ಗ್ರಾಮೀಣ ಕರ್ನಾಟಕಕ್ಕೆ ಅರ್ಥಚೈತನ್ಯ ನೀಡುವ ಬಜೆಟ್- ಗೋವಿಂದ ಕಾರಜೋಳ
ಬೆಂಗಳೂರು: ಗ್ರಾಮೀಣ ಕರ್ನಾಟಕಕ್ಕೆ ಅರ್ಥಚೈತನ್ಯ ತುಂಬುವ ಗಟ್ಟಿ ಧ್ವನಿ ಈ ಮುಂಗಡ ಪತ್ರ ಎಂದು ನೀರಾವರಿ ಸಚಿವ ಗೋವಿಂದ ಕಾರಜೋಳ ಹೇಳಿದ್ದಾರೆ. ಸಿಎಂ ಬಸವರಾಜ ಬೊಮ್ಮಾಯಿ ಮಂಡಿಸಿರುವ ಬಜೆಟ್ ಕುರಿತು ಮಾಧ್ಯಮ ಪ್ರಕಟಣೆ ನೀಡಿರುವ ಅವರು, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಮಂಡಿಸಿದ ಇಂದಿನ ಮುಂಗಡ ಪತ್ರ ರಾಜ್ಯದ ಪ್ರತಿಯೊಬ್ಬ ನಾಗರೀಕನ ಆರ್ಥಿಕ ಅಭಿವೃದ್ಧಿಗೆ ಕೊಡುಗೆ ನೀಡುತ್ತದೆ ಎಂದು ಪ್ರತಿಕ್ರಿಯೆ ನೀಡಿದ್ದಾರೆ. ಗ್ರಾಮೀಣ ಕರ್ನಾಟಕದ ಉದ್ಯಮಗಳಾದ ಹೈನೋದ್ಯಮ, ಮತ್ಸ್ಯೋದ್ಯಮ ಮುಂತಾದ ಉದ್ಯಮಗಳ ಆರ್ಥಿಕ ಸಬಲೀಕರಣಕ್ಕೆ ಈ ಬಜೆಟ್ ನಾಂದಿ […]
ಮಾಳಿ-ಮಾಲಗಾರ ಅಭಿವೃದ್ಧಿ ಮಂಡಳಿ ಸ್ಥಾಪಿಸಿ ರೂ.100 ಕೋ. ಅನುದಾನ ಮೀಸಲಿಡಿ- ಶಾಸಕ ಯಶವಂತರಾಯಗೌಡ ಪಾಟೀಲ ಸಿಎಂ ಗೆ ಮನವಿ
ವಿಜಯಪುರ: ಬಜೆಟ್ ನಲ್ಲಿ ಮಾಳಿ-ಮಾಲಗಾರ ಅಭಿವೃದ್ಧಿ ಮಂಡಳಿ ಸ್ಥಾಪಿಸಿ ರೂ. 100 ಕೋ. ಹಣ ಮೀಸಲಿಡುವಂತೆ ಆಗ್ರಹಿಸಿ ವಿಜಯಪುರ ಜಿಲ್ಲೆಯ ಇಂಡಿ ಕಾಂಗ್ರೆಸ್ ಶಾಸಕ ಯಶವಂತರಾಯಗೌಡ ವಿ. ಪಾಟೀಲ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಮನವಿ ಮಾಡಿದ್ದಾರೆ. ಈ ಕುರಿತು ಪತ್ರವನ್ನು ಬರೆದಿರುವ ಅವರು, ರಾಜ್ಯದಲ್ಲಿ ಸುಮಾರು 25 ಲಕ್ಷಕ್ಕೂ ಹೆಚ್ಚು ಜನ ಮಾಳಿ-ಮಾಲಗಾರ ಸಮುದಾಯದವರಿದ್ದಾರೆ. ಈ ಸಮುದಾಯ ಕೃಷಿ ಮತ್ತು ತೋಟಗಾರಿಕೆಯಲ್ಲಿ ತೊಡಗಿದೆ. ಸಾಮಾಜಿಕ, ಶೈಕ್ಷಣಿಕ ಮತ್ತು ಆರ್ಥಿಕವಾಗಿ ಈ ಸಮಾಜ ಹಿಂದುಳಿದಿದೆ. ಈ ಹಿನ್ನೆಲೆಯಲ್ಲಿ […]