ಮಹಾನಗರಪಾಲಿಕೆ ವ್ಯಾಪ್ತಿಯಲ್ಲಿ ಉದ್ದಿಮೆದಾರರು ಪರವಾಣಿಗೆ ಪಡೆಯುವುದು ಕಡ್ಡಾಯ- ಪೌರಾಯುಕ್ತ ವಿಜಯ ಮೆಕ್ಕಳಕಿ
ವಿಜಯಪುರ: ಮಹಾನಗರ ಪಾಲಿಕೆಯ(Corporation) ವ್ಯಾಪ್ತಿಯಲ್ಲಿಯ(Limits) ಎಲ್ಲ ಉದ್ದಿಮೆದಾರರು(Businessmen) ಕರ್ನಾಟಕ(Karnataka) ಕಾರ್ಪೋರೇಷನ್ ಅಧಿನಿಯಮ-1976ರ ಸೆಕ್ಷನ್ 353ರ ಪ್ರಕಾರ ಉದ್ದಿಮೆ(Industry) ಪರವಾನಿಗೆಯನ್ನು(Licence) ಪಡೆಯುವುದು ಕಡ್ಡಾಯವಾಗಿರುತ್ತದೆ ಎಂದು ವಿಜಯಪುರ ಮಹಾನಗರ ಪಾಲಿಕೆ ಆಯುಕ್ತ ವಿಜಯ ಮೆಕ್ಕಳಕಿ ತಿಳಿಸಿದ್ದಾರೆ. ಪೌರಾಯುಕ್ತರು ಮಹಾನಗರಪಾಲಿಕೆಯ ಆರೋಗ್ಯ ವಿಭಾಗದ ಅಧಿಕಾರಿ ಮತ್ತು ಸಿಬ್ಬಂದಿಯಾದ ಎಸ್. ಎಸ್. ಸುರ್ಕಿ, ಅಸಿಸ್ಟಂಟ್ ಎಕ್ಸಿಕ್ಯೂಟಿವ್ ಎಂಜಿನಿಯರ್(ಪರಿಸರ) ಅಶೋಕಕುಮಾರ ಮತ್ತು ಇತರ ಅಧಿಕಾರಿಗಳೊಂದಿಗೆ ವಿಜಯಪುರ ನಗರದ ಶ್ರೀ ಲಾಲ್ ಬಹದ್ದೂರ್ ಶಾಸ್ತ್ರಿ ವಾಣಿಜ್ಯ ಸಂರ್ಕೀಣದಲ್ಲಿರುವ 150 ಮಳಿಗೆಗಳಿಗೆ ಭೇಟಿ ನೀಡಿ, ಉದ್ದಿಮೆ ಪರವಾನಿಗೆ […]
ಒಳಾಂಗಣ ಕ್ರೀಡಾಂಗಣ ಕಾಮಗಾರಿ ಪರಿಶೀಲಿಸಿದ ವಿಜಯಪುರ ಜಿಲ್ಲಾಧಿಕಾರಿ ಪಿ. ಸುನೀಲ ಕುಮಾರ
ವಿಜಯಪುರ: ವಿಜಯಪುರ ನಗರದ ಕನಕದಾಸ ಬಡಾವಣೆಯಲ್ಲಿ ನಿರ್ಮಿಸಲಾಗುತ್ತಿರುವ ಒಳಾಂಗಣ ಕ್ರೀಡಾಂಗಣದ ಕಾಮಗಾರಿಯನ್ನು ಜಿಲ್ಲಾಧಿಕಾರಿ ಪಿ. ಸುನೀಲಕುಮಾರ ಪರಿಶೀಲಿಸಿದರು. ಈ ಸಂದರ್ಭದಲ್ಲಿ ಮಹಾನಗರ ಪಾಲಿಕೆ ಆಯುಕ್ತ ವಿಜಯ ಮೆಕ್ಕಳಕಿ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕ ಎಸ್. ಜಿ. ಲೋಣಿ, ಲೋಕೋಪಯೋಗಿ ಇಲಾಖೆಯ ಎಕ್ಸಿಕ್ಯೂಟಿವ್ ಎಂಜಿನಿಯರ್ ಹಿರೇಗೌಡರ, ಅಸಿಸ್ಟಂಟ್ ಎಕ್ಸಿಕ್ಯೂಟಿವ್ ಎಂಜಿನಿಯರ್ ರಾಜು ಮುಜುಮದಾರ, ಅಸಿಸ್ಟಂಟ್ ಎಂಜಿನಿಯರ್ ರವಿ ಪವಾರ ಸೇರಿದಂತೆ ನಾನಾ ಅಧಿಕಾರಿಗಳು ಉಪಸ್ಥಿತರಿದ್ದರು.