ್ರಾಮದ ಹತ್ತಿರ ನಿರ್ಮಾಣವಾಗುತ್ತಿರುವ ಸೈಕ್ಲಿಂಗ್ ವೆಲೊಡ್ರೊಂ ಬಾಕಿ ಕಾಮಗಾರಿ ಒಂದು ತಿಂಗಳೊಳಗಾಗಿ ಪೂರ್ಣಗೊಳಿಸುವಂತೆ ಸಹಕಾರ ಇಲಾಖೆ ಹಾಗೂ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸರಕಾರದ ಪ್ರಧಾನ ಕಾರ್ಯದರ್ಶಿ ಎನ್. ಮಂಜುನಾಥ ಪ್ರಸಾದ್ ಅವರು ಸಂಬಂಧಿಸಿದ  ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಸೈಕ್ಲಿಂಗ್  ವೆಲೊಡ್ರೊಂ ಕಾಮಗಾರಿ ಸ್ಥಳಕ್ಕೆ ಭೇಟಿ ನೀಡಿ, ಕಾಮಗಾರಿಯನ್ನು ಪರಿಶೀಲಿಸಿ ಅಧಿಕಾರಿಗಳಿಗೆ ಸೂಚನೆ ನೀಡಿದರು.     ಈ ಕಾಮಗಾರಿಗೆ ಪೂರಕವಾಗಿ ಹೆಚ್ಚುವರಿ ಕಾಮಗಾರಿ  ಕೈಗೆತ್ತಿಕೊಳ್ಳಲು ಅವಶ್ಯವಿರುವ ಅನುದಾನ ಕೋರಿ ಸರಕಾರಕ್ಕೆ […]

ವಿಶ್ವಕಪ್ ಕ್ರಿಕೆಟ್ ಫೈನಲ್- ಪಂದ್ಯ ವೀಕ್ಷಣೆಗೆ ಬೃಹತ್ ಎಲ್ಇಡಿ ಪರದೆ ಅಳವಡಿಸಿದ ಶ್ರೀ ಚಿದಂಬರೇಶ್ವರ ಯುವಕ ಮಂಡಳಿ ಹುಡುಗರು

ವಿಜಯಪುರ: ವಿಶ್ವಕಪ್ ಕ್ರಿಕೆಟ್ ಪಂದ್ಯಾವಳಿಯ ಫೈನಲ್ ಪಂದ್ಯಕ್ಕೆ ಕೆಲವೇ ಗಂಟೆಗಳು ಬಾಕಿ ಉಳಿದಿದ್ದು, ಭಾರತ- ಆಸ್ಟ್ರೇಲಿಯಾ ಮ್ಯಾಚ್ ವೀಕ್ಷಣೆಗೆ ನಗರದ ಆಲಮಟ್ಟಿ ರಿಂಗ್ ರಸ್ತೆಯಲ್ಲಿರುವ ಶ್ರೀ ಚಿದಂಬರೇಶ್ವರ ನಗರದಲ್ಲಿ ಬೃಹತ್ ಎಲ್ಇಡಿ ಪರದೆ ಅಳವಡಿಸಲಾಗಿದೆ. ಭಾರತ ಮೂರನೇ ಬಾರಿಗೆ ವಿಶ್ವಕಪ್ ಗೆಲ್ಲಲಿ ಎಂದು ಶುಭ ಹಾರೈಸಿ ರವಿವಾರ ಬೆಳಿಗ್ಗೆ 930ಕ್ಕೆ ಶ್ರೀ ಚಿದಂಬರೇಶ್ವರ ದೇವಸ್ಥಾನದಲ್ಲಿ ಯುವ ಮುಖಂಡ ವಿಜಯ ಜೋಶಿ ಮತ್ತು ಸ್ನೇಹಿತರು ವಿಶೇಷ ಪೂಜೆ ಆಯೋಜಿಸಿದ್ದಾರೆ.  ಅಲ್ಲದೇ, ಮಧ್ಯಾಹ್ನ ಪಂದ್ಯ ವೀಕ್ಷಿಸಲು 6 ಅಡಿ ಎತ್ತರ […]

ಕೃಷ್ಣಾನಗರ ನಂದಿ ಶಾಲೆಯ ವಿದ್ಯಾರ್ಥಿಗಳ ಸಾಧನೆ- ಜಿಲ್ಲಾ ಮಟ್ಟದ ಕಬ್ಬಡ್ಡಿ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ

ವಿಜಯಪುರ: ಬಬಲೇಶ್ವರ ತಾಲೂಕಿನ ಕೃಷ್ಣಾನಗರದ ನಂದಿ ಸಹಕಾರಿ ಸಕ್ಕರೆ ಕಾರ್ಖಾನೆಯ ಆಶ್ರಯದಲ್ಲಿ ನಡೆಯುತ್ತಿರುವ ಬಿ. ಟಿ. ಪಾಟೀಲ ಮೆಮೋರಿಯಲ್ ನಂದಿ ಅಂತರರಾಷ್ಟ್ರೀಯ ವಸತಿ ಶಾಲೆಯ ವಿದ್ಯಾರ್ಥಿನಿಯರು ಇತ್ತೀಚೆಗೆ ಸಿಂದಗಿಯ ಲೊಯೋಲ ಸಿಬಿಎಸ್ಇ ಶಾಲೆಯಲ್ಲಿ ನಡೆದ ಅಂತರಶಾಲಾ ಕ್ರೀಡಾಕೂಟದಲ್ಲಿ ಕಬಡ್ಡಿಯಲ್ಲಿ ಪ್ರಥಮ ಸ್ಥಾನ ಪಡೆದು ಗಮನ ಸೆಳೆದಿದ್ದಾರೆ. ಈ ಕ್ರೀಡಾಕೂಟದಲ್ಲಿ ಒಟ್ಟು 13 ಸಿಬಿಎಸ್ಇ ಶಾಲೆಗಳ ವಿದ್ಯಾರ್ಥಿಗಳು ಭಾಗವಹಿಸಿದ್ದರು.  ಈ ಕಬಡ್ಡಿ ತಂಡದಲ್ಲಿರುವ ಮಧು ಕಂಕಾಳಿ, ಪೂರ್ವಿ ನಾಯಿಕ, ಕೃತಿಕಾ ಕೊರ್ತಿ, ಮಾಯಾ ಶೇಗುಣಶಿ, ಲಕ್ಷ್ಮಿ ಬರಗಿ, ತ್ರೀಕ್ಷಾ […]

ವೃಕ್ಷೋಥಾನ ಹೆರಿಟೇಜ್ ರನ್- ಹೆಚ್ಚಿನ ಸಂಖ್ಯೆಯಲ್ಲಿ ನೋಂದಣಿ ಮಾಡಿ ಯಶಸ್ವಿಗೆ ಕೈ ಜೋಡಿಸಿ- ಡಿಸಿ ಟಿ. ಭೂಬಾಲನ್ ಕರೆ

ವಿಜಯಪುರ: ಜಿಲ್ಲೆಯ ಐತಿಹಾಸಿಕ ಸ್ಮಾರಕಗಳ ರಕ್ಷಣೆಯೊಂದಿಗೆ ಪರಿಸರ ರಕ್ಷಣೆ ಕುರಿತು ಜಾಗೃತಿ ಮೂಡಿಸಲು ಡಿ.24ರಂದು ನಗರದ ಡಾ.ಬಿ.ಆರ್.ಅಂಬೇಡ್ಕರ್ ಕ್ರೀಡಾಂಗಣದಲ್ಲಿ ವೃಕ್ಷೋತ್ಥಾನ್ ಹೆರಿಟೇಜ್ ರನ್-2023 ಆಯೋಜಿಸಲಾಗಿದ್ದು, ಕಾಲೇಜಿನ ವಿದ್ಯಾರ್ಥಿಗಳು, ಬೋಧಕ ಹಾಗೂ ಬೋಧಕೇತರ ಸಿಬ್ಬಂದಿ ಹೆಚ್ಚಿನ ಸಂಖ್ಯೆಯಲ್ಲಿ ನೋಂದಾಯಿಸಿಕೊಳ್ಳುವ ಮೂಲಕ ಕಾರ್ಯಕ್ರಮ ಯಶಸ್ವಿಗೊಳಿಸುವಂತೆ ಜಿಲ್ಲಾಧಿಕಾರಿ ಟಿ.ಭೂಬಾಲನ್ ಅವರು ಮನವಿ ಮಾಡಿದ್ದಾರೆ. ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ವೃಕ್ಷೋಥಾನ್ ಹೆರಿಟೇಜ್ ರನ್- 2023ರ ಅಂಗವಾಗಿ ಜಿಲ್ಲೆಯ ನಾನಾ ಕಾಲೇಜುಗಳ ಪ್ರಾಂಶುಪಾಲರು, ದೈಹಿಕ ಶಿಕ್ಷಣ ನಿರ್ದೇಶಕರು, ಉಪನ್ಯಾಸಕರೊಂದಿಗೆ ನಡೆದ ಸಭೆಯ ಅಧ್ಯಕ್ಷತೆ ವಹಿಸಿ […]

ಪರಿಸರ, ಸ್ಮಾರಕಗಳ ಸಂರಕ್ಷಣೆಗಾಗಿ ವೃಕ್ಷೋತ್ಥಾನ್ ಹೆರಿಟೇಜ್ ರನ್- 2023 ಪೂರ್ವಸಿದ್ಧತೆ ಕುರಿತು ಕೋರ್ ಕಮಿಟಿ ಸಭೆ

ವಿಜಯಪುರ: ಪರಿಸರ ಸಂರಕ್ಷಣೆ ಮತ್ತು ಪ್ರಾಚೀನ ಸ್ಮಾರಕಗಳ ಸಂರಕ್ಷಣೆ ಉದ್ದೇಶದಿಂದ ಡಿಸೆಂಬರ್ 24 ರಂದು ನಗರದಲ್ಲಿ ಆಯೋಜಿಸಲಾಗಿರುವ ವೃಕ್ಷೋತ್ಥಾನ್ ಹೆರಿಟೇಜ್ ರನ್- 2023 ಪೂರ್ವ ಸಿದ್ಧತೆಗಳ ಕುರಿತು ಕೋರ್ ಕಮಿಟಿ ಸಭೆ ಶನಿವಾರ ನಡೆಯಿತು. ಡಾ. ಮಹಾಂತೇಶ ಬಿರಾದಾರ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಪಾಲ್ಗೋಂಡ ಕೋರ್ ಕಮಿಟಿಯ ನಾನಾ ಉಪಸಮಿತಿಗಳ ಪ್ರಮುಖರು, ಈವರೆಗೆ ಕೈಗೊಳ್ಳಲಾಗಿರುವ ಕ್ರಮಗಳ ಕುರಿತು ಮಾಹಿತಿ ನೀಡಿದರು. ರೂಟ್ ಕಮಿಟಿ ಉಸ್ತುವಾರಿ ಸೋಮಶೇಖರ ಸ್ವಾಮಿ ಮತ್ತು ಸಂತೋಷ ಅವರಸಂಗ ಮಾತನಾಡಿ, ಈ ಸ್ಪರ್ಧೆಯಲ್ಲಿ ಪಾಲ್ಗೋಳ್ಳಲಿರುವ […]

ಸೈನಿಕ ಶಾಲೆಯ ನಾನಾ ವಿಭಾಗದ ಟೇಬಲ್ ಟೆನ್ನಿಸ್ ಪಂದ್ಯಾವಳಿ ಸಮಾರೋಪ

ವಿಜಯಪುರ: ದೇಶದ ಪ್ರತಿಷ್ಠಿತ ಶಾಲೆಗಳಲ್ಲಿ ಒಂದಾದ ವಿಜಯಪುರ ಸೈನಿಕ ಶಾಲೆ ಒಳಾಂಗಣದಲ್ಲಿ ಶನಿವಾರ ನಡೆದ ಅಖಿಲ ಭಾರತ ಐ ಪಿ ಎಸ್ ಸಿ (U-12, U14, U17 ಹಾಗೂ U-19 ವರ್ಷದೊಳಗಿನ) ಬಾಲಕಿಯರ ಟೇಬಲ್ ಟೆನ್ನಿಸ್ ಪಂದ್ಯಾವಳಿ ಸಮಾರಂಭ ನಡೆಯಿತು. ಸೈನಿಕ ಶಾಲೆಯ ಪ್ರಾಂಶುಪಾಲರಾದ ಗ್ರೂಪ್ ಕ್ಯಾಪ್ಟನ್ ಪ್ರತಿಭಾ ಭಿಷ್ಟ ಮಾತನಾಡಿ, ನಮ್ಮ ಶಾಲೆ ವತಿಯಿಂದ ಅಖಿಲ ಭಾರತ ಐಪಿಎಸ್ ಸಿ (U-12, U14, U17 ಹಾಗೂ U-19 ವರ್ಷದೊಳಗಿನ) ಬಾಲಕಿಯರ ಟೇಬಲ್ ಟೆನ್ನಿಸ್ ಪಂದ್ಯಾವಳಿಗಳನ್ನು ಆಯೋಜಿಸಿದ್ದು […]

ಡಿ. 24 ರಂದು ವೃಕ್ಷೋತ್ಥಾನ ಹೆರಿಟೇಜ್ ರನ್-2023 ಆಯೋಜನೆ- ಲಾಂಛನ ಅನಾವಣ ಮಾಡಿದ ಸಚಿವ ಎಂ. ಬಿ. ಪಾಟೀಲ

ವಿಜಯಪುರ: ಬರದ ನಾಡಿನಲ್ಲಿ ಅರಣ್ಯ ಕ್ರಾಂತಿ ಮಾಡುವ ಉದ್ದೇಶದಿಂದ ಮತ್ತು ಬಸವ ನಾಡಿನ ಪಾರಂಪರಿಕ ತಾಣಗಳ ಬಗ್ಗೆ ಜಾಗೃತಿ ಮೂಡಿಸುವ ಸದುದ್ದೇಶ ಹೊಂದಿರುವ ಕೋಟಿ ವೃಕ್ಷ ಅಭಿಯಾನದ ಅಂಗವಾಗಿ ಆಯೋಜಿಸಲಾಗಿರುವ ವೃಕ್ಷೋತ್ಥಾನ್ ಹೆರಿಟೇಜ್ ರನ್- 2023ರ ಲಾಂಛನ ಬಿಡುಗಡೆ ಸಮಾರಂಭ ವಿಜಯಪುರ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆಯಿತು.  ಬೃಹತ್ ಮತ್ತು ಮಧ್ಯಮ ಕೈಗಾರಿಗೆ, ಮೂಲಸೌಲಭ್ಯ ಅಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಂ. ಬಿ. ಪಾಟೀಲ ಅವರು ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಲಾಂಛನ ಬಿಡುಗಡೆ ಮಾಡಿ ಮಾತನಾಡಿದರು. […]

ರಾಜ್ಯ, ರಾಷ್ಟ್ರಮಟ್ಟದ ಕ್ರೀಡಾಪಟುಗಳಿಗೆ ನೇಮಕಾತಿಯಲ್ಲಿ ಹೆಚ್ಚಿನ ಆದ್ಯತೆ ನೀಡಬೇಕು- ಬಿ. ಎಂ. ಕೋಕರೆ

ವಿಜಯಪುರ: ರಾಜ್ಯ ಮತ್ತು ರಾಷ್ಟ್ರ ಮಟ್ಟದಲ್ಲಿ ಉತ್ತಮ ಸಾಧನೆ ಮಾಡಿದ ಕ್ರೀಡಾಪಟುಗಳಿಗೆ ಸರಕಾರ ನೇಮಕಾತಿಯಲ್ಲಿ ಹೆಚ್ಚಿನ ಆದ್ಯತೆ ನೀಡಬೇಕು ಎಂದು ರಾಜ್ಯ ವ್ಹಾಲಿಬಾಲ್ ಸಂಸ್ಥೆಯ ಉಪಾಧ್ಯಕ್ಷ ಬಿ. ಎಂ. ಕೋಕರೆ ಆಗ್ರಹಿಸಿದ್ದಾರೆ. ವಿಜಯಪುರ ನಗರದ ಬಿ.ಎಲ್.ಡಿ.ಇ ಸಂಸ್ಥೆಯ ಶ್ರೀ ಸಂಗನಬಸವ ಮಹಾಸ್ವಾಮೀಜಿ ಔಷಧಿಯ ಮಹಾವಿದ್ಯಾಲಯ ಮತ್ತು ಸಂಶೋಧನೆ ಕೇಂದ್ರದ ಆಶ್ರಯದಲ್ಲಿ ಬುಧವಾರ ಪ್ರಾರಂಭವಾದ ರಾಜೀವ ಗಾಂಧಿ ಆರೋಗ್ಯ ವಿಜ್ಞಾನ ವಿಶ್ವವಿದ್ಯಾಲಯದ ಕಲಬುರಗಿ ವಲಯ ಪುರುಷರ ಹಾಗೂ ಮಹಿಳೆಯರ ವಿಭಾಗದ ವ್ಹಾಲಿಬಾಲ್ ಪಂದ್ಯಾವಳಿ ಉದ್ಘಾಟಿಸಿ ಅವರು ಮಾತನಾಡಿದರು. ವಿಜಯಪುರ […]

ಕ್ರೀಡಾಸಕ್ತಿ ಬೆಳೆಸಿಕೊಳ್ಳಲು ಯುವಕರಿಗೆ ಅಪರ ಜಿಲ್ಲಾಧಿಕಾರಿ ಮಹಾದೇವ ಮುರಗಿ ಕರೆ

ವಿಜಯಪುರ: ಕ್ರೀಡಾ ಚಟುವಟಿಕೆಗಳಲ್ಲಿ ಪಾಲ್ಗೊಳ್ಳುವುದರಿಂದ ದೈಹಿಕವಾಗಿ ಗಟ್ಟಿಗೊಳ್ಳುವುದರೊಂದಿಗೆ ಮಾನಸಿಕ ಸದೃಢತೆ ಹೊಂದಲು ಯುವಕರು ಕ್ರೀಡಾಸಕ್ತಿ ಬೆಳೆಸಿಕೊಳ್ಳಬೇಕು ಎಂದು ಅಪರ ಜಿಲ್ಲಾಧಿಕಾರಿ ಮಹಾದೇವ ಮುರಗಿ ಹೇಳಿದರು. ನಗರದ ಡಾ. ಬಿ. ಆರ್. ಅಂಬೇಡ್ಕರ ಕ್ರೀಡಾಂಗಣದಲ್ಲಿ ನಡೆದ ಜಿಲ್ಲಾ ಮಟ್ಟದ ದಸರಾ ಕ್ರೀಡಾಕೂಟ ಉದ್ಘಾಟಿಸಿ ಅವರು ಮಾತನಾಡಿದರು. ಜಿಲ್ಲೆಯ 13 ತಾಲೂಕುಗಳಲ್ಲಿ ವಿಜೇತರಾದ ಕ್ರೀಡಾಪಟುಗಳು ಜಿಲ್ಲಾಮಟ್ಟದ ದಸರಾ ಕ್ರೀಡಾಕೂಟದಲ್ಲಿ ಭಾಗವಹಿಸಲು ಅರ್ಹತೆಯನ್ನು ಹೊಂದಿದ್ದು, ಕ್ರೀಡಾ ನಿಯಮಗಳಿಗೆ ಬದ್ಧರಾಗಿ ಜಿಲ್ಲಾಮಟ್ಟದ ಕ್ರೀಡಾಕೂಟದಲ್ಲಿ ಭಾಗವಹಿಸಿ ಜಿಲ್ಲೆಗೆ ಕೀರ್ತಿ ತರಬೇಕೆಂದು ಕರೆ ನೀಡಿದರು. ಕ್ರೀಡೆ […]