ಜನಪದ ಕಲೆಗಳು ಜನರ ಜೀವನಾಡಿ-ಕೆಬಿಜೆಎನ್ಎಲ್ ವಿಶೇಷ ಜಿಲ್ಲಾಧಿಕಾರಿ ಸೋಮಲಿಂಗ ಗೆಣ್ಣೂರ

ವಿಜಯಪುರ: ಶ್ರಮ ಸಂಸ್ಕೃತಿಯಲ್ಲಿ ಬೆಳೆದು ಬಂದಿರುವ ಜಾನಪದ ಕಲೆಗಳು ಗ್ರಾಮೀಣ ಜನರ ಅನುಭವದ ಭಾವಬಿಂಬಗಳಾಗಿವೆ. ಹಳ್ಳಿಗರ ಬದುಕಿನೊಂದಿಗೆ ಬೆಸೆದುಕೊಂಡಿರುವ ಜನಪದ ಕಲೆಗಳು ಭಾರತದ ಸಂಸ್ಕೃತಿಯನ್ನು ಶ್ರೀಮಂತಗೊಳಿಸಿವೆ ಎಂದು ಕೃಷ್ಣಾ ಮೇಲ್ದಂಡೆ ಯೋಜನೆಯ ವಿಶೇಷ ಜಿಲ್ಲಾಧಿಕಾರಿ ಸೋಮಲಿಂಗ ಗೆಣ್ಣೂರ ಅಭಿಪ್ರಾಯಪಟ್ಟಿದ್ದಾರೆ.  ಕನ್ನಡ ಜಾನಪದ ಪರಿಷತ್ ವಿಜಯಪುರ ಜಿಲ್ಲಾ ಘಟಕ, ಪಡಗಾನೂರಿನ ಮಾತೋಶ್ರೀ ಸುಗಲಾಬಾಯಿ ಗೌಡ್ತಿ ಪಾಟೀಲ್ ಜಾನಪದ ಪ್ರತಿಷ್ಠಾನ ಹಾಗೂ ವಿಜಯಪುರ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಯೋಗದಲ್ಲಿ ವಿಜಯಪುರ ಜಿಲ್ಲೆಯ ಬಬಲೇಶ್ವರ ತಾಲೂಕಿನ ದೇವರಗೆಣ್ಣೂರು ಲಕ್ಷ್ಮೀದೇವಿ ಜಾತ್ರಾ […]