New DC: ಪಿ. ಸುನೀಲ ಕುಮಾರ ಬಾಗಲಕೋಟೆ ನೂತನ ಜಿಲ್ಲಾಧಿಕಾರಿಯಾಗಿ ಅಧಿಕಾರ ಸ್ವೀಕಾರ

ಬಾಗಲಕೋಟೆ: ಬಾಗಲಕೋಟೆ(Bagalakote) ನೂತನ(New) ಜಿಲ್ಲಾಧಿಕಾರಿಯಾಗಿ(Deputy Commissioner) 2011ರ ಐಎಎಸ್(IAS) ಬ್ಯಾಚಿನ(Batch) ಪಿ. ಸುನೀಲ ಕುಮಾರ ಅಧಿಕಾರ ಸ್ವೀಕರಿಸಿದ್ದಾರೆ. ಈವರೆಗೆ ಪ್ರಭಾರ ಜಿಲ್ಲಾಧಿಕಾರಿಯಾಗಿದ್ದ ಸಿಇಓ ಟಿ. ಭೂಬಾಲನ್ ಅವರಿಂದ ಪಿ. ಸುನೀಲ ಕುಮಾರ ಅಧಿಕಾರ ಸ್ವೀಕರಿಸಿದರು. ಪಿ. ಸುನೀಲ ಕುಮಾರ ಅವರು ಮೂಲತಃ ಆಂಧ್ರ ಪ್ರದೇಶ ರಾಜ್ಯದವರಾಗಿದ್ದು, ವಾರಂಗಲ್‍ನ ನ್ಯಾಷನಲ್ ಇಸ್ಟಿಟ್ಯೂಟ್ ಆಪ್ ಟೆಕ್ನಾಲಜಿ (ಎನ್‍ಐಟಿ) ಕಾಲೇಜಿನಲ್ಲಿ ಎಲೆಕ್ಟ್ರಾನಿಕ್ಸ್ ಮತ್ತು ಕಮ್ಯೂನಿಕೇಶನ್ ವಿಷಯದಲ್ಲಿ ಎಂಜಿನೀಯರಿಂಗ್ ಪದವಿ ಪಡೆದಿದ್ದಾರೆ. ಅಲ್ಲದೇ, ನಂತರ 2002 ರಿಂದ 2009 ವರೆಗೆ ಟಾಟಾ ಕನ್‍ಸಲ್ಟಂಟ್ […]

ಜಿಲ್ಲೆಯ ಅಭಿವೃದ್ಧಿಗೆ ಕೇಂದ್ರದಿಂದ ಸುಮಾರು ಒಂದು ರೂ. 1 ಲ. ಕೋ. ಅನುದಾನ ಬಂದಿದೆ- ಸಂಸದ ರಮೇಶ ಜಿಗಜಿಣಗಿ

ವಿಜಯಪುರ: ಕೇಂದ್ರ(Union) ಸರಕಾರದಿಂದ(Government) ವಿಜಯಪುರ ಜಿಲ್ಲೆಯಲ್ಲಿ ನಾನಾ ಯೋಜನೆಗಳಿಗೆ(Various Schemes) ಸುಮಾರು ಒಂದು ಲಕ್ಷ ಕೋಟಿ ರೂಪಾಯಿ(Rs. 1 lakn Crore) ಅನುದಾನ(Grant) ಬಂದಿದೆ ಎಂದು ವಿಜಯಪುರ ಬಿಜೆಪಿ ಸಂಸದ ರಮೇಶ ಜಿಗಜಿಣಗಿ ತಿಳಿಸಿದ್ದಾರೆ. ವಿಜಯಪುರ ನಗರದ ಕಂದಗಲ್ ಹನುಮಂತರಾಯ ರಂಗಮಂದಿರದಲ್ಲಿ ಜಿಲ್ಲಾಡಳಿತ, ನಗರಾಭಿವೃದ್ದಿ ಇಲಾಖೆ, ಕೌಶಲ್ಯಾಭಿವೃದ್ದಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ, ಮಹಾನಗರ ಪಾಲಿಕೆ ಪೌರ ಕಾರ್ಮಿಕರ ಗೃಹ ಭಾಗ್ಯ ಯೋಜನೆಯಡಿ ನಿರ್ಮಿಸಿದ ವಸತಿ ಸಮುಚ್ಛಯ ಕಟ್ಟಡ ಉದ್ಘಾಟನೆ ಸಮಾರಂಭದಲ್ಲಿ ಅವರು ಮಾತನಾಡಿದರು. ರೂ. 1560 […]

ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ಎಂ. ಬಿ. ಪಾಟೀಲ ಅವರಿಂದ ಗುರುವಾರ ಬಬಲೇಶ್ವರ ಮತಕ್ಷೇತ್ರದಲ್ಲಿ ನಾನಾ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ

ವಿಜಯಪುರ: ಕೆಪಿಸಿಸಿ(KPCC) ಪ್ರಚಾರ(Campaign) ಸಮಿತಿ(Committee) ಅಧ್ಯಕ್ಷ(Chairman) ಮತ್ತು ಬಬಲೇಶ್ವರ ಕಾಂಗ್ರೆಸ್ ಶಾಸಕ ಎಂ. ಬಿ. ಪಾಟೀಲ(MLA M B Patil) ಅವರು ಏ. 7 ರಂದು ಗುರುವಾರ ವಿಜಯಪುರ ಜಿಲ್ಲೆಯ ಬಬಲೇಶ್ವರ ಮತಕ್ಶೇತ್ರದಲ್ಲಿ ನಾನಾ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಲಿದ್ದಾರೆ.  ಬೆ.10ಕ್ಕೆ ಬಬಲೇಶ್ವರದಲ್ಲಿ ಶಾಸಕರ ಪ್ರದೇಶಾಭಿವೃದ್ಧಿ ಯೋಜನೆಯಡಿ ರೂ. 14 ಲಕ್ಷ ವೆಚ್ಚದ ಸುಸಜ್ಜಿತ ಆ್ಯಂಬುಲೇನ್ಸ್ ವಾಹನ ಸಾರ್ವಜನಿಕ ಸೇವೆಗೆ ನೀಡಲಿದ್ದಾರೆ.  ಬೆ. 11ಕ್ಕೆ ಅಗಸನಹಳ್ಳಿಯಲ್ಲಿ ಲೋಕೋಪಯೋಗಿ ಇಲಾಖೆಯಿಂದ ರೂ. 30.12 ಲಕ್ಷ ವೆಚ್ಚದಲ್ಲಿ ನಿರ್ಮಿಸಲಾಗುತ್ತಿರುವ  500 […]

ರಾಜ್ಯದಲ್ಲಿ 75 ಕೆರೆಕಟ್ಟೆಗಳನ್ನು ಅಭಿವೃದ್ಧಿಗೊಳಿಸಲು ಪ್ರಧಾನಿ ಸೂಚನೆ- ಸಿಎಂ ಬಸವರಾಜ ಬೊಮ್ಮಾಯಿ

ನವದೆಹಲಿ: ಪ್ರಧಾನ ಮಂತ್ರಿಗಳು(Prime Minister) ಎಲ್ಲರಿಗೂ ಒಂದೊಂದು ಟಾಸ್ಕ್(Task) ನೀಡಿದ್ದು ರಾಜ್ಯಗಳಲ್ಲಿ 75 ಕೆರೆಕಟ್ಟೆಗಳನ್ನು(Tanks) ಅಭಿವೃದ್ಧಿಗೊಳಿಸಲು(Development) ಸೂಚನೆ ನೀಡಿದ್ದಾರೆ. ಕೋಲಾರದಲ್ಲಿ(Kolar) ಕೆರೆಗೆಳ ಅಭಿವೃದ್ಧಿಗೆ ವಿಶೇಷ ಕಾರ್ಯಕ್ರಮ ಅವರ ನೇತೃತ್ವದಲ್ಲಿ ಆಗಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ನವದೆಹಲಿಯ ಕರ್ನಾಟಕ ಭವನದಲ್ಲಿ ಸುದ್ಧಿಗಾರರೊಂದಿಗೆ ಮಾಧ್ಯಮ ಪ್ರತಿನಿಧಿಗಳೊಂದಿಗೆ ಅವರು ಮಾತನಾಡಿದರು. ರಾಜ್ಯದ ಅಭಿವೃದ್ಧಿ ಯೋಜನೆಗಳಿಗೆ ಸಕಾರಾತ್ಮಕ ಸ್ಪಂದನೆ ಬಿಜೆಪಿ ಸಂಸ್ಥಾಪನೆ ದಿನಾಚರಣೆಯಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ಬಿಜೆಪಿಯ ಎಲ್ಲಾ ಪ್ರಮುಖರು ಹಾಗೂ ಬೂತ್ ಮಟ್ಟದ ಕಾರ್ಯಕರ್ತರನ್ನು ಉದ್ದೇಶಿಸಿ […]

ಬರಡೋಲ ಗ್ರಾಮದ ಪ್ರಗತಿಗೆ ಮುನ್ನುಡಿ ಬರೆದಿರುವೆ- ಜೆಡಿಎಸ್ ಶಾಸಕ ಡಾ. ದೇವಾನಂದ ಚವ್ಹಾಣ

ವಿಜಯಪುರ: ಬರಡೋಲ(Baradol) ಗ್ರಾಮದ ಪ್ರಗತಿಗೆ ಗ್ರಾಮಸ್ಥರ ಆಶೀರ್ವಾದದಿಂದ ಮುನ್ನುಡಿ ಬರೆದಿರುವೆ ಎಂದು ನಾಗಠಾಣ(ಮೀ) ಜೆಡಿಎಸ್(JDS) ಶಾಸಕ ಡಾ. ದೇವಾನಂದ ಚವ್ಹಾಣ(Dr. Devanand Chavan) ಹೇಳಿದ್ದಾರೆ. ವಿಜಯಪುರ(Vijayapura) ಜಿಲ್ಲೆಯ ಚಡಚಣ ತಾಲೂಕಿನ ಬರಡೋಲ ಗ್ರಾಮದಲ್ಲಿ ಕರ್ನಾಟಕ ಪಬ್ಲಿಕ್ ಶಾಲೆ(Public School) ಆವರಣದಲ್ಲಿ 2020-21 ನೇ ಆರ್ಥಿಕ ವರ್ಷದ ಕರ್ನಾಟಕ ಪಬ್ಲಿಕ್ ಶಾಲೆಗಳ ಮೂಲಭೂತ ಸೌಕರ್ಯ ಅಭಿವೃದ್ಧಿ ಯೋಜನೆಯಡಿ ಅಂದಾಜು ರೂ. 2 ಕೋ. ವೆಚ್ಚದಲ್ಲಿ ನೂತನ ಕೊಠಡಿಗಳ ನಿರ್ಮಾಣ ಸೇರಿದಂತೆ ನಾನಾ ಅಭಿವೃದ್ದಿ ಕಾಮಗಾರಿಗಳಿಗೆ ಚಾಲನೆ ನೀಡಿ ಅವರು […]

ಹರಿಹರದಲ್ಲಿ ತುಂಗಾ ಆರತಿ: ಉತ್ತಮ ಪ್ರವಾಸಿ, ಧಾರ್ಮಿಕ ಸ್ಥಳವಾಗಿ ಅಭಿವೃದ್ಧಿ- ಸಿಎಂ ಬಸವರಾಜ ಬೊಮ್ಮಾಯಿ

ದಾವಣಗೆರೆ: ಹರಿಹರ(Harohara) ಕ್ಷೇತ್ರದ ತುಂಗಭದ್ರಾ(Tunga Bhadra) ನದಿ ತಟದಲ್ಲಿ 108 ಯೋಗ ಮಂಟಪಗಳನ್ನು ನಿರ್ಮಿಸಿ ಉತ್ತರದಲ್ಲಿ ಗಂಗಾ ಆರತಿ(Gangs Station) ಮಾದರಿಯಲ್ಲಿ ದಕ್ಷಿಣದಲ್ಲಿ ತುಂಗಾ ಆರತಿಯನ್ನು ಆಯೋಜಿಸಲಾಗಿದೆ. ಮುಂಬರುವ ದಿನಗಳಲ್ಲಿ ಇದು ಉತ್ತಮ ಪ್ರವಾಸಿ ಹಾಗೂ ಧಾರ್ಮಿಕ ಸ್ಥಳವಾಗಿ ಅಭಿವೃದ್ಧಿಯಾಗಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ದಾವಣಗೆರೆ ಜಿಲ್ಲೆಯ ಹರಿಹರದಲ್ಲಿ ಮಾಧ್ಯಮದವರೊಂದಿಗೆ ಅವರು ಮಾತನಾಡುತ್ತಿದ್ದರು. ಶ್ರೀ ವಚನಾನಂದ ಜಗದ್ಗುರುಗಳು ತುಂಗಾರತಿ ಕಾರ್ಯಕ್ರಮ ಏರ್ಪಡಿಸಲು ಸ್ವಚ್ಛತಾ ಕಾರ್ಯವನ್ನು ನಡೆಸಿ ಉತ್ತಮ ವಾತಾವರಣ ನಿರ್ಮಿಸಿದ್ದಾರೆ. ಪ್ರತಿನಿತ್ಯ ತುಂಗಭದ್ರೆಯ ಪೂಜೆ […]