ಹಿರಿಯ ವಯಸ್ಸಿನಲ್ಲಿಯೂ ಕಬ್ಬಿಣದ ಗುಂಡೆಸೆತ- ನಾನು ವೇಟ್ ಲಿಫ್ಟರ್ ಆಗಿದ್ದೆ- ಕ್ವಿಂಟಲ್ ಜೋಳ ಎತ್ತುತ್ತಿದ್ದೆ ಎಂದ ಸಂಸದ ರಮೇಶ ಜಿಗಜಿಣಗಿ
ವಿಜಯಪುರ: ಕ್ರೀಡಾಸ್ಪೂರ್ತಿಯೊಂದಿದ್ದರೆ ಸಾಕು. ಅದರಲ್ಲಿ ಪಾಲ್ಗೋಳ್ಳಲು ಮನಸ್ಸು ಹಾತೊರೆಯುತ್ತಿರುತ್ತದೆ. ಇದಕ್ಕೆ ಸಾಕ್ಷಿ ವಿಜಯಪುರ ಬಿಜೆಪಿ ಸಂಸದ ರಮೇಶ ಜಿಗಜಿಣಗಿ. ವಿಜಯಪುರ ನಗರದಲ್ಲಿರುವ ಡಾ. ಬಿ. ಆರ್. ಅಂಬೇಡ್ಕರ್ ಜಿಲ್ಲಾ ಕ್ರೀಡಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘದ ಜಿಲ್ಲಾ ಘಟಕದ ಸಂಯುಕ್ತ ಆಶ್ರಯದಲ್ಲಿ ಆರಂಭವಾದ ಜಿಲ್ಲಾ ಮಟ್ಟದ ಸರಕಾರಿ ನೌಕರರ ಮೂರು ದಿನಗಳ ಕ್ರೀಡಾಕೂಟ ಹಾಗೂ ಸಾಂಸ್ಕೃತಿಕ ಸ್ಪರ್ಧೆಗಳ ಕಾರ್ಯಕ್ರಮಕ್ಕೆ ಅವರು ಚಾಲನೆ ನೀಡಿದರು. […]
ಶಿಕ್ಷಣದ ಜೊತೆಗೆ ಕ್ರೀಡೆಗೂ ಆದ್ಯತೆ ನೀಡಬೇಕು- ಹೆಸ್ಕಾಂ ವಿಜಿಲನ್ಸ್ ಎಸ್ಪಿ ಚೆನ್ನಬಸವಣ್ಣ ಎಸ್. ಎಲ್.
ವಿಜಯಪುರ: ಶಿಕ್ಷಣದ ಜೊತೆಗೆ ಕ್ರೀಡೆಗೆ ಮೊದಲ ಆದ್ಯತೆ ನೀಡುವಂತಾಗಬೇಕು ಎಂದು ಹೆಸ್ಕಾಂ ವಿಜಿಲನ್ಸ್ ಎಸ್ಪಿ ಚೆನ್ನಬಸವಣ್ಣ ಎಸ್. ಎಲ್. ಹೇಳಿದ್ದಾರೆ. ವಿಜಯಪುರದಲ್ಲಿ ಆಕ್ಸಫರ್ಡ್ ಐಐಟಿ ಒಲಂಪಿಯಾಡ್ ಶಾಲೆಯ ವತಿಯಿಂದ ಡಾ. ಬಿ. ಆರ್. ಅಂಬೇಡ್ಕರ್ ಜಿಲ್ಲಾ ಕ್ರೀಡಾಂಗಣದಲ್ಲಿ ಆಯೋಜಿಸಲಾಗಿದ್ದ ವಾರ್ಷಿಕ ಕ್ರೀಡಾಕೂಟ ಉದ್ಘಾಟಿಸಿ ಅವರು ಮಾತನಾಡಿದರು. ಓರ್ವ ವ್ಯಕ್ತಿಯ ಸರ್ವಾಂಗೀಣ ಮತ್ತು ಸಮರ್ಥ ವ್ಯಕ್ತಿತ್ವ ರೂಪಗೊಳ್ಳಬೇಕಾದರೆ ಕ್ರೀಡೆಯ ಪಾತ್ರ ಅನನ್ಯವಾಗಿದೆ. ಆಕ್ಸಫರ್ಡ್ ಶಾಲೆಯ ಮಕ್ಕಳು ರಾಷ್ಟ್ರ ಮತ್ತು ಅಂತಾರಾಷ್ಟ್ರೀಯ ಕ್ರೀಡೆಗಳಲ್ಲಿ ಪ್ರತಿನಿಧಿಸುವಂತಾಗಲಿ. ಭಾರತ ಜಗತ್ತಿನ ಬಲಿಷ್ಟ ಕ್ರೀಡಾಪಟುಗಳನ್ನು […]
ಬಸವನಾಡಿನ ಬಾಲಕಿಯರು 15 ವರ್ಷದೊಳಗಿನ ಮಹಿಳೆಯರ ಏಕದಿನ ಕರ್ನಾಟಕ ಕ್ರಿಕೆಟ್ ತಂಡಕ್ಕೆ ಆಯ್ಕೆ
ವಿಜಯಪುರ: ಬಸವ ನಾಡಿನ ಬಾಲಕಿಯರಾದ ಪ್ರಿಯಾ ಎಸ್. ಚವ್ಹಾಣ ಮತ್ರು ಶ್ರೇಯಾ ಎಸ್ ಚವ್ಹಾಣ ರಾಜ್ಯ 15 ವರ್ಷದೊಳಗಿನವರ ಮಹಿಳಾ ಏಕದಿನ ಕ್ರಿಕೆಟ್ ತಂಡಕ್ಕೆ ಆಯ್ಕೆಯಾಗುವ ಮೂಲಕ ಗಮನ ಸೆಳೆದಿದ್ದಾರೆ. ಬಿಸಿಸಿಐ ಇತ್ತೀಚೆಗೆ ನಡೆಸಿದ ಆಯ್ಕೆ ಪ್ರಕ್ರಿಯೆಯಲ್ಲಿ ವಿಜಯಪುರ ನಗರದ ಈ ಇಬ್ಬರು ವಿದ್ಯಾರ್ಥಿನಿಯರು ಆಯ್ಕೆಯಾಗುವ ಮೂಲಕ ಬಸವನಾಡಿನ ಕೀರ್ತಿಯನ್ನು ಹೆಚ್ಚಿಸಿದ್ದಾರೆ. ಪ್ರಿಯಾ ಎಸ್. ಚವ್ಹಾಣ ವಿಜಯಪುರ ನಗರದ ಸರಕಾರಿ ಶಾಲೆ ಸಂಖ್ಯೆ 8ರಲ್ಲಿ ಏಳನೇ ತರಗತಿಯಲ್ಲಿ ಓದುತ್ತಿದ್ದು, ಇವರ ತಂದೆ ಬಸ್ ಕಂಡಕ್ಟರ್ ಆಗಿ ಕೆಲಸ […]
ವಿದ್ಯಾರ್ಥಿಗಳು ಓದಿನ ಜೊತೆಗೆ ಕ್ರೀಡೆಗೂ ಮಹತ್ವ ನೀಡಬೇಕು- ಡಾ. ಜಾವೀದ ಜಮಾದಾರ
ವಿಜಯಪುರ: ವಿದ್ಯಾರ್ಥಿಗಳು ಮಾನಸಿಕ ಮತ್ತು ದೈಹಿಕವಾಗಿ ಸದೃಢರಾಗಲು ಕ್ರೀಡೆಗಳು ಅಗತ್ಯವಾಗಿವೆ ಎಂದು ರಾಷ್ಟ್ರೀಯ ಯುವ ಪ್ರಶಸ್ತಿ ಪುರಸ್ಕೃತ ಡಾ. ಜಾವೀದ ಜಮಾದಾರ ಹೇಳಿದ್ದಾರೆ. ವಿಜಯಪುರ ನಗರದ ಪ್ರತಿಷ್ಠಿತ ಛತ್ರಪತಿ ಶಿವಾಜಿ ಮಹಾರಾಜರ ಎಜ್ಯುಕೇಷನ್ ಸೊಸೈಟಿಯ ರವೀಂದ್ರನಾಥ ಠಾಗೋರ್ ಶಾಲಾ ಕಾಲೇಜಿನ ವಾರ್ಷಿಕ ಕ್ರೀಡಾ ದಿನಾಚರಣೆ ಉದ್ಘಾಟಿಸಿ ಅವರು ಮಾತನಾಡಿದರು. ಕ್ರೀಡೆಗಳಲ್ಲಿ ಭಾಗವಹಿಸದ ಕಾರಣ ಮಕ್ಕಳ ದೈಹಿಕ ಬೆಳವಣಿಗೆ ಕುಂಠಿತವಾಗುತ್ತಿದೆ. ಈ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳು ಕ್ರೀಡೆಗಳಲ್ಲಿ ಭಾಗವಹಿಸಿ ಮೂಲಕ ಹೆಚ್ಚಿನ ಸಾಧನೆ ಮಾಡಿ ಅಂತರರಾಷ್ಟ್ರೀಯ ಮಟ್ಟದ ಕ್ರೀಡೆ ಗಳಲ್ಲಿ […]
ಶೈಕ್ಷಣಿಕ, ಕ್ರೀಡಾ ಚಟುವಟಿಕೆಗಳನ್ನು ಸಮವಾಗಿ ನಿಭಾಯಿಸಿ ವೃತ್ತಿ ಜೀವನ ರೂಪಿಸಿಕೊಳ್ಳಬೇಕು- ಅಂತಾರಾಷ್ಟ್ರೀಯ ಕ್ರೀಡಾಪಟು ಭಾರತಿ ಬಿ. ಎಲ್
ವಿಜಯಪುರ: ಶೈಕ್ಷಣಿಕ ಚಟುವಟಿಕೆಗಳು ಮತ್ತು ಕ್ರೀಡಾ ಚಟುವಟಿಕೆಗಳನ್ನು ಸಮ ಸಮವಾಗಿ ನಿಭಾಯಿಸುವ ಮೂಲಕ ವೃತ್ತಿ ಬದುಕನ್ನು ರೂಪಿಸಿಕೊಳ್ಳಬೇಕು ಎಂದು ಕರ್ನಾಟಕ ಅಥ್ಲೇಟಿಕ್ಸ್ ಸಂಸ್ಥೆಯ ಉಪಾಧ್ಯಕ್ಷೆ ಹಾಗೂ ಅಂತಾರಾಷ್ಟ್ರೀಯ ಕ್ರೀಡಾಪಟು ಭಾರತಿ ಬಿ. ಎಲ್ ಸಲಹೆ ನೀಡಿದರು. ವಿಜಯಪುರ ಜಿಲ್ಲೆಯ ತೊರವಿ ಬಳಿ ಇರುವ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯದ ಕ್ರೀಡಾಂಗಣದಲ್ಲಿ 16ನೆಯ ಮಹಿಳಾ ಮಹಾವಿದ್ಯಾಲಯಗಳ ಅಥ್ಲೇಟಿಕ್ಸ್ ಕ್ರೀಡಾಕೂಟ- 2022 ಉದ್ಘಾಟಿಸಿ ಅವರು ಮಾತನಾಡಿದರು. ಕ್ರೀಡಾಪಟುಗಳು ಕೇವಲ ಕ್ರೀಡಾ ಸಾಧನೆಯಲ್ಲಿಯೇ ಮುಳುಗಿ ಶಿಕ್ಷಣ ನಿರ್ಲಕ್ಷಿಸುವುದು ಸರಿಯಲ್ಲ. ಎರಡರಲ್ಲಿಯೂ […]
Annual Sports: ಶಾಂತಿನಿಕೇತನ ಶಿಕ್ಷಣ ಸಂಸ್ಥೆಯಲ್ಲಿ 22ನೇ ಶಾಲಾ ವಾರ್ಷಿಕ ಕ್ರೀಡಾಕೂಟ
ವಿಜಯಪುರ: ದೈಹಿಕವಾಗಿ ಸದೃಢರಾಗಿದ್ದಾಗ ಮಾತ್ರ ಸಾಧನೆ ಮಾಡಲು ಸಾಧ್ಯ ಎಂದು ವಿಜಯಪುರ ಉಪವಿಭಾಗಾಧಿಕಾರಿ ಕ್ಯಾ. ಮಹೇಶ ಮಾಲಗಿತ್ತಿ ಹೇಳಿದ್ದಾರೆ. ನಗರದ ಪ್ರತಿಷ್ಠಿತ ಶಾಂತಿನಿಕೇತನ ಶಿಕ್ಷಣ ಸಂಸ್ಥೆಯಲ್ಲಿ ನಡೆದ 22ನೇ ಶಾಲಾ ವಾರ್ಷಿಕ ಕ್ರೀಡಾಕೂಟಕ್ಕೆ ಚಾಲನೆ ನೀಡಿ ಅವರು ಮಾತನಾಡಿದ ಅವರು, ಅದಕ್ಕಾಗಿ ವಿದ್ಯಾರ್ಥಿಗಳು ಹೆಚ್ಚಾ ಕ್ರೀಡೆಗಳಲ್ಲಿ ಭಾಗವಹಿಸಬೇಕು. ಯಾವುದಾದರು ಒಂದು ಕ್ರೀಡೆಯಲ್ಲಿ ತೊಡಗಿಕೊಂಡಾಗ ಮಾನಸಿಕ ಮತ್ತು ದೈಹಿಕ ಸ್ವಾಸ್ಥ್ಯ ಬರುತ್ತದೆ. ಕ್ರೀಡೆ ವ್ಯಕ್ತಿತ್ವ ರೂಪಿಸಿಕೊಳ್ಳಲು ಸಹಾಯ ಮಾಡುತ್ತದೆ ಎಂದು ಹೇಳಿದರು. ಸನ್ಮಾನ ಸ್ವೀಕರಿಸಿ ಮಾತನಾಡಿದ 19 ವರ್ಷದೊಳಗಿನ […]
Wrestling Championship: ಶಿಕ್ಷಕರ ತವರಿನಲ್ಲಿ ಗಮನ ಸೆಳೆದ ವಿದ್ಯಾರ್ಥಿಗಳ ರಾಜ್ಯ ಮಟ್ಟದ ಕುಸ್ತಿ ಪಂದ್ಯಾವಳಿ- ಲಚ್ಯಾಣ ಗ್ರಾಮಸ್ಥರ ಆತಿಥ್ಯಕ್ಕೆ ಮನಸೋತ ಕ್ರೀಡಾಳುಗಳು
ವಿಜಯಪುರ: ಶಾಲಾ ಮಟ್ಟದ ಅದರಲ್ಲೂ ರಾಜ್ಯ ಮಟ್ಟದ ಕ್ರೀಡಾಕೂಟಗಳು ಜಿಲ್ಲಾ ಕೇಂದ್ರಗಳಲ್ಲಿ ನಡೆಯುವುದು ಸಾಮಾನ್ಯ. ಅದರಲ್ಲೂ ಗ್ರಾಮೀಣ ಕ್ರೀಡೆಗಳೂ ಕೂಡ ನಗರ ಪ್ರದೇಶಗಳಲ್ಲಿ ನಡೆಯುತ್ತಿರುತ್ತವೆ. ಬೇರೆ ಜಿಲ್ಲೆಗಳಿಂದ ಬರುವ ವಿದ್ಯಾರ್ಥಿಗಳು ಮತ್ತು ಸಿಬ್ಬಂದಿಗಾಗಿ ಸಂಚಾರ ವ್ಯವಸ್ಥೆ ಉತ್ತಮವಾಗಿರುತ್ತದೆ ಎಂಬ ಕಾರಣಕ್ಕಾಗಿ ಬಹುತೇಕ ಜಿಲ್ಲೆಗಳ ಆಯೋಜಕರು ತಮ್ಮ ಜಿಲ್ಲಾ ಕೇಂದ್ರಗಳಲ್ಲಿಯೇ ಕ್ರೀಡಾಕೂಟಗಳನ್ನು ಸಂಘಟಿಸುವ ಮೂಲಕ ಗಮನ ಸೆಳೆಯುತ್ತಾರೆ. ಆದರೆ, ಇದಕ್ಕೆ ಅಪವಾದ ಎಂಬಂತೆ ಅದೂ ಕೂಡ ನಾಡಿಗೆ ಸಾವಿರಾರು ಶಿಕ್ಷಕರನ್ನು ನೀಡಿರುವ ಬಸವ ನಾಡು ವಿಜಯಪುರ ಜಿಲ್ಲೆಯ ಇಂಡಿ […]
Sports ADC: ಕ್ರೀಡೆ ಮತ್ತು ಸಾಂಸ್ಕೃತಿಕ ಚಟುವಟಿಕೆ ಮನುಷ್ಯ ಜೀವನದ ಅವಿಭಾಜ್ಯ ಅಂಗ- ಅಪರ ಡಿಸಿ ರಮೇಶ ಕಳಸದ
ವಿಜಯಪುರ: ಕ್ರೀಡಗಳಲ್ಲಿ ಭಾಗವಹಿಸುವುದರಿಂದ ಜೀವನದಲ್ಲಿ ಚೈತನ್ಯ ಹಾಗೂ ಲವಲವಿಕೆಯಿಂದ ಕರ್ತವ್ಯ ನಿರ್ವಹಿಸಲು ಸಾಧ್ಯ ಎಂದು ಅಪರ ಜಿಲ್ಲಾಧಿಕಾರಿ ರಮೇಶ ಕಳಸದ ಹೇಳಿದರು. ವಿಜಯಪುರ ನಗರದ ಡಾ. ಅಂಬೇಡ್ಕರ್ ಕ್ರೀಡಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಹಾಗೂ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ಹಾಗೂ ವಿಕಲಚೇತನರ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿರುವ ಸಂಘ ಸಂಸ್ಥೆಗಳ ಸಹಯೋಗದಲ್ಲಿ 2022-23ರ ಜಿಲ್ಲಾ ಮಟ್ಟದ ವಿಕಲಚೇತನರ ಕ್ರೀಡಾಕೂಟ ಉದ್ಘಾಟಿಸಿ ಅವರು ಮಾತನಾಡಿರು. ನಮ್ಮ ದೇಶದ ಕೀರ್ತಿ ತಂದ […]
Organisers Honour: ಒಗ್ಗಟ್ಟು, ಶ್ರದ್ಧೆ, ಸಮರ್ಪಣೆ ಮನೋಭಾವನೆ ಕಾರ್ಯಕ್ರಮಗಳ ಯಶಸ್ಸಿಗೆ ಕಾರಣ- ಆರ್. ಬಿ. ಕೊಟ್ನಾಳ
ವಿಜಯಪುರ, 21: ಒಗ್ಗಟ್ಟು, ಶ್ರದ್ಧೆ ಮತ್ತು ಸಮರ್ಪಣೆ ಮನೋಭಾವ ಪ್ರತಿಯೊಂದು ಕಾರ್ಯಕ್ರಮಗಳ ಯಶಸ್ಸಿಗೆ ಕಾರಣವಾಗುತ್ತವೆ ಎಂದು ಬಿ.ಎಲ್.ಡಿ.ಇ. ಸಂಸ್ಥೆಯ ಮುಖ್ಯ ಆಡಳಿತಾಧಿಕಾರಿ ಡಾ. ಆರ್.ಬಿ.ಕೊಟ್ನಾಳ ಹೇಳಿದ್ದಾರೆ. ನಗರದ ಎಸ್.ಎಸ್.ಪಿ.ಯು.ಕಾಲೇಜಿನಲ್ಲಿ ನಡೆದ ಖೋ ಖೋ ಕ್ರೀಡಾಕೂಟದ ಯಶಸ್ಸಿಗೆ ಕಾರಣರಾದ ತರಬೇತುದಾರರು, ಶಿಕ್ಷಕರು, ನಿರ್ಣಾಯಕರು ಮತ್ತು ನಾನಾ ಕಾಲೇಜುಗಳ ಬೋಧಕ ಹಾಗೂ ಬೋಧಕರ ಹೊರತಾದ ಸಿಬ್ಬಂದಿಗಳಿಗೆ ಅಭಿನಂದನೆ ಸಮಾರಂಭದಲ್ಲಿ ಅವರು ಮಾತನಾಡಿದರು. ನವೆಂಬರ 9 ಮತ್ತು 10ರಂದು ಬಿ.ಎಲ್.ಡಿ.ಇ. ಮೆಡಿಕಲ್ ಕಾಲೇಜಿನ ಕ್ರೀಡಾಂಗಣದಲ್ಲಿ ನಡೆದ ಪಿಯು ಕಾಲೇಜುಗಳ ಎರಡು ದಿನಗಳ […]
Corporator Help: ಪ್ರೇಮಾನಂದ ಬಿರಾದಾರ ಸಹಾಯ ಹಸ್ತ- ಥಾಯ್ಲೆಂಡ್ ಗೆ ತೆರಳಲು ಸಿದ್ಧಳಾದ ಸಿಸ್ಟೋಬಾಲ್ ಕ್ರೀಡಾಪಟು
ವಿಜಯಪುರ: ಪ್ರತಿಭೆಯಿದ್ದರೂ ಆರ್ಥಿಕ ಸಂಕಷ್ಟಕ್ಕೆ ಸಿಲುಕಿ ವಿದೇಶದಲ್ಲಿ ನಡೆಯಲಿರುವ ಕ್ರೀಡಾಕೂಟಕ್ಕೆ ತೆರಳಲು ಪರದಾಡುತ್ತಿದ್ದ ಯುವ ಆಟಗಾರ್ತಿಗೆ ಬಿಜೆಪಿ ಕಾರ್ಪೋರೇಟರ್ ಪ್ರೇಮಾನಂದ ಬಿರಾದಾರ ನೆರವಿನ ಹಸ್ತ ಚಾಚಿ ಮಾನವೀಯತೆ ಮೆರೆದಿದ್ದಾರೆ. ವಿಜಯಪುರ ನಗರದ ಎಸ್. ಆರ್. ಕಾಲನಿಯ ನಿವಾಸಿ ಅಕ್ಷತಾ ತಾರಾಪುರ ನಗರದ ನವಬಾಗ್ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಬಿ.ಎಸ್ಸಿ ಪದವಿ ಮುಗಿಸಿದ್ದಾರೆ. ಸಿಸ್ಟೋಬಾಲ್ ಆಟಗಾರ್ತಿಯಾಗಿರುವ ಈಕೆ ರಾಜ್ಯ ಮತ್ತು ರಾಷ್ಟ್ರೀಯ ಮಟ್ಟದಲ್ಲಿ ಉತ್ತಮ ಸಾಧನೆ ತೋರಿರುವ ಅಕ್ಷತಾ ತಾರಾಪುರ ಥಾಯ್ಲೆಂಡ್ ದೇಶದ ಬ್ಯಾಂಕಾಕಿನಲ್ಲಿ ಡಿ.1 ರಿಂದ […]