ಸಚಿವ ಈಶ್ವರಪ್ಪ ರಾಜಿನಾಮೆಗೆ ಆಗ್ರಹಿಸಿ ಗುಮ್ಮಟ ನಗರಿಯಲ್ಲಿ ಕಾಂಗ್ರೆಸ್ ಪ್ರತಿಭಟನೆ
ವಿಜಯಪುರ: ಸಚಿವ ಕೆ. ಎಸ್. ಈಶ್ವರಪ್ಪ ರಾಷ್ಟ್ರಧ್ವಜಕ್ಕೆ ಅವಮಾನ ಮಾಡಿದ್ದಾರೆ ಎಂದು ಆರೋಪಿಸಿ ಜಿಲ್ಲಾ ಕಾಂಗ್ರೆಸ್ ಸಮಿತಿ ವತಿಯಿಂದ ವಿಜಯಪುರ ನಗರದಲ್ಲಿ ಪ್ರತಿಭಟನೆ ನಡೆಸಲಾಯಿತು. ವಿಜಯಪುರ ನಗರ ಬ್ಲಾಕ್ ಕಾಂಗ್ರೆಸ್ ಸಮಿತಿ ಹಾಗೂ ಜಲನಗರ ಬ್ಲಾಕ್ ಕಾಂಗ್ರೆಸ್ ಸಮಿತಿಗಳ ವತಿಯಿಂದ ನಗರದ ಡಾ. ಬಿ..ಆರ್. ಅಂಬೇಡ್ಕರ ವೃತ್ತದಲ್ಲಿ ಪ್ರತಿಭಟನೆಯನ್ನು ಮಾಡಲಾಯಿತು. ಬಳಿಕ ಜಿಲ್ಲಾಧಿಕಾರಿಗಳ ಕಛೇರಿಯವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಪ್ರೊ. ರಾಜು ಆಲಗೂರ, ಸಚಿವ ಈಶ್ವರಪ್ಪ ರಾಷ್ಟ್ರಧ್ವಜದ ಕುರಿತು ಮಾತನಾಡಿದ್ದು […]